Tag: cheetah safari

  • ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರವಾಸಿಗರ ಮಿನಿ ಬಸ್ ಏರಿದ ಚಿರತೆ

    ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರವಾಸಿಗರ ಮಿನಿ ಬಸ್ ಏರಿದ ಚಿರತೆ

    ಬೆಂಗಳೂರು: ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಿದ್ದರಿಂದ ಕೆಲವರಿಗೆ ಆತಂಕವಾಗಿದ್ದು, ಕೆಲವರು ಕಿಟಕಿಯಲ್ಲಿ ಚಿರತೆ (Cheetah) ನೋಡಿ ಖುಷಿ ಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ (Bannerghatta Biological Park)  ನಡೆದಿದೆ.

    ಇತ್ತೀಚಿಗೆ ಆರಂಭವಾಗಿರುವ ಚಿರತೆ ಸಫಾರಿಯಲ್ಲಿ (Cheetah Safari) ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್‌ಗಳ ಮೇಲೆ ಹತ್ತುವ ವಾಡಿಕೆ ಮಾಡಿಕೊಂಡಿವೆ. ಅದೇ ರೀತಿ ಇಂದು ಸಹ ಒಂದು ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಗುರ್ ಎಂದಿದೆ. ನಂತರ ಚಾಲಕ ಬಸ್ ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್‌ನಿಂದ ಕೆಳಕ್ಕೆ ಹಾರಿ ಹೋಗಿದೆ. ಇದನ್ನೂ ಓದಿ: ಕುರ್ಚಿ ಕಾದಾಟ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಭೇಟಿಯಾದ ವಿಜಯೇಂದ್ರ

    ಕಳೆದ ಮೂರು ತಿಂಗಳ ಹಿಂದೆ ಉದ್ಯಾನವನದ ಕರಡಿ, ಸಿಂಹ ಸಫಾರಿಗಳಿಗೆ ಹೊಂದಿಕೊಂಡಂತೆ ಇರುವ ವಿಶಾಲ ತೆರೆದ ಆವರಣದಲ್ಲಿ 19 ಚಿರತೆಗಳಿಗೆ ಆಶ್ರಯ ನೀಡಿ ಪ್ರತಿ ದಿನ ಒಂದೊಂದು ತಂಡವನ್ನು ಸಫಾರಿಗೆ ಬಿಡಲಾಗುತ್ತಿದೆ. ಸದ್ಯ ಚಿರತೆಗಳನ್ನು ಸಫಾರಿಯಲ್ಲಿ ನೋಡಿ ಖುಷಿ ಪಡುತ್ತಿದ್ದಾರೆ. ಇದನ್ನೂ ಓದಿ: ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣ

    ಚಿರತೆಗಳು ಬುದ್ಧಿವಂತ ಪ್ರಾಣಿಗಳು ಚಿಕ್ಕ ಜಾಗ ಸಿಕ್ಕರೂ ನುಸುಳಿ ಬಿಡುತ್ತವೆ ಹಾಗಾಗಿ ಪ್ರವಾಸಿ ವಾಹನದಲ್ಲಿ ಕಿಟಕಿಯ ಗ್ಲಾಸ್‌ಗಳನ್ನು ಮುಚ್ಚಿರಬೇಕು. ಮಕ್ಕಳನ್ನು ಕಿಟಕಿ ಪಕ್ಕ ಕೂರಿಸಿದ್ದರೆ ಎಚ್ಚರಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು. ಅದೇ ರೀತಿ ನಮ್ಮ ವಾಹನಗಳ ಚಾಲಕ ಮತ್ತು ಸಹಾಯಕ ಸಿಬ್ಬಂದಿಗಳಿಗೂ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೊಯಿದ್ದೀನ್ ಬಾವ ಸಹೋದರನ ಶವ ಫಲ್ಗುಣಿ ನದಿಯಲ್ಲಿ ಪತ್ತೆ

    ಚಿರತೆಗಳು ನಾಚಿಕೆ ಸ್ವಭಾವದ ಪ್ರಾಣಿ. ಇವುಗಳಿಗೆ ಯಾವುದೇ ಅಪಾಯ ಇಲ್ಲ ಎಂಬುದು ಖಾತರಿ ಪಡಿಸಿಕೊಂಡ ಮೇಲೆಯೇ ನಡೆದು ಸಾಗುವುದು. ಹಾಗಾಗಿ ಪ್ರತಿ ದಿನ ವಾಹನಗಳನ್ನು ನೋಡಿ ಅಪಾಯವಿಲ್ಲ ಎಂಬುದು ಖಚಿತವಾಗಿದ್ದರಿಂದ ವಾಹನಗಳ ಬಳಿ ಬರುವುದು, ಮೇಲೆ ಏರುವುದು ವಾಡಿಕೆ ಮಾಡಿ ಕೊಂಡಿವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಚೆನ್ನೈ ಏರ್ ಶೋ ವೇಳೆ ದುರಂತ – ಬಿಸಿಲಿನ ತಾಪಕ್ಕೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ

  • ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ

    ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ

    ಬೆಂಗಳೂರು: ಬನ್ನೇರುಘಟ್ಟ (Bannerughatta) ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ.

    ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು.

    ಮೈಸೂರು ಶ್ರೀ ಚಾಮರಾಜೇಂದ್ರ ಮಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.

    ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು. ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.

    ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು.

    ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು.

    ಇತರ ನಿರ್ಣಯಗಳು:
    >. ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ.

    >. ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.

    >. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.

    >. ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ.