Tag: Chief Election Commissioner

  • ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

    ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

    ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (Chief Election Commissioner) ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.

    ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದು, ನಿರ್ಗಮಿತ ಆಯುಕ್ತ ರಾಜೀವ್ ಕುಮಾರ್ (Rajiv Kumar) ಅವರ ಸ್ಥಾನವನ್ನು ತುಂಬಲಿದ್ದಾರೆ.

    ಹಾಲಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಅವರಿಗೆ ಮಂಗಳವಾರ 65 ವರ್ಷ ಪೂರ್ಣಗೊಳ್ಳಲಿವೆ. ರಾಜೀವ್ ಕುಮಾರ್ ಇಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಆಯ್ಕೆ ಸಮಿತಿಯು ಹೆಸರು ಅಂತಿಮಗೊಳಿಸಲು ಸೋಮವಾರ ಸಭೆ ನಡೆಸಿತ್ತು.

    ಈ ಸಭೆಯಲ್ಲಿ ಕೇದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಭಾಗಿಯಾಗಿದ್ದರು. ಸಿಇಸಿ ಹಾಗೂ ಚುನಾವಣಾ ಆಯುಕ್ತರ ನೇಮಕ ಕುರಿತ ಹೊಸ ನೇಮಕಾತಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕೆಲವೇ ದಿನಗಳಲ್ಲಿ ವಿಚಾರಣೆ ನಡೆಸಲಿದ್ದು, ಫೆಬ್ರವರಿ 19ರವರೆಗೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ರಾಹುಲ್ ಗಾಂಧಿ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ರಾಹುಲ್ ಗಾಂಧಿ ವಿರೋಧದ ನಡುವೆಯೂ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ.

     ಸುಖಬೀರ್ ಸಿಂಗ್, ಇಂದು ನಿವೃತ್ತರಾಗಲಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ಕುಮಾರ್‌, ಜ್ಞಾನೇಶ್‌ ಕುಮಾರ್‌
    ಸುಖಬೀರ್ ಸಿಂಗ್, ಇಂದು ನಿವೃತ್ತರಾಗಲಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ಕುಮಾರ್‌, ಜ್ಞಾನೇಶ್‌ ಕುಮಾರ್‌

    1989 ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ ಅಧಿಕಾರಿ ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಇದನ್ನೂ ಓದಿ: ಬ್ಯಾನ್ ಆದ ಚೀನಿ ಡ್ರೋನ್ ಹಾರಿಸಿ ವಿವಾದ ಮೈಮೇಲೆ ಎಳೆದುಕೊಂಡ ರಾಹುಲ್ ಗಾಂಧಿ

    ಕೇಂದ್ರ ಗೃಹ ಸಚಿವಾಲಯದ ಭಾಗವಾಗಿದ್ದ ಜ್ಞಾನೇಶ್‌ ಕುಮಾರ್‌ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಿರ್ಧಾರಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕುಮಾರ್ ಅವರು ಮಾರ್ಚ್ 15, 2024 ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು.

    ಜನವರಿ 26, 2029 ರವರೆಗೆ ಹುದ್ದೆಯಲ್ಲಿರುವ ಜ್ಞಾನೇಶ್ ಕುಮಾರ್ ಅವರು ಮುಂದೆ 20 ವಿಧಾನಸಭಾ ಚುನಾವಣೆಗಳು, 2027 ರಲ್ಲಿ ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಚುನಾವಣೆಗಳು ಮತ್ತು 2029 ರ ಲೋಕಸಭಾ ಚುನಾವಣೆಯ ಸಿದ್ಧತೆಗಳ ಮೂಲಕ ಆಯೋಗವನ್ನು ಸಂಪೂರ್ಣವಾಗಿ ಮುನ್ನಡೆಸಲಿದ್ದಾರೆ.

    2023 ರಲ್ಲಿ ಸಂಸತ್ತು ಕಾಯ್ದೆ ರಚನೆಯಾಗುವ ಮೊದಲು ಪ್ರಧಾನಿಯ ಸಲಹೆಯ ಮೇರೆಗೆ ಭಾರತದ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರನ್ನು ನೇಮಿಸುತ್ತಿದ್ದರು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ 2023 ರ ಅಡಿಯಲ್ಲಿ ಕಾನೂನು ಸಚಿವರ ನೇತೃತ್ವದ ಸಮಿತಿಯು ಐದು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಅಂತಿಮವಾಗಿ ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರು ಅಂತಿಮವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ.

     

  • ಫೆ.18ಕ್ಕೆ ರಾಜೀವ್ ಕುಮಾರ್ ನಿವೃತ್ತಿ – ಯಾರಾಗ್ತಾರೆ ಮುಂದಿನ ಮುಖ್ಯ ಚುನಾವಣಾ ಆಯುಕ್ತ?

    ಫೆ.18ಕ್ಕೆ ರಾಜೀವ್ ಕುಮಾರ್ ನಿವೃತ್ತಿ – ಯಾರಾಗ್ತಾರೆ ಮುಂದಿನ ಮುಖ್ಯ ಚುನಾವಣಾ ಆಯುಕ್ತ?

    ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ರಾಜೀವ್‌ ಕುಮಾರ್‌ (Rajiv Kumar) ಅವರ ಅಧಿಕಾರ ಅವಧಿ ಇದೇ ಫೆ.18ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ಮಟ್ಟದ ಉನ್ನತ ಮಟ್ಟದ ಆಯ್ಕೆ ಸಮಿತಿ ಸೋಮವಾರ ಸಭೆ ಸೇರುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಯಲ್ಲಿ ಪಿಎಂ ಮೋದಿ (PM Modi), ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇದ್ದಾರೆ. ಪ್ರಧಾನಿಗಳ ಅಧಿಕೃತ ನಿವಾಸದಲ್ಲೇ ಸಭೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಮೊದಲು ಸರ್ಚಿಂಗ್‌ ಕಮಿಟಿಯಿಂದ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರನ್ನು ಸಮಿತಿ ಶಿಫಾರಸು ಮಾಡಲಿದೆ. ನಂತರ ಅಧ್ಯಕ್ಷರು ಶಿಫಾರಸಿನ ಆಧಾರದ ಮೇಲೆ ಮುಂದಿನ ಸಿಇಸಿಯನ್ನು ನೇಮಿಸಲಿದ್ದಾರೆ. ಇದನ್ನೂ ಓದಿ: ಕಳ್ಳರ ಹಾವಳಿಗೆ ಒನಕೆ ಓಬವ್ವನ ರೂಪ ತಾಳಿದ ಮಹಿಳೆಯರು – ರಾತ್ರಿ ಗಸ್ತು ಸಂಚಾರ

    ರಾಜೀವ್ ಕುಮಾರ್ ನಂತರ ಜ್ಞಾನೇಶ್ ಕುಮಾರ್ ಅತ್ಯಂತ ಹಿರಿಯ ಚುನಾವಣಾ ಆಯುಕ್ತರಾಗಿದ್ದು, ಅವರ ಅಧಿಕಾರ ಅವಧಿಯು ಜನವರಿ 26, 2029ರ ವರೆಗೆ ಇದೆ. ನಂತರದಲ್ಲಿ ಸುಖಬೀರ್ ಸಿಂಗ್ ಸಂಧು ಇದ್ದಾರೆ.

    ರಾಜೀವ್‌ ಕುಮಾರ್‌ ಮುಂದಿನ ನಡೆ ಏನು?
    ನಿವೃತ್ತಿ ಬಳಿಕ ತಮ್ಮ ಮುಂದಿನ ನಡೆ ಏನೆಂಬುದನ್ನು ಈಗಾಗಲೇ ರಾಜೀವ್‌ ಕುಮಾರ್‌ ಬಹಿರಂಗಪಡಿಸಿದ್ದಾರೆ. ನಿವೃತ್ತಿ ಬಳಿಕ ಮುಂದಿನ ನಾಲ್ಕೈದು ತಿಂಗಳು ಹಿಮಾಲಯಕ್ಕೆ ತೆರಳುವುದಾಗಿ ಹೇಳಿದ್ದಾರೆ. ನನಗೆ ಸ್ವಲ್ಪ ಏಕಾಂತ ಮತ್ತು ಸ್ವಯಂ ಅಧ್ಯಯನ ಬೇಕಿರುವುದರಿಂದ ಆತ್ಮಾವಲೋಕನ ಮಾಡಿಕೊಳ್ಳುವತ್ತ ಕಾಲ ಕಳೆಯುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉದಯಗಿರಿ ಗಲಭೆ ಕೇಸ್‌ – ದಾಂಧಲೆ ಮಾಡುವವರ ವಿರುದ್ಧ ಬುಲ್ಡೋಜರ್‌ ಕ್ರಮ ಆಗುತ್ತಾ? – ಪರಮೇಶ್ವರ್‌ ಹೇಳಿದ್ದೇನು?

  • ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

    ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

    ನವದೆಹಲಿ: ದೇಶದ ಮುಖ್ಯ ಚುನಾವಣಾ ಆಯುಕ್ತರನ್ನು (Chief Election Commissioner) ನೇಮಿಸುವ ಪ್ರಕ್ರಿಯೆಯಿಂದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (Chief Justice of India) ಅವರನ್ನು ಹೊರಗಿಡುವ ಸಂಬಂಧ ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿದೆ.

    ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವೆಗಳ ಷರತ್ತುಗಳು ಮತ್ತು ಅಧಿಕಾರ ಅವಧಿ) ಮಸೂದೆ 2023 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಮಂಡಿಸಿದರು.

    ಮಸೂದೆಯಲ್ಲಿ ಏನಿದೆ?
    ಚುನಾವಣಾಧಿಕಾರಿಗಳನ್ನು ಒಳಗೊಂಡಿರುವ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡಬೇಕು. ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ (ಅಧಿಕೃತ ವಿರೋಧ ಪಕ್ಷದ ನಾಯಕ ಇಲ್ಲದೇ ಇದ್ದರೆ ಅತಿ ದೊಡ್ಡ ಪಕ್ಷದ ನಾಯಕ)  ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಸಂಪುಟ ಸಚಿವರು ಇದರ ಸದಸ್ಯರಾಗಿರುತ್ತಾರೆ. ಪ್ರಧಾನ ಮಂತ್ರಿ ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಚುನಾವಣಾ ಆಯುಕ್ತರಾಗುವ ಅಧಿಕಾರಿ ಭಾರತ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಹುದ್ದೆಯನ್ನು ಹೊಂದಿರಬೇಕು ಎಂಬ ಅಂಶ ಮಸೂದೆಯಲ್ಲಿದೆ. ಇದನ್ನೂ ಓದಿ: ಕ್ರೋಮ್‌, ಫೈರ್‌ಫಾಕ್ಸ್‌, ಎಡ್ಜ್‌ಗೆ ಸೆಡ್ಡು – ದೇಶಿ ಬ್ರೌಸರ್‌ ಅಭಿವೃದ್ಧಿ ಪಡಿಸಿ, ಕೋಟಿ ರೂ. ಗೆಲ್ಲಿ

    ಹಿಂದೆ ಹೇಗಿತ್ತು?
    ಸಂವಿಧಾನದ 324ನೇ ವಿಧಿಯ ಅನುಸಾರ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರನ್ನು ಪ್ರಧಾನ ಮಂತ್ರಿಯ ಸಲಹೆಯ ಮೇರೆಗೆ ನೇಮಿಸುತ್ತಿದ್ದರು.

    ಸುಪ್ರೀಂ ತೀರ್ಪು ಏನಿತ್ತು?
    ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂನಂತಹ ವ್ಯವಸ್ಥೆ ಬೇಕು ಎಂದು ಕೋರಿ ಹಲವು ಅರ್ಜಿಗಳು ಸಲ್ಲಿಕೆಯಾಗಿತ್ತು. ನ್ಯಾ. ಕೆ.ಎಂ ಜೋಸೆಫ್, ನ್ಯಾ. ಅಜಯ್ ರಸ್ತೋಗಿ, ನ್ಯಾ. ಅನಿರುದ್ಧ ಬೋಸ್, ನ್ಯಾ. ಹೃಷಿಕೇಶ್ ರಾಯ್ ಮತ್ತು ನ್ಯಾ. ಸಿ.ಟಿ ರವಿ ಕುಮಾರ್ ಅವರನ್ನೊಳಗೊಂಡ ಸಂವಿಧಾನ ಪೀಠವು ಈ ಅರ್ಜಿ ವಿಚಾರಣೆ ನಡೆಸಿ ಈ ವರ್ಷದ ಮಾರ್ಚ್‌ನಲ್ಲಿ ತೀರ್ಪು ಪ್ರಕಟಿಸಿತ್ತು.

    ಈ ತೀರ್ಪಿನಲ್ಲಿ ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ (ಅಧಿಕೃತ ವಿರೋಧ ಪಕ್ಷದ ನಾಯಕ ಇಲ್ಲದೇ ಇದ್ದರೆ ಅತಿ ದೊಡ್ಡ ಪಕ್ಷದ ನಾಯಕ) ಮತ್ತು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸದಸ್ಯರಾಗಿರುವ ಸಮಿತಿಯ ಸಲಹೆಯಂತೆ ರಾಷ್ಟ್ರಪತಿ ನೇಮಕ ಮಾಡಬೇಕು ಎಂದು ಹೇಳಿತ್ತು.

     

     

    ಸ್ವತಂತ್ರ ವ್ಯಕ್ತಿ ಅಧಿಕಾರದಲ್ಲಿರುವವರಿಗೆ ಅಕ್ರಮ ನಡೆಯುವುದಿಲ್ಲ. ಹಲವಾರು ದಶಕಗಳು ಕಳೆದಿದ್ದರೂ ರಾಜಕೀಯ ಪಕ್ಷಗಳು ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಮಾಡಲು ಪ್ರತ್ಯೇಕ ಕಾನೂನನ್ನು ಪರಿಚಯಿಸಿಲ್ಲ. ಚುನಾವಣಾ ಆಯುಕ್ತರ ನೇಮಕದ ಕುರಿತಂತೆ ಸಂಸತ್ತು ಕಾಯ್ದೆ ರೂಪಿಸುವವರೆಗೆ ಈ ವ್ಯವಸ್ಥೆ ಜಾರಿಯಲ್ಲಿರಲಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿತ್ತು.

    ಅಂದೇ ಪ್ರಶ್ನೆ ಎದ್ದಿತ್ತು
    ಒಂದು ವೇಳೆ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧವೇ ಯಾವುದಾದರೂ ಗಂಭೀರ ಆರೋಪ ಬಂದಾಗ ಆ ಪ್ರಕರಣದ ವಿಚಾರಣೆಯನ್ನು ಸಿಜೆಐ ನಡೆಸಬಹುದೇ ಎಂಬ ಪ್ರಶ್ನೆ ಎದ್ದಿತ್ತು. ಯಾಕೆಂದರೆ ಸಿಜಿಐ ನೇಮಕ ಮಾಡಿದ ಸಮಿತಿಯೇ ಶಿಫಾರಸು ಮಾಡಿರುವಾಗ ಸಿಜಿಐ ನಡೆಸುವುದು ಸರಿಯೇ? ಸಿಜೆಐ ನ್ಯಾಯಾಂಗದ ವಿಚಾರಕ್ಕೆ ಮಾತ್ರ ತಲೆ ಕೆಡಿಸಿಕೊಳ್ಳಬೇಕು. ಕಾರ್ಯಾಂಗದ ವಿಚಾರಕ್ಕೆ ಬಂದರೆ ಮುಂದೆ ಬೇರೆ ವಿಷಯಗಳು ಸಿಜೆಐ ಮುಂದೆ ಬಂದರೆ ಏನು ಎಂಬ ಪ್ರಶ್ನೆಯನ್ನು ಕಾನೂನು ಪಂಡಿತರು ಎತ್ತಿದ್ದರು.

     
    ಮತ್ತೊಂದು ಜಟಾಪಟಿ:
    ಸುಪ್ರೀಂನಿಂದ ಈ ತೀರ್ಪು ಪ್ರಕಟವಾದಾಗ ವಿರೋಧ ಪಕ್ಷಗಳು ಸ್ವಾಗತ ವ್ಯಕ್ತಪಡಿಸಿದ್ದವು. ಈಗ ಮಸೂದೆ ಮಂಡನೆ ಮಾಡಿ ಸಿಜೆಐ ಅವರನ್ನು ಸಮಿತಿಯಿಂದ ಹೊರಗಿಡಲು ಮುಂದಾಗಿದ್ದು ಮತ್ತೊಂದು ಸುತ್ತಿನ ಜಟಾಪಟಿಗೆ ಕಾರಣವಾಗುವ ಸಾಧ್ಯತೆಯಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್‌ ಕುಮಾರ್‌ ನೇಮಕ

    ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್‌ ಕುಮಾರ್‌ ನೇಮಕ

    ನವದೆಹಲಿ: ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಗುರುವಾರ ನೇಮಕಗೊಂಡಿದ್ದಾರೆ.

    ಹಾಲಿ ಸುಶೀಲ್ ಚಂದ್ರ ಅವರ ಅಧಿಕಾರವಧಿ ಮೇ 14ಕ್ಕೆ ಮುಗಿಯಲಿದೆ. ಮೇ 15 ರಂದು ರಾಜೀವ್‌ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ. ಇದನ್ನೂ ಓದಿ: ಮೇ 17ರ ಒಳಗಡೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ: ಕೋರ್ಟ್‌

    ಸಚಿವಾಲಯದ ಅಧಿಸೂಚನೆಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು, ರಾಜೀವ್‌ ಕುಮಾರ್‌ ಅವರಿಗೆ ಶುಭಾಶಯ ತಿಳಿಸಿದ್ದಾರೆ.

    ರಾಜೀವ್‌ ಕುಮಾರ್‌ ಅವರು 2020ರಿಂದ ಈವರೆಗೂ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 1984ನೇ ಬ್ಯಾಚ್‌ನ ಜಾರ್ಖಂಡ್‌ ಕೇಡರ್‌ ಅಧಿಕಾರಿಯಾಗಿದ್ದಾರೆ. ಇದನ್ನೂ ಓದಿ: ಅಂಧ ವ್ಯಕ್ತಿ ಮಗಳ ಕನಸ್ಸನ್ನು ಕೇಳಿ ಮೋದಿ ಭಾವುಕ – ವೀಡಿಯೋ ವೈರಲ್

  • ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ನೇಮಕ

    ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ನೇಮಕ

    ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ಅವರನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ನೇಮಿಸಿದ್ದಾರೆ.

    ಓಂ ಪ್ರಕಾಶ್ ರಾವತ್ ಅವರ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಸುನಿಲ್ ಅರೋರಾ ಅವರನ್ನು ನೇಮಕ ಮಾಡಲಾಗಿದೆ. ಸುನಿಲ್ ಅವರಿಗೆ ಇಂದು ಅಧಿಕಾರ ಹಸ್ತಾಂತರಿಸಲಾಗಿದ್ದು, ಅಕ್ಟೋಬರ್ 2021ರವೆರೆಗೆ ಕಾರ್ಯನಿರ್ವಹಿಸಲಿದ್ದಾರೆ. ಸುನಿಲ್ ಅರೋರಾ ಅವರು 2017 ಆಗಸ್ಟ್ 31ರಂದು ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದರು.

    ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಜಮ್ಮು-ಕಾಶ್ಮೀರ, ಓಡಿಶಾ, ಮಹಾರಾಷ್ಟ್ರ, ಹರಿಯಾಣ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

    ಸುನಿಲ್ ಅರೋರಾ ಅವರು 1980ರ ಬ್ಯಾಚ್‍ನ ರಾಜಸ್ಥಾನದ ಐಎಎಸ್ ಅಧಿಕಾರಿಯಾಗಿದ್ದಾರೆ. 1993-1998ರವರೆಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕೇಂದ್ರ ಹಣಕಾಸು, ಯೋಜನಾ ಆಯೋಗ ಹಾಗೂ ಜವಳಿ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೌಶಲ್ಯಾಭಿವೃದ್ಧಿ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    ಅಧಿಕಾರ ಸ್ವೀಕರಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸುನಿಲ್ ಅರೋರಾ ಅವರು, 2019ರ ಲೋಕಸಭಾ ಚುನಾವಣೆಗಾಗಿ ಆಂತರಿಕ ಸಿದ್ಧತೆಗಳನ್ನು ಆಯೋಗ ಆರಂಭಿಸಿದೆ. ಪ್ರತಿಯೊಬ್ಬರೂ ಮತದಾನ ಮಾಡುವ ಹಕ್ಕನ್ನು ಹೊಂದುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಏಕಕಾಲದಲ್ಲಿ ಚುನಾವಣೆ ಸದ್ಯಕ್ಕೆ ಅಸಾಧ್ಯ: ಓಂ ಪ್ರಕಾಶ್ ರಾವತ್

    ಏಕಕಾಲದಲ್ಲಿ ಚುನಾವಣೆ ಸದ್ಯಕ್ಕೆ ಅಸಾಧ್ಯ: ಓಂ ಪ್ರಕಾಶ್ ರಾವತ್

    ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಚುನಾವಣೆ ಆಯೋಗದ ಅಧ್ಯಕ್ಷ ಓಂ ಪ್ರಕಾಶ್ ರಾವತ್ ಹೇಳಿದ್ದಾರೆ.

    ‘ಒಂದು ದೇಶ, ಒಂದೇ ಚುನಾವಣೆ’ ಎನ್ನುವ ಅಭಿಪ್ರಾಯವನ್ನು ಬಿಜೆಪಿ ವ್ಯಕ್ತಪಡಿಸಿತ್ತು. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಏಕಕಾಲದಲ್ಲಿ ನಡೆಯಬೇಕು ಎನ್ನುವುದು ಬಿಜೆಪಿಯ ಉದ್ದೇಶವಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಓಂ ಪ್ರಕಾಶ್, ಏಕಕಾಲದಲ್ಲಿ ಚುನಾವಣೆ ಸಾಧ್ಯವೇ ಇಲ್ಲ. ಅಲ್ಲದೆ ಇದಕ್ಕೆ ಕಾನೂನು ರಚನೆಯಾಗಬೇಕು ಎಂದಿದ್ದಾರೆ.

    2019ರ ಏಪ್ರಿಲ್-ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಅದೇ ವೇಳೆ ಮಧ್ಯಪ್ರದೇಶ, ಛತ್ತೀಸ್‍ಘಡ, ರಾಜಸ್ಥಾನ ಮತ್ತು ಮಿಜೋರಂ ವಿಧಾನಸಭೆ ಚುನಾವಣೆ ಅವಧಿ ಬರುತ್ತದೆ. ಹೀಗಾಗಿ ಇದೇ ವರ್ಷದ ಅಂತ್ಯದಲ್ಲಿ ಈ ರಾಜ್ಯಗಳ ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv