Tag: cheif minister yogi adithyanath

  • ಯೋಗಿ ಆದಿತ್ಯನಾಥ್ ಜತೆ ಕಂಗನಾ ರಣಾವತ್ ಮೀಟಿಂಗ್?

    ಯೋಗಿ ಆದಿತ್ಯನಾಥ್ ಜತೆ ಕಂಗನಾ ರಣಾವತ್ ಮೀಟಿಂಗ್?

    ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗೋ ಕಂಗನಾ ರಣಾವತ್ ಈ ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ. ಕಂಗನಾ ಏನಾದ್ರೂ ರಾಜಕೀಯಕ್ಕೆ ಎಂಟ್ರಿ ಕೊಡ್ತಿದ್ದಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಯೋಗಿ ಆದಿತ್ಯನಾಥ್ ಜತೆಗಿನ ಫೋಟೋ ಹಂಚಿಕೊಂಡು ಈ ಭೇಟಿ ತುಂಬಾ ಸಂತಸ ತಂದಿದೆ ಎಂದು ಬರೆದುಕೊಂಡಿದ್ದಾರೆ.

    ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿರುವ ನಟಿ ಕಂಗನಾ, ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವವಾದ ಯಶಸ್ಸು ಗಳಿಸಿರುವ ಮಹಾರಾಜ್ ಯೋಗಿ ಆದಿತ್ಯನಾಥ್ ಭೇಟಿ ಮಾಡಿದ್ದು, ನನ್ನ ಅದೃಷ್ಟ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಭಾರೀ ವೈರಲ್‌ ಆಗುತ್ತಿದೆ.

    ಮಹಾರಾಜ್ ಜೀ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದ ಈ ಸಂಜೆ ಅದ್ಭುತವಾದದ್ದು, ಮುಖ್ಯಮಂತ್ರಿ ಅವರ ಸಹಾನುಭೂತಿ ಮತ್ತು ಕಾಳಜಿಗೆ ನಾನು ಮೂಕವಿಸ್ಮಿತಳಾಗಿದ್ದೇನೆ. ಇನ್ನು ಅವರ ಈ ಗುಣಗಳಿಂದಾಗಿನೇ ನಾನು ಅವರನ್ನು ಹೆಚ್ಚು ಗೌರವಿಸುತ್ತೇನೆ ಎಂದು ಬಣ್ಣಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

     

    View this post on Instagram

     

    A post shared by Kangana Dhaakad (@kanganaranaut)

    ನಟಿ ಕಂಗನಾ ಅವರು ಯೋಗಿ ಆದಿತ್ಯನಾಥ್ ಭೇಟಿಯಾಗಿರುವುದರ ಬಗ್ಗೆ ಇನ್ನು ತಿಳಿದು ಬಂದಿಲ್ಲ. ಆದರೆ ಕಂಗನಾ ಹಲವಾರು ವರ್ಷಗಳಿಂದ ಬಿಜೆಪಿಯ ಕಟ್ಟ ಅಭಿಮಾನಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗವಾಗಿ ಆಗಾಗ ಬೆಂಬಲ ಸೂಚಿಸುತ್ತಲೇ ಬಂದಿದ್ದಾರೆ. ಇನ್ನು ಯೋಗಿ ಆದಿತ್ಯನಾಥ್ ಅವರ ಯಶಸ್ಸಿಗೆ ಮನಸಾರೆ ಕಂಗನಾ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ಕಂಗನಾ ರಣಾವತ್ ನಟನೆಯ `ಧಾಕಡ್’ ಇದೇ ಮೇ.20 ತೆರೆಗೆ ಬರಲು ಸಜ್ಜಾಗಿದೆ. ವಿವಾದಗಳ ನಟಿ ಕಂಗನಾ ಕಂಪ್ಲೀಟ್ ಆ್ಯಕ್ಷನ್ ಅವತಾರದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ನಟಿಯ ಹೊಸ ಅವತಾರವನ್ನ ಅಭಿಮಾನಿಗಳು ಅಪ್ಪಿ ಒಪ್ಪಿಕೊಳ್ತಾರಾ ಅಂತಾ ಕಾದು ನೋಡಬೇಕಿದೆ.

  • ಅಯೋಧ್ಯೆ ಅಲ್ಲ, ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

    ಅಯೋಧ್ಯೆ ಅಲ್ಲ, ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

    ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಹಾಗೂ ಎರಡನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ (ನಗರ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

    ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಅಥವಾ ಮಥುರಾದಿಂದ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಬಂದಿದ್ದವು. ಆದರೆ ಮೊದಲ ಹಂತದ 57 ಹಾಗೂ ಎರಡನೇ ಹಂತದ 38 ಸೀಟುಗಳಲ್ಲಿ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಯೋಗಿ ಆದಿತ್ಯನಾಥ್ ಗೋರಖ್‌ಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿ: ರಸ್ತೆಗಳನ್ನು ಕಂಗನಾ ಕೆನ್ನೆಗಿಂತ ಸುಗಮವಾಗಿಸುತ್ತೇನೆ: ಇರ್ಫಾನ್ ಅನ್ಸಾರಿ

    2017ರವರೆಗೆ ಸತತ ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಪ್ರಬಲ ಕ್ಷೇತ್ರದಿಂದಲೇ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷ ಹೇಳುವ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಯೋಗಿ ಅವರು ಹೇಳಿದ್ದರು.

    ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಜೆಪಿ ಯೋಗಿ ಆದಿತ್ಯನಾಥ್ ಅವರನ್ನು ಗೋರಖ್‌ಪುರಕ್ಕೆ ಕಳುಹಿಸಿರುವುದು ನನಗೆ ಇಷ್ಟವಾಗಿದೆ. ಯೋಗಿ ಅಲ್ಲೇ ಉಳಿಯಬೇಕು, ಅಲ್ಲಿಂದ ಬರುವ ಅಗತ್ಯವಿಲ್ಲ ಎಂದು ತಿವಿದಿದ್ದಾರೆ. ಇದನ್ನೂ ಓದಿ: ನೇತಾಜಿ ಜನ್ಮದಿನವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭ

    ಉತ್ತರ ಪ್ರದೇಶದಲ್ಲಿ ಫೆ.10ರಿಂದ ಮಾ.7ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾ.10ರಂದು ಫಲಿತಾಂಶ ಹೊರಬೀಳಲಿದೆ.

  • ದೇಶಕ್ಕೆ ಕಾಂಗ್ರೆಸ್‌ ಮಾರಕ, ಇದು ಭ್ರಷ್ಟಾಚಾರದ ಬೇರು: ಯೋಗಿ ಆದಿತ್ಯನಾಥ್‌

    ದೇಶಕ್ಕೆ ಕಾಂಗ್ರೆಸ್‌ ಮಾರಕ, ಇದು ಭ್ರಷ್ಟಾಚಾರದ ಬೇರು: ಯೋಗಿ ಆದಿತ್ಯನಾಥ್‌

    ಲಕ್ನೋ: ಸೋನಿಯಾ ಗಾಂಧಿ ಅವರ ನೇತೃತ್ವದ ಕಾಂಗ್ರೆಸ್‌ ಪಕ್ಷವು ದೇಶಕ್ಕೆ ಮಾರಕ. ಭ್ರಷ್ಟಾಚಾರದ ಬೇರು ಎಂದು ಕಾಂಗ್ರೆಸ್‌ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹರಿಹಾಯ್ದಿದ್ದಾರೆ.

    ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ರಾಯ್‌ ಬರೇಲಿಯಲ್ಲಿ ಬಿಜೆಪಿ ಶುಕ್ರವಾರ ಆಯೋಜಿಸಿದ್ದ ಜನ ವಿಶ್ವಾಸ ಯಾತ್ರೆ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್‌, ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷ (ಎಸ್‌ಪಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಪಕ್ಷ ಆಡಳಿತದಲ್ಲಿದ್ದಾಗ ಗೂಂಡಾಗಿರಿ ನಡೆಯುತ್ತಿತ್ತು: ಅಮಿತ್ ಶಾ

    ರಾಯ್‌ ಬರೇಲಿಯ ಕಾಂಗ್ರೆಸ್‌ನ ಸಾರ್ವಜನಿಕ ಮುಖಂಡರು ಬಿಜೆಪಿಗೆ ಸೇರುತ್ತಿದ್ದು, ಕಾಂಗ್ರೆಸ್‌ ನೆಲಕಚ್ಚಲಿದೆ. ಕಾಂಗ್ರೆಸ್‌ ದೇಶಕ್ಕೆ ಸಮಸ್ಯೆಯಾಗಿದೆ. ರಾಯ್‌ ಬರೇಲಿ ಎಂದಿಗೂ ವಿದೇಶಿ ಆಡಳಿತವನ್ನು ಒಪ್ಪಲ್ಲ. ಭಾರತದಲ್ಲಿ ಭಯೋತ್ಪಾದನೆ, ಅರಾಜಕತೆ ಮತ್ತು ಭ್ರಷ್ಟಾಚಾರದ ಮೂಲ ಕಾಂಗ್ರೆಸ್.‌ ದೇಶದಲ್ಲಿ ಜಾತೀಯತೆ, ಭಾಷಾಭೇದವನ್ನು ಹರಡುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    Akhilesh Yadav

    ರಾಜ್ಯಕ್ಕೆ ಎಸ್‌ಪಿ ಮತ್ತು ಬಿಎಸ್‌ಪಿ ಕೂಡ ಮಾರಕವಾಗಿವೆ. ಸಮಾಜವಾದಿ ಪಕ್ಷದ ಚಿಹ್ನೆಯಾಗಿರುವ ಸೈಕಲ್‌ ಹಿಂದೆ ಗೂಂಡಾಗಳು ಕೂತಿರುತ್ತಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ನಮ್ಮ ಸರ್ಕಾರ ಜನರಿಗಾಗಿ ಕೆಲಸ ಮಾಡುತ್ತಿದೆ. ಜನತೆಯ ನಂಬಿಕೆಗಳನ್ನು ಗೌರವಿಸುತ್ತದೆ. ಇದನ್ನು ಕಾಂಗ್ರೆಸ್‌, ಎಸ್‌ಪಿ, ಬಿಎಸ್‌ಪಿ ಮಾಡಲು ಸಾಧ್ಯವೇ? ರಾಮ ಮತ್ತು ಕೃಷ್ಣ ಕಾಲ್ಪನಿಕ ಎಂದು ಹೇಳುವವರು ಮಂದಿರ ಕಟ್ಟಲು ಸಾಧ್ಯವೇ? ರಾಮನ ಭಕ್ತರ ಮೇಲೆ ಗುಂಡು ಹಾರಿಸುವವರು ಮಂದಿರ ಕಟ್ಟಬಹುದೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭಾರೀ ಮಳೆ ಮುನ್ಸೂಚನೆ ನೀಡಲು ಹವಾಮಾನ ಇಲಾಖೆಯಿಂದ ಸಾಧ್ಯವಾಗಿಲ್ಲ: ಎಂ.ಕೆ.ಸ್ಟಾಲಿನ್

    ಈ ಮೂರು ಪಕ್ಷಗಳು ಭ್ರಷ್ಟಾಚಾರದ ಗುಹೆಗಳು ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಸೋನಿಯಾ ಗಾಂಧಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ರಾಯ್‌ ಬರೇಲಿ. ಈ ಕ್ಷೇತ್ರದಲ್ಲಿ 834 ಕೋಟಿ ರೂ. ಮೊತ್ತದ 381 ಯೋಜನೆಗಳಿಗೆ ಯೋಗಿ ಆದಿತ್ಯನಾಥ್‌ ಶಿಲಾನ್ಯಾಸ ನೆರವೇರಿಸಿದ್ದಾರೆ.

  • ಹಳಿ ತಪ್ಪಿದ ಲಕ್ನೋ-ಮೀರತ್ ರಾಜ್ಯ ರಾಣಿ ಎಕ್ಸ್ ಪ್ರೆಸ್- ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಣೆ

    ಹಳಿ ತಪ್ಪಿದ ಲಕ್ನೋ-ಮೀರತ್ ರಾಜ್ಯ ರಾಣಿ ಎಕ್ಸ್ ಪ್ರೆಸ್- ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಣೆ

    ಲಕ್ನೋ: ಉತ್ತರಪ್ರದೇಶದ ರಾಂಪುರ ಸಮೀಪ ಮೀರತ್-ಲಕ್ನೋ ರಾಜ್ಯ ರಾಣಿ ಎಕ್ಸ್ ಪ್ರೆಸ್ ಇಂದು ಹಳಿತಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

    ಹಳಿ ತಪ್ಪಿದ ರೈಲಿನ 8 ಬೋಗಿಗಳು ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿವೆ. ಮುಂದಾಪಾಂಡೆ ಹಾಗೂ ರಾಂಪುರ ರೈಲ್ವೇ ನಿಲ್ದಾಣದ ಮಧ್ಯದಲ್ಲಿ ಈ ಅವಘಡ ಸಂಭವಿಸಿದೆ ಅಂತಾ ಉತ್ತರ ರೈಲ್ವೇ ವಕ್ತಾರ ನೀರಜ್ ಶರ್ಮಾ ತಿಳಿಸಿದ್ದಾರೆ.

    ಈ ಬಗ್ಗೆ ಕೇಂದ್ರ ರೈಲ್ವೆ ಸಚಿವರಾದ ಸುರೇಶ್ ಪ್ರಭು, ಘಟನೆಗೆ ಕಾರಣವೇನೆಂದು ತನಿಖೆ ನಡೆಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ರಕ್ಷಣಾ ಕಾರ್ಯಚರಣೆಗಾಗಿ ಘಟನಾ ಸ್ಥಳಕ್ಕೆ ತೆರಳುವಂತೆ ಹಿರಿಯ ಅಧಿಕಾರಿಗಳು ಸೂಚಿಸಲಾಗಿದೆ ಅಂತಾ ಟ್ವೀಟ್ ಮಾಡಿದ್ದಾರೆ.

    ಇತ್ತ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಘಟನೆಯಿಂದ ಗಂಭೀರವಗಿ ಗಾಯಗೊಂಡ ಪ್ರತಿಯೊಬ್ಬರಿಗೂ 50,000 ಹಾಗೂ ಸಣ್ಣ-ಪುಟ್ಟ ಗಾಯಗಳಾಗಿರುವವರಿಗೆ 25,000 ರೂ. ಧನಸಹಾಯ ಘೋಷಿಸಿದ್ದಾರೆ. ಇನ್ನು ರೈಲ್ವೇ ಇಲಾಖೆಯಿಂದ ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಲಾಗಿದೆ.

    ಘಟನೆಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.