Tag: chhatisgarh

  • ಛತ್ತೀಸ್‌ಗಢ| ಇಬ್ಬರು ನಾಗರಿಕರ ಹತ್ಯೆ ಮಾಡಿದ ನಕ್ಸಲರು

    ಛತ್ತೀಸ್‌ಗಢ| ಇಬ್ಬರು ನಾಗರಿಕರ ಹತ್ಯೆ ಮಾಡಿದ ನಕ್ಸಲರು

    ರಾಯ್ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ (Bijapura) ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ.

    ಮೃತರನ್ನು ಕರಮ್ ರಾಜು (32) ಮತ್ತು ಮದ್ವಿ ಮುನ್ನಾ (27) ಎಂದು ಗುರುತಿಸಲಾಗಿದೆ. ಅದೇ ಊರಿನ ಗ್ರಾಮಸ್ಥರು ಎಂದು ತಿಳಿಯಲಾಗಿದೆ.ಇದನ್ನೂ ಓದಿ: ಉತ್ತರಾಖಂಡದ ಬಳಿಕ ಗುಜರಾತ್‌ನಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ

    ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಸೋಮವಾರ ರಾತ್ರಿ ನಕ್ಸಲರು ಬುಗ್ಡಿಚೆರು ಗ್ರಾಮದಲ್ಲಿ ಇಬ್ಬರನ್ನು ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಮಂಗಳವಾರ ಬೆಳಿಗ್ಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ಇಬ್ಬರು ಪೊಲೀಸರಿಗೆ ತಮ್ಮ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಶಂಕಿಸಿ ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಈ ಘಟನೆ ತರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಇದಕ್ಕೂ ಮುನ್ನ ಜನವರಿ 16 ಮತ್ತು 26 ರಂದು ನಕ್ಸಲರು ಇಬ್ಬರು ಗ್ರಾಮಸ್ಥರನ್ನು ಪೊಲೀಸ್‌ರಿಗೆ ಮಾಹಿತಿ ನೀಡುತ್ತಾರೆ ಎಂದು ಶಂಕಿಸಿ ಹತ್ಯೆ ಮಾಡಿದ್ದರು. ಕಳೆದ ವರ್ಷ ಬಿಜಾಪುರದ 7 ಜಿಲ್ಲೆಗಳನ್ನು ಒಳಗೊಂಡು ಬಸ್ತಾರ್ ಪ್ರದೇಶದಲ್ಲಿ 68 ನಾಗರಿಕರನ್ನು ಹತ್ಯೆ ಮಾಡಿದ್ದರು.ಇದನ್ನೂ ಓದಿ: ಜೆಸಿಬಿ ಬಳಸಿ ಕಾಲ್ತುಳಿತದ ಸ್ಥಳದಲ್ಲಿ ಸಾಕ್ಷ್ಯ ನಾಶ: ಅಖಿಲೇಶ್‌ ಕಿಡಿ

  • ನಟ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಪ್ರಕರಣ – ಛತ್ತೀಸ್‌ಗಢದಲ್ಲಿ ಆರೋಪಿ ಅರೆಸ್ಟ್

    ನಟ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಪ್ರಕರಣ – ಛತ್ತೀಸ್‌ಗಢದಲ್ಲಿ ಆರೋಪಿ ಅರೆಸ್ಟ್

    ರಾಯಪುರ: ಬಾಲಿವುಡ್ ನಟ ಶಾರುಖ್ ಖಾನ್‌ಗೆ (Shah Rukh Khan) ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್‌ಗಢ (Chhattisgarh) ರಾಯಪುರದಲ್ಲಿ (Raipur) ಮುಂಬೈ(Mumbai) ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ವಕೀಲ ಮೊಹಮ್ಮದ್ ಫೈಜಾನ್ ಖಾನ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಟಾಕ್ಸಿಕ್ ಸಿನಿಮಾ ಸೆಟ್‍ಗೆ ಮರಗಳ ಮಾರಣಹೋಮ – ಎಫ್‍ಐಆರ್ ದಾಖಲು

    ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಕರೆಯೊಂದು ಬಂದಿತ್ತು. ನ.5 ರಂದು ಮಧ್ಯಾಹ್ನ 1:20ರ ಸುಮಾರಿಗೆ ಮುಂಬೈನ ಬಾಂದ್ರಾ ಪೊಲೀಸರಿಗೆ ಕರೆ ಮಾಡಿ ವ್ಯಕ್ತಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ.

    ಛತ್ತೀಸ್‌ಗಢದ ರಾಯಪುರದ ಫೈಜಾನ್ ಖಾನ್ ಎಂಬುವರ ಹೆಸರಿನಲ್ಲಿ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಫೈಜಾನ್ ಖಾನ್ ಅವರನ್ನು ಪೊಲೀಸರು ವಿಚಾರಣೆಗೆ ಕರೆಯಿಸಿದ್ದರು. ವಿಚಾರಣೆಯಲ್ಲಿ ತಾನು ವಕೀಲನಾಗಿದ್ದು, ನ.2 ರಂದು ಮೊಬೈಲ್ ಕಳ್ಳತನವಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ. ಶಾರುಖ್ ಖಾನ್‌ಗೆ ಬೆದರಿಕೆ ಹಾಕಲು ಯಾರೋ ಅದನ್ನು ದುರ್ಬಳಕೆ ಮಾಡಿಕೊಂಡಿರಬಹುದು ಎಂದು ಹೇಳಿದ್ದನು.

    ಅದಾದ ಬಳಿಕ ತನಗೆ ಬೆದರಿಕೆ ಬರುತ್ತಿರುವ ಹಿನ್ನೆಲೆ ಸುರಕ್ಷತೆ ಒದಗಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದ. ಜೊತೆಗೆ ಸುರಕ್ಷತೆಯ ನೆಪದಲ್ಲಿ ಎರಡು ಬಾರಿ ವಿಚಾರಣೆಗೆ ಗೈರು ಹಾಜರಾಗಿದ್ದ. ಇದೀಗ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದು, ಭಾರತೀಯ ನ್ಯಾಯ ಸಂಹಿತೆಯ 308(4), 351(3)(4) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಬಂದಿತ್ತು. ಅದಾದ ಬಳಿಕ ಅವರ ಭದ್ರತೆಯನ್ನು Y+ ಮಟ್ಟಕ್ಕೆ ಹೆಚ್ಚಿಸಲಾಯಿತು. ದಿನದ 24 ಗಂಟೆ ಆರು ಶಸ್ತ್ರಸಜ್ಜಿತ ಸಿಬ್ಬಂದಿಗಳ ಜೊತೆಯಲ್ಲಿ ಇರುವುದನ್ನು ಖಚಿತಪಡಿಸುತ್ತದೆ. ಇದಕ್ಕೂ ಮೊದಲು ಶಾರುಖ್ ಖಾನ್ ಇಬ್ಬರು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಗಳನ್ನು ಹೊಂದಿದ್ದರು.ಇದನ್ನೂ ಓದಿ: ಆರ್‌ಡಿಎಕ್ಸ್ ಇಟ್ಟು ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವ ಬೆದರಿಕೆ

  • ಪಾರ್ಕ್ ಮಾಡಿದ್ದ ಕಾರಿನಿಂದ 2.65 ಕೋಟಿ ರೂ. ನಗದು ವಶ

    ಪಾರ್ಕ್ ಮಾಡಿದ್ದ ಕಾರಿನಿಂದ 2.65 ಕೋಟಿ ರೂ. ನಗದು ವಶ

    ರಾಯಪುರ: ಪಾರ್ಕ್ ಮಾಡಿರುವ ಕಾರಿನಲ್ಲಿದ್ದ (Car) 2.64 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಘಟನೆ ಛತ್ತೀಸ್‌ಗಢದ (Chhatisgarh) ದುರ್ಗ್  (Durg)  ಜಿಲ್ಲೆಯಲ್ಲಿ ನಡೆದಿದೆ.

    ಸೆಕ್ಟರ್-1 ಪ್ರದೇಶದ ಬ್ಯಾಂಕ್ ಬಳಿ ಅನುಮಾಸ್ಪದವಾಗಿ ಮೂರು ಕಾರುಗಳು ಪಾರ್ಕ್ ಮಾಡಲಾಗಿತ್ತು. ವಾಹನಗಳ ನಿಲುಗಡೆ ಬಗ್ಗೆ ಮಾಹಿತಿ ಪಡೆದ ಭಿಲಾಯಿ ಭಟ್ಟಿ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಅಪರಧ ನಿಗ್ರಹ ಮತ್ತು ಸೈಬರ್ ಘಟದ ಜಂಟಿ ತಂಡ ತಲುಪಿದೆ. ಇದನ್ನೂ ಓದಿ: ಭಾರತ್‌ ಜೋಡೊ ನ್ಯಾಯ ಯಾತ್ರೆ ವೇಳೆ ರಾಹುಲ್‌ ಗಾಂಧಿ ಕಾರಿನ ಗಾಜು ಪುಡಿಪುಡಿ

    ಎರಡು ವಾಹನಗಳಿಲ್ಲಿದ್ದ ಮೂವರನ್ನು ಪೊಲೀಸರು ವಿಚಾರಣೆ ಮಾಡಿದ್ದಾರೆ. ತಪಾಸಣೆ ವೇಳೆ ಕಾರಿನಲ್ಲಿ 2.64 ಕೋಟಿ ರೂಪಾಯಿಗಳ ನಗದು ಪತ್ತೆಯಾಗಿದೆ. ಮೂವರು ವ್ಯಕ್ತಿಗಳನ್ನು ಪೊಲೀಸರು ಪ್ರಶ್ನೆ ಮಾಡಿದ್ದು, ತೃಪ್ತಿದಾಯಕ ಉತ್ತರವನ್ನು ನೀಡಲು ವಿಫಲವಾದ ಕಾರಣ ನಗದನ್ನು ವಶ ಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ನಗದನ್ನು ವಶ ಪಡಿಸಿಕೊಂಡಿರುವ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಕಂಡಕ್ಟರ್ ಮೇಲೆ ಯುವತಿಯಿಂದ ಹಲ್ಲೆ

     

  • ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

    ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

    ರಾಯ್ಪುರ: ಛತ್ತೀಸ್‌ಗಢದಲ್ಲಿ (Chhatisgarh) ಮತ್ತೆ ನಕ್ಸಲರು (Naxals) ಅಟ್ಟಹಾಸ ಮೆರೆದಿದ್ದು, ಚಾಲಕ ಹಾಗೂ 10 ಪೊಲೀಸ್‌ ಸಿಬ್ಬಂದಿ ಸೇರಿ 11 ಯೋಧರು ಹುತಾತ್ಮರಾದ ಘಟನೆ ಗುರುವಾರದಲ್ಲಿ ದಾಂತೇವಾಡದಲ್ಲಿ (Dantewada) ನಡೆದಿದೆ.

    ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಗುಪ್ತಚರ ಮಾಹಿತಿಯ ಮೇರೆಗೆ ಪ್ರಾರಂಭವಾದ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಿಂದ ಪೊಲೀಸರು ಹಿಂತಿರುಗುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ)ಯಿಂದ ದಾಳಿ ನಡೆಸಿ ಸ್ಫೋಟಿಸಿದ್ದಾರೆ. ಇದರ ಪರಿಣಾಮವಾಗಿ 10 ಭದ್ರತಾ ಸಿಬ್ಬಂದಿ ಮತ್ತು ಚಾಲಕ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ನಕ್ಸಲ್‌ ನಿಗ್ರಹ ದಳ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

    ಘಟನೆ ಕುರಿತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪ್ರತಿಕ್ರಿಯಿಸಿ, ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ಅವರು, ದಾಳಿಯಲ್ಲಿ ಭಾಗಿಯಾಗಿರುವ ನಕ್ಸಲರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಈ ಹೋರಾಟವು ಕೊನೆಯ ಹಂತದಲ್ಲಿದೆ. ನಕ್ಸಲರನ್ನು ಬಿಡಲಾಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿ ಸೋಲಿಸುವ ಹೊಣೆ ನನ್ನದು- ಯಡಿಯೂರಪ್ಪ

    ನಕ್ಸಲರೆಂದು ಕರೆಯಲ್ಪಡುವ ಮಾವೋವಾದಿಗಳು ಕಳೆದ 6 ದಶಕಗಳಿಂದ ನೂರಾರು ಜನರನ್ನು ಹತ್ಯೆಗೈದು ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯವನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡ್ಬೇಕು – ನಿರ್ಮಲಾ ಸೀತಾರಾಮನ್ ಕರೆ

  • ದೇಶದ ಮೊದಲ ‘ಗಾರ್ಬೇಜ್ ಕೆಫೆ’- ಪ್ಲಾಸ್ಟಿಕ್ ತ್ಯಾಜ್ಯ ಕೊಟ್ರೆ ಊಟ ಫ್ರೀ

    ದೇಶದ ಮೊದಲ ‘ಗಾರ್ಬೇಜ್ ಕೆಫೆ’- ಪ್ಲಾಸ್ಟಿಕ್ ತ್ಯಾಜ್ಯ ಕೊಟ್ರೆ ಊಟ ಫ್ರೀ

    ರಾಯ್ಪುರ್: ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರಕ್ಕೆ ಆಗುವ ಹಾನಿ ಹೆಚ್ಚಾಗಿದೆ. ಪ್ಲಾಸ್ಟಿಕ್ ಬಳಕೆಯನ್ನು ಪೂರ್ಣ ಪ್ರಮಾಣದಲ್ಲಿ ತಡೆಯಲು ಆಗದಿದ್ದರೂ ಅಲ್ಪ ಪ್ರಮಾಣದಲ್ಲಿ ಪರಿಸರವನ್ನು ಉಳಿಸಲು ಛತ್ತೀಸ್‍ಗಢದ ಅಂಬಿಕಾಪುರ ಮಹಾನಗರ ಪಾಲಿಕೆ ಹೊಸ ಉಪಾಯ ಮಾಡಿದೆ.

    ಅಂಬಿಕಾಪುರ ಮಹಾನಗರ ಪಾಲಿಕೆ ಸ್ವಚ್ಛ ಭಾರತ ಅಭಿಯಾನದಡಿ ಗಾರ್ಬೇಜ್ ಕೆಫೆ ತೆರೆಯುವ ಪ್ರಯತ್ನಕ್ಕೆ ಕೈಹಾಕಿದೆ. ಪ್ಲಾಸ್ಟಿಕ್ ಚಿಂದಿ ಆಯುವ ನಿರಾಶ್ರಿತರಿಗೆ ‘ಗಾರ್ಬೇಜ್ ಕೆಫೆ’ ಹೆಸರಿನಲ್ಲಿ ಹೋಟೆಲ್ ತೆರೆಯಲು ಅಂಬಿಕಾಪುರ ಮಹಾನಗರ ಪಾಲಿಕೆ ನಿರ್ಧರಿಸಿದೆ.

    ಈ ಹೋಟೆಲ್ ಬಡ ಜನರಿಗೆ ಕೂಡ ಅನುಕೂಲವಾಗಲಿದೆ. ಅಲ್ಲದೆ ಈ ಹೋಟೆಲ್‍ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತಂದುಕೊಟ್ಟರೆ ಉಪಹಾರ, ಊಟವನ್ನು ಉಚಿತವಾಗಿ ಕೊಡಲಾಗುತ್ತದೆ. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯ ಕೂಡ ಒಂದೆಡೆ ಸಂಗ್ರಹವಾಗುತ್ತದೆ. ಇದರಿಂದ ನಗರದ ರಸ್ತೆಗಳು ಪ್ಲಾಸ್ಟಿಕ್ ಮುಕ್ತ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ‘ಪ್ಲಾಸ್ಟಿಕ್ ಶುಲ್ಕ’ ಕಟ್ಟಿ ಉಚಿತವಾಗಿ ಓದಿ – ಶಾಲೆಯ ತಂತ್ರಕ್ಕೆ ಭಾರೀ ಮೆಚ್ಚುಗೆ

    ಗಾರ್ಬೇಜ್ ಕೆಫೆಯಲ್ಲಿ ಒಂದು ಕೆ.ಜಿ. ಪ್ಲಾಸ್ಟಿಕ್ ತಂದುಕೊಟ್ಟರೆ ಊಟ ಹಾಗೂ ಅರ್ಧ ಕೆ.ಜಿ. ಪ್ಲಾಸ್ಟಿಕ್ ತಂದುಕೊಟ್ಟರೆ ಉಪಾಹಾರ ನೀಡಲಾಗುತ್ತದೆ. ಪ್ಲಾಸ್ಟಿಕ್ ಮುಕ್ತ ಅಭಿಯಾನದಲ್ಲಿ ಈ ಗಾರ್ಬೆಜ್ ಕೆಫೆ ಒಂದು ವಿನೂತನ ಪ್ರಯತ್ನವಾಗಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಈ ರೀತಿ ಗಾರ್ಬೆಜ್ ಕೆಫೆ ನಿರ್ಮಾಣವಾಗಲಿದೆ.

    ಚಿಂದಿ ಆಯುವವರ ಹೊಟ್ಟೆ ತುಂಬಿಸುವುದೇ ಈ ವಿನೂತನ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ ತಂದುಕೊಟ್ಟರೆ ಪಾಲಿಕೆ ವತಿಯಿಂದ ಉಚಿತ ಊಟ, ಉಪಾಹಾರ ನೀಡಲಾಗುತ್ತದೆ. ಕೆಫೆಯಲ್ಲಿ ಸಂಗ್ರಹಿಸಲಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆ ನಿರ್ಮಾಣ ಕಾರ್ಯಕ್ಕೆ ಬಳಸಲು ಪಾಲಿಕೆ ಚಿಂತನೆ ನಡೆಸಿದೆ.

    ಈ ‘ಗಾರ್ಬೇಜ್ ಕೆಫೆ’ ಯೋಜನೆಗಾಗಿ ಅಂಬಿಕಾಪುರ ಮಹಾನಗರ ಪಾಲಿಕೆ ಕಡೆಯಿಂದ ವರ್ಷಕ್ಕೆ 5 ಲಕ್ಷ ರೂ. ಅನುದಾನವನ್ನು ಈ ಯೋಜನೆಗೆ ಮೀಸಲಿಡಲಾಗಿದೆ. ಅಲ್ಲದೆ ಈ ಯೋಜನೆಯನ್ನು ವಿಸ್ತರಿಸಲು ಪಾಲಿಕೆ ಯೋಚಿಸುತ್ತಿದೆ. ಮುಂದೆ ಅದು ಕಾರ್ಯರೂಪಕ್ಕೆ ಬಂದರೆ ಪ್ಲಾಸ್ಟಿಕ್ ಸಂಗ್ರಹಿಸಿ ತಂದು ಕೊಟ್ಟರೆ ಪಾಲಿಕೆ ವತಿಯಿಂದ ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡುವುದಾಗಿ ತೀಳಿಸಿದೆ.

    ಸದ್ಯ ಸ್ವಚ್ಛತಾ ಅಭಿಯಾನದ ಪಟ್ಟಿಯಲ್ಲಿ ಇಂಧೋರ್ ಬಳಿಕ ಛತ್ತೀಸ್‍ಗಢದ ಅಂಬಿಕಾನಗರ ಈಗ 2ನೇ ಸ್ವಚ್ಛ ನಗರವಾಗಿದೆ. ಅಲ್ಲದೆ ಈಗಾಗಲೇ ನಗರದ ಕೆಲವು ರಸ್ತೆಗಳನ್ನು ಡಾಂಬರು ಹಾಗೂ 8 ಲಕ್ಷ ಪ್ಲಾಸ್ಟಿಕ್ ಚೀಲಗಳ ಮೂಲಕ ನಿರ್ಮಿಸಲಾಗಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ 15 ತೃತೀಯಲಿಂಗಿ ದಂಪತಿ!

    ದಾಂಪತ್ಯ ಜೀವನಕ್ಕೆ ಕಾಲಿಟ್ಟ 15 ತೃತೀಯಲಿಂಗಿ ದಂಪತಿ!

    ರಾಯ್‍ಪುರ: ತೃತೀಯ ಲಿಂಗಿ ಸಮುದಾಯದವರು ಏರ್ಪಡಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸುಮಾರು 15 ಜೋಡಿಗಳು ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿವೆ.

    ಶನಿವಾರದಂದು ಛತ್ತಿಸ್‍ಗಢದಲ್ಲಿ ನಡೆದ ತೃತೀಯ ಲಿಂಗಿಗಳ ಸಾಮೂಹಿಕ ವಿವಾಹವು ಹಿಂದೂ ಸಂಪ್ರದಾಯದಂತೆ ನೆರವೇರಿತು. ಈ ಕಾರ್ಯಕ್ರಮದಲ್ಲಿ ಸುಮಾರು 15 ಜೋಡಿ ತೃತಿಯ ಲಿಂಗಿಗಳು ಮದುವೆಯಾಗಿ ಸಪ್ತಪದಿ ತುಳಿದಿದ್ದಾರೆ. ಅಲ್ಲದೆ ಶುಕ್ರವಾರದಂದು ಈ ಜೋಡಿಗಳಿಗೆ ಮೆಹಂದಿ, ಸಂಗೀತ ಹಾಗೂ ಅರಿಶಿನ ಶಾಸ್ತ್ರವನ್ನು ಕೂಡ ಸಮುದಾಯದವರೇ ಮುಂದೆ ನಿಂತು ನಡೆಸಿಕೊಟ್ಟಿದ್ದಾರೆ. ಈ ಅಪರೂಪದ ಮದುವೆಗೆ ಈ ಸಮುದಾಯದ ಮುಖಂಡರು ಸಾಕ್ಷಿಯಾಗಿ, ನವಜೋಡಿಗಳಿಗೆ ಆಶೀರ್ವಾದ ನೀಡಿದ್ದಾರೆ.

    ತೃತೀಯ ಲಿಂಗಿ ಹಾಗೂ ಛತ್ತಿಸ್‍ಗಢದ ರಾಯ್‍ಗಢ ಪ್ರದೇಶದ ಮೇಯರ್ ಆಗಿರುವ ಮಧು ಕಿನ್ನರ್ ಈ ಬಗ್ಗೆ ಪ್ರತಿಕ್ರಿಯಿಸಿ, ಈ ಸಮಾರಂಭದಲ್ಲಿ ಭಾಗಿಯಾಗಿದ್ದು ಬಹಳ ಖುಷಿಯಾಗಿದೆ. ನಮ್ಮಂತ ತೃತೀಯ ಲಿಂಗಿಗಳ ಸಂತೋಷ, ದು:ಖ ಕೇಳುವವರು ಇರಲಿಲ್ಲ. ಆದರೆ ಸರ್ಕಾರ ನಮ್ಮ ಬಗ್ಗೆ ಯೋಚಿಸಿ ಸಲಿಂಗ ಕಾಮ ಅಪರಾಧವಲ್ಲ ಎಂದಿದೆ. ಇದರಿಂದ ನಾವು ಕೂಡ ಮದುವೆ ಆಗಬಹುದು, ಸಂಗಾತಿ ಜೊತೆ ಚೆನ್ನಾಗಿ ಬಾಳಲು ಅನುವು ಮಾಡಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಈ ತೃತೀಯ ಲಿಂಗಿಗಳ ವಿವಾಹ ಟ್ರೆಂಡ್ ಆಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.