Tag: chicody

  • ಹಬ್ಬದಂದೇ ಅಂಗಡಿಯಲ್ಲಿ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಬಟ್ಟೆಗಳು ಭಸ್ಮ

    ಹಬ್ಬದಂದೇ ಅಂಗಡಿಯಲ್ಲಿ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಬಟ್ಟೆಗಳು ಭಸ್ಮ

    ಚಿಕ್ಕೋಡಿ: ಗಣೇಶ ಹಬ್ಬದಂದೇ ಬಟ್ಟೆ ಅಂಗಡಿಗೆ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಬೆಲೆ ಬಾಳುವ ಬಟ್ಟೆಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

    ಈ ಅವಘಡ ಬೆಳಗ್ಗೆ 8.30 ಕ್ಕೆ ಸಂಭವಿಸಿದ್ದು, ಪಿಂಟು ರಾಥೋಡ್ ಎಂಬವರಿಗೆ ಸೇರಿದ ಆರ್ ಆರ್ ಕಲೆಕ್ಷನ ಬಟ್ಟೆ ಅಂಗಡಿಗೆ ಬೆಂಕಿ ತಗುಲಿದೆ. ಇದರ ಪರಿಣಾಮ ಲಕ್ಷಾಂತರ ಮೌಲ್ಯದ ಬೆಲೆ ಬಾಳುವ ಬಟ್ಟೆಗಳು ಬೆಂಕಿಗೆ ಆಹುತಿಯಾಗಿದ್ದು, ಭಾರೀ ಅನಾಹುತ ತಪ್ಪಿದೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಪಾಯಗಳು ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಮಾರುಕಟ್ಟೆ ಪ್ರದೇಶದಲ್ಲಿ ಅಂಗಡಿ ಇದ್ದರೂ ಬೇರೆ ಎಲ್ಲೂ ವ್ಯಾಪಿಸದ ಬೆಂಕಿ ರಾಥೋಡ್ ಅವರ ಅಂಗಡಿಯಲ್ಲಿ ಕಾಣಿಸಿಕೊಂಡಿದೆ.

    ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv