Tag: chicken sambar

  • ಚಿಕನ್ ಸಾಂಬಾರ್‌ಗಾಗಿ ಗಂಡ, ಹೆಂಡತಿಯ ನಡುವೆ ಜಗಳ – ಕೊಲೆಯಲ್ಲಿ ಅಂತ್ಯ

    ಚಿಕನ್ ಸಾಂಬಾರ್‌ಗಾಗಿ ಗಂಡ, ಹೆಂಡತಿಯ ನಡುವೆ ಜಗಳ – ಕೊಲೆಯಲ್ಲಿ ಅಂತ್ಯ

    ದಾವಣಗೆರೆ: ಸಂಸಾರದಲ್ಲಿ ಎಲ್ಲವು ಸರಿ ಇದ್ದರೆ ಸುಖವಾಗಿ ಇರುತ್ತದೆ. ಏನಾದರೂ ಅನುಮಾನ ಮನಸ್ತಾಪಗಳು ಬಂದರೆ ನಿಜಕ್ಕೂ ನರಕವಾಗುತ್ತದೆ. ಸಂಸಾರದಲ್ಲಿ ಮನಸ್ತಾಪಗಳು ಬಂದು ಜೀವವನ್ನು ಕಳೆದುಕೊಳ್ಳುವಂತಾಗುತ್ತದೆ. ಅದೇ ರೀತಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿ ಕೋಡು ಗ್ರಾಮದಲ್ಲಿ ಗಂಡ ಹೆಂಡತಿಯ ನಡುವೆ ಚಿಕನ್ ಊಟದ ವಿಚಾರವಾಗಿ ಜಗಳವಾಗಿ ತಾರಕಕ್ಕೇ ಏರಿ ತನ್ನ ಹೆಂಡತಿಯನ್ನು ಪತಿಯೇ ಚಾಕುವಿನಿಂದ ಹಿರಿದುಕೊಲೆ ಮಾಡಿದ್ದಾನೆ.

    ಕೊಲೆಯಾದ ದುರ್ದೈಯನ್ನು ಶೀಲಾ ಎಂದು ಗುರುತಿಸಲಾಗಿದ್ದು, ಈಕೆಗೆ ಬನ್ನಿಕೋಡು ಗ್ರಾಮದ ರೋಡ್ ರೋಲರ್ ಆಪರೇಟರ್ ಆಗಿದ್ದ ಕೆಂಚಪ್ಪ ಜೊತೆ 9 ವರ್ಷಗಳ ಹಿಂದೆ ಮದುವೆಯಾಗಿತ್ತು. ಹರಿಹರ ತಾಲೂಕಿನ ವಾಸನ ಗ್ರಾಮದ ಶೀಲಾಳನ್ನು ಕೆಂಚಪ್ಪ ಪ್ರೀತಿಸಿದ್ದು, ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನೆಯಿಂದ ಓಡಿ ಬಂದು ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಹೇಗೋ ಸುಖವಾಗಿ ಸಂಸಾರ ಮಾಡಿ ಒಂದು ಮುದ್ದಾದ ಮಗುವನ್ನು ಪಡೆದಿದ್ದರು. ಆಗ ಕೆಂಚಪ್ಪನ ಅಸಲಿ ಸತ್ಯ ಗೊತ್ತಾಗಿದೆ. ಕೆಂಚಪ್ಪನಿಗೆ ಈಗಾಗಲೇ ಮದುವೆಯಾಗಿದ್ದು, ಆಕೆಗೆ ಮಕ್ಕಳಿಲ್ಲ ಎನ್ನುವ ಕಾರಣಕ್ಕೆ ತನ್ನನ್ನು ಮದುವೆಯಾಗಿರುವ ವಿಚಾರ ಶೀಲಾಗೆ ತಿಳಿದು ಬಂದಿದೆ. ಇದರಿಂದ ಪ್ರತಿನಿತ್ಯ ಜಗಳ ಶುರುವಾಗಿದೆ. ಕೆಂಚಪ್ಪ ಕೂಡ ಮದ್ಯ ಸೇವನೆ ಮಾಡಿ ರಾದ್ಧಾಂತ ಮಾಡುತ್ತಿದ್ದ, ಇದು ಎರಡು ಮನೆಯವರಿಗೆ ಗೊತ್ತಾಗಿ ರಾಜೀ ಪಂಚಾಯಿತಿ ಮಾಡಿ ಹೋಗಿದ್ದರು. ಆದರೆ ಕಳೆದ ರಾತ್ರಿ ಮದ್ಯ ಸೇವನೆ ಮಾಡಿ ಬಂದ ಕೆಂಚಪ್ಪ ಹೆಂಡತಿಗೆ ಚಿಕನ್ ಅಡುಗೆ ಮಾಡಿಲ್ಲ ಎಂದು ಜಗಳವಾಡಿ ಕೊನೆಗೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಭಾರೀ ಮಳೆಯಿಂದ ಭೂಕುಸಿತ – ಎರಡುವರೆ ವರ್ಷದ ಮಗು ಸೇರಿ ನಾಲ್ವರು ಸಾವು

    crime

    ಒಂದು ಮಗು ಆಗುವವರೆಗೂ ಚೆನ್ನಾಗಿದ್ದ ಕೆಂಚಪ್ಪ ನಂತರ ನಿತ್ಯ ಕುಡಿದು ಬಂದು ಜಗಳವಾಡುತ್ತಿದ್ದ ಶೀಲಾಳ ಬಗ್ಗೆ ಅನುಮಾನ ಪಡುತ್ತಿದ್ದ ಎನ್ನಲಾಗಿದೆ. ಇದರಿಂದ ಶೀಲಾ ತನ್ನ 4 ವರ್ಷದ ಮಗಳನ್ನು ವಾಸನದಲ್ಲಿರುವ ತಾಯಿ ಮನೆಯಲ್ಲಿಯೇ ಬಿಟ್ಟಿದ್ದಳು, ಅಲ್ಲದೇ ಕಳೆದ ಜೂನ್ 7ರಂದು ಮಗಳ ಹುಟ್ಟುಹಬ್ಬವನ್ನು ತವರು ಮನೆಯಲ್ಲಿಯೇ ಮಾಡಿ ಬನ್ನಿಕೋಡ್ ಗೆ ಬಂದಿದ್ದರು. ಹುಟ್ಟು ಹಬ್ಬಕ್ಕೂ ಕೂಡ ಕೆಂಚಪ್ಪ ಹೋಗಿರಲಿಲ್ಲ. ತವರಿನಿಂದ ವಾಪಸ್ಸು ಬಂದ ನಂತರ ಮತ್ತೆ ಜಗಳವಾಡಿದ್ದ, ಅಲ್ಲದೇ ಸಂಜೆ ಬರುವುದರೊಳಗೆ ಚಿಕನ್ ಮಾಡು ಎಂದು ಹೇಳಿ ಹೋಗಿದ್ದಾನೆ. ರಾತ್ರಿ ಮದ್ಯ ಸೇವನೆ ಮಾಡಿ ಬಂದ ಕೆಂಚಪ್ಪ ಶೀಲಾಳ ಜೊತೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇದೀಗ ಈ ಸಂಬಂಧ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಳು ಮತ್ತೆ ಮದ್ಯದಿಂದ ಒಂದು ಸಂಸಾರವೇ ಹಾಳಾಗಿದ್ದು, ತಂದೆ, ತಾಯಿಯನ್ನು ಕಳೆದುಕೊಂಡು ಪುಟ್ಟ ಮಗು ಮಾತ್ರ ಅನಾಥವಾಗಿದೆ. ಇದನ್ನೂ ಓದಿ: ರಾಜ್ಯಸಭೆ ಫೈಟ್‍ನಲ್ಲಿ ಟ್ವಿಸ್ಟ್ – ಕಾಂಗ್ರೆಸ್, ಜೆಡಿಎಸ್ ಮಧ್ಯೆ ‘ಆತ್ಮಸಾಕ್ಷಿ’ ಫೈಟ್

  • ಸ್ಪೆಷಲ್ ನಾಟಿ ಕೋಳಿ ಸಾರು

    ಸ್ಪೆಷಲ್ ನಾಟಿ ಕೋಳಿ ಸಾರು

    ನಾಟಿ ಸ್ಟೈಲ್ ಆಹಾರ ಎಂದುರೆ ಹಲವರು ತುಂಬಾ ಇಷ್ಟ ಪಟ್ಟು ಸವಿಯುತ್ತಾರೆ. ಅಡುಗೆಮನೆಯಲ್ಲಿರುವ ಕೆಲವು ಸುಲಭ ಪರಿಕರಗಳಿಂದ ಭಿನ್ನವಾದ ರುಚಿಯಲ್ಲಿ ಅತ್ಯುತ್ತಮವಾದ ಖಾದ್ಯದೊಂದನ್ನು ಇಂದೇಕೆ ತಯಾರಿಸಬಾರದು? ಮೊಟ್ಟೆ, ತರಕಾರಿಗಳು ನಾಟಿಬೇಕು ಎಂದು ಕೇಳುವ ನಾವು ಇಂದು ನಾಟಿ ಸ್ಟೈಲ್‍ನಲ್ಲಿ ಅಡುಗೆ ಮಾಡಿ ಕುಟುಂಬದವರಿಗೆ ನೀಡಿದರೆ ನಿಜ್ವಾಗಲೂ ತುಂಬಾ ಇಷ್ಟ ಪಟ್ಟು ತಿನ್ನುತ್ತಾರೆ. ಹಾಗಿದ್ದರೆ ಇನ್ನೇಕೆ ತಡ ಬನ್ನಿ ರುಚಿಯಾದ ನಾಟಿಕೋಳಿ ಸಾರು ಮಾಡೋಣ


    ಬೇಕಾಗುವ ಸಾಮಗ್ರಿಗಳು:
    * ಈರುಳ್ಳಿ – 1,
    * ಬೆಳ್ಳುಳ್ಳಿ-2
    * ಶುಂಠಿ – ಸ್ವಲ್ಪ
    * ಮೆಣಸಿನಕಾಯಿ – 6
    * ಹುರಿಗಡಲೆ – 1 ಚಮಚ
    * ಗಸೆಗಸೆ- ಚಮಚ
    * ಚಕ್ಕೆ- 1
    * ಲವಂಗ -2
    * ದನಿಯಾ ಪುಡಿ- 2 ಚಮಚ
    * ಕೊತ್ತಂಬರಿ ಸೊಪ್ಪು- ಸ್ವಲ್ಪ
    * ತೆಂಗಿನತುರಿ- 1 ಕಪ್
    * ಅಡುಗೆ ಎಣ್ಣೆ- ಅರ್ಧ ಕಪ್
    * ಟೊಮೆಟೊ-1
    * ಮೆಂತ್ಯ ಸೊಪ್ಪು- ಸ್ವಲ್ಪ
    * ಅರಿಸಿಣ ಪುಡಿ – 1 ಚಮಚ ಇದನ್ನೂ ಓದಿ:  ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ


    ಮಾಡುವ ವಿಧಾನ:

    * ದನಿಯಾ ಪುಡಿ, ಮೆಣಸಿನಕಾಯಿ, ಶುಂಠಿ, ಬೆಳ್ಳುಳ್ಳಿ, ಈರುಳ್ಳಿ, ಹುರಿಗಡಲೆ, ಗಸೆಗಸೆ, ತೆಂಗಿನತುರಿ, ಈ ಎಲ್ಲಾ ಪದಾರ್ಥಗಳನ್ನು ಒಂದು ಚಮಚ ಎಣ್ಣೆ ಹಾಕಿ ಹುರಿದು, ನುಣ್ಣಗೆ ರುಬ್ಬಿಕೊಳ್ಳಬೇಕು.

    * ಕುಕರ್‍ಗೆ ಅಡುಗೆ ಎಣ್ಣೆ ಹಾಕಿ ಬಿಸಿಯಾದ ಮೇಲೆ ಲವಂಗ, ಚಕ್ಕೆ, ಈರುಳ್ಳಿ, ಟೊಮೆಟೊ, ಸ್ವಲ್ಪ ಮೆಂತ್ಯ ಸೊಪ್ಪು, ನಂತರ ನಾಟಿ ಕೋಳಿಯನ್ನು ಸೇರಿಸಿ. ರುಚಿಗೆ ತಕ್ಕಷ್ಟು ಉಪ್ಪು, ಅರಿಸಿಣ ಪುಡಿ ಹಾಕಿ 5 ನಿಮಿಷ ಬಾಡಿಸಿಕೊಳ್ಳಿ.

    * ಈಗ ಇದಕ್ಕೆ ರುಬ್ಬಿದ ಮಸಾಲೆ ಸೇರಿಸಿ ನೀರು ಹಾಕಿ ಕುಕರ್ ಮುಚ್ಚಿ 5 ವಿಷಲ್ ಕೂಗಿಸಿದರೆ ಗೌಡ್ರು ಸ್ಪೆಷಲ್ ನಾಟಿಕೋಳಿ ಸಾರು ಮುದ್ದೆಯೊಂದಿಗೆ ಸವಿಯಲು ಸಿದ್ಧವಾಗುತ್ತದೆ.