Tag: charminar

  • Hyderabad Fire | ಕಾಪಾಡಲು ಹೋಗಿದ್ದ ತಾಯಿ ಮಕ್ಕಳನ್ನು ಅಪ್ಪಿಕೊಂಡೇ ಸುಟ್ಟು ಕರಕಲು!

    Hyderabad Fire | ಕಾಪಾಡಲು ಹೋಗಿದ್ದ ತಾಯಿ ಮಕ್ಕಳನ್ನು ಅಪ್ಪಿಕೊಂಡೇ ಸುಟ್ಟು ಕರಕಲು!

    – ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಹೈದರಾಬಾದ್: ಚಾರ್‌ಮಿನಾರ್(Charminar) ಬಳಿಯಿರುವ ಗುಲ್ಜಾರ್ ಹೌಸ್‌ನಲ್ಲಿ(Gulzar House) ಬೆಂಕಿ ಅವಘಡ ಸಂಭವಿಸಿ, 17 ಮಂದಿ ಸಜೀವ ದಹನವಾಗಿರುವ ಘಟನೆ ಹೈದರಾಬಾದ್‌ನಲ್ಲಿ(Hyderabad) ನಡೆದಿದೆ. ಈ ದುರ್ಘಟನೆ ವೇಳೆ ಒರ್ವ ಮಹಿಳೆ ತನ್ನ ಮಕ್ಕಳನ್ನ ಬೆಂಕಿಯಿಂದ ರಕ್ಷಿಸುವ ಕೊನೆಯ ಪ್ರಯತ್ನದಲ್ಲಿ ಅಪ್ಪಿಕೊಂಡಿದ್ದಳು. ಆದ್ರೆ ಆ ಕೊನೆಯ ಅಪ್ಪುಗೆಯಲ್ಲೇ ತಾಯಿ ಮಕ್ಕಳು ಸಜೀವ ದಹನವಾದ ಹೃದಯ ವಿದ್ರಾವಕ ಪ್ರಸಂಗವನ್ನ ಪ್ರತ್ಯಕ್ಷದರ್ಶಿಯೊಬ್ಬರು ಬಿಚ್ಚಿಟ್ಟರು.

    ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಸ್ವಲ್ಪ ಸಮಯದಲ್ಲೇ ತಾಯಿಯೊಬ್ಬಳು ತನ್ನ ಮಕ್ಕಳ ರಕ್ಷಣೆಗಾಗಿ ಓಡಿದ್ದಾಳೆ.. ಮಕ್ಕಳನ್ನ ಅಪ್ಪಿಕೊಂಡಿದ್ದಾಳೆ.. ಆದ್ರೆ ಅಪ್ಪಿಕೊಂಡೇ ಸುಟ್ಟು ಕರಕಲಾಗಿದ್ದಾಳೆ ಎಂದು ಪ್ರತ್ಯಕ್ಷದರ್ಶಿ ಜಹೀರ್ ಕಹಿ ಘಟನೆಯನ್ನ ವಿವರಿಸಿದ್ರು. ಇದನ್ನೂ ಓದಿ: Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 17 ಮಂದಿ ಸಜೀವ ದಹನ

    ಬೆಂಕಿಯ ಜ್ವಾಲೆಗೆ ಒಳಗೆ ಹೋಗುವುದು ತುಂಬಾ ಕಷ್ಟಕರವಾಗಿತ್ತು. ಹೊಗೆಯಿಂದಾಗಿ ನಮಗೆ ಏನೂ ಕಾಣಿಸುತ್ತಿರಲಿಲ್ಲ. ಗೋಡೆಗಳನ್ನು ಒಡೆದು ಒಳಗೆ ಹೋಗಲು ಹೋದೆವು. ಅಷ್ಟರಲ್ಲಾಗಲೇ ಕಟ್ಟಡದ ಒಳಗಿದ್ದವರು ಸುಟ್ಟುಹೋಗಿದ್ದರು ಎಂದು ಘಟನೆಯನ್ನು ವಿವರಿಸಿದರು. ಇದನ್ನೂ ಓದಿ: ಪಾಕಿಸ್ತಾನದ ಮುಂಡೆವನ್ನ ನಿಂಬೆಹಣ್ಣು ಹಿಂಡಿದ ಹಾಗೆ ಹಿಂಡಬಹುದು: ಸಿಎಂ ಇಬ್ರಾಹಿಂ

    ಈ ಅಗ್ನಿ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು(Narendra Modi) ಎಕ್ಸ್ ಮೂಲಕ ಸಂತಾಪ ಸೂಚಿಸಿದ್ದಾರೆ. ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಮೃತರ ಕುಟುಂಕ್ಕೆ ಪಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಮೇ 21 ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ

    ಗುಲ್ಜಾರ್ ಹೌಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಕಿಷನ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 17 ಮಂದಿ ಸಜೀವ ದಹನ

    Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 17 ಮಂದಿ ಸಜೀವ ದಹನ

    – ಉಸಿರಾಟ ತೊಂದರೆಯಾಗಿ 16ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಹೈದರಾಬಾದ್: ಚಾರ್‌ಮಿನಾರ್ (Charminar) ಬಳಿಯಿರುವ ಗುಲ್ಜಾರ್ ಹೌಸ್‌ನಲ್ಲಿ (Gulzar House) ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 17 ಮಂದಿ ಸಜೀವ ದಹನವಾಗಿರುವ ಘಟನೆ ಹೈದರಾಬಾದ್‌ನಲ್ಲಿ (Hyderabad) ನಡೆದಿದೆ.

    ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿದೆ. ಗುಲ್ಜಾರ್ ಹೌಸ್‌ನಲ್ಲಿ 30ಕ್ಕೂ ಹೆಚ್ಚು ಮಂದಿ ಇರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಅವಘಡದ ಪರಿಣಾಮ ಉಸಿರಾಟದ ತೊಂದರೆಯಿಂದಾಗಿ 16ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ರಾಜೇಂದ್ರ ಕುಮಾರ್ (67), ಅಭಿಷೇಕ್ ಮೋದಿ, ಸುಮಿತ್ರಾ, ಮುನ್ನಿಬಾಯ್, ಆರುಷಿ ಜೈನ್, ಶೀತಲ್ ಜೈನ್, ಇರಾಜ್ ಹಾಗೂ ಅರ‍್ಷಾದಿ ಗುಪ್ತಾ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್‌ನಲ್ಲಿ ನಿಗೂಢ ಸಾವು

    ಗುಲ್ಜಾರ್ ಹೌಸ್‌ನ ಮೊದಲ ಮಹಡಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಕಿಷನ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ನಿಂದ ಕಾರ್ಯಾಚರಣೆ ಮುಂದುವರಿದಿದೆ. ಸಿಎಂ ರೇವಂತ್ ರೆಡ್ಡಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ – ಜಿಎಸ್‌ ಸೂಟ್ಸ್‌ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಬಂಧನ

  • ಚಾರ್‌ಮಿನಾರ್ ಬಳಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೊಡಿ- ಕಾಂಗ್ರೆಸ್ ನಾಯಕನಿಂದ ಸಹಿ ಸಂಗ್ರಹ ಅಭಿಯಾನ

    ಚಾರ್‌ಮಿನಾರ್ ಬಳಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೊಡಿ- ಕಾಂಗ್ರೆಸ್ ನಾಯಕನಿಂದ ಸಹಿ ಸಂಗ್ರಹ ಅಭಿಯಾನ

    ನವದೆಹಲಿ: ಹೈದರಾಬಾದ್‍ನ ಹೃದಯ ಭಾಗದಲ್ಲಿರುವ ಚಾರ್‌ಮಿನಾರ್ ಬಳಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ರಷೀದ್ ಖಾನ್ ಸಹಿ ಸಂಗ್ರಹ ಅಭಿಯಾನ ಶುರು ಮಾಡಿದ್ದಾರೆ. ಈ ಅಭಿಯಾನಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ತೆಲಂಗಾಣದಲ್ಲಿ ಹೊಸ ವಿವಾದಕ್ಕೆ ನಾಂದಿಯಾಗಿದೆ.

    ಭಾರತೀಯ ಪುರಾತತ್ವ ಸರ್ವೇಕ್ಷಣಾ ವ್ಯಾಪ್ತಿಯಲ್ಲಿರುವ ಚಾರ್ ಮಿನಾರ್ ಬಳಿ ಈ ಹಿಂದೆ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗಿತ್ತು. ಎರಡು ದಶಕಗಳ ಹಿಂದಿನಿಂದ ಇಲ್ಲಿ ಪ್ರಾರ್ಥನೆಗೆ ಅವಕಾಶ ಕಲ್ಪಿಸಿ ಕೊಡುತ್ತಿಲ್ಲ ಎಂದು ರಷೀದ್ ಖಾನ್ ಹೇಳಿದ್ದಾರೆ.

    ಚಾರ್ ಮಿನಾರ್‌ನಲ್ಲಿ ಮೊದಲು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಇದೇ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ಪ್ರಾರ್ಥನೆ ಸಲ್ಲಿಸಲು ನಿರಾಕರಿಸಲಾಗುತ್ತಿದೆ ಎಂದು ಮೌಲಾನಾ ಅಲಿ ಕ್ವಾದ್ರಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಭಾರತದ ರಾಷ್ಟ್ರೀಯ ದೇವಾಲಯವಾಗಲಿದೆ: ಯೋಗಿ ಆದಿತ್ಯನಾಥ್

    ಈಗ ಸಹಿ ಸಂಗ್ರಹ ಅಭಿಯಾನ ಆರಂಭಿಸಿರುವ ರಷೀದ್ ಖಾನ್, ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಪುರಾತತ್ವ ಇಲಾಖೆಗೆ ಮನವಿ ಮಾಡಿದ್ದಾರೆ. ಒಂದು ವೇಳೆ ಅವಕಾಶ ನೀಡದಿದ್ದಲ್ಲಿ ಧರಣಿ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಪ್ರಾರ್ಥನೆಗೆ ಅವಕಾಶ ನೀಡಿದಂತೆ ಪ್ರತ್ಯೇಕ ಪತ್ರ ಬರೆಯಲಾಗಿದೆ. ಇದನ್ನೂ ಓದಿ: ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದು: ಯುಪಿ ಸರ್ಕಾರ