Tag: Channagiri Police

  • ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ – ಸಿಐಡಿಗೆ ವರ್ಗಾವಣೆ

    ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ – ಸಿಐಡಿಗೆ ವರ್ಗಾವಣೆ

    ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆಯ (Channagiri Police Station) ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಚನ್ನಗಿರಿಗೆ ಆಗಮಿಸಿದ ಸಿಐಡಿ (CID) ತಂಡ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸುತ್ತಿದೆ.

    ಸಿಐಡಿ ಎಸ್‍ಪಿ ನೇತೃತ್ವದಲ್ಲಿ ಆಗಮಿಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಈ ಬಗ್ಗೆ ದಾವಣಗೆರೆ (Davanagere) ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಬಗ್ಗೆ ಪ್ರಕ್ರಿಯೆಗಳು ನಡೆದಿವೆ. ಇದುವರೆಗೂ ಘಟನೆಗೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದಿದ್ದಾರೆ.

    ಬಂಧಿತರ ಮೇಲೆ ಯಾವುದೇ ಹಳೆಯ ಪ್ರಕರಣಗಳಿಲ್ಲ. ಗುಂಪಿನಲ್ಲಿ ಕೆಲ ಯುವಕರು ಗೂಂಡಾ ವರ್ತನೆ ತೋರಿದ್ದಾರೆ. ಗುಂಪಿನಲ್ಲಿ ಚನ್ನಗಿರಿ ನಗರ ಮತ್ತು ತಾಲೂಕಿನ ಹೊನ್ನೇಬಾಗಿ, ನಲ್ಲೂರು ಸೇರಿದಂತೆ ವಿವಿಧ ಹಳ್ಳಿಗಳಿಂದ ಬಂದ ಯುವಕರು ಗುಂಪಿನಲ್ಲಿದ್ದರು. ಬಂಧಿತರ ಮೇಲೆ ಐಪಿಸಿ 353 ಮತ್ತು 307 ಅನ್ವಯ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಆದಿಲ್‍ನ ಮರಣೋತ್ತರ ಪರೀಕ್ಷೆ ನಡೆದಿದ್ದು, ಇನ್ನೆರಡು ದಿನಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿ ಬರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

    ಏನಿದು ಪ್ರಕರಣ?: ಶುಕ್ರವಾರ ರಾತ್ರಿ ಚನ್ನಗಿರಿ ಪೊಲೀಸ್ ಠಾಣೆ ಮುಂಭಾಗ ರಣರಂಗವಾಗಿ ಸೃಷ್ಟಿಯಾಗಿತ್ತು. ಚನ್ನಗಿರಿ ಪಟ್ಟಣದ ಟಿಪ್ಪು ನಗರದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಅದಿಲ್‍ನನ್ನು (Adil) ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದರು. ಅದೇ ಸಂದರ್ಭದಲ್ಲಿ ಅದಿಲ್ ಲೋ ಬಿಪಿಯಿಂದ ಕುಸಿದು ಬಿದ್ದಿದ್ದ. ಕೂಡಲೇ ತಾಲೂಕು ಆಸ್ಪತ್ರೆಗೆ ಪೊಲೀಸರು ಆತನನ್ನು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅದಿಲ್ ಸಾವನ್ನಪ್ಪಿದ್ದ.

    ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಕ್ರೋಶಗೊಂಡ ಅದಿಲ್ ಕುಟುಂಬಸ್ಥರು ಮೃತದೇಹವನ್ನು ಪೊಲೀಸ್ ಠಾಣೆಯ ಮುಂದಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ನಂತರ ಆದಿಲ್ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿದ್ದ ಸಿಸಿಟಿವಿಯನ್ನು ಪರಿಶೀಲನೆ ನಡೆಸುತ್ತಿದ್ದಾಗ ಕೆಲ ಕಿಡಿಗೇಡಿಗಳ ಗುಂಪು ಏಕಾಏಕಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿತ್ತು. ಠಾಣೆಯ ಮುಂಭಾಗ ಇರುವ ವಾಹನಗಳು, ಗಿಡ, ಕಿಟಕಿ ಗಾಜುಗಳನ್ನು ಧ್ವಂಸ ಮಾಡಿತ್ತು. ಏಕಾಏಕಿ ನಡೆಸಿದ ಕಲ್ಲು ತೂರಾಟದ ವೇಳೆ 11 ಜನ ಪೊಲೀಸ್ ಸಿಬ್ಬಂದಿಗೆ ಗಾಯಗಾಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

  • ಚನ್ನಗಿರಿ ಕೇಸ್‌; ಪೊಲೀಸ್‌ ಅಧಿಕಾರಿಗಳ ಅಮಾನತು

    ಚನ್ನಗಿರಿ ಕೇಸ್‌; ಪೊಲೀಸ್‌ ಅಧಿಕಾರಿಗಳ ಅಮಾನತು

    ಮೈಸೂರು: ದಾವಣಗೆರೆಯ (Davanagere) ಚನ್ನಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳ ಅಮಾನತಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ಚನ್ನಗಿರಿಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಮೂರ್ಛೆ ರೋಗದಿಂದ ಮೃತಪಟ್ಟಿದ್ದಾನೆಯೇ ವಿನಃ ಅದು ಲಾಕಪ್‌ ಡೆತ್‌ ಅಲ್ಲ. ಪೊಲೀಸರು ಆ ವ್ಯಕ್ತಿಯನ್ನು ಎಫ್‌ಐಆರ್‌ ಇಲ್ಲದೇ ಠಾಣೆಗೆ ಕರೆತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲು ಆದೇಶಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚನ್ನಗಿರಿ ಪ್ರಕರಣ ಲಾಕಪ್ ಡೆತ್ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿದ್ದರಾಮಯ್ಯ

    ಪೊಲೀಸ್ ಠಾಣೆಯಲ್ಲಿದ್ದಾಗಲೇ ಮೃತಪಟ್ಟ ಆದಿಲ್ ಚನ್ನಗಿರಿ ಪಟ್ಟಣದ ಟಿಪ್ಪು ನಗರದವರು. ಮೂಲತಃ ಕಾರ್ಪೆಂಟರ್. ಆದರೆ, ಮಟ್ಕಾ ಏಜೆಂಟ್ ಎಂಬ ಆರೋಪದ ಮೇಲೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಠಾಣೆಗೆ ಕರೆತಂದ ಕೆಲ ಹೊತ್ತಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳುತ್ತಿದ್ದಾರೆ.

    ಕರ್ತವ್ಯಲೋಪದ ಆರೋಪದ ಮೇಲೆ ಡಿವೈಎಸ್‌ಪಿ ಪ್ರಶಾಂತ್, ಸಿಪಿಐ ನಿರಂಜನ್‌ರನ್ನು ಅಮಾನತು ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಚನ್ನಗಿರಿಯಲ್ಲಿ ಲಾಕಪ್ ಡೆತ್ ಆರೋಪ- ಕುಟುಂಬಸ್ಥರಿಂದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ

  • ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ – ಸಿಎಂಗೆ ಜೋಶಿ ಪ್ರಶ್ನೆ!

    ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ – ಸಿಎಂಗೆ ಜೋಶಿ ಪ್ರಶ್ನೆ!

    – ಚನ್ನಗಿರಿ ಪ್ರಕರಣದಲ್ಲಿ ಮಾತ್ರ ಪೊಲೀಸರ ಮೇಲೆ ಕ್ರಮ ಯಾಕೆ?
    – ರಾಜ್ಯ ಸರ್ಕಾರದ ವಿರುದ್ಧ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

    ಹುಬ್ಬಳ್ಳಿ: ಯಾರು ಎಲ್ಲೇ ಗಲಭೆ ಮಾಡಿದರೂ ತಪ್ಪು, ಅದನ್ನು ಖಂಡಿಸಬೇಕು. ಆದ್ರೆ ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರು ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನ ಪ್ರಶ್ನೆ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಲಾಕಪ್‌ ಡೆತ್ (Channagiri Lockup Death) ವಿಚಾರದಲ್ಲಿ ಸಿದ್ದರಾಮಯ್ಯನವರು ತೆಗೆದುಕೊಂಡ ನಿರ್ಧಾರವನ್ನು ಈ ಹಿಂದೆ ನಡೆದ ಯಾವುದೇ ವಿಚಾರದಲ್ಲಿಯೂ ತೆಗೆದುಕೊಂಡಿಲ್ಲ. ಅಂಜಲಿ, ನೇಹಾ ಹಿರೇಮಠ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಆಗಿಲ್ಲ. ಆದರೆ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಯಾಕೆ ಅಂತ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜಗತ್ತನ್ನೇ ಬೆಚ್ಚಿ ಬೀಳಿಸಿದ ಸೋಂಕಿತ ರಕ್ತ ಹಗರಣ – ಯುಕೆಯಲ್ಲಿ ಡೆಡ್ಲಿ ಚಿಕಿತ್ಸೆ ತಂದ ವಿಪತ್ತು; ಏನಿದು ಹಗರಣ?

    ಒತ್ತಡ ಹಾಕಿದ್ರೆ ಪೊಲೀಸರೇ ಓಡಿ ಹೋಗ್ತಾರೆ:
    ಸಿದ್ದರಾಮಯ್ಯನವರೇ ನೀವು ಎಷ್ಟು ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದೀರಿ, ನಿಮ್ಮ ಈ ತುಷ್ಟಿಕರಣ ರಾಜಕೀಯದಿಂದ ಅರಾಜಕತೆ ಸೃಷ್ಟಿ ಆಗುತ್ತದೆ. ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ? ಯಾರೇ ಗಲಭೆ ಮಾಡಿದ್ರೂ ತಪ್ಪು, ಅದನ್ನು ಖಂಡಿಸಲೇಬೇಕು. ಆದ್ರೆ ಈ ವಿಚಾರದಲ್ಲಿ ಪೊಲೀಸರ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ, ಠಾಣೆ ಬಿಟ್ಟು ಓಡಿಹೋಗ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಇನ್ನೂ ಪೊಲೀಸರು ಪ್ರತಿ 2 ಗಂಟೆಗೆ ಡ್ರಿಲ್‌ ಮಾಡಬೇಕು ಎಂಬ ಸಿಎಂ ಆದೇಶ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೊದಲು ಸಿಎಂಗೆ ಮತ್ತು ಗೃಹಸಚಿವರಿಗೆ ಡ್ರಿಲ್‌ ಮಾಡಿಸಬೇಕು. ರಾಜ್ಯ ಪೊಲೀಸರಿಂದು ಒತ್ತಡದಲ್ಲಿ ಕೆಲಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಔರಾಧ್ ಕರ್ ವರದಿಯನ್ನೇ ಇನ್ನೂ ಜಾರಿ ಮಾಡಿಲ್ಲ, 2 ಗಂಟೆಗೊಮ್ಮೆ ಡ್ರಿಲ್‌ ಮಾಡಿ ಅಂದರೆ ಅವರು ಎಲ್ಲಿಂದ ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯ ಧ್ವನಿಯಲ್ಲಿ ಮಾತನಾಡಿ 7 ವಿದ್ಯಾರ್ಥಿನಿಯರ ಅತ್ಯಾಚಾರ – ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

    ಪೊಲೀಸರು ಹುಚ್ಚರಂತೆ ರಸ್ತೆಯಲ್ಲಿ ಓಡಾಡಬೇಕಾ? ಹೀಗೆ ಮಾಡಿದರೆ ಜನ ಏನು ಹೇಳತ್ತಾರೆ? ಕರ್ನಾಟಕ ಸರ್ಕಾರ ಮತಿಭ್ರಮಣೆಗೊಂಡಿದೆ. ಆದೇಶ ಮಾಡುವುದಕ್ಕೂ ಮುನ್ನ ಯೋಚನೆ ಮಾಡುತ್ತಿಲ್ಲ. ಪೊಲೀಸರಿಗೆ ಹೊರಡಿಸಿರುವ ಈ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.  ಇದನ್ನೂ ಓದಿ: ಕುರಾನ್ ಸತ್ಯವಾಗಿ ನನ್ನ ಗಂಡನಿಗೆ ಯಾವ್ದೇ ರೋಗ ಇರಲಿಲ್ಲ, ಪೊಲೀಸರೇ ಹೊಡೆದು ಕೊಂದಿದ್ದಾರೆ: ಮೃತ ಆದಿಲ್ ಪತ್ನಿ