ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನ (Tamilnadu) ಕೆಲವು ಕಡೆ ಭಾರೀ ಮಳೆ ಸುರಿಯುತ್ತಿದೆ. ಚೆನ್ನೈನಲ್ಲಿ ಕಳೆದ ಎರಡು ದಿನಗಳಿಂದ ಬಿಟ್ಟುಬಿಡದೇ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡು ರಾಜ್ಯಾದ್ಯಂತ ಹೆಚ್ಚು ಮಳೆಯಾಗುವ ಮೂನ್ಸುಚನೆಯನ್ನು ನೀಡಿದೆ.
ಈ ಹಿನ್ನೆಲೆಯಲ್ಲಿ ತ್ರೀವ ಮಳೆಯ ಪರಿಣಾಮ ರೈಲ್ವೆ ಇಲಾಖೆ ಇಂದು (ಅ.16) ಚೆನ್ನೈನಿಂದ ಬೆಂಗಳೂರು ಹಾಗೂ ಮೈಸೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಿದೆ. ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರೈಲುಗಳನ್ನು ರದ್ದುಗೊಳಿಸಿದೆ.ಇದನ್ನೂ ಓದಿ: ಇಂದಿನಿಂದ ಭಾರತ-ನ್ಯೂಜಿಲೆಂಡ್ ಟೆಸ್ಟ್ – ಪಂದ್ಯಕ್ಕೆ ಮಳೆ ಅಡ್ಡಿ?
ಚೆನ್ನೈ: ಭಾರೀ ನಷ್ಟ ಉಂಟು ಮಾಡಿದ ತೀವ್ರ ಸ್ವರೂಪದ ಮಿಚಾಂಗ್ ಚಂಡಮಾರುತ (Cyclone Michaung) ಆಂಧ್ರದ ಬಾಪಟ್ಲಾ ಸಮೀಪ ತೀರವನ್ನು ತಾಕಿದೆ. ತೂಫಾನ್ ಪರಿಣಾಮ ಕೋಸ್ತಾ ಆಂಧ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಸ್ತೆಗಳು ಮಾತ್ರವಲ್ಲದೇ ಕೆಲ ಊರುಗಳೂ ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ತಿರುಮಲ ತಿರುಪತಿ (Tirumala Temple) ಜಲಮಯವಾಗಿದ್ದು, ಜಲಪಾತಗಳಿಗೆ ಜೀವಕಳೆ ಪಡೆದಿವೆ. ಕಾಳಹಸ್ತಿ ಜಲದಿಗ್ಬಂಧನದಲ್ಲಿದೆ. ಸಮುದ್ರದಲ್ಲಿ ಅಲೆಗಳಂತೂ ಎರಡು ಮೀಟರ್ ಎತ್ತರದವರೆಗೂ ಏಳುತ್ತಿದ್ದವು. ಮತ್ತೊಂದ್ಕಡೆ, ಚೆನ್ನೈ (Chennai Rain) ಮೇಲೆ ಮಿಚಾಂಗ್ ಪ್ರಭಾವ ಕಡಿಮೆ ಆಗಿದೆ. ಆದ್ರೆ ಕೆಲವು ಕಡೆ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಇದನ್ನೂ ಓದಿ: ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ
ನಟ ವಿಶಾಲ್ (Actor Vishal) ನಿವಾಸ ಜಲಾವೃತವಾಗಿದೆ. ವಿಶಾಲ್ ಮನೆಯಲ್ಲಿದ್ದ ನಟ ಅಮೀರ್ ಖಾನ್‌ರನ್ನು ರಕ್ಷಣಾ ಪಡೆಗಳು ರಕ್ಷಿಸಿವೆ. ಇಂದು (ಡಿ.6) ಸಹ ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದೆ. ಒಡಿಶಾ ಕೂಡ ಅಲರ್ಟ್ ಆಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ 26 ಜನ ಮೀನುಗಾರರ ರಕ್ಷಣೆ
ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ: ಕರ್ನಾಟಕದ ಹಲವು ಭಾಗದಲ್ಲಿ ಮೂರ್ನಾಲ್ಕು ದಿನದಿಂದ ಚಳಿಯ ವಾತಾವರಣವಿದೆ. ಮುಂದಿನ ಐದು ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ (Rain In Karnataka) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಪಾಂಡಿಚೇರಿ ರಾಜ್ಯಗಳಲ್ಲಿ ಆಗುತ್ತಿರುವ ಮಿಚಾಂಗ್ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಆಗುವ ಸಾಧ್ಯತೆಗಳಿಲ್ಲ.
ಆದಾಗ್ಯೂ ಕರ್ನಾಟಕದ ಕರಾವಳಿ ಜಿಲ್ಲೆಗಳೂ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 10ರವರಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 7 ರ ಗುರುವಾರದಂದು ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗಬಹುದು. ಅದೇ ರೀತಿ ಕರಾವಳಿ ಜಿಲ್ಲೆಯಲ್ಲಿ ಮಾತ್ರ ಮಳೆ ಸಾಧ್ಯತೆ ಕಡಿಮೆ. ಈ ಭಾಗದಲ್ಲಿ ಒಣ ಹವೆಯ ವಾತಾವರಣ ಇರುವ ಸಾಧ್ಯತೆಗಳು ಅಧಿಕವಾಗಿವೆ.
ಡಿಸೆಂಬರ್ 8ರ ಶುಕ್ರವಾರದಂದು ಕರ್ನಾಟಕ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಇದೆ. ಎಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ.
ಡಿಸೆಂಬರ್ 9ರ ಶನಿವಾರದಂದು ಕರಾವಳಿ ಭಾಗದ ಮೂರೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಬೆಂಗಳೂರು, ಮೈಸೂರು,ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಒಣಹವೆಯ ವಾತಾವರಣ ಕಂಡು ಬರಲಿದೆ.
ಡಿಸೆಂಬರ್ 10ರ ಭಾನುವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚೆನ್ನೈ ಹಾಗೂ ಅದರ ಉಪನಗರದಲ್ಲಿ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ ಮತ್ತು ಭಾನುವಾರ ಕೂಡ ಮಳೆರಾಯ ತನ್ನ ಆರ್ಭಟವನ್ನು ಮುಂದುವರಿಸಿದ್ದಾನೆ. 2015ರ ಬಳಿಕ ಆದ ಅತೀ ಹೆಚ್ಚು ಮಳೆ ಇದಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚೆನ್ನೈ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಮೂಲಗಳಾಗಿರುವ ಚೆಂಬರಂಬಾಕ್ಕಂ ಮತ್ತು ಪುಝಲ್ ಜಲಾಶಯಗಳಿಂದ ಹೆಚ್ಚುವರಿ ಮಳೆ ನೀರನ್ನು ಹೊರಬಿಡಲಾಗುವುದಾಗಿ ಅಧಿಕಾರಿಗಳು ಪ್ರಕಟಿಸಿದ್ದಾರೆ. ಇದನ್ನೂ ಓದಿ:ದಕ್ಷಿಣ ಕನ್ನಡ: ದಾರಿಯಲ್ಲಿ ಐದು ಗ್ರಾನೈಡ್ ಪತ್ತೆ!
Tamil Nadu | Severe waterlogging in MMDA colony following heavy rainfall in Chennai
ಪ್ರಾಥಮಿಕ ಪ್ರವಾಹದ ಎಚ್ಚರಿಕೆ ನೀಡಿರುವ ರಾಜ್ಯ ಜಲಸಂಪನ್ಮೂಲ ಅಧಿಕಾರಿಗಳು ತಗ್ಗು ಪ್ರದೇಶದಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲು ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಇರಿಸಲು ಕಾಂಚೀಪುರಂ ಮತ್ತು ತಿರುವಳ್ಳೂರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಆಟೋ ಚಾಲಕರ ಸಂಘಕ್ಕೆ ವಾರ್ಷಿಕ 1 ಲಕ್ಷ ರೂ. ಸಹಾಯಧನ: ಸಚಿವ ಕೆ.ಗೋಪಾಲಯ್ಯ
Tamil Nadu | Traffic movement affected on Guindy-Koyambedu road due to waterlogging as a result of heavy rainfall in Chennai pic.twitter.com/HWVu2UtfZM
ಶನಿವಾರ ಬೆಳಿಗ್ಗೆಯಿಂದ ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರು ಜಿಲ್ಲೆಗಳ ಹಲವಾರು ಉಪನಗರಗಳಲ್ಲಿ ಮಳೆಯಾಗಿದ್ದು, ರಾತ್ರಿಯಿಂದಲೂ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.