Tag: Chhota Rajan

  • ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆಯಿಂದ ಬಿಗ್‌ ರಿಲೀಫ್‌ – ಕೊಲೆ ಕೇಸ್‌ನಲ್ಲಿ ಜಾಮೀನು ಮಂಜೂರು

    ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆಯಿಂದ ಬಿಗ್‌ ರಿಲೀಫ್‌ – ಕೊಲೆ ಕೇಸ್‌ನಲ್ಲಿ ಜಾಮೀನು ಮಂಜೂರು

    ಮುಂಬೈ: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌ಗೆ (Chhota Rajan) ಬಿಗ್‌ ರಿಲೀಫ್‌ ಸಿಕ್ಕಿದೆ. ಗ್ಯಾಂಗ್‌ಸ್ಟರ್‌ ಶಿಕ್ಷೆಯನ್ನು ಅಮಾನತುಗೊಳಿಸಿ ಬಾಂಬೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

    ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರುವ ರಾಜನ್‌ಗೆ 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಶ್ಯೂರಿಟಿಯನ್ನು ಒದಗಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಇದನ್ನೂ ಓದಿ: ಪಾಕ್‌ನ ಐಎಸ್‌ಐ ಜೊತೆ ಸೇರಿ ಭಯೋತ್ಪಾದಕ ಕೃತ್ಯಕ್ಕೆ ಸಂಚು – ಅಪರಾಧಿಗೆ 6 ವರ್ಷಗಳ ಕಠಿಣ ಶಿಕ್ಷೆ

    2001ರ ಮೇ 4 ರಂದು ದಕ್ಷಿಣ ಮುಂಬೈನ ಗೋಲ್ಡನ್‌ ಕ್ರೌನ್‌ ಹೋಟೆಲ್‌ ಮಾಲೀಕ ಜಯ ಶೆಟ್ಟಿ ಎಂಬವರ ಹತ್ಯೆಯಾಗಿತ್ತು. ಇಬ್ಬರು ಅಪರಿಚಿತ ವ್ಯಕ್ತಿಗಳು, ಜಯ ಶೆಟ್ಟಿ ಅವರನ್ನು ಗುಂಡಿಕ್ಕಿ ಕೊಂದಿದ್ದರು.

    ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ವಿಶೇಷ ನ್ಯಾಯಾಲಯವು ಗ್ಯಾಂಗ್‌ಸ್ಟರ್‌ ರಾಜನ್‌ನನ್ನು ದೋಷಿ ಎಂದು ಘೋಷಿಸಿತ್ತು. ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಪತ್ರಕರ್ತ ಜ್ಯೋತಿರ್ಮಯ್ ಡೇ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಾಜನ್‌ಗೆ ಇದು ಎರಡನೇ ಜೀವಾವಧಿ ಶಿಕ್ಷೆಯಾಗಿತ್ತು. ಎರಡೂ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿರಲಿಲ್ಲ. ಇದನ್ನೂ ಓದಿ: ಕೆನ್ನೆಗೆ ಬಲವಾಗಿ ಹೊಡೆದ ಶಿಕ್ಷಕಿ – ಸಾವು ಬದುಕಿನ ನಡುವೆ ಬಾಲಕಿ ಹೋರಾಟ

    ರಾಜನ್‌ನನ್ನು 2015 ರಲ್ಲಿ ಇಂಡೋನೇಷ್ಯಾದಿಂದ ಭಾರತಕ್ಕೆ ಗಡೀಪಾರು ಮಾಡಿದ ನಂತರ ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಲಾದ 71 ಪ್ರಕರಣಗಳಲ್ಲಿ ಜಯ ಶೆಟ್ಟಿ ಕೊಲೆ ಪ್ರಕರಣವೂ ಸೇರಿದೆ.

    ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎ.ಎಂ.ಪಾಟೀಲ್ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಅಪರಾಧದ ಪಿತೂರಿ) ಜೊತೆಗೆ MCOCA ಮತ್ತು ಶಸ್ತ್ರಾಸ್ತ್ರ ಕಾಯಿದೆಯಡಿ ಅಪರಾಧಗಳ ಅಡಿಯಲ್ಲಿ ರಾಜನ್ ಅಪರಾಧಿ ಎಂದು ತೀರ್ಪು ನೀಡಿದ್ದರು. ಇದನ್ನು ಪ್ರಶ್ನಿಸಿ ರಾಜನ್ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ.

    ಇಂದಿನ ವಿಚಾರಣೆಯಲ್ಲಿ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ-ದೇರೆ ಮತ್ತು ಪೃಥ್ವಿರಾಜ್ ಕೆ ಚವಾಣ್ ಅವರ ವಿಭಾಗೀಯ ಪೀಠವು ಭೂಗತ ಪಾತಕಿಯ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಇಡೀ ಸಮುದಾಯ ಲಾರೆನ್ಸ್‌ ಬಿಷ್ಣೋಯ್ ಜೊತೆಗಿದೆ: ಮೌನ ಮುರಿದ ಕುಟುಂಬ

  • ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

    ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

    ಮುಂಬೈ: 2001 ರಲ್ಲಿ ಹೋಟೆಲ್‌ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ದರೋಡೆಕೋರ ಛೋಟಾ ರಾಜನ್ (Chhota Rajan) ಅಪರಾಧಿ ಎಂದು ಮುಂಬೈ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ.

    ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (MCOCA) ಅಡಿಯಲ್ಲಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎ.ಎಂ.ಪಾಟೀಲ್ ಅವರು ರಾಜನ್ ದೋಷಿ ಎಂದು ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ಬಸ್‌ ಕಂದಕಕ್ಕೆ ಉರುಳಿ‌ 22 ಮಂದಿ ಸಾವು – ಮೃತರ ಕುಟುಂಬಗ್ಗೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ!

    ಜಯಾ ಶೆಟ್ಟಿ ಅವರು ಸೆಂಟ್ರಲ್ ಮುಂಬೈನ ಗಾಮ್‌ದೇವಿಯಲ್ಲಿರುವ ಗೋಲ್ಡನ್ ಕ್ರೌನ್ ಹೋಟೆಲ್‌ನ ಮಾಲೀಕರಾಗಿದ್ದರು. ಇವರಿಗೆ ಛೋಟಾ ರಾಜನ್ ಗ್ಯಾಂಗ್‌ನಿಂದ ಸುಲಿಗೆ ಕರೆಗಳು ಬರುತ್ತಿದ್ದವು. 2001ರ ಮೇ 4 ರಂದು ಹೋಟೆಲ್‌ನಲ್ಲಿ ರಾಜನ್‌ ಗ್ಯಾಂಗ್‌ನ ಇಬ್ಬರು ಸದಸ್ಯರು ಶೆಟ್ಟಿಯನ್ನು ಗುಂಡಿಕ್ಕಿ ಕೊಂದರು.

    ಆರಂಭದಲ್ಲಿ ಬೆದರಿಕೆಯಿಂದಾಗಿ ಮಹಾರಾಷ್ಟ್ರ ಪೊಲೀಸರು ಹೋಟೆಲ್‌ ಮಾಲೀಕನಿಗೆ ಭದ್ರತೆ ಒದಗಿಸಿದ್ದರು. ಆದರೆ, ಕೊಲೆಯಾಗುವ ಎರಡು ತಿಂಗಳ ಮೊದಲು ಅವರ ಭದ್ರತೆಯನ್ನು ಹಿಂಪಡೆಯಲಾಗಿತ್ತು. 2015 ರ ಅಕ್ಟೋಬರ್‌ನಲ್ಲಿ ಇಂಡೋನೇಷ್ಯಾದಲ್ಲಿ ಬಂಧಿಸಿದ ನಂತರ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ಬಳಿಕ ಛೋಟಾ ರಾಜನ್ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿದೆ. ಇದನ್ನೂ ಓದಿ: ಜವಳಿ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ!

    ಇಬ್ಬರು ಶೂಟರ್‌ಗಳು ಜಯ ಶೆಟ್ಟಿಯನ್ನು ಗುಂಡಿಕ್ಕಿ ಕೊಂದಿದ್ದರು. ಹೋಟೆಲ್‌ನ ಮ್ಯಾನೇಜರ್ ಮತ್ತು ಉದ್ಯೋಗಿ ಶೂಟರ್‌ಗಳನ್ನು ಬೆನ್ನಟ್ಟಿ ಅವರಲ್ಲಿ ಒಬ್ಬನನ್ನು ಹಿಡಿದಿದ್ದರು. 2018 ರಲ್ಲಿ, ವೋರಾ ಅವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಲಾಯಿತು. ಆದರೆ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.

  • 16 ವರ್ಷ ತಲೆಮರೆಸಿಕೊಂಡಿದ್ದ ಮಂಗಳೂರಿನ ಆರೋಪಿ ಮುಂಬೈನಲ್ಲಿ ಬಂಧನ

    16 ವರ್ಷ ತಲೆಮರೆಸಿಕೊಂಡಿದ್ದ ಮಂಗಳೂರಿನ ಆರೋಪಿ ಮುಂಬೈನಲ್ಲಿ ಬಂಧನ

    – ಛೋಟಾ ರಾಜನ್ ಸಹಚರನ ಸಹೋದರ ಆರೋಪಿ

    ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಗ್ರಾಮದಲ್ಲಿ ನಡೆದ ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮೂಲತಃ ಮೂಲ್ಕಿ ನಿವಾಸಿ, ಸದ್ಯ ಮುಂಬೈನ ಸಕಿ ನಾಕಾದಲ್ಲಿ ವಾಸವಿರುವ ಚಂದ್ರಕಾಂತ್ ಪೂಜಾರಿ ಯಾನೆ ಅಣ್ಣು(55) ಬಂಧಿತ ಆರೋಪಿ ಎಂದು ವರದಿಯಾಗಿದೆ.

    ಏನಿದು ಪ್ರಕರಣ?
    ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10 ರಂದು ರಾತ್ರಿ ವಿಶ್ವನಾಥ್, ಅಮೀನ್ ಎಂಬವರ ಮನೆಗೆ ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿದ್ದರು. ಈ ವೇಳೆ ಮನೆಯವರಿಗೆ ಅವಾಚ್ಯವಾಗಿ ನಿಂದಿಸಿ, ಬಾಟ್ಲಿಯಿಂದ ತಲೆಗೆ ತೀವ್ರವಾಗಿ ಹಲ್ಲೆ ನಡೆಸಿದ್ದರು. ಜೊತೆಗೆ ಜೀವ ಬೆದರಿಕೆಯನ್ನೂ ಹಾಕಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಹಿಂದೂ ಯುವತಿಯ ಮದುವೆ ಮಾಡಿದ ಉಳ್ಳಾಲದ ಮುಸ್ಲಿಂ ಕುಟುಂಬ

    ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್‍ಐ ಧಮೇರ್ಂದ್ರ ಅವರು ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಚಂದ್ರಕಾಂತ್ ತಪ್ಪಿಸಿಕೊಂಡಿದ್ದ. ಈತನ ಪತ್ತೆಗೆ ಹಲವು ರೀತಿಯಲ್ಲಿ ಯತ್ನಿಸಿದರೂ ಈವರೆಗೆ ಸಿಕ್ಕಿರಲಿಲ್ಲ. ಎಲ್‍ಪಿಸಿ (Long Pending Case) ಪ್ರಕರಣದ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ಇರುವುದಾಗಿ ಸಣ್ಣ ಸುಳಿವು ಸಿಕ್ಕಿತು. ಮಾಹಿತಿಯ ಜಾಡು ಹಿಡಿದು ಹೊರಟ ಪೊಲೀಸರಿಗೆ ಆರೋಪಿ ಮುಂಬೈನ ಅಂಧೇರಿಯಲ್ಲಿ ತನ್ನ ಸ್ವರೂಪ ಮರೆಮಾಚಿ ತರಕಾರಿ ವ್ಯಾಪಾರ ಮಾಡುತ್ತಿರುವುದು ಪತ್ತೆಯಾಗಿದೆ. ಈ ವೇಳೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಛೋಟಾ ರಾಜನ್ ಸಹಚರನ ಸಹೋದರ ಈತ:
    ಆರೋಪಿ ಚಂದ್ರಕಾಂತ್ ವಿರುದ್ಧ ಮುಂಬೈನಲ್ಲಿಯೂ ಹೊಡೆದಾಟ ಪ್ರಕರಣ ದಾಖಲಾಗಿದೆ. ಅಲ್ಲದೆ, ಈತನ ಸಹೋದರ ವಾಸುದೇವ ಯಾನೆ ವಾಮನ ಎಂಬಾತನು ಛೋಟಾ ರಾಜನ್‍ನ ಸಹಚರನಾಗಿದ್ದ. ಈತನನ್ನು 2004ರಲ್ಲಿ ಮುಂಬೈ ಪೊಲೀಸರು ಎನ್‍ಕೌಂಟರ್ ಮಾಡಿದ್ದರು ಎನ್ನುವುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದುಪೊಲೀಸರು ತಿಳಿಸಿದ್ದಾರೆ.

    ಮಂಗಳೂರು ನಗರದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ನಿರ್ದೇಶನದಲ್ಲಿ ಡಿಸಿಪಿಗಳಾದ ಹರಿರಾಮ್ ಶಂಕರ್, ದಿನೇಶ್ ಕುಮಾರ್ ಬಾರಿಕೆ, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಜ್ಪೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಪಿಎಸ್‍ಐ ಪೂವಪ್ಪ, ಎಎಸ್‍ಐ ರಾಮ ಪೂಜಾರಿ, ಸಿಬ್ಬಂದಿ ರಶೀದ್ ಶೇಕ್, ಲಕ್ಷ್ಮಣ ಕಾಂಬ್ಳೆ, ಸಂತೋಷ ಡಿ.ಕೆ, ವಕೀಲ ಎನ್.ಲಮಾಣಿ ಪಾಲ್ಗೊಂಡಿದ್ದರು.

  • ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ: ಏಮ್ಸ್ ಆಸ್ಪತ್ರೆ ಸ್ಪಷ್ಟನೆ

    ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ: ಏಮ್ಸ್ ಆಸ್ಪತ್ರೆ ಸ್ಪಷ್ಟನೆ

    ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ ವರದಿಯಾಗಿತ್ತು. ಇಂತಹ ವರದಿಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಏಮ್ಸ್ ಆಸ್ಪತ್ರೆ ಅಧಿಕಾರಿಗಳು, ಛೋಟಾ ರಾಜನ್ ಇನ್ನೂ ಜೀವಂತವಾಗಿದ್ದಾರೆ. ಸಾವನ್ನಪ್ಪಿಲ್ಲ ಎಂದು ಹೇಳಿದ್ದಾರೆ.

    ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 62 ವರ್ಷ ವಯಸ್ಸಿನ ಪಾತಕಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಏಪ್ರಿಲ್ 26 ರಂದು ಏಮ್ಸ್‍ಗೆ ದಾಖಲಿಸಲಾಗಿತ್ತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿರುವುದನ್ನು ಏಮ್ಸ್ ನಿರಾಕರಿಸಿದೆ.

    ತಿಹಾರ್ ಜೈಲಿನ ಅಧಿಕಾರಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ತುತ್ತಾಗಿರೋದನ್ನ ನ್ಯಾಯಾಲಯಕ್ಕೆ ತಿಳಿಸಿದ್ದರು. ಅನಾರೋಗ್ಯ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿತ್ತು.

    2015ರಲ್ಲಿ ಇಂಡೋನೇಷ್ಯಾದ ಬಾಲಿ ಪೊಲೀಸರು ಛೋಟಾ ರಾಜನ್ ನನ್ನು ಭಾರತಕ್ಕೆ ಹಸ್ತಾಂತರಿಸಿತ್ತು. ಅಂದಿನಿಂದ ರಾಜನ್ ತಿಹಾರ್ ಜೈಲಿನಲ್ಲಿದ್ದ. ರಾಜನ್ ವಿರುದ್ಧ ಪ್ರಕರಣದ ವಿಚಾರಣೆ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ರಾಜನ್‍ಗೆ ಕೋವಿಡ್ ಸೋಂಕು ತಗುಲಿದ್ದರಿಂದ ಈ ಹಿಂದೆ ವಿಚಾರಣೆಗೆ ಹಾಜರುಪಡಿಸಿಲ್ಲ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದರು.

    ಛೋಟಾ ರಾಜನ್‍ನನ್ನು 2015ರ ಅಕ್ಟೋಬರ್ ನಲ್ಲಿ ಇಂಡೊನೇಷ್ಯಾದಲ್ಲಿ ಭಾರತದ ಅಧಿಕಾರಿಗಳು ಬಂಧಿಸಿದ್ದರು. ಆತನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. 75 ಅಪರಾಧಗಳ ಪೈಕಿ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಮಹರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ 20 ಕ್ಕೂ ಹೆಚ್ಚು ಪ್ರಕರಣಗಳು ರಾಜನ್ ವಿರುದ್ಧ ದಾಖಲಾಗಿವೆ.

    ಏನಿದು ಪ್ರಕರಣ:
    ನಂದು ವಾಜೆಕರ್ ಎಂಬ ಬಿಲ್ಡರ್ 2015 ರಲ್ಲಿ ಪುಣೆಯಲ್ಲಿ ಜಮೀನು ಖರೀದಿಸಿದ್ದನು. ಪರಮಾನಂದ ಠಕ್ಕರ್ ಎಂಬ ಏಜೆಂಟನಿಗೆ 2 ಕೋಟಿ ಕೊಡಬೇಕಾಗಿತ್ತು. ಆದರೆ ಪರಮಾನಂದ ಠಕ್ಕರ್ ಹೆಚ್ಚಿನ ಹಣವನ್ನು ಬೇಡಿಕೆಯಿಟ್ಟಿದ್ದಾನೆ. ಈ ಬೇಡಿಕೆಗೆ ವಾಜೇಕರ್ ಒಪ್ಪಲಿಲ್ಲ. ನಂತರ ಪರಮಾನಂದ ಠಕ್ಕರ್ ಛೋಟಾ ರಾಜನ್‍ನನ್ನು ಸಂಪರ್ಕಿಸಿ ಈ ಡೀಲ್ ಮಾಡುವಂತೆ ಹೇಳಿದ್ದನು. ನಂತರ ಛೋಟಾ ರಾಜನ್ ಬಿಲ್ಡರ್ ನಂದು ವಾಜೆಕರ್ಗೆ 26 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದನು. ಹಣವನ್ನು ನೀಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

  • ಛೋಟಾ ರಾಜನ್‍ಗೆ ಕೊರೊನಾ ಪಾಸಿಟಿವ್ – ಏಮ್ಸ್ ಗೆ ದಾಖಲು

    ಛೋಟಾ ರಾಜನ್‍ಗೆ ಕೊರೊನಾ ಪಾಸಿಟಿವ್ – ಏಮ್ಸ್ ಗೆ ದಾಖಲು

    ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ತಿಹಾರ್ ಜೈಲಿನಿಂದ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

    ಸೋಮವಾರ ತಿಹಾರ್ ಜೈಲಿನ ಅಧಿಕಾರಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ತುತ್ತಾಗಿರೋದನ್ನ ನ್ಯಾಯಾಲಯಕ್ಕೆ ತಿಳಿದರು. ಅನಾರೋಗ್ಯ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ. ರಾಜನ್ ಗೆ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ವರದಿಯಾಗಿದೆ.

    2015ರಲ್ಲಿ ಇಂಡೋನೇಷ್ಯಾದ ಬಾಲಿ ಪೊಲೀಸರು ಛೋಟಾ ರಾಜನ್ ನನ್ನು ಭಾರತಕ್ಕೆ ಹಸ್ತಾಂತರಿಸಿತ್ತು. ಅಂದಿನಿಂದ ರಾಜನ್ ತಿಹಾರ್ ಜೈಲಿನಲ್ಲಿದ್ದಾನೆ. ರಾಜನ್ ವಿರುದ್ಧ ಪ್ರಕರಣ ವಿಚಾರಣೆ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸೋಮವಾರ ವಿಚಾರಣೆ ಹಿನ್ನೆಲೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಛೋಟಾ ರಾಜನ್ ನನ್ನು ಹಾಜರುಪಡಿಸಿರಲಿಲ್ಲ. ರಾಜನ್‍ಗೆ ಕೋವಿಡ್ ಸೋಂಕು ತಗುಲಿದ್ದರಿಂದ ವಿಚಾರಣೆಗೆ ಹಾಜರು ಪಡಿಸಿಲ್ಲ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.

    ಛೋಟಾ ರಾಜನ್‍ನನ್ನು 2015ರ ಅಕ್ಟೋಬರ್ ನಲ್ಲಿ ಇಂಡೊನೇಷ್ಯಾದಲ್ಲಿ ಭಾರತದ ಅಧಿಕಾರಿಗಳು ಬಂಧಿಸಿದ್ದರು. ಆತನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. 75 ಅಪರಾಧಗಳ ಪೈಕಿ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಮಹರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ 20 ಕ್ಕೂ ಹೆಚ್ಚು ಪ್ರಕರಣಗಳು ರಾಜನ್ ವಿರುದ್ಧ ದಾಖಲಾಗಿದೆ.

    ಏನಿದು ಪ್ರಕರಣ:
    ನಂದು ವಾಜೆಕರ್ ಎಂಬ ಬಿಲ್ಡರ್ 2015 ರಲ್ಲಿ ಪುಣೆಯಲ್ಲಿ ಜಮೀನು ಖರೀದಿಸಿದ್ದನು. ಪರಮಾನಂದ ಠಕ್ಕರ್ ಎಂಬ ಏಜೆಂಟನಿಗೆ 2 ಕೋಟಿ ಕೊಡಬೇಕಾಗಿತ್ತು. ಆದರೆ ಪರಮಾನಂದ ಠಕ್ಕರ್ ಹೆಚ್ಚಿನ ಹಣವನ್ನು ಬೇಡಿಕೆಯಿಟ್ಟಿದ್ದಾನೆ. ಈ ಬೇಡಿಕೆಗೆ ವಾಜೇಕರ್ ಒಪ್ಪಲಿಲ್ಲ. ನಂತರ ಪರಮಾನಂದ ಠಕ್ಕರ್ ಛೋಟಾ ರಾಜನ್‍ನನ್ನು ಸಂಪರ್ಕಿಸಿ ಈ ಡೀಲ್ ಮಾಡುವಂತೆ ಹೇಳಿದ್ದನು. ನಂತರ ಛೋಟಾ ರಾಜನ್ ಬಿಲ್ಡರ್ ನಂದು ವಾಜೆಕರ್ಗೆ 26 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದನು. ಹಣವನ್ನು ನೀಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

  • ನಕಲಿ ಪಾಸ್‍ಪೋರ್ಟ್ ಕೇಸ್: ಚೋಟಾ ರಾಜನ್‍ಗೆ 7ವರ್ಷ ಜೈಲು ಶಿಕ್ಷೆ

    ನಕಲಿ ಪಾಸ್‍ಪೋರ್ಟ್ ಕೇಸ್: ಚೋಟಾ ರಾಜನ್‍ಗೆ 7ವರ್ಷ ಜೈಲು ಶಿಕ್ಷೆ

    ನವದೆಹಲಿ: ನಕಲಿ ಪಾಸ್‍ಪೋರ್ಟ್  ಪ್ರಕರಣದ ಅಪರಾಧಿ ಭೂಗತ ಪಾತಕಿ 55 ವರ್ಷದ ರಾಜೇಂದ್ರ ಸಹದೇವ್ ನಿಖಲ್ಜೆ ಅಲಿಯಾಸ್ ಚೋಟಾ ರಾಜನ್‍ಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಸೋಮವಾರ ತೀರ್ಪು ನೀಡಿದ್ದ ನ್ಯಾಯಾಧೀಶ ವೀರೇಂದ್ರ ಕುಮಾರ್ ಗೋಯಲ್ ಇಂದು ರಾಜನ್ ಸೇರಿ ಒಟ್ಟು ನಾಲ್ವರು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

    ಏನಿದು ಪ್ರಕರಣ?
    3 ಮಂದಿ ಸರ್ಕಾರಿ ಅಧಿಕಾರಿಗಳ ನೆರವಿನಿಂದ ಮೋಹನ್ ಕುಮಾರ್ ಎಂಬ ಹೆಸರಿನ ನಕಲಿ ಪಾಸ್‍ಪೋರ್ಟ್ ಅನ್ನು ಹೊಂದಿದ್ದ ಆರೋಪ ಚೋಟಾ ರಾಜನ್ ಮೇಲಿತ್ತು. ಈ ಕೇಸ್ ಬಗ್ಗೆ ಸಿಬಿಐ ತಂಡ ತನಿಖೆ ನಡೆಸಿ ಚೋಟಾ ಹಾಗೂ ಮೂವರು ನಿವೃತ್ತ ಸರ್ಕಾರಿ ಅಧಿಕಾರಿಗಳ ಮೇಲೆ ಆರೋಪ ಪಟ್ಟಿ ಸಲ್ಲಿಸಿದ್ದರು. 2016ರ ಜೂನ್ 8ರಂದು ಈ ಸಂಬಂಧ ಪಾಸ್‍ಪೋರ್ಟ್ ಅಧಿಕಾರಿಗಳಾದ ಜಯಶ್ರೀ ದತ್ತಾತ್ರೇಯ ರಹಾಟೆ, ದೀಪಕ್ ನಟವರ್‍ಲಾಲ್ ಷಹಾ ಹಾಗೂ ಲಲಿತಾ ಲಕ್ಷ್ಮಣ್ ಮತ್ತು ಚೋಟಾರಾಜನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಪಾಸ್‍ಪೋರ್ಟ್ ಕಾಯಿದೆ ಅನ್ವಯ ಮೌಲ್ಯಯುತ ಭದ್ರತಾ ದಾಖಲೆಗಳ ನಕಲು, ಕ್ರಿಮಿನಲ್ ಪ್ರಕರಣ ಹಾಗೂ ಪಿತೂರಿ ಪ್ರಕರಣವೆಂದು ಪರಿಗಣಿಸಿ ಆರೋಪಿಸಲಾಗಿತ್ತು.

    ಚೋಟಾರಾಜನ್‌ಗೆ ಮೋಹನ್‌ಕುಮಾರ್‌ ಎಂಬ ಹೆಸರಿನಲ್ಲಿ ಜಯಶ್ರೀ, ಷಹಾ ಹಾಗೂ ಲಕ್ಷ್ಮಣ್ 1998–99ರಲ್ಲಿ ಬೆಂಗಳೂರಿನಲ್ಲಿ ಪಾಸ್‍ಪೋರ್ಟ್ ನೀಡಿದ್ದಾರೆ ಎಂದು ವಿರುದ್ಧ ಸಿಬಿಐ ತನ್ನ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿತ್ತು.

    ರಾಜನ್ ಬೆಂಗಳೂರಿನ ಪ್ರಾದೇಶಿಕ ಪಾಸ್‍ಪೋರ್ಟ್ ಕಚೇರಿಯಿಂದ ಮೋಹನ್ ಕುಮಾರ್ ಹೆಸರಿನಲ್ಲಿ ಪಾಸ್‍ಪೋರ್ಟ್ ಪಡೆದಿದ್ದರೆ, ಇನ್ನೊಂದು ಪಾಸ್‍ಪೋರ್ಟನ್ನು ಸಿಡ್ನಿಯ ಭಾರತೀಯ ದೂತಾವಾಸ ಕೇಂದ್ರದಿಂದ ಪಡೆದುಕೊಂಡಿದ್ದ.

    ಚೋಟಾ ರಾಜನ್ ವಿರುದ್ಧ ಮಹಾರಾಷ್ಟ್ರ, ದೆಹಲಿ, ಉತ್ತರಪ್ರದೇಶ ಹಾಗೂ ಗುಜರಾತ್ ರಾಜ್ಯಗಳು ಸೇರಿದಂತೆ ಸುಮಾರು 70 ಪ್ರಕರಣಗಳನ್ನು ಸಿಬಿಐ ದಾಖಲಿಸಿತ್ತು. ಪ್ರಸ್ತುತ ಈಗ ಚೋಟಾ ರಾಜನ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

    ಮಂಡ್ಯ ಪಾಸ್‍ಪೋರ್ಟ್: ಚೋಟಾ ರಾಜನ್ ತನಿಖಾ ಸಂಸ್ಥೆಗಳ ಕಣ್ತಪ್ಪಿಸುವ ಉದ್ದೇಶದಿಂದ ನಕಲಿ ಪಾಸ್‍ಪೋರ್ಟ್ ಗಳನ್ನು ಬಳಸಿ ವ್ಯವಹಾರ ನಡೆಸುತ್ತಿದ್ದ. ಇಂಡೋನೇಷಿಯಾದಲ್ಲಿ ಬಂಧನದ ವೇಳೆ ಕರ್ನಾಟಕದ ಮಂಡ್ಯ ಜಿಲ್ಲೆಯ ಹೆಸರುಳ್ಳ ನಕಲಿ ಪಾಸ್‍ಪೋರ್ಟ್ ಈತನ ಬಳಿಯಿತ್ತು. ಆಸ್ಟ್ರೇಲಿಯಾದ ಸಿಡ್ನಿಯಿಂದ ಇಂಡೋನೇಷಿಯಾಗೆ ಚೋಟಾ ರಾಜನ್ ತೆರಳುತ್ತಿರುವ ಬಗ್ಗೆ ತನಿಖಾ ಸಂಸ್ಥೆಗಳಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಆದರೆ ಪಾಸ್ ಪೋರ್ಟ್ ಪರಿಶೀಲನೆ ವೇಳೆ ಮೋಹನ್ ಕುಮಾರ್ ಎಂಬ ಹೆಸರಿನ ವ್ಯಕ್ತಿಯನ್ನು ಬಾಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಇದರಿಂದಾಗಿ ಆರಂಭದಲ್ಲಿ ತನಿಖಾ ಸಂಸ್ಥೆಗಳಲ್ಲಿ ಗೊಂದಲ ಹುಟ್ಟಿಸಿತ್ತು. ಅಂತಿಮವಾಗಿ 2015ರ ಅಕ್ಟೋಬರ್‍ನಲ್ಲಿ ಚೋಟಾ ರಾಜನನ್ನು ಬಾಲಿ ಪೊಲೀಸರು ಬಂಧಿಸಿದರು.