Tag: Channarayapatna

  • ವ್ಹೀಲಿಂಗ್ ಮಾಡಿ ಶಾಲಾ – ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಮೂವರ ಬಂಧನ

    ವ್ಹೀಲಿಂಗ್ ಮಾಡಿ ಶಾಲಾ – ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಮೂವರ ಬಂಧನ

    ಹಾಸನ: ವ್ಹೀಲಿಂಗ್ ಮಾಡಿಕೊಂಡು ಶಾಲಾ ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಮೂವರು ಕಿಡಿಗೇಡಿಗಳನ್ನು ಹಾಸನ (Hassan) ಪೊಲೀಸರು ಬಂಧಿಸಿದ್ದಾರೆ.

    ಕಿಡಿಗೇಡಿಗಳಿಂದ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಮಹಿಳಾ ಠಾಣೆ ಪಿಎಸ್‍ಐ ಕುಸುಮಾ ಸಿಬ್ಬಂದಿಗಳೊಂದಿಗೆ ಬಸಟ್ಟಿಕೊಪ್ಪಲು ರಸ್ತೆಯಲ್ಲಿ ಗಸ್ತಿನಲ್ಲಿದ್ದರು. ಈ ವೇಳೆ ಮೂವರು ಬೈಕ್‍ನಲ್ಲಿ ವ್ಹೀಲಿಂಗ್ ಮಾಡಿಕೊಂಡು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದರು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ರಾಷ್ಟ್ರಗೀತೆ ಹಾಡಿ ಮೋದಿ ಆಶೀರ್ವಾದ ಪಡೆದ ಅಮೆರಿಕ ಗಾಯಕಿ

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನ ನಿತ್ಯ ಈ ರೀತಿಯ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಇಂತಹ ಘಟನೆಗಳನ್ನು ತಡೆಯಲು ಗಸ್ತು ಹೆಚ್ಚಿಸಿ ಕಿಡಿಗೇಡಿಗಳನ್ನು ನಿಯಂತ್ರಿಸುವಂತೆ ಸೂಚನೆ ನೀಡಲಾಗಿದೆ. ಇದೇ ರೀತಿ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 11 ಜನರನ್ನು ವಶಕ್ಕೆ ಪಡೆದು 26 ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

    ಮುಂದುವರೆದು ಮಾತನಾಡಿದ ಅವರು, ಜಿಲ್ಲೆ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಒಂದೇ ಕಡೆ ಇದ್ದ ಸುಮಾರು 160 ಕ್ಕೂ ಹೆಚ್ಚು ಪೇದೆಗಳನ್ನು ಕಳೆದ ವರ್ಷ ವರ್ಗಾವಣೆ ಮಾಡಲಾಗಿತ್ತು. ಈ ಬಾರಿ ಸಹ ಹತ್ತು ವರ್ಷದಿಂದ ಒಂದೇ ವಿಭಾಗದಲ್ಲಿದ್ದ ಎಎಸ್‍ಐ, ಮುಖ್ಯಪೇದೆ ಹಾಗೂ ಪೇದೆಗಳು ಸೇರಿದಂತೆ 160 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಇದೇ ವೇಳೆ ಸಿಇಐಆರ್ ಪೋರ್ಟಲ್ ಸಹಾಯದಿಂದ ಕಳೆದು ಹೋಗಿದ್ದ 90 ಮೊಬೈಲ್‍ಗಳನ್ನು ಈ ಬಾರಿ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು ಎಂದಿದ್ದಾರೆ.

    ಜಿಲ್ಲೆಯಲ್ಲಿ ಪೋರ್ಟಲ್ ಆರಂಭಿಸಿದ ದಿನದಿಂದ ಈವರೆಗೆ ಸಾರ್ವಜನಿಕರು 1925 ಮೊಬೈಲ್‍ಗಳು ಕಳ್ಳತನ ಆಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರಲ್ಲಿ ಇಲ್ಲಿವರೆಗೆ 238 ಮೊಬೈಲ್ ಪತ್ತೆ ಮಾಡಿ, 148 ಮುಬೈಲ್‍ನ್ನು ಈಗಾಗಲೇ ಹಸ್ತಾಂತರಿಸಲಾಗಿದೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಅಪರಿಚಿತ ವ್ಯಕ್ತಿಗಳಿಂದ ವಂಚನೆಗೆ ಒಳಗಾದರೆ ಕೂಡಲೇ 1930 ಸಹಾಯವಾಣಿಗೆ ಕರೆ ಮಾಡುವಂತೆ ಕೋರಿದರು.

    ಚನ್ನರಾಯಪಟ್ಟಣ (Channarayapatna) ಠಾಣಾ ವ್ಯಾಪ್ತಿಯ ರೌಡಿಶೀಟರ್ ಯಾಚೇನಹಳ್ಳಿ ಚೇತುಗೆ ಮತ್ತೊಂದು ವರ್ಷ ಸೆರೆವಾಸಕ್ಕೆ ಕೋರ್ಟ್ ಆದೇಶಿಸಿದೆ. 2007 ರಿಂದಲೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಈತನ ವಿರುದ್ಧ 3 ಕೊಲೆ, 7 ಕೊಲೆಯತ್ನ, 4 ಸುಲಿಗೆ ಹಾಗೂ 10 ಹಲ್ಲೆ ಪ್ರಕರಣಗಳಿವೆ. 2010 ರಲ್ಲೇ ರೌಡಿ ರಿಜಿಸ್ಟರ್ ತೆರೆದು ಆರೋಪಿ ಮೇಲೆ ನಿಗಾ ಇಡಲಾಗಿತ್ತು. ನಂತರ ಗಡಿಪಾರು ಆದೇಶ ಮಾಡಲಾಗಿತ್ತು. ನಂತರವೂ ಈತ ಅಪರಾಧ ಕೃತ್ಯ ಮುಂದುವರಿಸಿದ ಹಿನ್ನೆಲೆ ಗುಂಡಾ ಕಾಯ್ದೆ ಶಿಫಾರಸ್ಸು ಮಾಡಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಮೇ.5 ರಂದು ಬಂಧನದ ಆದೇಶ ಹೊರಡಿಸಿದ್ದರು. ಬಳಿಕ ಚೇತುನನ್ನು ಕಲಬುರಗಿ (Kalaburagi) ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿತ್ತು. ನಂತರ ಜೂ.1 ರಂದು ಹೈಕೋರ್ಟ್ (High Court) ಸಲಹಾಮಂಡಳಿ ಎದುರು ವಿವರಣೆ ಮಂಡಿಸಲಾಗಿತ್ತು. ಸಲಹಾ ಮಂಡಳಿ ಗೂಂಡಾಕಾಯ್ದೆಯನ್ನು ಅನುಮೋದಿಸಿ 1 ವರ್ಷ ಶಿಕ್ಷೆ ವಿಧಿಸಿ ಜೂ.7 ರಂದು ಸರ್ಕಾರದ ಪರ ಆದೇಶ ಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ಪಾವಗಡ ಪೊಲೀಸ್ ಠಾಣೆಗೆ ಗೃಹ ಸಚಿವ ದಿಢೀರ್ ಭೇಟಿ

  • ಕಾಯಿ ಆರಿಸುವಾಗ ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

    ಕಾಯಿ ಆರಿಸುವಾಗ ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

    ಹಾಸನ: ತೆಂಗಿನಕಾಯಿ ಗೊನೆ (Coconut Shell) ಬಿದ್ದು ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ಚನ್ನರಾಯಪಟ್ಟಣದ (Channarayapatna) ಬಿ.ಚೋಳೇನಹಳ್ಳಿಯಲ್ಲಿ ನಡೆದಿದೆ.

    ಪ್ರಜ್ವಲ್ (16) ಮೃತಪಟ್ಟ ಬಾಲಕ. ಗಾಳಿ, ಮಳೆಗೆ ಬಿದ್ದಿದ್ದ ಕಾಯಿಗಳನ್ನು ಒಂದೆಡೆ ಸಂಗ್ರಹಿಸುವಾಗ ಏಕಾಏಕಿ ಮರದಿಂದ ಕಾಯಿ ಗೊನೆ ಬಾಲಕನ ಮೇಲೆ ಬಿದ್ದಿದೆ. ತೀವ್ರವಾಗಿ ಪೆಟ್ಟಾಗಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾನೆ.

    ಶ್ರವಣಬೆಳಗೊಳ (Shravanabelagola) ಹೊರವಲಯದ ಉತ್ತೇನಹಳ್ಳಿ ಗ್ರಾಮದ ರವಿ ಮತ್ತು ಅನಸೂಯ ದಂಪತಿ ಮಗ ಪ್ರಜ್ವಲ್‍ನೊಂದಿಗೆ ಬಿ.ಚೋಳೇನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದರು. ಪ್ರಜ್ವಲ್ ಪ್ರತಿನಿತ್ಯ ತೋಟಕ್ಕೆ ಹೋಗಿ ಕಾಯಿ ಎತ್ತಿ ಹಾಕಿ ಇತರೆ ಸಣ್ಣಪುಟ್ಟ ಕೆಲಸ ಮುಗಿಸಿ ಕಾಲೇಜಿಗೆ ಹೋಗುತ್ತಿದ್ದ. ಭಾರೀ ಮಳೆ, ಗಾಳಿಯಿಂದ ಮರದಿಂದ ತೆಂಗಿನಕಾಯಿಗಳು ನೆಲಕ್ಕೆ ಬಿದ್ದಿದ್ದವು. ಬಿದ್ದಿದ್ದ ತೆಂಗಿನಕಾಯಿಗಳನ್ನು ಒಂದೆಡೆ ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ತೆಂಗಿನಮರದಿಂದ ಬಾಲಕನ ಮೇಲೆ ತೆಂಗಿನಕಾಯಿ ಗೊನೆಗಳು ಬಿದ್ದಿದ್ದವು. ಇದನ್ನೂ ಓದಿ: ಆಷಾಢದ ಮೊದಲ ಶುಕ್ರವಾರಕ್ಕೆ ತಾಯಿ ಚಾಮುಂಡಿಯ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

    ಪ್ರಜ್ವಲ್ ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 2024ಕ್ಕೆ ನಾಸಾ-ಇಸ್ರೋ ಜಂಟಿ ಬಾಹ್ಯಾಕಾಶ ಯಾನ – ಭಾರತ-US ನಡುವೆ ಒಪ್ಪಂದ

  • ಅಕ್ರಮ ಗೋಸಾಗಾಟ ವೇಳೆ ಅಡ್ಡಗಟ್ಟಿದ ಪೊಲೀಸರು – ಅಡ್ಡಾದಿಡ್ಡಿ ಚಾಲನೆಯಿಂದ ಕಂಟೈನರ್ ಪಲ್ಟಿ

    ಅಕ್ರಮ ಗೋಸಾಗಾಟ ವೇಳೆ ಅಡ್ಡಗಟ್ಟಿದ ಪೊಲೀಸರು – ಅಡ್ಡಾದಿಡ್ಡಿ ಚಾಲನೆಯಿಂದ ಕಂಟೈನರ್ ಪಲ್ಟಿ

    ಹಾಸನ: ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ ಪರಿಣಾಮ ಅಕ್ರಮ ಗೋಸಾಗಾಟ (Cow Transportation) ಮಾಡುತ್ತಿದ್ದ ಕಂಟೈನರ್ (Container) ಪಲ್ಟಿಯಾದ ಘಟನೆ ಹಾಸನದಲ್ಲಿ (Hassan) ನಡೆದಿದೆ.

    ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲೂಕಿನ ಹಿರಿಸಾವೆ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಕಂಟೈನರ್‌ನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದರು. ಹೊಳೆನರಸೀಪುರದಿಂದ ಬೆಂಗಳೂರಿನ ಕಡೆಗೆ ಅಕ್ರಮವಾಗಿ ಗೋಸಾಗಾಣಿಕೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನವನ್ನು ಅಡ್ಡಗಟ್ಟಿದ್ದು, ವಾಹನ ನಿಲ್ಲಿಸದೇ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಇದನ್ನೂ ಓದಿ: ಗುರುವಾರ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ

    ಪೊಲೀಸರು ವಾಹನವನ್ನು ಬೆನ್ನಟ್ಟಿಕೊಂಡು ಹೋಗಿದ್ದಾರೆ. ಈ ವೇಳೆ ಬ್ಯಾಟರಹಳ್ಳಿ ಗ್ರಾಮದ ಬಳಿ ಇದ್ದ ರೋಡ್ ಹಂಪ್ ಕಾಣದೆ ಕಂಟೈನರನ್ನು ಚಲಾಯಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಅಲ್ಲೇ ಇದ್ದ ಮನೆಯ ಕಾಂಪೌಂಡ್‌ಗೆ ಗುದ್ದಿ ಪಲ್ಟಿಯಾಗಿದೆ. ಚಾಲಕ ಹಾಗೂ ನಿರ್ವಾಹಕ ವಾಹನ ಬಿಟ್ಟು ಪಾರಾರಿಯಾಗಿದ್ದು, ಕಂಟೈನರ್‌ನಲ್ಲಿದ್ದ 40 ಹಸು, ಕರು ಹಾಗೂ ಎಮ್ಮೆಗಳ ಪೈಕಿ 17 ಗೋವುಗಳು ಸಾವನ್ನಪ್ಪಿವೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಆಯ್ಕೆ – ಗ್ಯಾರಂಟಿ ಘೋಷಣೆ ಕೂಗಿ ಸಂಭ್ರಮಿಸಿದ ಅಭಿಮಾನಿಗಳು

    ಉಳಿದ ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಅವುಗಳನ್ನು ಕಡೂರಿನ ಗೋಶಾಲೆಗೆ ಬಿಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಅಲ್ಲದೇ ಮೂವರು ಆರೋಪಿಗಳ ವಿರುದ್ಧ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಣ್ಣ ಬಹಳ ಕಷ್ಟಪಟ್ಟಿದ್ದಾನೆ, ನಾವ್ಯಾವತ್ತೂ ವಿಧಾನಸೌಧಕ್ಕೆ ಹೋಗಲ್ಲ: ಸಿದ್ದರಾಮಯ್ಯ ಸಹೋದರ

  • ರಾಮನವಮಿ ಮೆರವಣಿಗೆ ವೇಳೆ ಇಬ್ಬರಿಗೆ ಚಾಕು ಇರಿತ

    ರಾಮನವಮಿ ಮೆರವಣಿಗೆ ವೇಳೆ ಇಬ್ಬರಿಗೆ ಚಾಕು ಇರಿತ

    ಹಾಸನ: ಮೆರವಣಿಗೆ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದು ಇಬ್ಬರು ಯುವಕರಿಗೆ ಚಾಕು ಇರಿದ ಪ್ರಕರಣ ಚನ್ನರಾಯಪಟ್ಟಣದಲ್ಲಿ (Channarayapatna) ನಡೆದಿದೆ.

    POLICE JEEP

    ಗುರುವಾರ ರಾತ್ರ್ರಿ ರಾಮನವಮಿ (Rama Navami) ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ (Jamia Masjid Road) ಮೆರವಣಿಗೆ ಹೋಗುತ್ತಿದ್ದ ವೇಳೆ ಎರಡು ಕೋಮಿನ ಯುವಕರ ನಡುವೆ ಜಗಳ ಶುರುವಾಗಿದೆ. ಇದು ತಾರಕಕ್ಕೇರಿ ಮುರುಳಿ ಹಾಗೂ ಹರ್ಷ ಎಂಬ ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಇಂದೋರ್ ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆವಹಿಸಿ ಜಿಲ್ಲೆಯ ವಿವಿಧ ಭಾಗಗಳಿಂದ ಪೊಲೀಸರ ನಿಯೋಜನೆ ಮಾಡಲಾಗಿದೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಸೂಸೈಡ್

  • ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣು

    ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣು

    ಚಿಕ್ಕಬಳ್ಳಾಪುರ: ಅನಾರೋಗ್ಯದಿಂದ ಪತ್ನಿ ಮೃತಳಾದ ಹಿನ್ನೆಲೆ ಮನನೊಂದ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮನಕಲುಕುವ ಘಟನೆ ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ನಡೆದಿದೆ.

    ಬೂದಿಗೆರೆ ಗ್ರಾಮದ ವಿಜಯೇಂದ್ರ(38) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ಲಾವಣ್ಯ(34) ಅನಾರೋಗ್ಯದಿಂದ ಮೃತಪಟ್ಟಿದ್ದರು. ವಿಜಯೇಂದ್ರ 9 ವರ್ಷಗಳ ಹಿಂದೆ ಲಾವಣ್ಯ ಅವರನ್ನು ಮದುವೆಯಾಗಿದ್ರು. ಈ ದಂಪತಿಗೆ ಮಕ್ಕಳಿರಲಿಲ್ಲ. ಆದರೆ ಕಳೆದ ಒಂದು ವರ್ಷದಿಂದ ಲಾವಣ್ಯ ಅನಾರೋಗ್ಯಕ್ಕೆ ತುತ್ತಾಗಿದ್ರು. ಇದನ್ನೂ ಓದಿ:  ಗುಡಿಸಲಿನ ಮೇಲೆ ಬಿದ್ದ ಟ್ರಕ್ – ಮೂವರು ಅಪ್ರಾಪ್ತ ಸಹೋದರಿಯರು ಬಲಿ

    ಲಿವರ್ ಸಮಸ್ಯೆ, ಕಿಡ್ನಿ ಸಮಸ್ಯೆ ಎಂದು ಲಾವಣ್ಯಗೆ ವಿಜಯೇಂದ್ರ ಸಾಕಷ್ಟು ಕಡೆ ಚಿಕಿತ್ಸೆ ಕೊಡಿಸಿದ್ರೂ ಚೇತರಿಸಿಕೊಂಡಿರಲಿಲ್ಲ. ಕಳೆದ ರಾತ್ರಿ ಮನೆಯಲ್ಲೇ ಲಾವಣ್ಯ ಮೃತಪಟ್ಟಿದ್ದು, ಅದನ್ನು ವಿಜಯೇಂದ್ರ ಕಣ್ಣಾರೆ ಕಂಡಿದ್ದಾರೆ. ನಂತರ ಪತ್ನಿ ಸಾವಿನ ಬಗ್ಗೆ ಯಾರಿಗೂ ತಿಳಿಸದೆ ತಾನು ಮನೆಯಲ್ಲಿದ್ದ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮನೆಯ ಮುಂದೆಯೇ ಚಿಲ್ಲರೆ ಅಂಗಡಿ ಇಟ್ಟುಕೊಂಡಿದ್ದ ವಿಜಯೇಂದ್ರ, ಬೆಳಗ್ಗೆ ಏಕೆ ಅಂಗಡಿ ತೆಗೆದಿಲ್ಲ ಎಂದು ಅಕ್ಕಪಕ್ಕದವರು ಮನೆಯ ಬಾಗಿಲು ಬಡಿದ್ರೂ ತೆಗೆದಿಲ್ಲ. ಆಗ ಸ್ನೇಹಿತರು, ಸಂಬಂಧಿಕರು ಬಂದು ಬಾಗಿಲು ಒಡೆದು ಒಳಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದಿಂದ ವಾಲಿದ ವಿದ್ಯುತ್ ಕಂಬ – ಆತಂಕದಲ್ಲಿ ಸವಾರರು

    ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಚನ್ನರಾಯಪಟ್ಟಣ ಪಿಎಸ್‍ಐ ಆತ್ಮಹತ್ಯೆ- ಉನ್ನತ ಮಟ್ಟದ ತನಿಖೆಗೆ ಎಚ್‍ಡಿಕೆ ಆಗ್ರಹ

    ಚನ್ನರಾಯಪಟ್ಟಣ ಪಿಎಸ್‍ಐ ಆತ್ಮಹತ್ಯೆ- ಉನ್ನತ ಮಟ್ಟದ ತನಿಖೆಗೆ ಎಚ್‍ಡಿಕೆ ಆಗ್ರಹ

    – ರಾಜ್ಯ ಸರ್ಕಾರ ಮೌನದ ವಿರುದ್ಧ ಎಚ್‍ಡಿಕೆ ಕಿಡಿ
    – ‘ಹಿರಿಯ ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ’

    ಬೆಂಗಳೂರು: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಿಎಸ್‍ಐ ಕಿರಣ್‍ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕೆಂದು ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ  ಆಗ್ರಹಿಸಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ, ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೆ ಪಿಎಸ್‍ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

    ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು. ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ ‘ಜಾಗಟೆ’ ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ. ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗ ಪಿಎಸ್‍ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ, ಕಳೆದ ವರ್ಷ ಐಎಫ್‍ಎಸ್ ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದಿದ್ದಾರೆ.

    ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ತಕ್ಷಣ ಆದೇಶ ನೀಡಬೇಕು. ಯಾವುದೇ ಇಲಾಖೆಯಲ್ಲಿಯೂ ಪ್ರಾಮಾಣಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದ್ದಾರೆ.

    ರಾಜಕೀಯ ಒತ್ತಡವಿತ್ತಾ?
    ಚನ್ನರಾಯಪಟ್ಟಣದಲ್ಲಿ ಎರಡು ದಿನದಲ್ಲಿ ಎರಡು ಕೊಲೆ ನಡೆದಿತ್ತು. ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ಮಾಡಿದ್ದರು. ಆದರೆ ಕೊಲೆಗೆ ಸಂಬಂಧಿದಂತೆ ಆರೋಪಿಗಳ ಬಂಧಿಸುವಲ್ಲಿ ರಾಜಕೀಯ ಒತ್ತಡವಿತ್ತು ಎನ್ನಲಾಗಿದೆ. ನಿನ್ನೆ ವರಮಹಾಲಕ್ಷ್ಮಿ ಹಬ್ಬ ಇದ್ದರಿಂದ ಪತ್ನಿ ತಂದೆ ಮನೆಗೆ ಹೋಗಿದ್ದ ಅವರು ಉಪಹಾರ ಸೇವಿಸಿ ತಾವು ವಾಸವಿದ್ದ ಮನೆ ವಾಪಸ್ ಆಗಿದ್ದರು. ಈ ವೇಳೆ ಮನೆಯಲ್ಲಿ ಪ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

  • ಸತತ ಎರಡನೇ ಕೊಲೆಯಿಂದ ಬೆಚ್ಚಿಬಿದ್ದ ಹಬ್ಬದ ಖುಷಿಯಲ್ಲಿದ್ದ ಜನ

    ಸತತ ಎರಡನೇ ಕೊಲೆಯಿಂದ ಬೆಚ್ಚಿಬಿದ್ದ ಹಬ್ಬದ ಖುಷಿಯಲ್ಲಿದ್ದ ಜನ

    -ಯುವಕನ ಎದೆಗೆ ಇರಿದು ಬರ್ಬರ ಕೊಲೆ

    ಹಾಸನ: ಯುವಕನ ಎದೆಗೆ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಘಟನೆ ಹಾಸನದ ಚನ್ನರಾಯಪಟ್ಟಣದ ಗದ್ದೆಹಳ್ಳದ ಬಳಿ ನಡೆದಿದೆ.

    30 ವರ್ಷದ ಸಂಪತ್ ಕೊಲೆಯಾದ ದುರ್ದೈವಿ. ಬೆಂಗಳೂರು ಹಾಸನ ಹೆದ್ದಾರಿ ಪಕ್ಕದಲ್ಲೇ ಕೊಲೆ ನಡೆದಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಹರೀಶ್ ಮತ್ತು ಸಂಪತ್ ನಡುವೆ ಕ್ಷುಲ್ಲಕ ಕಾರಣಕ್ಕ ಜಗಳ ನಡೆದಿದೆ. ಸಂಪತ್‍ನ ಎದೆಗೆ ಹರಿತವಾದ ವಸ್ತುವಿನಿಂದ ಚುಚ್ಚಿ ಕೊಲೆ ಮಾಡಿ ಹರೀಶ್ ಪರಾರಿಯಾಗಿದ್ದಾನೆ. ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ನಿನ್ನೆಯಷ್ಟೆ ಹಣದ ವಿಷಯವಾಗಿ ಗಲಾಟೆಯಾಗಿ 25 ವರ್ಷದ ಯುವಕನ ಕೊಲೆ ನಡೆದಿತ್ತು.

    ಇಂದು ಮತ್ತೊಂದು ಕೊಲೆ ನಡೆದಿದ್ದು ವರಮಹಾಲಕ್ಷ್ಮಿ ಹಬ್ಬದ ಖುಷಿಯಲ್ಲಿದ್ದ ಚನ್ನರಾಯಪಟ್ಟಣ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕೊಲೆ ಮಾಡುತ್ತಿರುವವರು, ಕೊಲೆಯಾಗುತ್ತಿರುವವರು 30 ವರ್ಷದ ಒಳಗಿನ ಯುವಕರಾಗಿರುವುದು ಕೂಡ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಕೊಲೆಯ ಪ್ರಕರಣಗಳು ಮುಂದೆ ಮತ್ತಷ್ಟು ಅವಾಂತರಕ್ಕೆ ಕಾರಣವಾಗುವ ಸಂಶಯ ಮೂಡುತ್ತಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಿ ಮುಂದೆ ಇಂತಹ ಪ್ರಕರಣ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಜಗಳ ಬಿಡಿಸಲು ಬಂದ ಸ್ನೇಹಿತನೇ ಕೊಲೆಯಾದ

     

  • ಜಗಳ ಬಿಡಿಸಲು ಬಂದ ಸ್ನೇಹಿತನೇ ಕೊಲೆಯಾದ

    ಜಗಳ ಬಿಡಿಸಲು ಬಂದ ಸ್ನೇಹಿತನೇ ಕೊಲೆಯಾದ

    ಹಾಸನ: ಹಣದ ವಿಷ್ಯವಾಗಿ ಇಬ್ಬರು ಸ್ನೇಹಿತರು ಜಗಳವಾಡುತ್ತಿದ್ದಾಗ ಅದನ್ನು ತಡೆಯಲು ಹೋದ ಯುವಕನೇ ಕೊಲೆಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

    25 ವರ್ಷದ ಸಮೀವುಲ್ಲಾ ಸ್ನೇಹಿತರಿಂದಲೇ ಕೊಲೆಯಾದ ಯುವಕ. ಬುಧವಾರ ರಾತ್ರಿ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಯುವಕರ ನಡುವೆ ಗಲಾಟೆಯಾಗಿದೆ. ಈ ವೇಳೆ ಸಮೀವುಲ್ಲಾ ಇಬ್ಬರ ಜಗಳ ಬಿಡಿಸಲು ಮಧ್ಯೆ ಪ್ರವೇಶಿಸಿದ್ದಾನೆ. ಗಲಾಟೆಯಲ್ಲಿ ಸಮೀವುಲ್ಲಾನಿಗೆ ಚಾಕುವಿನಿಂದ ಇರಿದಿದ್ದು ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾನೆ.

    ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಎಣ್ಣೆ ಏಟಲ್ಲಿ ಸ್ನೇಹಿತನನ್ನೇ ಕೊಂದ

    ಎಣ್ಣೆ ಏಟಲ್ಲಿ ಸ್ನೇಹಿತನನ್ನೇ ಕೊಂದ

    ಹಾಸನ: ಮದ್ಯದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಕೊಲೆಗೈದ ಘಟನೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.

    ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಗ್ರಾಮದ ಪ್ರವೀಣ್ ಕೊಲೆಯಾದ ಯುವಕ. ಅದೇ ಗ್ರಾಮದ ಸಂತೋಷ್ ಹತ್ಯೆಗೈದ ಆರೋಪಿ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

    ಸಂತೋಷ್ ಹಾಗೂ ಪ್ರವೀಣ್ ಗ್ರಾಮದ ಬಾರ್‍ಗೆ ಕುಡಿಯಲು ಹೋಗಿದ್ದರು. ಮದ್ಯ ಸೇವಿಸಿದ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಜಗಳವಾಗಿದೆ. ಈ ವೇಳೆ ಕೋಪಗೊಂಡ ಸಂತೋಷ್ ಮದ್ಯದ ಬಾಟ್ ಎತ್ತಿಕೊಂಡು ಪ್ರವೀಣ್ ತಲೆಗೆ ಹೊಡೆದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಈ ಸಂಬಂಧ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಹಿರಿಸಾವೇ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗೆ ಬಲೆ ಬೀಸಿದ್ದು, ತನಿಖೆ ಮುಂದುವರಿಸಿದ್ದಾರೆ.

  • ಸಂಕಷ್ಟದಲ್ಲಿದ್ದ ರೈತನ ಮನೆಗೆ ತೆರಳಿ, ಹೊಲ ಉತ್ತು ನೆರವು ನೀಡಿದ ಎಂಎಲ್‍ಸಿ ಗೋಪಾಲಸ್ವಾಮಿ

    ಸಂಕಷ್ಟದಲ್ಲಿದ್ದ ರೈತನ ಮನೆಗೆ ತೆರಳಿ, ಹೊಲ ಉತ್ತು ನೆರವು ನೀಡಿದ ಎಂಎಲ್‍ಸಿ ಗೋಪಾಲಸ್ವಾಮಿ

    ಹಾಸನ: ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಅವರು ಸಂಕಷ್ಟದಲ್ಲಿದ್ದ ರೈತನ ಮನೆಗೆ ತೆರಳಿ ಹೊಲ ಉತ್ತು ನೆರವು ನೀಡಿ, ಮಾನವೀಯತೆ ಮೆರೆದಿದ್ದಾರೆ.

    ಚನ್ನರಾಯಪಟ್ಟಣ ತಾಲೂಕಿನ ದಡದಳ್ಳಿ ಗ್ರಾಮದಲ್ಲಿ ಈ ಪ್ರಸಂಗ ನಡೆದಿದೆ. ಮೇವಿಲ್ಲದೆ ಸಾಯುತ್ತಿದ್ದ ಮೇಕೆಗಳನ್ನು ನೋಡಿ ಕಂಗೆಟ್ಟಿದ್ದ ರೈತ ಕುಟುಂಬದ ಬಳಿ ತೆರಳಿದ ಎಂಎಲ್‍ಸಿ ಗೋಪಾಲಸ್ವಾಮಿ ಮೇವಿನ ವ್ಯವಸ್ಥೆ ಮಾಡುವುದರ ಜೊತೆಗೆ ರೈತನ ಹೊಲ ಉಳುವ ಮೂಲಕ ಸಾಂಕೇತಿಕವಾಗಿ ಧೈರ್ಯ ತುಂಬಿದ್ದಾರೆ.

    ದಡದಳ್ಳಿ ಗ್ರಾಮದ ಯುವ ರೈತ ಸಂತೋಷ್ ಮೇಕೆ ಸಾಕಾಣಿಕೆ ಮೂಲಕ ಬದುಕುಕಟ್ಟಿಕೊಂಡಿದ್ದರು. ಹೆಚ್ಚುವರಿ ಮೇಕೆ ಸಾಕಾಣಿಕೆ ಮಾಡುವ ಉದ್ದೇಶದಿಂದ 100 ಮೇಕೆಗಳನ್ನು ತರಲು ರೈತ ಸಂತೋಷ್ ರಾಜಸ್ಥಾನಕ್ಕೆ ತೆರಳಿದ್ದರು. ಮೇಕೆ ಕೊಂಡುಕೊಂಡು ವಾಪಸ್ ಬರಲು ಸಿದ್ಧತೆ ನಡೆಸಿದ್ದಾಗ ದೇಶಾದ್ಯಂತ ಲಾಕ್‍ಡೌನ್‍ನಿಂದ ಸಂತೋಷ್ ಮೇಕೆಗಳ ಜೊತೆ ರಾಜಸ್ಥಾನದಲ್ಲೇ ಲಾಕ್ ಆಗಿದ್ದಾರೆ. ಇದೀಗ ಪ್ರತಿದಿನ ರಾಜಸ್ಥಾನದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡುತ್ತ ಮೇಕೆ ಸಾಕಲಾಗದೆ ರೈತ ಸಂತೋಷ್ ಪರಿತಪಿಸುತ್ತಿದ್ದಾರೆ.

    ಇತ್ತ ಸಂತೋಷ್ ಸ್ವಗ್ರಾಮ ದಡದಳ್ಳಿಯಲ್ಲಿ ಸಾಕಿದ್ದ ಮೇಕೆಗಳೂ ಮೇವಿಲ್ಲದೆ ಸಾವನ್ನಪ್ಪುತ್ತಿದ್ದು, ಮಗನಿಲ್ಲದ ವೇಳೆ ಮೇಕೆ ಸಾವಿನಿಂದ ಪೋಷಕರು ಕಂಗಾಲಾಗಿದ್ದರು. ವಿಷ್ಯ ತಿಳಿದ ಎಂಎಲ್‍ಸಿ ಗೋಪಾಲಸ್ವಾಮಿ ದಡದಳ್ಳಿ ಗ್ರಾಮಕ್ಕೆ ತೆರಳಿ ಮೇಕೆಗಳಿಗೆ ಮೇವಿನ ವ್ಯವಸ್ಥೆ ಮಾಡಿದ್ದಾರೆ. ಜೊತೆಗೆ ಸಾಂಕೇತಿಕವಾಗಿ ರೈತರ ಹೊಲ ಉತ್ತು, ಜೋಳದ ಬೀಜ ಬಿತ್ತಿ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.