Tag: Channapatna Bypoll

  • ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಜಮೀರ್‌? – ಪ್ರಚಾರದ ವೇಳೆ ಮಹಿಳೆಗೆ 500 ರೂ. ಹಣಕೊಟ್ಟ ಸಚಿವ

    ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಜಮೀರ್‌? – ಪ್ರಚಾರದ ವೇಳೆ ಮಹಿಳೆಗೆ 500 ರೂ. ಹಣಕೊಟ್ಟ ಸಚಿವ

    – ಗನ್‌ಮ್ಯಾನ್‌ ಜೇಬಿನಿಂದ ಹಣ ತೆಗೆದು ಮಹಿಳೆಗೆ ಕೊಟ್ಟ ಜಮೀರ್‌

    ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರದಲ್ಲಿ ಸಚಿವ ಜಮೀರ್‌ ಅಹ್ಮದ್‌ (Zameer Ahmed) ಅವರು ನೀತಿ ಸಂಹಿತೆ ಉಲ್ಲಂಘಿಸಿದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ. ಪ್ರಚಾರದ ವೇಳೆ ಮಹಿಳೆಯೊಬ್ಬರಿಗೆ ಸಚಿವರು 500 ರೂ. ದುಡ್ಡು ಕೊಟ್ಟಿರುವ ವೀಡಿಯೋ ವೈರಲ್‌ ಆಗಿದೆ.

    ನಿನ್ನೆ ರಾತ್ರಿ ನಗರದ ಯಾರಬ್ ನಗರದಲ್ಲಿ ಸಿ.ಪಿ.ಯೋಗೇಶ್ವರ್‌ ಪರ ಜಮೀರ್‌ ಪ್ರಚಾರ ನಡೆಸಿದ್ದರು. ಪ್ರಚಾರದ ವೇಳೆ ಮಹಿಳೆಗೆ 500 ಮುಖಬೆಲೆಯ ನೋಟನ್ನು ಜಮೀರ್ ಕೊಟ್ಟಿದ್ದಾರೆ. ಗನ್ ಮ್ಯಾನ್ ಬಳಿಯಿಂದ ಹಣ ಪಡೆದು ಪ್ರಚಾರ ವಾಹನದ ಮೇಲಿಂದಲೇ ಮಹಿಳೆಗೆ ಹಣ ನೀಡಿದ್ದಾರೆ. ಈ ದೃಶ್ಯದ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇದನ್ನೂ ಓದಿ: ಮುಡಾದಲ್ಲಿ ಸಿಎಂ ಪ್ರಭಾವಕ್ಕೆ ಮತ್ತೊಂದು ಸಾಕ್ಷಿ – ಸಿಎಂ ಪತ್ನಿ ಕ್ರಯಪತ್ರದ ಮುದ್ರಾಂಕ ಶುಲ್ಕ ತಹಶೀಲ್ದಾರ್‌ರಿಂದಲೇ ಪಾವತಿ

    ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಪರ ಸಚಿವ ಜಮೀರ್, ರಹೀಂ ಖಾನ್, ಡಿ.ಕೆ.ಸುರೇಶ್ ಪ್ರಚಾರ ನಡೆಸಿದ್ದರು.

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್‌ ಸಚಿವರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಈ ಉಪಚುನಾವಣೆ ಬಿಜೆಪಿ ಬಸವರಾಜ ಬೊಮ್ಮಾಯಿ ವರ್ಸಸ್ ಕಾಂಗ್ರೆಸ್ ಸರ್ಕಾರ: ಬೊಮ್ಮಾಯಿ

  • ಕಾಂಗ್ರೆಸ್‍ನ ಹಗರಣದ ದಿಕ್ಕು ತಪ್ಪಿಸಲು ವಕ್ಫ್ ಮುನ್ನೆಲೆಗೆ: ಹೆಚ್‍ಡಿಕೆ ಆರೋಪ

    ಕಾಂಗ್ರೆಸ್‍ನ ಹಗರಣದ ದಿಕ್ಕು ತಪ್ಪಿಸಲು ವಕ್ಫ್ ಮುನ್ನೆಲೆಗೆ: ಹೆಚ್‍ಡಿಕೆ ಆರೋಪ

    ರಾಮನಗರ: ಕಾಂಗ್ರೆಸ್‍ನ ಹಗರಣ, ಭ್ರಷ್ಟಾಚಾರದ ವಿಚಾರ ದಿಕ್ಕು ತಪ್ಪಿಸಲು ವಕ್ಫ್ ವಿಚಾರ ಮುನ್ನೆಲೆಗೆ ಬಂದಿದೆ. ಈ ಮೂಲಕ ವಾಲ್ಮೀಕಿ ಮತ್ತು ಮುಡಾ ಹಗರಣ ಮುಚ್ಚಿಹಾಕಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಆರೋಪಿಸಿದ್ದಾರೆ.

    ತಿಟ್ಟಮಾರನಹಳ್ಳಿಯಲ್ಲಿ ಚುನಾವಣಾ ಪ್ರಚಾರದ (Channapatna bypoll) ವೇಳೆ ಅವರು ಮಾತನಾಡಿದರು. ಈ ವೇಳೆ ಕಾಂಗ್ರೆಸ್ ಸರ್ಕಾರ ಸ್ವಯಂ ಅಪರಾಧಗಳಿಂದ ಪಥನವಾಗಲಿದೆ. ಸರ್ಕಾರವನ್ನು ಬೇರೆ ಯಾರು ಬೀಳಿಸುವುದಿಲ್ಲ ಸ್ವತಃ ಆತ್ಮಹತ್ಯೆ ಮಾಡಿಕೊಳ್ಳಲಿದೆ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಹೇಳಿದ್ದಾರೆ.

    ಶಕ್ತಿ ಯೋಜನೆ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಗ್ಯಾರಂಟಿ ನಿಲ್ಲಿಸಲು ಈ ಮೂಲಕ ಮೊದಲ ಹೆಜ್ಜೆ ಇಟ್ಟಿದ್ದಾರೆ. ಶಕ್ತಿ ಯೋಜನೆ ಬೇಡ ಅಂತ ಯಾರು ಹೇಳ್ತಾರೆ. ಈಗಾಗಲೇ ಅನ್ನಭಾಗಕ್ಕೂ ಸಾಕಷ್ಟು ನಿಯಮ ಜಾರಿ ಮಾಡಿದ್ದಾರೆ. ರೇಷನ್ ಕಾರ್ಡ್ ಗಳನ್ನು ಡಿಲಿಟ್ ಮಾಡುತ್ತಿದ್ದಾರೆ. ಹಂತಹಂತವಾಗಿ ಗ್ಯಾರಂಟಿ ನಿಲ್ಲಿಸುತ್ತಾರೆ. ಅದನ್ನೆ ಡಿಕೆಶಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ ಎಂದರು.

    ಚನ್ನಪಟ್ಟಣದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ನನಗೆ ನನ್ನ ಕ್ಷೇತ್ರದಲ್ಲಿ ಎಷ್ಟು ಕೆರೆ ಇದೆ ಎಂದು ಗೊತ್ತಿಲ್ಲ ಎಂದಿದ್ದಾರೆ. ಬಹುಶಃ ನನಗೆ ಗೊತ್ತಿರುವಷ್ಟು ಅವರಿಗೆ ಗೊತ್ತಿಲ್ಲ. ಇಗ್ಗಲೂರು ಜಲಾಶಯ ಇಲ್ಲದಿದ್ರೆ ಕಾಂಗ್ರೆಸ್‍ನವರು ನೀರು ಎಲ್ಲಿ ತುಂಬಿಸುತ್ತಿದ್ದರು? ಯಾರು ಸ್ವಯಂ ಘೋಷಿತ ಆಧುನಿಕ ಭಗೀರಥ ಅಂತೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ನೀಡಿದ್ದೇನೆ. ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದೇನೆ. ತಿಟ್ಟಮಾರನಹಳ್ಳಿ ನನಗೆನೂ ಹೊಸದೇನಲ್ಲ. ಇಲ್ಲಿನ ಜನ ಮನೆಯ ಮಗನ ರೀತಿ ಆಶೀರ್ವಾದ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ನಿಮ್ಮ ತೀರ್ಮಾನಕ್ಕೆ ಅವನನ್ನ ಬಿಟ್ಟಿದ್ದೇನೆ. ನಾವೇನಾದ್ರೂ ರೈತರ ಪರವಾಗಿ ಕೆಲಸ ಮಾಡಿದ್ದರೆ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

  • ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತೀನಿ, ಒಂದೇ ಒಂದು ಅವಕಾಶ ಕೊಡಿ: ನಿಖಿಲ್

    ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತೀನಿ, ಒಂದೇ ಒಂದು ಅವಕಾಶ ಕೊಡಿ: ನಿಖಿಲ್

     ರಾಮಮನಗರ: ಕೈ ಜೋಡಿಸಿ ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತಿದ್ದೇನೆ. ಒಂದೇ ಒಂದು ಅವಕಾಶ ಕೊಡಿ ಎಂದು ಚಿನ್ನಪಟ್ಟಣ ಕ್ಷೇತ್ರದ ಜನತೆ ಮುಂದೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬೇಡಿಕೊಂಡರು.

    ಉಪಚುನಾವಣೆ ಹಿನ್ನೆಲೆ ಮಾಕಳಿ ಗ್ರಾಮದ ಪ್ರಚಾರದಲ್ಲಿ ನಿಖಿಲ್, ಕುಮಾರಣ್ಣನ ನಾಯಕತ್ವಕ್ಕೆ ಇದು ಅಗ್ನಿ ಪರೀಕ್ಷೆ. ಇಲ್ಲಿ ನಿಖಿಲ್ ಪ್ರಶ್ನೆ ಅಲ್ಲ. ಎಲ್ಲವೂ ನಿಮ್ಮ ಕೈಯಲ್ಲಿದೆ. ಕೈ ಜೋಡಿಸಿ ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತಿದ್ದೇನೆ. ಒಂದೇ ಒಂದು ಅವಕಾಶ ಕೊಡಿ. ದೇವೇಗೌಡರು, ಕುಮಾರಣ್ಣ ಅವ್ರು ಕೆಲಸ ಮಾಡಿದ್ದಾರೆ. ನನ್ನ ಕೊನೆ ಉಸಿರಿರೋವರೆಗೂ ನಿಮ್ಮ ಜೊತೆ ಇರ್ತೇನೆ. ಒಂದು ಅವಕಾಶ ಕೊಡಿ. ಈ ಜಿಲ್ಲೆಯಲ್ಲಿ ನಾವು ಹುಟ್ಟದೇ ಇರಬಹುದು. ಈ ಜಿಲ್ಲೆಗೆ ಹಲವಾರು ವರ್ಷದ ನಂಟಿದೆ. ದೇವೇಗೌಡರು ಇಗ್ಗಲೂರು ಬ್ಯಾರೇಜ್ ಕಟ್ಟದೆ ಹೋದ್ರೆ ಎಲ್ಲಿ ಕೆರೆಗೆ ನೀರು ತುಂಬಿಸುತ್ತಿದ್ದರು? ಗೋಲಿಬಾರ್ ಆಗಿ ಇಬ್ರು ತೀರಿಕೊಂಡ್ರು. ನಾನು ಆಗ ಚಿಕ್ಕ ಹುಡುಗ, ದೇವೇಗೌಡರು ಪಾಠ ಮಾಡಿದ್ದಾರೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ವಕ್ಫ್ ಬೋರ್ಡ್ ಜೊತೆ ಸೇರಿ ರೈತರ 15 ಸಾವಿರ ಎಕ್ರೆ ಭೂಮಿ ಕಬಳಿಸಲು ಸರ್ಕಾರದಿಂದ ಹುನ್ನಾರ: ಗೋವಿಂದ ಕಾರಜೋಳ

    ಕುಮಾರಸ್ವಾಮಿ ದೇವೇಗೌಡರು ಕಣ್ಣಲ್ಲಿ ನೀರಾಕ್ತಾರೆ ಮರಳಾಗಬೇಡಿ ಅಂತಾರೆ. ಅವ್ರು ಕಣ್ಣೀರಾಕೋದು ನನಗಾಗಿ ಅಲ್ಲ. ರೈತರ ಪರವಾಗಿ, ನಾಡಿನ ಜನರು ನೋವಿನಲ್ಲಿದ್ದಾಗ ಕಣ್ಣಲ್ಲಿ ನೀರಾಕಿದ್ದಾರೆ. ಅದನ್ನ ಹೊರತುಪಡಿಸಿ ಅವರು ನನಗಾಗಿ ಕಣ್ಣೀರು ಹಾಕಲಿಲ್ಲ. ನನಗೆ ಆತ್ಮವಿಶ್ವಾಸ ತುಂಬಿ ದೇವೇಗೌಡ್ರು ಕಳುಹಿಸಿದ್ದಾರೆ. ನಿಮ್ಮ ಸಹಕಾರ ಇರಲಿ ಎಂದು ಜನತೆಯಲ್ಲಿ ಕೇಳಿಕೊಂಡರು.

    ಕುಮಾರಸ್ವಾಮಿ ಅವ್ರನ್ನ ಎರಡು ಬಾರಿ ಆಯ್ಕೆ ಮಾಡಿದ್ದೀರಿ. ಕುಮಾರಣ್ಣ ಅವ್ರು ಬಡವರ, ದಲಿತರ, ಯುವಕರು, ರೈತರ ಪರವಾಗಿ ಕೆಲಸ ಮಾಡಿದ್ದಾರೆ. ಕುಮಾರಣ್ಣರನ್ನು ಮುಖ್ಯಮಂತ್ರಿ ಮಾಡಿದ ಕೀರ್ತಿ ಚನ್ನಪಟ್ಟಣ ಜನತೆಗೆ ಸೇರಬೇಕು. ಮಂಡ್ಯದಲ್ಲಿ ಕುಮಾರಣ್ಣ ಲೋಕಸಭೆ ಗೆದ್ದಮೇಲೆ ತೆರವಾಗಿದೆ. ನಿನ್ನೆ ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿ ಹೇಳಿದ್ದೇನೆ. ಈಗ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿರುವ ವ್ಯಕ್ತಿ, ಚುನಾವಣೆಯಲ್ಲಿ ನಿಲ್ಲಬೇಕು ಅಂತಾ ಕೇಳಿದ್ರು. ಆಗ ಕುಮಾರಣ್ಣ, ಮೊದಲು ನಮ್ಮ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ರಾಷ್ಟ್ರೀಯ ನಾಯಕರ ಜೊತೆ ಹೋಗಿ ಮಾತಾಡೋಣ ಅಂದಿದ್ರು. ಅದಾದ ನಂತರ ಬೆಳವಣಿಗೆ ನೀವೆ ನೋಡಿದ್ದೀರಿ. ಬೆಂಗಳೂರು ಖಾಸಗಿ ಹೋಟೆಲ್‌ನಲ್ಲಿ ಅವರ ಜೊತೆ ಚರ್ಚೆ ಮಾಡಿದ್ವಿ. ಜೆಡಿಎಸ್ ಸಾಂಪ್ರದಾಯಿಕ ಮತಗಳಿವೆ, ಜೆಡಿಎಸ್‌ನಿಂದ ನಿಂತ್ಕೊಳ್ಳಿ ಅಂತಾ ನಮ್ಮ ನಾಯಕರು ಹೇಳಿದ್ರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇದ್ರೂ ನಮ್ಮ ನಾಯಕರು ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಅಂತಾ ಕೇಳಿದ್ರು. ಆದಾದ ಮೇಲೆ ಏನೆಲ್ಲ ಮಾತಾಡಿದ್ರು ನೋಡಿದ್ದೀರಿ. ಏನೇ ನೋವಿದ್ರು ಸಹಿಸ್ಕೊಂಡ್ವಿ. ತರಾತರಿಯಲ್ಲಿ ರಾಜೀನಾಮೆ ಕೊಟ್ಟು ಹೋಗಿ ಕಾಂಗ್ರೆಸ್ ಸೇರಿಕೊಂಡರು ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕ ಸೈಬರ್ ಕ್ರೈಂ ವಂಚನೆ ಪ್ರಕರಣ ಉಲ್ಲೇಖಿಸಿ ಮನ್ ಕಿ ಬಾತ್‌ನಲ್ಲಿ ಮೋದಿ ಜಾಗೃತಿ

    ಬಿಜೆಪಿ ಅಷ್ಟೆಲ್ಲ ಸ್ಥಾನ ಕೊಟ್ಟಿದ್ರು ಹೋದ್ರು. ಅವ್ರು ಯಾವ ಪಕ್ಷದಲ್ಲೂ ಉಳಿದುಕೊಳ್ಳಲ್ಲ. ಡಿ.ಕೆ.ಶಿವಕುಮಾರ್ ಮಾತು ಬಹಳ ಬೇಸರ ಆಗಿದೆ. ಹಿಂದೆ ದೇವೇಗೌಡರಿಗೆ ಮೋಸಮಾಡಿ ನಮ್ಮ ಪಕ್ಷದ ಕಾರ್ಯಕರ್ತರು ನಿಮ್ಮನ್ನ ಸಂಸದರಾಗಿ ಮಾಡಿದ್ರು. ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದುಕೊAಡಿರಲಿಲ್ಲ. ರಾಜ್ಯದಲ್ಲಿ ಸಭೆ ಮಾಡಿ ಸಂಘಟನೆ ಮಾಡ್ತಿದ್ದೆ. ಈಗ ಒಬ್ಬ ವ್ಯಕ್ತಿ ತೆಗೆದುಕೊಂಡ ತೀರ್ಮಾನ, ಇಡಿ ಸಚಿವ ಸಂಪುಟ ಇಲ್ಲಿ ಬೀಡು ಬಿಟ್ಟಿದ್ದರಿಂದ ಕಾರ್ಯಕರ್ತ ಒತ್ತಾಯ ಮಾಡಿದ್ರು. ರಾಮನಗರ, ಮಂಡ್ಯ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ರಾಮನಗರದಲ್ಲಿ ಕೂಪನ್ ಕಾರ್ಡ್ ಕೊಟ್ಟಿದ್ರು. ಅದಕ್ಕೆ ಉತ್ತರ ಕೊಡಬೇಕಲ್ವಾ? ನಾವು ಕುತಂತ್ರ ಮಾಡಿ ರಾಜಕಾರಣ ಮಾಡಿದವರಲ್ಲ ಎಂದು ಮಾತನಾಡಿದರು.

  • ನಿಖಿಲ್ ಸ್ಪರ್ಧೆ ಮಾಡದೆ ಇದ್ದಿದ್ದರೆ ಕುಮಾರಸ್ವಾಮಿ ಮಗ ಹೆದರಿ‌ ಓಡಿ ಹೋದ ಅಂತಿದ್ದರು: ಹೆಚ್.ಡಿ.ರೇವಣ್ಣ

    ನಿಖಿಲ್ ಸ್ಪರ್ಧೆ ಮಾಡದೆ ಇದ್ದಿದ್ದರೆ ಕುಮಾರಸ್ವಾಮಿ ಮಗ ಹೆದರಿ‌ ಓಡಿ ಹೋದ ಅಂತಿದ್ದರು: ಹೆಚ್.ಡಿ.ರೇವಣ್ಣ

    – ಬಿಜೆಪಿಯಿಂದಲೇ ನಿಂತುಕೊಳ್ಳಿ ಅಂತಾ ಯೋಗೇಶ್ವರ್‌ಗೆ ಹೇಳಿದ್ದೆವು

    ಬೆಂಗಳೂರು: ನಿಖಿಲ್ (Nikhil Kumaraswamy) ಸ್ಪರ್ಧೆ ಮಾಡದೆ ಇದ್ದಿದ್ದರೆ ಕುಮಾರಸ್ವಾಮಿ ಮಗ ಹೆದರಿ‌ ಓಡಿ ಹೋದ ಅಂತಿದ್ದರು ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಹೇಳಿದ್ದಾರೆ.

    ವಿಧನಸೌಧದಲ್ಲಿ ಮಾತನಾಡಿದ ಅವರು, ದೇವೇಗೌಡರ ಕುಟುಂಬ ಎಂದೂ ಹಿಂಬಾಗಿಲಿನಿಂದ ರಾಜಕಾರಣಕ್ಕೆ ಬಂದಿಲ್ಲ. ಅಧಿಕಾರಕ್ಕೆ ಅಂಟಿ ಕೂರುವ ಕುಟುಂಬ ನಮ್ಮದಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಥಳೀಯರನ್ನೇ ನಿಲ್ಲಿಸ್ತೀವಿ ಅಂತಾ ಹೇಳಿದ್ವಿ. ನಾವು ಯೋಗೇಶ್ವರ್‌ಗೆ ಕೊನೆ ಘಳಿಗೆವರೆಗೂ ಅವಕಾಶ ನೀಡಿದ್ವಿ. ಬಿಜೆಪಿಯಿಂದಲೇ ನಿಂತ್ಕಳಿ ಅಂತಾ ಹೇಳಿದ್ದೆವು. ಆದರೆ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ರು. ಕಾಂಗ್ರೆಸ್‌ಗೆ ಕ್ಯಾಂಡಿಡೇಟ್ ಇಲ್ಲದೆ ಗೋಗರೆದು ನಿಲ್ಲಿಸಿದ್ದಾರೆ. ದಮ್ಮಯ್ಯ, ದಕ್ಕಯ್ಯ ಅಂದು ಯೋಗೇಶ್ವರ್ ನಿಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ನಮಗೆ ಮುಖ್ಯ ಅಲ್ಲ: ಪರಮೇಶ್ವರ್

    ಅಧಿಕಾರಕ್ಕಾಗಿ ಯಾರ ಮುಂದೆ ಬೇಕಾದರೂ ಕೈಕಾಲಾದ್ರು ಕಟ್ಟುತ್ತಾರೆ. ದೇವೇಗೌಡ್ರು ಕುಟುಂಬ ನಾಶ ಮಾಡುವುದೊಂದೇ ಉದ್ದೇಶ. ನಿಖಿಲ್ ನಿಲ್ಲಿಸದಿದ್ರೆ ಕುಮಾರಸ್ವಾಮಿ ಮಗ ಹೆದರಿ ಹೋದ ಅಂತಾ ಹಬ್ಬಿಸುತ್ತಿದ್ರು. ನಿಖಿಲ್ ಪ್ರಾಮಾಣಿಕವಾಗಿ ಓಡಾಡ್ತಾನೆ, ಗೆಲ್ತಾನೆ. ಜೆಡಿಎಸ್ ಮುಗಿದೇ ಹೋಯ್ತು ಅಂದ್ರು, ಕುಮಾರಣ್ಣ ಕೇಂದ್ರ ಸಚಿವರಾಗಿಲ್ವ? ಇವರಾರಿಂದ ಮೈತ್ರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.

    ಪ್ರತಿದಿನ ಕತ್ತಲೆ ಆಗುತ್ತೆ ಬೆಳಗಾಗುತ್ತೆ. ಕಾಲ ಚಕ್ರ ಹೀಗೆ ಇರುವುದಿಲ್ಲ. ನಿಖಿಲ್ ನಿಲ್ಲಿಸದಿದ್ರೆ ಕದ್ದು ಓಡಿ ಹೋದ ಅನ್ನುತ್ತಿದ್ರು. ಕಾಂಗ್ರೆಸ್ 14 ತಿಂಗಳ ಸರ್ಕಾರ ಅವರು ಆಗ ಹಾಸನಕ್ಕೆ ಬಂದು ಹಗಲು ರಾತ್ರಿ ಸುತ್ತಾಡಿದ್ರು. ಆದರೂ ಹಾಸನದಲ್ಲಿ ಎಂಎಲ್‌ಎ ಗೆಲ್ಲೋಕಾಯ್ತ? ಆರು ಸ್ಥಾನಗಳನ್ನ ನಾವು ಗೆಲ್ಲಲಿಲ್ವ? ಲೋಕಸಭೆಯಲ್ಲಿ ನಾಲ್ಕು ‌ದಿನ ಇದ್ದಂತೆ ಏನು ಮಾಡಿದ್ರು ಮುಂದೆ ಹೇಳ್ತೇನೆ. ಕಾಲ ಬರುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 113 ಕೋಟಿ ಆಸ್ತಿ ಒಡೆಯ ನಿಖಿಲ್‌ ಕುಮಾರಸ್ವಾಮಿ – ಪುತ್ರನ ಹೆಸರಲ್ಲಿದೆ 11 ಲಕ್ಷ

    ನಿಖಿಲ್ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಸೋಲೋ ಗೆಲುವೋ ಅವರು ಧೈರ್ಯ ಮಾಡಿ ಚುನಾವಣೆಗೆ ನಿಂತಿದ್ದಾರೆ. ನಾವು ಎಲ್ಲವನ್ನು ಎದುರಿಸುತ್ತೇವೆ. ರಾತ್ರಿ ‘ಪಬ್ಲಿಕ್ ಟಿವಿ’ ರಂಗನಾಥ್ ಹೇಳಿದ್ರು. ಈ ಸಂದರ್ಭದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ನಿಲ್ಲಬೇಕು ಎನ್ನುವುದು ಜನಾಭಿಪ್ರಾಯ ಇತ್ತು ಅಂತಾ. ವಿಪಕ್ಷಗಳು ಏನಾದರು ಆರೋಪ ಮಾಡಲಿ. ಡಿ.ಕೆ.ಶಿವಕುಮಾರ್ ಅವರ ಆರೋಪಕ್ಕೆಲ್ಲಾ ರಿಯಾಕ್ಟ್ ಮಾಡಿದರೆ ನಾನು ಪೊಳ್ಳೆದ್ದು ಹೋಗುತ್ತೇನೆ. ನೂರಕ್ಕೆ ನೂರು ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಗೆಲ್ಲುತ್ತಾರೆ. ನನಗೆ ಸ್ವಲ್ಪ ಮೈ ಹುಷಾರಿಲ್ಲ. ಹುಷಾರಾದರೆ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದಿದ್ದಾರೆ.

  • 113 ಕೋಟಿ ಆಸ್ತಿ ಒಡೆಯ ನಿಖಿಲ್‌ ಕುಮಾರಸ್ವಾಮಿ – ಪುತ್ರನ ಹೆಸರಲ್ಲಿದೆ 11 ಲಕ್ಷ

    113 ಕೋಟಿ ಆಸ್ತಿ ಒಡೆಯ ನಿಖಿಲ್‌ ಕುಮಾರಸ್ವಾಮಿ – ಪುತ್ರನ ಹೆಸರಲ್ಲಿದೆ 11 ಲಕ್ಷ

    – ಮಾಜಿ ಸಿಎಂ, ಕೇಂದ್ರ ಸಚಿವರ ಪುತ್ರನಿಗಿದೆ 70 ಕೋಟಿ ಸಾಲ

    ರಾಮನಗರ: ಚನ್ನಪಟ್ಟಣ ಉಪಚುನಾವಣೆಯ (Channapatna Bypoll) ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ.

    ಬಿಬಿಎ ಪದವೀಧರನಾಗಿರುವ ನಿಖಿಲ್‌ ಬರೋಬ್ಬರಿ 113 ಕೋಟಿ ಆಸ್ತಿ ಒಡೆಯ. ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ, 29.34ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49ಕೋಟಿ ಮೌಲ್ಯದ ಚರಾಸ್ತಿ, 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಆವ್ಯಾನ್ ದೇವ್ ಹೆಸರಲ್ಲಿ 11 ಲಕ್ಷ ಹಣ ಇದೆ. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

    ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ 1.488 ಕೆಜಿ ಚಿನ್ನ, 16 ಕೆಜಿ ಬೆಳ್ಳಿ ಹಾಗೂ ರೇವತಿ ಹೆಸರಲ್ಲಿ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಇದೆ. 1 ಇನ್ನೋವಾ ಐ ಕ್ರಾಸ್, 1 ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, 1 ಇನ್ನೋವಾ ಕ್ರಿಸ್ಟ ಕಾರು ಇದೆ.

    ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರ ನಿಖಿಲ್ ಹೆಸರಲ್ಲಿ ಒಟ್ಟು 70.44 ಕೋಟಿ ಸಾಲ ಇದೆ. ರೇವತಿ ಹೆಸರಲ್ಲಿ 4.96 ಕೋಟಿ ಸಾಲ ಇದೆ. ಇದನ್ನೂ ಓದಿ: ಎನ್‌ಡಿಎ ಅಭ್ಯರ್ಥಿ ನಿಖಿಲ್‌ಗೆ ಮೋದಿ ಆಶೀರ್ವಾದ ಇದೆ: ಬಿಎಸ್‌ವೈ

  • ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ 70 ಕೋಟಿ ಆಸ್ತಿ ಒಡೆಯ

    ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ 70 ಕೋಟಿ ಆಸ್ತಿ ಒಡೆಯ

    – ಸಿಪಿವೈ ಮೇಲೆ 10 ಕ್ರಿಮಿನಲ್‌ ಕೇಸ್‌

    ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಸಿಪಿವೈ ಬರೋಬ್ಬರಿ 70 ಕೋಟಿ ಮೌಲ್ಯದ ಆಸ್ತಿ ಒಡೆಯ.

    ಹೆಸರಿನಲ್ಲಿ ಒಟ್ಟು 27,94,06,412 ಮೌಲ್ಯದ ಸ್ಥಿರಾಸ್ತಿ ಹಾಗೂ 7,25,20,470 ಮೌಲ್ಯದ ಚರಾಸ್ತಿಯನ್ನು ಸಿಪಿವೈ ಹೊಂದಿದ್ದಾರೆ. ಪತ್ನಿ ಶೀಲಾ ಹೆಸರಲ್ಲಿ 25,35,37,740 ಮೌಲ್ಯದ ಸ್ಥಿರಾಸ್ತಿ, 7,10,80,556 ರೂ. ಮೌಲ್ಯದ ಚರಾಸ್ತಿ ಇದೆ.

    ಯೋಗೇಶ್ವರ್ ಹೆಸರಲ್ಲಿ 22,02,47,157 ರೂ. ಮೌಲ್ಯದ ಮತ್ತು ಪತ್ನಿ ಶೀಲಾ ಹೆಸರಿನಲ್ಲಿ 2,14,52,740 ರೂ. ಮೌಲ್ಯದ ಕೃಷಿ ಭೂಮಿ ಇದೆ. ಪತ್ನಿ ಹೆಸರಿನಲ್ಲಿ 6.65 ಕೋಟಿ ಮೌಲ್ಯದ ಕೃಷಿಯೇತರ ಭೂಮಿ ಇದೆ. ಸಿ.ಪಿ.ಯೋಗೇಶ್ವರ್ ಹೆಸರಿನಲ್ಲಿ 2,37,62,000 ಕೋಟಿ ಮೌಲ್ಯದ ಮತ್ತು ಶೀಲಾ ಹೆಸರಿನಲ್ಲಿ 15.45 ಕೋಟಿ ಮೌಲ್ಯದ ಮನೆಗಳಿವೆ.

    ‘ಸೈನಿಕ’ 25,86,31,284 ಸಾಲ ಮಾಡಿದ್ದಾರೆ. ಪತ್ನಿ ಹೆಸರಲ್ಲಿ 3,41,42,184 ರೂ. ಸಾಲವಿದೆ. 250 ಗ್ರಾಂ ಚಿನ್ನಾಭರಣವನ್ನು ಯೋಗೇಶ್ವರ್​ ಹೊಂದಿದ್ದಾರೆ. ಅವರ ಪತ್ನಿ ಬಳಿ 1 ಕೆಜಿ 500 ಗ್ರಾಂ ಚಿನ್ನಾಭರಣ, 20 ಕೆಜಿ ಬೆಳ್ಳಿ ಇದೆ.

    ಸಾರ್ವಜನಿಕರಿಂದ 1 ಕೆಜಿ ಚಿನ್ನ, 50 ಕೆಜಿ ಬೆಳ್ಳಿಯನ್ನ ಶೀಲಾ ಅವರು ಉಡುಗೊರೆಯಾಗಿ ಸ್ವೀಕರಿಸಿದ್ದಾರೆ. ಯೋಗೇಶ್ವರ್ ಮೇಲೆ 10 ಕ್ರಿಮಿನಲ್‌ ಕೇಸ್ ಇದೆ. ಯೋಗೇಶ್ವರ್ ಹೆಸರಲ್ಲಿ ಒಂದು ಮರ್ಸಿಡಿಸ್ ಬೆಂಜ್ ಹಾಗೂ ಬಿಎಂಡಬ್ಲೂ ಕಾರು ಇದೆ.

  • ಚನ್ನಪಟ್ಟಣಕ್ಕೆ ಯೋಗೇಶ್ವರ್‌, ಸಂಡೂರಿಗೆ ಅನ್ನಪೂರ್ಣ – ಉಪಚುನಾವಣೆಗೆ ‘ಕೈ’ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

    ಚನ್ನಪಟ್ಟಣಕ್ಕೆ ಯೋಗೇಶ್ವರ್‌, ಸಂಡೂರಿಗೆ ಅನ್ನಪೂರ್ಣ – ಉಪಚುನಾವಣೆಗೆ ‘ಕೈ’ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

    – ಶಿಗ್ಗಾಂವಿ ಕ್ಷೇತ್ರ ಬಾಕಿ ಉಳಿಸಿಕೊಂಡ ಕಾಂಗ್ರೆಸ್‌ ಹೈಕಮಾಂಡ್‌

    ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ (Congress) ಅಭ್ಯರ್ಥಿಗಳನ್ನು ಘೋಷಿಸಿದೆ.

    ಚನ್ನಪಟ್ಟಣಕ್ಕೆ (Channapatna Bypoll) ಸಿ.ಪಿ.ಯೋಗೇಶ್ವರ್‌ (C.P.Yogeshwar) ಹಾಗೂ ಸಂಡೂರಿಗೆ ಈ.ಅನ್ನಪೂರ್ಣ ಅವರನ್ನು ಹುರಿಯಾಳುಗಳಾಗಿ ಕಾಂಗ್ರೆಸ್‌ ಅಖೈರುಗೊಳಿಸಿದೆ. ಆದರೆ, ಹೈಕಮಾಂಡ್‌ ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದೇ ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: ಯೋಗೇಶ್ವರ್‌ರನ್ನ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡ ಡಿಕೆಶಿ: ಸಿ.ಟಿ ರವಿ ಟಾಂಗ್

    ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದ ಸಿ.ಪಿ.ಯೋಗೇಶ್ವರ್‌ಗೆ ನಿರಾಸೆಯಾಯಿತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಅವರು ಕಾಂಗ್ರೆಸ್‌ ಸೇರ್ಪಡೆಯಾದರು.

    ಕಾಂಗ್ರೆಸ್‌ ಸೇರ್ಪಡೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಿಪಿವೈ ಆಶೀರ್ವಾದ ಪಡೆದುಕೊಂಡರು. ಬಳಿಕ ಕಾಂಗ್ರೆಸ್‌ ಕಚೇರಿಯಲ್ಲಿ ಪಕ್ಷ ಸೇರಿದರು. ಸಿಪಿವೈಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಬರಮಾಡಿಕೊಂಡರು. ಇದನ್ನೂ ಓದಿ: ಡಿಕೆಶಿ ನೇತೃತ್ವದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ, ಮರಳಿ ಮನೆಗೆ ಬಂದಿದ್ದೇನೆ: ಸಿಪಿ ಯೋಗೇಶ್ವರ್‌

  • ಚನ್ನಪಟ್ಟಣ ಉಪಚುನಾವಣೆ; ಕಾಂಗ್ರೆಸ್‌ ಸೇರ್ತಾರಾ ಸಿ.ಪಿ.ಯೋಗೇಶ್ವರ್‌?

    ಚನ್ನಪಟ್ಟಣ ಉಪಚುನಾವಣೆ; ಕಾಂಗ್ರೆಸ್‌ ಸೇರ್ತಾರಾ ಸಿ.ಪಿ.ಯೋಗೇಶ್ವರ್‌?

    ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಿದೆ. ಬಿಜೆಪಿ ಪಾಳಯದಲ್ಲಿ ಟಿಕೆಟ್‌ಗಾಗಿ ಕಸರತ್ತು ನಡೆಸಿ ವಿಫಲರಾಗಿರುವ ಸಿ.ಪಿ.ಯೋಗೇಶ್ವರ್‌ ಇಂದು ರಾತ್ರಿಯೇ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆ ಇದೆ.

    ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಪಕ್ಷದಲ್ಲಿ ತಡರಾತ್ರಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಮಂಗಳವಾರ ರಾತ್ರಿಯೇ ಭೇಟಿ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಯೋಗೇಶ್ವರ್‌ಗೆ ಸಮಯ ನೀಡಿದ್ದಾರೆಂದು ಮೂಲಗಳು ತಿಳಿಸಿವೆ. ಇಂದೇ ಸಿಪಿವೈ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

    ಇದೇ ವಿಚಾರವಾಗಿ, ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಸಚಿವರಾದ ಕೃಷ್ಣಬೈರೇಗೌಡ, ಜಮೀರ್ ಅಹ್ಮದ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿ ಮೂವರು ನಾಯಕರು ತೆರಳಿದ್ದಾರೆ.

    ತಮ್ಮ ನಿವಾಸದಿಂದ ಹೊರಟು ರಹಸ್ಯ ಸ್ಥಳಕ್ಕೆ ಸಿ.ಪಿ.ಯೋಗೇಶ್ವರ್‌ ತೆರಳಿದ್ದಾರೆ ಎನ್ನಲಾಗಿದೆ.

  • ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಆರ್‌. ಅಶೋಕ್‌

    ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಆರ್‌. ಅಶೋಕ್‌

    – ಯೋಗೇಶ್ವರ್ ದುಡುಕಲ್ಲ ಎಂಬ ವಿಶ್ವಾಸವಿದೆ

    ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna Bypoll) ಎನ್‌ಡಿಎ (NDA) ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ (JDS) ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್ (R.Ashok) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ ಮನವೊಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಕುಮಾರಸ್ವಾಮಿ ಶಾಸಕರಾಗಿದ್ದರು. ಹೀಗಾಗಿ ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ ಎಂದಿದ್ದಾರೆ.

    ನಿಖಿಲ್‌ ಕುಮಾರಸ್ವಾಮಿಯವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಭಾಗ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ.

    ಡಿ.ಕೆ.ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಹಾನಿ ನಿವರ್ಹಣೆ ಮಾಡಿಲ್ಲ. ಜನರು ಸರ್ಕಾರದ ವಿರುದ್ಧವಾಗಿ ನಿಂತಿದ್ದಾರೆ. ಅದರ ಉಪಯೋಗವನ್ನು ನಾವು ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಚನ್ನಪಟ್ಟಣ ಉಪಕಣ; ನಾಮಪತ್ರ ಸಲ್ಲಿಕೆಗೆ ಸಿ.ಪಿ.ಯೋಗೇಶ್ವರ್ ಸಿದ್ಧತೆ

    ಚನ್ನಪಟ್ಟಣ ಉಪಕಣ; ನಾಮಪತ್ರ ಸಲ್ಲಿಕೆಗೆ ಸಿ.ಪಿ.ಯೋಗೇಶ್ವರ್ ಸಿದ್ಧತೆ

    – ‘ಮೈತ್ರಿ’ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ?

    ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಿದೆ. ಕ್ಷೇತ್ರದಲ್ಲಿ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಸಿ.ಪಿ.ಯೋಗೇಶ್ವರ್ ಸಿದ್ಧತೆ ಮಾಡಿಕೊಂಡಿದ್ದಾರೆ.

    ಗುರುವಾರ ಅಥವಾ ಶುಕ್ರವಾರ ನಾಮಪತ್ರ ಸಲ್ಲಿಸಲು ಯೋಗೇಶ್ವರ್ ತಯಾರಿದ್ದಾರೆ. ಅದಕ್ಕಾಗಿ ಎರಡು ಸೆಟ್ ಅಫಿಡವಿಟ್ ಸಿದ್ಧ ಮಾಡಿಕೊಂಡಿದ್ದಾರೆ. ಸಿಪಿವೈ ನಡೆಯಿಂದ ಎನ್‌ಡಿಎ ನಾಯಕರು ಕಂಗಾಲಾಗಿದ್ದಾರೆ.

    ಒಂದು ಬಿಜೆಪಿ ಅಭ್ಯರ್ಥಿಯಾಗಿ, ಮತ್ತೊಂದು ಪಕ್ಷೇತರ ಅಭ್ಯರ್ಥಿಯಾಗಿ ಅಫಿಡವಿಟ್ ಸಿದ್ಧಪಡಿಸಿಕೊಂಡಿದ್ದಾರೆ. ಮೈತ್ರಿ ಟಿಕೆಟ್ ಸಿಕ್ಕರೆ ಬಿಜೆಪಿಯಿಂದ ಸ್ಪರ್ಧೆ, ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಿಪಿವೈ ಮುಂದಾಗಿದ್ದಾರೆ.

    ಇತ್ತ, ಚನ್ನಪಟ್ಟಣ ಕ್ಷೇತ್ರ ಜೆಡಿಎಸ್‌ಗೆ ಬಹುತೇಕ ಫಿಕ್ಸ್ ಆದಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರಿಗೆ ಯಾರು ಅವರಿಗೆ ಟಿಕೆಟ್ ಘೋಷಣೆ ಮಾಡ್ತಾರೆ ಎಂದು ಬಿಎಸ್‌ವೈ ಪ್ರತಿಕ್ರಿಯಿಸಿದ್ದಾರೆ.

    ಜೆಡಿಎಸ್ ಚಿಹ್ನೆಯಿಂದಲೇ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕೆಂದು ಸಿ.ಪಿ.ಯೋಗೇಶ್ವರ್‌ಗೆ ಆಹ್ವಾನ ನೀಡಲಾಗಿತ್ತು. ಆದರೆ ಸಿಪಿವೈ ಅದಕ್ಕೆ ಒಪ್ಪಿಲ್ಲ. ಬಿಜೆಪಿ ಚಿಹ್ನೆಯಿಂದ ಸ್ಪರ್ಧೆಗೆ ಬಿಗಿಪಟ್ಟು ಹಿಡಿದಿದ್ದಾರೆಂದು ಮೂಲಗಳು ತಿಳಿಸಿವೆ.