Tag: chef chidambara

  • ತಮ್ಮ ಚಿತ್ರದ ಟೈಟಲ್ ಸಾಂಗ್ ಹಾಡಿದ ನಟ ಅನಿರುದ್ಧ

    ತಮ್ಮ ಚಿತ್ರದ ಟೈಟಲ್ ಸಾಂಗ್ ಹಾಡಿದ ನಟ ಅನಿರುದ್ಧ

    ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ  “chef ಚಿದಂಬರ” ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಆರಂಭದ ಫಸ್ಟ್ ಲುಕ್ ಪೋಸ್ಟರ್ ನಿಂದಲೇ ಈ ಚಿತ್ರ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್  ಬಿಡುಗಡೆಯಾಗಿದೆ. ಇದು ಬಿಡುಗಡೆಯಾಗುತ್ತಿರುವ ಚಿತ್ರದ ಮೊದಲ ಗೀತೆಯೂ ಹೌದು. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳಿಧರ್ ಸಂಗೀತ ನೀಡಿರುವ ಈ ಹಾಡನ್ನು ನಾಯಕ ಅನಿರುದ್ಧ್ ಅವರೆ ಹಾಡಿದ್ದಾರೆ. ಅನಿರುದ್ದ್ ಅವರ ಗಾಯನಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.  ಈ ಹಾಡಿನ ಕೆಲವು ಭಾಗ  RAP   ಶೈಲಿಯಲ್ಲಿದ್ದು ಅದನ್ನು ರೋಹಿತ್ ಅವರು ಹಾಡಿದ್ದಾರೆ. ಮೊದಲ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿದೆ.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, “ವಿಕ್ರಾಂತ್ ರೋಣ” ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದ ತಾರಾಬಳಗದಲ್ಲಿದ್ದಾರೆ.

  • ನಿಧಿ ಸುಬ್ಬಯ್ಯ ಕೈಗೆ ಬೇಡಿ: ಇದು ‘chef ಚಿದಂಬರ’ ರಹಸ್ಯ

    ನಿಧಿ ಸುಬ್ಬಯ್ಯ ಕೈಗೆ ಬೇಡಿ: ಇದು ‘chef ಚಿದಂಬರ’ ರಹಸ್ಯ

    ಟ ಅನಿರುದ್ಧ್ ಜತ್ಕರ್ (Aniruddha) ನಾಯಕನಾಗಿ ಅಭಿನಯಿಸಿರುವ ಹಾಗೂ ‘ರಾಘು’ ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ ‘chef ಚಿದಂಬರ’ (Chef Chidambara) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.  ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಇತ್ತೀಚಿಗೆ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆಯಾಗಿದೆ‌. ಈ ಚಿತ್ರದಲ್ಲಿ ಮೋನ ಎಂಬುದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ನಿಧಿ ಸುಬ್ಬಯ್ಯ (Nidhi Subbaiah) ಅವರ ಕೈಯಲ್ಲಿ ಬೇಡಿಯಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

    ಬಹಳ ದಿನಗಳ ನಂತರ ನಿಧಿ ಸುಬ್ಬಯ್ಯ ಅವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ನಿಧಿ ಅವರ ಪೋಸ್ಟರ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕುತೂಹಲ ಮೂಡಿಸಿರುವ ನಿಧಿ ಅವರ ಪಾತ್ರ ಏನು ಎಂಬುದನ್ನು ಚಿತ್ರದಲ್ಲಿ ನೋಡಬೇಕು ಎನ್ನುತ್ತಾರೆ ನಿರ್ದೇಶಕ ಆನಂದರಾಜ್. ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, ‘ವಿಕ್ರಾಂತ್ ರೋಣ’ ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

     

    ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ‘ಲವ್ ಮಾಕ್ಟೇಲ್’ ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು ‘chef ಚಿದಂಬರ’ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘chef ಚಿದಂಬರ’ ಚಿತ್ರದ ಡಬ್ಬಿಂಗ್ ಕಾರ್ಯದಲ್ಲಿ ಅನಿರುದ್ಧ

    ‘chef ಚಿದಂಬರ’ ಚಿತ್ರದ ಡಬ್ಬಿಂಗ್ ಕಾರ್ಯದಲ್ಲಿ ಅನಿರುದ್ಧ

    ಟ ಅನಿರುದ್ಧ್ ಜತ್ಕರ್ (Aniruddha) ನಾಯಕನಾಗಿ ಅಭಿನಯಿಸಿರುವ ಹಾಗೂ ರಾಘು ಚಿತ್ರ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ ‘chef ಚಿದಂಬರ’ (Chef Chidambara) ಚಿತ್ರದ ಚಿತ್ರೀಕರಣ ಇತ್ತೀಚಿಗೆ ಮುಕ್ತಾಯವಾಗಿದೆ. ಪ್ರಸ್ತುತ ಚಿತ್ರಕ್ಕೆ ಮಾತಿನ ಜೋಡಣೆ (ಡಬ್ಬಿಂಗ್) (Dubbing)  ನಡೆಯುತ್ತಿದೆ.   ನಾಯಕ ಅನಿರುದ್ದ್ ಮಾತಿನ ಮೂಲಕ ತಮ್ಮ ಪಾತ್ರಕ್ಕೆ ಜೀವ ತುಂಬುತಿದ್ದಾರೆ.

    ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.  ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ.

    ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, ವಿಕ್ರಾಂತ್ ರೋಣ ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು chef ಚಿದಂಬರ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಪೂರ್ಣ ಶೂಟಿಂಗ್ ಮುಗಿಸಿದ ಅನಿರುದ್ಧ್ ಜತ್ಕರ್

    ಸಂಪೂರ್ಣ ಶೂಟಿಂಗ್ ಮುಗಿಸಿದ ಅನಿರುದ್ಧ್ ಜತ್ಕರ್

    ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್  (Aniruddha Jatkar) ನಾಯಕರಾಗಿ ನಟಿಸಿರುವ, ‘ರಾಘು’ ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ ‘chef ಚಿದಂಬರ’ (Chef Chidambara) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.

    ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಆನಂದರಾಜ್, ನಮ್ಮ ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನದುರ್ಗ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಡಾರ್ಕ್ ಹ್ಯೂಮರ್ ಜಾನರ್ ನ ಚಿತ್ರ. ಅನಿರುದ್ದ್ ಅವರು ಶೆಫ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೆಚೆಲ್ ಡೇವಿಡ್ ಅವರ ಪಾತ್ರ ಕೂಡ ವಿಭಿನ್ನವಾಗಿದೆ. ಶರತ್ ಲೋಹಿತಾಶ್ವ, ಶಿವಮಣಿ, ಶ್ರೀಧರ್, ಮಾಹಂತೇಶ್ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ ಎಂದು ತಿಳಿಸಿದರು. ನಾನು ಯಾವತ್ತಿಗೂ ಅಡುಗೆಮನೆ ಕಡೆ ಹೋದವನಲ್ಲ. ಈ ಚಿತ್ರದಲ್ಲಿ ಮೊದಲ ಬಾರಿಗೆ ಶೆಫ್ ಪಾತ್ರ ನಿರ್ವಹಿಸಿದ್ದೇನೆ. ತರಬೇತಿ ಪಡೆದು ಈ ಪಾತ್ರ ನಿರ್ವಹಣೆ ಮಾಡಿದ್ದೇನೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾದರೂ, ನಿರ್ದೇಶಕರು ಕಥೆಯನ್ನು ಹಾಸ್ಯದ ಮೂಲಕ ಹೇಳಿದ್ದಾರೆ.  ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ ಎಂದರು ನಾಯಕ ಅನಿರುದ್ಧ್ ಜತಕರ್.

    ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಪಾತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎನ್ನುತ್ತಾರೆ ನಾಯಕಿ ನಿಧಿ ಸುಬ್ಬಯ್ಯ (Nidhi Subbaiah). ಅನು ಎಂಬುದು ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಕಥೆ ಎರಡೂ ಚೆನ್ನಾಗಿದೆ ಎಂದರು ನಾಯಕಿ ರೆಚೆಲ್ ಡೇವಿಡ್. ನಿರ್ಮಾಪಕಿ ರೂಪ ಡಿ.ಎನ್, ಛಾಯಾಗ್ರಾಹಕ ಉದಯ್ ಲೀಲಾ, ಚಿತ್ರದಲ್ಲಿ ‌ನಟಿಸಿರುವ ಮಹಾಂತೇಶ್, ಸೌಂಡ್ ಇಂಜಿನಿಯರ್ ಬಿ.ಆರ್ ನವೀನ್ ಕುಮಾರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಚಿತ್ರಕ್ಕೆ ನಿರ್ದೇಶಕರೆ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಹುಸಗುಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ ಅವರ ನೃತ್ಯ ನಿರ್ದೇಶನ “chef ಚಿದಂಬರ” ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನುರಿತ ಚೆಫ್ ಗಳಿಂದ ತರಬೇತಿ ಪಡೆಯುತ್ತಿದ್ದಾರೆ ನಟ ಅನಿರುದ್ದ್

    ನುರಿತ ಚೆಫ್ ಗಳಿಂದ ತರಬೇತಿ ಪಡೆಯುತ್ತಿದ್ದಾರೆ ನಟ ಅನಿರುದ್ದ್

    ಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ ‘chef ಚಿದಂಬರ’ (Chef Chidambara) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಕೂಡ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ ಚೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

    ಅನಿರುದ್ದ್ (Anirudh) ಅವರಿಗೆ ಹೆಸರಾಂತ ಬಾಣಸಿಗರು ತರಬೇತಿ ನೀಡುತ್ತಿದ್ದು, ಈ ಟ್ರೈನಿಂಗ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ.  ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಎಂ.ಆನಂದರಾಜ್ (Anand Raj) ನಿರ್ದೇಶಿಸುತ್ತಿದ್ದಾರೆ. ರೆಚೆಲ್ ಡೇವಿಡ್ (Rachel David) ಹಾಗೂ ನಿಧಿ ಸುಬ್ಬಯ್ಯ (Nidhi Subbaiah) ಈ ಚಿತ್ರದ ನಾಯಕಿಯರು.

     

    ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಆನಂದರಾಜ್, ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಅನಿರುದ್ಧ್ ಅವರು ಐದು ವರ್ಷಗಳ ನಂತರ ನಟಿಸುತ್ತಿರುವ ಚಿತ್ರವಿದು. ಇಂದಿನಿಂದ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಆರಂಭವಾಗಲಿದೆ. ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ನಟಿಸುತ್ತಿದ್ದಾರೆ.  ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ರಘು ರಮಣಕೊಪ್ಪ, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಉದಯ್ ಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಬಿ.ಆರ್ ನವೀನ್ ಕುಮಾರ್  ಸೌಂಡ್ ಡಿಸೈನ್ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ ಎಂದು ವಿವರಣೆ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಿರುದ್ಧ ಅಭಿನಯದ  ‘chef ಚಿದಂಬರ’ ಚಿತ್ರಕ್ಕೆ ಉಪೇಂದ್ರ ಚಾಲನೆ

    ಅನಿರುದ್ಧ ಅಭಿನಯದ ‘chef ಚಿದಂಬರ’ ಚಿತ್ರಕ್ಕೆ ಉಪೇಂದ್ರ ಚಾಲನೆ

    ಟ ಅನಿರುದ್ಧ (Aniruddha) ನಾಯಕರಾಗಿ ನಟಿಸುತ್ತಿರುವ, ಎಂ.ಆನಂದರಾಜ್ ನಿರ್ದೇಶನದ ‘chef ಚಿದಂಬರ’ (chef Chidambara) ಚಿತ್ರದ ಮುಹೂರ್ತ (Muhurta)ಸಮಾರಂಭ ಹನುಮಂತನಗರದ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ (Upendra) ಆರಂಭ ಫಲಕ ತೋರಿದರು. ಹಿರಿಯ ನಟಿ‌ ಭಾರತಿ ವಿಷ್ಣುವರ್ಧನ್ (Bharti Vishnuvardhan) ಕ್ಯಾಮೆರಾ ಚಾಲನೆ ಮಾಡಿದರು.

    ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಆನಂದರಾಜ್, ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಅನಿರುದ್ಧ್ ಅವರು ಐದು ವರ್ಷಗಳ ನಂತರ ನಟಿಸುತ್ತಿರುವ ಚಿತ್ರವಿದು. ಇಂದಿನಿಂದ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಆರಂಭವಾಗಲಿದೆ. ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ನಟಿಸುತ್ತಿದ್ದಾರೆ.  ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ರಘು ರಮಣಕೊಪ್ಪ, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ರೂಪ ಡಿ.ಎನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ಉದಯ್ ಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಬಿ.ಆರ್ ನವೀನ್ ಕುಮಾರ್  ಸೌಂಡ್ ಡಿಸೈನ್ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ ಎಂದು ವಿವರಣೆ ನೀಡಿದರು. ಇದನ್ನೂ ಓದಿ:ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಇದು ನಿಜಕ್ಕೂ ಸಂತಸದ ಸುದ್ದಿ

    ನಿರ್ದೇಶಕರು ಹೇಳಿದ ಹಾಗೆ ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಕಾಮಿಡಿಯೊಂದಿಗೆ ಕೌತುಕವು ಇದೆ. ಒಂದು ಕೊಲೆಯ ಸುತ್ತ ಕಥೆ ನಡೆಯುತ್ತದೆ. ನಾನು ಶಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ . ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ.‌  ಕಳೆದ ತಿಂಗಳು ಮೈಸೂರಿನ ವಿಷ್ಣುವರ್ಧನ್ ಸಮಾಧಿ ಬಳಿ ಸ್ಕ್ರಿಪ್ಟ್ ಪೂಜೆ ಮಾಡಲಾಗಿತ್ತು. ಅಂದು ಕೂಡ ಭಾರತಿ ಅಮ್ಮ ಅವರು ಆಗಮಿಸಿದ್ದರು. ಚಿತ್ರದ ಪೋಸ್ಟರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ನಿಮ್ಮ ಜೊತೆ ನಾನು ಇದ್ದೀನಿ ಎಂದು ಭರವಸೆ ನೀಡಿದರು. ಮುಹೂರ್ತ ಸಮಾರಂಭಕ್ಕೆ ರಿಯಲ್ ಸ್ಟಾರ್  ಉಪೇಂದ್ರ ಅವರು ಆಗಮಿಸಿ ಶುಭ ಕೋರಿದರು. ಎಲ್ಲರಿಗೂ ನನ್ನ ಧನ್ಯವಾದ.‌ ನಿರ್ಮಾಪಕಿ ರೂಪ ಅವರ ಪತಿ ಸರ್ವೋತ್ತಮ ಅವರು ನನ್ನ ಸ್ನೇಹಿತರು. ಅವರಿಗೆ ಕಥೆ ಇಷ್ಟವಾಗಿ , ನಿರ್ಮಾಣ‌ ಮಾಡುತ್ತಿದ್ದಾರೆ ಎಂದು ನಟ ಅನಿರುದ್ಧ ತಿಳಿಸಿದರು.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು.‌ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ರೂಪ. ನಾಯಕಿಯರಾದ ನಿಧಿ ಸುಬ್ಬಯ್ಯ, ರೆಚೆಲ್ ಡೇವಿಡ್, ನಟ ರಘು ರಮಣ ಕೊಪ್ಪ ಹಾಗೂ ಛಾಯಾಗ್ರಹಕ ಉದಯ್ ಲೀಲ ಚಿತ್ರದ ಕುರಿತು ಮಾತನಾಡಿದರು.

    ಈ ಸ್ಥಳಕ್ಕೆ ಬಂದಾಗ ನಮ್ಮ ಯಜಮಾನರ ‘ಯಜಮಾನ ಚಿತ್ರದ ಮುಹೂರ್ತ ಸಮಾರಂಭ ನೆನಪಾಯಿತು. ಆ ಚಿತ್ರದ ಮುಹೂರ್ತ ಕೂಡ ಇಲ್ಲೇ ನಡೆದಿತ್ತು. ಈ ಚಿತ್ರಕ್ಕೂ ಒಳ್ಳೆಯದಾಗಲಿ  ಎಂದು ಭಾರತಿ ವಿಷ್ಣುವರ್ಧನ್ ಹಾರೈಸಿದರು. ಚಿತ್ರದ ಕ್ಯಾರೆಕ್ಟರ್ ಟೀಸರ್ ಉಪೇಂದ್ರ ಬಿಡುಗಡೆ ಮಾಡಿದರು. ಅನಿರುದ್ದ್ ಅವರ ಪತ್ನಿ ಕೀರ್ತಿ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘Chef ಚಿದಂಬರ’ ಅನಿರುದ್ಧಗೆ ಕಿಚ್ಚ ಸುದೀಪ್ ಸಾಥ್

    ‘Chef ಚಿದಂಬರ’ ಅನಿರುದ್ಧಗೆ ಕಿಚ್ಚ ಸುದೀಪ್ ಸಾಥ್

    ಕಿರುತೆರೆ ಆಯ್ತು ಇದೀಗ ಬೆಳ್ಳಿತೆರೆಯಲ್ಲಿ ಹೊಸ ಪರ್ವ ಶುರು ಮಾಡಲು ನಟ ಅನಿರುದ್ಧ(Aniruddha) ಅವರು ರೆಡಿಯಾಗಿದ್ದಾರೆ. ‘ಶೆಫ್ ಚಿದಂಬರನಾಗಿ’ (Chef Chidambara) ಜೊತೆ ಜೊತೆಯಲಿ ಹೀರೋ ಬರುತ್ತಿದ್ದಾರೆ. ಅನಿರುದ್ಧ ಹೊಸ ಹೆಜ್ಜೆಗೆ ಕಿಚ್ಚ ಸುದೀಪ್ (Kiccha Sudeep) ಕೂಡ ಸಾಥ್ ನೀಡಿದ್ದಾರೆ. ಇತ್ತೀಚಿಗೆ ಸಿನಿಮಾದ ಅದ್ದೂರಿ ಮುಹೂರ್ತ ನೆರವೇರಿತ್ತು. ಈಗ ಚಿತ್ರದ ಟೈಟಲ್ ರಿವೀಲ್ ಆಗಿದೆ.

    ಕಿರುತೆರೆಯಲ್ಲಿ ‘ಜೊತೆ ಜೊತೆಯಲಿ’ (Jothe Jotheyali) ಧಾರಾವಾಹಿ ಹೊಸ ಇತಿಹಾಸ ಸೃಷ್ಟಿ ಮಾಡಿತ್ತು. ಆರ್ಯನಾಗಿ ಅನಿರುದ್ಧ ಟಿವಿ ಲೋಕದ ಮನೆಮಾತಾದರು. ಈ ಹಿಂದೆ ಸಿನಿಮಾಗಳಲ್ಲಿ ಬಣ್ಣ ಹಚ್ಚುತ್ತಿದ್ದ ಅನಿರುದ್ಧ ಅವರು ಐದು ವರ್ಷಗಳ ನಂತರ ಬೆಳ್ಳಿ ತೆರೆ ಮೇಲೆ ಕಾಣಿಸಿಕೊಳ್ಳಲು ರೆಡಿಯಾಗುತ್ತಿದ್ದಾರೆ. ‘ರಾಘು’ (Raghu) ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ ಎಂದು ಈ ಮೊದಲೇ ಘೋಷಣೆ ಮಾಡಲಾಗಿತ್ತು. ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ ‘Chef ಚಿದಂಬರ’ (Chef Chidambara) ಎಂದು ಹೆಸರಿಡಲಾಗಿದೆ. ಈ ಸಿನಿಮಾದ ಟೈಟಲ್‌ ಅನ್ನು ನಟ ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ:ತಮಿಳಿಗೆ ಹಾರಿದ ‘ಸೀತಾರಾಮಂ’ ನಟಿ- ಶಿವಕಾರ್ತಿಕೇಯನ್‌ಗೆ ಮೃಣಾಲ್ ನಾಯಕಿ

    ನಟ ಅನಿರುದ್ಧ ಈ ಚಿತ್ರದಲ್ಲಿ ಶೆಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೇ ಆಗಸ್ಟ್ 10ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಡಾರ್ಕ್ ಕಾಮಿಡಿ ಜಾನರ್‌ನ ಈ ಚಿತ್ರದಲ್ಲಿ ಅನಿರುದ್ಧ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ ಸಹ ಬಿಡುಗಡೆಯಾಗಿದೆ. ರೂಪಾ ಡಿ ಎನ್ ಅವರು ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಸಿನಿಮಾಗೆ ಚಿತ್ರಕಥೆ, ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ.

    ಅನಿರುದ್ಧ ನಾಯಕಿಯರಾಗಿ ಪಂಚರಂಗಿ ಸುಂದರಿ ನಿಧಿ ಸುಬ್ಬಯ್ಯ(Niddhi Subbaih), ಲವ್ ಮಾಕ್ಟೈಲ್‌ 2 ಖ್ಯಾತಿಯ ರಾಚೆಲ್, ಶರತ್ ಲೋಹಿತಾಶ್ವ ಸೇರಿದಂತೆ ಹಲವರು ನಟಿಸಲಿದ್ದಾರೆ. ಒಂದು ಸುಂದರ ಪ್ರೇಮಕಥೆ ಜೊತೆ ಹೊಸ ಲುಕ್‌ನಲ್ಲಿ ಅನಿರುದ್ಧ ಅವರನ್ನ ಕಣ್ತುಂಬಿಕೊಳ್ಳಬಹುದಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]