ಮಂಡ್ಯ: 39 ವರ್ಷಗಳ ಬಳಿಕ ಮಂಡ್ಯದಲ್ಲಿ ನಡೆಯುತ್ತಿರುವ 14 ಕೂಟದ ದೇವರುಗಳ ದೊಡ್ಡ ಹಬ್ಬದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ಭಾಗಿಯಾಗಲಿದ್ದಾರೆ.
ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ದೊಡ್ಡಬಾಲ ಗ್ರಾಮದಲ್ಲಿ ಸೋಮವಾರದಿಂದ ಬೀರ ದೇವರುಗಳ ಜಾತ್ರಾ ಮಹೋತ್ಸವ ನಡೆಯುತ್ತಿದೆ. 14 ಕೂಟದ ದೇವರುಗಳ ಈ ಹಬ್ಬ 39 ವರ್ಷಗಳ ಬಳಿಕ ಜರುಗುತ್ತಿದೆ. ಇದನ್ನೂ ಓದಿ: ವಿಂಗ್ ಕಮಾಂಡರ್ ಹಣೆಯಲ್ಲಿ ರಕ್ತ ಸೋರಿದ್ದು ಹೇಗೆ?
ಇಂದು ಬೆಳಗ್ಗೆ 11 ಗಂಟೆಗೆ ನಾಗಮಂಗಲದ ಹದ್ದಿಹಳ್ಳಿ ಹೆಲಿಪ್ಯಾಡ್‌ಗೆ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ನೇರವಾಗಿ ದೊಡ್ಡಬಾಲ ಗ್ರಾಮಕ್ಕೆ ತೆರಳಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಸಚಿವರಾದ ಚಲುವರಾಯಸ್ವಾಮಿ, ಭೈರತಿ ಸುರೇಶ್ ಸಿಎಂಗೆ ಸಾಥ್ ನೀಡಲಿದ್ದಾರೆ.
ಬೆಂಗಳೂರು: ಮುಡಾ ಅಕ್ರಮ ನಡೆದಿರೋದು ಬಿಜೆಪಿ (BJP) ಅವಧಿಯಲ್ಲಿ. ಕ್ರಮ ಆಗೋದಿದ್ದರೆ ಬಿಜೆಪಿಯವರ ಮೇಲೆ ಕ್ರಮ ಆಗಲಿ ಎಂದು ಸಚಿವ ಚಲುವರಾಯಸ್ವಾಮಿ (Chaluvaraya Swamy) ಆಗ್ರಹಿಸಿದ್ದಾರೆ.
ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಲೋಕಾಯುಕ್ತ ಕ್ಲೀನ್‌ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅವರು ಮಾತಾನಾಡಿದರು. ಈ ವೇಳೆ, ಮುಡಾ ಕೇಸ್‌ನಲ್ಲಿ ಸತ್ಯ ಇಲ್ಲ ಎಂದು ನಮಗೆ ಗೊತ್ತಿದ್ದ ವಿಷಯ.ಇದರಲ್ಲಿ ಸಿಎಂ ಯಾವುದೇ ಪ್ರಭಾವ ಬೀರಿಲ್ಲ. ಯಾವುದೇ ಲೆಟರ್ ಬರೆದಿರಲಿಲ್ಲ. ಬದಲಿ ನಿವೇಶನ ಎಲ್ಲರಿಗೂ ಕೊಡ್ತಾರೆ. ಅದರಂತೆ ಸಿಎಂ ಪತ್ನಿಗೂ ಕೊಟ್ಟಿದ್ದಾರೆ. ಈ ತಪ್ಪು ಆಗಿರೋದು ಬಿಜೆಪಿ ಅವಧಿಯಲ್ಲಿ. ಏನಾದರೂ ಕ್ರಮ ಆಗೋದಿದ್ದರೆ ಅವರ ಮೇಲೆ ಕ್ರಮ ಆಗಬೇಕು ಎಂದಿದ್ದಾರೆ.
ಸಿದ್ದರಾಮಯ್ಯ ಅವರದ್ದು ಏನೇ ತಪ್ಪು ಇಲ್ಲದೇ ಹೋದರು ಪಾದಯಾತ್ರೆ ಮಾಡಿದ್ರು. ಈಗ ಕ್ಲೀನ್‌ಚಿಟ್ ಸಿಕ್ಕಿದೆ. ಇದರ ಹೊಣೆ ಈಗ ಬಿಜೆಪಿ-ಜೆಡಿಎಸ್‌ನವರು ಹೊರಬೇಕು. ಸಿಬಿಐ ತನಿಖೆ ಬೇಡ ಎಂದು ಕೋರ್ಟ್ ಹೇಳಿತ್ತು. ಲೋಕಾಯುಕ್ತಗೆ ವರದಿ ಕೊಟ್ಟಿದೆ. ಬಿಜೆಪಿ ಅವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ ಅಂದರೆ ನಾವೇನು ಮಾಡೋಣ? ಬಿಜೆಪಿಯವರು ಮಂಡು ಬಿದ್ದಿದ್ದಾರೆ ಎಂದು ಹೇಳಬೇಕು ಅಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.
– ಸಂಡೂರಿಗೆ ಜಮೀರ್, ಶಿಗ್ಗಾಂವಿಗೆ ಈಶ್ವರ್ ಖಂಡ್ರೆ ಉಸ್ತುವಾರಿ
ಬೆಂಗಳೂರು: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ (Channapatna) ಮೂರು ಕ್ಷೇತ್ರಗಳನ್ನು ಗೆಲ್ಲಲು ತಯಾರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಯಾಗಿದ್ದು, ಮೂರು ಕ್ಷೇತ್ರಗಳಿಗೆ ಉಸ್ತುವಾರಿ ನೇಮಕ ಮಾಡಲಾಗಿದೆ ಎಂದು ಸಚಿವ ಚೆಲುವರಾಯ ಸ್ವಾಮಿ (Cheluvarayaswamy) ಹೇಳಿದ್ದಾರೆ.
ಕರ್ನಾಟಕದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆ, ಜಾತಿ ಜನಗಣತಿ, ಮೀಸಲಾತಿ ವಿಚಾರ ಸೇರಿ ಹಲವು ವಿಷಯಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಗುತ್ತಿದೆ. ಸಭೆಗೆ ಸಚಿವರಾದ ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಪ್ರೀಯಾಂಕ್ ಖರ್ಗೆ, ಜಮೀರ್ ಅಹಮದ್, ಶರಣ ಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಎಂ.ಸಿ ಸುಧಾಕರ್, ದಿನೇಶ್ ಗುಂಡೂರಾವ್, ಎಸ್.ಎಸ್ ಮಲ್ಲಿಕಾರ್ಜುನ್, ಚಲುವರಾಯಸ್ವಾಮಿ, ರಾಮಲಿಂಗಾ ರೆಡ್ಡಿ ಸೇರಿ ಹಲವರು ಪಾಲ್ಗೊಂಡಿದ್ದರು.
ಸಭೆಯ ಬಳಿಕ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಬೈ ಎಲೆಕ್ಷನ್ ಬಗ್ಗೆ ಚರ್ಚಿಸಲಾಗಿದೆ. 3 ಕ್ಷೇತ್ರಗಳನ್ನ ಗೆಲ್ಲಲು ತಯಾರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಯಾಗಿದೆ. ಚನ್ನಪಟ್ಟಣ ನನಗೆ ಉಸ್ತುವಾರಿ ನೀಡಿದ್ದಾರೆ. ಇನ್ನುಳಿದಂತೆ ಸಂಡೂರು ಕ್ಷೇತ್ರದ ಉಸ್ತುವಾರಿ ಸಚಿವ ಜಮೀರ್‌ಗೆ ಹಾಗೂ ಶಿಗ್ಗಾಂವಿ ಕ್ಷೇತ್ರದ ಉಸ್ತುವಾರಿಯನ್ನು ಸಚಿವ ಈಶ್ವರ್ ಖಂಡ್ರೆಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ಅಭ್ಯರ್ಥಿಗಳ ಪಟ್ಟಿ ಮಂಗಳವಾರ ದೆಹಲಿಗೆ ಕಳಿಸಿಕೊಡಲಾಗುತ್ತೆ. ಮಂಗಳವಾರ (ಅ.21) ಸಂಜೆ ಅಭ್ಯರ್ಥಿಗಳ ಹೆಸರು ಫೈನಲ್ ಆಗಬಹುದು. ಸಂಡೂರು ವಿಧಾನಸಭಾ ಕ್ಷೇತ್ರದಿಂದ ತುಕಾರಾಮ್ ಕುಟುಂಬಕ್ಕೆ ಕೊಡುವುದರ ಬಗ್ಗೆ ಅಂತಿಮವಾಗಿದೆ. ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದ ಬಗ್ಗೆ ಚರ್ಚಿಸಿ ದೆಹಲಿಗೆ ಪಟ್ಟಿ ಕಳಿಸಲಾಗುತ್ತೆ. ಚನ್ನಪಟ್ಟಣ ಅಭ್ಯರ್ಥಿ ಯಾರು ಅನ್ನೋದರ ಬಗ್ಗೆ ನಿಮಗೂ ಗೋತ್ತು ನಮಗೂ ಗೋತ್ತು ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ ಎಂದು ಹೇಳಿದ್ದರೆ.
ಬೆಂಗಳೂರು: ಕೇಂದ್ರ ಸರ್ಕಾರದಿಂದ (Central Government) ದುರುಪಯೋಗ ಆಗುವುದನ್ನು ತಡೆಯಲು ಸಿಬಿಐಗೆ (CBI) ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Cheluvarayaswamy) ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಎಲ್ಲರ ಮೇಲೆ ಮುಗಿಬೀಳ್ತಿದೆ. ಕೇಂದ್ರ ಸರ್ಕಾರ ತನ್ನ ಕೆಲಸ ಮಾಡಬೇಕು. ಇದು ಒಕ್ಕೂಟ ವ್ಯವಸ್ಥೆ. ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ ಆಗ್ತಿದೆ. ಹೀಗಾಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ
ಕೋಳಿವಾಡ (K.B Koliwada) ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ (Congress) ಇದ್ದಾಗ ತನಿಖಾ ಸಂಸ್ಥೆಗಳ ದುರುಪಯೋಗ ಆಗಿರಲಿಲ್ಲ, ಈಗ ಆಗ್ತಿದೆ. ಕೋಳಿವಾಡ ಅವರು ಯಾಕೆ ಆ ರೀತಿ ಹೇಳಿದರು ಎನ್ನುವುದನ್ನು ಅವರೇ ಹೇಳಬೇಕು. ಎಲ್ಲರನ್ನೂ ಕಂಟ್ರೋಲ್ ಮಾಡಕ್ಕಾಗಲ್ಲ. ಸಿದ್ದರಾಮಯ್ಯ ಜತೆ ನಮ್ಮ ಸಚಿವರು, ಶಾಸಕರು, ಹೈಕಮಾಂಡ್‌ವರು ಇದ್ದಾರೆ. ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಲ್ಲ, ಅವರೇ ಮುಂದುವರೀತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ಪರಿಷತ್ ಸದಸ್ಯ ಸಲೀಂ ಅಹಮದ್ (Saleem Ahmed) ಮಾತನಾಡಿ, ರಾಜ್ಯಪಾಲರಿಗೆ ಸಂಪುಟದಲ್ಲೇ ಚರ್ಚಿಸಿ ಉತ್ತರ ಕೊಡಬೇಕು. ಈ ತೀರ್ಮಾನ ಒಳ್ಳೆಯದು, ಸ್ವಾಗತಾರ್ಹ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ಕೊಡಲ್ಲ, ಕೊಡಲೂಬಾರದು. ಕೋಳಿವಾಡ ಹೇಳಿಕೆ ಅವರ ವೈಯಕ್ತಿಕವಾದ ಹೇಳಿಕೆಯಾಗಿದೆ. ಆದರೆ ನಮ್ಮ ನಾಯಕರು, ಕಾರ್ಯಕರ್ತರು ಸಿಎಂ ಪರ ಒಟ್ಟಾಗಿ ಇದ್ದೀವಿ ಎಂದರು.ಇದನ್ನೂ ಓದಿ: ಸ್ವಚ್ಛ ಭಾರತ್ ಮಿಷನ್ ಯೋಜನೆ – ಕೋಲಾರ ನಗರಸಭೆಯಲ್ಲಿ ಭಾರಿ ಗೋಲ್‌ಮಾಲ್!
ಬೆಂಗಳೂರು: ಉತ್ತರ ಭಾರತದಲ್ಲಿ (North India) ನಡೆಯುವ ಗಂಗಾರತಿ (Gangarathi) ಮಾದರಿಯಲ್ಲಿಯೇ ರಾಜ್ಯದಲ್ಲಿ ಕಾವೇರಿ ಆರತಿ ನಡೆಸಲು ತಯಾರಿ ಆರಂಭವಾಗಿದೆ. ಸಂಬಂಧ ಅಧ್ಯಯನ ನಡೆಸಲು ಸಚಿವ ಚಲುವರಾಯಸ್ವಾಮಿ (Cheluvarayaswamy) ನೇತೃತ್ವದ ನಿಯೋಗ ಹರಿದ್ವಾರ ಮತ್ತು ವಾರಾಣಾಸಿಗೆ ತೆರೆಳಿದೆ. ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಸಭೆ ನಡೆಸಿದ್ದು, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿದೆ.
ಗಂಗೆಯಷ್ಟೇ ಪವಿತ್ರ ನದಿ ಕಾವೇರಿ (Kaveri) ಎಂಬ ನಿಟ್ಟಿನಲ್ಲಿ ಕಾವೇರಿ ಆರತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾಗಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಕಾವೇರಿ ಆರತಿಯ ರೂಪುರೇಷೆ ತಯಾರಿಸಲಿದೆ. ಇದಕ್ಕಾಗಿ ನಿಯೋಗ ಹರಿದ್ವಾರ ಹಾಗೂ ವಾರಣಾಸಿಯಲ್ಲಿ ಅಧ್ಯಯನ ನಡೆಸಿ ವರದಿ ತಯಾರಿಸಲಿದ್ದು, ಇದರ ಭಾಗವಾಗಿ ಮೊದಲು ಹರಿದ್ವಾರಕ್ಕೆ ಭೇಟಿ ನೀಡಿತು. ಹರ್ ಕೀ ಪೌಡಿ ಘಾಟ್‌ನಲ್ಲಿ ನಡೆಯುವ ಆರತಿ ಕಾರ್ಯಕ್ರಮದಲ್ಲಿ ನಿಯೋಗ ಭಾಗಿಯಾಯಿತು. ಸಚಿವ ಚಲುವರಾಯಸ್ವಾಮಿ ಆದಿಯಾಗಿ ಎಲ್ಲ ಸದಸ್ಯರು ವಿಶೇಷ ಆರತಿ ಮಾಡಿ, ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು. ಬಳಿಕ ಆರತಿ ನಡೆಯುವ ರೀತಿ ರಿವಾಜುಗಳನ್ನು ಪರಿಶೀಲಿಸಿದರು.ಇದನ್ನೂ ಓದಿ: ‘ದಳಪತಿ 69’ ಅಸಲಿ ಸ್ಟೋರಿ ರಿವೀಲ್- ಕಮಲ್ ಹಾಸನ್‌ಗೆ ಹೇಳಿದ್ದ ಕಥೆಯಲ್ಲಿ ವಿಜಯ್?
ಬಳಿಕ ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಆಡಳಿತ ಸಮಿತಿ ಜೊತೆಗೆ ಮಾತುಕತೆ ನಡೆಸಿದ ನಿಯೋಗ ಕರ್ನಾಟಕ ಸರ್ಕಾರದ ಪ್ರಸ್ತಾವನೆ ಬಗ್ಗೆ ತಿಳಿಸಿದರು. ಇದಕ್ಕೆ ಖುಷಿ ವ್ಯಕ್ತಪಡಿಸಿದ ಆಡಳಿತ ಸಮಿತಿ ಕಾರ್ಯದರ್ಶಿ ತನ್ಮಯ ವಶಿಷ್ಠ, ಗಂಗಾರತಿ ರೀತಿಯಲ್ಲಿ ಕಾವೇರಿ ಆರತಿ ಮಾಡುವುದು ಖುಷಿಯ ಸಂಗತಿ ಎಂದರು.
ಗಂಗಾರತಿ ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಗಂಗಾನದಿಯಂತೆ ಕಾವೇರಿ ನದಿ ಕೂಡಾ ಜೀವ ನದಿಯಾಗಿದೆ. ಅದಕ್ಕಾಗಿ ಇಲ್ಲಿಯೂ ಆರತಿ ಮಾಡಲು ನಿರ್ಧರಿಸಿದ್ದು, ಡಿಸಿಎಂ ಶಿ.ಕೆ ಶಿವಕುಮಾರ್ ನಿರ್ದೇಶನದ ಮೇರೆಗೆ ಈ ಬಗ್ಗೆ ನಮ್ಮ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಅಧ್ಯಯನಕ್ಕೆ ಬಂದಿದ್ದೇವೆ. ಸಾಧ್ಯವಾದಷ್ಟು ಬೇಗ ಆರತಿ ಶುರು ಮಾಡಬೇಕು ಅಂದುಕೊಂಡಿದ್ದು, ದಸರಾದೊಳಗೆ ನಾವು ಶುರು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಒಮ್ಮೆ ಆರತಿಯನ್ನು ಶುರು ಮಾಡಿದರೆ ನಿಲ್ಲಿಸುವ ಮಾತಿಲ್ಲ ಎಂದಿದ್ದಾರೆ.
ಇನ್ನು ಸಮಿತಿಯೂ ಶನಿವಾರ ವಾರಣಾಸಿಗೆ ತೆರಳಲಿದ್ದು, ಅಲ್ಲೂ ಗಂಗಾರತಿಯನ್ನು ನೋಡಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಬರಲಿದ್ದಾರೆ. ಬಳಿಕ ಈ ಬಗ್ಗೆ ವಿಸ್ತೃತ ವರದಿಯನ್ನು ಸರ್ಕಾರಕ್ಕೆ ನೀಡಲಿದೆ.ಇದನ್ನೂ ಓದಿ: ಬೆಳ್ತಂಗಡಿ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ಮಂಡ್ಯ: ನಾಗಮಂಗಲ ಗಲಭೆ ಪ್ರಕರಣ (Nagamangala Violence) ಹಿನ್ನೆಲೆ ಇಂದು (ಸೆ.19) ಜಿಲ್ಲೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumarswamy) ಭೇಟಿ ನೀಡಲಿದ್ದು, ನೊಂದ ಕುಟುಂಬಗಳಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ.
ನಾಗಮಂಗಲದಲ್ಲಿ (Nagamangala) ನಡೆದ ಗಲಭೆಯಿಂದಾಗಿ ಹಲವು ಬದುಕು ಬೀದಿಗೆ ಬಂದಿದೆ. ಈ ಸಂಬಂಧ ಸಚಿವ ಚೆಲುವರಾಯಸ್ವಾಮಿ (Cheluvarayaswamy) ಹಾನಿಗೊಳಗಾದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವುದರ ಜೊತೆಗೆ ವೈಯಕ್ತಿಕವಾಗಿಯೂ ಪರಿಹಾರ ಕೊಡುವುದಾಗಿಯೂ ತಿಳಿಸಿದ್ದಾರೆ. ಇತ್ತ ಕಡೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತಲ್ಲಿ ಹೇಳುವುದು ಬೇಡ ಮಾಡಿತೋರಿಸಬೇಕೆಂದು, ತಮ್ಮ ಸ್ವಂತ ಹಣದಲ್ಲಿ ನೊಂದ ಕುಟುಂಬಗಳಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಇದನ್ನೂ ಓದಿ: ಬಿಗ್ ಬಾಸ್‌ಗೆ ಹೋಗ್ತಾರಾ ಅವಳಿ ಸಹೋದರಿಯರು?- ಸ್ಪಷ್ಟನೆ ನೀಡಿದ ಅದ್ವಿತಿ ಶೆಟ್ಟಿ
ಗಲಭೆಯಿಂದಾಗಿ ಹಲವು ಅಂಗಡಿಗಳು ಸುಟ್ಟು ಕರಕಲಾಗಿದ್ದು, ಇದರಿಂದ ಮಾಲೀಕರ ಬದುಕು ಬೀದಿಗೆ ಬಂದಂತಾಗಿದೆ. ಹೀಗಾಗಿ ಸಚಿವ ಚಲುವರಾಯಸ್ವಾಮಿ ಗಲಭೆಯಾದ ಮಾರನೇ ದಿನವೇ ಹಾನಿಗೆ ಒಳಗಾದವರಿಗೆ ಸರ್ಕಾರದಿಂದ ಪರಿಹಾರ ನೀಡುವುದರ ಜೊತೆ ವೈಯಕ್ತಿಕವಾಗಿಯೂ ಪರಿಹಾರ ನೀಡುವ ಭರವಸೆ ನೀಡಿದ್ದರು. ಇತ್ತ ಘಟನೆಯಾದ ಒಂದು ದಿನದ ಬಳಿಕ ನಾಗಮಂಗಲಕ್ಕೆ ಭೇಟಿ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾನಿಗೊಳಗಾದ ಸ್ಥಳಗಳಿಗೆ ತೆರಳಿ ಬಳಿಕ ಸಂಬಂಧಪಟ್ಟವರಿಗೆ ತಮ್ಮ ಕೈಲಾದಷ್ಟು ಆರ್ಥಿಕ ಸಹಾಯ ಮಾಡಿದ್ದಾರೆ.
ಇದೀಗ ಮತ್ತೆ ಹೆಚ್.ಡಿ ಕುಮಾರಸ್ವಾಮಿ ಎರಡನೇ ಬಾರಿಗೆ ಆರ್ಥಿಕ ಸಹಾಯ ಮಾಡಲು ಮುಂದಾಗಿದ್ದಾರೆ. ಇಂದು (ಸೆ.19) ಸಂಜೆ 5:30ಕ್ಕೆ ನಾಗಮಂಗಲದ ಬದ್ರಿಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಲಿರುವ ಕುಮಾರಸ್ವಾಮಿ, ಆ ಗ್ರಾಮದಲ್ಲಿ ಗಲಭೆ ಸಂಬಂಧ ಜೈಲು ಸೇರಿರುವವರ ಹಾಗೂ ಪೊಲೀಸರಿಗೆ ಹೆದರಿ ಊರು ಬಿಟ್ಟಿರುವವರ ಕುಟುಂಬಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಆ ಕುಟುಂಬಸ್ಥರಿಗೆ ಆರ್ಥಿಕ ಸಹಾಯ ಮಾಡಿ ಧೈರ್ಯ ತುಂಬಲಿದ್ದಾರೆ. ಈ ಮೂಲಕ ನೊಂದ ಜನರ ಕಣ್ಣೀರು ಒರೆಸಲು ಹೆಚ್‌ಡಿಕೆ ಮುಂದಾಗಿದ್ದಾರೆ.ಇದನ್ನೂ ಓದಿ: 2040ಕ್ಕೆ ಮಾನವ ಸಹಿತ ಚಂದ್ರಯಾನ – 2,104 ಕೋಟಿ ಅನುದಾನಕ್ಕೆ ಕೇಂದ್ರ ಅಸ್ತು
ಜಿಲ್ಲಾಡಳಿತ ಈಗಷ್ಟೇ ಹಾನಿಯಾಗಿರುವ ಪ್ರಮಾಣವನ್ನು ಅಂದಾಜಿಸಲಾಗಿದೆ. ಇನ್ನೂ ಸಚಿವ ಚೆಲುವರಾಯಸ್ವಾಮಿ ವೈಯಕ್ತಿಕ ಪರಿಹಾರವನ್ನು ನೀಡಿಲ್ಲ. ಈ ಮಧ್ಯೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪರಿಹಾರವನ್ನು ನೀಡುವ ಮೂಲಕ ರಾಜ್ಯ ಸರ್ಕಾರ ಹಾಗೂ ಸಚಿವ ಚಲುವರಾಯಸ್ವಾಮಿಯನ್ನು ಓವರ್ ಟೇಕ್ ಮಾಡುವ ಮೂಲಕ ಜನರ ಕಣ್ಣೀರು ಒರೆಸಲು ಮುಂದಾಗಿದ್ದಾರೆ.
ಸದಾ ಅಮ್ಮ (ಸುಮಲತಾ ಅಂಬರೀಶ್) ನ ಪರವಾಗಿ ಇರುತ್ತೇನೆ ಎಂದು ಹೇಳುತ್ತಾ ಬಂದಿದ್ದ ನಟ ದರ್ಶನ್, ಏಕಾಏಕಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಇಳಿದಿದ್ದ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಸುಮಲತಾ ಅಂಬರೀಶ್ ಬಿಜೆಪಿ ಸೇರಿಕೊಂಡಿದ್ದರೂ, ದರ್ಶನ್ ಕಾಂಗ್ರೆಸ್ ಪರವಾಗಿ ಮತಯಾಚನೆ ಮಾಡಿದ್ದು ಅನುಮಾನಕ್ಕೆ ಕಾರಣವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.
ಇಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದ ದರ್ಶನ್, ತಾನು ಚಂದ್ರು ಅವರ ಪರವಾಗಿ ಯಾಕೆ ಮತ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದನ್ನು ಸ್ಪಷ್ಟ ಪಡಿಸಿದರು. ಈ ಹಿಂದೆ ಸುಮಲತಾ ಅಂಬರೀಶ್ ಅವರು ಪಕ್ಷೇತರರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಸಚಿವ ಚೆಲುವರಾಯ ಸ್ವಾಮಿ ಅವರು ಸಾಕಷ್ಟು ಸಹಾಯ ಮಾಡಿದ್ದರಂತೆ. ಅದರ ಋಣ ತೀರಿಸಲು ಬಂದಿರುವುದಾಗಿ ಇಂದು ದರ್ಶನ್ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.
ತಾವು ಬಿಜೆಪಿಗೆ ಬಂದರೂ, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ದರ್ಶನ್ ಪ್ರಚಾರ ಮಾಡುತ್ತಿರುವುದರ ಬಗ್ಗೆ ಸ್ವತಃ ಸುಮಲತಾ ಅಂಬರೀಶ್ ಅವರೇ ಸ್ಪಷ್ಟನೆ ನೀಡಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ‘ದರ್ಶನ್ ಯಾರ ಪರ ಪ್ರಚಾರ ಮಾಡಬೇಕು, ಮಾಡಬಾರದು ಎನ್ನುವುದನ್ನು ನಾನು ನಿರ್ಧರಿಸೋಕೆ ಆಗಲ್ಲ. ಅದು ಅವರ ವೈಯಕ್ತಿಕ’ ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.
ಸದ್ಯ ದರ್ಶನ್ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕೈಗೆ ಸರ್ಜರಿ ಆಗಿದ್ದರೂ, ಅದನ್ನು ಲೆಕ್ಕಿಸದೇ ಮತಯಾಚನೆ ಮಾಡುತ್ತಿದ್ದಾರೆ. ಜೊತೆಗೆ ಡಿ.ಕೆ ಸುರೇಶ್ ಪರವೂ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಂಡ್ಯ: ನಿರ್ಮಲಾನಂದನಾಥ ಶ್ರೀಗಳ (Nirmalanandanatha Swamiji) ಫೋನ್‌ನ್ನು ಕುಮಾರಸ್ವಾಮಿ (H.D.Kumaraswamy) ಟ್ಯಾಪ್ ಮಾಡಿಸಿದ್ರು. ಈಗ ಹೇಗೆ ಹೋಗಿ ಶ್ರೀಗಳ ಬಳಿ ಆಶೀರ್ವಾದ ಕೇಳ್ತಾರೆ ಎಂದು ಸಚಿವ ಚಲುವರಾಯಸ್ವಾಮಿ (Cheluvarayaswamy), ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್‌ನ್ನು ಟ್ಯಾಪ್ ಮಾಡಿದ್ದಾರೆ. ಇದೀಗ ಹೇಗೆ ಅವರ ಬಳಿ ಹೋಗಿ ಕುಮಾರಸ್ವಾಮಿ ಆಶೀರ್ವಾದ ಕೇಳ್ತ ಇದ್ದಾರೆ. ನಾವು ಸಹ ಜೆಎಸ್‌ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ನಾವು ಹೋಗಿದ್ದೀವಿ, ಅವರು ಹೋಗಿದ್ದಾರೆ. ಇದು ಚುನಾವಣೆ ವೇಳೆ ಸಹಜವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಸ್ವಾಮೀಜಿ ಕಾರ್ಯಕ್ರಮಕ್ಕೆ ಹೆಚ್‍ಡಿಕೆ ಹೋಗಿ ಬರೋದ್ರೊಳಗೆ ಆಪರೇಷನ್ ಮುಗಿದು ಹೋಗಿತ್ತು: ಡಿಕೆಶಿ
ಕುಮಾರಸ್ವಾಮಿ, ಸ್ವಾಮೀಜಿ ಫೋನ್ ಟ್ಯಾಪ್ ಮಾಡಿದ್ದಾರೆ. ಸ್ವಾಮೀಜಿಗಳು ಯಾರಿಗೂ ಪ್ರಚಾರ ಮಾಡೋಕೆ ಆಗಲ್ಲ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯ ಮಠ ಆದ್ರೂ ಸಹ ರಾಜ್ಯದಲ್ಲಿ ಅತ್ಯಂತ ಜಾತ್ಯತೀತ ಮಠವಾಗಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದವರು ಬಾಲಗಂಗಾಧರನಾಥ ಶ್ರೀಗಳು. ಜೆಡಿಎಸ್‌ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು ಕಿರುಕುಳ ಕೊಟ್ಟರು ಎಂದು ಸಹ ಗೊತ್ತಿದೆ. ಈಗ ಚುನಾವಣೆ ಬಂದಿದೆ. ಅದಕ್ಕೆ ಮಠಕ್ಕೆ ಕುಮಾರಸ್ವಾಮಿ ಹೋಗ್ತಾ ಇದ್ದಾರೆ ಅಷ್ಟೇ ಎಂದಿದ್ದಾರೆ.
ಬೆಂಗಳೂರು/ಬೆಳಗಾವಿ: ರಾಜ್ಯ ಸರ್ಕಾರ ನೀಡಿರುವ 2 ಸಾವಿರ ರೂ. ಬರ ಪರಿಹಾರ (Drought Relief) ತಾತ್ಕಾಲಿಕ. ಇನ್ನೆರಡು ದಿನಗಳಲ್ಲಿ 2 ಸಾವಿರ ಪರಿಹಾರಕ್ಕೆ ಮಾರ್ಗಸೂಚಿ ಪ್ರಕಟ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ತಿಳಿಸಿದ್ದಾರೆ.
ವಿಧಾನ ಪರಿಷತ್ (VidhanaParishad) ಕಲಾಪ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಶರಣಗೌಡ ಬಯ್ಯಪುರ ಪರಿಹಾರದ ಬಗ್ಗೆ ಪ್ರಶ್ನೆ ಕೇಳಿದರು. ಪರಿಹಾರ ಪಡೆಯಲು ನಿಯಮ ಏನು? ಎಕರೆಗೆ ಪರಿಹಾರವೋ, ಕುಂಟೆಗೆ ಪರಿಹಾರವೋ ಅಂತ ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಚೆಲುವರಾಯಸ್ವಾಮಿ, ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಸೆಪ್ಟೆಂಬರ್ 22ಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈವರೆಗೂ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ 2 ಸಾವಿರ ತಾತ್ಕಾಲಿಕ ಪರಿಹಾರ ರೈತರಿಗೆ ಘೋಷಣೆ ಮಾಡಲಾಗಿದೆ. 2 ಸಾವಿರಕ್ಕೆ ಮಾನದಂಡಗಳೇನು ಅಂತ ಇಂದು ಅಥವಾ ನಾಳೆ ಬಿಡುಗಡೆ ಮಾಡ್ತೀವಿ ಎಂದರು.
ಎಷ್ಟು ಎಕರೆ, ಯಾರಿಗೆ ಪರಿಹಾರ? ಅನ್ನೋದರ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡ್ತೀವಿ. 1 ಹೆಕ್ಟೇರ್ ಗೆ 2 ಸಾವಿರ ಪರಿಹಾರ ಕೊಡ್ತೀವಿ. 10 ಗುಂಟೆಗೆ 10 ಗುಂಟೆ ಮಾನದಂಡದಲ್ಲಿ ಪರಿಹಾರ ಕೊಡ್ತೀವಿ. ಪರಿಹಾರಕ್ಕೆ ಮಾನದಂಡ ಬಿಡುಗಡೆ ಮಾಡ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: ಅರ್ಜುನನ ಸಾವಿನ ರಹಸ್ಯ ಬಿಚ್ಚಿಟ್ಟ ಮಾವುತನ ಬಾಮೈದಾ- ಮತ್ತೊಂದು ಆಡಿಯೋ ವೈರಲ್
ಮಂಡ್ಯ: ವಿಶ್ವೇಶ್ವರಯ್ಯ ನಾಲೆಗೆ (VC Canal) ಕಾರು ಉರುಳಿ ನಾಲ್ವರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ (Chief Minister Relief Fund) ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಸಚಿವ ಚಲುವರಾಯಸ್ವಾಮಿ (Cheluvarayaswamy) ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ನನ್ನ ಹಾಗೂ ಸಚಿವ ಮಹದೇವಪ್ಪ (HC Mahadevappa) ಅವರ ಮನವಿ ಮೇರೆಗೆ ಪರಿಹಾರ ನೀಡಲು ಸಿಎಂ ಸೂಚನೆ ನೀಡಿದ್ದಾರೆ. ಮಂಡ್ಯ ಹಾಗೂ ಮೈಸೂರು ಡಿಸಿಗಳು ಪರಿಹಾರಕ್ಕೆ ವರದಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನೂ ಈ ಪ್ರಕರಣಕ್ಕೆ ಸಂಬಂಧಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಮಾತನಾಡಿದ್ದು, ಘಟನೆಯಲ್ಲಿ ಸಾವನ್ನಪ್ಪಿರುವ ಮೂವರು ಟಿ.ನರಸಿಪುರ ತಾಲೂಕಿನ ಗೊರವನಹಳ್ಳಿ ಗ್ರಾಮದವರು. ಈ ಘಟನೆ ಜರುಗಬಾರದಿತ್ತು, ಈ ಘಟನೆ ತುಂಬಾ ದುಃಖ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು
ಘಟನೆ ನಡೆದ ಸ್ಥಳದಲ್ಲಿ ರಸ್ತೆ ಚೆನ್ನಾಗಿದೆ. ಆದ್ರೆ ಇದಕ್ಕೆ ಅತಿವೇಗ ಕಾರಣ ಇರಬಹುದು ಅನ್ನಿಸುತ್ತೆ. ವಾಹನ ಸವಾರರು ಜಾಗರೂಕತೆಯಿಂದ ಚಾಲನೆ ಮಾಡಬೇಕು. ಸದ್ಯ ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸೂಚಿಸಿದ್ದು, ಮೈಸೂರು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳು ಇದರ ಫಾಲೋಅಪ್ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ AI ಕ್ಯಾಮೆರಾ – ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ
ಏನಿದು ಘಟನೆ?
ಮೂರೇ ದಿನಗಳ ಅಂತರದಲ್ಲಿ ಸಂಭವಿಸಿದ ಎರಡು ಅಪಘಾತಗಳಲ್ಲಿ ಐವರು ಜಲ ಸಮಾಧಿಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶನಿವಾರ ತಡರಾತ್ರಿಯೂ ಇಲ್ಲಿನ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿಬಿದ್ದು ಗಾಮನಹಳ್ಳಿ ಗ್ರಾಮದ ಮಹದೇವಮ್ಮ, ಗೊರವನಹಳ್ಳಿ ಗ್ರಾಮದ ಸಂಜನಾ, ಮಮತಾ, ರೇಖಾ ಮಹಿಳೆಯರು ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಕಳೆದ ಮೂರು ದಿನಗಳ ಹಿಂದೆಯಷ್ಟೇ ತಿಬ್ಬನಹಳ್ಳಿ ಬಳಿಯ ವಿಸಿ ನಾಲೆಗೆ ಕಾರು ಉರುಳಿಬಿದ್ದು ಚಾಲಕನೊಬ್ಬ ಸಾವನ್ನಪ್ಪಿದ್ದ ಘಟನೆ ನಡೆದಿತ್ತು.