Tag: Charanjit Singh Channi

  • ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್‌ ಸಿಎಂ ಮನವಿ ಪತ್ರ

    ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್‌ ಸಿಎಂ ಮನವಿ ಪತ್ರ

    ಚಂಡೀಗಢ: ಗುರು ರವಿದಾಸ್‌ ಜಯಂತಿ ಇರುವುದರಿಂದ ಫೆಬ್ರವರಿ 14ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಆರು ದಿನಗಳ ಕಾಲ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಮನವಿ ಮಾಡಿದ್ದಾರೆ.

    ಮುಖ್ಯ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ ಅವರಿಗೆ ಪತ್ರ ಬರೆದಿರುವ ಪಂಜಾಬ್‌ ಸಿಎಂ, ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.32 ರಷ್ಟು ಇರುವ ಪರಿಶಿಷ್ಟ ಜಾತಿ ಸಮುದಾಯದ ಕೆಲವು ಪ್ರತಿನಿಧಿಗಳು, ಗುರು ರವಿದಾಸ್‌ ಅವರ ಜನ್ಮದಿನ ಫೆಬ್ರವರಿಯಲ್ಲೇ ನಡೆಯಲಿದೆ ಎಂದು ನನ್ನ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಚುನಾವಣೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಿಸ್ ಬಿಕಿನಿ ಇಂಡಿಯಾ ಅರ್ಚನಾ ಕಾಂಗ್ರೆಸ್‍ನಿಂದ ಚುನಾವಣಾ ಅಭ್ಯರ್ಥಿ- ರಾಜಕೀಯಕ್ಕೆ ನನ್ನ ವೃತ್ತಿ ಬೆಸೆಯಬೇಡಿ

    ಗುರು ರವಿದಾಸ್‌ ಅವರ ಜಯಂತಿ ಹಿನ್ನೆಲೆಯಲ್ಲಿ ಪರಿಶಿಷ್ಟ ಸಮುದಾಯದ ಲಕ್ಷಾಂತರ ಜನರು ಉತ್ತರ ಪ್ರದೇಶದ ಬನಾರಸ್‌ಗೆ ಫೆಬ್ರವರಿ 10ರಿಂದ 16ರವರೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಈ ಸಮುದಾಯದ ಅನೇಕ ಜನರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ. ಮತದಾನ ಅವರ ಸಂವಿಧಾನಬದ್ಧ ಹಕ್ಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಫೆಬ್ರವರಿ 10ರಿಂದ 16ರವರೆಗೆ ಬನಾರಸ್‌ಗೆ ಭೇಟಿ ನೀಡಲು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುವ ರೀತಿಯಲ್ಲಿ ಮತದಾನದ ದಿನಾಂಕವನ್ನು ವಿಸ್ತರಿಸಬಹುದು ಎಂದು ಸಮುದಾಯದ ಪ್ರತಿನಿಧಿಗಳು ಮನವಿ ಮಾಡಿದ್ದಾರೆಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಅಲ್ಲ, ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

    2022ರ ಪಂಜಾಬ್‌ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕವನ್ನು ಕನಿಷ್ಠ 6 ದಿನಗಳವರೆಗೆ ಮುಂದೂಡಿ ಫೆ.20ಕ್ಕೆ ನಿಗದಿಪಡಿಸಬಹುದು. ಆ ಮೂಲಕ ಸುಮಾರು 20 ಲಕ್ಷ ಜನತೆ ಮತದಾನ ಮಾಡಲು ಅನುವು ಮಾಡಿಕೊಡುವುದು ನ್ಯಾಯಯುತ ಮತ್ತು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾ.10 ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ಘೋಷಿಸಿತ್ತು.

  • ದಲಿತ ಮತಗಳ ಮೇಲೆ ಕಣ್ಣು-  ಎರಡು ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಸ್ಪರ್ಧೆ?

    ದಲಿತ ಮತಗಳ ಮೇಲೆ ಕಣ್ಣು- ಎರಡು ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಸ್ಪರ್ಧೆ?

    ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎರಡು ಸ್ಥಾನಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ದಲಿತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಮತಗಳ ಕ್ರೋಢೀಕರಣಕ್ಕೆ ಈ ತಂತ್ರ ರೂಪಿಸಿದೆ ಎನ್ನಲಾಗಿದೆ.

    ವಿಧಾನಸಭೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿನ್ನೆ ಮಹತ್ವದ ಸಭೆ ನಡೆಸಲಾಯಿತು. ತಡರಾತ್ರಿವರೆಗೂ ನಡೆದ ಸಭೆಯಲ್ಲಿ 70 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಸುಮಾರು 5 ಸ್ಥಾನಗಳ ಬಗ್ಗೆ ಒಮ್ಮತ ಮೂಡದ ಕಾರಣ ಮತ್ತೊಮ್ಮೆ ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆ ಸೇರಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದು ಇಂದು ಅಥವಾ ನಾಳೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಇದನ್ನೂ ಓದಿ: ರೇಷನ್‌ ಕಾರ್ಡ್‌ ಇದೆಯಾ: ಸ್ನಾನ ಮಾಡ್ತಿದ್ದ ವ್ಯಕ್ತಿ ಬಳಿ ಹೋಗಿ ಬಿಜೆಪಿ ಶಾಸಕನ ಪ್ರಶ್ನೆ

    ಸಭೆಯಲ್ಲಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿ ಸ್ಪರ್ಧೆ ಬಗ್ಗೆಯೂ ಗಂಭೀರ ಚರ್ಚೆ ನಡೆದಿದೆ. ಪ್ರಸ್ತುತ ಚಮ್ಕೌರ್ ಸಾಹಿಬ್ ಕ್ಷೇತ್ರದ ಶಾಸಕರಾಗಿರುವ ಚನ್ನಿ, ಅವರನ್ನು ದಲಿತರು ಅತಿ ಹೆಚ್ಚು ಸಂಖ್ಯೆಯಲ್ಲಿರುವ ದೋಬಾ ಪ್ರದೇಶದಲ್ಲಿ ಬರುವ ಆದಂಪುರ ಕ್ಷೇತ್ರದಿಂದಲೂ ಕಣಕ್ಕಿಳಿಸಲು ಚಿಂತಿಸಲಾಗಿದೆ. ಇದನ್ನೂ ಓದಿ: ವಿಶೇಷ ವಿಕಲಚೇತನ ಅಪ್ಪು ಅಭಿಮಾನಿಯಿಂದ ಬೆಂಗಳೂರಿಗೆ ಪಾದಯಾತ್ರೆ

    ಸಮೀಕ್ಷೆಗಳ ಪ್ರಕಾರ ಗೆಲುವಿನ ಸನಿಹದಲ್ಲಿರುವ ಕಾಂಗ್ರೆಸ್, ದಲಿತರ ಮತಗಳನ್ನು ಸೆಳೆಯಲು ಈ ತಂತ್ರ ರೂಪಿಸುತ್ತಿದೆ ಎನ್ನಲಾಗಿದ್ದು, 1 ಅಥವಾ 2 ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ. ಫೆಬ್ರವರಿ 10 ರಿಂದ ಪಂಚ ರಾಜ್ಯಗಳ ಚುನಾವಣೆ ಆರಂಭವಾಗಲಿದ್ದು, 2ನೇ ಹಂತದಲ್ಲಿ ಪಂಜಾಬ್‍ನಲ್ಲಿ ಚುನಾವಣೆ ನಡೆಯಲಿದೆ.

  • ಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಣೆಗೆ ಚರಣ್‌ಜಿತ್‌ ಸಿಂಗ್‌ ಚನ್ನಿ ಒತ್ತಡ

    ಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಣೆಗೆ ಚರಣ್‌ಜಿತ್‌ ಸಿಂಗ್‌ ಚನ್ನಿ ಒತ್ತಡ

    ಚಂಡೀಗಢ: ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಮುಂದಿನ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಪಂಜಾಬ್‍ನ ಹಾಲಿ ಸಿಎಂ ಚರಣ್‌ಜಿತ್‌ ಸಿಂಗ್ ಚನ್ನಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿರುವ ಅವರು, ಚುನಾವಣಾ ದೃಷ್ಟಿಯಿಂದ ಸಿಎಂ ಅಭ್ಯರ್ಥಿ ಘೋಷಣೆ ಸೂಕ್ತ ಎಂದು ಮನವಿ ಮಾಡಿದ್ದಾರೆ.

    ಪ್ರತಿಸ್ಪರ್ಧಿಯಾಗಿರುವ ಆಮ್ ಆದ್ಮಿಯಲ್ಲಿ ಸಿಎಂ ಅಭ್ಯರ್ಥಿಯನ್ನು ಮುಂದಿನ ವಾರ ಘೋಷಣೆ ಮಾಡಲಾಗುವುದು ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕೇಜ್ರಿವಾಲ್ ಅವರೇ ಪಂಜಾಬ್‍ನಲ್ಲಿ ಸಿಎಂ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಈ ಗೊಂದಲಗಳಿಗೆ ತೆರೆ ಎಳೆಯುವ ದೃಷ್ಟಿಯಿಂದ ಅರವಿಂದ್ ಕೇಜ್ರಿವಾಲ್ ಸಿಎಂ ಅಭ್ಯರ್ಥಿಯನ್ನು ಘೋಷಿಸಲು ಮುಂದಾಗಿದ್ದಾರೆ.

    ಮೂಲಗಳ ಪ್ರಕಾರ ಸಂಸದ ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬಹುದು ಎಂದು ಹೇಳಲಾಗುತ್ತಿದೆ. ಹಿರಿಯ ನಾಯಕರು ಮತ್ತು ವರ್ಚಸ್ಸು ಹೊಂದಿರುವ ನಾಯಕರಾಗಿರುವ ಹಿನ್ನೆಲೆ ಅವರ ಆಯ್ಕೆ ಬಹುತೇಕ ಖಚಿತ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ:  ಯುಪಿಯಲ್ಲಿ 50-100 ಕ್ಷೇತ್ರಗಳಲ್ಲಿ ಶಿವಸೇನೆ ಸ್ಪರ್ಧೆ- ಮೈತ್ರಿ ಮಾಡಲ್ಲ ಎಂದ ರಾವತ್

    ಆಮ್ ಆದ್ಮಿಯಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಸುದ್ದಿ ಖಚಿತವಾಗುತ್ತಿದ್ದಂತೆ ಇತ್ತ ಚನ್ನಿ ಕೂಡಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಲು ಒತ್ತಡ ಹಾಕುತ್ತಿದ್ದಾರೆ. ಇದರಿಂದ ಆಮ್ ಆದ್ಮಿಗೆ ತಿರುಗೇಟು ನೀಡಬಹುದು. ಕಾಂಗ್ರೆಸ್‍ನಲ್ಲಿ ಭಿನ್ನಾಭಿಪ್ರಾಯಗಳಿದೆ. ಕಾಂಗ್ರೆಸ್ ಅಧ್ಯಕ್ಷ ನವಜೋತು ಸಿಂಗ್ ಸಿಧು ಕೂಡಾ ಸಿಎಂ ರೇಸ್‍ನಲ್ಲಿದ್ದು ಹಲವು ನಾಯಕರು ಆಕಾಂಕ್ಷಿಗಳಾಗಿದ್ದಾರೆ ಎಂದು ಆಮ್ ಆದ್ಮಿ ಪ್ರಚಾರ ಮಾಡುತ್ತಿದೆ. ಇವುಗಳಿಗೆ ತೆರೆ ಎಳೆಯಲು ಸಿಎಂ ಅಭ್ಯರ್ಥಿ ಘೋಷಣೆಯಾಗಬೇಕು ಎಂದು ಚನ್ನಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ಕೈ ಬಿಡುವಂತೆ ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಬೊಮ್ಮಾಯಿ ಪತ್ರ

  • ಪ್ರಧಾನಿ ಭದ್ರತೆ ವಿಚಾರದಲ್ಲಿ ಅವರಿಗೇಕೆ ಮಾಹಿತಿ ನೀಡಬೇಕು? – ಚರಣ್‍ಜಿತ್ ಸಿಂಗ್ ಚನ್ನಿ ವಿರುದ್ಧ ಬಿಜೆಪಿ ಕಿಡಿ

    ಪ್ರಧಾನಿ ಭದ್ರತೆ ವಿಚಾರದಲ್ಲಿ ಅವರಿಗೇಕೆ ಮಾಹಿತಿ ನೀಡಬೇಕು? – ಚರಣ್‍ಜಿತ್ ಸಿಂಗ್ ಚನ್ನಿ ವಿರುದ್ಧ ಬಿಜೆಪಿ ಕಿಡಿ

    ನವದೆಹಲಿ: ಫಿರೋಜ್‍ಪುರ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆ ವಿಚಾರದ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಮಾಹಿತಿ ನೀಡಿದ್ದ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಪ್ರಿಯಾಂಕಾ ಗಾಂಧಿ ಅವರಿಗೆ ಪ್ರಧಾನಿ ಅವರ ಭದ್ರತೆಯ ಬಗ್ಗೆ ಏಕೆ ತಿಳಿಸಲಾಗಿತ್ತು ಎಂದು ಪ್ರಶ್ನಿಸಿದ್ದಾರೆ. ಒಬ್ಬ ಹಾಲಿ ಮುಖ್ಯಮಂತ್ರಿ ಪ್ರಧಾನಿ ಭದ್ರತೆಯ ಬಗ್ಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ವಿವರಿಸುತ್ತಾರೆ. ಏಕೆ? ಪ್ರಿಯಾಂಕಾ ಅವರು ಯಾವ ಸಾಂವಿಧಾನಿಕ ಹುದ್ದೆ ಹೊಂದಿದ್ದಾರೆ? ಪ್ರಧಾನಿ ಭದ್ರತೆ ವಿಚಾರದಲ್ಲಿ ಪರಿಗಣಿಸಲು ಅವರು ಯಾರು? ಈ ಸಂಬಂಧ ಗಾಂಧಿ ಕುಟುಂಬ ಸ್ಪಷ್ಟನೆ ನೀಡಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

    ಮತ್ತೊಂದೆಡೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಸೋನಿಯಾ ಗಾಂಧಿಯವರ ಮುಖ್ಯಮಂತ್ರಿಗಳಾದ ಚರಣ್‍ಜಿತ್ ಸಿಂಗ್ ಚನ್ನಿ ಅವರು ಪ್ರಧಾನಿ ಮೋದಿಯವರು ಬಂದಾಗ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆದರೆ ಪ್ರಿಯಾಂಕಾ ವಾದ್ರಾ ಅವರಿಗೆ ಏಕೆ ಘಟನೆ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ. ಅಷ್ಟಕ್ಕೂ ಪ್ರಿಯಾಂಕಾ ವಾದ್ರಾ ಯಾರೆಂದು ತಿಳಿಯಲು ಕುತೂಹಲವಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

    ಜನವರಿ 5ರಂದು ಬಟಿಂಡಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ತೆರಳಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿತ್ತು. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

    ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈ ಓವರ್‍ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಬಳಿಕ ಬಟಿಂಡಾಕ್ಕೆ ಮರಳಿದ್ದರು.

  • ಪಂಜಾಬ್ ಸಿಎಂ ಕುಟುಂಬದ ಮೂವರಿಗೆ ಕೊರೊನಾ

    ಪಂಜಾಬ್ ಸಿಎಂ ಕುಟುಂಬದ ಮೂವರಿಗೆ ಕೊರೊನಾ

    ಚಂಡೀಗಢ: ಮುಖ್ಯಮಂತ್ರಿ ಚನ್ನಿ ಅವರ ಕುಟುಂಬಸ್ಥರಲ್ಲಿ ಮೂರು ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

    ಚರಣ್‍ಜಿತ್ ಸಿಂಗ್ ಚನ್ನಿ ಅವರ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್ ದೃಢಪಟ್ಟಿದೆ.  ಆದರೆ ಚರಣ್‍ಜಿತ್ ಅವರಿಗೆ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್

    ಚನ್ನಿ ಅವರ ಪತ್ನಿ ಕಮಲಜಿತ್ ಕೌರ್, ಪುತ್ರ ನವಜಿತ್ ಸಿಂಗ್ ಮತ್ತು ಸಿಮ್ರಾನ್‍ಧೀರ್ ಕೌರ್ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಮೊಹಲಿ ಸಿವಿಲ್ ಸರ್ಜನ್ ಡಾ. ಆದರ್ಶಪಾಲ್ ಕೌರ್ ಮಾಹಿತಿ ನೀಡಿದ್ದಾರೆ. ಅವರಿಗೆಲ್ಲರಿಗೂ ಸೌಮ್ಯ ರೋಗಲಕ್ಷಣಗಳು ಕಂಡುಬಂದಿದ್ದು, ಮನೆಯಲ್ಲೇ ಪ್ರತ್ಯೇಕವಾಗಿ ವಾಸವಾಗಿದ್ದಾರೆ ಇದನ್ನೂ ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ – ಇಂದು ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ

    ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿಗಳ ವಿರುದ್ಧ ಸಾಕಷ್ಟು ಟೀಕೆಗಳು ಎದುರಾಗಿದ್ದವು.

  • ಚರಣ್‍ಜಿತ್ ಸಿಂಗ್ ಚನ್ನಿ ದಲಿತ ಎಂಬ ಕಾರಣಕ್ಕೆ ಬಿಜೆಪಿ ಟಾರ್ಗೆಟ್ ಮಾಡ್ತಿದೆ: ಅಶೋಕ್ ಗೆಹ್ಲೋಟ್

    ಚರಣ್‍ಜಿತ್ ಸಿಂಗ್ ಚನ್ನಿ ದಲಿತ ಎಂಬ ಕಾರಣಕ್ಕೆ ಬಿಜೆಪಿ ಟಾರ್ಗೆಟ್ ಮಾಡ್ತಿದೆ: ಅಶೋಕ್ ಗೆಹ್ಲೋಟ್

    ಜೈಪುರ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ದಲಿತ ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ಭದ್ರತಾ ಲೋಪವಾಗಿರುವುದಾಗಿ ಆರೋಪಿಸಿದ್ದಾರೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಪಂಜಾಬ್ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತ ಅಭ್ಯರ್ಥಿಯನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ ಮತ್ತು ಅವರನ್ನು ಇಡೀ ರಾಷ್ಟ್ರವು ಸ್ವಾಗತಿಸಿದೆ. ಆದರೆ ಪಂಜಾಬ್‍ನಿಂದ ನಾನು ಜೀವಂತವಾಗಿ ಬಂದಿದ್ದೇನೆ ಎಂಬ ಹೇಳಿಕೆಯನ್ನು ಮೋದಿ ಅವರು ನೀಡಬಾರದಿತ್ತು. ಕೆಲವರು ರಾಜಕೀಯ ಲಾಭ ಪಡೆಯಲು ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಭದ್ರತಾ ಲೋಪವಾಗಿದೆ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್‍ನೆ ಮಾನಹಾನಿ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

    ಕಾಂಗ್ರೆಸ್ ನಾಯಕರು ಮತ್ತು ಪ್ರಧಾನಿಗಳು ಈ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಹಿಂಸೆಯನ್ನು ತನ್ನ ಸಿದ್ಧಾಂತವಾಗಿ ಅನುಸರಿಸುತ್ತದೆ. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅವರ ಮನಸ್ಸಿನಲ್ಲಿ ಹಿಂಸಾಚಾರವಿದೆ. ಅವರು ಹೇಗೆ ನಮಗೆ ಅಹಿಂಸೆಯನ್ನು ಕಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

    ಬುಧವಾರ ಬಟಿಂಡಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

    ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ  ಫ್ಲೈ ಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈ ಓವರ್‍ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಬಳಿಕ ಬಟಿಂಡಾಕ್ಕೆ ಮರಳಿದ್ದಾರೆ.

  • ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ, ನಾಳೆ ಮಹತ್ವದ ವಿಚಾರಣೆ

    ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ, ನಾಳೆ ಮಹತ್ವದ ವಿಚಾರಣೆ

    ನವದೆಹಲಿ: ನಿನ್ನೆ ಪಂಜಾಬ್‍ನ ಹುಸೇನ್‍ವಾಲಾದಲ್ಲಾದ ಪ್ರಧಾನಿ ನರೇಂದ್ರ ಮೋದಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ.

    ಲಾಯರ್ಸ್ ವಾಯ್ಸ್ ಅಸೋಸಿಯೇಷನ್ ಸಲ್ಲಿಸಿದ ಅರ್ಜಿಯನ್ನು ಹಿರಿಯ ವಕೀಲ ಮಣಿಂದರ್ ಸಿಂಗ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್.ವಿ ರಮಣ ನೇತೃತ್ವದ ಪೀಠದ ಮುಂದೆ ಪ್ರಸ್ತಾಪಿಸಿದರು, ಪೀಠ ಈ ಬಗ್ಗೆ ನಾಳೆ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: ಮೋದಿ ಭದ್ರತಾ ಲೋಪಕ್ಕೆ ಪಂಜಾಬ್ ಪೊಲೀಸ್ ಇಲಾಖೆ ಕಾರಣ – ಕೇಂದ್ರ ಗೃಹ ಸಚಿವಾಲಯ

    ವಿಷಯ ಪ್ರಸ್ತಾಪದ ವೇಳೆ ಇಂತಹ ದುರ್ಘಟನೆಗಳು ಪುನಾರವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಣಿಂದರ್ ಸಿಂಗ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನಾವು ಅದಕ್ಕೆ ಏನು ಮಾಡಬಹುದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

    ಇದಕ್ಕೆ ಉತ್ತರಿಸಿದ ವಕೀಲ ಮಣಿಂದರ್ ಸಿಂಗ್, ಈ ರೀತಿಯ ಘಟನೆಗಳನ್ನು ನಾವು ನಿರೀಕ್ಷಿಸುವುದಿಲ್ಲ, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು, ಈ ಹಿನ್ನಲೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದು ಮನವಿ ಮಾಡಿದರು. ಅಲ್ಲದೇ ಪಂಜಾಬ್‍ನ ಮುಖ್ಯ ಕಾರ್ಯದರ್ಶಿ ಅನಿರುದ್ಧ್ ತಿವಾರಿ ಮತ್ತು ಪೊಲೀಸ್ ಮಹಾನಿರ್ದೇಶಕ ಸಿದ್ಧಾರ್ಥ್ ಚಟ್ಟೋಪಾಧ್ಯಾಯ ಅವರನ್ನು ಅಮಾನತುಗೊಳಿಸುವಂತೆಯೂ ಮನವಿಯಲ್ಲಿ ಕೋರಲಾಯಿತು.

    ಮನವಿ ಆಲಿಸಿದ ಪೀಠ ನಾಳೆ ಈ ಬಗ್ಗೆ ವಿಸ್ತೃತವಾಗಿ ವಿಚಾರಣೆ ನಡೆಸುತ್ತೇವೆ, ನೀವೂ ಕೇಂದ್ರ ಮತ್ತು ಪಂಜಾಬ್ ಸರ್ಕಾರಕ್ಕೆ ಅರ್ಜಿಯ ಪ್ರತಿಗಳನ್ನು ರವಾನಿಸಿ ಎಂದು ಸೂಚಿಸಿತು. ಇದನ್ನೂ ಓದಿ: ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್‌ ಸಿಎಂ

  • ಮೋದಿ ಭದ್ರತಾ ಲೋಪಕ್ಕೆ ಪಂಜಾಬ್ ಪೊಲೀಸ್ ಇಲಾಖೆ ಕಾರಣ – ಕೇಂದ್ರ ಗೃಹ ಸಚಿವಾಲಯ

    ನವದೆಹಲಿ: ನಿನ್ನೆ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ ವೇಳೆ ಭದ್ರತಾ ಲೋಪದಿಂದ ಫೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಈ ಘಟನೆಗೆ ಪಂಜಾಬ್ ಪೊಲೀಸ್ ಇಲಾಖೆ ನೇರ ಕಾರಣ ಎಂದು ಕೇಂದ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಆರೋಪಿಸಿದ್ದಾರೆ.

    ಮೋದಿ ಬರುತ್ತಿದ್ದಂತೆ ಪ್ರತಿಭಟನೆ ನಡೆಸುವ ಬಗ್ಗೆ ಪ್ರತಿಭಟನಾಕಾರರ ಬಗ್ಗೆ ಪಂಜಾಬ್ ಪೊಲೀಸರಿಗೆ ಮೊದಲೇ ಗುಪ್ತಚರ ಇಲಾಖೆಯಿಂದ ಮಾಹಿತಿ ಇತ್ತು. ಆದರೆ ಪೊಲೀಸ್ ಇಲಾಖೆ ಎಸ್‍ಪಿಜಿಯ ಬ್ಲೂ ಬುಕ್ ಮಾರ್ಗದರ್ಶನಗಳನ್ನು ಸರಿಯಾಗಿ ಅನುಸರಿಸದೇ ಪ್ರಧಾನಿ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಹುಡುಕದೆ ನಿರ್ಲಕ್ಷ್ಯವಹಿಸಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

    ಗುಪ್ತಚರ ಇಲಾಖೆ ನಿರಂತರವಾಗಿ ಪಂಜಾಬ್ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಪೊಲೀಸರು ಪ್ರತಿಭಟನಕಾರರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ ಬಳಿಕ ಈ ರೀತಿ ಆಗಿದೆ. ಘಟನೆಯ ಬಳಿಕ ಪಂಜಾಬ್ ಪೊಲೀಸರ ಭದ್ರತಾ ವ್ಯವಸ್ಥೆಯ ಬಗ್ಗೆ ಸೂಕ್ತ ತನಿಖೆ ನಡೆಸಲು ಕೇಂದ್ರ ಮುಂದಾಗಿದೆ. ಇದನ್ನೂ ಓದಿ: ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್‌ ಸಿಎಂ

    ಈ ಬಗ್ಗೆ ಪ್ರತಿಕ್ರಿಯಿಸಿದ್ದ ಪಂಜಾಬ್ ಸಿಎಂ ಚರಣ್‍ಜಿತ್ ಸಿಂಗ್ ಛನ್ನಿ, ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣ ತೊಡಕಾಗಿದ್ದಕ್ಕೆ ವಿಷಾದಿಸುತ್ತೇನೆ.. ಆದರೆ ಇಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ. ಪ್ರಧಾನಿ ರ‍್ಯಾಲಿಗೆ ಭದ್ರತೆ ಕೇಳಿದ್ದರು ಅದಕ್ಕೆ ಪೂರಕವಾದ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನಿ ಭೇಟಿ ಕಾರ್ಯಕ್ರಮದಲ್ಲಿ ರಸ್ತೆ ಮಾರ್ಗವಾಗಿ ಹುಸೇನಿವಾಲಾ ಹೋಗುವ ಬಗ್ಗೆ ಮೂಲ ಪಟ್ಟಿಯಲ್ಲಿ ಮಾಹಿತಿ ಇರಲಿಲ್ಲ. ಕೊನೆ ಕ್ಷಣದಲ್ಲಿ ಪ್ರಧಾನಿ ಈ ರಸ್ತೆ ಮಾರ್ಗವಾಗಿ ಹೊರಟರು ಈ ವೇಳೆ ಫೈಓವರ್ ಮೇಲೆ ಪ್ರತಿಭಟನಾಕಾರರು ಇದ್ದರು. ಬಳಿಕ ಬದಲಿ ಮಾರ್ಗವನ್ನು ಸೂಚಿಸಿದ್ದೇವು ಆದರೆ ಮೋದಿ ಸುರಕ್ಷಿತವಾಗಿ ಹಿಂದಿರುಗಿ ವಾಪಸ್ಸು ಹೋಗಲು ನಿರ್ಧರಿಸಿದರು ಎಂದಿದ್ದಾರೆ.

    ಬಟಿಂಡಾದಲ್ಲಿ ನಿನ್ನೆ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಓವರ್‍ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಬಳಿಕ ಬಟಿಂಡಾಕ್ಕೆ ಮರಳಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿಗೆ ಭದ್ರತಾ ಲೋಪ – ನೀಚತನದ ಪರಮಾವಧಿ ಅಂದ್ರು ಅನಂತ್ ಕುಮಾರ್ ಹೆಗ್ಡೆ

  • ಪಂಜಾಬ್‌ನಲ್ಲಿ ನೈಟ್ ಕರ್ಫ್ಯೂ ಜೊತೆಗೆ ಶಾಲಾ-ಕಾಲೇಜು ಬಂದ್

    ಪಂಜಾಬ್‌ನಲ್ಲಿ ನೈಟ್ ಕರ್ಫ್ಯೂ ಜೊತೆಗೆ ಶಾಲಾ-ಕಾಲೇಜು ಬಂದ್

    ಚಂಡೀಗಢ: ಪಂಜಾಬ್‌ನಲ್ಲಿ ಕೊರೊನಾ ಹೆಚ್ಚುತ್ತಿದ್ದ ಹಿನ್ನೆಲೆ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಪರಿಶೀಲನಾ ಸಭೆಯಲ್ಲಿ ಹೊಸ ಆದೇಶಗಳನ್ನು ಘೋಷಿಸಿದ್ದಾರೆ.

    ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗುವುದು ಮತ್ತು ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲು ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆ.

    ಪಂಜಾಬ್‌ನಲ್ಲಿ ದಿನೇ ದಿನೇ ಕೊರೊನಾ ಸೋಂಕು ಹರಡುವಿಕೆ ವೇಗವಾಗಿ ಹೆಚ್ಚುತ್ತಿದೆ. ರಾಜ್ಯದಲ್ಲಿ ಡಿಸೆಂಬರ್ 28 ರಂದು 51 ಕೇಸ್‌ಗಳು ದಾಖಲಾಗಿದ್ದು, ನಿನ್ನೆ ಒಮ್ಮಿಂದೊಮ್ಮೆಲೆ 419 ಪ್ರಕರಣಗಳು ವರದಿಯಾಗಿದೆ. ಹರಡುವಿಕೆಯ ದರವು ಡಿಸೆಂಬರ್ 29ರಂದು ಶೇ.0.46ರಷ್ಟಿತ್ತು. ಆದರೆ ನಿನ್ನೆ ಶೇ.4.47ಕ್ಕೆ ಏರಿದ ಹಿನ್ನೆಲೆಯಿಂದಾಗಿ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಇದನ್ನೂ ಓದಿ: ಒಂದೇ ದಿನದಲ್ಲಿ 100 ವೈದ್ಯರಿಗೆ ಕೋವಿಡ್ ಪಾಸಿಟಿವ್!

    ಹೊಸ ಆದೇಶದಲ್ಲಿ ಏನಿದೆ?
    ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ನಡೆಸುತ್ತಿದ್ದ ಆಫ್‌ಲೈನ್ ತರಗತಿಗಳನ್ನು ನಿಲ್ಲಿಸಲಾಗುತ್ತದೆ ಮತ್ತು ಆನ್‌ಲೈನ್ ತರಗತಿಗಳು ಮುಂದುವರಿಸಲಾಗುತ್ತದೆ. ಆದರೆ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳಿಗೆ ಎಂದಿನಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

    ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬಾರ್‌ಗಳು, ಸಿನಿಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್, ಮಾಲ್, ರೆಸ್ಟೋರೆಂಟ್, ಮ್ಯೂಸಿಯಂ, ಮತ್ತು ಮೃಗಾಲಯಗಳು ಶೇ.5ಂ ರಷ್ಟು ಕಾರ್ಯನಿರ್ವಹಿಸಬಹುದು. ಎಲ್ಲಾ ಸಿಬ್ಬಂದಿ ಸದಸ್ಯರು ಸಂಪೂರ್ಣವಾಗಿ ಲಸಿಕೆ ಹಾಕಿದ್ದರೆ ಮಾತ್ರ ಅವರನ್ನು ಒಳಗೆ ಬಿಡಬೇಕು. ಈ ಹೊಸ ಆದೇಶಗಳು ಜನವರಿ 15 ರವರೆಗೆ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ತಿಳಿಸಿದ್ದಾರೆ.

    ಕ್ರೀಡಾ ಸ್ಟೇಡಿಯಂಗಳು, ಈಜುಕೊಳಗಳು, ಮತ್ತು ಜಿಮ್‌ಗಳನ್ನು ಮುಚ್ಚಲಾಗುತ್ತದೆ. ಆದರೆ  ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ  ಕ್ರೀಡಾಪಟುಗಳಿಗೆ ತರಬೇತಿ ನೀಡಲು ಅವಕಾಶವಿದೆ. ಎರಡು ಲಸಿಕೆ ಪೂರ್ಣಗೊಂಡಿರುವ ಸಿಬ್ಬಂದಿಗೆ ಮಾತ್ರ ಸರ್ಕಾರಿ ಹಾಗೂ ಖಾಸಗಿ ಕಛೇರಿಗಳಿಗೆ ಭೇಟಿ ನೀಡಲು ಅವಕಾಶವಿದೆ. ರಾಜಕೀಯ ಸಭೆಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ಬಂಧನೆ ಇಲ್ಲ ಎಂದು ಹೇಳಲಾಗಿದೆ.
    ಇದನ್ನೂ ಓದಿ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್‌ ಬಂದ್

  • ಕೊರೊನಾ ತಡೆಗಟ್ಟುವಲ್ಲಿ ಕೇಜ್ರಿವಾಲ್ ಸರ್ಕಾರ ವಿಫಲ: ಚರಣ್‌ಜಿತ್ ಸಿಂಗ್

    ಕೊರೊನಾ ತಡೆಗಟ್ಟುವಲ್ಲಿ ಕೇಜ್ರಿವಾಲ್ ಸರ್ಕಾರ ವಿಫಲ: ಚರಣ್‌ಜಿತ್ ಸಿಂಗ್

    ಚಂಡೀಗಢ: ಕೊರೊನಾ ಮೊದಲ ಮತ್ತು ಎರಡನೇ ಅಲೆಯನ್ನು ತಡೆಯುವಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ರಾಷ್ಟ್ರ ರಾಜಧಾನಿಯಿಂದ ಹಲವಾರು ಸೋಂಕಿತರು ಚಿಕಿತ್ಸೆಗೆಂದು ಪಂಜಾಬ್‌ಗೆ ಬಂದಿದ್ದಾರೆ. ದೆಹಲಿಯಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂದು ದೂರಿದ ಅವರು, ನಗರದಂತಹ ರಾಜ್ಯವನ್ನು ನಡೆಸದ ವ್ಯಕ್ತಿ ಸಂಪೂರ್ಣ ರಾಜ್ಯವನ್ನು ಹೇಗೆ ನಡೆಸುತ್ತಾನೆ ಎಂದು ವ್ಯಂಗ್ಯವಾಡಿದರು.

    ಚುನಾವಣೆ ನಿಮಿತ್ತ ಕೇಜ್ರಿವಾಲ್ ಪಂಜಾಬ್‌ನಲ್ಲಿ ಪ್ರಚಾರ ಆರಂಭಿಸಿದ್ದು, ದೆಹಲಿ ಮಾದರಿಯಲ್ಲಿ ಪಂಜಾಬ್‌ನಲ್ಲೂ ಆರೋಗ್ಯ ಹಾಗೂ ಶಿಕ್ಷಣ ವ್ಯವಸ್ಥೆ ರೂಪಿಸುವುದಾಗಿ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ ಇಂತಹ ನಾಟಕಗಳನ್ನು ಪಂಜಾಬ್ ಜನ ನಂಬುವುದಿಲ್ಲ ಎಂದರು. ಇದನ್ನೂ ಓದಿ: ದೇವಾಲಯದ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

    ಇದೇ ವೇಳೆ ಕೊರೊನಾ ಮೂರನೇ ಅಲೆ ಬಗ್ಗೆ ಮಾತನಾಡಿದ ಅವರು, ಕೊರೊನಾ ಮತ್ತು ಓಮಿಕ್ರಾನ್ ಸಂಖ್ಯೆ ಇತ್ತೀಚೆಗೆ ಪುನಃ ಹೆಚ್ಚುತ್ತಿದೆ. ಕೊರೊನಾ 3ನೇ ಅಲೆಯನ್ನು ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: 12 ಸಾವಿರ NGOಗಳ ವಿದೇಶಿ ದೇಣಿಗೆ ಸ್ವೀಕಾರ ಪರವಾನಿಗೆ ರದ್ದು