Tag: Check Post

  • ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ – ಕೂದಲೆಳೆ ಅಂತರದಲ್ಲಿ ಸಿಬ್ಬಂದಿ ಪಾರು

    ಚುನಾವಣಾ ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ – ಕೂದಲೆಳೆ ಅಂತರದಲ್ಲಿ ಸಿಬ್ಬಂದಿ ಪಾರು

    ರಾಮನಗರ: ಚುನಾವಣಾ ಚೆಕ್ ಪೋಸ್ಟ್‌ಗೆ (Election Chek Post) ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಕೋಲೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ.

    ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್‌ ಪೋಸ್ಟ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್‌ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಪಾರಾಗಿದ್ದಾರೆ.  ಇದನ್ನೂ ಓದಿ: ಏಳೆಂಟು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ : ರಾಜನಾಥ್‌ ಸಿಂಗ್‌

    ಚಾಲಕ ಮದ್ಯಪಾನ ಮಾಡಿ ಲಾರಿ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • ಬರೋಬ್ಬರಿ 5 ಕೋಟಿ ಮೌಲ್ಯದ ದಾಖಲೆ ಇಲ್ಲದ ಚಿನ್ನಾಭರಣ ವಶಕ್ಕೆ

    ಬರೋಬ್ಬರಿ 5 ಕೋಟಿ ಮೌಲ್ಯದ ದಾಖಲೆ ಇಲ್ಲದ ಚಿನ್ನಾಭರಣ ವಶಕ್ಕೆ

    ಧಾರವಾಡ: ಸೂಕ್ತ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7 ಕೆಜಿ 700 ಗ್ರಾಂ ತೂಕದ ಚಿನ್ನಾಭರಣಗಳನ್ನು (Gold Jewellery) ಧಾರವಾಡ (Dharwad) ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆದಿದ್ದಾರೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮನವಿ

    ಬೆಳಗಾವಿ ಕಡೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಬಿವಿಸಿ ಎಂಬ ಲಾಜಿಸ್ಟಿಕ್ ವಾಹನದಲ್ಲಿ ಈ ಚಿನ್ನಾಭಾರಣ ಸಾಗಿಸಲಾಗುತ್ತಿತ್ತು. ಮಲಬಾರ್, ಜೋಯಾಲುಕಾಸ್, ಕಲ್ಯಾಣ್ ಜ್ಯುವೆಲರ್ಸ್ ಸೇರಿದಂತೆ ಇತರ ಚಿನ್ನಾಭರಣಗಳನ್ನು ಗರಗ ಠಾಣೆ ಪೊಲೀಸರು ವಶಪಡಿಸಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ: ಜನರಲ್ಲಿ ಸುದೀಪ್‌ ಮನವಿ

  • ಶಾಸಕರ ಪುತ್ರನ ಕಾರನ್ನು ತಪಾಸಣೆ ಮಾಡದೆ ಬಿಟ್ಟು ಕಳಿಸಿದ ಚೆಕ್ ಪೋಸ್ಟ್ ಸಿಬ್ಬಂದಿ

    ಶಾಸಕರ ಪುತ್ರನ ಕಾರನ್ನು ತಪಾಸಣೆ ಮಾಡದೆ ಬಿಟ್ಟು ಕಳಿಸಿದ ಚೆಕ್ ಪೋಸ್ಟ್ ಸಿಬ್ಬಂದಿ

    – ತರಾಟೆಗೆ ತೆಗೆದುಕೊಂಡ ತಹಶೀಲ್ದಾರ್

    ಚಿಕ್ಕೋಡಿ: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ (Assembly Election) ಹಿನ್ನೆಲೆ ನೀತಿ ಸಂಹಿತೆ (Code of Conduct) ಜಾರಿಯಲ್ಲಿದೆ. ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಚುನಾವಣೆ ಆಯೋಗದ ಪ್ರತಿ ತಾಲೂಕಿನ ಸರಹದ್ದಿನಲ್ಲಿ ಚೆಕ್ ಪೋಸ್ಟ್ (Check Post) ನಿರ್ಮಿಸಿ ಪ್ರತಿಯೊಂದು ವಾಹನ ಹಾಗೂ ವ್ಯಕ್ತಿಗಳ ಮೇಲೆ ಅಧಿಕಾರಿಗಳು ನಿಗಾ ಇಡುವಂತೆ ಸೂಚನೆ ನೀಡಲಾಗುತ್ತಿದೆ. ಇದನ್ನು ಕಟ್ಟುನಿಟ್ಟಿನಿಂದ ರಾಜ್ಯಾದ್ಯಂತ ಅಧಿಕಾರಿಗಳು ಪಾಲನೆ ಮಾಡುತ್ತಿದ್ದಾರೆ. ಆದರೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಅವರ ಪುತ್ರನ ಕಾರನ್ನು ಅಧಿಕಾರಿಗಳು ಪರಿಶೀಲನೆ ಮಾಡದೆ ಕರ್ತವ್ಯ ಲೋಪ ಎಸಿಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಥಳದಲ್ಲಿದ್ದ ಚೆಕ್ ಪೋಸ್ಟ್ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ.

    ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಹೊರವಲಯದ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಮಧ್ಯದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದು, ಇಲ್ಲಿ ಪ್ರತಿಯೊಂದು ವಾಹನಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಅವರ ಪುತ್ರ ಶ್ರೀನಿವಾಸ ಪಾಟೀಲ್ ಆಗಮಿಸುತ್ತಿದ್ದಂತೆ ಅಧಿಕಾರಿಗಳು ಅವರ ಕಾರನ್ನು ಪರಿಶೀಲನೆ ಮಾಡದೆ ಹಾಗೆ ಬಿಟ್ಟಿದ್ದಾರೆ. ಇದರಿಂದ ಕೆಲವು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೇಲಾಧಿಕಾರಿಗಳಿಗೆ ಮೌಖಿಕವಾಗಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಾಗವಾಡ ತಹಶೀಲ್ದಾರ್ ಎಂಎಂ ಬಳೇಗಾರ ಆಗಮಿಸಿ ಕರ್ತವ್ಯದಲ್ಲಿದ್ದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು

    ಕಾಗವಾಡ ಶಾಸಕರ ಮನೆ ಮಹಾರಾಷ್ಟ್ರದ ಸಾಂಗ್ಲಿ ನಗರದಲ್ಲಿ ಇದೆ. ಇದರಿಂದ ಕಾಗವಾಡ ಸಾಂಗ್ಲಿಯಲ್ಲಿ ದಿನನಿತ್ಯ ಅವರು ಸಂಚಾರ ಬೆಳೆಸುವುದರಿಂದ ಅಧಿಕಾರಿಗಳು ಅವರ ಕಾರು ತಪಾಸಣೆಗೆ ಮುಂದೆ ಹೋಗಿರಲಿಲ್ಲ. ಇದರಿಂದ ಕೆಲವು ಸ್ಥಳೀಯರು ಅಸಮಾಧಾನಗೊಂಡಿದ್ದಾರೆ. ಕಾನೂನು ಎಲ್ಲರಿಗೂ ಸಮನಾಗಿದೆ. ಇಲ್ಲಿ ರಾಜಕೀಯ ಮಕ್ಕಳಿಗೆ ಬೇರೆ ಕಾನೂನು ಇಲ್ಲ ಎಂದು ಹಿರಿಯ ಅಧಿಕಾರಿಗಳನ್ನು ಕೆಲವು ಸ್ಥಳೀಯರು ತರಾಟೆ ತೆಗೆದುಕೊಂಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಕಾಗವಾಡ ತಹಶೀಲ್ದಾರ್ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಕೆ ಶಾಸಕರ ಮಗನ ವಾಹನವನ್ನು ತಪಾಸಣೆ ಮಾಡಿಲ್ಲ? ನಿಮಗೆ ನೋಟಿಸ್ ನೀಡಲಾಗುವುದು. ಪ್ರತಿಯೊಂದು ವಾಹನ ತಪಾಸಣೆ ಮಾಡುವಂತೆ ನಿಮಗೆ ಈಗಾಗಲೇ ಹೇಳಿದ್ದೇವೆ. ಆದರೂ ನೀವು ಕರ್ತವ್ಯ ಲೋಪ ಮಾಡಿದ್ದೀರಿ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾರ್ಕಳ ಅಖಾಡದಲ್ಲಿ ಮುಟ್ಟಾಳ ಫೈಟ್- ಮುತಾಲಿಕ್ ಪೋಸ್ಟರ್‌ಗೆ ಬಿಜೆಪಿ ಕೌಂಟರ್

  • ಹಣ ಕೊಡದಿದ್ರೆ ಗನ್‍ನಲ್ಲಿ ಶೂಟ್ ಮಾಡೋ ಬೆದರಿಕೆ- 100 ರೂ. ಕೊಡುವಂತೆ ಲಾರಿ ಚಾಲಕನಿಗೆ ಡಿಮ್ಯಾಂಡ್

    ಹಣ ಕೊಡದಿದ್ರೆ ಗನ್‍ನಲ್ಲಿ ಶೂಟ್ ಮಾಡೋ ಬೆದರಿಕೆ- 100 ರೂ. ಕೊಡುವಂತೆ ಲಾರಿ ಚಾಲಕನಿಗೆ ಡಿಮ್ಯಾಂಡ್

    ಚಾಮರಾಜನಗರ: ಸರ್ಕಾರಿ ಅಧಿಕಾರಿಗಳು ಕದ್ದುಮುಚ್ಚಿ ಲಂಚ ಪಡೆಯುವುದು ಕಾಮನ್ ಆಗಿದೆ. ಆದರೆ ಇಲ್ಲೊಬ್ಬ ಸರ್ಕಾರಿ ನೌಕರ ಬಹಿರಂಗವಾಗಿ ಲಂಚ ಕೇಳಿದ್ದು, ಅಲ್ಲದೇ ಲಂಚ ಕೊಡದೇ ಹೋದರೆ ಶೂಟ್ ಮಾಡುವುದಾಗಿ ಬೆದರಿಸಿರುವ ಘಟನೆ ನಡೆದಿದೆ.

    ಚೆಕ್‍ಪೋಸ್ಟ್ ಮುಖಾಂತರ ಓಡಾಡುವ ವಾಹನಗಳನ್ನು ಪರಿಶೀಲನೆ ನಡೆಸುವುದು. ವಾಹನಗಳಲ್ಲಿ ಅಕ್ರಮ ಸಾಗಾಟ ಕಂಡರೇ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸುವುದು ಚೆಕ್‌ಪೋಸ್ಟ್‌ನಲ್ಲಿರುವ ಸಿಬ್ಬಂದಿ ಕೆಲಸವಾಗಿತ್ತು. ಆದರೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಕರ್ನಾಟಕ ಮತ್ತು ತಮಿಳುನಾಡು ಗಡಿ ಪಾಲಾರ್‌ನಲ್ಲಿ ಚೆಕ್‍ಪೋಸ್ಟ್‌ವೊಂದರಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ಸಿಬ್ಬಂದಿ ಇಲ್ಲಿ ಓಡಾಡುವ ವಾಹನಗಳನ್ನು ತಪಾಸಣೆ ಮಾಡುವುದು ಬಿಟ್ಟು ಲಂಚ ವಸೂಲಿ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಚೆಕ್‍ಪೋಸ್ಟ್ ಸಿಬ್ಬಂದಿಯೋರ್ವ ಲಂಚ ಕೇಳುವುದನ್ನು ಲಾರಿ ಚಾಲಕರೊಬ್ಬರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಪಾಲಾರ್ ಚೆಕ್‍ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೋಹನ್ ಎಂಬಾತ ಲಾರಿಗಳನ್ನು ಪರಿಶೀಲನೆ ಮಾಡುವ ನೆಪದಲ್ಲಿ ಚಾಲಕರಿಂದ ಹಣ ಕೇಳಿದ್ದಾನೆ. 30 ರೂಪಾಯಿ ನೀಡಿದರೂ, 100 ರೂಪಾಯಿ ಕೊಡುವಂತೆ ಒತ್ತಾಯ ಮಾಡಿದ್ದಾನೆ. ಈ ವೇಳೆ ಲಾರಿ ಚಾಲಕ ಹಾಗೂ ಮೋಹನ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಹಣ ಕೊಡದೇ ಹೋದಲ್ಲಿ ಸಿಬ್ಬಂದಿ ಮೋಹನ್ ಗನ್‍ನಿಂದ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯಲಾಗಿದೆ. ಇದನ್ನೂ ಓದಿ: ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರಷ್ಟೇ ಹಿಂದೂಗಳು ಸೇಫ್: ಸಿದ್ದಲಿಂಗ ಸ್ವಾಮೀಜಿ

    POLICE JEEP

    ಘಟನೆ ಸಂಬಂಧಿಸಿ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಸಂತೋಷ್‍ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮೋಹನ್‌ ಕಾವೇರಿ ವನ್ಯಜೀವಿ ವಿಭಾಗದ ಸಿಬ್ಬಂದಿ. ಪ್ರಭಾರಿಯಾಗಿ ಪಾಲಾರ್ ಚೆಕ್‍ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ. ವಿಷಯ ತಿಳಿದ ಕೂಡಲೇ ಆತನನ್ನು ಅಲ್ಲಿಂದ ತೆಗೆಯಲಾಗಿದೆ. ಮತ್ತು ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾವೇರಿ ವನ್ಯಜೀವಿ ವಿಭಾಗದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು. ಸದ್ಯ ಲಂಚ ಕೇಳಿದ ಮೋಹನ್‍ನನ್ನು ಚೆಕ್‍ಪೋಸ್ಟ್ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಇದನ್ನೂ ಓದಿ: ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ ಪ್ರಮಾಣವಚನ ಬೋಧಿಸಿದ ರಾಜ್ಯಪಾಲರು

    Live Tv
    [brid partner=56869869 player=32851 video=960834 autoplay=true]

  • ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!

    ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!

    ತಿರುನಂತಪುರಂ: ಅಧಿಕಾರಿಗಳು ಹಣದ ಜೊತೆಗೆ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಪ್ರಕರಣ ಕೇರಳದ ವಲಯಾರ್ ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.

    ಅಧಿಕಾರಿಗಳು ಲಾರಿಗಳ ಮೂಲಕ ಬರುತ್ತಿದ್ದ ಕುಂಬಳಕಾಯಿ, ಕಿತ್ತಳೆಯಂತಹ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಸ್ವೀಕರಿಸುತ್ತಿದ್ದರು. ಲಂಚವಾಗಿ ದೊರೆತ ಆ ತರಕಾರಿ ಮತ್ತು ಹಣ್ಣುಗಳನ್ನು ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹಂಚಿಕೊಳ್ಳುತ್ತಿದ್ದರು.

    ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಇದರಿಂದಾಗಿ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಅಧಿಕಾರಿಗಳ ಮತ್ತು ಸಿಬ್ಬಂದಿ ಚಲಾಕಿತನದ ಬಗ್ಗೆ ಸುಳಿವು ಪಡೆದುಕೊಂಡ ಡಿವೈಎಸ್‌ಪಿ ಮತ್ತು ತಂಡ ಶಬರಿಮಲೆಗೆ ತೆರಳುವಂತೆ ನಟಿಸಿ ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ಲಾರಿ, ಬಸ್ ಮುಖಾಮುಖಿ ಡಿಕ್ಕಿ- 6 ಮಂದಿ ಸ್ಥಳದಲ್ಲೇ ಸಾವು

    ಕೇರಳದ ಪಲಕ್ಕಾಡ್ ಜಿಲ್ಲೆಯ ವಿಜಿಲೆನ್ಸ್ ಡಿವೈಎಸ್‌ಪಿ ಎಸ್.ಶಂಸುದ್ದೀನ್ ನೇತೃತ್ವದ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ ಸಂದರ್ಭದಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಜೊತೆಗೆ 69,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಜಾರ್ಖಂಡ್‍ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

     

  • ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಚಾಲಕ ಸಾವು

    ಚೆಕ್ ಪೋಸ್ಟ್‌ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಚಾಲಕ ಸಾವು

    ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚೆಕ್  ಪೋಸ್ಟ್‌ಗೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಕ್ತಿನಗರ ಬಳಿ ನಡೆದಿದೆ.

    ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚೆಕ್ ಪೋಸ್ಟ್ ನಾಶವಾಗಿದೆ. ಚಾಲಕನ ಸಹಾಯಕನಿಗೆ ಗಂಭೀರ ಗಾಯಗಳಾಗಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಟೈಯರ್ ಬ್ಲಾಸ್ಟ್ ಆಗಿರುವುದರಿಂದ ಚಾಲಕನಿಗೆ ಲಾರಿಯ ನಿಯಂತ್ರಣ ತಪ್ಪಿ, ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮದ್ಯ ಸೇವಿಸಿ ಯದ್ವಾತದ್ವಾ ಲಾರಿ ಓಡಿಸಿದ ಚಾಲಕ- ಸಾರ್ವಜನಿಕರಿಂದ ಆಕ್ರೋಶ

    ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕನ ದೇಹ ಎರಡು ತುಂಡಾಗಿದ್ದು, ಇಡೀ ಚೆಕ್ ಪೋಸ್ಟ್ ಸಂಪೂರ್ಣ ನಾಶವಾಗಿದೆ. ಚಾಲಕನ ಮೃತದೇಹವನ್ನು ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಇದನ್ನೂ ಓದಿ: ಲಸಿಕೆ ಪ್ರಮಾಣ ಹೆಚ್ಚಳ – ಯಾದಗಿರಿ ಜಿಲ್ಲಾಡಳಿತದ ಪ್ಲ್ಯಾನ್ ಯಶಸ್ವಿಯಾಗಿದ್ದು ಹೇಗೆ?

     

  • ಕೊರೊನಾ ನೆಗೆಟಿವ್ ವರದಿ ಇಲ್ಲದ ಒಂದು ವಾಹನ ಬಿಟ್ಟರೂ ಸಸ್ಪೆಂಡ್: ಸೋಮಶೇಖರ್

    ಕೊರೊನಾ ನೆಗೆಟಿವ್ ವರದಿ ಇಲ್ಲದ ಒಂದು ವಾಹನ ಬಿಟ್ಟರೂ ಸಸ್ಪೆಂಡ್: ಸೋಮಶೇಖರ್

    ಚಾಮರಾಜನಗರ: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಒಂದು ವಾಹನವನ್ನು ಜಿಲ್ಲೆಯೊಳಗೆ ಬಿಟ್ಟರೂ ಸಸ್ಪೆಂಡ್ ಮಾಡಬೇಕಾಗುತ್ತೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ತಮಿಳುನಾಡು-ಕರ್ನಾಟಕ ಚೆಕ್ ಪೋಸ್ಟ್ ಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿ ಭಾಗದ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ್ದ ಸಚಿವ ಸೋಮಶೇಖರ್ ಕೊರೊನಾ ನೆಗೆಟಿವ್ ವರದಿ ಇಲ್ಲದಿದ್ದರೆ ಗಡಿಯಿಂದ ವಾಪಸ್ ಕಳುಹಿಸಿ ಎಂದು ತಿಳಿಸಿದರು.

    ನಾನು ಯಾವ ಸಮಯದಲ್ಲಿ ಬೇಕಾದರೂ ಬಂದು ಪರಿಶೀಲನೆ ನಡೆಸುತ್ತೇನೆ. ಚೆಕ್ ಪೋಸ್ಟ್ ದಾಟಿ ಬಂದ ವಾಹನವನ್ನು ಪರಿಶೀಲಿಸಿದಾಗ ನೆಗೆಟಿವ್ ವರದಿ ಇಲ್ಲದಿದ್ದರೆ ನೀವೇ ಜವಾಬ್ದಾರರು. ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು. ಕಟ್ಟುನಿಟ್ಟಿನ ಬಂದೋಬಸ್ತ್ ಮಾಡಬೇಕು ಎಂದು ಸಚಿವ ಸೋಮಶೇಖರ್ ಖಡಕ್ ಸೂಚನೆ ನೀಡಿದರು.

  • ಕೇರಳದಲ್ಲಿ ಕೊರೊನಾ ಹೆಚ್ಚಳ- ಕೊಡಗು ಗಡಿಗಳಲ್ಲಿ ಹೈಅಲರ್ಟ್

    ಕೇರಳದಲ್ಲಿ ಕೊರೊನಾ ಹೆಚ್ಚಳ- ಕೊಡಗು ಗಡಿಗಳಲ್ಲಿ ಹೈಅಲರ್ಟ್

    ಮಡಿಕೇರಿ: ಪಕ್ಕದ ಕೇರಳ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಕೇರಳ-ಕೊಡಗು ಗಡಿಭಾಗದಲ್ಲಿ ಅರೋಗ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಕೇರಳದಿಂದ ಬರುವವರಿಗೆ ತಪಾಸಣೆ ಮಾಡಲು ಮುಂದಾಗಿದೆ.

    ಕೇರಳದಿಂದ ಹಾಗೂ ಕರ್ನಾಟಕದಿಂದ ಕೇರಳಕ್ಕೆ ಹೋಗಿ ಬರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಗಡಿ ಭಾಗದಲ್ಲೇ ಇದಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ನೆಗೆಟಿವ್ ವರದಿ, ಇಲ್ಲವೇ ಕನಿಷ್ಠ ಒಂದು ಡೋಸ್ ಪಡೆದಿರುವ ವ್ಯಾಕ್ಸಿನ್ ಸರ್ಟಿಫಿಕೇಟ್ ಕಡ್ಡಾಯವಾಗಿದೆ. ಇಲ್ಲದಿದ್ದರೆ ಕರ್ನಾಟಕಕ್ಕೆ ಪ್ರವೇಶ ನಿರ್ಬಂಧಿಸಲಾಗುತ್ತಿದೆ. ಗಡಿಯಲ್ಲೇ ಹಲವರನ್ನು ವಾಪಸ್ ಕಳುಹಿಸುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಕುಟ್ಟ ಚಕ್ ಪೋಸ್ಟ್ ನಲ್ಲಿ ಈ ದೃಶ್ಯ ಕಂಡು ಬರುತ್ತಿದೆ. ಕೇರಳದಿಂದ ಯಾರೇ ಬಂದರೂ ಕೋವಿಡ್ ನೆಗೆಟಿವ್ ವರದಿ, ಇಲ್ಲವೆ ವ್ಯಾಕ್ಸಿನ್ ಸರ್ಟಿಫಿಕೇಟ್ ಕಡ್ಡಾಯವಾಗಿದೆ.

    ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ ಸರಿಯಾಗಿ ತಪಾಸಣೆ ಆಗುತ್ತಿರುವ ಕುರಿತು ಪರಿಶೀಲನೆ ನಡೆಸಲು ಡಿಎಚ್‍ಓ ಡಾ.ಮೋಹನ್ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಅವರು, ಕೊಡಗಿನ ಮಾಕುಟ್ಟ, ಕುಟ್ಟ, ಕರಿಕೆ ಮೂರು ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹೆಚ್ಚಾಗಿ ವಿರಾಜಪೇಟೆ ತಾಲೂಕಿನ ಮಾಕುಟ್ಟ ಚೆಕ್ ಪೋಸ್ಟ್ ಗೂಡ್ಸ್ ಚಾಲಕರಿಗೆ 15 ದಿನಕ್ಕೊಮ್ಮೆ ಕೋವಿಡ್ ಟೆಸ್ಟ್ ಕಡ್ಡಾಯ, ಕೇರಳಕ್ಕೆ ನಿತ್ಯ ಓಡಾಡುವ ಗೂಡ್ಸ್ ಚಾಲಕರು ಸ್ಥಳದಲ್ಲಿಯೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಅನುಕೂಲ ಕಲ್ಪಿಸಲಾಗಿದೆ.

  • ಬಕ್ರೀದ್- ಜಾನುವಾರು ಅಕ್ರಮ ಸಾಗಣಿಕೆ ತಡೆಗೆ ಚೆಕ್ ಪೋಸ್ಟ್

    ಬಕ್ರೀದ್- ಜಾನುವಾರು ಅಕ್ರಮ ಸಾಗಣಿಕೆ ತಡೆಗೆ ಚೆಕ್ ಪೋಸ್ಟ್

    ಯಾದಗಿರಿ: ಬಕ್ರೀದ್ ಹಬ್ಬದ ಹಿನ್ನಲೆ ಜಾನುವಾರು ಅಕ್ರಮ ಸಾಗಣೆಕೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾಡಳಿತ ಸಭಾಂಗಣದ ಕಚೇರಿಯಲ್ಲಿ ಶನಿವಾರ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

    ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಬಕ್ರೀದ್ ಹಬ್ಬ ಸಂದರ್ಭದಲ್ಲಿ ಮಸೀದಿಗಳಲ್ಲಿ 50 ಜನ ಸೇರುವ ಬದಲು, ಆಯಾ ಮಸೀದಿ ಸಾಮರ್ಥ್ಯದ ಶೇ.50ರಷ್ಟು ಮಂದಿಗೆ ಸಾಮೂಹಿಕ ಪ್ರಾರ್ಥನೆ ಮಾಡಲು ಅವಕಾಶ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪರಿಷ್ಕೃತ ಅದೇಶ ಹೊರಡಿಸಿದೆ. ಅದೇ ರೀತಿ ಪರಸ್ಪರ 6 ಆಡಿ ಅಂತರ, ಮಾಸ್ಕ್ ಕಡ್ಡಾಯ ಮತ್ತಿತರ ಅಂಶಗಳನ್ನು ಪಾಲಿಸಬೇಕು. ಹಸ್ತಲಾಘವ, ಪರಸ್ಪರ ಆಲಿಂಗನ ಮತ್ತಿತರ ಪ್ರಕ್ರಿಯೆಗಳನ್ನು ನಿರ್ಬಂಧಿಸಬೇಕು ಎಂದು ಹೇಳಿದರು.

    ಬಳಿಕ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಮಾತನಾಡಿ, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರನ್ವಯ ಯಾವುದೇ ರೀತಿಯ ಜಾನುವಾರುಗಳ ಹತ್ಯೆ ಮಾಡುವಂತಿಲ್ಲ ಎಂದು ಹೇಳಿದರು. ಜಾನುವಾರು ಅಕ್ರಮ ಸಾಗಣಿಕೆ ಕಾನೂನು ಬಾಹಿರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ವತಿಯಿಂದ ಚೆಕ್ ಪೋಸ್ಟ್ ಸ್ಥಾಪಿಸಲಾಗುವುದು ಎಂದರು.

  • ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ- ಮಹಾರಾಷ್ಟ್ರದ ಗಡಿಯಲ್ಲಿನ ಚೆಕ್ ಪೋಸ್ಟ್‌ಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ

    ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ- ಮಹಾರಾಷ್ಟ್ರದ ಗಡಿಯಲ್ಲಿನ ಚೆಕ್ ಪೋಸ್ಟ್‌ಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ

    – ಕೊರೊನಾ 3ನೇ ಅಲೆ ಭೀತಿ

    ಚಿಕ್ಕೋಡಿ: ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಕೊರೊನಾ 3ನೇ ಅಲೆ ಏಳಲಿದೆ ಎಂದು ತಜ್ಞರು ವರದಿ ನೀಡಿದ್ದಾರೆ. ಮೂರನೇ ಅಲೆಯ ಆತಂಕವಿದ್ದರೂ ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯ ಮುಂದುವರೆಸಿದೆ.

    ಬೆಳಗಾವಿ ಜಿಲ್ಲಾಡಳಿತ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್ ಪೋಸ್ಟ್ ನಿರ್ಮಿಸಿದ್ದು, ಸಿಬ್ಬಂದಿ ಇಲ್ಲದೆ ಚೆಕ್ ಪೋಸ್ಟ್ ಗಳು ಖಾಲಿ ಖಾಲಿಯಾಗಿವೆ. ಹೀಗಾಗಿ ಹೇಳೋರಿಲ್ಲ, ಕೇಳೋರಿಲ್ಲ ಎನ್ನುವಂತಾಗಿದ್ದು, ಮಹಾರಾಷ್ಟ್ರದಿಂದ ರಾಜ್ಯಕ್ಕೆ ವಾಹನಗಳು ನುಸುಳುತ್ತಿವೆ.

    ನಿರಾತಂಕವಾಗಿ ಸಾವಿರಾರು ಜನ ಬೈಕ್ ಹಾಗೂ ಕಾರ್ ಗಳಲ್ಲಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿದ್ದರೂ ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತದ ನಿದ್ರಾವಸ್ಥೆಯಲ್ಲಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಗಡಹಿಂಗ್ಲಜ್- ಸಂಕೇಶ್ವರ ಚೆಕ್ ಪೋಸ್ಟ್ ಸಿಬ್ಬಂದಿ ಇಲ್ಲದೇ ಖಾಲಿ ಖಾಲಿಯಾಗಿರುವ ಕಾರಣ ಕೊರೊನಾ ನೆಗೆಟಿವ್ ವರದಿ ಇಲ್ಲದಿದ್ದರೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರವೇಶ ಪಡೆಯುತ್ತಿದ್ದಾರೆ. ಬೆಳಗಾವಿ ಜಿಲ್ಲಾಡಳಿತದ ನಿರ್ಲಕ್ಷ್ಯದ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.