Tag: Cheetahs

  • ಚೀತಾಗಳಿಗೆ ಕುಡಿಯಲು ನೀರು ಕೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಕೆಲಸದಿಂದ ವಜಾ!

    ಚೀತಾಗಳಿಗೆ ಕುಡಿಯಲು ನೀರು ಕೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಕೆಲಸದಿಂದ ವಜಾ!

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಚೀತಾ (Cheetahs) ಮತ್ತು ಅದರ ಮರಿಗಳಿಗೆ ನೀರು ನೀಡಿದ್ದ ಅರಣ್ಯ ಇಲಾಖೆಯ ಚಾಲಕನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

    ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ನಮೀಬಿಯಾದಿಂದ ಸ್ಥಳಾಂತರಿಸಲಾದ ಚೀತಾ ಜ್ವಾಲಾ ಹಾಗೂ ಅದರ ಮರಿಗಳು ಆಗ್ರಾ ಶ್ರೇಣಿಯ ಸಮೀಪವಿರುವ ಹೊಲಗಳಲ್ಲಿ ಓಡಾಡುತ್ತಿದ್ದವು. ಈ ವೇಳೆ ಚಾಲಕ ಚೀತಾ ಹಾಗೂ ಅದರ ಮರಿಗಳನ್ನು ಬಾ ಎಂದು ಕರೆದು, ನೀರು ನೀಡಿದ್ದ. ಈ ವೇಳೆ ಅವು ಬಂದು ನೀರು ಕುಡಿದಿದ್ದವು. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಅಧಿಕೃತ ಸೂಚನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ವಜಾಗೊಂಡ ಸಿಬ್ಬಂದಿ, ಜ್ವಾಲಾ ಮತ್ತು ಅದರ ನಾಲ್ಕು ಮರಿಗಳು ಬಿಸಿಲಿನಲ್ಲಿ ತೆರೆದ ಕೃಷಿ ಹೊಲಗಳ ಬಳಿ ನಿರಂತರವಾಗಿ ಚಲಿಸುತ್ತಿದ್ದವು. ಅವುಗಳು ಸಮೀಪದ ಗ್ರಾಮಗಳ ಕಡೆಗೆ ಹೋಗುವುದನ್ನು ತಪ್ಪಿಸಿ, ಕಾಡಿನೆಡೆಗೆ ಕಳುಹಿಸಲು ನೀರು ಕೊಟ್ಟಿದ್ದಾಗಿ ಹೇಳಿಕೊಂಡಿದ್ದಾನೆ.

    ಮಾನವ-ಚೀತಾ ಸಂಘರ್ಷ ಉಂಟಾಗದಂತೆ ಕಾಡಿನ ಕಡೆ ತಿರುಗಿಸಲು ಮೇಲ್ವಿಚಾರಣಾ ತಂಡಕ್ಕೆ ಸಾಮಾನ್ಯವಾಗಿ ಸೂಚನೆ ನೀಡಲಾಗಿದೆ. ಚೀತಾ ಕೃಷಿ ಹೊಲಗಳಿಗೆ ಅಥವಾ ಮಾನವ ವಾಸಸ್ಥಳದ ಹತ್ತಿರ ಹೋದಾಗಲೆಲ್ಲಾ ಅವುಗಳಿಗೆ ಏನಾದರೂ ಆಮಿಷ ತೋರಿಸಿ ಕಾಡಿನ ಕಡೆ ತಿರುಗಿಸಲು ಸಿಬ್ಬಂದಿ ನೇಮಿಸಲಾಗಿದೆ. ಚೀತಾಗಳನ್ನು ಹತ್ತಿರದಲ್ಲಿ ನಿರ್ವಹಿಸಲು ಮೇಲ್ವಿಚಾರಣಾ ತಂಡಕ್ಕೆ ನೀಡಲಾದ ತರಬೇತಿಯ ಪ್ರಕಾರ, ಚಿರತೆಗಳಿಂದ ದೂರ ಸರಿಯಲು ಸ್ಪಷ್ಟ ಸೂಚನೆಗಳಿವೆ. ನಿರ್ದಿಷ್ಟ ಕಾರ್ಯವನ್ನು ನಿರ್ವಹಿಸಲು ಅಧಿಕೃತ ವ್ಯಕ್ತಿಗಳು ಮಾತ್ರ ಅವುಗಳ ಹತ್ತಿರ ಹೋಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೆಪ್ಟೆಂಬರ್ 2022ರಲ್ಲಿ 8 ನಮೀಬಿಯನ್ ಚೀತಾಗಳನ್ನು ಕೆಎನ್‌ಪಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಫೆಬ್ರವರಿ 2023 ರಲ್ಲಿ, ದಕ್ಷಿಣ ಆಫ್ರಿಕಾದಿಂದ ಅಭಯಾರಣ್ಯಕ್ಕೆ 12 ಹೆಚ್ಚಿನ ಚೀತಾಗಳನ್ನು ಸ್ಥಳಾಂತರಿಸಲಾಯಿತು. ಸಂರಕ್ಷಿತ ಅರಣ್ಯದಲ್ಲಿ ಈಗ 26 ಚೀತಾಗಳಿದ್ದು, ಅದರಲ್ಲಿ 14 ಭಾರತದಲ್ಲಿ ಜನಿಸಿದ ಮರಿಗಳು ಸೇರಿವೆ.

  • ದಕ್ಷಿಣ ಆಫ್ರಿಕಾದಿಂದ ತರಿಸಿದ್ದ 12ರಲ್ಲಿ ಒಂದು ಚೀತಾ ಸಾವು!

    ದಕ್ಷಿಣ ಆಫ್ರಿಕಾದಿಂದ ತರಿಸಿದ್ದ 12ರಲ್ಲಿ ಒಂದು ಚೀತಾ ಸಾವು!

    ಭೋಪಾಲ್:‌ ಕಳೆದ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಿಂದ ತರಿಸಿದ್ದ 12 ಚೀತಾಗಳ (Cheetah) ಪೈಕಿ ಒಂದು ಚೀತಾ ಭಾನುವಾರ ಸಾವನ್ನಪ್ಪಿದೆ.

    ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಪರಿಚಯಿಸಲಾಗಿದ್ದ 8 ಚೀತಾಗಳ ಪೈಕಿ, ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಸಾಶಾ ಹೆಸರಿನ 3 ವರ್ಷದ ಹೆಣ್ಣು ಚೀತಾ ಮಾರ್ಚ್‌ ತಿಂಗಳಲ್ಲಿ ಮೃತಪಟ್ಟಿತ್ತು. ಇದೀಗ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಿಂದ ತರಿಸಲಾಗಿದ್ದ ಉದಯ್‌ ಹೆಸರಿನ ಗಂಡು ಚೀತಾ ಅನಾರೋಗ್ಯದಿಂದ ಸಾವನ್ನಪ್ಪಿದೆ ಎಂದು ಮಧ್ಯಪ್ರದೇಶದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್‌ ಚೌಹಾಣ್‌ ತಿಳಿಸಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ಉದಯ್‌ ಹೆಸರಿನ ಚೀತಾ ಭಾನುವಾರ ಬೆಳಗ್ಗೆ ಅಸ್ವಸ್ಥಗೊಂಡಿತ್ತು. ಇದನ್ನು ಗಮನಿಸಿದ ಅರಣ್ಯಾಧಿಕಾರಿಗಳ ತಂಡ ಅದನ್ನು ವೈದ್ಯಕೀಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲು ಪ್ರಾರಂಭಿಸಿತ್ತು. ಆದರೆ ಸಂಜೆ 4 ಗಂಟೆ ವೇಳೆಗೆ ಚಿಕಿತ್ಸೆ ವೇಳೆ ಸಾವನ್ನಪ್ಪಿದೆ. ಸೋಮವಾರ ಪಶುವೈದ್ಯಾಧಿಕಾರಿಗಳ ತಂಡ ಮರಣೋತ್ತರ ಪರೀಕ್ಷೆ ನಡೆಸಲಿದೆ.

    ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು (Wildlife) ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ತಮ್ಮ ಜನ್ಮದಿನವಾದ ಸೆ.17 ರಂದು ಪ್ರಧಾನಿ ಮೋದಿ (Narendra Modi) ಈ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡುಗಡೆ ಮಾಡಲಾಗಿತ್ತು. ಬಳಿಕ ಚೀತಾಗಳು ಕಾಡಿನ ವಾತಾವರಣಕ್ಕೆ ಹೊಂದಿಕೊಂಡು ಸ್ವತಃ ಬೇಟೆಯಾಡಲು ಆರಂಭಿಸಿದ್ದವು. ಇದಾದ ತಿಂಗಳುಗಳ ಬಳಿಕ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳನ್ನು ಭಾರತಕ್ಕೆ ತರಿಸಲಾಯಿತು.

    ಚೀತಾ ವಿಶೇಷತೆಯೇನು?
    ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು, ಆದರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅದಾದ 75 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೊ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ.

  • ಭಾರತಕ್ಕೆ ಮತ್ತೆ 12 ಚೀತಾಗಳ ಆಗಮನ

    ಭಾರತಕ್ಕೆ ಮತ್ತೆ 12 ಚೀತಾಗಳ ಆಗಮನ

    ಭೋಪಾಲ್: ನಮೀಬಿಯಾದಿಂದ (Namibia) 8 ಚೀತಾಗಳು (Cheetahs) ಬಂದಿಳಿದ ತಿಂಗಳುಗಳ ಬಳಿಕ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಭಾರತಕ್ಕೆ ಬಂದಿಳಿದಿವೆ.

    ವಾಯು ಸೇನೆಯ C-17 ಗ್ಲೋಬ್‌ಮಾಸ್ಟರ್ ವಿಮಾನದಲ್ಲಿ ದಕ್ಷಿಣ ಆಫ್ರಿಕಾದ 12 ಚೀತಾಗಳು ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ ತಲುಪಿವೆ. ಕಸ್ಟಮ್ಸ್ ಹಾಗೂ ಇತರ ಅನುಮತಿಗಳ ನಂತರ ಅವುಗಳನ್ನು ಎಂ-17 ಚಾಪರ್‌ಗಳಲ್ಲಿ ಸುಮಾರು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ (Kuno National Park) ಸಾಗಿಸಲಾಗುತ್ತದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಗುಡ್‌ನ್ಯೂಸ್- ಫೆಬ್ರವರಿಯಿಂದ ಚೀತಾ ಪ್ರವಾಸೋದ್ಯಮ ಸಾಧ್ಯತೆ

    ಒಟ್ಟು 7 ಗಂಡು ಮತ್ತು 5 ಹೆಣ್ಣು ಚೀತಾಗಳು ದಕ್ಷಿಣ ಆಫ್ರಿಕಾದಿಂದ ಬಂದಿದ್ದು, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕ್ವಾರಂಟೈನ್ ಆವರಣಗಳಿಗೆ ಬಿಡುಗಡೆ ಮಾಡಲಿದ್ದಾರೆ.

    ವನ್ಯಜೀವಿ ಕಾನೂನಿನ ಪ್ರಕಾರ 30 ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕಾಗುತ್ತದೆ. ಅದಕ್ಕಾಗಿ ಚೀತಾಗಳಿಗೆ ಮಧ್ಯಪ್ರದೇಶದಲ್ಲಿ 10 ಕ್ವಾರಂಟೈನ್ ಆವರಣಗಳನ್ನ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: 70 ವರ್ಷಗಳ ನಂತರ ಭಾರತಕ್ಕೆ ಮರಳಿದ ಚೀತಾ – ನಮೀಬಿಯಾದ 8 ಚೀತಾಗಳನ್ನು ಬಿಡುಗಡೆ ಮಾಡಿದ ಮೋದಿ

    ಕಳೆದ ವರ್ಷವೂ ಸಹ ನಮೀಬಿಯಾದಿಂದ 8 ಚಿರತೆಗಳನ್ನು ಭಾರತಕ್ಕೆ ತರಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನವಾದ ಸೆಪ್ಟೆಂಬರ್ 17 ರಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ವಾತಾವರಣಕ್ಕೆ ಹೊಂದಿಕೊAಡ ನಂತರ ಅವುಗಳನ್ನು ಮುಕ್ತವಾತಾವರಣಕ್ಕೆ ಬಿಡಲಾಗಿತ್ತು. ನಮೀಬಿಯಾದಿಂದ ಬಂದ ಚೀತಾಗಳು ಇದೀಗ ಬೇಟೆಯಾಡಲು ಆರಂಭಿಸಿದ್ದು ಶೀಘ್ರದಲ್ಲೇ ಚೀತಾ ಪ್ರವಾಸೋದ್ಯಮ ಆರಂಭಿಸುವ ಮುನ್ಸೂಚನೆಯನ್ನು ಅರಣ್ಯ ಇಲಾಖೆ ನೀಡಿದೆ.

    ಭಾರತದಲ್ಲಿ 1947ರಲ್ಲಿ ಕೊನೆಯ ಚೀತಾ ಮೃತಪಟ್ಟಿತ್ತು. ಆನಂತರ 1952ರಲ್ಲಿ ಅಳಿದುಹೋದ ಸಂತತಿ ಎಂದು ಘೋಷಿಸಲಾಯಿತು. 2020ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ ಚೀತಾಗಳನ್ನು ಮರುಪರಿಚಯಿಸುವ ಕಾರ್ಯಕ್ರಮಗಳು ಚುರುಕುಗೊಂಡವು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚೀತಾ

    ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚೀತಾ

    ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ (Narendra Modi) 72ನೇ ಹುಟ್ಟುಹಬ್ಬದ (Birthday) ಸಂಭ್ರಮ. ಈ ವಿಶೇಷ ದಿನದಂದು ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) 8 ಚೀತಾಗಳನ್ನು ಭಾರತಕ್ಕೆ ತರಲಾಗಿದೆ.

    ಮಧ್ಯಪ್ರದೇಶದ ಕುನ್ಹೋ-ಪಾಲ್‌ಪುರ್ ವನ್ಯಜೀವಿ ಸಂರಕ್ಷಣಾ ಕೇಂದ್ರದಲ್ಲಿ ಈ ಚೀತಾಗಳನ್ನು ಬಿಡಲಾಗುತ್ತದೆ. ಎರಡರಿಂದ ಆರು ವರ್ಷ ವಯಸ್ಸಿನ ಮೂರು ಗಂಡು, ಐದು ಹೆಣ್ಣು ಚೀತಾಗಳನ್ನು ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾಗಿದೆ. ನಮೀಬಿಯಾದಿಂದ 8,000 ಕಿಲೋಮೀಟರ್ ಪ್ರಯಾಣ ಮಾಡಿ ಚೀತಾಗಳು ಭಾರತಕ್ಕೆ ಬಂದಿವೆ. ಇದನ್ನೂ ಓದಿ: ವಿಮಾನದಲ್ಲಿ ಭಾರತಕ್ಕೆ ಬರುತ್ತಿದೆ 8 ಚೀತಾ – ವಿಶೇಷತೆ ಏನು? ತಯಾರಿ ಹೇಗೆ?

    ವಿಮಾನ ಪ್ರಯಾಣ ವೇಳೆ ಚೀತಾಗಳಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಜಂಬೋ ಜೆಟ್ ವಿಮಾನ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಈಗಾಗಲೇ ಗ್ವಾಲಿಯಾರ್‌ ನಿಲ್ದಾಣಕ್ಕೆ ಬಂದಿರುವ ಚಿರತೆಗಳನ್ನು ಹೆಲಿಕಾಪ್ಟರ್ ಮೂಲಕ ಕುನ್ಹೋ ನ್ಯಾಷನಲ್ ಪಾರ್ಕ್‌ಗೆ ತರಲಾಗುತ್ತದೆ. ಬೆಳಗ್ಗೆ 10:45ಕ್ಕೆ ಪ್ರಧಾನಿ ಮೋದಿ ಖುದ್ದಾಗಿ ಇವುಗಳನ್ನು ಬಿಡುಗಡೆ ಮಾಡಲಿದ್ದಾರೆ. ಈ ಚೀತಾಗಳನ್ನು ವಿಮಾನಕ್ಕೆ ಹತ್ತಿಸುವ ಮುನ್ನ ತಿಂಗಳು ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಯಾವುದೇ ಸೋಂಕಿಗೆ ತುತ್ತಾಗದಂತೆ, ಸೋಂಕು ಹಬ್ಬದಂತೆ ಚೀತಾಗಳಿಗೆ ಲಸಿಕೆ ನೀಡಲಾಗಿದೆ. ಈ ಚೀತಾಗಳು ಭಾರತದ ವಾತಾವರಣಕ್ಕೆ ಹೊಂದಿಕೊಳ್ಳಲು ಕೆಲ ಸಮಯ ಹಿಡಿಯುವ ಕಾರಣ, ಅವುಗಳಿಗೆ ಮುಕ್ತವಾಗಿ ವಿಹರಿಸಲು ಅವಕಾಶ ನೀಡಲಾಗುತ್ತದೆ.

    ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಸೇರಿದಂತೆ ಅನೇಕ ಗಣ್ಯರು ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಎಎಪಿ ಶಾಸಕ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]