ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ(Eshwar Khandre) ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ(Charmadi Ghat) ನಾಲ್ಕನೇ ತಿರುವಿನಲ್ಲಿ ಗುರುವಾರ ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಅರಣ್ಯ ಮಾರ್ಗದಲ್ಲಿ(Forest Path) ಸಂಚರಿಸುವಾಗ ವಾಹನಗಳಿಂದ ಕೆಳಗೆ ಇಳಿಯುವುದು ಅಪರಾಧವಾಗಿದ್ದು, ಆ ವಾಹನದ ನೋಂದಣಿ ಸಂಖ್ಯೆ ಪತ್ತೆ ಮಾಡಿ, ಕಾನೂನು ರೀತಿಯ ಕ್ರಮ ಜರುಗಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ರನ್ಯಾರಾವ್‌ಗೆ ಪರಮೇಶ್ವರ್ ಶಿಕ್ಷಣ ಸಂಸ್ಥೆ ಸಾಲ ಕೊಟ್ಟಿರಬಹುದು: ರಾಮಲಿಂಗಾ ರೆಡ್ಡಿ
ರಾಜ್ಯ ಸರ್ಕಾರ, ಅರಣ್ಯ ಇಲಾಖೆಯು(Forest Department) ಮಾನವ ಹಾಗೂ ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಶ್ರಮಿಸುತ್ತಿದೆ. ಸಾರ್ವಜನಿಕರು ಈ ರೀತಿ ಸೆಲ್ಫಿ ತೆಗೆದುಕೊಳ್ಳುವಾಗ, ಫೋಟೋ ತೆಗೆಯುವಾಗ ಅನಾಹುತ ಸಂಭವಿಸುವ ಅಪಾಯ ಇರುತ್ತದೆ. ಯಾರೂ ತಮ್ಮ ಅಮೂಲ್ಯ ಜೀವದೊಂದಿಗೆ ಚೆಲ್ಲಾಟ ಆಡಬಾರದು ಎಂದು ಮನವಿ ಮಾಡಿದ್ದಾರೆ.
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಕಾರೊಂದು (Car) ಸುಮಾರು 100 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ನಡೆದಿದೆ.
ಕಾರು 100 ಆಳದ ಪ್ರಪಾತಕ್ಕೆ ಬಿದ್ದರೂ ಕಾರಿನಲ್ಲಿದ್ದ ಐವರು ಪವಾಡ ಸದೃಶ್ಯ ಪಾರಾಗಿದ್ದಾರೆ. ಆರು ಜನರ ಕುಟುಂಬ ಶಿವಮೊಗ್ಗದಿಂದ (Shivamogga) ಧರ್ಮಸ್ಥಳಕ್ಕೆ (Dharmasthala) ಧಾರ್ಮಿಕ ಪ್ರವಾಸ ಹೊರಟಿದ್ದರು. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಆರಂಭದಲ್ಲೇ ಮಲಯ ಮಾರುತ ಬಳಿ ಕಾರು, ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಕಾರಿನಲ್ಲಿದ್ದ ಶಂಕರ್, ಸೀತಮ್ಮ, ಭಾನುಪ್ರಿಯಾ, ಆರಾಧ್ಯ, ಹರೀಶ್, ಶ್ರೇಯಸ್ ಸೇರಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಲ್ಲಿದ್ದ 2 ವರ್ಷದ ಮಗುವಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಮಗುವನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಸ್ನಾನಕ್ಕೆಂದು ಕಾಲುವೆಗೆ ತೆರಳಿದ್ದ ಬಾಲಕರು – ಕಾಲು ಜಾರಿ ಓರ್ವ ಸಾವು, ಇಬ್ಬರ ರಕ್ಷಣೆ
ಸಮಾಜ ಸೇವಕ ಆರೀಫ್ ಕೂಡಲೇ ಸ್ಥಳಕ್ಕೆ ತೆರಳಿ ಎಲ್ಲರನ್ನೂ ಮೇಲೆತ್ತಿ ಆಂಬುಲೆನ್ಸ್‌ನಲ್ಲಿ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದರು. ಈ ಜಾಗದಲ್ಲಿ ತಡೆಗೋಡೆ ಅಳವಡಿಸದೇ ಇರುವುದೇ ಅಪಾಯಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಸಂಭಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆನೇಕಲ್| ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ ಪಾಪಿ ಪತಿ
ಚಿಕ್ಕಮಗಳೂರು: ಮೀನು ಸಾಗಿಸುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಚಾಲಕನನ್ನು ದೋಚಿದ ಪ್ರಕರಣ ಮೂಡಿಗೆರೆಯ (Mudigere) ಚಾರ್ಮಾಡಿ ಘಾಟಿಯಲ್ಲಿ (Charmadi Ghat) ನಡೆದಿದೆ.
ಎರಡು ಬೈಕ್‍ನಲ್ಲಿ ಬಂದ ನಾಲ್ವರು ಅಪರಿಚಿತರು ಲಾರಿಯನ್ನು ಅಡ್ಡಗಟ್ಟಿದ್ದಾರೆ. ಬಳಿಕ ಗಾಜನ್ನು ಒಡೆದು ಚಾಲಕ ಸಲಾಂ ಬಣಕಲ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಬಳಿ ಇದ್ದ 1 ಲಕ್ಷದ 61 ಸಾವಿರ ರೂ. ಹಣವನ್ನು ದೋಚಿದ್ದಾರೆ. ಇದನ್ನೂ ಓದಿ: ಶೃಂಗೇರಿ ಅರಣ್ಯದಲ್ಲಿ ಹೂತಿಟ್ಟಿದ್ದ ಬಂದೂಕು, ಸಜೀವ ಗುಂಡುಗಳು ಪತ್ತೆ!
ಚಿಕ್ಕಮಗಳೂರು: ಮುಗಿಲೆತ್ತರದ ಬೆಟ್ಟ-ಗುಡ್ಡಗಳಿಂದ ಕೂಡಿರುವ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು (Wild Fire) ಆವರಿಸಿದ್ದು, ನೂರಾರು ಎಕರೆ ಅರಣ್ಯ, ಅಪರೂಪದ ಶೋಲಾ ಕಾಡು (ನೀರನ್ನ ಹಿಡಿದಿಟ್ಟು ವರ್ಷಪೂರ್ತಿ ನೀರು ಹರಿಸುವ ಸಾಮರ್ಥ್ಯದ ಕಾಡು) ಸುಟ್ಟು ಕರಕಲಾಗಿದೆ.
ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಅರಣ್ಯಕ್ಕೆ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಕಳೆದ ವಾರವಷ್ಟೆ ಅದೇ ಚಾರ್ಮಾಡಿ ಘಾಟಿಯ ಬಿದಿರುತಳ ತಪ್ಪಲಿನ ಕಾಡಿನಲ್ಲಿ ಕಾಡ್ಗಿಚ್ಚಿಗೆ ಅರಣ್ಯ ಹಾಗೂ ಪ್ರಾಣಿ ಸಂಕುಲ ನಾಶವಾಗಿತ್ತು. ಕಳೆದ ರಾತ್ರಿ ಮತ್ತೆ ಚಾರ್ಮಾಡಿ ತಪ್ಪಲಿನ ಅರಣ್ಯಕ್ಕೆ ಬೆಂಕಿ ಬಿದ್ದು ಮತ್ತೆ ನೂರಾರು ಎಕರೆ ಅರಣ್ಯ ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ ಹಣ| ರಾಜ್ಯದ ಹಣಕಾಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತೆ: ಎಸ್‌ಬಿಐ ಎಚ್ಚರಿಕೆ
ರಸ್ತೆಬದಿ ಇದ್ದ ಬೆಂಕಿಯನ್ನು ನಂದಿಸಿದ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ಗುಡ್ಡ ಏರಿ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ಬೆಂಕಿಯ ಕೆನ್ನಾಲಿಗೆ 10 ಕಿಲೋ ಮೀಟರ್‌ನಷ್ಟು ದೂರಕ್ಕೆ ಬೆಂಕಿ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿದರು. ತಡವಾಗಿ ಸ್ಥಳಕ್ಕೆ ಬಂದ ಸಿಬ್ಬಂದಿ ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿ ಇದ್ದುದ್ದರಿಂದ ಬೆಂಕಿ ನಂದಿಸಲು ಪರದಾಡಿದರು. ಇದನ್ನೂ ಓದಿ: ಟ್ರಕ್, ಕಾರು ಮುಖಾಮುಖಿ ಡಿಕ್ಕಿ – ನಾಲ್ವರು ಸಾವು, ಇಬ್ಬರು ಗಂಭೀರ
ಚಾರ್ಮಾಡಿ ಘಾಟ್ ಮುಗಿಲೆತ್ತರದ ಬೆಟ್ಟಗುಡ್ಡಗಳಿಂದ ಕೂಡಿರುವ ಬೃಹತ್ ಕಾಡು. ಸಾವಿರಾರು ಪ್ರಾಣಿ-ಪಕ್ಷಿಗಳ ಆವಾಸ ಸ್ಥಾನ. ಅಪರೂಪದ ಸಸ್ಯ ಸಂಪತ್ತಿನ ವನರಾಶಿ. ಇಲ್ಲಿನ ಎತ್ತರದ ಪ್ರದೇಶದ ಕಾಡಿಗೆ ಬೆಂಕಿ ಬಿದ್ದರೆ ಬೆಂಕಿ ನಂದಿಸುವುದು ಕಷ್ಟಸಾಧ್ಯ. ಎತ್ತರದ ಪ್ರದೇಶಕ್ಕೆ ಅಗ್ನಿಶಾಮಕದ ಗಾಡಿ, ಸಿಬ್ಬಂದಿ ಹೋಗೋದು ಕಷ್ಟ. ಅರಣ್ಯ ಅಧಿಕಾರಿಗಳು ಕೈಯಲ್ಲಿ ಸೊಪ್ಪು ಹಿಡಿದೇ ಬೆಂಕಿ ನಂದಿಸಬೇಕು. ಆದರೆ, ಎತ್ತರದ ಪ್ರದೇಶದಲ್ಲಿನ ಗಾಳಿಗೆ ಬೆಂಕಿಯ ಕೆನ್ನಾಲಿಗೆ ಕೂಡ ಹೆಚ್ಚಾಗಿತ್ತು. ಹೆಚ್ಚಾಗುತ್ತಿತ್ತು. ಆದರೆ, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರ ಹೋರಾಟದಿಂದ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್‌ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ: 76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ – ಭದ್ರತೆ ಹೇಗಿದೆ?
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ (Charmadi Ghat) ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು (Rain) ಇಂದು ಮತ್ತೆ ಗುಡ್ಡ (Land Slide) ಕುಸಿದಿದೆ.
ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿದೆ. ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿಕೊಂಡು ಬಂದಿವೆ. ಚಾರ್ಮಾಡಿ ಘಾಟಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುತ್ತದೆ. ಬೆಂಗಳೂರಿನಿಂದ (Bengaluru) ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ.
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ಸಂಚಾರ ಮಾಡುವ ಸವಾರರು ಅತ್ಯಂತ ಎಚ್ಚರ ಹಾಗೂ ಜಾಗರೂಕರಾಗಿ ವಾಹನ ಚಾಲನೆ ಮಾಡಬೇಕಿದೆ. ಏಕೆಂದರೆ, ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇಗುಲದಿಂದ ತುಸು ದೂರದಲ್ಲೇ 2 ಬೃಹತ್ ಬಂಡೆಗಳು (Boulder) ಅನಾಹುತಕ್ಕೆ ಬಾಯ್ತೆರೆದು ಕೂತಿವೆ.
ಬೃಹತ್ ಬಂಡೆಗಳ ಕೆಳಭಾಗದ ಮಣ್ಣು ಭಾರೀ ಮಳೆಗೆ ಕೊಚ್ಚಿ ಹೋಗಿದ್ದು ಎರಡು ಬಂಡೆಗಳು ಕೂದಲೆಳೆ ಅಂತರದಲ್ಲಿ ನಿಂತಂತಿದೆ. ಮತ್ತೆ ಮಳೆಯಾದರೇ ಅಥವಾ ಬಿರುಗಾಳಿಗೆ ಬಂಡೆಗಳು ಕುಸಿದು ಬೀಳುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಆ ಕಿರಿದಾದ ರಸ್ತೆಯಲ್ಲಿ (Charmadi Ghat Road) ಬಂಡೆಗಳು ಕುಸಿದು ಬಿದ್ದರೆ ಮತ್ತೊಂದು ಬದಿ ಪ್ರಪಾತವಿರುವುದರಿಂದ ರಸ್ತೆಯೇ ಕುಸಿಯುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕಪಟ್ಟಿದ್ದಾರೆ. ಇದನ್ನೂ ಓದಿ: ಟಿಬಿ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಪ್ಲಾನ್ – ಏನೇನು ತಯಾರಿ ನಡೆಯುತ್ತಿದೆ?
ಒಂದು ವೇಳೆ ಟ್ರಾಫಿಕ್ ಜಾಮ್, ಸೆಲ್ಫಿ ಕ್ರೇಜ್, ಇನ್ಯಾವುದೋ ಕಾರಣಕ್ಕೆ ಟ್ರಾಫಿಕ್ ಜಾಮ್ ಆದ ಸಂದರ್ಭದಲ್ಲಿ ಕೆಳಗಡೆ ವಾಹನಗಳು ಇದ್ದರೇ ದೊಡ್ಡ ಅನಾಹುತವೇ ಸಂಭವಿಸುವ ಸಾಧ್ಯತೆಯೂ ಇದೆ. ಹಾಗಾಗಿ, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅತ್ಯಂತ ಎಚ್ಚರದಿಂದಿರುವಂತೆ ಅಲ್ಲಿನ ಸ್ಥಳೀಯರೇ ಮನವಿ ಮಾಡುತ್ತಿದ್ದಾರೆ.
ಚಿಕ್ಕಮಗಳೂರು: ಉತ್ತರ ಕನ್ನಡದ ಶಿರೂರು (Shiruru Landslide), ಕೇರಳದ ವಯನಾಡು (Wayanad Landslide) ಪ್ರಕರಣ ಬೆನ್ನಲ್ಲೇ ಕಾಫಿನಾಡಿನ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಚಾರ್ಮಾಡಿ ಘಾಟ್ (Charmadi Ghat) ಆರಂಭದ ಸ್ಥಳವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ (Kottigehara Check Post) ಬಳಿ ಡಿಆರ್ ತುಡಿಯನ್ನು ನಿಯೋಜಿಸಿದೆ.
ನಿರಂತರ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು-ಮಂಗಳೂರಿಗೆ (Chikkamagaluru-Mangaluru) ಸಂಪರ್ಕ ಕಲ್ಪಿಸುವ ಬೆಟ್ಟಗುಡ್ಡಗಳ ಮಾರ್ಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಯಾವುದೇ ರೀತಿಯ ಅನಾಹುತ ಸಂಭವಿಸುವ ಸಾಧ್ಯತೆ ಇರುವುರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ವಯನಾಡು ಭೂಕುಸಿತ; ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಬೆಟ್ಟದಲ್ಲಿ ಕಾವಲಾಗಿ ನಿಂತ ಗಜರಾಜ
ಡಿಆರ್ ವ್ಯಾನ್‌ನಲ್ಲಿ ಯಾವಾಗಲೂ ಓರ್ವ ಅಧಿಕಾರಿ ಸೇರಿ 7-8 ಸಿಬ್ಬಂದಿ ಇರುತ್ತಾರೆ. ಒಂದು ವೇಳೆ ಭಾರೀ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಏನಾದರೂ ಅನಾಹುತ ಸಂಭವಿಸದರೆ ತಕ್ಷಣ ಅಲ್ಲಿನವರ ಸಹಾಯಕ್ಕೆ ಪೊಲೀಸರು ಅಲರ್ಟ್ ಅಗಲಿದ್ದಾರೆ. ಈ ಕಾರಣಕ್ಕೆ ಕೊಟ್ಟಿಗೆಹಾರದಲ್ಲೇ ಒಂದು ವ್ಯಾನ್ ನಿಯೋಜಿಸಿದ್ದಾರೆ.
ಈ ಮಾರ್ಗ ಬೆಟ್ಟ-ಗುಡ್ಡಗಳ ನಡುವೆ 22 ಕಿ.ಮೀ. ಸಾಗಬೇಕಾಗಿದ್ದು, ಅತ್ಯಂತ ಅಪಾಯಕಾರಿಯಾಗಿದೆ. 2019 ರಿಂದಲೂ ಪ್ರತಿ ವರ್ಷ ಚಾರ್ಮಾಡಿ ಘಾಟಿ ಕುಸಿತಕ್ಕೊಳಗಾಗುತ್ತಲೇ ಇದೆ. ಚಾರ್ಮಾಡಿ ಘಾಟಿಯ ಒಂದು ಬದಿ ಬೆಟ್ಟ-ಗುಡ್ಡಗಳಿಂದ ಕೂಡಿದ್ರೆ ಮತ್ತೊಂದು ಬದಿ ಸಾವಿರಾರು ಅಡಿ ಪ್ರಪಾತ. ಹೀಗಾಗಿ ಇಲ್ಲಿ ಪೊಲೀಸರು ಯಾವಾಗಲೂ ಸರ್ವ ಸನ್ನದ್ಧರಾಗಿದ್ದಾರೆ.
ಚಾರ್ಮಾಡಿ ಘಾಟಿಯಲ್ಲಿ 2019ರಲ್ಲಿ ಭಾರೀ ಭೂ ಕುಸಿತದಿಂದ 6 ತಿಂಗಳು ಬಂದ್ ಆಗಿತ್ತು. ಈ ವರ್ಷ ಸುರಿಯುತ್ತಿರುವ ಭಾರೀ ಮಳೆಗೆ ಮರಗಳು, ಗುಡ್ಡಗಳಲ್ಲಿ ಭೂ ಕುಸಿತ ಕೂಡ ಉಂಟಾಗುತ್ತಿದೆ. 2019ರಲ್ಲಿ ಭೂಕುಸಿತದ ಜಾಗದಲ್ಲಿ ಆಗಿದ್ದ ದುರಸ್ಥಿ ಕಾಮಗಾರಿ ಕೂಡ ಬಿರುಕು ಬಿಟ್ಟಿದೆ.
ಚಿಕ್ಕಮಗಳೂರು: ಮಲೆನಾಡಲ್ಲಿ ಮತ್ತೆ ಮಳೆಯ (Rain) ಅಬ್ಬರ ಹೆಚ್ಚಾಗಿದ್ದು, ಭಾರೀ ಗಾಳಿ ಮಳೆಯಿಂದ ಚಾರ್ಮಾಡಿ ಘಾಟಿಯ (Sringeri) ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ.
ರಸ್ತೆ ಬಂದ್ ಆಗಿರುವ ಪರಿಣಾಮ ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಮರ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.
ಮಹಲ್ಗೋಡು ಸೇತುವೆ ಜಲಾವೃತ
ಮಳೆಯ ಅಬ್ಬರದಿಂದ ಎನ್‌ಆರ್‌ಪುರ (NRPura) ತಾಲೂಕಿನ ಮಹಲ್ಗೋಡು ಸೇತುವೆ ಸಹ ಮುಳುಗಡೆಯಾಗಿದೆ. ಪರಿಣಾಮ ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಸೇತುವೆ ಜಾಲಾವೃತವಾಗಿದ್ದು ಜನ ಪರದಾಡುವಂತಾಗಿದೆ.
ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಬಂದ್
ಇನ್ನೂ ಶೃಂಗೇರಿಯ (Sringeri) ನೆಮ್ಮಾರು ಬಳಿ ಹೆದ್ದಾರಿ 169ರಲ್ಲಿ ತುಂಗಾ ನದಿ ಸೇತುವೆ ಮೇಲೆ ಹರಿಯುತ್ತಿದ್ದು, ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಇನ್ನೂ ನದಿಯ ಆರ್ಭಟ ಕಂಡು ವಾಹನ ಚಾಲಕರು ಭಯಗೊಂಡು ವಾಪಸ್ಸಾಗಿದ್ದಾರೆ.
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ (Charmadi Ghat) ಬಳಿಯ ನಿಷೇಧಿತ ಫಾಲ್ಸ್ ಒಂದರ ಬಳಿ ಪ್ರವಾಸಕ್ಕೆ ಬಂದಿದ್ದ ಯುವಕರು ಹುಚ್ಚಾಟ ಮಾಡಿದ್ದು, ಬಣಕಲ್ ಪೊಲೀಸರು (Banakal Police) ಯುವಕರ ಬಟ್ಟೆ ಹೊತ್ತೊಯ್ದು ಬುದ್ಧಿ ಕಲಿಸಿದ್ದಾರೆ.
ಇದರಿಂದ ಪೇಚೆಗೆ ಸಿಲುಕಿದ ಯುವಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಬಳಿಕ ಯುವಕರು ಇನ್ನೂ ಹೀಗೆ ಮಾಡುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ. ಬಳಿಕ ಪೊಲೀಸರು ಬಟ್ಟೆ ಕೊಟ್ಟು ಬುದ್ಧಿವಾದ ಹೇಳಿ ಕಳಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಜಿಲ್ಲೆಯ ಫಾಲ್ಸ್ ಒಂದರ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ. ಇನ್ನೂ ಶಿವಮೊಗ್ಗ ಜಿಲ್ಲೆಯ ಫಾಲ್ಸ್ ಒಂದರ ಬಳಿಯೂ ಮುಂಗಾರು ಆರಂಭದಲ್ಲಿ ಇದೇ ರೀತಿಯ ದುರ್ಘಟನೆ ಸಂಭವಿಸಿತ್ತು. ಇದನ್ನೂ ಓದಿ: ಮುಂದಿನ 25 ವರ್ಷದಲ್ಲಿ ಕಾವೇರಿ ಕೊಳ್ಳದಲ್ಲಿ ನೀರಿನ ತೀವ್ರ ಕೊರತೆ: ನೀತಿ ಆಯೋಗ