Tag: charge sheet

  • Breaking | ರೇಣುಕಾಸ್ವಾಮಿ ಕೊಲೆ ಕೇಸ್‌ – ದರ್ಶನ್‌ & ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    Breaking | ರೇಣುಕಾಸ್ವಾಮಿ ಕೊಲೆ ಕೇಸ್‌ – ದರ್ಶನ್‌ & ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case)  ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್‌ & ಗ್ಯಾಂಗ್‌ ವಿರುದ್ಧ ಕೋರ್ಟ್‌ಗೆ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆ ಮಾಡಲಾಗಿದೆ.

    ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್‌, ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿ ಎಸಿಪಿ ಚಂದನ್‌ ಕುಮಾರ್‌ (Chandan Kumar)  ನೇತೃತ್ವದಲ್ಲಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಾಹನಗಳ ಮೇಲೆ ಬೇಕಾಬಿಟ್ಟಿ ಸ್ಟಿಕ್ಕರ್ ಅಂಟಿಸಿದ್ರೆ ಕಾನೂನು ಕ್ರಮ – ದರ್ಶನ್‌ ಫ್ಯಾನ್ಸ್‌ಗೆ ಆರ್‌ಟಿಒ ಎಚ್ಚರಿಕೆ!

    ಚಾರ್ಜ್‌ಶೀಟ್‌ನಲ್ಲಿ ಏನೇನು ಸಾಕ್ಷ್ಯಗಳಿವೆ?
    ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳ ಕುರಿತ ದೋಷಾರೋಪಣಾ ಪಟ್ಟಿಯನ್ನು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇದನ್ನೂ ಓದಿ: 1,788 ಕೊಠಡಿ, 257 ಸ್ನಾನಗೃಹ, ಅಮೃತಶಿಲೆಯಿಂದ ಮಾಡಿದ ಮೆಟ್ಟಿಲು – ವಿಶ್ವದ ಅತಿದೊಡ್ಡ ಐಷಾರಾಮಿ ಅರಮನೆಯಲ್ಲಿ ಮೋದಿಗೆ ಆತಿಥ್ಯ

    ಈ ದೋಷಾರೋಪಣಾ ಪಟ್ಟಿಯು ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸರಿಪುಟಗಳ 10 ಕಡತಗಳನ್ನು ಒಳಗೊಂಡಿರುತ್ತದೆ. ಈ ಪ್ರಕರಣದ ತನಿಖೆಯನ್ನು ಬೆಂಗಳೂರು ನಗರ ಪೊಲೀಸ್‌ ಆಯಿಕ್ತ ಬಿ.ದಯಾನಂದ, ಹೆಚ್ಚುವರಿ ಆಯುಕ್ತ ಸತೀಶ್‌ ಕುಮಾರ್‌ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಎಸ್‌. ಗಿರೀಶ್, ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎನ್‌. ಚಂದನ್‌ ಕುಮಾರ್ ಹಾಗೂ ಅಧಿಕಾರಿ, ಸಿಬ್ಬಂದಿಯನ್ನೊಳಗೊಂಡ ತಂಡ ಭೇದಿಸಿದೆ. ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ- 173(8) ಸಿಆರ್‌ಪಿಸಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಪೊಲೀಸರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    231 ಸಾಕ್ಷಿಗಳು:
    ದರ್ಶನ್‌ & ಗ್ಯಾಂಗ್‌ ವಿರುದ್ಧ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಈ ಪೈಕಿ ಪ್ರತ್ಯಕ್ಷ ಸಾಕ್ಷಿದಾರರು 3, FSL/ಸಿಎಫ್‌ಎಸ್‌ಎಲ್‌ ಸಾಕ್ಷಿಗಳು 8, ಸಿಆರ್‌ಪಿಸಿ ಸೆಕ್ಷನ್‌ 161 ಮತ್ತು 164 ಅಡಿಯಲ್ಲಿ 97 ಸಾಕ್ಷಿಗಳು (ಸಿಆರ್‌ಪಿಸಿ 164 ಅಡಿಯಲ್ಲಿ 27 ಜನ ಸಾಕ್ಷಿದಾರರು ಸೇರಿ), ಪಂಚರು 59, ಇತರೇ ಸರ್ಕಾರಿ ಅಧಿಕಾರಿಗಳು (ತಜಶೀಲ್ದಾರ್‌, ವೈದ್ಯರು, ಆರ್‌ಟಿಒ, ಅಭಿಯಂತರರು) 8 ಹಾಗೂ ಪೊಲೀಸರಿಂದ 56 ಸಾಕ್ಷುಗಳನ್ನು ಸಂಗ್ರಹಿಸಿರುವುದಾ ದೋಷಾರೋಪ ಪಟ್ಟಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಉಪಯೋಗಕ್ಕೆ ಬಾರದ ಗೃಹಜ್ಯೋತಿ ಯೋಜನೆ – ವಿದ್ಯುತ್ ಇಲ್ಲದೇ ನಿತ್ಯ ಕತ್ತಲಲ್ಲೇ ಕಾಲ ಕಳೆಯುತ್ತಿದೆ ಈ ಗ್ರಾಮ

  • ‘ಡಿ’ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ – ಇಂದೇ ಚಾರ್ಜ್‌ಶೀಟ್‌ ಸಲ್ಲಿಕೆ ಫಿಕ್ಸ್‌

    ‘ಡಿ’ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ – ಇಂದೇ ಚಾರ್ಜ್‌ಶೀಟ್‌ ಸಲ್ಲಿಕೆ ಫಿಕ್ಸ್‌

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್‌ & ಟೀಂ ವಿರುದ್ಧ ಕೋರ್ಟ್‌ಗೆ ಇಂದೇ ಚಾರ್ಜ್‌ಶೀಟ್‌ ಸಲ್ಲಿಕೆ ಫಿಕ್ಸ್‌ ಆಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಮಧ್ಯಾಹ್ನದ ನಂತರ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆಗೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್‌, ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಯಾಗಿರುವ ಎಸಿಪಿ ಭೇಟಿಗೆ ಆಗಮಿಸಿದ್ದಾರೆ.

    ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಗೆ ತನಿಖಾಧಿಕಾರಿಗಳು ಡಿಸಿಪಿ ಅನುಮತಿ ಪಡೆದಿದ್ದಾರೆ. ತನಿಖಾಧಿಕಾರಿ, ಎಸ್‌ಪಿಪಿ ಮೂಲಕ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.

  • ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ – 2,144 ಪುಟಗಳ ದೋಷಾರೋಪ ಪಟ್ಟಿಯಲ್ಲೇನಿದೆ?

    ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ – 2,144 ಪುಟಗಳ ದೋಷಾರೋಪ ಪಟ್ಟಿಯಲ್ಲೇನಿದೆ?

    – ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್‌
    – ಅಡುಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂದಿನಿಂದ ಬಂದು ತಬ್ಬಿ, ಸೊಂಟ ಗಿಂಡಿ, ಬಾ ಎಂದು ಕರೆದಿರೋದು ಉಲ್ಲೇಖ

    ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42 ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ (SIT) ಸಲ್ಲಿಸಿದೆ.

    ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 137 ಸಾಕ್ಷ್ಯಗಳನ್ನು ಸಂಗ್ರಹಿಸಿ, ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇದರಲ್ಲಿ ಏನಿದೆ ಎಂಬ ಬಗ್ಗೆ ‘ಪಬ್ಲಿಕ್ ಟಿವಿ’ಗೆ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸಂಡೇ ಲಾಯರ್, ರಾಹುಲ್ ಗಾಂಧಿ ಮೌನ ಏಕೆ?: ಛಲವಾದಿ ನಾರಾಯಣಸ್ವಾಮಿ ಕಿಡಿ

    ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಅಪ್ಪ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ.

    ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ. ಹಣ್ಣು ಕೊಡುವ ನೆಪದಲ್ಲಿ ಸೊಂಟ ಚಿವುಟಿ, ಸೀರೆ ಎಳೆದು ಪ್ರಜ್ವಲ್ ದೌರ್ಜನ್ಯವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ರಾಜ್ಯಪಾಲರು ಸರ್ಕಾರದ ವಿರುದ್ಧ ಇರೋದು ಸ್ಪಷ್ಟ – ಪರಮೇಶ್ವರ್ ಆರೋಪ

    ಮಗ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಹೊಳೆನರಸೀಪುರ ಮನೆಯಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರೋದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

    ಹೊಳೆನರಸೀಪುರ ಮನೆಯಿಂದ ಬೆಂಗಳೂರು ಮನೆಗೆ ಕರೆದುಕೊಂಡು ಬಂದು ಕೂಡ ಅತ್ಯಾಚಾರ ಎಸಗಿದ್ದಾರೆ. ಹೊತ್ತಿಲ್ಲದ ಹೊತ್ತಿನಲ್ಲಿ ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ ಎಂದು ತನಿಖೆ ನಡೆಸಿದ ಎಸ್‌ಐಟಿಯಿಂದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಪರಿಷತ್ ಸದಸ್ಯ

    ಎ1 ಹೆಚ್‌ಡಿ ರೇವಣ್ಣ: ಸಂತ್ರಸ್ತ ಮಹಿಳೆಯನ್ನ ರೂಮಿಗೆ ಕರೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಮೈ ಕೈ ಮುಟ್ಟಿ, ಹತ್ತಿರಕ್ಕೆ ಎಳೆದುಕೊಂಡು ಲೈಂಗಿಕ ಕಿರುಕುಳ ನೀಡಿದ್ದಾರೆ. ಕಲಂ 354, 354 (ಎ) ಐಪಿಸಿ ಅಡಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

  • ದರ್ಶನ್‌ ವಿರುದ್ಧ ಆಗಸ್ಟ್‌ನಲ್ಲೇ ಚಾರ್ಜ್‌ಶೀಟ್‌ ಸಲ್ಲಿಕೆ ಸಾಧ್ಯತೆ – ಯಾವೆಲ್ಲ ವರದಿ ಬರಬೇಕಿದೆ?

    ದರ್ಶನ್‌ ವಿರುದ್ಧ ಆಗಸ್ಟ್‌ನಲ್ಲೇ ಚಾರ್ಜ್‌ಶೀಟ್‌ ಸಲ್ಲಿಕೆ ಸಾಧ್ಯತೆ – ಯಾವೆಲ್ಲ ವರದಿ ಬರಬೇಕಿದೆ?

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ದರ್ಶನ್ (Darshan) ಹಾಗೂ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಗೆ ವಿಶೇಷ ತನಿಖಾ ತಂಡದ (SIT) ಪೊಲೀಸರು ತಯಾರಿ ನಡೆಸಿದ್ದಾರೆ.

    ಬಹುತೇಕ ಆಗಸ್ಟ್ ತಿಂಗಳಿನಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಕ್ರೋಢೀಕರಣದಲ್ಲಿ ತೊಡಗಿದ್ದಾರೆ.

    ಮೂಲಗಳ ಪ್ರಕಾರ ಪೊಲೀಸರ ಕೈಗೆ ಯಾವುದೇ ವರದಿ ಸೇರಿಲ್ಲ. ಸಿಸಿಟಿವಿ ದೃಶ್ಯ, ಬಟ್ಟೆ, ಸ್ಥಳದಲ್ಲಿ ಸಂಗ್ರಹಿಸಿದ ಸ್ಯಾಂಪಲ್‌ಗಳ ರಿಪೋರ್ಟ್, ಮರಣೋತ್ತರ ಪರೀಕ್ಷೆ, ಮೊಬೈಲ್‌ ಕರೆ ಮತ್ತು ದತ್ತಾಂಶ ಸಂಗ್ರಹ ಸೇರಿ ವಿಧಿ ವಿಜ್ಞಾನ ಪ್ರಯೋಗಾಲಯದ ಅಂತಿಮ ವರದಿಗೆ ಕಾಯುತ್ತಿದ್ದಾರೆ.  ಇದನ್ನೂ ಓದಿ: ಮುಸ್ಲಿಮರ ಓಲೈಕೆಗೆ ರಾಮನಗರ ಹೆಸರು ಬದಲಾವಣೆ: ಈಶ್ವರಪ್ಪ

    ಶೀಘ್ರವೇ ವರದಿ ನೀಡುವಂತೆ ಎಫ್‌ಎಸ್‌ಎಲ್ ಹಾಗೂ ಸಿಐಡಿ ಟೆಕ್ನಿಕಲ್ ಸೆಲ್‌ಗೆ ಮನವಿ ಮಾಡಿದ್ದು ಇನ್ನೂ ಕೆಲವು ವರದಿಗಳು ಹೈದರಾಬಾದ್ ಎಫ್‌ಎಸ್‌ಎಲ್‌ನಿಂದ ಬರಬೇಕಿದೆ. ಇದನ್ನೂ ಓದಿ: IPL 2025: ಮುಂದಿನ ಐಪಿಎಲ್‌ನಲ್ಲೂ ಮಹಿ ಕಣಕ್ಕಿಳಿಯೋದು ಫಿಕ್ಸ್‌?

    ಇನ್ನೊಂದೆಡೆ ಪ್ರಕರಣ ಸಂಬಂಧ ಹಲವಾರು ಮಂದಿಯ ವಿಚಾರಣೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಪ್ರತ್ಯಕ್ಷ, ಪರೋಕ್ಷ ಸಾಕ್ಷಿಗಳ ವಿಚಾರಣೆ ನಡೆಸಿದ್ದಾರೆ. ಈಗಾಗಲೇ ಪ್ರಕರಣ ದಾಖಲಾಗಿ ಒಂದೂವರೆ ತಿಂಗಳಿಗೂ ಅಧಿಕ ಕಾಲವಾಗಿದೆ. ಸೆಪ್ಟೆಂಬರ್ 8ರೊಳಗೆ ಆರೋಪ ಪಟ್ಟಿ ಸಲ್ಲಿಕೆ ಮಾಡಬೇಕು. ಹೀಗಾಗಿ ಕೊನೆಯವರೆಗೆ ಕಾಯದೇ ಆದಷ್ಟು ಬೇಗ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ನಿರ್ಧಾರ ಮಾಡಿದ್ದಾರೆ.

  • ಸಂಸತ್ ಭವನದ ಮೇಲೆ ದಾಳಿ ಪ್ರಕರಣ – 6 ಆರೋಪಿಗಳ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಸಂಸತ್ ಭವನದ ಮೇಲೆ ದಾಳಿ ಪ್ರಕರಣ – 6 ಆರೋಪಿಗಳ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ನವದೆಹಲಿ: ಸಂಸತ್‌ ಭವನದ ಮೇಲೆ ದಾಳಿ (Parliament Security Breach) ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್‌ ಕೋರ್ಟ್‌ಗೆ 1,000 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

    2023 ರ ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರ ವಿಶೇಷ ತಂಡವು ಶುಕ್ರವಾರ ತನ್ನ ಮೊದಲ ಚಾರ್ಜ್‌ಶೀಟ್ (Charge Sheet) ಅನ್ನು ಇಲ್ಲಿನ ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದನ್ನೂ ಓದಿ: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ ಪ್ರವೇಶಿಸಲು ಯತ್ನಿಸಿದ ಮೂವರ ಬಂಧನ

    ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ಡಿ.ಮನರಂಜನ್, ಲಲಿತಾ ಝಾ, ಅಮೋಲ್ ಶಿಂಧೆ, ಮಹೇಶ್ ಕುಮವತ್, ಸಾಗರ್ ಶರ್ಮಾ, ನೀಲಂ ಅಜಾದ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಆಗಿದೆ. ಸದ್ಯ ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

    ಮೇ 24 ರಂದು ನ್ಯಾಯಾಲಯವು ತನಿಖೆಯನ್ನು ಪೂರ್ಣಗೊಳಿಸಲು ಪೊಲೀಸರಿಗೆ 13 ದಿನಗಳ ಕಾಲಾವಕಾಶವನ್ನು ನೀಡಿತ್ತು. 1,000 ಪುಟಗಳ ಚಾರ್ಜ್‌ಶೀಟ್ ಅನ್ನು ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಕೆಲವು ವರದಿಗಳನ್ನು ನಿರೀಕ್ಷಿಸಲಾಗಿದೆ. ಡಿಜಿಟಲ್ ಡೇಟಾ ದೊಡ್ಡದಾಗಿದೆ ಎಂದು ಪೊಲೀಸರು ಹೇಳಿಕೊಂಡ ನಂತರ ಕಳೆದ ಬಾರಿ ವಿಸ್ತರಣೆಯನ್ನು ನೀಡಿದ್ದರು. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ಪಾರ್ಲಿಮೆಂಟ್‌ಗೆ ಎಂಟ್ರಿ ಕೊಟ್ಟಿದ್ದ ಕೆಲವರು ಒಳಗಡೆ ನುಗ್ಗಿ ಭದ್ರತಾ ನಿಯಮ ಉಲ್ಲಂಗಿದ್ದರು. ಸಂಸತ್‌ ಒಳಗೆ ಸ್ಮೋಕ್‌ ಬಾಂಬ್‌ ಸಿಡಿಸಿ ಗದ್ದಲ ಸೃಷ್ಟಿಸಿದ್ದರು. ಒಳಗಿದ್ದ ಸಂಸದರು ಭಯಭೀತರಾಗಿದ್ದರು.

    ಆಜಾದ್ ಮತ್ತು ಶಿಂಧೆ ಸಂಸತ್ತಿನ ಹೊರಗೆ ಸ್ಮೋಕ್‌ ಬಾಂಬ್ ಸಿಡಿಸಿ ಘೋಷಣೆಗಳನ್ನು ಕೂಗಿದರು. ಝಾ ಸಂಪೂರ್ಣ ಯೋಜನೆಯ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಇತರ ನಾಲ್ವರು ಆರೋಪಿಗಳ ಮೊಬೈಲ್ ಫೋನ್‌ಗಳೊಂದಿಗೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಕುಮಾವತ್ ಕೂಡ ಆರೋಪಿಗಳ ಜತೆ ನಂಟು ಹೊಂದಿದ್ದರು.

  • ಉಡುಪಿಯಲ್ಲಿ ನಾಲ್ವರ ಹತ್ಯೆ ಕೇಸ್‌ – ಆಯ್ನಾಜ್ ಮೇಲಿನ ವಿಪರೀತ ವ್ಯಾಮೋಹವೇ ಕೊಲೆಗೆ ಕಾರಣ

    ಉಡುಪಿಯಲ್ಲಿ ನಾಲ್ವರ ಹತ್ಯೆ ಕೇಸ್‌ – ಆಯ್ನಾಜ್ ಮೇಲಿನ ವಿಪರೀತ ವ್ಯಾಮೋಹವೇ ಕೊಲೆಗೆ ಕಾರಣ

    – 2,250 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ
    – 300 ಸಾಕ್ಷಿ ಸಂಗ್ರಹ, ಶೀಘ್ರವೇ ವಿಚಾರಣೆ ಆರಂಭ

    ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ (Udupi Murder Case) ಸಂಬಂಧಿಸಿದಂತೆ ಉಡುಪಿ ಪೊಲೀಸರು ಕೋರ್ಟಿಗೆ ಚಾರ್ಜ್‌ಶೀಟ್‌ (Charge Sheet) ಸಲ್ಲಿಸಿದ್ದಾರೆ. 2023 ರ ನವೆಂಬರ್ 12ರಂದು ಸಂತೆಕಟ್ಟೆ ನೇಜಾರು ಸಮೀಪದ ತೃಪ್ತಿ ಲೇಔಟ್‌ನಲ್ಲಿ ಕೊಲೆ ನಡೆದಿತ್ತು. ವಿದೇಶದಲ್ಲಿದ್ದ ನೂರ್ ಮಹಮ್ಮದ್ ಕುಟುಂಬದ ನಾಲ್ವರ ಕೊಲೆಯಾಗಿತ್ತು. ಏರ್ ಇಂಡಿಯಾ ಉದ್ಯೋಗಿಯಾಗಿದ್ದ ಪ್ರವೀಣ್ ಅರುಣ್ ಚೌಗುಲೆ (Praveen Chougule) ಬರ್ಬರವಾಗಿ ನಾಲ್ವರ ಹತ್ಯೆ ಮಾಡಿದ್ದ.

    ತನ್ನದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಯ್ನಸ್ ಮೇಲೆ ಇದ್ದ ಅತಿಯಾದ ಗೆಳೆತನ, ಪ್ರೀತಿ (Love), ವ್ಯಾಮೋಹ, ಕೆಲ ಸಮಯ ನಂತರ ಆಕೆ ಆತನನ್ನು ದೂರ ಮಾಡಿದ್ದಕ್ಕಾಗಿ ಹುಟ್ಟಿಕೊಂಡ ದ್ವೇಷಕ್ಕೆ ಪ್ರವೀಣ್ ಈ ಕೃತ್ಯ ಎಸಗಿದ್ದಾನೆ ಎಂಬ ವಿಚಾರ ತನಿಖೆಯಿಂದ ಪ್ರಕಟವಾಗಿದೆ.

    ಮಗಳ ಮೇಲೆ ಮುಗಿಬಿದ್ದಾಗ ತಡೆಯಲು ಬಂದ ತಾಯಿ ಹಸೀನಾ, ಅಕ್ಕ ಅಫ್ನಾನ್ ಮತ್ತು ತಮ್ಮ ಆಸಿಂನನ್ನು ಇರಿದು ಕೊಂದಿದ್ದ. ತಲೆಮರೆಸಿಕೊಂಡು ಓಡಾಡಿದ್ದ ಆರೋಪಿಯನ್ನು ಬೆಳಗಾವಿ ಜಿಲ್ಲೆಯಲ್ಲಿ ಅರೆಸ್ಟ್ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಲ್ಲಾ ಸಾಕ್ಷಾಧಾರಗಳನ್ನು ಪೊಲೀಸರು ಸಂಗ್ರಹ ಮಾಡಿದ್ದರು. ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಕೃತ್ಯಕ್ಕೆ ಬಳಸಿದ್ದ ಅಸ್ತ್ರಗಳನ್ನು ವಶಪಡಿಸಿದ್ದರು. ಕುಟುಂಬದ ಆಪ್ತರು ಮತ್ತು ಸಾರ್ವಜನಿಕರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ನಾಲ್ವರನ್ನು ಹತ್ಯೆ ಮಾಡಿ ಆರೋಪಿ ಚೂರಿಯನ್ನ ಅಡುಗೆ ಮನೆಯಲ್ಲಿ ಇಟ್ಟಿದ್ದ: ಉಡುಪಿ ಕೇಸ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್‌ಪಿ

    ಚಾರ್ಜ್‌ಶೀಟ್‌ನಲ್ಲಿ ಏನಿದೆ?
    300 ಸಾಕ್ಷಿಗಳಿರುವ 2,250 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಸಿಸಿಟಿವಿ, ಫೋನ್ ಕರೆ, ಹೇಳಿಕೆಗಳು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳೇ ಪ್ರಮುಖ ಸಾಕ್ಷಿಗಳು.

    ತನಿಖಾಧಿಕಾರಿ ಮಂಜುನಾಥ್ ಗೌಡ 15 ವಾಲ್ಯೂಮ್ಸ್ (ಸಂಪುಟ) ಹೊಂದಿದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎಫ್‌ಎಸ್‌ಎಲ್‌ನಲ್ಲಿ ಆರೋಪಿಯ ಕೃತ್ಯ ಹೋಲಿಕೆ ಆಗುತ್ತಿದೆ. ಕೃತ್ಯಕ್ಕೆ ಬಳಸಿದ ಚಾಕು, ರಕ್ತಸಿಕ್ಕ ಬಟ್ಟೆಗಳು ಪೊಲೀಸರಿಗೆ ಸಿಕ್ಕಿರುವ ಪ್ರಮುಖ ಸಾಕ್ಷಿಗಳಾಗಿವೆ. ಸ್ಥಳೀಯ ಠಾಣೆಯಲ್ಲಿ ಸುಮಾರು 2000 ಕ್ಕೂ ಹೆಚ್ಚು ಪುಟಗಳ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ ಮೊದಲ ಪ್ರಕರಣ ಇದಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 5 ವರ್ಷ: 2019ರ ಫೆ.14 ರಂದು ನಡೆದಿದ್ದು ಏನು?

    ಮುಂದೇನು?
    ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗಿದೆ. ನ್ಯಾಯಾಧೀಶರ ಬಳಿಗೆ ದೋಷಾರೋಪಣೆ ಪಟ್ಟಿ ರವಾನೆಯಾದ ಬಳಿಕ ನ್ಯಾಯಾಲಯವು ವಿಚಾರಣೆ ನಡೆಸಲಿದೆ. ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪ್ರಕರಣದ ಸಂಪೂರ್ಣ ದಾಖಲೆಗಳನ್ನು ಸೆಷನ್ಸ್ ಕೋರ್ಟ್‌ಗೆ ವರ್ಗಾಯಿಸುತ್ತದೆ. ಜಿಲ್ಲಾ ಸತ್ರ ನ್ಯಾಯಾಲಯ ಪ್ರಕರಣಕ್ಕೆ ಸೆಷನ್ಸ್ ಕೇಸ್ (ಎಸ್‌ಸಿ) ನಂಬರ್ ನೀಡಲಿದೆ. ಹೆಚ್.ಬಿ.ಸಿ ಚಾರ್ಜ್‌ ಫ್ರೇಮ್ ಆಗಲಿದ್ದು ಆರೋಪಿ ತಪ್ಪು ಒಪ್ಪಿದರೆ ಶಿಕ್ಷೆ ಆಗಲಿದೆ. ತಪ್ಪು ಒಪ್ಪದೇ ಇದ್ದಲ್ಲಿ ವಿಚಾರಣೆ ಆರಂಭವಾಗಲಿದೆ.

    ನೂರ್ ಮಹಮ್ಮದ್ ಕುಟುಂಬಸ್ಥರ ಒತ್ತಾಯದಂತೆ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಿಸಿದೆ. ಫಾಸ್ಟ್ ಕೋರ್ಟ್ ನಲ್ಲಿ ಆರೋಪಿಯ ವಿಚಾರಣೆ ನಡೆಯಬೇಕು ಎಂಬ ಒತ್ತಾಯವೂ ಇದೆ. ವಿಚಾರಣೆ ಆರಂಭವಾದ ನಂತರ ಮಂಗಳೂರು ಅಥವಾ ಉಡುಪಿಯ ಜೈಲಿನಲ್ಲಿ ವಿಶೇಷ ಭದ್ರತೆ ವ್ಯವಸ್ಥೆ ಮಾಡಿ ಆರೋಪಿಯನ್ನು ಬೆಂಗಳೂರಿನಿಂದ ಕರೆತರುವ ಸಾಧ್ಯತೆ ಇದೆ.

     

  • ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣ : ಚಾರ್ಜ್ ಶೀಟ್ ಸಲ್ಲಿಕೆ

    ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣ : ಚಾರ್ಜ್ ಶೀಟ್ ಸಲ್ಲಿಕೆ

    ಟ ದರ್ಶನ್ (Darshan) ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ (Charge Sheet) ಸಲ್ಲಿಸಿದ್ದಾರೆ. 150ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಆರ್.ಆರ್.ನಗರ ಪೊಲೀಸರು (R R Nagara Police)ಸಿಟಿ ಸಿವಿಲ್ ಕೋರ್ಟ್ ಗೆ ಸಲ್ಲಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಮಂದಿಯನ್ನ ಸಾಕ್ಷಿಗಳಾಗಿ ಪೊಲೀಸರು ಪರಿಗಣಿಸಿದ್ದರು. ನಟ ದರ್ಶನ್ ಅವರನ್ನೂ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿದ್ದರು. ಇದೀಗ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟಿದ್ದಾರೆ. ಘಟನೆಗೂ ದರ್ಶನ್ ಗೂ ಯಾವುದೇ ಸಂಬಂಧ ಇಲ್ಲವೆಂದು ಉಲ್ಲೇಖ ಮಾಡಿದ್ದಾರೆ.

     

    ಅಕ್ಟೋಬರ್ 28 ರಂದು ದರ್ಶನ್ ಮನೆಯ ಮುಂದೆ ಈ ಘಟನೆ ನಡೆದಿದ್ದು, ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದರ್ಶನ್ ಮನೆಯ ನಾಯಿ ಕಚ್ಚಿತ್ತು. ಆಗ ಅಮಿತಾ ಜಿಂದಾಲ್ ಕೊಟ್ಟ ದೂರಿನ ಮೇಲೆ ಎಫ್ ಐ ಆರ್ ದಾಖಲಾಗಿತ್ತು. ಕೇರ್ ಟೇಕರ್ ಹೇಮಂತ್ ಹಾಗೂ ನಟ ದರ್ಶನ್ ಆರೋಪಿಗಳಾಗಿ ಮಾಡಿ ಎಫ್ ಐ ಆರ್ ದಾಖಲಾಗಿತ್ತು.

  • Praveen Nettaru murder case: 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್‌ ಸಲ್ಲಿಸಿದ NIA

    Praveen Nettaru murder case: 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್‌ ಸಲ್ಲಿಸಿದ NIA

    ಮಂಗಳೂರು: ಬಿಜೆಪಿ (BJP) ಮುಖಂಡ ಪ್ರವೀಣ್‌ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA), ಸುದೀರ್ಘ ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

    ಬೆಂಗಳೂರಿನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್‌ನ್ನು ಎನ್‌ಐಎ ಸಲ್ಲಿಸಿದೆ. ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿದಾರರ ಹೇಳಿಕೆ ಇದೆ. ಒಟ್ಟು 20 ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈವರೆಗೆ 14 ಮಂದಿ ಬಂಧನವಾಗಿದ್ದು, 6 ಮಂದಿಯ ವಾಂಟೆಡ್ ಲಿಸ್ಟ್‌ ಇದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರ ಪತ್ತೆಗೆ 10 ಲಕ್ಷ ಬಹುಮಾನ ಘೋಷಣೆ

    ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಅರೋಪಿಗಳ ಪತ್ತೆಗೆ ಈಗಾಗಲೇ ಬಹುಮಾನ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಎಂಬವರ ಮಗ ಮೊಹಮ್ಮದ್ ಷರೀಫ್(53)- 5 ಲಕ್ಷ ಹಾಗೂ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ನ ಅಬೂಬಕರ್ ಮಗ ಮಸೂದ್ ಕೆ.ಎ (40)-5 ಲಕ್ಷ ಒಟ್ಟು 10 ಲಕ್ಷ ಬಹುಮಾನವನ್ನು ಎನ್‍ಐಎ ಘೋಷಿಸಿದೆ.

    ಹತ್ಯೆ ಪ್ರಕರಣ: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sullia) ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26ರ ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ

    ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೂ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅನಾರೋಗ್ಯದ ಮಗುವಿದ್ರೆ ಲೈಫ್ ಎಂಜಾಯ್ ಮಾಡಲು ಸಾಧ್ಯವಿಲ್ಲ – ವೈದ್ಯೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

    ಅನಾರೋಗ್ಯದ ಮಗುವಿದ್ರೆ ಲೈಫ್ ಎಂಜಾಯ್ ಮಾಡಲು ಸಾಧ್ಯವಿಲ್ಲ – ವೈದ್ಯೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

    ಬೆಂಗಳೂರು: ತಾಯಿಯೊಬ್ಬಳು (Mother) ನಾಲ್ಕನೇ ಮಹಡಿಯ ಮೇಲಿಂದ ಮಗುವನ್ನು (Child) ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಂಗಿ ರಾಮನಗರ ಪೊಲೀಸರು (Police) ಚಾರ್ಜ್ ಶೀಟ್ (Charge Sheet) ಸಲ್ಲಿಸಿದ್ದಾರೆ.

    ಅಗಸ್ಟ್‌ನಲ್ಲಿ ಹೆತ್ತ ತಾಯಿಯೇ ತನ್ನ ಮಗುವನ್ನು (Daughter) ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದ ಘಟನೆ ಸಂಪಂಗಿ ರಾಮನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಮಗುವಿನ ತಾಯಿ ಸುಷ್ಮಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಈಕೆ ವೃತ್ತಿಯಲ್ಲಿ ಡೆಂಟಲ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ ಸುಷ್ಮಾ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿದ್ದರೆ ಲೈಫ್ ಎಂಜಾಯ್ ಮಾಡಲಾಗುವುದಿಲ್ಲ ಎಂದು ಮಗುವನ್ನು ಕೊಲೆ ಮಾಡಿದ್ದಳು. ಈ ಹಿನ್ನೆಲೆಯಲ್ಲಿ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 193 ಪುಟಗಳ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

    ಚಾರ್ಜ್ ಶೀಟ್‍ನಲ್ಲಿ ಏನಿದೆ?: ಸುಷ್ಮಾ ತನ್ನ ಮಗುವನ್ನು ಮಹಡಿಯಿಂದ ಬಿಸಾಡಿದ್ದನ್ನು ಪ್ರತ್ಯಕ್ಷವಾಗಿ ಕಂಡಿದ್ದ ಮೂವರ ಹೇಳಿಕೆ ದಾಖಲು ಮಾಡಿದ್ದಾರೆ. ಅಲ್ಲದೇ ಕೇಸ್‍ನಲ್ಲಿ ಬರೋಬ್ಬರಿ 34 ಸಾಕ್ಷಿಗಳ ಹೇಳಿಕೆ ದಾಖಲಿಸಿದ್ದಾರೆ. ಇದರ ಜೊತೆಗೆ ಮಗುವಿನ ಖಾಯಿಲೆ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ.

    4 ವರ್ಷದ ಹೆಣ್ಣು ಮಗು ಬುದ್ಧಿಮಾಂದ್ಯ ಮಗುವಲ್ಲ. ಆ ಮಗು ಆಟಿಸಂ (AUTISM) ಎಂಬ ಖಾಯಿಲೆಯಿಂದ ಬಳಲುತ್ತಿತ್ತು. ಇದರಿಂದಾಗಿ ಪ್ರತಿನಿತ್ಯ ಥೆರಪಿ ಮಾಡಿಸಲು ಮಗುವನ್ನು ತಾಯಿ ಸುಷ್ಮಾ ಕರೆದೊಯ್ಯುತ್ತಿದ್ದಳು. ಹೀಗೆ ಮಗುವನ್ನ ದಿನಾ ಆಸ್ಪತ್ರೆಗೆ ಕರೆದೊಯ್ಯಬೇಕಲ್ಲ ಎಂದು ಸುಷ್ಮಾ ಬೇಸತ್ತಿದ್ದಳು. ಅಷ್ಟೇ ಅಲ್ಲದೇ ಮಗುವನ್ನು ನೋಡಿಕೊಳ್ಳಲಾಗುವುದಿಲ್ಲ ಜೊತೆಗೆ ತನ್ನ ಲೈಫ್ ಎಂಜಾಯ್ ಮಾಡಲು ಆಗುವುದಿಲ್ಲ ಎಂದು ನಿರ್ಧಾರ ಮಾಡಿ, ಎರಡು ಬಾರಿ ಮಗು ಬಿಸಾಡಲು ಹೊರಗಡೆ ಬಂದು ನೋಡಿ, ಅಡ್ಡಲಾಗಿದ್ದ ಮರವನ್ನು ಗಮನಿಸಿದ್ದಾಳೆ. ಆ ಬಳಿಕ ದೂರ ಬಂದು ಗಟ್ಟಿ ನೆಲದ ಸ್ಥಳವನ್ನು ನೋಡಿ ಬಿಸಾಡಿದ್ದಾಳೆ. ಇದನ್ನೂ ಓದಿ: ಅವಳಿಗೆ ಮಗು ನೋಡಿಕೊಳ್ಳೋಕೆ ಕಷ್ಟ ಅಂತಿದ್ರೆ ನಾನೇ ನೋಡಿಕೊಳ್ತಿದ್ದೆ: ಪತಿ ಕಣ್ಣೀರು

    ಅಷ್ಟೇ ಅಲ್ಲದೇ ಎಲ್ಲಾದರೂ ಕಾರ್ಯಕ್ರಮಗಳಿಗೆ ಹೋದಾಗ ಮಗುವನ್ನು ನೋಡಿದ ಸಂಬಂಧಿಕರ ಕೊಂಕಿನ ಮಾತಿಂದ ಸುಷ್ಮಾ ಬೇಸತ್ತಿದ್ದಳು. ಸುಖ ಜೀವನದ ಲೈಫ್ ಎಂಜಾಯ್ ಮಾಡಿದ್ದ ಸುಷ್ಮಾಗೆ ಮಗುವಿನ ಆರೈಕೆಯೇ ಕಷ್ಟವಾಗಿತ್ತು. ಹೀಗಾಗಿ ಕೊಲೆ ಮಾಡಿದ್ದಾಳೆ. ತಾಯಿ ಮಾನಸಿಕವಾಗಿ ಕುಗ್ಗಿಹೋಗಿರಲಿಲ್ಲ. ಆಕೆ ಮಾನಸಿಕ ಸ್ಥಿತಿ ಉತ್ತಮವಾಗಿದೆ ಎಂದು ನಿಮ್ಹಾನ್ಸ್ ನೀಡಿರುವ ವರದಿಯನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: 4 ವರ್ಷದ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದ ಪಾಪಿ ತಾಯಿ!

    Live Tv
    [brid partner=56869869 player=32851 video=960834 autoplay=true]

  • 200 ಕೋಟಿ ವಂಚನೆ ಪ್ರಕರಣ: ಯಾವುದೇ ಗಿಫ್ಟ್ ಪಡೆದಿಲ್ಲ ಎಂದ ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್

    200 ಕೋಟಿ ವಂಚನೆ ಪ್ರಕರಣ: ಯಾವುದೇ ಗಿಫ್ಟ್ ಪಡೆದಿಲ್ಲ ಎಂದ ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್

    ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್, ತಾವು ವಂಚಿಸಿ ಪಡೆದಿದ್ದ 200 ಕೋಟಿ ರೂಪಾಯಿ ಹಣದಲ್ಲಿ ಗೆಳತಿ, ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ 5.71 ಕೋಟಿ ಹಣದಲ್ಲಿ ಉಡುಗೊರೆಯಾಗಿ ನೀಡಿದ್ದ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಕೂಡ ಆರೋಪಿ ಎಂದು ನಮೂದಿಸಿದ್ದರು. ಈ ಕುರಿತು ಜಾಕ್ವೆಲಿನ್ ಸ್ಪಷ್ಟನೆ ಕೊಟ್ಟಿದ್ದಾರೆ.

    ಸುಕೇಶ್ ಚಂದ್ರಶೇಖರ್ ನನಗೆ ಯಾವುದೇ ರೀತಿಯಲ್ಲಿ ಉಡುಗೊರೆಯನ್ನು ಕೊಟ್ಟಿಲ್ಲ. ನಾನು ಸಂಪಾದನೆ ಮಾಡಿರುವ ಹಣದಿಂದಲೇ ಕೆಲ ವಸ್ತುಗಳನ್ನು ಖರೀದಿಸಿದ್ದೇನೆ. ನಾನು ಎಫ್.ಡಿ ಆಗಿ ಇಟ್ಟಿದ್ದ ಹಣದಲ್ಲೇ ಅವುಗಳನ್ನು ಖರೀದಿಸಿದ್ದು, ಅದಕ್ಕೆ ಬೇಕಾದ ಎಲ್ಲ ದಾಖಲೆಗಳು ನನ್ನ ಬಳಿ ಇವೆ. ನಾನು ಆ ಹಣಕ್ಕೆ ಟ್ಯಾಕ್ಸ್ ಕೂಡ ಕಟ್ಟಿದ್ದೇನೆ ಎಂದು ಜಾಕ್ವೆಲಿನ್ ಹೇಳಿದ್ದಾರೆ. ಇದನ್ನೂ ಓದಿ:ಅಕ್ಷತಾ‌ ಜೊತೆ ರಾಕೇಶ್ ಅಡಿಗ ರೊಮ್ಯಾನ್ಸ್: ಸೋನು ಫುಲ್ ಗರಂ

    ಇಡಿ ಅಧಿಕಾರಿಗಳು ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಸುಕೇಶ್ ಚಂದ್ರಶೇಖರ್ ವಂಚಿಸಿದ್ದ 200 ಕೋಟಿ ಹಣದಲ್ಲಿ ನಟಿ ಜಾಕ್ವೆಲಿನ್ ಗೆ ದುಬಾರಿ ಕಾರು, ವಾಚು, ಕುದುರೆ, ಬ್ಯಾಗ್ ಸೇರಿದಂತೆ ಹಲವು ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದಾನೆ ಎಂದು ದಾಖಲಾಗಿದೆ. ಅಲ್ಲದೇ, ಜಾಕ್ವೆಲಿನ್ ಸಂಗ ಬಯಸಲು ಅವನು ತನ್ನ ದೀರ್ಘಕಾಲದ ಗೆಳತಿ ಪಿಂಕಿ ಇರಾನಿಯನ್ನು ಬಳಸಿಕೊಂಡಿದ್ದ ಎಂದೂ ಚಾರ್ಜ್ ಶೀಟ್ ನಲ್ಲಿ ಬರೆಯಲಾಗಿದೆ.

    Live Tv
    [brid partner=56869869 player=32851 video=960834 autoplay=true]