Tag: checkpost

  • ಚುನಾವಣಾ ಅಕ್ರಮ ತಡೆಗೆ 16 ಚೆಕ್ ಪೋಸ್ಟ್ ಸ್ಥಾಪನೆ- ಐವರು ರೌಡಿಶೀಟರ್‌ಗಳ ಗಡಿಪಾರು

    ಚುನಾವಣಾ ಅಕ್ರಮ ತಡೆಗೆ 16 ಚೆಕ್ ಪೋಸ್ಟ್ ಸ್ಥಾಪನೆ- ಐವರು ರೌಡಿಶೀಟರ್‌ಗಳ ಗಡಿಪಾರು

    ರಾಮನಗರ: 2023ರ ವಿಧಾನಸಭಾ ಚುನಾವಣೆ (Vidhanasabha Election 2023) ಗೆ ದಿನಾಂಕ ನಿಗದಿ ಹಿನ್ನೆಲೆ ನಿಷ್ಪಕ್ಷಪಾತ ಚುನಾವಣೆಗೆ ರಾಮನಗರ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

    ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿದ ರಾಮನಗರ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್, ರಾಮನಗರ (Ramanagar) ದಲ್ಲಿ ಒಟ್ಟು 8,84,044 ಮತದಾರರಿದ್ದಾರೆ. ಅದರಲ್ಲಿ 4,35,572 ಪುರುಷ ಮತದಾರರು, 4,50,573 ಮಹಿಳಾ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1139 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಈ ಬಾರಿ ಗೋ ಗ್ರೀನ್ ಹಾಗೂ ಚನ್ನಪಟ್ಟಣದ ಗೊಂಬೆಗಳ ಥೀಮ್ ನಲ್ಲಿ ಎರಡು ವಿಶೇಷ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಅಲ್ಲದೇ ಚುನಾವಣಾ ಅಕ್ರಮ ತಡೆಯಲು ಜಿಲ್ಲೆಯಲ್ಲಿ ಒಟ್ಟು 16 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ. ಚುನಾವಣಾ ಪ್ರಕ್ರಿಯೆಗೆ ಒಟ್ಟು 5775 ಸಿಬ್ಬಂದಿ ನೇಮಕ ಮಾಡಿದ್ದೇವೆ ಎಂದರು.

    VOTE
    ಸಾಂದರ್ಭಿಕ ಚಿತ್ರ

    ಅಲ್ಲದೇ ಪ್ರತಿ ಕ್ಷೇತ್ರ ವ್ಯಾಪ್ತಿಯಲ್ಲಿ 9 ಫ್ಲೈಯಿಂಗ್ ಸ್ವ್ಕಾಡ್ ರಚನೆ ಮಾಡಿ ರಾಜಕೀಯ ಕಾರ್ಯಕ್ರಮಗಳ ಮೇಲೆ ಹದ್ದಿನಕಣ್ಣು ಇಡಲಾಗಿದೆ. ಚುನಾವಣಾ ಅಕ್ರಮದ ಬಗ್ಗೆ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ್ದು, ಸಾರ್ವಜನಿಕರು ಕೂಡಾ ಮಾಹಿತಿ ನೀಡಬಹುದಾಗಿದೆ. ಅಲ್ಲದೇ ಚುನಾವಣಾ ಸಮಯದಲ್ಲಿ ಯಾವುದೇ ಅಕ್ರಮ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಐವರು ರೌಡಿಶೀಟರ್‍ಗಳನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 4ನೇ ಬಾರಿ ಸತತ ಜಯದತ್ತ ಸುಧಾಕರ್ – ಬ್ರೇಕ್ ಹಾಕಲು ಜೆಡಿಎಸ್-ಕಾಂಗ್ರೆಸ್ ಪೈಪೋಟಿ

    ಹಬ್ಬ, ಜಾತ್ರೆಗಳ ಹೆಸರಿನಲ್ಲಿ ರಾಜಕೀಯ ಮುಖಂಡರು ಬಾಡೂಟ ಹಾಕಿಸುವುದರ ಮೇಲೂ ನಿಗಾ ಇಡಲಾಗಿದೆ. ದಾಖಲೆ ಇಲ್ಲದೇ ಹಣಸಾಗಾಟ, ಬ್ಯಾಂಕ್ ವಹಿವಾಟುಗಳ ಬಗ್ಗೆ ಪರಿಶೀಲನೆ ನಡೆಸಿ ಈ ಬಾರಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಮಾಹಿತಿ ನೀಡಿದ್ದಾರೆ.

  • ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 12 ಲಕ್ಷ ರೂ. ಹಣ ಜಪ್ತಿ

    ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 12 ಲಕ್ಷ ರೂ. ಹಣ ಜಪ್ತಿ

    ರಾಯಚೂರು: ದಾಖಲೆಗಳಿಲ್ಲದ 12 ಲಕ್ಷ ರೂ. ಹಣವನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ರಾಯಚೂರಿನ (Raichur) ಕೊತ್ತದೊಡ್ಡಿಯಲ್ಲಿ (Kottadoddi) ನಡೆದಿದೆ.

    ಚುನಾವಣಾ (Election) ನೀತಿ ಸಂಹಿತೆ ಜಾರಿಗೂ ಮುನ್ನವೇ ರಾಯಚೂರು ಪೊಲೀಸರು ಚೆಕ್‌ಪೋಸ್ಟ್‌ಗಳಲ್ಲಿ ಅಲರ್ಟ್ ಆಗಿದ್ದಾರೆ. ತೆಲಂಗಾಣದ (Telangana) ಗದ್ವಾಲ್ ಜಿಲ್ಲೆಯ ತೊರೊವೋಪಡ್ಡಿ ಗ್ರಾಮದ ಶರವಣ ಮತ್ತು ಮದನ ಎಂಬುವವರು ಅಕ್ರಮವಾಗಿ 12 ಲಕ್ಷ ರೂ. ಹಣವನ್ನು ಸಾಗಿಸುತ್ತಿದ್ದರು. ಕೊತ್ತದೊಡ್ಡಿ ಚೆಕ್‌ಪೋಸ್ಟ್‌ನಲ್ಲಿ (Checkpost) ತಪಾಸಣೆ ವೇಳೆ ಅಕ್ರಮ ಹಣ ಸಾಗಾಟ ಕಂಡುಬಂದಿದೆ. ಕಾರಿನಲ್ಲಿ ಸಾಗಿಸುತ್ತಿದ್ದ ಹಣಕ್ಕೆ ಯಾವುದೇ ದಾಖಲೆಗಳು ಇಲ್ಲದಿರುವುದು ತಪಾಸಣೆ ವೇಳೆ ತಿಳಿದು ಬಂದಿದ್ದು, ಪೊಲೀಸರು ಹಣವನ್ನು ಜಪ್ತಿಗೊಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕಿಂದು ಪ್ರಧಾನಿ ಮೋದಿ ಆಗಮನ 

    ಈ ಕುರಿತು ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ರಿಲೀಸ್‌ – 124 ಕ್ಷೇತ್ರಗಳಿಗೆ ಅಭ್ಯರ್ಥಿ

  • ಕಲಬುರಗಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಕಳ್ಳಾಟ – ರಾತ್ರಿ ಒಂದು ರೇಟ್, ಹಗಲು ಒಂದು ರೇಟ್

    ಕಲಬುರಗಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಕಳ್ಳಾಟ – ರಾತ್ರಿ ಒಂದು ರೇಟ್, ಹಗಲು ಒಂದು ರೇಟ್

    ಕಲಬುರಗಿ: ಮಹಾರಾಷ್ಟ್ರದಿಂದ ಕಲಬುರಗಿ ಬರುವ ಪ್ರಯಾಣಿಕರ ಲಸಿಕೆಗಳ ವಿವರಗಳನ್ನು ಪರಿಶೀಲಿಸದೇ ಅಧಿಕಾರಿಗಳು ಗಡಿ ದಾಟಲು ಬಿಟ್ಟಿರುವ ಪ್ರಕರಣ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದಲ್ಲಿ ನಡೆದಿದೆ.

    ಅಧಿಕಾರಿಗಳು ಸಾರ್ವಜನಿಕರಿಂದ ಹಣ ವಸೂಲಿ ಮಾಡಲು ಖಾಸಗಿ ವ್ಯಕ್ತಿಗಳ ನೇಮಕ ಮಾಡಿರುವುದು ತಿಳಿದು ಬಂದಿದೆ. ಆರ್‌ಟಿಪಿಸಿಆರ್ ಟೆಸ್ಟ್ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕಾ ವರದಿ ಇಲ್ಲದಿದ್ದರೂ ಹಣ ಕೊಟ್ಟು ಗಡಿಯೊಳಗೆ ಬರಲು ಸಹಾಯ ಮಾಡಿದ್ದಾರೆ. ಜೊತೆಗೆ ಹಗಲಲ್ಲಿ ಬರುವ ಪ್ರಯಾಣಿಕರಿಗೆ ಒಂದು ರೇಟ್, ರಾತ್ರಿ ಹೊತ್ತಲ್ಲಿ ಬರುವ ಪ್ರಯಾಣಿಕರಿಗೆ ಮತ್ತೊಂದು ರೇಟ್ ಇಟ್ಟಿರುವುದು ತಿಳಿದುಬಂದಿದೆ. ಇದನ್ನೂ ಓದಿ: ರೇಷನ್‌ ಕಾರ್ಡ್‌ ಇದೆಯಾ: ಸ್ನಾನ ಮಾಡ್ತಿದ್ದ ವ್ಯಕ್ತಿ ಬಳಿ ಹೋಗಿ ಬಿಜೆಪಿ ಶಾಸಕನ ಪ್ರಶ್ನೆ

    ಗುರುವಾರ ಒಂದೇ ದಿನ ಜಿಲ್ಲೆಯಲ್ಲಿ 346 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಕೊರೊನಾ ಹಾವಳಿಯ ಮಧ್ಯೆಯೂ ಪೊಲೀಸರು ಹಣ ವಸೂಲಿ ಮಾಡಿ ಗಡಿಯೊಳಗೆ ಬಿಟ್ಟಿರುವುದು ಆಘಾತಕಾರಿ ವಿಷಯ. ಇದನ್ನೂ ಓದಿ: ವಿಶೇಷ ವಿಕಲಚೇತನ ಅಪ್ಪು ಅಭಿಮಾನಿಯಿಂದ ಬೆಂಗಳೂರಿಗೆ ಪಾದಯಾತ್ರೆ

  • ಮಹಾರಾಷ್ಟ್ರ ಗಡಿಯಲ್ಲಿ ಕಾಟಾಚಾರಕ್ಕೆ ಕೊರೊನಾ ರಿಪೋರ್ಟ್ ಚೆಕ್ಕಿಂಗ್

    ಮಹಾರಾಷ್ಟ್ರ ಗಡಿಯಲ್ಲಿ ಕಾಟಾಚಾರಕ್ಕೆ ಕೊರೊನಾ ರಿಪೋರ್ಟ್ ಚೆಕ್ಕಿಂಗ್

    – ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೇ ಸಂಚಾರ

    ಚಿಕ್ಕೋಡಿ: ಶೀಘ್ರದಲ್ಲೇ ಕೊರೊನಾ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹೀಗಾಗಿ ಸರ್ಕಾರ ಮಹಾರಾಷ್ಟ್ರ ಗಡಿಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಕೊರೊನಾ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯ ಪ್ರವೇಶಿಸಲು ಬಿಡಬೇಕೆಂದು ಆದೇಶಿಸಿದೆ. ಆದರೆ ಚೆಕ್ ಪೋಸ್ಟ್ ಗಳಲ್ಲಿ ಕಾಟಾಚಾರಕ್ಕೆ ತಪಾಸಣೆ ಮಾಡಲಾಗುತ್ತಿದೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರ ವಲಯದಲ್ಲಿ ಮಹಾರಾಷ್ಟ್ರದ ಗಡಹಿಂಗ್ಲಜ್ ತಾಲೂಕಿನ ಗಡಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಕಾಟಾಚಾರಕ್ಕೆ ಎನ್ನುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಹಾರಾಷ್ಟ್ರದಿಂದ ಬರುವ ವಾಹನಗಳನ್ನು ತಪಾಸಣೆ ಮಾಡದೇ ನಿದ್ರಾವಸ್ಥೆಯಲ್ಲಿದ್ದಾರೆ. ಹೀಗಾಗಿ ಮಹಾರಾಷ್ಟ್ರದಿಂದ ಜನರು ನಿರಾತಂಕವಾಗಿ ನೆಗೆಟಿವ್ ವರದಿ ಇಲ್ಲದೇ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್

    ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿ ಇದ್ದವರು ಮಾತ್ರ ರಾಜ್ಯ ಪ್ರವೇಶಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಆದರೆ ಅಧಿಕಾರಿಗಳು ಡೋಂಟ್ ಕೇರ್ ಎಂದು ಬೇಕಾಬಿಟ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

  • ಕಾಟಾಚಾರಕ್ಕೆ ಚೆಕ್ ಪೋಸ್ಟ್ ಸ್ಥಾಪನೆ- ಜಿಲ್ಲಾಡಳಿತದ ವಿರುದ್ಧ ಜನ ಆಕ್ರೋಶ

    ಕಾಟಾಚಾರಕ್ಕೆ ಚೆಕ್ ಪೋಸ್ಟ್ ಸ್ಥಾಪನೆ- ಜಿಲ್ಲಾಡಳಿತದ ವಿರುದ್ಧ ಜನ ಆಕ್ರೋಶ

    ಚಾಮರಾಜನಗರ: ಜಿಲ್ಲೆಯಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ಕಡೆ ಅಂತರ್ ಜಿಲ್ಲಾ ಚೆಕ್ ಪೋಸ್ಟ್ ಗಳನ್ನು ಮರು ಸ್ಥಾಪಿಸಲಾಗಿದೆ. ಆದರೆ ಈ ಚೆಕ್ ಪೋಸ್ಟ್ ಗಳು ನಾಮಕಾವಸ್ಥೆ ಎಂಬಂತಿದ್ದು ಇವುಗಳ ಉದ್ದೇಶವೇ ವಿಫಲವಾಗಿದೆ.

    ಹೊರ ಜಿಲ್ಲೆಗಳಿಂದ ಅನಾವಶ್ಯಕವಾಗಿ ಬರುವವರನ್ನು ನಿರ್ಬಂಧಿಸುವುದು ಉಳಿದವರನ್ನು ಚೆಕ್ ಪೋಸ್ಟ್ ಗಳಲ್ಲೇ ಥರ್ಮಲ್ ಸ್ಕ್ರೀನಿಂಗ್ ಮಾಡಿ ತಪಾಸಣೆ ನಡೆಸುವುದು, ರೋಗ ಲಕ್ಷಣ ಇದ್ದರೆ ವಾಪಸ್ ಕಳುಹಿಸುವ ಉದ್ದೇಶದಿಂದ ಈ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹಾಗೆಯೇ ಚಾಮರಾಜನಗರ ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ ಕಾರಣವಿಲ್ಲದೆ ಹೋಗುವವರಿಗೆ ನಿರ್ಬಂಧ ಹೇರುವುದು ಈ  ಚೆಕ್ ಪೋಸ್ಟ್ ಗಳ ಉದ್ದೇಶವಾಗಿದೆ. ಆದರೆ ಇಲ್ಲಿ ಯಾವುದೇ ತಪಾಸಣೆ ನಡೆಯುತ್ತಿಲ್ಲ. ವಾಹನಗಳು  ಚೆಕ್ ಪೋಸ್ಟ್ ಗಳ ಮೂಲಕ ವಾಹನಗಳು ಎಗ್ಗಿಲ್ಲದೆ ಸಂಚರಿಸುತ್ತಿವೆ.

    ಪ್ರತಿ ಚೆಕ್ ಪೋಸ್ಟ್ ಗು ಒಬ್ಬ ನೂಡಲ್ ಅಧಿಕಾರಿ ಸೇರಿದಂತೆ ಒಂದು ಪಾಳಿಗೆ ಆರು ಮಂದಿ ಸರ್ಕಾರಿ ನೌಕರರನ್ನು ನಿಯೋಜಿಸಲಾಗಿದೆ. ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ. ಇವರ ಜೊತೆ ಪೊಲೀಸರನ್ನು ಸಹ ನಿಯೋಜಿಸಲಾಗಿದೆ. ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಿಂದ ಚಾಮರಾಜನಗರ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಬಾಣಹಳ್ಳಿ, ಹೆಗ್ಗವಾಡಿ, ಹಿರಿಕಾಟಿ, ಟಗರಪುರ ಸತ್ತೇಗಾಲ ಬಳಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು ಇವುಗಳ ಉದ್ದೇಶ ಕಾರ್ಯಗತವಾಗದೆ ನಿಷ್ಪ್ರಯೋಜಕವಾಗಿವೆ.

    ಚೆಕ್ ಪೋಸ್ಟ್ ಗಳ ಬಳಿ ಶಾಮಿಯಾನಗಳನ್ನು ಹಾಕಲಾಗಿದೆ. ತಮ್ಮ ಸರದಿ ಬಂದಾಗ ಇಲ್ಲಿಗೆ ಬರುವ ಸರ್ಕಾರಿ ನೌಕರರು ಮತ್ತು ಪೊಲೀಸರು ಶಾಮಿಯಾನದಡಿ ಕುಳಿತು ತಮ್ಮ ಅವಧಿ ಮುಗಿದ ನಂತರ ಹೋಗತೊಡಗಿದ್ದಾರೆ. ಹಾಗಾಗಿ ಯಾವ ಪುರುಷಾರ್ಥಕ್ಕೆ ಈ  ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ ಎಂಬ ಆರೋಪಗಳು ಕೇಳಿಬರತೊಡಗಿವೆ.

  • ಚಾಮರಾಜನಗರದಲ್ಲಿ ಮತ್ತೆ ಅಂತರ್ ಜಿಲ್ಲಾ ಚೆಕ್ ಪೋಸ್ಟ್ ಸ್ಥಾಪನೆ: ಸಚಿವ ಸುರೇಶ್ ಕುಮಾರ್

    ಚಾಮರಾಜನಗರದಲ್ಲಿ ಮತ್ತೆ ಅಂತರ್ ಜಿಲ್ಲಾ ಚೆಕ್ ಪೋಸ್ಟ್ ಸ್ಥಾಪನೆ: ಸಚಿವ ಸುರೇಶ್ ಕುಮಾರ್

    ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದು, ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಅಂತರ್ ಜಿಲ್ಲಾ ಚೆಕ್‍ಪೋಸ್ಟ್ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಅಲ್ಲದೆ ಲಾರಿಯಲ್ಲಿ ವಸ್ತು ಬದಲು ಪ್ರಯಾಣಿಕರನ್ನು ಕರೆತರುತ್ತಿದ್ದಾರೆ. ಹೀಗಾಗಿ ಲಾರಿಯಲ್ಲಿ ಡ್ರೈವರ್ ಹಾಗೂ ಕ್ಲೀನರ್ ಗಷ್ಟೇ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.

    ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಸಿಬ್ಬಂದಿ ಕೊರತೆಯಿದೆ. ಈ ಕುರಿತು ಆರೋಗ್ಯ ಸಚಿವರ ಗಮನಕ್ಕೆ ತರುತ್ತೇವೆ. ಜಿಲ್ಲಾ ಖನಿಜ ನಿಧಿಯಿಂದ 3.30 ಕೋಟಿ ರೂ.ಗಳನ್ನು ಬಳಸಿಕೊಳ್ಳುತ್ತೇವೆ. ಜೆಎಸ್‍ಎಸ್ ಆಸ್ಪತ್ರೆ ಜೊತೆ ಸರ್ಕಾರದ ಒಡಂಬಡಿಕೆ ಮಾಡಿಕೊಳ್ಳುತ್ತೇವೆ ಇದರಿಂದ ಚಿಕಿತ್ಸೆಗೆ ಹೆಚ್ಚು ಬೆಡ್ ಸೌಲಭ್ಯ ಸಿಗುತ್ತೆ ಎಂದರು.

    ರಾಜ್ಯದಲ್ಲಿ 8.48 ಲಕ್ಷ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಈಗಾಗಲೇ ಇಂಗ್ಲಿಷ್ ಹಾಗೂ ಗಣಿತ ಪರೀಕ್ಷೆ ಕೂಡ ಮುಗಿದಿದೆ. ಮೂರ್ನಾಲ್ಕು ಕಡೆ ಕೊರೊನಾ ವರದಿಯಾಗಿದೆ. ಆದರೆ ಪರೀಕ್ಷಾ ಕೇಂದ್ರದಿಂದ ಯಾರಿಗೂ ಕೊರೊನಾ ಹರಡಿಲ್ಲ. ಹಾಸನದ ವಿದ್ಯಾರ್ಥಿಗೆ ಡೆಂಘೀ ಜ್ವರ ಇತ್ತು. ಅಲ್ಲದೆ ನೆನ್ನೆ ಕೊರೊನಾ ಪಾಸಿಟಿವ್ ಬಂದಿದೆ. ಆದರೆ ಅದೇ ಕೊಠಡಿಯಲ್ಲಿ ಪರೀಕ್ಷೆ ಬರೆದ 19 ಮಕ್ಕಳ ಸ್ಯಾಂಪಲ್ ನೆಗೆಟಿವ್ ಬಂದಿದೆ. ಎಕ್ಸ್ ಪರ್ಟ್ ಕಮಿಟಿಯ ಮಾರ್ಗದರ್ಶನದಂತೆ ಪರೀಕ್ಷೆ ನಡೆಸಿದ್ದೇವೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ನಾವು ಸಹ ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿದ್ದೇವೆ. ಮಕ್ಕಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಮುಂದೆಯೂ ಕೂಡ ಸುರಕ್ಷತೆಯಿಂದ ಪರೀಕ್ಷೆ ನಡೆಸುತ್ತೇವೆ ಎಂದರು.

  • ನೆಲಮಂಗಲ ತಾಲೂಕಿನ ಜಿಲ್ಲಾ ಗಡಿ ಭಾಗದಲ್ಲಿ ಹೈ ಅಲರ್ಟ್

    ನೆಲಮಂಗಲ ತಾಲೂಕಿನ ಜಿಲ್ಲಾ ಗಡಿ ಭಾಗದಲ್ಲಿ ಹೈ ಅಲರ್ಟ್

    – ಎರಡು ಚೆಕ್ ಪೋಸ್ಟ್‌ಗಳಲ್ಲಿ ಅಲರ್ಟ್

    ಬೆಂಗಳೂರು: ಮಾರಾಣಾಂತಿಕ ಕೋವಿಡ್ 19 ಹಿನ್ನೆಲೆಯಲ್ಲಿ ಸುಮಾರು 17 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳನ್ನು ಒಳಗೊಂಡಿರುವ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಜಿಲ್ಲಾ ಗಡಿ ಭಾಗದಲ್ಲಿ ಹೈ ಅಲರ್ಟ್ ಮಾಡಲಾಗಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಹೈ ಅಲರ್ಟ್ ಮಾಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ನೆಲಮಂಗಲ ತಾಲೂಕಿನ ಎರಡು ಚೆಕ್ ಪೋಸ್ಟ್‌ಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಕುಣಿಗಲ್ ರಸ್ತೆಯ ಲ್ಯಾಂಕೋ ಟೋಲ್ ಹಾಗೂ ಹಳೆ ನಿಜಗಲ್ ಬಳಿ ಥರ್ಮಲ್ ತಪಾಸಣೆ ನಡೆಸುತ್ತಿದ್ದು, ಪ್ರತಿ ವಾಹನ ಸವಾರರ ತಪಾಸಣೆ ಕಡ್ಡಾಯವಾಗಿದೆ.

    ಪಾಸ್ ಇದ್ದು ಹೊರ ಜಿಲ್ಲೆಯಿಂದ ಬರುವ ವಾಹನಗಳಿಗೆ ಗ್ರೀನ್ ಸ್ಟಿಕ್ಕರ್, ಲೋಕಲ್ ವಾಹನಗಳಿಗೆ ಆರೆಂಜ್ ಸ್ಟಿಕ್ಕರ್ ಹಾಕಲಾಗುತ್ತಿದೆ. ಯಾವುದೇ ಪಾಸ್ ಇಲ್ಲದ ವಾಹನಗಳಿಗೆ ನಗರ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ ಎಂದು ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸ್ ತಿಳಿಸಿದ್ದಾರೆ.

    ಯಾವುದೇ ಕುಂಟು ನೆಪವೊಡ್ಡಿ ವಾಹನ ಬಂದರೆ ಸೀಜ್ ಮಾಡಲಾಗುತ್ತದೆ. ಹೊರ ಜಿಲ್ಲೆಯಿಂದ ಬರುವ ಎಲ್ಲಾ ವಾಹನ ಹಾಗೂ ಸವಾರರಿಗೆ ಮಾದವಾರದ ಬಿಐಇಸಿ ಮೈದಾನದಲ್ಲಿ ಪರೀಕ್ಷೆ ಕಡ್ಡಾಯವಾಗಿದೆ. ಹೊರ ರಾಜ್ಯ, ಜಿಲ್ಲೆ ಹಾಗೂ ಲೋಕಲ್ ವಾಹನಗಳ ಸುಲಭ ಗುರುತಿಗಾಗಿ ಸ್ಟಿಕ್ಕರ್ ಅಳವಡಿಕೆ ಮಾಡಲಾಗಿದೆ ಎಂದು ಶ್ರೀನಿವಾಸ್ ಹೇಳಿದರು.

  • ಚೆಕ್‍ಪೋಸ್ಟ್ ದಾಟಲು ಯತ್ನ – ಮೂವರು ಕ್ವಾರಂಟೈನ್

    ಚೆಕ್‍ಪೋಸ್ಟ್ ದಾಟಲು ಯತ್ನ – ಮೂವರು ಕ್ವಾರಂಟೈನ್

    ಮಡಿಕೇರಿ: ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಚೆಕ್‍ಪೋಸ್ಟ್ ದಾಟಲು ಯತ್ನಿಸಿದ ಮೂವರನ್ನು ಕ್ವಾರಂಟೈನ್‍ನಲ್ಲಿ ಇರಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕುಟ್ಟ ಹಳೆ ಚೆಕ್‍ಪೋಸ್ಟ್ ಬಳಿ ನಡೆದಿದೆ.

    ಕುಟ್ಟ ಹಳೆ ಚೆಕ್‍ಪೋಸ್ಟ್ ದಾಟಲು ಯತ್ನಿಸಿದ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ನಿಯಮ ಉಲ್ಲಂಘಿಸಿ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಕಾರ್ಮಿಕರನ್ನು ಕಳುಹಿಸಲು ಯತ್ನಿಸುತ್ತಿದ್ದ ಕೆ.ಬಾಡಗ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸಿ.ಡಿ ಬೋಪಣ್ಣ, ಕೇರಳ ಮೂಲದ ಕಾರ್ಮಿಕರಾದ ಮಟ್ಟನೈಲ್ ಅನೂಪ್ ಹಾಗೂ ಸತ್ಯ ಅವರನ್ನು ವಶಕ್ಕೆ ಪಡೆದು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೊಡಗಿನಲ್ಲಿ ಒಂದು ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿತ್ತು, ಆದರೆ ಸೋಂಕಿತ ಚಿಕಿತ್ಸೆ ಪಡೆದು ಕೊರೊನಾದಿಂದ ಗುಣವಾಗಿದ್ದಾರೆ. ಹೀಗಾಗಿ ಸದ್ಯ ಕೊಡಗಿನಲ್ಲಿ ಯಾವುದೇ ಸೋಂಕಿತ ಪ್ರಕರಣಗಳು ಇಲ್ಲದ ಹಿನ್ನೆಲೆ ಕೊರೊನಾ ಮುಕ್ತ ಜಿಲ್ಲೆಯಾಗಿದೆ.

  • ಪತ್ನಿ, ಮಗು ನೋಡಿ ವಾಪಸ್ ಬರೋವಾಗ ಲಾಕ್‍ಡೌನ್ ಅಡ್ಡಿ – ಹುಚ್ಚು ಸಾಹಸಕ್ಕೆ ಕೈ ಹಾಕಿ ಜೀವಬಿಟ್ಟ ಕಂಡಕ್ಟರ್

    ಪತ್ನಿ, ಮಗು ನೋಡಿ ವಾಪಸ್ ಬರೋವಾಗ ಲಾಕ್‍ಡೌನ್ ಅಡ್ಡಿ – ಹುಚ್ಚು ಸಾಹಸಕ್ಕೆ ಕೈ ಹಾಕಿ ಜೀವಬಿಟ್ಟ ಕಂಡಕ್ಟರ್

    ಬಾಗಲಕೋಟೆ: ಪತ್ನಿ ಮತ್ತು ಮಗು ನೋಡಿಕೊಂಡು ವಾಪಸ್ ಬರುವಾಗ ಕೊರೊನಾ ಲಾಕ್‍ಡೌನ್ ಅಡ್ಡಿಯಾದ ಪರಿಣಾಮ, ಕೆಎಸ್ಆರ್‌ಟಿಸಿ ಕಂಡಕ್ಟರ್ ಓರ್ವ ಹುಚ್ಚು ಸಾಹಸಕ್ಕೆ ಕೈ ಹಾಕಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

    ಹುನಗುಂದದ ನಿವಾಸಿ ಮಲ್ಲಪ್ಪ ಬೊಮ್ಮಣಗಿ (45) ಮೃತ ಕೆಎಸ್ಆರ್‌ಟಿಸಿ ಕಂಡಕ್ಟರ್. ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಪ್ಪ ತನ್ನ ಪತ್ನಿ ಮತ್ತು ಮಗುವನ್ನು ನೋಡಲು ಗ್ರಾಮಕ್ಕೆ ತೆರಳಿದ್ದನು. ಬಳಿಕ ಇಬ್ಬರನ್ನು ನೋಡಿಕೊಂಡು ವಾಪಸ್ ಬರುತ್ತಿದ್ದನು. ಈ ವೇಳೆ ಚೆಕ್‍ಪೋಸ್ಟ್ ಬಳಿ ಹೋದರೆ ಪೊಲೀಸರು ಹೋಗಲು ಬಿಡುವುದಿಲ್ಲ ಎಂದುಕೊಂಡು ತಂಗಡಗಿ ಬಳಿಯ ನದಿಯಲ್ಲಿ ಈಜಿ ದಡ ಸೇರಲು ಯತ್ನಿಸಿದ್ದಾನೆ.

    ಅದರಂತೆಯೇ ಮಲ್ಲಪ್ಪ ಕೃಷ್ಣಾ ನದಿಯಲ್ಲಿ ಈಜಲು ಮುಂದಾಗಿದ್ದಾನೆ. ಆದರೆ ನದಿಯಲ್ಲಿ ಈಜಲಾಗದೇ ಕಂಡಕ್ಟರ್ ಮಲ್ಲಪ್ಪ ಮೃತಪಟ್ಟಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಪರಿಶೀಲನೆ ನಡೆಸಿ, ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ.

    ಮೃತ ಮಲ್ಲಪ್ಪ ಚೆಕ್‍ಪೋಸ್ಟ್ ಬಳಿ ಹೋಗಿ ಪೊಲೀಸರು ಹತ್ತಿರ ಮನವಿ ಮಾಡಿಕೊಂಡಿಲ್ಲ. ಆದರೆ ಪೊಲೀಸರಿಗೆ ಹೆದರಿ ನದಿಯಿಂದ ಈಜಿ ತಡ ಸೇರುವ ಯತ್ನ ಮಾಡಿ ಮೃತಪಟ್ಟಿದ್ದಾನೆ.

  • ಜೇಬಿಗೆ ದುಡ್ಡು ಇಟ್ಟರೆ ನೋ ಚೆಕ್ಕಿಂಗ್ – ಕೋಳಿ, ತರಕಾರಿ, ಅಕ್ಕಿ ರೂಪದಲ್ಲಿ ಪೊಲೀಸರಿಂದ ವಸೂಲಿ

    ಜೇಬಿಗೆ ದುಡ್ಡು ಇಟ್ಟರೆ ನೋ ಚೆಕ್ಕಿಂಗ್ – ಕೋಳಿ, ತರಕಾರಿ, ಅಕ್ಕಿ ರೂಪದಲ್ಲಿ ಪೊಲೀಸರಿಂದ ವಸೂಲಿ

    ಮೈಸೂರು: ಎಚ್.ಡಿ ಕೋಟೆಯ ಅಂತರಸಂತೆ ಉಪಠಾಣೆಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಸೂಲಿ ದಂಧೆಗೆ ಇಳಿದಿದ್ದಾರೆ. ಕರ್ನಾಟಕ ಭಾಗದಿಂದ ಕೇರಳಕ್ಕೆ ಸಾಗುವ ಹಾಗೂ ಕೇರಳದಿಂದ ಕರ್ನಾಟಕಕ್ಕೆ ಸಾಗುವ ವಾಹನಗಳೇ ಚೆಕ್ ಪೋಸ್ಟ್ ನಲ್ಲಿರುವ ಪೊಲೀಸರ ಟಾರ್ಗೆಟ್ ಆಗಿದೆ.

    ವಾಹನದಲ್ಲಿ ಏನ್ ಸಾಗಿಸಿದರೂ ಪೊಲೀಸರು ತಪಾಸಣೆ ಮಾಡುವುದಿಲ್ಲ. ಅವರು ಕುಳಿತ್ತಿದ್ದ ಸ್ಥಳಕ್ಕೆ ಹೋಗಿ ನೂರು ಅಥವಾ ಐನೂರು ರೂ. ಕೊಡಬೇಕು. ಅಷ್ಟೇ ಅಲ್ಲದೆ, ವಾಹನಗಳಲ್ಲಿ ಕೋಳಿ ಸಾಗಿಸುತ್ತಿದ್ದರೆ, ಅದನ್ನು ಪೊಲೀಸರು ವಸೂಲಿ ರೂಪದಲ್ಲಿ ಪಡೆದುಕೊಳ್ಳುತ್ತಾರೆ.

    ಕೋಳಿ ಅಲ್ಲದೆ ತರಕಾರಿ, ಅಕ್ಕಿಯನ್ನು ಕೂಡ ವಸೂಲಿ ರೂಪದಲ್ಲಿ ಪಡೆಯುತ್ತಾರೆ. ಚೆಕ್ ಪೋಸ್ಟ್ ನಲ್ಲಿ ಪೊಲೀಸರ ಈ ವಸೂಲಿ ದಂಧೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.