Tag: Check Post

  • ಕೊಡಗಿಗೆ ಅಗಮಿಸುವ ಪ್ರವಾಸಿಗರ ಮೇಲೆ ಪೊಲೀಸರ ಹದ್ದಿನ ಕಣ್ಣು

    ಕೊಡಗಿಗೆ ಅಗಮಿಸುವ ಪ್ರವಾಸಿಗರ ಮೇಲೆ ಪೊಲೀಸರ ಹದ್ದಿನ ಕಣ್ಣು

    ಮಡಿಕೇರಿ: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದ ಬೆನ್ನಲ್ಲೇ ಕೊಡಗು ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪ್ರವಾಸೋದ್ಯಮಕ್ಕೆ ಫೇಮಸ್ ಆಗಿರುವ ಜಿಲ್ಲೆಯಲ್ಲಿ ಸಾವಿರಾರು ಹೋಂ ಸ್ಟೇ, ರೆಸಾರ್ಟ್‍ಗಳಿದ್ದು, ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಂದ ಬರುವ ಸಾವಿರಾರು ಪ್ರವಾಸಿಗರ ಮೇಲೆ ಕೊಡಗು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

    ಹೌದು ಬೆಂಗಳೂರಿನಲ್ಲಿ ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸದ್ದು ಮಾಡುತ್ತಿದ್ದಂತೆ ಕೊಡಗು ಎಸ್ ಪಿ ಕ್ಷಮಾ ಮಿಶ್ರಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡಬೇಕು. ಬೀಟ್‍ಗಳಲ್ಲಿ ಎಚ್ಚರವಹಿಸಿ ಡ್ರಗ್ಸ್ ಮತ್ತು ಗಾಂಜಾ ಸಾಗಾಟಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಿದ್ದಾರೆ.

    ಅಂತರ್ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚೆಕ್ ಪೋಸ್ಟ್ ಗಳಲ್ಲಿ ಕೊಡಗಿನ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಜಿಲ್ಲೆಗೆ ಬರುವ ಎಲ್ಲ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೂ ಸೂಚನೆ ನೀಡಿರುವ ಎಸ್‍ಪಿ ಹಗಲು ರಾತ್ರಿ ರೌಂಡ್ಸ್ ಹಾಕುತ್ತಿದ್ದಾರೆ. ಹೋಂ ಸ್ಟೇ ಮತ್ತು ರೆಸಾರ್ಟ್‍ಗಳ ಮಾಲೀಕರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

    ಒಂದು ವೇಳೆ ಇಂತಹ ಯಾವುದೇ ಅಕ್ರಮ ಚಟುವಟಿಕೆಗಳ ನಡೆದರೆ ಹೋಂ ಸ್ಟೇ ಮತ್ತು ರೆಸಾರ್ಟ್ ಮಾಲೀಕರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಸ್‍ಪಿ ಕ್ಷಮಾ ಮಿಶ್ರಾ ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ಬೆಂಗಳೂರಿನಲ್ಲಿ ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರವಾಸಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಎಲ್ಲೆಡೆ ಹದ್ದಿನ ಕಣ್ಣಿಟ್ಟು ಸರ್ಚ್ ಮಾಡುತ್ತಿರುವ ಪೊಲೀಸರು ಅಕ್ರಮ ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

  • ಎರಡು ಅಂತರರಾಜ್ಯ ಚೆಕ್ ಪೋಸ್ಟ್ ತೆರವು-ತಮಿಳುನಾಡು ಸಂಚಾರ ಮುಕ್ತ

    ಎರಡು ಅಂತರರಾಜ್ಯ ಚೆಕ್ ಪೋಸ್ಟ್ ತೆರವು-ತಮಿಳುನಾಡು ಸಂಚಾರ ಮುಕ್ತ

    ಚಾಮರಾಜನಗರ: ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿ ಹಾಕಿದ್ದ ಎರಡು ಚೆಕ್ ಪೋಸ್ಟ್ ಗಳನ್ನು ತೆರವು ಮಾಡಲಾಗಿದೆ. ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ಮುಕ್ತ ಮಾಡಿಕೊಡಲಾಗಿದೆ.

    ನೆರೆಯ ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವಾದ ಹಿನ್ನೆಲೆಯಲ್ಲಿ ಸಂಚಾರ ಬಂದ್ ಮಾಡಲಾಗಿತ್ತು. ಹೀಗಾಗಿ ಚಾಮರಾಜನಗರ ಜಿಲ್ಲೆಯ ಹನೂರು ನಾಲಾರೋಡ್ ಹಾಗು ಅರ್ಧನಾರೀಪುರ ಚೆಕ್ ಪೋಸ್ಟ್ ಹಾಕಲಾಗಿತ್ತು. ಇದೀಗ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಚೆಕ್ ಪೋಸ್ಟ್ ತೆರವುಗೊಳಿಸುವಂತೆ ಆದೇಶಿಸಿದ್ದಾರೆ.

    ಸಂಚಾರ ತೆರವು ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿರುವ ಗ್ರಾಮಸ್ಥರಿಗೆ ಸಣ್ಣದೊಂದು ಆತಂಕ ಮನೆ ಮಾಡಿದೆ. ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲಿವೆ. ಚೆಕ್ ಪೋಸ್ಟ್ ತೆರವಿನಿಂದಾಗಿ ಕೊರೊನಾ ಭಯ ಸ್ಥಳೀಯ ನಿವಾಸಿಗಳಲ್ಲಿ ಶುರುವಾಗಿದೆ.

  • ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ ಖಾಲಿ ಖಾಲಿ

    ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ ಖಾಲಿ ಖಾಲಿ

    – ವಾಹನಗಳಿಲ್ಲದೆ ಬೆಕೋ ಎನ್ನುತ್ತಿದೆ ರಸ್ತೆ

    ಬೆಂಗಳೂರು: ಮಧ್ಯಾಹ್ನದ ಹೊತ್ತಿಗೆ ವಾಹನದಟ್ಟಣೆ ಹಾಗೂ ಜನಜಂಗುಳಿಯಿಂದ ಕೂಡಿದ್ದ ನೆಲಮಂಗಲ ಟೋಲ್, ಸಂಜೆ ಹೊತ್ತಿಗೆ ಬಿಕೋ ಎನ್ನುತ್ತಿದೆ. ಲಾಕ್‍ಡೌನ್ ಹಿನ್ನೆಲೆ ಜನರೆಲ್ಲ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದು ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಖಾಲಿ ಹೊಡೆಯುತ್ತಿದೆ. ಇನ್ನೊಂದೆಡೆ ಲಾಕ್‍ಡೌನ್ ಜಾರಿಯಾಗುವುದರಿಂದ ಬೆಂಗಳೂರಿನ ಕಡೆಗೂ ವಾಹನಗಳು ಬರುತ್ತಿಲ್ಲ.

    ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಲಾಕ್‍ಡೌನ್‍ಗೆ ಕ್ಷಣ ಗಣನೆ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ ಖಾಲಿ ಹೊಡೆಯುತ್ತಿದೆ. ಬೆಂಗಳೂರು ಕಡೆ ಬರುವವರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದ್ದು, ಜನಜಂಗುಳಿಯಿಂದ ಕೂಡಿರುತ್ತಿದ್ದ ನೆಲಮಂಗಲದ ಟೋಲ್ ಇದೀಗ ವಾಹನಗಳೇ ಇಲ್ಲದೆ ಬಿಕೋ ಎನ್ನುತ್ತಿದೆ. ತುರ್ತುಪರಿಸ್ಥಿತಿಯ ವಾಹನಗಳು, ಲಾರಿಗಳು ಮಾತ್ರ ಸಂಚರಿಸುತ್ತಿವೆ. ಬೆಂಗಳೂರು-ತುಮಕೂರು ರಸ್ತೆಯ ನವಯುಗ ಟೋಲ್ ಬಳಿ ರಸ್ತೆ ಖಾಲಿ ಹೊಡೆಯುತ್ತಿದೆ.

    ಇನ್ನೊಂದೆಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್‍ಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಗಡಿಭಾಗದಲ್ಲಿ ಸಿಬ್ಬಂದಿ ಚೆಕ್ ಪೋಸ್ಟ್ ನಿರ್ಮಾಣ ಮಾಡುತ್ತಿದ್ದಾರೆ. ನೆಲಮಂಗಲ ತಾಲೂಕಿನ ಎರಡು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ತುಮಕೂರು-ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರದಿಂದ ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಹಳೆ ನಿಜಗಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಲ್ಯಾಂಕೋ ಟೋಲ್ ಬಳಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗುತ್ತಿದೆ. ಇವು 17 ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಎರಡು ರಾಷ್ಟ್ರೀಯ ಹೆದ್ದಾರಿಗಳಾಗಿವೆ. ಅಧಿಕಾರಿಗಳು ಶಾಮಿಯಾನ ಹಾಕಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮಂಗಳೂರು-ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75 ಬಳಿ ಸಹ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗುತ್ತಿದೆ.

  • ಬೆಂಗ್ಳೂರು ಲಾಕ್- ಶಿವಮೊಗ್ಗ ಗಡಿಯಲ್ಲಿ ಚೆಕ್‍ಪೋಸ್ಟ್ ನಿರ್ಮಾಣ

    ಬೆಂಗ್ಳೂರು ಲಾಕ್- ಶಿವಮೊಗ್ಗ ಗಡಿಯಲ್ಲಿ ಚೆಕ್‍ಪೋಸ್ಟ್ ನಿರ್ಮಾಣ

    ಶಿವಮೊಗ್ಗ: ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಳೆ ರಾತ್ರಿಯಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ಜಿಲ್ಲೆಯ ಜನ ಮರಳಿ ಬರಬಹುದು ಎಂಬ ಮಾಹಿತಿ ಮೇರೆಗೆ ಪರಿಶೀಲನೆಗಾಗಿ ಗಡಿಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ.

    ಜಿಲ್ಲೆಯ ಭದ್ರಾವತಿಯ ಬಿ.ಹೆಚ್.ರಸ್ತೆಯ ಕೆರೆಹಳ್ಳಿಯ ಬಳಿ ಒಂದು ಹಾಗೂ ಭದ್ರಾವತಿ ತಾಲೂಕು ಹಂಚಿನ ಸಿದ್ದಾಪುರ ಗ್ರಾಮದ ಭದ್ರಾ ಕಾಲುವೆಯ ಬಳಿ ಮತ್ತೊಂದು ಚೆಕ್‍ಪೋಸ್ಟ್ ನಿರ್ಮಿಸಲಾಗಿದೆ. ಬೆಂಗಳೂರಿನಿಂದ ಬರುವವರನ್ನು ಪರಿಶೀಲಿಸಿ, ಚೆಕ್ ಮಾಡಿ ಜಿಲ್ಲೆಯೊಳಗೆ ಬಿಡುಗ ಕ್ರಮ ಕೈಗೊಳ್ಳಲಾಗಿದೆ.

    ಭದ್ರಾವತಿ ಗಡಿಯ ಕೆರೆಹಳ್ಳಿ ಚೆಕ್‍ಪೋಸ್ಟ್ ಬಳಿ ಬೆಂಗಳೂರಿನಿಂದ ಬರುವ ಪ್ರಯಾಣಿಕರು ಹಾಗೂ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಚಿತ್ರದುರ್ಗ ಕಡೆಯಿಂದ ಬರುವವರ ತಪಾಸಣೆಗಾಗಿ ಚೆಕ್‍ಪೋಸ್ಟ್ ರಚಿಸಲಾಗಿದೆ. ತಪಾಸಣೆ ಬಳಿಕ ಶಿವಮೊಗ್ಗ ಜಿಲ್ಲೆಯೊಳಗೆ ಪ್ರವೇಶಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

  • ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದ ಚಾಮರಾಜನಗರ ಪೇದೆಗೂ ಕೊರೊನಾ?

    ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದ ಚಾಮರಾಜನಗರ ಪೇದೆಗೂ ಕೊರೊನಾ?

    -ಚಾಮರಾಜನಗರ ಪೂರ್ವ ಪೊಲೀಸ್ ಠಾಣೆ ಸೀಲ್‍ಡೌನ್

    ಚಾಮರಾಜನಗರ: ಜಿಲ್ಲೆಯ ಪುಣಜನೂರು ಚೆಕ್‍ಪೋಸ್ಟ್ ನಲ್ಲಿ ಕಾರ್ಯನಿರ್ಹಿಸಿದ್ದ ಪೊಲೀಸ್ ಪೇದೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.

    ಜಿಲ್ಲೆಯ ಪೊಲೀಸ್ ಪೇದೆಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಮೂಲಗಳ ಮಾಹಿತಿ ಖಚಿತ ಮಾಡಿಸಿದ್ದು, ಪುಣಜನೂರು ಚೆಕ್‍ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸಿದ್ದ 29 ವರ್ಷದ ಪೊಲೀಸ್ ಪೇದೆಗೆ ಕೊರೊನಾ ಸೋಂಕು ತಗುಲಿದೆ. ಇವರು ಹನೂರು ತಾಲೂಕಿನ ರಾಮಾಪುರ ಸಮೀಪದ ಕೂಡ್ಲೂರು ಗ್ರಾಮದವರು ಎಂದು ತಿಳಿದುಬಂದಿದೆ. ಸದ್ಯ, ಪೇದೆಯ ಪ್ರಾಥಮಿಕ ಸಂಪರ್ಕಿತರನ್ನು ಆರೋಗ್ಯ ಇಲಾಖೆ ಪತ್ತೆ ಮಾಡಲಾಗುತ್ತಿದೆ.

    ಚಾಮರಾಜನಗರ ಪೂರ್ವ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪೇದೆಗೂ ಸೋಂಕು ದೃಢಪಟ್ಟ ಹಿನ್ನೆಲೆ ಚಾಮರಾಜನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8ಕ್ಕೇರಿದೆ. ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕು ಗೆದ್ದು ಡಿಸ್ಚಾರ್ಜ್ ಆಗಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ಹಬ್ಬುತ್ತಿದ್ದು ಹಸಿರು ಜಿಲ್ಲೆ ಎಂಬ ಗರಿ ಹೊಂದಿದ್ದ ಚಾಮರಾಜನಗರವೀಗ ತಲ್ಲಣಿಸುತ್ತಿದೆ.

  • ರಾಯಚೂರಿನ ಅಂತರರಾಜ್ಯ ಚೆಕ್‌ಪೋಸ್ಟ್‌ನಲ್ಲಿ ವಸೂಲಿ ದಂಧೆ- ಹಣ ಕೊಟ್ರೆ ಎಲ್ಲರಿಗೂ ಎಂಟ್ರಿ

    ರಾಯಚೂರಿನ ಅಂತರರಾಜ್ಯ ಚೆಕ್‌ಪೋಸ್ಟ್‌ನಲ್ಲಿ ವಸೂಲಿ ದಂಧೆ- ಹಣ ಕೊಟ್ರೆ ಎಲ್ಲರಿಗೂ ಎಂಟ್ರಿ

    ರಾಯಚೂರು: ಜಿಲ್ಲೆಯಲ್ಲಿ 50, 100 ರೂಪಾಯಿ ಆಸೆಗೆ ಅಂತರರಾಜ್ಯ ಚೆಕ್‌ಪೋಸ್ಟ್‌ನಲ್ಲಿನ ಸಿಬ್ಬಂದಿ ಕೊರೊನಾ ವೈರಸ್ ಹರಡಿಸುತ್ತಿದ್ದಾರಾ ಎನ್ನುವ ಆತಂಕ ಮೂಡಿದೆ.

    ಆಂಧ್ರ ಪ್ರದೇಶದಿಂದ ಬರುವವರು ಚೆಕ್‌ಪೋಸ್ಟ್‌ನಲ್ಲಿನ ಪೊಲೀಸರಿಗೆ 100 ರೂ. ಕೊಟ್ಟರೆ ಸಾಕು ಹೋಂ ಕ್ವಾರಂಟೈನ್ ಭೀತಿಯೇ ಇಲ್ಲ. ಕೊರೊನಾ ಹರಡುವಿಕೆ ತಡೆಗಾಗಿ ಮಾಡಿರುವ ಚೆಕ್‍ಪೋಸ್ಟ್ ಸಿಬ್ಬಂದಿಯೇ ರಾಯಚೂರಿನಲ್ಲಿ ಕೊರೊನಾ ಹರಡುವುದಕ್ಕೆ ಕಾರಣರಾಗುತ್ತಿದ್ದಾರೆ. ಜಿಲ್ಲೆಯ ಗಿಲ್ಲೆಸುಗೂರು ಚೆಕ್‍ಪೋಸ್ಟ್‍ನಲ್ಲಿ ಪೋಲೀಸರು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಿಬ್ಬಂದಿ ಕೃತ್ಯ ಈಗ ಬಟಾಬಯಲಾಗಿದೆ.

    ಆಂಧ್ರದ ಗಡಿಭಾಗದಲ್ಲಿನ ಗಿಲ್ಲೆಸುಗೂರು ಚೆಕ್‌ಪೋಸ್ಟ್‌ನಲ್ಲಿ ಹಣ ಕೊಟ್ಟರೆ ಸಾಕು ಆರಾಮಾಗಿ ಆಂಧ್ರಪ್ರದೇಶಕ್ಕೂ ಹೋಗಬಹುದು, ಆಂಧ್ರದಿಂದ ರಾಜ್ಯಕ್ಕೂ ಬರಬಹುದು ಅನ್ನೋ ಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ಚೆಕ್‌ಪೋಸ್ಟ್‌ನಲ್ಲಿ ಯಾವುದೇ ವಾಹನಗಳ ತಪಾಸಣೆಯಾಗಲಿ, ಆರೋಗ್ಯ ತಪಾಸಣೆಯಾಗಲಿ ನಡೆಯುತ್ತಲೇ ಇಲ್ಲ. ಈಗ ಮಂತ್ರಾಲಯಕ್ಕೆ ಬಸ್ ಓಡಾಟ ಆರಂಭವಾಗಿದ್ದರೂ ಹೋಂ ಕ್ವಾರಂಟೈನ್ ಜಾರಿಯಲ್ಲಿದೆ. ಸೇವಾಸಿಂಧುವಿನಲ್ಲಿ ಅರ್ಜಿ ಹಾಕಿದವರಿಗೆ ಮಾತ್ರ ಸಾರಿಗೆ ಬಸ್‍ನಲ್ಲಿ ಅವಕಾಶ ಮಾಡಿಕೊಡಲಾಗಿದೆ. ಆದರೆ ಚೆಕ್‌ಪೋಸ್ಟ್‌ನಲ್ಲಿ ಎಲ್ಲಾ ನಿಯಮಗಳನ್ನ ಗಾಳಿಗೆ ತೂರಿರುವ ಪೊಲೀಸ್ ಸಿಬ್ಬಂದಿ ಹಣ ತೆಗೆದುಕೊಂಡು ಜನರನ್ನ ಒಳ ಬಿಡುತ್ತಿದ್ದಾರೆ. ಅಂತರರಾಜ್ಯ ಗಡಿಯಲ್ಲಿ ಬೈಕ್, ಕಾರ್, ಟಂಟಂಗಳು ಯಾವುದೇ ಆತಂಕವಿಲ್ಲದೆ ಓಡಾಡುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

    ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 414ಕ್ಕೆ ಏರಿದ್ದು, ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹೀಗಾಗಿ ಜಿಲ್ಲಾಡಳಿತ ಖಾಸಗಿ ವೈದ್ಯರ ಮೊರೆ ಹೋಗಿದ್ದು ನಗರದ ನವೋದಯ ವೈದ್ಯಕೀಯ ಬೋಧಕ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳನ್ನ ವೈದ್ಯಕೀಯ ಸೇವೆಗೆ ಬಳಸಿಕೊಳ್ಳಲು ಮುಂದಾಗಿದೆ. ಇಂತಹ ಸಂದರ್ಭದಲ್ಲಿ ಚೆಕ್ ಪೋಸ್ಟ್ ಗಳಲ್ಲಿನ ಸಿಬ್ಬಂದಿ ಹಣ ವಸೂಲಿ ಮಾಡಿ ಆಂಧ್ರಪ್ರದೇಶದಿಂದ ಬರುವವರನ್ನ ರಾಜ್ಯಕ್ಕೆ ಬಿಡುತ್ತಿರುವುದು ಜಿಲ್ಲೆಯಲ್ಲಿ ಆತಂಕವನ್ನ ಹೆಚ್ಚಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.

  • ತಮಿಳುನಾಡಿನಿಂದ ಕರ್ನಾಟಕ ಪ್ರವೇಶಿಸುವರಿಗೆ ನಿರ್ಬಂಧ – ಕಾಡುದಾರಿಗಳು ಸಂಪೂರ್ಣ ಬಂದ್

    ತಮಿಳುನಾಡಿನಿಂದ ಕರ್ನಾಟಕ ಪ್ರವೇಶಿಸುವರಿಗೆ ನಿರ್ಬಂಧ – ಕಾಡುದಾರಿಗಳು ಸಂಪೂರ್ಣ ಬಂದ್

    ಚಾಮರಾಜನಗರ: ಕೊರೊನಾ ಪ್ರಕರಣಗಳ ಹೈ ರಿಸ್ಕ್ ರಾಜ್ಯಗಳಲ್ಲಿ ಒಂದಾದ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಪ್ರವೇಶ ನಿಷೇಧ ಹೇರಿರುವುದರಿಂದ ತಮಿಳರು ಗಡಿಭಾಗದಲ್ಲಿ ಕಾಡಿನ ಅಡ್ಡದಾರಿಗಳ ಮೂಲಕ ನುಸುಳುತ್ತಿದ್ದರು. ಇದೀಗ ಕಾಡುದಾರಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

    ಕಾಡುಗಳ್ಳ ವೀರಪ್ಪನ್ ಕಾರ್ಯಕ್ಷೇತ್ರವಾದ ಮಹದೇಶ್ವರಬೆಟ್ಟ ಅರಣ್ಯದಲ್ಲಿ ಪಾಲಾರ್ ಹಳ್ಳ ದಾಟಿ ಬರುತ್ತಿದ್ದರು. ಹಾಗೆಯೇ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ನಿವಾಸಿಗಳು ಸಹ ಕಾಡುದಾರಿಗಳ ಮೂಲಕ ತಮಿಳುನಾಡಿಗೆ ಹೋಗಿ ಬರುತ್ತಿದ್ದರು. ಪಾಲಾರ್ ನದಿಯ ಪಕ್ಕದಲ್ಲೇ ಚೆಕ್‍ಪೋಸ್ಟ್ ಇದ್ದರೂ ಪೊಲೀಸರ ಕಣ್ಣು ತಪ್ಪಿಸಿ ಓಡಾಟ ನಡೆಸುತ್ತಿದ್ದರು. ಈಗ ಕಾಡುದಾರಿಗಳಿಗೆ ಅಡ್ಡಲಾಗಿ ಮುಳ್ಳುಬೇಲಿ ಹಾಕಲಾಗಿದೆ. ಅಲ್ಲದೇ ಪೊಲೀಸ್, ಅರಣ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

    ಪಾಲಾರ್, ಹೂಗ್ಯಂ, ಜಲ್ಲಿಪಾಳ್ಯ, ಗಾಜನೂರು, ಗರಿಕೆಕಂಡಿ ರಸ್ತೆ ಸಂಪೂರ್ಣ ಬಂದ್ ಮಾಡಲಾಗಿದ್ದು, ಈ ಮೂಲಕ ತಮಿಳುನಾಡಿನಿಂದ ಕರ್ನಾಟಕ ಪ್ರವೇಶಿಸುವರಿಗೆ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆಯಿಂದ ಗಸ್ತು, ಆಯಕಟ್ಟಿನ ಸ್ಥಳಗಳಲ್ಲಿ ಅರಣ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ

    ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ದೇಶದಲ್ಲಿ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. ಅಲ್ಲದೇ ತಮಿಳಿಗರು ಕಾಡಿನ ಕಳ್ಳದಾರಿಗಳ ಮೂಲಕ ಬಂದು ಕೊರೊನಾತಂಕ ಉಂಟುಮಾಡುತ್ತಿದ್ದರು. ಇದೀಗ ಕಳ್ಳದಾರಿ ಮೂಲಕ ಬರುತ್ತಿದ್ದವರಿಗೆ ಕಡಿವಾಣ ಹಾಕಲಾಗಿದೆ.

  • ನಡೆದು ಹೋಗ್ತಿದ್ದ 6 ವಲಸೆ ಕಾರ್ಮಿಕರ ಮೇಲೆ ಹರಿದ ಬಸ್ – ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವು

    ನಡೆದು ಹೋಗ್ತಿದ್ದ 6 ವಲಸೆ ಕಾರ್ಮಿಕರ ಮೇಲೆ ಹರಿದ ಬಸ್ – ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವು

    – ಲಾರಿ, ಬಸ್ ನಡುವೆ ಡಿಕ್ಕಿ 8 ಸಾವು, 50 ಮಂದಿಗೆ ಗಾಯ

    ಲಕ್ನೋ: ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಟ್ಟು 14 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ, 50 ಮಂದಿ ಗಾಯಗೊಂಡಿದ್ದಾರೆ.

    ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಕಾರ್ಮಿಕರು ತಮ್ಮ ಊರಿಗೆ ಹೋಗಿ ಅಲ್ಲಿಯಾದರೂ ಬದುಕೋಣ ಎಂದು ಹೊರಟಿದ್ದರು. ಬಸ್ ಅಥವಾ ಯಾವುದೇ ಸಾರಿಗೆ ವ್ಯವಸ್ಥೆ ಸಿಗದ ಕಾಣರಕ್ಕೆ ನಡೆದುಕೊಂಡು ಊರಿನತ್ತ ಪ್ರಯಣ ಬೆಳೆಸಿದ್ದರು. ಉತ್ತರ ಪ್ರದೇಶ ಮುಜಾಫರ್‍ನಗರ-ಸಹರನ್ಪುರ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಘಲೌಲಿ ಚೆಕ್‍ಪೋಸ್ಟ್ ಬಳಿ 6 ಮಂದಿ ವಲಸೆ ಕಾರ್ಮಿಕರು ನಡೆದು ಬರುತ್ತಿದ್ದರು. ಈ ವೇಳೆ ಚೆಕ್‍ಪೋಸ್ಟ್ ಬಳಿ ವೇಗವಾಗಿ ಬರುತ್ತಿದ್ದ ಬಸ್ಸೊಂದು ಕಾರ್ಮಿಕರ ಮೇಲೆ ಹರಿದು ಹೋಗಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.

    ಇತ್ತ ಮಧ್ಯಪ್ರದೇಶದ ಗುಣದಲ್ಲಿ ಬುಧವಾರ ರಾತ್ರಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಲಾರಿ ಹಾಗೂ ಬಸ್ಸೊಂದರ ನಡುವೆ ಡಿಕ್ಕಿ ಆಗಿ ಅಪಘಾತಕ್ಕಿಡಾಗಿದೆ. ಈ ಅಪಘಾತದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ 8 ಮಂದಿ ಉತ್ತರ ಪ್ರದೇಶದವರಾಗಿದ್ದು, ಕೆಲಸ ಅರಸಿ ಮಹಾರಾಷ್ಟ್ರಕ್ಕೆ ಬಂದಿದ್ದರು. ಆದರೆ ಲಾಕ್‍ಡೌನ್ ಪರಿಣಾಮ ಕೆಲಸವಿಲ್ಲದೆ ಕಷ್ಟದಲ್ಲಿದ್ದ ಕಾರ್ಮಿಕರು ತಮ್ಮೂರಿಗೆ ವಾಪಸ್ ತೆರೆಳುತ್ತಿದ್ದರು. ಈ ವೇಳೆ ಗುಣದಲ್ಲಿ ಈ ದುರಂತ ಸಂಭವಿಸಿದೆ.

  • ಚೆಕ್‍ಪೋಸ್ಟ್ ಕರ್ತವ್ಯಕ್ಕೆ ಗೈರಾದ ಇಬ್ಬರ ಅಮಾನತು

    ಚೆಕ್‍ಪೋಸ್ಟ್ ಕರ್ತವ್ಯಕ್ಕೆ ಗೈರಾದ ಇಬ್ಬರ ಅಮಾನತು

    ಹುಬ್ಬಳ್ಳಿ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ಹಿನ್ನೆಲೆ ಜಿಲ್ಲಾಡಳಿತವು ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಚೆಕ್‍ಪೋಸ್ಟ್ ಗಳನ್ನು ಸ್ಥಾಪಿಸಿ ಸಾರ್ವಜನಿಕರ ಸಂಚಾರ ತಪಾಸಣೆಗೆ ಕ್ರಮ ಕೈಗೊಂಡಿದೆ. ಆದರೆ ಈ ಚೆಕ್‍ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿಎನ್‍ಸಿಸಿ ಸಿಬ್ಬಂದಿ ಕರ್ತವ್ಯಕ್ಕೆ ಗೈರಾಗಿದ್ದಕ್ಕೆ ಅವರನ್ನು ಅಮಾನತು ಮಾಡಲಾಗಿದೆ.

    ಹುಬ್ಬಳ್ಳಿಯ ಬಮ್ಮಾಪೂರದ ಚೆಕ್‍ಪೋಸ್ಟ್ ನಲ್ಲಿ ಕರ್ತವ್ಯಕ್ಕೆ ಗೈರುಹಾಜರಾಗಿರುವ ಹುಬ್ಬಳ್ಳಿ ವಿದ್ಯಾನಗರದ ಬಿಎನ್‍ಸಿಸಿ ಕಮಾಂಡಿಂಗ್ ಆಫೀಸರ್ ಕಚೇರಿಯ ಸಿಬ್ಬಂದಿ ರವೀಂದ್ರ ಭೂಜಪ್ಪ ಆಸಂಗಿ ಹಾಗೂ ಮಹೇಶ್ ದುಂದೂರ ಅವರನ್ನು ಇಂದು ಅಮಾನತು ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

    ವಿಶ್ವವ್ಯಾಪಿ ಹರಡಿರುವ ಕೊವಿಡ್-19 ಮಹಾಸಾಂಕ್ರಾಮಿಕ ರೋಗಕ್ಕೆ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು, ಈ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿದೆ. ಸೋಂಕು ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆ ಸ್ಥಾಪಿಸಿರುವ ಚೆಕ್‍ಪೋಸ್ಟ್ ಗಳಿಗೆ ಈ ನೌಕರರು ಹಾಜರಾಗದೇ ನಿಷ್ಕಾಳಜಿ ತೋರಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

    ಈ ಸಿಬ್ಬಂದಿ ಮೇಲೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಕೊವಿಡ್-19, ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ನೌಕರರು ಅಮಾನತು ಅವಧಿಯಲ್ಲಿ ತಮ್ಮ ಕಾರ್ಯಾಲಯದ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ನಿರ್ದೇಶಿಸಿ ಶಿಸ್ತುಕ್ರಮ ಕೈಗೊಂಡಿದ್ದಾರೆ.

  • ನಕಲಿ ಪಾಸ್ ಸೃಷ್ಟಿ – ಪರಿಶೀಲನೆಯಲ್ಲಿ ಸಿಕ್ಕಿಬಿದ್ದ ನೂರಾರು ಜನರ ವಾಹನ ಜಪ್ತಿ

    ನಕಲಿ ಪಾಸ್ ಸೃಷ್ಟಿ – ಪರಿಶೀಲನೆಯಲ್ಲಿ ಸಿಕ್ಕಿಬಿದ್ದ ನೂರಾರು ಜನರ ವಾಹನ ಜಪ್ತಿ

    ರಾಯಚೂರು: ಕೊರೊನಾ ಲಾಕ್‍ಡೌನ್ ಮುಂದುವರಿಕೆ ಹಿನ್ನೆಲೆ ಜನರ ಓಡಾಟಕ್ಕೆ ಮತ್ತಷ್ಟು ಬ್ರೇಕ್ ಬಿದ್ದಿದೆ. ಆದರೆ ಅಡ್ಡದಾರಿ ಹಿಡಿದ ಜಿಲ್ಲೆಯ ಕೆಲ ಜನ ನಕಲಿ ಪಾಸ್ ಸೃಷ್ಟಿಸಿಕೊಂಡು ಚೆಕ್ ಪೋಸ್ಟ್, ನಾಕಾಬಂದಿಗಳಲ್ಲಿ ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ.

    ಅನುಮಾನದ ಮೇಲೆ ಪರಿಶೀಲನೆ ಆರಂಭಿಸಿದ ರಾಯಚೂರು ಪೊಲೀಸರು ನೂರಕ್ಕೂ ಹೆಚ್ಚು ನಕಲಿ ಪಾಸ್ ಜಪ್ತಿ ಮಾಡಿದ್ದಾರೆ. ಅನಾವಶ್ಯಕವಾಗಿ ತಿರುಗಾಡುವವರನ್ನ ಪರಿಶೀಲಿಸಿ ನಕಲಿ ಪಾಸ್ ಗಳನ್ನ ಜಪ್ತಿ ಮಾಡಲಾಗಿದೆ. ಮಾಧ್ಯಮದವರು, ಆರೋಗ್ಯ ಇಲಾಖೆ ಸಿಬ್ಬಂದಿಗಳ ಹೆಸರಲ್ಲಿ ನಕಲಿ ಪಾಸ್ ಗಳನ್ನು ಸೃಷ್ಟಿಸಿಕೊಂಡು ಜನ ಓಡಾಡುತ್ತಿದ್ದರು.

    ನಗರದ ಗಂಜ್ ವೃತ್ತದಲ್ಲಿ ಪೊಲೀಸರು ಪರಿಶೀಲನೆ ಮಾಡಿದ್ದು, ಪರಿಶೀಲನೆಯ ವೇಳೆ ಸುಮಾರು ನೂರಕ್ಕೂ ಅಧಿಕ ನಕಲಿ ಪಾಸ್ ಪತ್ತೆಯಾಗಿವೆ. ಮಾರ್ಕೆಟ್ ಯಾರ್ಡ್ ಪೊಲೀಸರು ನಕಲಿ ಪಾಸ್, ಬೈಕ್ ಹಾಗೂ ಕಾರುಗಳನ್ನ ಜಪ್ತಿ ಮಾಡಿದ್ದಾರೆ. ನಕಲಿ ಪಾಸ್ ಸೃಷ್ಟಿಸಿಕೊಂಡು ಅನಗತ್ಯವಾಗಿ ಓಡಾಡುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

    ಘಟನೆಯಿಂದ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹಾಗೂ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಪ್ರತಿಯೊಬ್ಬರ ಪಾಸ್ ಗಳನ್ನು ಪರಿಶೀಲನೆ ಮಾಡಿ ಚೆಕ್ ಪೋಸ್ಟ್ ಸಿಬ್ಬಂದಿಗೆ ಸರಿಯಾಗಿ ಪರಿಶೀಲಿಸುವಂತೆ ಎಚ್ಚರಿಕೆ ನೀಡಿದ್ದಾರೆ.