Tag: Chenab bridge

  • ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

    ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

    ಶ್ರೀನಗರ: ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆಯನ್ನು (Chenab Bridge) ಉದ್ಘಾಟಿಸಿದರು.

    ಜೊತೆಗೆ ಅಂಜಿ ನದಿಯ ಮೇಲೆ ನಿರ್ಮಿಸಲಾದ ಭಾರತದ ಮೊಟ್ಟ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆಯನ್ನೂ (Anji bridge) ಉದ್ಘಾಟಿಸಿದರು. ಈ ವೇಳೆ ಜಮ್ಮು-ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ (Omar Abdullah) ಹಾಗೂ ರಾಜ್ಯಪಾಲ ಮನೋಜ್‌ ಸಿನ್ಹಾ ಉಪಸ್ಥಿತರಿದ್ದರು. ಚೆನಾಬ್‌ ಸೇತುವೆಯನ್ನು ಉದ್ಘಾಟಿಸಿದ ಬಳಿಕ ರಾಷ್ಟ್ರಧ್ವಜ ಹಿಡಿದು ಒಂದು ಸುತ್ತು ಪ್ರದಕ್ಷಿಣೆ ಹಾಕಿದರು.

    ಚೆನಾಬ್‌ ಸೇತುವೆ ಬಳಿಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ಶ್ರೀನಗರ (Katra To Srinagar) ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದರು. ಹಾಗೂ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಂವಾದ ಸಹ ನಡೆಸಿದರು. ಇದನ್ನೂ ಓದಿ: ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

    ವಿವಿಧ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಚಾಲನೆ ನೀಡುವ ಹಿನ್ನೆಲೆ ಜಮ್ಮು ಕಾಶ್ಮೀರಕ್ಕಿಂದು ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದಾರೆ. ಮಾತಾ ವೈಷ್ಣೋದೇವಿ ದೇವಾಲಯದ ನೆಲೆಯಾದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮೋದಿ ಚಾಲನೆ ನೀಡಲಿದ್ದಾರೆ. ಕತ್ರಾದಲ್ಲಿ 350 ಕೋಟಿ ರೂ.ಗಿಂತಲೂ ಹೆಚ್ಚು ವೆಚ್ಚದ ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಸಂಸ್ಥೆಯ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಸತತ 3ನೇ ಬಾರಿ ರೆಪೋ ದರ ಇಳಿಕೆ – ಗೃಹ ಸಾಲ, ಇಎಂಐ ಸೌಲಭ್ಯದಾರರಿಗೆ ಗುಡ್‌ನ್ಯೂಸ್‌

    ಚೆನಾಬ್‌ ಸೇತುವೆ ವಿಶೇಷತೆ ಏನು?
    ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಚೆನಾಬ್‌ ಸೇತುವೆ ಐಫೆಲ್ ಟವರ್‌ಗಿಂತಲೂ ಎತ್ತರವಾಗಿ ನಿರ್ಮಾಣವಾಗಿರುವ, ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. 2021ರಲ್ಲಿ ಸೇತುವೆಯ ಕಮಾನು ಕೆಲಸ ಪೂರ್ಣಗೊಂಡಿತ್ತು. ಇದನ್ನೂ ಓದಿ: ಇನ್ಮುಂದೆ ಭಾರತದಲ್ಲೇ ತಯಾರಾಗುತ್ತೆ ರಫೇಲ್ ಬಿಡಿಭಾಗಗಳು – ಟಾಟಾ ಜೊತೆ ಡಸಾಲ್ಟ್ ಒಪ್ಪಂದ

    ಈ ಸೇತುವೆಯನ್ನು ಅಂದಾಜು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತಲೂ 35 ಮೀ. ಎತ್ತರದಲ್ಲಿ ನಿರ್ಮಾಣವಾಗಿದೆ. ಚೆನಾಬ್ ಸೇತುವೆ ಚೆನಾಬ್ ನದಿ ಮಟ್ಟದಿಂದ 359 ಮೀ. ಎತ್ತರದಲ್ಲಿ ನಿರ್ಮಾಣವಾಗಿದ್ದು, 1.3 ಕಿ.ಮೀ. ಉದ್ದವಿದೆ. ಇದರ ಉಕ್ಕಿನ ಕಮಾನುಗಳು ಭೂಕಂಪನ, ಬಲವಾದ ಗಾಳಿಯನ್ನೂ ತಡೆಯುವ ಸಾಮರ್ಥ್ಯ ಹೊಂದಿದೆ, ಆ ರೀತಿ ಕಮಾನುಗಳನ್ನು ವಿನ್ಯಾಸಗೊಳಿಸಲಾಗಿದೆ.

    ರೈಲ್ವೇ ಸೇತುವೆ ನಿರ್ಮಾಣಕ್ಕೆ ಕಮಾನು ಸ್ಥಾಪನೆ ಎಂಜಿನಿಯರುಗಳಿಗೆ ದೊಡ್ಡ ಸವಾಲಾಗಿತ್ತು. ರೈಲ್ವೇ ಮಾರ್ಗದ 111 ಕಿ.ಮೀ ನಲ್ಲಿ 97 ಕಿ.ಮೀ ನಷ್ಟು ಸುರಂಗ ಮಾರ್ಗವೇ ಇದೆ. ಇಷ್ಟು ದೂರದ ಸುರಂಗ ಮಾರ್ಗ ದೇಶದ ಬೇರೆ ಯಾವ ಭಾಗಗಳಲ್ಲೂ ಮಾಡಲಾಗಿಲ್ಲ. ಇದನ್ನೂ ಓದಿ: ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

    ಸೇತುವೆ ನಿರ್ಮಾಣಕ್ಕೆ 17 ಕಂಬಗಳನ್ನು ನಿರ್ಮಿಸಲಾಗಿದ್ದು, ಒಟ್ಟು 28,660 ಮೆಟ್ರಿಕ್ ಟನ್‌ನಷ್ಟು ಉಕ್ಕನ್ನು ಬಳಸಲಾಗಿದೆ. ಕಮಾನಿನ ತೂಕ 10,619 ಮೆಟ್ರಿಕ್ ಟನ್ ಇದೆ. ಸೇತುವೆಗೆ ಬಳಸಲಾದ ಉಕ್ಕು 10 ಡಿಗ್ರಿ ಸೆಲ್ಸಿಯಸ್‌ನಿಂದ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ವರೆಗಿನ ತಾಪಮಾನಕ್ಕೆ ಸೂಕ್ತವಾಗಿದೆ. ಕನಿಷ್ಠ 120 ವರ್ಷಗಳ ಜೀವಿತಾವಧಿ ಈ ರಚನೆಗಿದ್ದು, ಗಂಟೆಗೆ 266 ಕಿ.ಮೀ ವೇಗದ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ.

    ಕಾಶ್ಮೀರಕ್ಕೆ ರೈಲು ಮಾರ್ಗವನ್ನು ಹಾಕುವ ಯೋಜನೆಯನ್ನು 1990ರ ದಶಕದಲ್ಲಿ ಆಗಿನ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ಪ್ರಕಟಿಸಿದ್ದರು. 2002ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕರೆದಿದ್ದರು. ಇದನ್ನೂ ಓದಿ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

  • ಚೀನಾದ ಕುಮ್ಮಕ್ಕು – ಪಾಕ್‌ನಿಂದ ಚೆನಾಬ್ ಸೇತುವೆಯ ಮಾಹಿತಿ ಸಂಗ್ರಹ

    ಚೀನಾದ ಕುಮ್ಮಕ್ಕು – ಪಾಕ್‌ನಿಂದ ಚೆನಾಬ್ ಸೇತುವೆಯ ಮಾಹಿತಿ ಸಂಗ್ರಹ

    ನವದೆಹಲಿ: ಚೀನಾದ (China) ನಿರ್ದೇಶನದ ಮೇರೆಗೆ ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಚೆನಾಬ್ ಸೇತುವೆಯ (Chenab Bridge) ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ,

    ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯ ಮೇಲೆ ಇತ್ತೀಚೆಗೆ ರೈಲ್ವೇ ಸಂಚಾರದ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಇದು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಇತರ ಭಾಗಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಸೇತುವೆಯ ಬಗ್ಗೆ ಪ್ರಮುಖ ಮಾಹಿತಿಯನ್ನು ಪಾಕಿಸ್ತಾನಿ ಮತ್ತು ಚೀನಾದ ಗುಪ್ತಚರ ಸಂಸ್ಥೆಗಳು ಸಂಗ್ರಹಿಸಿವೆ ಎಂದು ಮೂಲಗಳು ತಿಳಿಸಿವೆ.

    ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಈ ಸೇತುವೆ ನಿರ್ಮಾಣಗೊಂಡಿದೆ. ಇದನ್ನು ಪೂರ್ಣಗೊಳಿಸಲು ಸುಮಾರು 20 ವರ್ಷಗಳು ಬೇಕಾಯಿತು. ಇದು ಜಮ್ಮುವಿನ ಮೂಲಕ ಹಾದುಹೋಗುವ 272 ಕಿಲೋಮೀಟರ್ ಆಲ್-ವೆದರ್ ರೈಲ್ವೆ ವಿಭಾಗದ ವ್ಯಾಪ್ತಿಗೆ ಬರಲಿದೆ.

    ಚೆನಾಬ್‌ ಸೇತುವೆ ವಿಶ್ವದ ಅತಿ ಎತ್ತರದ ರೈಲು ಸೇತುವೆಯಾಗಿದೆ. ಪ್ಯಾರಿಸ್‌ನ ಐಕಾನಿಕ್ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರದಲ್ಲಿರುವ ಇದು ನದಿಪಾತ್ರದ ಮೇಲೆ 359 ಮೀಟರ್‌ಗಳಷ್ಟು ಎತ್ತರದಲ್ಲಿದೆ. ಸುಮಾರು 1.3 ಕಿಮೀ ಉದ್ದದ ರೈಲು ಸೇತುವೆ ಇದಾಗಿದೆ.

    ಈ ವರ್ಷ ಜೂನ್‌ನಲ್ಲಿ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದರು.

  • ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ‌ʻಚೆನಾಬ್ʼ ಬಗ್ಗೆ ಪಾಕ್‌-ಚೀನಾದಿಂದ ಮಾಹಿತಿ ಸಂಗ್ರಹ

    ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ‌ʻಚೆನಾಬ್ʼ ಬಗ್ಗೆ ಪಾಕ್‌-ಚೀನಾದಿಂದ ಮಾಹಿತಿ ಸಂಗ್ರಹ

    ನವದೆಹಲಿ: ಚೀನಾದ ನಿರ್ದೇಶನದ ಮೇರೆಗೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಮತ್ತು ರಾಂಬನ್ ಜಿಲ್ಲೆಗಳನ್ನು ಸಂಪರ್ಕಿಸುವ ಚೆನಾಬ್ ರೈಲ್ವೆ (Chenab Railway Bridge) ಸೇತುವೆ ಬಗ್ಗೆ ಪಾಕಿಸ್ತಾನ ಮತ್ತು ಚೀನಾದ (Pakistan and China) ಗುಪ್ತಚರ ಸಂಸ್ಥೆ ಐಎಸ್‌ಐ ಮಾಹಿತಿ ಸಂಗ್ರಹ ಮಾಡುತ್ತಿದೆ ಎಂದು ವರದಿಯಾಗಿದೆ.

    ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯು ಇತ್ತೀಚೆಗೆ ಪ್ರಾಯೋಗಿಕ ಕಾರ್ಯಾಚರಣೆ ಪ್ರಾರಂಭಿಸಿತು. ಈ ಸೇತುವೆ ಜಮ್ಮು ಮತ್ತು ಕಾಶ್ಮೀರ (Jammu and Kashmir) ಹಾಗೂ ದೇಶದ ಇತರ ಭಾಗಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಮೂಲಗಳ ಪ್ರಕಾರ ಪಾಕಿಸ್ತಾನ ಮತ್ತು ಚೀನಾದ ಗುಪ್ತಚರ ಸಂಸ್ಥೆಗಳು ಈ ಸೇತುವೆಯ ಬಗ್ಗೆ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಿವೆ. ಇದನ್ನೂ ಓದಿ: ಅಮೆರಿಕಾ ಚುನಾವಣೆಯಲ್ಲಿ ಈಗ ʼಕಸʼ ಪಾಲಿಟಿಕ್ಸ್ – ಕಸದ ಲಾರಿ ಚಲಾಯಿಸಿ ಬೈಡನ್‌ಗೆ ಟ್ರಂಪ್ ಟಾಂಗ್

    ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಈ ಸೇತುವೆಯ ನಿರ್ಮಾಣ ಪೂರ್ಣಗೊಳಿಸಲು ಸರ್ಕಾರಕ್ಕೆ 20 ವರ್ಷಗಳು ಬೇಕಾಯಿತು. ಇದರ ನಿರ್ಮಾಣಕ್ಕೆ ಸಮಯದ ಮಿತಿ ಹೇರಿರಲಿಲ್ಲ. ಜಮ್ಮುವಿನ ಮೂಲಕ ಹಾದುಹೋಗುವ 272 ಕಿಮೀ ಉದ್ದದ ಸೇತುವೆ ಆಲ್-ವೆದರ್ ರೈಲ್ವೆ ವಿಭಾಗದ ಒಂದು ಭಾಗವಾಗಿದೆ, ಇದು ಅಂತಿಮವಾಗಿ ಕಾಶ್ಮೀರವನ್ನು ಸಂಪರ್ಕಿಸಲಿದೆ. ಇದನ್ನೂ ಓದಿ: ದೀಪಾವಳಿ ಆಚರಣೆ ವೇಳೆ ಎರಡು ಗುಂಪಿನ ನಡುವೆ ಘರ್ಷಣೆ- ಒಂದೇ ಕುಟುಂಬದ ಮೂವರು ಬಲಿ

    ಭಾರಿ ಹಿಮಪಾತದಿಂದ ಚಳಿಗಾಲದಲ್ಲಿ ರಸ್ತೆಗಳ ಬ್ಲಾಕ್ ಆಗಲಿದ್ದು, ರಸ್ತೆ ಮಾರ್ಗವಾಗಿ ಕಾಶ್ಮೀರ ಸಂಪರ್ಕಕ್ಕೆ ಸಮಸ್ಯೆಯಾಗಲಿದೆ. ಈ ಸೇತುವೆಯಿಂದ ಸರ್ವ ಕಾಲದಲ್ಲೂ ಕಾಶ್ಮೀರವನ್ನು ಸಂಪರ್ಕಿಸಬಹುದು. ಚೆನಾಬ್ ಸೇತುವೆಯೊಂದಿಗೆ, ತೊಂದರೆಗೊಳಗಾದ ಗಡಿ ಪ್ರದೇಶದಲ್ಲಿ ಭಾರತವು ಕಾರ್ಯತಂತ್ರದ ಪ್ರಯೋಜನವನ್ನು ಪಡೆಯುತ್ತದೆ. ಇದನ್ನೂ ಓದಿ: ರಾಜ್ಯ ಸರ್ಕಾರದ ತೊಳಲಾಟವನ್ನು ಬಹಿರಂಗವಾಗಿ ಹೇಳಿದ ಡಿಕೆಶಿಗೆ ಅಭಿನಂದನೆ: ವಿ.ಸೋಮಣ್ಣ ವ್ಯಂಗ್ಯ 

  • ಭಾರತದಲ್ಲಿ ಮತ್ತೊಂದು ಮಂಕಿಪಾಕ್ಸ್‌ ಕೇಸ್‌ ಪತ್ತೆ – ಇತರೇ ಟಾಪ್-10 ನ್ಯೂಸ್‌

    ಭಾರತದಲ್ಲಿ ಮತ್ತೊಂದು ಮಂಕಿಪಾಕ್ಸ್‌ ಕೇಸ್‌ ಪತ್ತೆ – ಇತರೇ ಟಾಪ್-10 ನ್ಯೂಸ್‌

    – ಚೇನಾಬ್ ರೈಲು ಸೇತುವೆಯ ರುದ್ರರಮಣೀಯ ದೃಶ್ಯ; ವೀಡಿಯೋ ನೋಡಿ…

    1. ಅಬ್ದುಲ್ ಕಲಾಂರನ್ನ ಲಾಡೆನ್‌ಗೆ ಹೋಲಿಸಿ ವಿವಾದ

    ಸಮಾಜದ ಪರಿಸ್ಥಿತಿಗಳೇ ಒಸಾಮಾ ಬಿನ್ ಲಾಡೆನ್‌ನನ್ನು ಭಯೋತ್ಪಾಕನನ್ನಾಗಿ ಮಾಡಿತು ಅಂತ ಮಹಾರಾಷ್ಟ್ರದ ಶರದ್ ಪವಾರ್ ಎನ್‌ಸಿಪಿ ಪಕ್ಷದ ನಾಯಕ ಜಿತೇಂದ್ರ ಅವಧ್ ಪತ್ನಿ ಋತು ಅವಧ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ. ಲಾಡೆನ್ ಜೀವನ ಚರಿತ್ರೆ ಓದಿ.. ಅಬ್ದುಲ್ ಕಲಾಂ ಹೇಗೆ ರಾಷ್ಟ್ರಪತಿ ಆದ್ರೋ, ಲಾಡೆನ್ ಹೇಗೆ ಉಗ್ರನಾದನೋ ಗೊತ್ತಾಗುತ್ತೆ ಎಂದು ಮಕ್ಕಳಿಗೆ ಕರೆ ನೀಡಿದ್ದಾರೆ. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ಪರ ಮಾತಾಡೋದು ಇಂಡಿ ಕೂಟದ ರಕ್ತದಲ್ಲೇ ಇದೆ ಎಂದು ಬಿಜೆಪಿ ಕಿಡಿಕಾರಿದೆ.

    2. ಅಜಿತ್‌ ‌ಪವಾರ್‌ ಭಿನ್ನರಾಗ

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸನಿಹದಲ್ಲಿ ಡಿಸಿಎಂ ಅಜಿತ್ ಪವಾರ್ ಭಿನ್ನರಾಗ ತೆಗೆದಿದ್ದಾರೆ. ಸಮ್ಮಿಶ್ರ ಸರ್ಕಾರ ಇದ್ದರೇ ಇದೇ ಪ್ರಾಬ್ಲಂ… ಯಾವುದೇ ಅಭಿವೃದ್ದಿ ಕೆಲಸಗಳು ಆಗಲ್ಲ ಎಂದಿದ್ದಾರೆ. ಅಜಿತ್ ಪವಾರ್ ಹೇಳಿಕೆಗೆ ಈಗ ಆಡಳಿತ ಮೈತ್ರಿಕೂಟದಲ್ಲಿ ಅಸಮಾಧಾನದ ಹೊಗೆ ಎಬ್ಬಿಸಿದೆ.

    3. ಪಿಯೂಶ್‌ ಗೋಯೆಲ್‌ ವಿರುದ್ಧ ಪ್ರಿಯಾಂಕ್‌ ಕಿಡಿ

    ಬೆಂಗಳೂರು ಬೈ ಬೈ ಅಂದ್ರೆ.. ಭಾರತ ಬೈ ಬೈ ಎಂದು ಹೇಳಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪಿಯೂಶ್ ಗೋಯೆಲ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಪಿಯೂಶ್ ಗೋಯಲ್ ಬಾಯ್ ಬಾಯ್ ಬೆಂಗಳೂರು ಅಂತ ಹೇಳಿದ್ರು. ಅವರು ದೇಶದ ಮಂತ್ರಿಗಳಾಗಿಲ್ಲ.. ಮೋದಿಯವರಿಗೆ ಮಂತ್ರಿಗಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು. ಸೆಮಿ ಕಂಡಕ್ಟರ್‌ನ 4 ವಲಯಗಳು ಗುಜರಾತ್‌ಗೆ ಹೋಗಿವೆ. ಇದಕ್ಕೆ ಕುಮಾರಸ್ವಾಮಿ ಉತ್ತರ ಕೊಡಬೇಕು ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ರು.

    4. ಅಗ್ನಿವೀರರಿಗೆ ಉದ್ಯೋಗ ಮೀಸಲಾತಿ

    ಅಗ್ನಿವೀರರಿಗೆ ಬ್ರಹ್ಮೋಸ್ ಏರೋಸ್ಪೇಸ್ ಸಂಸ್ಥೆ ಉದ್ಯೋಗ ಮೀಸಲಾತಿ ನೀಡಿದೆ. ತಾಂತ್ರಿಕ ಮತ್ತು ಸಾಮಾನ್ಯ ಆಡಳಿತ ವಿಭಾಗದಲ್ಲಿ ಶೇ.15ರಷ್ಟು ಮೀಸಲಾತಿ ಪ್ರಕಟಿಸಿದೆ. ಭದ್ರತಾ ವಿಭಾಗದಲ್ಲಿ ಕನಿಷ್ಠ ಶೇ.50ರಷ್ಟು ಮೀಸಲಾತಿ ಕಲ್ಪಿಸಿದೆ. ಈ ಮೂಲಕ ಬ್ರಹ್ಮೋಸ್ ಏರೋಸ್ಪೇಸ್ ಸಂಸ್ಥೆ ಅಗ್ನಿವೀರರಿಗೆ ಉದ್ಯೋಗ ಮೀಸಲಾತಿ ನೀಡಿದ ಮೊದಲ ಸಂಸ್ಥೆ ಎನಿಸಿದೆ.

    5. ಪೊಲೀಸರ ಮೇಲೆ ಗುಂಪು ದಾಳಿ

    ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಕ್ರಮ ಗಣಿಗಾರಿಕೆ ಆರೋಪಿ ವಾಹನದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಇದ್ರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಪೊಲೀಸರ ಮೇಲೆ ಗುಂಪು ದಾಳಿ ನಡೆಸಿದ ಘಟನೆ ಉತ್ತರಪ್ರದೇಶದ ಮೊರದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರಿಗೆ ಕಲ್ಲು ಹೊಡೆದಿದ್ದಾರೆ. ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ.

    6. ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಕೇಸ್‌

    ಮೂರು ಲಕ್ಷ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಸಲ್ಲಿ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಂದು ಚಾಮರಾಜನಗರ ಕೋರ್ಟ್‌ಗೆ ತೆರಳಿ ವಿಚಾರಣೆ ಎದುರಿಸಿದ್ರು. ಬಳಿಕ ಮಾತಾಡಿದ ಅವರು, ಕರುಣಾಕರ ಎಂಬುವರು ನನ್ನ ವಿರುದ್ದ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ನನ್ನ ನೈತಿಕ ಶಕ್ತಿ ಕುಗ್ಗಿಸುವ ಯತ್ನ ನಡೆಯುತ್ತಿದೆ. ಶೀಘ್ರವೇ ಸತ್ಯ ಗೊತ್ತಾಗುತ್ತೆ ಎಂದಿದ್ದಾರೆ

    7. ಬಿಜೆಪಿಯಲ್ಲೇ ಫೈಟ್

    ರಾಜ್ಯ ಬಿಜೆಪಿಯಲ್ಲಿ ಬಣ ಸಂಘರ್ಷ ತಾರಕಕ್ಕೇರಿದೆ. ನಿನ್ನೆ ಯತ್ನಾಳ್ ಟೀಂ ನಡೆಸಿದ್ದ ರೆಬೆಲ್ ಸಭೆಗೆ ಪ್ರತಿಯಾಗಿ ರೇಣುಕಾಚಾರ್ಯ ಬೆಂಗಳೂರಲ್ಲಿ ಸಭೆ ನಡೆಸಿದ್ದಾರೆ. ಕಟ್ಟಾ ಸುಬ್ರಹ್ಮಣ್ಯನಾಯ್ಡು ಮನೆಯಲ್ಲಿ ನಡೆದ ಸಭೆಯಲ್ಲಿ ಎಲ್ರೂ ವಿಜಯೇಂದ್ರ ಪರ ಬ್ಯಾಟ್ ಬೀಸಿದ್ರು. ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯವಿಲ್ಲ. ವಿಜಯೇಂದ್ರರನ್ನ ಇಳಿಸಿ ನೋಡಿ ಎಂದು ಸವಾಲ್ ಹಾಕಿದ್ರು. ಪಕ್ಷ ವಿರೋಧಿಗಳನ್ನು ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ರು

    8. ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

    ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ರೈಲಿನ ಗಾಜುಗಳು ಪುಡಿ ಪುಡಿಯಾಗಿದ್ದು, ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ರೈಲ್ವೇ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

    9. ಭಾರತದಲ್ಲಿ ಮತ್ತೊಂದು ಮಂಕಿಪಾಕ್ಸ್‌ ಕೇಸ್‌ ಪತ್ತೆ

    ಭಾರತದಲ್ಲಿ ಮತ್ತೊಂದು ಮಂಕಿಪಾಕ್ಸ್ ಕೇಸ್ ಪತ್ತೆಯಾಗಿದೆ. ಕೇರಳದ ಎರ್ನಾಕುಲಂನಲ್ಲಿ ವ್ಯಕ್ತಿಯೊಬ್ಬರಿಗೆ ಈ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಎಂ-ಪಾಕ್ಸ್ ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ. ಕೇರಳದಲ್ಲೇ ಮೂರೂ ಪ್ರಕರಣಗಳು ಪತ್ತೆಯಾಗಿರುವುದು ಗಮನಾರ್ಹ.

    10. ಚೇನಾಬ್ ರೈಲ್ ಬ್ರಿಡ್ಜ್ ಸ್ಪಷಲ್‌ ವೀಡಿಯೋ

    ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ಚೇನಾಬ್ ರೈಲ್ವೇ ಸೇತುವೆಯ ರುದ್ರರಮಣೀಯ ದೃಶ್ಯವನ್ನು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಂಚಿಕೊಂಡಿದ್ದಾರೆ. ಇದು ವಿಶ್ವದ ಅತಿ ಎತ್ತರದ ರೈಲು ಸೇತುವೆ ಮತ್ತು ವಿಶ್ವದ ಅತಿ ಎತ್ತರದ ಕಮಾನು ಸೇತುವೆ ಎಂದು ಅಶ್ವಿನಿ ವೈಷ್ಣವ್ ಬಣ್ಣಿಸಿದ್ದಾರೆ. ಈ ಸೇತುವೆಯು ನದಿಯಿಂದ 1,178 ಅಡಿ ಎತ್ತರದಲ್ಲಿದೆ.