Tag: Channaptna

  • ಬಿಜೆಪಿ, ಜೆಡಿಎಸ್‌ನಲ್ಲಿ ಭವಿಷ್ಯವಿಲ್ಲ ಎಂದು ನೂರಾರು ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ: ಡಿಕೆಶಿ

    ಬಿಜೆಪಿ, ಜೆಡಿಎಸ್‌ನಲ್ಲಿ ಭವಿಷ್ಯವಿಲ್ಲ ಎಂದು ನೂರಾರು ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ: ಡಿಕೆಶಿ

    ರಾಮನಗರ: ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ಚನ್ನಪಟ್ಟಣದ (Channapatna) ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಡಿಕೆಶಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ. ಬಿಜೆಪಿಯಲ್ಲಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಗೊತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಗುಂಪು ಗುಂಪಾಗಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಎಲ್ಲೋ ಹಳ್ಳಿಗಳಲ್ಲಿ ಭಿನ್ನಾಭಿಪ್ರಾಯದಿಂದ ಒಂದಿಬ್ಬರು ಮಾತ್ರ ನಮ್ಮ ಪಕ್ಷ ಬಿಟ್ಟಿರಬಹುದು ಎಂದರು. ಇದನ್ನೂ ಓದಿ: IPL Retention | ಹೊಸ ಮುಖಗಳಿಗೆ ಪಂಜಾಬ್‌ ಕಿಂಗ್ಸ್‌ ಮಣೆ – ಸ್ಟಾರ್‌ ಆಟಗಾರರು ಹೊರಕ್ಕೆ

    ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನರಿಗೆ ಒಳ್ಳೆಯದಾಗಲು ಸಾಧ್ಯ ಎಂದು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಶ್ಚಿಮ ಘಟ್ಟವನ್ನು ಕಾಶ್ಮೀರವಾಗಿಸಿದ ಮಳೆಯ ಮಂಜು

    ಈ ಸರ್ಕಾರ ಆತ್ಮಹತ್ಯೆ ಮಾಡಿಕೊಳ್ಳಲಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ ಮಾತಿಗೆ ಉತ್ತರ ನೀಡುವುದಿಲ್ಲ. ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ ಎಂದು ಟೀಕಿಸಿದರು. ಇದನ್ನೂ ಓದಿ: ತೊಗರಿ ಆರೋಗ್ಯ ಸಮೀಕ್ಷೆ ಕಾರ್ಯಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

    ಚನ್ನಪಟ್ಟಣದಲ್ಲಿ ಭಾವನಾತ್ಮಕವಾಗಿ ಮತ ಸೆಳೆಯಲಾಗುತ್ತಿದೆ ಎಂಬ ವಿಚಾರದ ಕುರಿತು ಮಾತನಾಡಿ, ಭಾವನೆ ಮೇಲೆ ಮತ ಕೇಳುವುದಲ್ಲ. ಬದುಕಿನ ಮೇಲೆ ಮತ ಕೇಳಬೇಕು. ಅವರು ಭಾವನೆ ಮೇಲೆ ಮತ ಕೇಳಿದರೆ, ನಾವು ಬದುಕಿನ ಮೇಲೆ ಮತ ಕೇಳುತ್ತೇವೆ. ಜನರ ಬದುಕು, ಅವರ ಅಭಿವೃದ್ಧಿ ನಮಗೆ ಮುಖ್ಯ. ಕೆರೆಗೆ ನೀರು ತುಂಬಿಸುವುದು, ರಸ್ತೆ, ಮನೆಗಳು, ನಿವೇಶನ ನೀಡುವುದು ಮುಖ್ಯ ಎಂದು ಹೇಳಿದರು. ಇದನ್ನೂ ಓದಿ: ಭಾರತದ ಭೂಮಿಯ ಮೇಲೆ ಒಂದಿಂಚೂ ಕಾಂಪ್ರಮೈಸ್ ಮಾಡಲ್ಲ: ಮೋದಿ ಭರವಸೆ

  • ‘ಮೈತ್ರಿ’ ನಾಯಕರಿಗೆ ಡಿಕೆ ಬ್ರದರ್ಸ್ ಶಾಕ್ – ಚನ್ನಪಟ್ಟಣ ನಗರಸಭೆಯ 6 ಬಿಜೆಪಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ

    ‘ಮೈತ್ರಿ’ ನಾಯಕರಿಗೆ ಡಿಕೆ ಬ್ರದರ್ಸ್ ಶಾಕ್ – ಚನ್ನಪಟ್ಟಣ ನಗರಸಭೆಯ 6 ಬಿಜೆಪಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ

    ರಾಮನಗರ: ಚನ್ನಪಟ್ಟಣ (Channapatna) ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ (By Election) ದಿನಗಣನೆ ನಡೆಯುತ್ತಿರುವಾಗಲೇ ಬಿಜೆಪಿ  ಮತ್ತು ಜೆಡಿಎಸ್‌ಗೆ ಕಾಂಗ್ರೆಸ್ (Congress) ಬಿಗ್ ಶಾಕ್ ನೀಡಿದೆ.

    ಚನ್ನಪಟ್ಟಣ ನಗರಸಭೆಗೆ ಬಿಜೆಪಿಯಿಂದ ಗೆದ್ದಿದ್ದ 7 ಸದಸ್ಯರ ಪೈಕಿ 6 ಮಂದಿ ಮಾಜಿ ಸಂಸದ ಡಿ.ಕೆ. ಸುರೇಶ್ (DK Suresh) ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ. ಚನ್ನಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 6 ಮಂದಿ ನಗರಸಭೆ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ನಗರಸಭಾ ಸದಸ್ಯರಾದ ಚಂದ್ರು, ಮಂಗಳಮ್ಮ, ಮನೋಹರ್, ಕಮಲ, ಜಯಮಾಲ, ಕಸ್ತೂರಿ ಕಾಂಗ್ರೆಸ್ ಸೇರಿದ್ದಾರೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧ

    2021-22ರಲ್ಲಿ ಇವರು ನಗರಸಭೆಗೆ ಬಿಜೆಪಿಯಿಂದ ಆಯ್ಕೆ ಆಗಿದ್ದರು. ಒಟ್ಟು 31 ಸದಸ್ಯರ ಪೈಕಿ 07 ಮಂದಿ ಬಿಜೆಪಿಯಿಂದ ಗೆದ್ದಿದ್ದರು. 16 ಮಂದಿ ಜೆಡಿಎಸ್‌ನಿಂದ ಗೆದ್ದಿದ್ದರು. ಎರಡು ತಿಂಗಳ ಹಿಂದೆ 13 ಮಂದಿ ಜೆಡಿಎಸ್ ಸದಸ್ಯರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು. ಇದನ್ನೂ ಓದಿ: ಕೋಲಾರ ಜಿಲ್ಲಾಡಳಿತದಿಂದಲೂ ವಕ್ಫ್‌ಗೆ ಸರ್ಕಾರಿ ಜಮೀನು ಮಂಜೂರು ಆರೋಪ

  • ಚನ್ನಪಟ್ಟಣ ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು – ದೋಸ್ತಿ ನಾಯಕರಲ್ಲಿ ಮೂಡದ ಒಮ್ಮತದ ನಿರ್ಧಾರ

    ಚನ್ನಪಟ್ಟಣ ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು – ದೋಸ್ತಿ ನಾಯಕರಲ್ಲಿ ಮೂಡದ ಒಮ್ಮತದ ನಿರ್ಧಾರ

    – ಟಿಕೆಟ್ ಆಯ್ಕೆ ಹೈಕಮಾಂಡ್‌ಗೆ ಬಿಡಲು ತೀರ್ಮಾನ

    ರಾಮನಗರ: ಚನ್ನಪಟ್ಟಣ (Channapatna) ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು ಮುಂದುವರಿದಿದೆ. ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ದೋಸ್ತಿ ನಾಯಕರಲ್ಲಿ ಒಮ್ಮತದ ನಿರ್ಧಾರ ಮೂಡಿಲ್ಲ. ಹೀಗಾಗಿ ಟಿಕೆಟ್ ಆಯ್ಕೆಯನ್ನು ಹೈಕಮಾಂಡ್‌ಗೆ ಬಿಡಲು ತೀರ್ಮಾನ ಮಾಡಲಾಗಿದೆ. ಹೆಚ್‌ಡಿ ಕುಮಾರಸ್ವಾಮಿ, ಆರ್ ಅಶೋಕ್, ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತ ಮೂಡಿಲ್ಲ.

    ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ದೆಹಲಿಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಅಂತಿಮ ನಿರ್ಣಯ ಮಾಡಲು ತೀರ್ಮಾನಿಸಲಾಗಿದೆ. ಮೈತ್ರಿ ಧರ್ಮದಂತೆ 2+1 ಸೂತ್ರಕ್ಕೆ ಜೆಡಿಎಸ್ (JDS) ಪಟ್ಟು ಹಿಡಿದಿದೆ. ಮೈತ್ರಿ ಅಭ್ಯರ್ಥಿ ಜೆಡಿಎಸ್‌ನಿಂದಲೇ ಆಯ್ಕೆ ಮಾಡಬೇಕು. ಜೆಡಿಎಸ್ ಅಭ್ಯರ್ಥಿ ಪರ ಸಿಪಿವೈ ಕೆಲಸ ಮಾಡುವಂತೆ ಸೂಚಿಸಬೇಕು ಎಂದು ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ದಳಪತಿಗಳು ಡಿಮ್ಯಾಂಡ್ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈವರೆಗೂ ಅಭ್ಯರ್ಥಿ ಯಾರಾಗುತ್ತಾರೆ ಎಂದು ರಿವೀಲ್ ಮಾಡದ ಜೆಡಿಎಸ್ ನಾಯಕರು, ಚನ್ನಪಟ್ಟಣ ಟಿಕೆಟ್ (Channapatna By Election) ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಬಿಗಿಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: Kodagu| ಬಿಜೆಪಿ ಮುಖಂಡನ ಹತ್ಯೆ ಕೇಸ್‌- ಇಬ್ಬರಿಗೆ ಜೀವಾವಧಿ ಶಿಕ್ಷೆ, 10 ಸಾವಿರ ದಂಡ

    ಈ ಮಧ್ಯೆ ಜೆಡಿಎಸ್‌ನಿಂದಲೇ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಆಗುತ್ತಾರೆ. ಹೆಚ್‌ಡಿಕೆ ಯಾರನ್ನಾದರೂ ನಿಲ್ಲಿಸಲಿ ಎಂದು ಹೈಕಮಾಂಡ್ ಹೇಳಿದೆ ಅಂತ ಜೆಡಿಎಸ್ ನಾಯಕ ಸುರೇಶ್ ಬಾಬು ಹೇಳಿಕೆ ನೀಡಿದ್ದಾರೆ. ಶಿಗ್ಗಾಂವಿ ಸಂಡೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

    ಶಿಗ್ಗಾಂವಿ, ಸಂಡೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಶಿಗ್ಗಾಂವಿಯಿಂದ ಭರತ್ ಬೊಮ್ಮಾಯಿಗೆ ಟಿಕೆಟ್ ಸಿಕ್ಕಿದೆ. ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬೊಮ್ಮಾಯಿ ಸಕ್ಸಸ್ ಆಗಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ವರಿಷ್ಟರು ಆಂತರಿಕ ಸಮೀಕ್ಷೆ ನಡೆಸಿದ್ದರು. ಆಂತರಿಕ ಸಮೀಕ್ಷೆಯಲ್ಲಿ ಭರತ್ ಬೊಮ್ಮಾಯಿ ಪರ ಮತದಾರರ ಒಲವು ಇದ್ದ ಕಾರಣ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಅಂತಿಮ: ಸುರೇಶ್ ಬಾಬು

    ಇನ್ನು ಸಂಡೂರಿನಿಂದ ಬಂಗಾರು ಹನುಮಂತುಗೆ ಟಿಕೆಟ್ ಒಲಿದಿದೆ. ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿರುವ ಬಂಗಾರು ಹನುಮಂತುಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಆಪ್ತನಿಗೆ ಟಿಕೆಟ್ ಕೊಡಿಸುವಲ್ಲಿ ಜನಾರ್ಧನರೆಡ್ಡಿ ಯಶಸ್ವಿಯಾಗಿದ್ದಾರೆ. ಚನ್ನಪಟ್ಟಣ ಮಾತ್ರ ಬಿಜೆಪಿ ಹೈಕಮಾಂಡ್ ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: ಕಾಶ್ಮೀರದ ಹಲವೆಡೆ ಗ್ರೆನೇಡ್ ದಾಳಿ ನಡೆಸಿದ್ದ ಇಬ್ಬರು ಉಗ್ರರು ಅರೆಸ್ಟ್‌

    ಅತ್ತ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ತುಕಾರಾಂ ಪತ್ನಿಗೆ ಕಾಂಗ್ರೆಸ್ ಟಿಕೆಟ್ ಸಾಧ್ಯತೆ ಇದೆ. ಅನ್ನಪೂರ್ಣಗೆ ಟಿಕೆಟ್ ನೀಡಿ ನಾಳೆಯೇ ಅಧಿಕೃತ ಘೋಷಣೆ ಸಾಧ್ಯತೆ ಇದೆ. ಇದನ್ನೂ ಓದಿ: ಸಂಡೂರು ಉಪಚುನಾವಣೆ| ಬಿಜೆಪಿ ಟೆಕೆಟ್‌ ಪಡೆದ ಬಂಗಾರು ಹನುಮಂತು ಯಾರು?

  • ಹೆಚ್‌ಡಿಕೆ ಚನ್ನಪಟ್ಟಣ ಕ್ಷೇತ್ರವನ್ನು ಯೋಗೇಶ್ವರ್‌ಗೆ ಬಿಟ್ಟುಕೊಡಬೇಕು: ಸಿಪಿವೈ ಪರ ಮುನಿಸ್ವಾಮಿ ಬ್ಯಾಟಿಂಗ್

    ಹೆಚ್‌ಡಿಕೆ ಚನ್ನಪಟ್ಟಣ ಕ್ಷೇತ್ರವನ್ನು ಯೋಗೇಶ್ವರ್‌ಗೆ ಬಿಟ್ಟುಕೊಡಬೇಕು: ಸಿಪಿವೈ ಪರ ಮುನಿಸ್ವಾಮಿ ಬ್ಯಾಟಿಂಗ್

    ಕೋಲಾರ: ಚನ್ನಪಟ್ಟಣದಲ್ಲಿ (Channapatna) ಸಿ.ಪಿ ಯೋಗೇಶ್ವರ್‌ಗೆ (CP Yogeshwar) ಟಿಕೆಟ್ ಕೊಡಬೇಕು ಎಂದು ಮಾಜಿ ಸಂಸದ ಮುನಿಸ್ವಾಮಿ (S Muniswamy) ಸಿಪಿವೈ ಪರ ಬ್ಯಾಟಿಂಗ್ ಮಾಡಿದ್ದಾರೆ.

    ಚನ್ನಪಟ್ಟಣ ಉಪಚುನಾವಣೆ ಕುರಿತು ಕೋಲಾರ (Kolar) ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಸಂಸದನಾಗಿದ್ದಾಗ ಜೆಡಿಎಸ್‌ಗೆ ಸೀಟು ಬಿಟ್ಟು ಕೊಟ್ಟಿದ್ದೇವೆ. ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದೇವೆ. ಈಗ ಕುಮಾರಸ್ವಾಮಿ ಸಹ ಮನಸು ಮಾಡಿ ಯೋಗಿಶ್ವರ್‌ಗೆ ಸೀಟು ಬಿಟ್ಟು ಕೊಡಬೇಕು ಎಂದರು. ಇದನ್ನೂ ಓದಿ: ಸ್ಕಿಡ್‌ ಆಗಿ ಸೇತುವೆಯಿಂದ ಘಟಪ್ರಭಾ ನದಿಗೆ ಬಿತ್ತು ಬೈಕ್‌ – ದಂಪತಿ ಸಾವು

    ಲೋಕಸಭಾ ಚುನಾವಣೆಯಲ್ಲಿ ಹೆಚ್‌ಡಿಕೆ ಪರವಾಗಿ ಯೋಗೇಶ್ವರ್ ಕೆಲಸ ಮಾಡಿದ್ದಾರೆ. ಬಿಜೆಪಿಯ ಬಹುತೇಕ ನಾಯಕರ ಅಭಿಪ್ರಾಯ ಇದೇ ಆಗಿದೆ. ಹಠ ಮಾಡದೇ ಹೆಚ್‌ಡಿಕೆ ಸೀಟು ಬಿಟ್ಟು ಕೊಡಬೇಕು. ಇಬ್ಬರು ಸೇರಿ ಕೆಲಸ ಮಾಡಿದರೆ ಗೆಲುವು ಖಚಿತ. ಯೋಗೇಶ್ವರ್ ಬಂಡಾಯ ಅಭ್ಯರ್ಥಿ ಆದರೆ ಅನುಕೂಲ ಆಗೋದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: Chikkamagaluru | 17 ಕುಟುಂಬಗಳಿಗೆ ಗುಡ್ಡ ಕುಸಿತದ ಆತಂಕ – ಸ್ಥಳಾಂತರಕ್ಕೆ ಡೆಡ್‌ಲೈನ್ ಕೊಟ್ಟ ಗ್ರಾಮಸ್ಥರು

  • ದಸರಾ ವಜ್ರಮುಷ್ಠಿ ಕಾಳಗದ ವಿಜೇತ ಚನ್ನಪಟ್ಟಣದ ಪ್ರವೀಣ್ ಜೆಟ್ಟಿಗೆ ಸನ್ಮಾನ

    ದಸರಾ ವಜ್ರಮುಷ್ಠಿ ಕಾಳಗದ ವಿಜೇತ ಚನ್ನಪಟ್ಟಣದ ಪ್ರವೀಣ್ ಜೆಟ್ಟಿಗೆ ಸನ್ಮಾನ

    ರಾಮನಗರ: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಉತ್ಸವದ ವಜ್ರಮುಷ್ಠಿ (Vajramushti) ಕಾಳಗದಲ್ಲಿ ವಿಜೇತರಾದ ಚನ್ನಪಟ್ಟಣದ (Channapatna) ಪ್ರವೀಣ್ ಜೆಟ್ಟಿ (Praveen Jetti) ಅವರನ್ನು ನಗರದ ರೈಲ್ವೆ ನಿಲ್ದಾಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಅಭಿನಂದಿಸಲಾಯಿತು.

    ನಮ್ಮ ರಾಜ್ಯದ ಸಾಂಸ್ಕೃತಿಕ ಪರಂಪರೆಯ ಆಸ್ತಿಯಾಗಿರುವ ಜೆಟ್ಟಿ ಜನಾಂಗಕ್ಕೆ ಸರ್ಕಾರ ಸೂಕ್ತ ಗೌರವ ಹಾಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ಬೊಂಬೆನಾಡಿನ ಜೆಟ್ಟಿಗಳ ಕೊಡುಗೆ ಅಪಾರ. ಈ ಬಾರಿಯ ದಸರಾದಲ್ಲಿ ಜಯಗಳಿಸಿರುವ ಪ್ರವೀಣ್ ಜೆಟ್ಟಿ ಅವರ ಸಾಧನೆ ಶ್ಲಾಘನೀಯವಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್

    ಪ್ರವೀಣ್ ಜೆಟ್ಟಿ ಅವರು ಚನ್ನಪಟ್ಟಣ ತಾಲೂಕಿನ ಸಾಂಸ್ಕೃತಿಕ ಪರಂಪರೆಯ ಆಸ್ತಿಯಾಗಿದ್ದಾರೆ. ವಜ್ರಮುಷ್ಠಿ ಕಾಳಗದಲ್ಲಿ ಚನ್ನಪಟ್ಟಣದ ಜೆಟ್ಟಿಗಳು ಜಯಗಳಿಸುತ್ತಾ ಬಂದಿದ್ದಾರೆ. ಈ ವರ್ಷ ಪ್ರವೀಣ್ ಜೆಟ್ಟಿ ಅವರು ದಸರಾದಲ್ಲಿ ಭಾಗವಹಿಸಿ ಜಯಗಳಿಸುವ ಮೂಲಕ ಬೊಂಬೆನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರು ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು. ಇದನ್ನೂ ಓದಿ: ಹರೀಶ್ ಪೂಂಜಾ ರಾಜಕೀಯದಲ್ಲಿ ಇನ್ನೂ ಬಚ್ಚಾ: ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]