Tag: Chess

  • ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

    ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

    ಜಾರ್ಜಿಯಾ: 19 ವರ್ಷದ ದಿವ್ಯಾ ದೇಶಮುಖ್ (Divya Deshmukh) ಫಿಡೆ ಮಹಿಳಾ ಚೆಸ್​ ವಿಶ್ವಕಪ್​​ನಲ್ಲಿ (FIDE Women’s World Cup) ಚಾಂಪಿಯನ್​ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

    ಭಾರತದ ಅನುಭವಿ ಚೆಸ್‌ ಆಟಗಾರ್ತಿ ಕೊನೆರು ಹಂಪಿ (Koneru Humpy) ವಿರುದ್ಧ ನಡೆದ ಟೈ ಬ್ರೇಕರ್ ಪಂದ್ಯದಲ್ಲಿ ದಿವ್ಯಾ ದೇಶಮುಖ್‌ ಅವರು ಗೆಲುವು ಸಾಧಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್ ಜಯಿಸಿದರು. ಈ ಮೂಲಕ ಚೆಸ್ ವಿಶ್ವಕಪ್​ ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ. ದಿವ್ಯಾ ದೇಶಮುಖ್ ಅವರು ಒಟ್ಟಾರೆ 88ನೇ ಇಂಡಿಯನ್​ ಗ್ರಾಂಡ್​ ಮಾಸ್ಟರ್​ ಆಗಿದ್ದಾರೆ.

    ಫೈನಲ್‌ಗೆ ಮುನ್ನ 39 ವರ್ಷದ ಕೊನೆರು ಹಂಪಿ ಅವರೆ ಗೆಲ್ಲುವ ಫೇವರೇಟ್‌ ಆಗಿದ್ದರು. ಶನಿವಾರ ನಡೆದ ಫೈನಲ್‌ನಲ್ಲಿ ದಿವ್ಯಾ ಗೆಲ್ಲುವ ಸಾಧ್ಯತೆ ಹೆಚ್ಚಿತ್ತು. ಆದರೆ ಕೊನೆ ಕ್ಷಣದಲ್ಲಿ ದಿವ್ಯಾ ಮಾಡಿದ ತಪ್ಪು ನಡೆಯಿಂದ ಪಂದ್ಯವನ್ನು ಡ್ರಾ ಮಾಡುವಲ್ಲಿ ಹಂಪಿ ಯಶಸ್ವಿಯಾಗಿದ್ದರು. ಭಾನುವಾರ ನಡೆದ ಎರಡನೇ ಪಂದ್ಯವೂ ಡ್ರಾದಲ್ಲಿ ಅಂತ್ಯಗೊಂಡಿದ್ದರಿಂದ ಪಂದ್ಯ ಟೈ-ಬ್ರೇಕ್​ನತ್ತ ಸಾಗಿತ್ತು.

     

    ಯಾರು ದಿವ್ಯಾ ದೇಶಮುಖ್‌?
    ಮಹಾರಾಷ್ಟ್ರದ ನಾಗ್ಪುರದ ದಿವ್ಯಾ ದೇಶಮುಖ್‌ ಮರಾಠಿ ಕುಟುಂಬದಲ್ಲಿ ಜನಿಸಿದ್ದಾರೆ. ಇವರ ಪೋಷಕರು ವೈದ್ಯರಾಗಿದ್ದಾರೆ. ಭವನ್ಸ್ ಭಗವಾನ್‌ದಾಸ್ ಪುರೋಹಿತ ವಿದ್ಯಾ ಮಂದಿರಕ್ಕೆ ಸೇರಿದ್ದ ಇವರು ಬಾಲ್ಯದಲ್ಲೇ ಚೆಸ್‌ ಆಡಲು ಆರಂಭಿಸಿದ್ದರು.

     

    2022 ರ ಮಹಿಳಾ ಭಾರತೀಯ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಇವರು 2021 ರಲ್ಲಿ ಭಾರತದ 21 ನೇ ಮಹಿಳಾ ಗ್ರ್ಯಾಂಡ್‌ಮಾಸ್ಟರ್ ಕಿರೀಟವನ್ನು ಪಡೆದಿದ್ದರು. 2020 ರ FIDE ಆನ್‌ಲೈನ್ ಒಲಿಂಪಿಯಾಡ್‌ನಲ್ಲಿ ಭಾರತ ಚಿನ್ನ ಗೆದ್ದಿತ್ತು. ಈ ತಂಡದಲ್ಲಿ ದಿವ್ಯಾ ಭಾಗಿಯಾಗಿದ್ದರು. 2022 ರ ಚೆಸ್ ಒಲಿಂಪಿಯಾಡ್‌ನಲ್ಲಿ ಕಂಚಿನ ಪದಕ ಪಡೆದಿದ್ದಾರೆ.

  • ಪೆರೋಲ್ ಪಡೆದು ಪರಾರಿಯಾದಾತ ತನ್ನದೇ ಸಾವಿನ ಕತೆ ಕಟ್ಟಿದ – 15 ವರ್ಷಗಳ ಬಳಿಕ ಮತ್ತೆ ಅಂದರ್

    ಪೆರೋಲ್ ಪಡೆದು ಪರಾರಿಯಾದಾತ ತನ್ನದೇ ಸಾವಿನ ಕತೆ ಕಟ್ಟಿದ – 15 ವರ್ಷಗಳ ಬಳಿಕ ಮತ್ತೆ ಅಂದರ್

    ಬೆಂಗಳೂರು: ಆತ ಓದಿದ್ದು 8ನೇ ಕ್ಲಾಸ್, ಮಾಡಿದ್ದು ಮರ್ಡರ್, ಆದರೆ ಫೇಮಸ್ ಆಗಿದ್ದು ಮಾತ್ರ ಚೆಸ್ ಆಟದಲ್ಲಿ. ಇದನ್ನೇ ಅಡ್ವಾಂಟೇಜ್ ಮಾಡಿಕೊಂಡ ಆರೋಪಿ ಪೆರೋಲ್ (Parole) ಕೇಸ್‌ನಲ್ಲಿ ಪರಾರಿಯಾಗಿ ಬಳಿಕ ತನ್ನದೇ ಸಾವಿನ ಕತೆ ಕಟ್ಟಿ 15 ವರ್ಷಗಳ ಬಳಿಕ ಮತ್ತೆ ಸಿಕ್ಕಿಬಿದ್ದಿದ್ದಾನೆ.

    ಕಣ್ಮುಚ್ಕೊಂಡೇ ಚೆಸ್ ಗೇಮ್ ಗೆಲ್ಲುತ್ತಿದ್ದ ಈತನ ಕತೆ ಕೇಳಿದರೆ ಒಂದು ಸಿನಿಮಾನೇ ಮಾಡಬಹುದು. ಜೈಲಿಗೆ (Jail) ಬಂದು, ಚೆಸ್ (Chess) ಕಲಿತು, ಎಸ್ಕೇಪ್ ಆದಮೇಲೂ ಪ್ಲಾನ್ ಹಾಕಿದ್ದು ದೊಡ್ಡ ಬ್ಯುಸಿನೆಸ್‌ಗೆ. ತ್ರಿಬಲ್ ರೋಲ್‌ನಲ್ಲಿ ಲೈಫ್ ಹ್ಯಾಂಡಲ್ ಮಾಡುತ್ತಿದ್ದ ಆರೋಪಿಯ ಹೆಸರು ಸುಹೇಲ್.

    ಪೆರೋಲ್ ಕೇಸ್‌ನಲ್ಲಿ ಪರಾರಿಯಾಗಿದ್ದ ಮಲ್ಟಿ ಟ್ಯಾಲೆಂಟೆಡ್ ಆರೋಪಿ ಸುಹೇಲ್‌ನನ್ನು 15 ವರ್ಷಗಳ ಬಳಿಕ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಆತ ತನ್ನ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎಂತಹ ಕಷ್ಟದ ಲೆವೆಲ್ ಚೆಸ್ ಆಟವಾದರೂ ಗೆದ್ದುಬಿಡುತ್ತಿದ್ದ. ಚಾಲಾಕಿ ಸುಹೇಲ್ 2000ದಲ್ಲಿ ಮಡಿವಾಳ ಲಿಮಿಟ್ಸ್ನಲ್ಲಿ ಮಾಜಿ ಯೋಧರೊಬ್ಬರ ಲಾರಿ ಡ್ರೈವರ್ ಆಗಿದ್ದ. ಆ ಸಂದರ್ಭ ಕೊಲೆ ಮಾಡಿ, ಡಕಾಯತಿ ಮಾಡಿದ್ದ. ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 396 ಅಡಿ ಅರೆಸ್ಟ್ ಮಾಡಿ ಜೈಲಿಗೆ ತಳ್ಳಿದ್ದರು.

    ಆದರೆ ಸುಹೇಲ್ ಜೈಲಿನಲ್ಲಿ ಸುಮ್ಮನೆ ಇರುತ್ತಿರಲಿಲ್ಲ. ಯಾವಾಗಲೂ ತಲೆಗೆ ಕೆಲಸ ಕೊಡುತ್ತಿದ್ದ. 4 ಗೋಡೆಗಳ ಮಧ್ಯೆ ಇದ್ದು, 7 ವರ್ಷ ಚೆಸ್ ಆಟದಲ್ಲಿ ನಿಸ್ಸೀಮನಾಗಿದ್ದ. ಜೈಲಿಗೆ ತಳ್ಳಿದ್ದೇ ತಡ ಚೆಸ್ ಆಟದ ಕಲಿಕೆಗೆ ಮುಂದಾಗಿದ್ದ ಸುಹೇಲ್ ಪುಸ್ತಕ ಓದುವುದು, ಒಬ್ಬನೇ ಕೂತು ಚೆಸ್ ಆಡುವುದು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎದುರಾಳಿ ಇಲ್ಲದಿದ್ದರೂ ಎರಡೂ ಕಡೆ ಆಟವಾಡುತ್ತಿದ್ದ.

    2 ವರ್ಷದಲ್ಲಿ ಚೆಸ್ ಆಟ ಕಲಿತು ಪರ್ಫೆಕ್ಟ್ ಆಗಿದ್ದ ಸುಹೇಲ್, ಈತನ ಒಂಟಿ ಆಟ ನೋಡಿಯೇ ಜೈಲರ್‌ಗಳು ಬೆರಗಾಗಿದ್ದರು. ಈತನ ಟ್ಯಾಲೆಂಟ್ ನೋಡಿ ಜೈಲು ಎಸ್‌ಪಿ ಆತನನ್ನು ಚೆಸ್ ಟೂರ್ನಿಗಳಿಗೆ ಕಳಿಸೋಕೆ ಶುರು ಮಾಡಿದ್ದರು. ಅಂದಿನಿಂದ ಆಟ ಶುರು ಮಾಡಿದ್ದವ ಹಿಂದಿರುಗಿ ನೋಡೇ ಇಲ್ಲ. ಸತತ ದೊಡ್ಡ ದೊಡ್ಡ ಟೂರ್ನಮೆಂಟ್‌ಗಳಲ್ಲಿ ಸುಹೇಲ್ ಚೆಸ್ ಆಟ ಗೆದ್ದು ಬರುತ್ತಿದ್ದ. ಇದನ್ನೂ ಓದಿ: ರಾತ್ರಿ ಊಟ ಬಡಿಸಲು ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಡಲಿಯಿಂದ ಕೊಂದ ಪತಿ

    ಸುಹೇಲ್ 2007ರ ವರೆಗೂ ಟೂರ್ನಮೆಂಟ್ ಗೆದ್ದು ತಂದಿದ್ದ. ಅದೇ ನಂಬಿಕೆಯಲ್ಲಿ ಹಿರಿಯ ಅಧಿಕಾರಿಗಳ ಬಳಿ ಪೆರೋಲ್ ಕೇಳಿದ್ದ. ನನ್ನ ಹೆಂಡತಿ, ಮಕ್ಕಳನ್ನು ನೋಡಬೇಕು ಎಂದುಕೊಂಡು ಪೆರೋಲ್ ಪಡೆದು ಹೋದಾತ ವಾಪಾಸ್ ಬರಲೇ ಇಲ್ಲ. ವಾಪಸ್ ಬರುತ್ತಾನೆ ಎಂದು ಪೊಲೀಸರಿಗೆ ಸುಹೇಲ್ ಕೈ ಕೊಟ್ಟಿದ್ದ. ಈ ವೇಳೆ ತನ್ನ ಸ್ನೇಹಿತನ ಸಹಾಯ ಪಡೆದು, ತಾನು ಸತ್ತಿರುವುದಾಗಿ ಸೀನ್ ಕ್ರಿಯೇಟ್ ಮಾಡಿದ್ದ.

    ಸುಹೇಲ್ ಎಸ್ಕೇಪ್ ಆದ ಕೆಲ ತಿಂಗಳುಗಳ ನಂತರ ಹೆಣ್ಣೂರು ಲಿಮಿಟ್ಸ್‌ನಲ್ಲಿ ಒಂದು ಶವ ಸಿಕ್ಕಿತ್ತು. ಸುಹೇಲ್‌ಗೆ ಹೋಲಿಕೆಯಾಗುವಂತೆಯೇ ಇದ್ದ ಶವವಾಗಿದ್ದರಿಂದ ಈ ಬಗ್ಗೆ ಪೊಲೀಸರು ಸುಹೇಲ್ ಸ್ನೇಹಿತನನ್ನು ಕೇಳಿದ್ದರು. ಈ ವೇಳೆ ಆತನೂ ಇದು ಸುಹೇಲ್ ಶವ ಎಂದಿದ್ದ. ಅಲ್ಲಿಗೆ ಸುಹೇಲ್ ಸತ್ತುಹೋಗಿದ್ದಾನೆ ಎಂದು ಪೊಲೀಸರು ಭಾವಿಸಿದ್ದರು.‌ ಇದನ್ನೂ ಓದಿ: ವಿವಾಹಿತೆಯೊಂದಿಗೆ ಪ್ರೇಮ- ಹೋಟೆಲ್‌ನಲ್ಲಿ ರಾತ್ರಿ ತನ್ನೊಂದಿಗೆ ಇರಲು ನಿರಾಕರಿಸಿದ್ದಕ್ಕೆ ಕೊಲೆ

    ಇದೆಲ್ಲದರ ಬಳಿಕ ಕಳೆದ 15 ವರ್ಷಗಳಿಂದ ಸುಹೇಲ್ ಯಾರಿಗೂ ಗುರುತು ಸಿಗದಂತೆ ಜೀವನ ಸಾಗಿಸಿದ್ದ. ಆದರೆ ಇತ್ತೀಚೆಗೆ ಪೊಲೀಸರು ಚಿಕ್ಕಮಗಳೂರಿನ ಉಪ್ಪಿನಂಗಡಿ ಕಡೆ ಹೋಗಿದ್ದಾಗ ಕೊನೆಗೂ ಪತ್ತೆಯಾಗಿದ್ದಾನೆ. ಇದೀಗ ಚಾಲಾಕಿ ಸುಹೇಲ್‌ನನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೃಷ್ಟಿ ವಿಕಲಚೇತನರಿಗಾಗಿ ಚೆಸ್ ಪಂದ್ಯಾಟ – 35 ಸಾವಿರ ರೂ. ಬಹುಮಾನ

    ದೃಷ್ಟಿ ವಿಕಲಚೇತನರಿಗಾಗಿ ಚೆಸ್ ಪಂದ್ಯಾಟ – 35 ಸಾವಿರ ರೂ. ಬಹುಮಾನ

    ಬೆಂಗಳೂರು: ದೃಷ್ಟಿ ವಿಕಲಚೇತನರಿಗಾಗಿ ಸ್ವಯಂಸೇವಕರು ಮತ್ತು ಧೀನೋಧರ ಟ್ರಸ್ಟ್ ಆಗಸ್ಟ್ 14 ರಂದು ವಯೋಮಿತಿ ಒಳಗೊಂಡ ಚೆಸ್ ಪಂದ್ಯಾವಳಿಯನ್ನು ಆಯೋಜಿಸಿದೆ.

    ಭಾರತದ ಸ್ವಾತಂತ್ರ್ಯದ 75 ವರ್ಷಗಳ ಗೌರವಾರ್ಥವಾಗಿ ರಾಜ್ಯಾದ್ಯಂತ ಸುಮಾರು 76 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಇಂದಿರಾನಗರದಲ್ಲಿರುವ ನ್ಯೂ ಹೊರೈಜನ್ ಪಬ್ಲಿಕ್ ಸ್ಕೂಲ್‍ನಲ್ಲಿ ಪಂದ್ಯಾವಳಿಗಳು ನಡೆಯಲಿದೆ. ಒಟ್ಟು 35,000 ರೂಪಾಯಿಗಳ ಬಹುಮಾನದ ಮೊತ್ತ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ – ಅಂಚೆ ಇಲಾಖೆಯಿಂದ 10 ದಿನಗಳಲ್ಲಿ 1 ಕೋಟಿ ಧ್ವಜ ಮಾರಾಟ

    ವಿಕೆಲಚೇತನರು ಕೂಡ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈ ಪಂದ್ಯಾವಳಿಯನ್ನು ಸಂಘಟಕರು ಆಯೋಜಿಸಿದ್ದಾರೆ. ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಯಲಿದ್ದು, ಸ್ವಿಸ್ ಲೀಗ್ ಮಾದರಿಯಲ್ಲಿ (ರೌಂಡ್-ರಾಬಿನ್) ಪಂದ್ಯಾಟ ನಡೆಯಲಿದೆ. ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಪಂದ್ಯಾವಳಿ ನಡೆಯಲಿದೆ.

    ಪಂದ್ಯಾಟದ ಮೂಲಕ ಸ್ವಯಂಸೇವಕರಿಂದ ಧನಸಹಾಯವನ್ನು ಸ್ವೀಕರಿಸಲಾಗುತ್ತಿದ್ದು, ಇದರಿಂದ ಬಂದಂತಹ ಧನಸಹಾಯವನ್ನು ವಿಕಲಚೇತನರ ಅಭಿವೃದ್ಧಿಗಾಗಿ ಬಳಸಲು ಆಯೋಜಕರು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಗೆ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳು – ಆಗಸ್ಟ್ 15ಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    Live Tv
    [brid partner=56869869 player=32851 video=960834 autoplay=true]

  • ನೊಬೆಲ್ ವಿಶ್ವ ದಾಖಲೆ ಬರೆದ ಅಲ್ಲು ಅರ್ಜುನ್ ಮಗಳು

    ನೊಬೆಲ್ ವಿಶ್ವ ದಾಖಲೆ ಬರೆದ ಅಲ್ಲು ಅರ್ಜುನ್ ಮಗಳು

    ಹೈದರಾಬಾದ್: ಟಾಲಿವುಡ್ ನಟ ಅಲ್ಲು ಅರ್ಜುನ್ ಮಗಳಾದ ಅಲ್ಲು ಅರ್ಹಾ ಚೆಸ್ ಆಡುವ ಮೂಲಕವಾಗಿ ನೊಬೆಲ್​ ವರ್ಲ್ಡ್​ ರೆಕಾರ್ಡ್ ದಾಖಲೆ ಮಾಡಿದ್ದಾಳೆ.

    ಅಲ್ಲು ಅರ್ಹಾ ಕುಟುಂಬದ ಸದಸ್ಯರ ಎದುರು ಚೆಸ್ ಆಡಿದ್ದಾಳೆ. ಈ ವೀಡಿಯೋವನ್ನು ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಅಲ್ಲು ಅರ್ಹಾಗೆ ನೊಬೆಲ್ ವರ್ಲ್ಡ್​ ರೆಕಾರ್ಡ್ ನೀಡಿ ಗೌರವಿಸಲಾಗಿದೆ. ಇದು ಅಲ್ಲು ಅರ್ಜುನ್ ಕುಟುಂಬಕ್ಕೆ ಖುಷಿ ನೀಡಿದೆ. ಅಲ್ಲು ಅರ್ಹಾ ಕೂಡ ಚಿತ್ರರಂಗಕ್ಕೆ ಬರುತ್ತಿದ್ದಾಳೆ. ಈ ಮಧ್ಯೆ ಅವಳ ಹೆಸರಲ್ಲಿ ನೊಬೆಲ್ ದಾಖಲೆ ನಿರ್ಮಾಣ ಆಗಿದೆ. ಅತಿ ಚಿಕ್ಕ ವಯಸ್ಸಿಗೆ ಅಲ್ಲು ಅರ್ಹಾ ಚೆಸ್ ಟ್ರೇನರ್ ಆಗಿದ್ದಾಳೆ.

     

    View this post on Instagram

     

    A post shared by Allu Sneha Reddy (@allusnehareddy)

    ಅಲ್ಲು ಅರ್ಜುನ್ ಪುತ್ರಿ ಅಲ್ಲು ಅರ್ಹಾಗೆ ಇನ್ನೂ 5ರ ಪ್ರಾಯವಾಗಿದೆ. ಈ ಪುಟಾಣಿಗೆ ಸಮಂತಾ ಅಕ್ಕಿನೇನಿ ನಟನೆಯ ಶಾಕುಂತಲಂ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಪೌರಾಣಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಮಂತಾ ಅವರು ಶಕುಂತಲೆಯ ಪಾತ್ರ ಮಾಡಿದ್ದು, ಶಕುಂತಲೆ ಪುತ್ರ ಭರತನ ಪಾತ್ರಕ್ಕೆ ಅಲ್ಲು ಅರ್ಹಾ ಬಣ್ಣ ಹಚ್ಚಿದ್ದಾಳೆ. ಈ ವಿಚಾರವನ್ನು ಅಲ್ಲು ಅರ್ಜುನ್ ಸೋಶಿಯಲ್ ಮೀಡಿಯಾದಲ್ಲಿ   ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: ಆರಗ ಜ್ಞಾನೇಂದ್ರ ಇಡೀ ರಾಜ್ಯಕ್ಕೆ ಅಲ್ಲ, ಕೇವಲ ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವ: ಕಿಮ್ಮನೆ ರತ್ನಾಕರ್

     

    View this post on Instagram

     

    A post shared by Allu Sneha Reddy (@allusnehareddy)

    ಶಾಕುಂತಲಂ ಸಿನಿಮಾ ಮೂಲಕ ಅಲ್ಲು ಕುಟುಂಬದ ನಾಲ್ಕನೇ ತಲೆಮಾರಿನ ಅಲ್ಲು ಅರ್ಹಾ ಚಿತ್ರಕ್ಕೆ ಕಾಲಿಡುತ್ತಿರುವುದು ನಮಗೆ ಹೆಮ್ಮೆಯ ಕ್ಷಣ. ಇಂಥ ಸುಂದರ ಸಿನಿಮಾದಲ್ಲಿ ನನ್ನ ಮಗಳಿಗೆ ಚೊಚ್ಚಲ ಸಿನಿಮಾವಾಗಿದೆ ಎಂದು ಬರೆದುಕೊಂಡ ಅಲ್ಲು ಅರ್ಜುನ್ ಚಿತ್ರ ತಂಡಕ್ಕೆ ಶುಭ ಕೋರಿದ್ದರು. ಸಿನಿಮಾ ಕ್ಷೇತ್ರ ಮಾತ್ರವಲ್ಲದೇ ಅಲ್ಲು ಅರ್ಹಾ ಅವಳ ಹೆಸರಿನಲ್ಲಿ ನೊಬೆಲ್ ದಾಖಲೆಯನ್ನು ಬರೆದುಕೊಂಡಿದ್ದಾಳೆ.

  • ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ 2ರ ಬಾಲಕ ದಾಖಲೆ

    ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ 2ರ ಬಾಲಕ ದಾಖಲೆ

    ಬಾಗಲಕೋಟೆ: ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಬಾಗಲಕೋಟೆಯ 2ರ ಬಾಲಕ ದಾಖಲೆ ನಿರ್ಮಿಸಿದ್ದಾನೆ.

    ಡಾ. ಗಾಯತ್ರಿ, ಡಾ. ಜೈಪ್ರಕಾಶ್ ದಂಪತಿ ಪುತ್ರನಾದ ಮೌರ್ಯವರ್ಧನ್ ಚದುರಂಗಕ್ಕೆ ಸಂಬಂಧಿಸಿದ ವಿಷಯದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ದಾಖಲೆ ನಿರ್ಮಿಸಿದ್ದಾನೆ.

    ಮೌರ್ಯವರ್ಧನ್ ತನ್ನ 2 ವರ್ಷ 26 ದಿನಗಳ ವಯಸ್ಸಿಗೆ ಚೆಸ್ ಬೋರ್ಡ್‍ನ ಮೇಲೆ ಎಲ್ಲಾ 32 ಚೆಸ್ ಕಾಯಿನ್‍ಗಳನ್ನು 1 ನಿಮಿಷ 47 ಸೆಕೆಂಡ್‍ಗಳಲ್ಲಿ ಸಮರ್ಪಕವಾಗಿ ಜೋಡಿಸಿದ್ದಾನೆ. ಇದರಿಂದಾಗಿ ಇವನು ಚೆಸ್ ಬೋರ್ಡ್‍ನ ಮೇಲೆ ಚೆಸ್ ಕಾಯಿನ್‍ಗಳನ್ನು ಸಮರ್ಪಕ ಹಾಗೂ ವೇಗವಾಗಿ ಜೋಡಿಸಿದ ಅತ್ಯಂತ ಕಿರಿಯ ವ್ಯಕ್ತಿ (Youngest to arrange chess pieces on a chess board) ಎಂಬುದಾಗಿ ದಿನಾಂಕ 8ಜೂನ್2021ಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್  ನಲ್ಲಿ ಹಾಗೂ ದಿನಾಂಕ 19ಜೂನ್2021ಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ದಾಖಲೆ ನಿರ್ಮಿಸಿದ್ದಾನೆ. ಇದನ್ನೂ ಓದಿ:  ಬಿಕಿನಿಯಲ್ಲಿ ಸಾರಾ ಅಲಿ ಖಾನ್ ಸಖತ್ ಹಾಟ್

    ಈ ಮೂಲಕವಾಗಿ ತಮಿಳುನಾಡಿನ 2.6 ವ. ವಯಸ್ಸಿನ ಬಾಲಕನ ಹೆಸರಿನಲ್ಲಿದ್ದ ದಾಖಲೆ ಮುರಿದು ತನ್ನ ಹೆಸರಿನಲ್ಲಿ ದಾಖಲಿಸಿಕೊಂಡಿದ್ದಾನೆ. ಈ ಸಾಧನೆಯನ್ನು ಪರಿಗಣಿಸಿ ಇಂಡಿಯಾ ಹಾಗೂ ಏಷ್ಯಾ ಬುಕ್ ಆಫ್  ರೆಕಾರ್ಡ್ಸ್​ವತಿಯಿಂದ ಪದಕ, ಸರ್ಟಿಫಿಕೇಟ್, ಗುರುತಿನ ಕಾರ್ಡ್, ರೆಕಾರ್ಡ್ಸ್​ ಪುಸ್ತಕ ಹಾಗೂ ಇನ್ನಿತರ ವಸ್ತುಗಳನ್ನು ನೀಡಿ ಗೌರವಿಸಿದೆ. ಈ ಹಿಂದೆ ತನ್ನ 1 ವರ್ಷ 9 ತಿಂಗಳ ವಯಸ್ಸಿಗೆ 20 ವಿವಿಧ ಪ್ರಕಾರಗಳಲ್ಲಿ 594 ಚಿತ್ರಗಳನ್ನು ಗುರುತಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ Kids Appreciation ವಿಭಾಗದಲ್ಲಿ ಸೇರ್ಪಡೆಗೊಂಡು ಅತ್ಯಂತ ಕಿರಿಯ ವಯಸ್ಸಿನಲ್ಲೇ ಸಾಧನೆ ಮಾಡಿ ಖ್ಯಾತಿ ಹೊಂದಿದ್ದನು. ಇದನ್ನೂ ಓದಿ:  ಅರುಣ್ ಸಾಗರ್ ಮಗನ ಸಾಧನೆ ಕೊಂಡಾಡಿದ ಸುದೀಪ್

    ಹೀಗೆ ತನ್ನ 2 ವರ್ಷ ವಯಸ್ಸಿಗೆ ಎರಡು ರಾಷ್ಟ್ರೀಯ ಮಟ್ಟದ ಹಾಗೂ ಒಂದು ಏಷ್ಯಾ ಮಟ್ಟದ ದಾಖಲೆ ನಿರ್ಮಿಸಿ ಬಾಲಕ ದೇಶಕ್ಕೆ ಕೀರ್ತಿಯನ್ನು ತಂದಿದ್ದಾನೆ. ಮೂಲತಃ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕು, ಆಲೂರು ಗ್ರಾಮದವರಾದ ಇವನ ಕುಟುಂಬ ಉದ್ಯೋಗದ ನಿಮಿತ್ತ ಪ್ರಸ್ತುತ ಜಮಖಂಡಿಯ ಮೈಗೂರು ಕಾಲೋನಿಯ ತಾತ್ಕಾಲಿಕ ನಿವಾಸಿಗಳಾಗಿದ್ದಾರೆ.

  • ವಿಶ್ವನಾಥ್ ಆನಂದ್‍ಗೆ ಟಫ್ ಫೈಟ್ ಕೊಟ್ಟ ಕಿಚ್ಚ- 6.65 ಲಕ್ಷ ದೇಣಿಗೆ ಸಂಗ್ರಹ

    ವಿಶ್ವನಾಥ್ ಆನಂದ್‍ಗೆ ಟಫ್ ಫೈಟ್ ಕೊಟ್ಟ ಕಿಚ್ಚ- 6.65 ಲಕ್ಷ ದೇಣಿಗೆ ಸಂಗ್ರಹ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವರು ಐದು ಬಾರಿ ವಿಶ್ವ ಚೆಸ್ ಚಾಂಪಿಯನ್ ಆಗಿರುವ ವಿಶ್ವನಾಥನ್ ಆನಂದ್ ಅವರಿಗೆ ಚೆಸ್ ಸ್ಪರ್ಧೆಯಲ್ಲಿ ಕಠಿಣ ಸ್ಪರ್ಧೆಯನ್ನೇ ನೀಡಿದ್ದಾರೆ.

    ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ನಟನೆಯಲ್ಲಿ ತಮ್ಮದೇ ಅಗಿರುವ ಚಾಪನ್ನು ಮೂಡಿಸಿದ್ದಾರೆ. ಕ್ರಿಕೆಟ್‍ನಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಚೆಸ್‍ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಕೋವಿಡ್ ಪರಿಹಾರ ನಿಧಿ ಸಂಗ್ರಹಕ್ಕಾಗಿ ಅಕ್ಷಯಪಾತ್ರ ಪ್ರತಿಷ್ಠಾನದ ಸಹಯೋಗದಲ್ಲಿ ಚೆಸ್.ಕಾಮ್ ಭಾನುವಾರ ಆಯೋಜಿಸಿದ್ದ ಚೆಕ್‍ಮೇಟ್ ಕೋವಿಡ್ ಸೆಲೆಬ್ರಿಟಿ ಆವೃತ್ತಿಯಲ್ಲಿ, ನಟ ಸುದೀಪ್, ರಿತೇಷ್ ದೇಶ್‍ಮುಖ್, ಕ್ರಿಕೆಟಿಗ ಯಜುವೇಂದ್ರ ಚಾಹಲ್ ಸೇರಿದಂತೆ ಕೆಲ ಗಣ್ಯರೊಂದಿಗೆ 30 ನಿಮಿಷಗಳ ಟೈಂಔಟ್‍ನಲ್ಲಿ ಏಕಕಾಲದಲ್ಲಿ ವಿಶ್ವನಾಥನ್ ಆನಂದ್ ಚೆಸ್ ಅಡಿದ್ದಾರೆ. ಇದನ್ನೂ ಓದಿ: ವರ್ಲ್ಡ್​ ಚೆಸ್ ಚಾಂಪಿಯನ್ ಜೊತೆಗೆ ಕಿಚ್ಚನ ಆಟ

    ಟೈಂಔಟ್‍ನಲ್ಲಿ ಸುದೀಪ್ ಅವರು ವಿಶ್ವನಾಥನ್ ಆನಂದ್ ಅವರೆದುರು ಸೋತರು. ವಿಶ್ವನಾಥನ್ ಆನಂದ್ ಅವರ ಟೈಮರ್‍ನಲ್ಲಿ 46 ಸೆಕೆಂಡ್‍ಗಳಷ್ಟೇ ಉಳಿದಿತ್ತು. ಆಟದ ಬಳಿಕ ಸ್ಪರ್ಧಿಗಳ ಜೊತೆ ವಿಶ್ವನಾಥನ್ ಆನಂದ್ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಸುದೀಪ್, ನನ್ನ ಹಂತದ ಸ್ಪರ್ಧಿಗಳೊಂದಿಗೆ ಚೆನ್ನಾಗಿ ಆಡುತ್ತೇನೆ. ಇಂತಹ ದಿಗ್ಗಜರ ಜೊತೆ ಆಡುವುದೇ ನಮಗೆ ಸಿಕ್ಕ ದೊಡ್ಡ ಅವಕಾಶ. ಇಲ್ಲಿ ಯಾರು ಗೆಲ್ಲುತ್ತಾರೆ ಸೋಲುತ್ತಾರೆ ಎನ್ನುವುದು ಮುಖ್ಯವಲ್ಲ ಎಂದಿದ್ದಾರೆ.

    ಯಾರು ಹೆಚ್ಚು ಹೊತ್ತು ವಿಶ್ವನಾಥನ್ ಅವರ ವಿರುದ್ಧ ಕಣದಲ್ಲಿ ಇರುತ್ತಾರೆ ಎನ್ನುವುದು ಮುಖ್ಯ. ಆನ್‍ಲೈನ್ ಚೆಸ್ ಬಗ್ಗೆ ನನಗೇ ಯಾವುದೇ ಮಾಹಿತಿ ಇರಲಿಲ್ಲ. ನಮಗೆ ಸೋಲುವ ಭಯವಿರಲಿಲ್ಲ, ಏಕೆಂದರೆ ನಾವು ಆಡುತ್ತಿರುವುದು ವಿಶ್ವನಾಥನ್ ಆನಂದ್ ಅವರ ವಿರುದ್ಧ. ಈ ಅನುಭವ ಜೀವನಪೂರ್ತಿ ಇರಲಿದೆ. ಈ ಆಟ ಕೇವಲ ಮನರಂಜನೆಗಾಗಿ ಆಗಿರಲಿಲ್ಲ. ಒಂದು ಉದ್ದೇಶ ಇದರ ಹಿಂದೆ ಇತ್ತು ಎಂದು ಸುದೀಪ್ ಹೇಳಿದ್ದಾರೆ.

    ಎರಡನೇ ಹಂತದಲ್ಲಿ ವಿಶ್ವನಾಥನ್ ಆನಂದ್ ಬಾಲಿವುಡ್ ನಟ ಅಮೀರ್ ಖಾನ್ ವಿರುದ್ಧವೂ ಆಡಿದರು. ವಿಶ್ವನಾಥನ್ ಆನಂದ್ ಅವರ ಜೀವನದ ಬಗ್ಗೆ ಸಿನಿಮಾ ಆದರೆ ಅದರಲ್ಲಿ ನಟಿಸುತ್ತೀರಾ? ಎನ್ನುವ ಜನರ ಪ್ರಶ್ನೆಗೆ ಉತ್ತರಿಸಿದ ಅಮೀರ್ ಖಾನ್, ಖಂಡಿತವಾಗಿಯೂ..ಇದಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದರು. ಆನ್‍ಲೈನ್‍ನಲ್ಲಿ ನಡೆದ ಈ ಸ್ಪರ್ಧೆಯನ್ನು 20 ಸಾವಿರಕ್ಕೂ ಅಧಿಕ ಜನರು ವೀಕ್ಷಿಸಿದ್ದು, 6.65 ಲಕ್ಷ ದೇಣಿಗೆ ಸಂಗ್ರಹವಾಗಿದೆ.

    ಅಭಿನಯ ಚಕ್ರವರ್ತಿ ಸುದೀಪ್ ಮತ್ತು ಚೆಸ್ ಗ್ರ್ಯಾಂಡ್‍ಮಾಸ್ಟರ್ ವಿಶ್ವನಾಥನ್ ಅವರ ನಡುವೆ ನಡೆದಿರುವ ರೋಚಕ ಆಟವನ್ನು ನೋಡಿ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಪರದೆ ಮೇಲೆ, ಮೈದಾನದಲ್ಲಿ ಕಿಚ್ಚನ ಖದರ್ ನೋಡಿದ ಅಭಿಮಾನಿಗಳು ಚಿಸ್‍ನಲ್ಲಿ ಕಿಚ್ಚನ ಆಟವನ್ನು ನೋಡಿ ಫಿದಾ ಆಗಿರುವುದು ಖಂಡಿತಾ ಹೌದು.

  • ಅವಕಾಶಗಳಿಂದ ವಂಚಿತನಾಗಿ ಟೀ ಮಾರುತ್ತಿರುವ ರಾಷ್ಟ್ರೀಯ ಚೆಸ್ ಆಟಗಾರ

    ಅವಕಾಶಗಳಿಂದ ವಂಚಿತನಾಗಿ ಟೀ ಮಾರುತ್ತಿರುವ ರಾಷ್ಟ್ರೀಯ ಚೆಸ್ ಆಟಗಾರ

    – ಜೀವನ ನಡೆಸಲು ಚಹಾ ಮಾರಾಟ

    ಭೂಪಾಲ್: ರಾಷ್ಟ್ರೀಯ ಚೆಸ್ ಆಟಗಾರ ಕುಲದೀಪ್ ಚೌಹಾನ್ ಅವಕಾಶಗಳ ಕೊರತೆ ಹಾಗೂ ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾಲೇಜಿನ ಎದುರು ಚಹಾ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

    ನನಗೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಸಿಗುತ್ತಿಲ್ಲ. ಮನೆಯಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ, ಹಾಗಾಗಿ ನಾನು ಕೆಲಸ ಮಾಡುತ್ತಿದ್ದೇನೆ. ನನ್ನ ಆರ್ಥಿಕ ಪರಿಸ್ಥಿತಿಯಿಂದಾಗಿ ಇಡೀ ಜೀವನವನ್ನು ಆಟಕ್ಕಾಗಿ ಮುಡಿಪಾಗಿಡಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಕುಲದೀಪ್ ಚೌಹಾನ್ ಬೇಸರ ವ್ಯಕ್ತಪಡಿಸಿದ್ದಾರೆ.

    ಕುಲದೀಪ್ ಚೌಹಾನ್ ಮಧ್ಯಪ್ರದೇಶದ ಕಾಲೇಜ್‍ವೊಂದರ ಎದುರು ಟೀ ಮಾರಾಟ ಮಾಡುತ್ತಿರುವ ಫೆÇೀಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅವಕಾಶ ಸಿಗದ ಕಾರಣ ಇಂತಹ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

    ಭಾರತದಲ್ಲಿ ಅಸಂಖ್ಯಾತ ಪ್ರತಿಭೆಗಳು ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಅವಕಾಶದಿಂದ ವಂಚಿತರಾಗುತ್ತಿದ್ದವರ ಸಾಲಿಗೆ ಮಧ್ಯಪ್ರದೇಶದ ರಾಷ್ಟ್ರೀಯ ಚೆಸ್ ಆಟಗಾರ ಕುಲದೀಪ್ ಚೌಹಾನ್ ಅವರ ಹೆಸರು ಕೇಳಿ ಬಂದಿದೆ.

    ಟ್ವಿಟ್ಟರ್‌ನಲ್ಲಿ ಟೀ ಮಾರುತ್ತಿರುವ ಫೋಟೋಗಳು ಹರಿದಾಡುತ್ತಿದ್ದಂತೆ ಅನೇಕರು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಅವರನ್ನು ಟ್ಯಾಗ್ ಮಾಡಿ ಆಟಗಾರನ ಬಗ್ಗೆ ಗಮನ ಹರಿಸಿ ಸಹಾಯ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ.

  • ಅಂತಾರಾಷ್ಟ್ರೀಯ ಚೆಸ್ ಪ್ರತಿಭೆಗೆ ಬೇಕಿದೆ ನೆರವು

    ಅಂತಾರಾಷ್ಟ್ರೀಯ ಚೆಸ್ ಪ್ರತಿಭೆಗೆ ಬೇಕಿದೆ ನೆರವು

    ಶಿವಮೊಗ್ಗ: ಚೆಸ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 9 ವರ್ಷದಿಂದ ಭಾರತವನ್ನು ಪ್ರತಿನಿಧಿಸಿ ದೇಶಕ್ಕೆ ಚಿನ್ನದ ಪದಕ ಗಳಿಸಿಕೊಟ್ಟ ಅಂಧ ಚೆಸ್ ಆಟಗಾರನಿಗೆ ಸರಕಾರದಿಂದ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರದ ಕೀರ್ತಿ ಬೆಳಗಿಸಿದ ಈ ಆಟಗಾರನ ಗುರುತಿಸುವ ಪ್ರಯತ್ನ ಸಹ ನಡೆದಿಲ್ಲ.

    ರಾಜ್ಯದ ಕ್ರೀಡಾ ಸಚಿವರ ತವರು ಶಿವಮೊಗ್ಗ ಜಿಲ್ಲೆಯ ಪ್ರತಿಭೆ, ಅಂತರರಾಷ್ಟ್ರೀಯ ಮಟ್ಟದ ಚೆಸ್ ಆಟಗಾರ ಕಿಶನ್ ಗಂಗೊಳ್ಳಿ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಕೀಡಾಪಟು. ಶಿವಮೊಗ್ಗದ ವಿನೋಬ ನಗರ ನಿವಾಸಿಯಾಗಿರುವ ಕಿಶನ್, ಹುಟ್ಟಿನಿಂದಲೇ ಶೇ.75% ಭಾಗ ದೃಷ್ಟಿ ಸಮಸ್ಯೆ ಹೊಂದಿದ್ದಾರೆ. ಆದರೂ ಛಲ ಬಿಡದೆ ಜೀವನದಲ್ಲಿ ಏನಾದರೂ ಸಾಧಿಸಬೇಕು, ತಾಯ್ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂಬ ಕಾರಣದಿಂದ ಕಿಶನ್ ಚೆಸ್ ಕಲಿತಿದ್ದಾರೆ.

    ಚೆಸ್ ಕಲಿತು ಕೇವಲ ಜಿಲ್ಲೆ ಹಾಗೂ ರಾಜ್ಯಕ್ಕಷ್ಟೇ ಸೀಮಿತವಾಗದೇ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಹತ್ತು ಹಲವು ಪ್ರಶಸ್ತಿ, ಚಿನ್ನದ ಪದಕ ಗಳಿಸಿದ್ದಾರೆ. ಇಷ್ಟೆಲ್ಲಾ ಪ್ರತಿಭೆ ಇದ್ದರೂ ರಾಜ್ಯ ಸರಕಾರದಿಂದ ಸಿಗಬೇಕಾದ ಮನ್ನಣೆ, ಅವಕಾಶ, ಸಹಾಯ ಮಾತ್ರ ಇದುವರೆಗೂ ಕಿಶನ್ ಅವರಿಗೆ ಲಭಿಸಿಲ್ಲ.

    2018 ರಲ್ಲಿ ಜಕಾರ್ತಾದಲ್ಲಿ ನಡೆದ ಮೂರನೇ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದ ಏಕೈಕ ಭಾರತೀಯ ಎಂಬ ಹೆಗ್ಗಳಿಕೆ ಪಡೆದಿರುವ ಕಿಶನ್ ಅವರಿಗೆ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ಸನ್ಮಾನ ಮಾಡಿದ್ದರು. ಆದರೆ ರಾಜ್ಯ ಸರಕಾರ ಮಾತ್ರ ಈ ಪ್ರತಿಭೆಯನ್ನು ಗುರುತಿಸಿಲ್ಲ. ಭವಿಷ್ಯದಲ್ಲಿ ವಿಶ್ವ ಚೆಸ್ ಗ್ರ್ಯಾಂಡ್ ಮಾಸ್ಟರ್ ಆಗಬೇಕು ಎಂಬ ಕನಸು ಹೊತ್ತಿರುವ ಕಿಶನ್ ಕುಟುಂಬ ಸದ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ.

    ಈ ಕುರಿತು ಮಾತನಾಡಿರುವ ಕಿಶನ್ ಅವರ ತಾಯಿ ತನ್ನ ಮಗನಿಗೆ ಚೆಸ್ ತರಬೇತಿ ಕೊಡಿಸಲು ಬಡ್ಡಿ ಸಾಲ ಮಾಡಿ, ಮನೆಯಲ್ಲಿದ್ದ ಅಲ್ಪ ಸ್ವಲ್ಪ ಚಿನ್ನವನ್ನು ಗಿರವಿಯಿಟ್ಟು ತರಬೇತಿ ಕೊಡಿಸುತ್ತಿದ್ದೇವೆ. ಮುಂದೆ ಉನ್ನತ ತರಬೇತಿ ಪಡೆಯಲು ಹೆಚ್ಚಿನ ಹಣದ ಅವಶ್ಯಕತೆ ಇದೆ. ಸಂಘ ಸಂಸ್ಥೆಗಳು, ಸರಕಾರ ಪ್ರತಿಭೆಯನ್ನು ಗುರುತಿಸಿ ಸಹಾಯ ಮಾಡಬೇಕಿದೆ ಎಂದು ಮನವಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರದ ಪತಾಕೆ ಹಾರಿಸಿಸಲು ಸಿದ್ಧವಾಗುತ್ತಿರುವ ಕಿಶನ್ ಅವರನ್ನು ಗುರುತಿಸಿ ಕ್ರೀಡಾ ಸಚಿವ ಈಶ್ವರಪ್ಪ ನೆರವಿಗೆ ಧವಿಸಬೇಕು ಎಂಬುವುದು ನಮ್ಮ ಆಶಯವಾಗಿದೆ.

  • ಬುರ್ಖಾ ಧರಿಸಿ ಚೆಸ್ ಆಡಲ್ಲ ಎಂದ ಸೌಮ್ಯಾ ನಡೆಗೆ ಹ್ಯಾಟ್ಸ್ ಆಫ್ ಎಂದ ಕೈಫ್

    ಬುರ್ಖಾ ಧರಿಸಿ ಚೆಸ್ ಆಡಲ್ಲ ಎಂದ ಸೌಮ್ಯಾ ನಡೆಗೆ ಹ್ಯಾಟ್ಸ್ ಆಫ್ ಎಂದ ಕೈಫ್

    ನವದೆಹಲಿ: ಇರಾನ್ ನಲ್ಲಿ ನಡೆಯುತ್ತಿರುವ 2018 ರ ಏಷ್ಯಾ ಚೆಸ್ ಟೂರ್ನಿಯಿಂದ ಇತ್ತೀಚೆಗಷ್ಟೇ ಹೊರ ನಡೆಯುವ ನಿರ್ಧಾರ ಪ್ರಕಟಿಸಿದ ಭಾರತ ತಂಡದ ಆಟಗಾರ್ತಿ ಸೌಮ್ಯಾ ಸ್ವಾಮಿನಾಥನ್ ನಡೆಗೆ ಕ್ರಿಕೆಟಿಗ ಮಹಮ್ಮದ್ ಕೈಫ್ ಬೆಂಬಲ ಸೂಚಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕೈಫ್, ಯಾವುದೇ ಕ್ರೀಡೆಯಲ್ಲಿ ಧಾರ್ಮಿಕ ನಿಯಮಗಳನ್ನು ಅನುಸರಿಸುವಂತೆ ಒತ್ತಡ ಹೇರುವುದು ಉತ್ತಮವಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಇರಾನ್ ಟೂರ್ನಿಯಿಂದ ಹೊರ ನಡೆದ ನಿಮ್ಮ ನಿರ್ಧಾರಕ್ಕೆ `ಹ್ಯಾಟ್ಸ್ ಅಫ್’ ಸೌಮ್ಯಾ. ಕ್ರೀಡಾಪಟುಗಳ ಮೇಲೆ ಯಾವುದೇ ಧಾರ್ಮಿಕ ವಸ್ತ್ರ ಸಂಹಿತೆಯನ್ನು ಹೇರಬಾರದು. ಅದರಲ್ಲೂ ಅಂತರಾಷ್ಟ್ರೀಯ ಟೂರ್ನಿಯನ್ನು ಆಯೋಜನೆ ಮಾಡುತ್ತಿರುವ ರಾಷ್ಟ್ರ ನಿಯಮ ರೂಪಿಸಬಾರದು. ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಕೈಫ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ಸದ್ಯ ಸೌಮ್ಯಾ ಅವರ ನಿರ್ಧಾರಕ್ಕೆ ಕೈಫ್ ಅಲ್ಲದೇ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸಹ ಬೆಂಬಲ ನೀಡಿದ್ದು, ಸೌಮ್ಯಾ ಅವರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲೂ ಭಾರೀ ಪ್ರಶಂಸೆ ವ್ಯಕ್ತವಾಗಿದ್ದು, ಹಲವರು ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದಾರೆ.

    https://www.facebook.com/permalink.php?story_fbid=2177807325593182&id=218386564868611

    ಏನಿದು ಪ್ರಕರಣ?
    ಇರಾನ್ ನಲ್ಲಿ ಜೂನ್ 26 ರಿಂದ ಆಗಸ್ಟ್ 4 ವರೆಗೆ ನಡೆಯಲಿರುವ ಏಷ್ಯಾ ಚೆಸ್ ಟೂರ್ನಿಯಿಂದ ಭಾರತದ ತಂಡದ ಆಟಗಾರ್ತಿ ಸೌಮ್ಯಾ ಸ್ವತಃ ನಿರ್ಧಾರದಿಂದ ಹೊರ ನಡೆದಿದ್ದರು. ಇರಾನ್ ದೇಶ ಮಹಿಳೆಯರು ಕಡ್ಡಾಯವಾಗಿ ತಲೆಗೆ ಸ್ಕಾರ್ಫ್ ಧರಿಸಬೇಕೆಂಬ ನಿಯಮವಿದೆ. ಇದರಂತೆ ಟೂರ್ನಿಯಲ್ಲಿ ಭಾಗವಹಿಸುವ ಆಟಗಾರ್ತಿಯರು ಕಡ್ಡಾಯವಾಗಿ ತಲೆಗೆ ಸ್ಕಾರ್ಫ್ ಧರಿಸಬೇಕೆಂಬ ನಿಯಮ ರೂಪಿಸಿತ್ತು. ಈ ಕಾರಣದಿಂದ ಸ್ಕಾರ್ಫ್ ಧರಿಸಲು ನಿರಾಕರಿಸಿದ್ದ ಸೌಮ್ಯ ಟೂರ್ನಿಯಿಂದ ಹೊರ ನಡೆಯುವ ತೀರ್ಮಾನವನ್ನು ಪ್ರಕಟಿಸಿದ್ದರು.

    ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ಸೌಮ್ಯ, ಇರಾನ್ ಕಾನೂನು ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯ, ಚಿಂತನೆ, ಆತ್ಮಸಾಕ್ಷಿ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕಗಳು ಸೇರಿದಂತೆ ನನ್ನ ಮಾನವ ಹಕ್ಕುಗಳನ್ನು ರಕ್ಷಿಸಿ ಕೊಳ್ಳಲು ಟೂರ್ನಿಗೆ ತೆರಳದೇ ಇರುವುದು ಸೂಕ್ತ ಎಂದು ಬರೆದುಕೊಂಡಿದ್ದಾರೆ.

    ಇದೇ ಮೊದಲಲ್ಲ: ಭಾರತೀಯ ಆಟಗಾರರು ಡ್ರೆಸ್ ಕೋಡ್ ಕಾರಣದಿಂದ ಈ ಹಿಂದೆಯೂ ಹಲವು ಟೂರ್ನಿಗಳಿಂದ ಹೊರ ನಡೆದಿದ್ದರು. ಪ್ರಮುಖವಾಗಿ 2016 ರಲ್ಲಿ ಶೂಟರ್ ಹೀನಾ ಸಿಂಧು ಏಷ್ಯಾ ಏರ್ ಗನ್ ಶೂಟಿಂಗ್ ಚಾಂಪಿಯನ್ ಶಿಪ್ ನಿಂದ ಹೊರ ನಡೆದಿದ್ದರು.

  • ಚೆಸ್‍ನಲ್ಲಿ ನ್ಯೂಜಿಲೆಂಡ್ ಆಟಗಾರ ಸೋಧಿಯನ್ನು ಸೋಲಿಸಿದ ಚಹಲ್

    ಚೆಸ್‍ನಲ್ಲಿ ನ್ಯೂಜಿಲೆಂಡ್ ಆಟಗಾರ ಸೋಧಿಯನ್ನು ಸೋಲಿಸಿದ ಚಹಲ್

    ತಿರುವನಂತಪುರಂ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಕಿವಿಸ್ 40 ರನ್‍ಗಳ ಗೆಲುವು ಸಾಧಿಸಿದ್ದರೆ, ಪಂದ್ಯದ ನಂತರ ನಡೆದ ಚೆಸ್ ಆಟದಲ್ಲಿ ಭಾರತದ ಯುವ ಸ್ಪೀನ್ ಬೌಲರ್ ಯಜುವೇಂದ್ರ ಚಹಲ್ ಕಿವಿಸ್ ಬೌಲರ್ ಇಶ್ ಸೋಧಿಯನ್ನು ಚೆಸ್ ಆಟದಲ್ಲಿ ಸೋಲಿಸಿದ್ದಾರೆ.

    ಯಜುವೇಂದ್ರ ಚಹಲ್ ಮತ್ತು ಇಶ್ ಸೋಧಿ ಇಬ್ಬರು ಚೆಸ್ ಪ್ರಿಯರಾಗಿದ್ದು, ಪಂದ್ಯದ ನಂತರ ಚಹಲ್ ಕಿವಿಸ್ ಬೌಲರ್‍ಗೆ ತನ್ನೊಂದಿಗೆ ಆನ್ ಲೈನ್ ನಲ್ಲಿ ಚೆಸ್ ಆಡುವಂತೆ ಚಾಲೆಂಜ್ ನೀಡಿದ್ದಾರೆ. ಇಬ್ಬರ ನಡುವೆ ನಡೆದ ಚೆಸ್ ಪಂದ್ಯದಲ್ಲಿ ಚಹಲ್ ಚೆಕ್ ನೀಡುವ ಮೂಲಕ ಗೆಲುವು ಸಾಧಿಸಿದ್ದು, ಇಬ್ಬರು ಈ ಕುರಿತು ಟ್ವೀಟ್ ಮಾಡಿದ್ದಾರೆ.

    ಮೊದಲು ನಡೆದ ಪಂದ್ಯದಲ್ಲಿ ಚಹಲ್ ಗೆಲುವು ಪಡೆದ ಸಮಯದಲ್ಲಿ ಸೋಧಿ ಎರಡನೇ ಪಂದ್ಯ ಆಡುವುವಂತೆ ಚಾಲೆಂಜ್ ನೀಡಿದ್ದಾರೆ. ನಂತರ ಇವರಿಬ್ಬರು ತಿರುವನಂತಪುರಂಗೆ ಬರುತ್ತಿದ್ದ ವಿಮಾನದಲ್ಲಿ ಚೆಸ್ ಆಡಿದ್ದಾರೆ. ಈ ಪಂದ್ಯದಲ್ಲೂ ಚಹಲ್ ಗೆಲವು ಪಡೆದಿದ್ದು, ಈ ಕುರಿತು ಚಹಾಲ್ ‘ಹಾರ್ಡ್ ಲಕ್ ಮೈ ಬ್ರದರ್’ ಎಂದು ಟ್ವೀಟ್ ಮಾಡಿದ್ದಾರೆ.

    ಚಹಲ್ ಅವರೊಂದಿಗಿನ ಚೆಸ್ ಪಂದ್ಯದಲ್ಲಿ ಸೋತ ಕಿವಿಸ್ ಇಶ್ ಸೋಧಿ, ಚಹಲ್  ಒಬ್ಬ ಚೆಸ್ ಚಾಂಪಿಯನ್ ಆಗಿದ್ದು, ಅವರ ವಿರುದ್ಧ ಚಾಲೆಂಜ್ ಉತ್ತಮವಾಗಿತ್ತು. ಆದರೆ ಚಾಲೆಂಜ್ ನನ್ನ ಪರವಾಗಿ ಇರಲಿಲ್ಲ. ಇಬ್ಬರು ಎರಡು ಪಂದ್ಯಗಳನ್ನು ಆಡಿದ್ದೇವೆ. ನಾನು ಚಹಲ್ ಆಟದ ಬಗ್ಗೆ ಊಹಿಸಿರಲಿಲ್ಲ. ಇಬ್ಬರ ನಡುವಿನ ಪಂದ್ಯ ಎಲ್ಲರಿಗೂ ನಗೆ ಮೂಡಿಸಿತ್ತು ಎಂದು ಟ್ವೀಟ್ ಮಾಡಿದ್ದಾರೆ.

    ಮೂಲತಃ ಭಾರತದ ಯಜುವೇಂದ್ರ ಚಹಲ್ ಚೆಸ್ ಆಟಗಾರ. ಭಾರತದ ಪರ ಏಷ್ಯಾ ಮತ್ತು ವಿಶ್ವ ಯುವ ಚೆಸ್ ಚಾಂಪಿಯನ್‍ಶಿಪ್ ನಲ್ಲಿ ದೇಶವನ್ನು ಪ್ರತಿನಿಧಿಸಿದ್ದರು. ಚಹಲ್ ಏಳು ವರ್ಷ ಇದ್ದಾಗಲೇ ಚೆಸ್ ಹಾಗು ಕ್ರಿಕೆಟ್ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದರು. ಅಲ್ಲದೆ ಅಂಡರ್-ಚೆಸ್ ರಾಷ್ಟ್ರೀಯ ಚಾಪಿಂಯನ್ ಸಹ ಆಗಿದ್ದರು. ಆದರೆ ಪ್ರಯೋಜಕರ ಕೊರತೆಯಿಂದಾಗಿ ಚೆಸ್ ಆಟದಿಂದ ಹಿಂದಕ್ಕೆ ಸರಿದರು.

    ಕಿವಿಸ್ ಸ್ಪೀನರ್ ಇಶ್ ಸೋಧಿ ಭಾರತದ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 25 ರನ್ ನೀಡಿ 4 ವಿಕೆಟ್ ಕಬಳಿಸಿದ್ದರೆ, ಎರಡನೇ ಪಂದ್ಯದಲ್ಲಿ 25 ರನ್ ನೀಡಿ 1 ವಿಕೆಟ್ ಪಡೆದಿದ್ದರು.