ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ (Bengaluru-Mysuru Expressway) ವಾಹನ ಅಡ್ಡಗಟ್ಟಿ ತಮಿಳುನಾಡು ಮೂಲದ ಪಿಎಸ್‌ಐ (Tamil Nadu PSI) ದರೋಡೆ ಮಾಡಿದ್ದ ಪ್ರಕರಣ ಸಂಬಂಧ ಮೂವರು ದರೋಡೆಕೋರರನ್ನ ಬಂಧಿಸುವಲ್ಲಿ ಚನ್ನಪಟ್ಟಣ (Channapatna) ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೈಯದ್ ತನ್ವೀರ್ (30), ಫೈರೋಜ್ ಪಾಷ (28), ತನ್ವೀರ್ ಪಾಷ (32) ಬಂಧಿತ ಆರೋಪಿಗಳು. ಕಳೆದ ಮಂಗಳವಾರ ಬೆಂ-ಮೈ ಎಕ್ಸ್‌ಪ್ರೆಸ್ ಹೈವೇಯ ಚನ್ನಪಟ್ಟಣ ಬೈಪಾಸ್‌ನ ಲಂಬಾಣಿತಾಂಡ್ಯದ ಬಳಿ ದರೋಡೆ ಮಾಡಲಾಗಿತ್ತು. ಕಾರು ನಿಲ್ಲಿಸಿ ರೆಸ್ಟ್ ಮಾಡುತ್ತಿದ್ದ ತಮಿಳುನಾಡು ಚೀರಂಬಾಡಿ ಪೊಲೀಸ್ ಠಾಣೆ ಪಿಎಸ್‌ಐ ಶಾಜಿನ್ ದಂಪತಿಗೆ ಚಾಕು ತೋರಿಸಿದ ದರೋಡೆಕೋರರು, 16 ಗ್ರಾಂ ಚಿನ್ನದ ಸರ, 10 ಸಾವಿರ ನಗದು ಹಾಗೂ ಎರಡು ಮೊಬೈಲ್ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ
ರಾಮನಗರ: ದೇವಸ್ಥಾನದಲ್ಲಿ ಕಳವು ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಎಂಕೆ ದೊಡ್ಡಿ (MK Doddi) ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಮದ್ದೂರು (Maddur) ತಾಲೂಕಿನ ದುಂಡನಹಳ್ಳಿ ಗ್ರಾಮದ ರಮೇಶ್ ಸಾವನ್ನಪ್ಪಿದ ವ್ಯಕ್ತಿ. ಎಂಕೆ ದೊಡ್ಡಿ ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಮೇಶ್ ಶವ ಪತ್ತೆಯಾಗಿದೆ. ಶವವನ್ನ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ
ಚನ್ನಪಟ್ಟಣ ತಾಲೂಕಿನ ಬೊಮ್ಮನಾಯಕನಹಳ್ಳಿ ದೇವಸ್ಥಾನದ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಎಂಕೆ ದೊಡ್ಡಿ ಪೊಲೀಸರು, ರಮೇಶ್, ಮಂಜು ಹಾಗೂ ಕೋಲಾರದ ಅನಿಲ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. ಇಂದು ಬೆಳಿಗ್ಗೆ ಶೌಚಾಲಯಕ್ಕೆಂದು ಹೋಗಿದ್ದ ರಮೇಶ್, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ – 25,000 ಅಮೆರಿಕನ್ ಡಾಲರ್‌ಗೆ ಬೇಡಿಕೆ
ಇನ್ನೂ ರಮೇಶ್ ಸಾವು ಲಾಕಪ್ ಡೆತ್ (Lockup Death) ಎಂದು ಕುಟುಂಬಸ್ಥರು ಆರೋಪಿಸಿದ್ದು, ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆ ಎದರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ನ್ಯಾಯ ಸಿಗುವವರೆಗೂ ಶವ ಸ್ವೀಕರಿಸುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಇದನ್ನೂ ಓದಿ: ಒಳಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು
ರಾಮನಗರ: ಇಂದು ಭೀಮನ ಅಮಾವಾಸ್ಯೆ (Bhimana Amavasya) ಹಿನ್ನೆಲೆ ಚನ್ನಪಟ್ಟಣ (Channapatna) ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಾಲಯದಲ್ಲಿ (Gowdagere Chamundeshwari Temple) ವಿಶೇಷ ಪೂಜೆ ನೆರವೇರಿಸಲಾಯಿತು.
ಕ್ಷೇತ್ರದ ಧರ್ಮದರ್ಶಿಗಳಾದ ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಇಂದು ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಹಾಲರವಿ ಸೇರಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ಮಧ್ಯಾಹ್ನ 12:30ಕ್ಕೆ ಚಾಮುಂಡೇಶ್ವರಿ ರಥೋತ್ಸವ ನಡೆಸಲಾಯಿತು. ಶಾಸಕ ಸಿ.ಪಿ.ಯೋಗೇಶ್ವರ್ ರಥೋತ್ಸವಕ್ಕೆ ಚಾಲನೆ ನೀಡಿ ಕುಟುಂಬ ಸಮೇತ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?
ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಸರಸ್ವತಿ ಬಿ.ಸರೋಜಾದೇವಿ (B. Saroja Devi) ಅವರ ಅಂತ್ಯಸಂಸ್ಕಾರ (Cremation) ಹುಟ್ಟೂರು ಚನ್ನಪಟ್ಟಣದ (Channapatna) ದಶಾವರದಲ್ಲಿ (Dasawara) ತಾಯಿಯ ಸಮಾಧಿ ಪಕ್ಕವೇ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ.
ಅಂತ್ಯಸಂಸ್ಕಾರಕ್ಕೂ ಮುನ್ನ ಅವರ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ತರಲಾಯಿತು. ಬಳಿಕ ಪಲ್ಲಕ್ಕಿಯಲ್ಲಿಟ್ಟು ಅವರ ಪಾರ್ಥೀವ ಶರೀರವನ್ನು ತಂದು ಅಂತ್ಯಸಂಸ್ಕಾರ ಮಾಡಲಾಯಿತು. ಸ್ಥಳದಲ್ಲಿ ನೂರಾರು ಜನ ಸೇರಿದ್ದರು.
ಈ ಹಿಂದೆ, ಸರೋಜಾದೇವಿ ಬರೆದ ವ್ಹಿಲ್ ಪ್ರಕಾರ, ಗಂಡ ಹರ್ಷ ಸಮಾಧಿ ಪಕ್ಕವೇ ಕೊಡಿಗೇಹಳ್ಳಿಯ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಬೇಕಿತ್ತು. ಆದರೆ ಸರೋಜಾದೇವಿ ತೋಟದ ಪಕ್ಕ ಅಪಾರ್ಟ್‌ಮೆಂಟ್‌ಗಳು ತಲೆ ಎತ್ತಿರುವುದರಿಂದ ಚನ್ನಪಟ್ಟಣದ (Channapatna) ದಶಾವರದ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಬೆಳಗ್ಗೆ 10 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಪಾರ್ಥಿವ ಶರೀರವನ್ನು ಚನ್ನಪಟ್ಟಣಕ್ಕೆ ಕೊಂಡೊಯ್ದು, ಚನ್ನಪಟ್ಟಣದ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನದ ಬಳಿಕ ಹುಟ್ಟೂರಿಗೆ ತರಲಾಯಿತು.
ಬೆಳಿಗ್ಗೆ ಮಾಹಿತಿ ನೀಡಿದ್ದ ಪುತ್ರ ಗೌತಮ್, ಪತಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ಮಾಡಬೇಕು ಎಂಬ ಆಸೆಯನ್ನು ಅಮ್ಮ ವ್ಯಕ್ತಪಡಿಸಿದ್ದರು. ಆದರೆ ಆ ಜಾಗ ಈಗ ಲೇಔಟ್, ಅಪಾರ್ಟ್ಮೆಂಟ್ ಆಗಿದೆ. ಹೀಗಾಗಿ ಅಲ್ಲಿ ಅಂತ್ಯ ಸಂಸ್ಕಾರ ಮಾಡಲು ಸಾಧ್ಯವಿಲ್ಲ. ದಶವಾರ ಅವರು ಹುಟ್ಟಿದ ಜಾಗ. ಅವರ ತಾಯಿಯನ್ನು ಅಲ್ಲೇ ಮಣ್ಣು ಮಾಡಲಾಗಿದೆ. ಹಾಗಾಗಿ ಅಲ್ಲೇ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದರು.
ಬೆಂಗಳೂರು/ರಾಮನಗರ: ಕನ್ನಡ ಚಿತ್ರರಂಗದ ಮೇರುನಟಿ, ಅಭಿನಯ ಸರಸ್ವತಿ, ಹಿರಿಯ ನಟಿ ಬಿ. ಸರೋಜಾದೇವಿ (B. Saroja Devi) ಅವರ ಅಂತ್ಯಸಂಸ್ಕಾರ (Cremation) ಇಂದು ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ತಾಯಿಯ ಸಮಾಧಿ ಪಕ್ಕವೇ ನಡೆಯಲಿದೆ.
ಈ ಹಿಂದೆ, ಸರೋಜಾದೇವಿ ಬರೆದ ವ್ಹಿಲ್ ಪ್ರಕಾರ, ಗಂಡ ಹರ್ಷ ಸಮಾಧಿ ಪಕ್ಕವೇ ಕೊಡಿಗೇಹಳ್ಳಿಯ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಬೇಕಿತ್ತು. ಆದರೆ ಸರೋಜಾದೇವಿ ತೋಟದ ಪಕ್ಕ ಅಪಾರ್ಟ್‌ಮೆಂಟ್‌ಗಳು ತಲೆ ಎತ್ತಿರುವುದರಿಂದ ಚನ್ನಪಟ್ಟಣದ (Channapatna) ದಶಾವರದ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಇದನ್ನೂಓದಿ: ಸರೋಜಮ್ಮ ದಂತಕಥೆ, ಅವರ ಸ್ಥಾನ ತುಂಬಲೂ ಯಾರಿಂದಲೂ ಸಾಧ್ಯವಿಲ್ಲ: ನಟ ವಿಶಾಲ್ ಭಾವುಕ
ಪುತ್ರ ಗೌತಮ್ ಮಾತನಾಡಿ, ಪತಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ಮಾಡಬೇಕು ಎಂಬ ಆಸೆಯನ್ನು ಅಮ್ಮ ವ್ಯಕ್ತಪಡಿಸಿದ್ದರು. ಆದ್ರೆ ಆ ಜಾಗಈಗ ಲೇಔಟ್, ಅಪಾರ್ಟ್ಮೆಂಟ್ ಆಗಿದೆ. ಹೀಗಾಗಿ ಅಲ್ಲಿ ಅಂತ್ಯ ಸಂಸ್ಕಾರ ಮಾಡಲು ಸಾಧ್ಯವಿಲ್ಲ. ದಶವಾರ ಅವರು ಹುಟ್ಟಿದ ಜಾಗ. ಅವರ ತಾಯಿಯನ್ನು ಅಲ್ಲೇ ಮಣ್ಣು ಮಾಡಲಾಗಿದೆ. ಹಾಗಾಗಿ ಅಲ್ಲೇ ಅಂತ್ಯಕ್ರಿಯೆ ನಡೆಯಲಿದೆ ಎಂದರು.
ಮಧ್ಯಾಹ್ನ 1:30ಕ್ಕೆ ಅಂತ್ಯಸಂಸ್ಕಾರ ಕೆಲಸಗಳು ನಡೆಯಲಿವೆ. ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅಂತಿಮ ದರ್ಶನ ಪಡೆಯಲಿದ್ದಾರೆ. ಚನ್ನಪಟ್ಟಣ ಹಾಗೂ ರಾಮನಗರದಲ್ಲಿ ನಿಲ್ಲಿಸಿ ಅಂತಿಮ ದರ್ಶನ ಮಾಡಿಸಲಾಗುತ್ತದೆ ಎಂದು ತಿಳಿಸಿದರು.
ಒಕ್ಕಲಿಗ ಸಂಪ್ರದಾಯದಂತೆ ವಿಧಿವಿಧಾನ ನಡೆಯಲಿದ್ದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಬಿ.ಸರೋಜಾದೇವಿ (B.Saroja Devi) ಅವರು ಇಂದು (ಜು.14) ವಿಧಿವಶರಾಗಿದ್ದಾರೆ. ಮಂಗಳವಾರ (ಜು.15) ಅವರ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಸರೋಜಾದೇವಿಯವರ ಮಗ ಗೌತಮ್ ಮಾತನಾಡಿ, ನಾಳೆ ಬೆಳಿಗ್ಗೆ 11:30ರವರೆಗೂ ಬೆಂಗಳೂರಿನ ಸ್ವಗೃಹದ ಬಳಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಚನ್ನಪಟ್ಟಣಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ದಶಾವರದ ಕಣ್ವ ಡ್ಯಾಂ ಬಳಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ. ಅವರ ತಾಯಿ ರುದ್ರಮ್ಮ ಅವರ ಸಮಾಧಿಯ ಪಕ್ಕದಲ್ಲಿಯೇ ಸರೋಜಾದೇವಿಯವರ ಅಂತ್ಯಕ್ರಿಯೆ ನಡೆಯಲಿದ್ದು, ಇದು ಸರೋಜಾದೇವಿಯವರ ಕೊನೆಯಾಸೆಯಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
ನಾಳೆ ಅಂತ್ಯಕ್ರಿಯೆ ಹಿನ್ನೆಲೆ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಾಕಷ್ಟು ರಾಜಕೀಯ ಗಣ್ಯರು, ಸಿನಿಮಾ ಕಲಾವಿದರು ಆಗಮಿಸುವ ಹಿನ್ನೆಲೆ ಅಂತಿಮ ದರ್ಶನದ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡುವಂತೆ ಡಿಎವೈಎಸ್ಪಿ ಗಿರಿಗೆ ಸೂಚನೆ ನೀಡಿದ್ದಾರೆ.
ಇನ್ನೂ ಸರೋಜಾದೇವಿ ಅಗಲಿಕೆಗೆ ಗ್ರಾಮಸ್ಥರು ಶ್ರದ್ಧಾಂಜಲಿ ಸಲ್ಲಿಸಿದ್ದು, ಅವರ ನಿವಾಸದ ಮುಂದೆ ಫೋಟೊ ಇಟ್ಟು ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಸರೋಜಾದೇವಿಯವರು ಗ್ರಾಮಕ್ಕೆ ಮೂರು ಶಾಲಾ ಕೊಠಡಿ ಕಟ್ಟಿಸಿಕೊಟ್ಟಿದ್ದು, ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೇ ಗ್ರಾಮದಲ್ಲಿ ಹೈಸ್ಕೂಲ್ ನಿರ್ಮಾಣಕ್ಕೆ ಅನುಮತಿ ಕೊಡಿಸಿದ್ದನ್ನ ನೆನೆದು ಗ್ರಾಮಸ್ಥರು ಭಾವುಕರಾದರು.ಇದನ್ನೂ ಓದಿ: ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು: ಬೊಮ್ಮಾಯಿ
1938ರ ಜ.7ರಂದು ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ನಿಧನರಾದರು.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು. ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.
ಸರೋಜಾದೇವಿ ಅವರು ಕನ್ನಡದಲ್ಲಿ ಡಾ. ರಾಜ್‌ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್‌ಮಾಸ್ಟರ್, ಪಂಚರತ್ನ, ಲಕ್ಷ್ಮೀಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಸರೋಜಾದೇವಿ ಅವರು ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿದ್ದಾರೆ.ಇದನ್ನೂ ಓದಿ: ಬಿ.ಸರೋಜಾದೇವಿಯವರ ಸಾವಿನಿಂದ ಕಲಾಜಗತ್ತು ಬಡವಾಗಿದೆ – ಸಿಎಂ ಸಂತಾಪ
ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಪಾಂಡುಪುರ ಗ್ರಾಮದ ಸಮೀಪ ನಡೆದಿದೆ.
ಬೆಂಗಳೂರಿನ (Bengaluru) ಹೆಬ್ಬಾಳ ಮೂಲದ ಮೋಹನ್ ಮೃತ ದುರ್ದೈವಿ. ಬೆಂಗಳೂರಿನಿಂದ ಕಬ್ಬಾಳು ದೇವಸ್ಥಾನಕ್ಕೆ ಐವರು ಸ್ನೇಹಿತರು ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮೋಹನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ತಂಗಿ ಮದುವೆಗೆ ಬಂದಿದ್ದ ಅಣ್ಣನಿಗೆ ಸೇನೆಯಿಂದ ತುರ್ತು ಕರೆ – ಕರ್ತವ್ಯಕ್ಕೆ ಮರಳಿದ ಯೋಧ
ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಆಸ್ಪತ್ರೆಗೆ ರವಾನಿಸಿ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಸಂಘರ್ಷ – ಬಿನ್ ಲಾಡೆನ್ ಆಪ್ತನ ಮಗ ಈಗ ಪಾಕ್ ಸೇನಾ ವಕ್ತಾರ
ರಾಮನಗರ: ಚನ್ನಪಟ್ಟಣದಲ್ಲಿ (Channapatna) ಕಾಡಾನೆಗಳ ಉಪಟಳ ಮುಂದುವರಿದಿದ್ದು, ಊರಹಬ್ಬದ ದಿನವೇ ಗ್ರಾಮಕ್ಕೆ ಕಾಡಾನೆಗಳು ಎಂಟ್ರಿಯಾಗಿದ್ದು, ಗ್ರಾಮಸ್ಥರು ದಿಕ್ಕಾಪಾಲಾಗಿ ಓಡಿರುವ ಘಟನೆ ಚನ್ನಪಟ್ಟಣ ಟೌನ್ ಸಮೀಪದ ಕರಿಯಪ್ಪನದೊಡ್ಡಿಯಲ್ಲಿ ನಡೆದಿದೆ.
ಚನ್ನಪಟ್ಟಣದ ಮೆಹದಿನಗರ ಹಾಗೂ ಪಕ್ಕದ ಬಡಾವಣೆಯಲ್ಲೂ ಕಾಡಾನೆಗಳ ಹಿಂಡು ಸಂಚಾರ ಮಾಡಿ ನಿವಾಸಿಗಳಿಗೆ ಭಯಹುಟ್ಟಿಸಿವೆ. ಕರಿಯಪ್ಪನದೊಡ್ಡಿ ಗ್ರಾಮದಲ್ಲಿ ಊರಹಬ್ಬ ನಡೆಯುವ ವೇಳೆ ಏಕಾಏಕಿ ನಾಲ್ಕು ಕಾಡಾನೆಗಳು ಗ್ರಾಮಕ್ಕೆ ಬಂದಿವೆ. ಈ ವೇಳೆ ದೇವಾಲಯದ ಸಮೀಪ ಇದ್ದ ಜನ ಎದ್ನೋಬಿದ್ನೋ ಎಂದು ಸ್ಥಳದಿಂದ ಓಡಿದ್ದಾರೆ. 4 ಕಾಡಾನೆಗಳು ರಾತ್ರಿ ಇಡೀ ಜನವಸತಿ ಪ್ರದೇಶದಲ್ಲೇ ತಿರುಗುತ್ತಾ ದಾಂಧಲೆ ಎಬ್ಬಿಸಿದ್ದು, ಮೆಹದಿನಗರದ ಖಾಸಗಿ ಲೇಔಟ್‌ನ ಕಾಂಪೌಂಡ್ ಧ್ವಂಸ ಮಾಡಿವೆ. ಇದನ್ನೂ ಓದಿ: ರಾಯಚೂರು| ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ
ಕಾಡಾನೆಗಳ ಹಿಂಡು ಕಂಡು ಚನ್ನಪಟ್ಟಣ ಜನತೆ ಬೆಚ್ಚಿಬಿದ್ದಿದ್ದು, ಕಾಡಾನೆಗಳ ಉಪಟಳಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪಕ್ಕದ ತೆಂಗಿನಕಲ್ಲು ಅರಣ್ಯ ಪ್ರದೇಶದಿಂದ ಕಾಡಾನೆಗಳು ಬಂದಿವೆ. ಶೀಘ್ರವೇ ಅವುಗಳನ್ನ ಕಾಡಿಗಟ್ಟುವ ಭರವಸೆ ನೀಡಿದ್ದಾರೆ. ಅಲ್ಲದೇ ಕಾಡಾನೆಗಳ ಚಲನವಲನಗಳ ಮೇಲೆ ಡ್ರೋನ್ ಮೂಲಕ ನಿಗಾ ಇರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Champions Trophy Final: ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ದೇವರಿಗೆ ವಿಶೇಷ ಪೂಜೆ
ರಾಮನಗರ: ಗೌಡಗೆರೆ (Goudagere) ಚಾಮುಂಡೇಶ್ವರಿ ದೇವಾಲಯಕ್ಕೆ ನಟ ದರ್ಶನ್ ತಾಯಿ ಮೀನಾ ತೂಗುದೀಪ (Meena Thoogudeepa) ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚನ್ನಪಟ್ಟಣ (Channapatna) ತಾಲೂಕಿನ ಗೌಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ 60 ಅಡಿ ಎತ್ತರದ ಚಾಮುಂಡೇಶ್ವರಿ ವಿಗ್ರಹದ ದೇವಾಲಯದಲ್ಲಿ ಮೀನಾ ತೂಗುದೀಪ ಪವಾಡ ಬಸಪ್ಪನ ಆಶೀರ್ವಾದ ಪಡೆದಿದ್ದಾರೆ. ಮಗನ ಸಂಕಷ್ಟಗಳನ್ನ ನಿವಾರಣೆ ಮಾಡುವಂತೆ ಪವಾಡ ಬಸಪ್ಪನ ಬಳಿ ಪ್ರಾರ್ಥನೆ ಮಾಡಿದ ಮೀನಾ ತೂಗುದೀಪಗೆ ಪವಾಡ ಬಸಪ್ಪ ತನ್ನ ಬಲಗಾಲನ್ನು ಕೊಟ್ಟು ಆಶೀರ್ವಾದ ಮಾಡಿದೆ. ಇದನ್ನೂ ಓದಿ: ಹಾವೇರಿ | ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಇನ್ನೂ ಮೀನಾಗೆ ದೇವಾಲಯ ಆಡಳಿತ ಮಂಡಳಿಯಿಂದ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಮೀನಾ, ಈ ಕ್ಷೇತ್ರದಲ್ಲಿ ಚಾಮುಂಡೇಶ್ವರಿ ನೆಲೆಸಿದ್ದಾಳೆ. ಇಲ್ಲಿ ಎಲ್ಲಾ ಕಡೆ ಪಾಸಿಟಿವ್ ಎನರ್ಜಿ ಇದೆ. ಹಾಗಾಗಿ ಬಂದು ದರ್ಶನ ಪಡೆದಿದ್ದೇನೆ. ಇಲ್ಲಿಗೆ ಬರುವ ಎಲ್ಲಾ ಭಕ್ತರಿಗೂ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ – ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ರಾಮನಗರ: ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲು ಡಿಕೆ ಶಿವಕುಮಾರ್ (DK Shivakumar) ಸಿದ್ಧರಾಗಿದ್ದಾರೆ ಎಂಬ ಮೂಲಕ ಪರೋಕ್ಷವಾಗಿ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂಬ ಸುಳಿವನ್ನು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ನೀಡಿದ್ದಾರೆ.
ಚನ್ನಪಟ್ಟಣದಲ್ಲಿ (Channapatna) ನಡೆದ ಕಾಂಗ್ರೆಸ್ (Congress) ಕೃತಜ್ಞತಾ ಸಮಾವೇಶದಲ್ಲಿ ಸ್ವಾಗತ ಭಾಷಣ ಮಾಡುವ ವೇಳೆ ಬಾಲಕೃಷ್ಣ ಈ ಮಾತನ್ನು ಆಡಿದ್ದಾರೆ. ಮುಂದುವರಿದು ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಕ್ಷೇತ್ರದ ಜನರು ನಮ್ಮ ಕೈ ಹಿಡಿದಿದ್ದಾರೆ. ನಮ್ಮ ಅಭ್ಯರ್ಥಿ ಮಾಜಿ ಪ್ರಧಾನಿಗಳ ಮೊಮ್ಮಗ ಅಲ್ಲ. ಸಾಧಾರಣ ಮೇಷ್ಟ್ರ ಮಗ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತನೆ ಇರುವ ವ್ಯಕ್ತಿ. ಇಂತಹ ವ್ಯಕ್ತಿಯನ್ನು ಕ್ಷೇತ್ರದ ಜನ ಆಯ್ಕೆ ಮಾಡಿ ಪಕ್ಷದ ಮರ್ಯಾದೆ ಹೆಚ್ಚಿಸಿದ್ದಾರೆ ಎಂದರು. ಇದನ್ನೂ ಓದಿ: ಕಾಲ್ತುಳಿತ ಪ್ರಕರಣ – ಮರಣೋತ್ತರ ಪರೀಕ್ಷೆ ನಡೆಸದೇ ಯುಪಿ ಸರ್ಕಾರದಿಂದ ಡೆತ್ ಸರ್ಟಿಫಿಕೇಟ್
ಕ್ಷೇತ್ರದ ಅಭಿವೃದ್ಧಿಗೆ ಚುನಾವಣೆಗೂ ಮುನ್ನವೇ 500 ಕೋಟಿ ಯೋಜನೆಗಳಿಗೆ ಚಾಲನೆ ಕೊಡಲಾಗಿತ್ತು. ಇವತ್ತು ಸಿದ್ದರಾಮಯ್ಯ ಬಂದಿದ್ದರೆ ಮತ್ತೊಂದಷ್ಟು ಅನುದಾನದ ಬಗ್ಗೆ ಮನವಿ ಮಾಡಬಹುದಿತ್ತು. ಬಜೆಟ್ ಬಳಿಕ ಮತ್ತೊಮ್ಮೆ ಅವರನ್ನು ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ಮಾಡೋಣ. ನಾವು ಚುನಾವಣಾ ಪೂರ್ವದಲ್ಲಿ ನಮ್ಮ ಜಿಲ್ಲೆಯ ಮಕ್ಕಳಿಗೆ ವೋಟ್ ಹಾಕಿ ಎಂದು ಕೇಳಿದ್ದೆವು. ಅದಕ್ಕೆ ಮನ್ನಣೆ ನೀಡಿ ಈ ಜಿಲ್ಲೆಯ ಮಕ್ಕಳ ಮರ್ಯಾದೆ ಉಳಿಸಿದ್ದೀರಿ. ಅದಕ್ಕಾಗಿ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇವೆ. ಹಿಂದೆ 3 ತಿಂಗಳಿಗೋ, 6 ತಿಂಗಳಿಗೋ ಬರುವ ಶಾಸಕರಿದ್ದರು. ಈಗ ನಿತ್ಯ ಕ್ಷೇತ್ರದಲ್ಲೇ ಇರುವ ಶಾಸಕರು ಸಿಕ್ಕಿದ್ದಾರೆ ಎಂದು ಪರೋಕ್ಷವಾಗಿ ಹೆಚ್‌ಡಿಕೆಗೆ ಟಾಂಗ್ ನೀಡಿದರು. ಇದನ್ನೂ ಓದಿ: ತಿಂಗಳಿಂದ ಕುಡಿಯಲು ಕಲುಷಿತ ನೀರು – ಬನ್ನೇರುಘಟ್ಟ ಗ್ರಾಪಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ