ನವದೆಹಲಿ: ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ (BR Gavai) ಅವರು ಇಂದು ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಆರ್ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಪ್ರಮಾಣ ವಚನ ಬೋಧಿಸಿದರು. ಮಂಗಳವಾರ ನ್ಯಾ.ಸಂಜೀವ ಖನ್ನಾ (Sanjeeva Khanna) ಅವರ ನಿವೃತ್ತಿ ಬಳಿಕ ಇಂದು ನ್ಯಾ.ಬಿ.ಆರ್ ಗವಾಯಿ ಅವರು ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಅಲಂಕರಿಸಿದ್ದಾರೆ.ಇದನ್ನೂ ಓದಿ: ಭಾರತದ ದಾಳಿಗೆ ವಿಲವಿಲ – ಪಾಕ್‌ನಲ್ಲಿ ಮದರಸಾಗಳ ಮೇಲೆ ನಾಗರಿಕರಿಂದಲೇ ಕಲ್ಲು ತೂರಾಟ
52ನೇ ಮುಖ್ಯ ನ್ಯಾಯಮೂರ್ತಿಯಾಗಿರುವ ಬಿ.ಆರ್ ಗವಾಯಿ ಅವರು 6 ತಿಂಗಳಿಗೂ ಹೆಚ್ಚಿನ ಅವಧಿ ಅಧಿಕಾರದಲ್ಲಿರಲಿದ್ದು, ಇದೇ ನ.23ರಂದು ನಿವೃತ್ತಿ ಹೊಂದಲಿದ್ದಾರೆ. ಜೊತೆಗೆ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ಏರಿದ ಮೊದಲ ಬೌದ್ಧ ಮತ್ತು ಪರಿಶಿಷ್ಟ ಜಾತಿಯಿಂದ ಆಯ್ಕೆಯಾದ ಎರಡನೇ ನ್ಯಾಯಾಧೀಶರಾದರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ, ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಆ ಪೈಕಿ 2016ರ ನೋಟು ರದ್ದತಿ, ಚುನಾವಣಾ ಬಾಂಡ್ ಯೋಜನೆಯ ತೀರ್ಪು ಸೇರಿದಂತೆ ಒಟ್ಟು 300 ತೀರ್ಪುಗಳನ್ನು ನೀಡಿದ್ದಾರೆ.ಇದನ್ನೂ ಓದಿ: ಭಾರತೀಯ ಸೈನಿಕರ ಶೌರ್ಯ, ತ್ಯಾಗ ಹಾಡಿಹೊಗಳಿದ ರಷ್ಯಾ ಮಹಿಳೆ
ನವದೆಹಲಿ: ಸುಪ್ರೀಂ ಕೋರ್ಟ್‌ನ ಜಡ್ಜ್ ಆಗಿ ಜೊಯಮಲ್ಯ ಬಾಗ್ಚಿ (Joymalya Bagchi) ಸೋಮವಾರ ಅಧಿಕಾರ ಸ್ವೀಕರಿಸಿದ್ದು, 2031ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.
ಇದಕ್ಕೂ ಮುನ್ನ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ಜೊಯಮಲ್ಯ ಬಾಗ್ಚಿ ಅವರನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಮಾ.10 ರಂದು ಅನುಮೋದನೆ ನೀಡಿತ್ತು. ಅದರಂತೆ ಇಂದು ಸುಪ್ರೀಂ ಕೋರ್ಟ್ ಆವರಣದಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರು ನ್ಯಾಯಾಧೀಶ ಜೊಯಮಲ್ಯ ಬಾಗ್ಚಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.ಇದನ್ನೂ ಓದಿ: ದಾವಣಗೆರೆ| ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ನೀರಿನಲ್ಲಿ ಮುಳುಗಿ ಸಾವು
ಒಟ್ಟು 13 ವರ್ಷಗಳಿಗೂ ಹೆಚ್ಚು ಕಾಲ ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿರುವ ಜೊಯಮಲ್ಯ ಬಾಗ್ಚಿ, 2011ರ ಜೂನ್ 27ರಂದು ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು. ಬಳಿಕ 2021ರ ಜನವರಿ 4ರಂದು ಆಂಧ್ರಪ್ರದೇಶ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ನಂತರ 2021 ನವೆಂಬರ್‌ನಲ್ಲಿ ಮತ್ತೆ ಕೋಲ್ಕತ್ತಾ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು.
#WATCH | Delhi | Justice Joymalya Bagchi takes oath as the judge of the Supreme Court. Chief Justice of India Sanjiv Khanna administers the oath of office to Justice Bagchi
ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ ಖನ್ನಾ (Justice Sanjiv Khanna) ಇಂದು (ನ.11) ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿರುವ ನ್ಯಾ.ಸಂಜೀವ ಖನ್ನಾ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರಮಾಣ ವಚನ ಬೋಧಿಸಲಿದ್ದಾರೆ.ಇದನ್ನೂ ಓದಿ: ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್ ವ್ಯವಸ್ಥೆ
ಎರಡು ವರ್ಷಗಳ ಅವಧಿಯ ಬಳಿಕ ಹಾಲಿ ಸಿಜೆಐ ಡಿವೈ ಚಂದ್ರಚೂಡ್ (DY Chandrachud) ಅವರು ಭಾನುವಾರ ತಮ್ಮ ಅಧಿಕಾರದಿಂದ ನಿವೃತ್ತಿ ಹೊಂದಿದರು. ಅವರ ಶಿಫಾರಸಿನ ಮೇರೆಗೆ ಅ.24 ರಂದು ನ್ಯಾ.ಸಂಜೀವ ಖನ್ನಾ ಅವರನ್ನು ಮುಖ್ಯ ನ್ಯಾರ್ಯಮೂರ್ತಿಯಾಗಿ ನೇಮಕ ಮಾಡುವ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಸೋಮವಾರ ಅಧಿಕಾರ ಸ್ವೀಕರಿಸಲಿರುವ ನ್ಯಾ.ಖನ್ನಾ 2025ರ ಮೇ.31ರವರೆಗೆ ಅಧಿಕಾರದಲ್ಲಿರಲಿದ್ದಾರೆ.
2019ರ ಜನವರಿಯಿಂದ ಸುಪ್ರೀಂ ಕೋರ್ಟ್‌ನ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ ನ್ಯಾ.ಖನ್ನಾ ಅವರು, ಸುಪ್ರೀಂ ಕೋರ್ಟ್‌ನ ಭಾಗವಾಗಿ ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ಚುನಾವಣಾ ಬಾಂಡ್‌ಗಳ ಯೋಜನೆ ರದ್ದು, ಭಾರತದ ಸಂವಿಧಾನದ 370ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿದ ಸಂವಿಧಾನ ಪೀಠದ ಭಾಗವಾಗಿದ್ದರು.
ಇನ್ನೂ ಜುಲೈನಲ್ಲಿ ಅವರ ನೇತೃತ್ವದ ಪೀಠವು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಿನ ದೆಹಲಿ (Delhi) ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (AAP Arvind Kejrival) ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.ಇದನ್ನೂ ಓದಿ: ಕ್ಯೂಬಾದಲ್ಲಿ ಒಂದೇ ಗಂಟೆಯಲ್ಲಿ 2 ಪ್ರಬಲ ಭೂಕಂಪ
ನವದೆಹಲಿ: ನನ್ನಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಇರಲಿ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ (CII) ಚಂದ್ರಚೂಡ್ ಹೇಳಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತರಾದ ಸಿಜೆಐ ಚಂದ್ರಚೂಡ್ ಅವರು ಶುಕ್ರವಾರ ಕೋರ್ಟ್ ಹಾಲ್‌ನಲ್ಲಿ ಸಹದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ನ್ಯಾಯಾಲಯವೇ ನನ್ನನ್ನು ಮುಂದುವರೆಸುತ್ತದೆ. ನಮ್ಮ ಅರಿವಿಗೆ ಬಾರದಂತೆ ಎಷ್ಟೋ ಜನರನ್ನು ಭೇಟಿಯಾಗಿರುತ್ತೇವೆ. ನಾನು ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನಿಂದ ತಪ್ಪಾಗಿದ್ದರೆ ಅಥವಾ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ ಎಂದು ಹೇಳಿದ್ದಾರೆ.
ಮುಂದಿನ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ವಿಚಾರವಾಗಿ, ಅವರು ತುಂಬಾ ಗಟ್ಟಿಯಾದ ವ್ಯಕ್ತಿಯಾಗಿದ್ದಾರೆ. ನ್ಯಾಯಕ್ಕೆ ಬದ್ಧರಾಗಿದ್ದಾರೆ ಎಂದು ಸಂತೋಷದಿಂದ ನಿರ್ಗಮಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಇನ್ನೂ ಇದೇ ವೇಳೆ ನಾನು ಹೆಚ್ಚು ಟ್ರೋಲಾದ ಜಡ್ಜ್‌ಗಳಲ್ಲಿ ಒಬ್ಬ ಎಂದು ಹೇಳಿಕೊಂಡು, ಶಾಯರಿ ಒಂದನ್ನು ಉಲ್ಲೇಖಿಸಿ ಹಾಸ್ಯ ಚಟಾಕಿ ಸಿಡಿಸಿದ್ದಾರೆ.
49ನೇ ಸಿಜೆಐ ಉದಯ್ ಉಮೇಶ್ ನಿವೃತ್ತದ ಬಳಿಕ, 2022ರ ನ.08ರಂದು 50ನೇ ಸಿಜೆಐ ಆಗಿ ಡಿ.ವೈ.ಚಂದ್ರಚೂಡ್ ಹುದ್ದೆ ಅಲಂಕರಿದ್ದರು. ಈಗ ಇವರ ಅಧಿಕಾರ ಅವಧಿ ಮುಕ್ತಾಯಗೊಂಡಿದೆ. 51ನೇ ಸಿಜೆಐ ಆಗಿ ಸಂಜೀವ್ ಖನ್ನಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನವದೆಹಲಿ: ಅದಾನಿ ಗ್ರೂಪ್ ಆಫ್ ಕಂಪನಿಗಳ (Adani Group) ವಿರುದ್ಧದ ಹಿಂಡೆನ್‍ಬರ್ಗ್ (Hindenburg Research) ಸಂಶೋಧನಾ ವರದಿಯಲ್ಲಿನ ಆರೋಪಗಳ ಬಗ್ಗೆ ನಡೆಸುತ್ತಿರುವ ತನಿಖೆಯನ್ನು ಪೂರ್ಣಗೊಳಿಸಲು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾಗೆ (Securities and Exchange Board of India) ಮೂರು ತಿಂಗಳ ಕಾಲಾವಕಾಶವನ್ನು ಸುಪ್ರೀಂ (Supreme Court) ವಿಸ್ತರಿಸಿ ಶುಕ್ರವಾರ ಆದೇಶ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಈ ಆದೇಶವನ್ನು ನೀಡಿದೆ. ಸೆಬಿಯ (SEBI) ಬೇಡಿಕೆಯಂತೆ ಆರು ತಿಂಗಳ ವಿಸ್ತರಣೆಯನ್ನು ನೀಡಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಅದಾನಿ – ಹಿಂಡನ್‌ಬರ್ಗ್ : ಸುಪ್ರೀಂಗೆ ತನಿಖಾ ವರದಿ ಸಲ್ಲಿಕೆ
ತನ್ನ ತನಿಖಾ ವರದಿಯನ್ನು ಸಲ್ಲಿಸಲು ಆರು ತಿಂಗಳ ಕಾಲ ವಿಸ್ತರಣೆ ಕೋರಿ ಸೆಬಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಿಚಾರಣೆ ನಡೆಸಿತು. ಈ ವೇಳೆ ಸುಪ್ರೀಂ, ಕೆಲಸದಲ್ಲಿ ಸ್ವಲ್ಪ ಚುರುಕುತನದ ಅಗತ್ಯವಿದೆ. 6 ತಿಂಗಳುಗಳ ಕಾಲವಕಾಶ ನೀಡಲು ಸಾಧ್ಯವಿಲ್ಲ. ಒಂದು ತಂಡವನ್ನು ರಚಿಸಿ ಶೀಘ್ರ ತನಿಖೆ ಮುಗಿಸಿ. ಆಗಸ್ಟ್ ಮಧ್ಯದಲ್ಲಿ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಮೇ 15ರಂದು ಆದೇಶ ಪ್ರಕಟಿಸುವುದಾಗಿ ಹೇಳಿದೆ.
ಮಾ.2ರ ಸುಪ್ರೀಂ ಆದೇಶದಂತೆ ಮೇ 2ಕ್ಕೆ ತನಿಖೆ ಪೂರ್ಣಗೊಳ್ಳಬೇಕಿತ್ತು. ಆದರೆ ಹಿಂಡೆನ್‍ಬರ್ಗ್ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳಿಗೆ ಕನಿಷ್ಠ 15 ತಿಂಗಳ ತನಿಖೆ ಅಗತ್ಯವಿದೆ. ಆದರೆ ಆರು ತಿಂಗಳು ಅವಕಾಶ ವಿಸ್ತರಿಸಿದರೆ ತನಿಖೆ ಪೂರ್ಣಗೊಳಿಸುವುದಾಗಿ ಕಳೆದ ತಿಂಗಳು ಸೆಬಿ ಸಲ್ಲಿಸಿದ್ದ ಮನವಿಯಲ್ಲಿ ಹೇಳಿತ್ತು.
ತನಿಖೆಗೆ ಬಹು ದೇಶೀಯ ಮತ್ತು ಅಂತರರಾಷ್ಟ್ರೀಯ ಬ್ಯಾಂಕ್‍ಗಳಿಂದ ಬ್ಯಾಂಕ್ ಸ್ಟೇಟ್‍ಮೆಂಟ್‍ಗಳನ್ನು ಪಡೆಯುವುದು ಅಗತ್ಯವಾಗಿರುತ್ತದೆ. ಬ್ಯಾಂಕ್ ಸ್ಟೇಟ್‍ಮೆಂಟ್‍ಗಳು 10 ವರ್ಷಗಳ ಹಿಂದೆ ಕೈಗೊಂಡ ವಹಿವಾಟುಗಳಿಗೆ ಸಹ ಸಂಬಂಧಿಸಿದೆ. ಇದು ಸಮಯ ತೆಗೆದುಕೊಳ್ಳುತ್ತದೆ ಎಂದು ಸೆಬಿ ನ್ಯಾಯಾಲಯಕ್ಕೆ ತಿಳಿಸಿತ್ತು.
ಷೇರು ಬೆಲೆಗಳನ್ನು ಕೃತಕವಾಗಿ ಹೆಚ್ಚಿಸುವ ಮೂಲಕ ಅದಾನಿ ಸಮೂಹದಿಂದ ವಂಚನೆಯಾಗಿದೆ ಎಂದು ಆರೋಪಿಸಿ ಹಿಂಡೆನ್‍ಬರ್ಗ್ ರಿಸರ್ಚ್ ವರದಿ ಪ್ರಕಟಿಸಿತ್ತು. ಇದಾದ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರುಗಳ ಮೌಲ್ಯದಲ್ಲಿ ಭಾರೀ ಕುಸಿತ ಕಂಡಿದ್ದವು.
ಇನ್ನೊಂದೆಡೆ, ಹಿಂಡೆನ್‍ಬರ್ಗ್ ರಿಸರ್ಚ್‍ನ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅದರ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು. ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಸೆಬಿ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಮನೋಹರ್ ಲಾಲ್ ಶರ್ಮಾ ಮನವಿ ಮಾಡಿದ್ದಾರೆ.
ನವದೆಹಲಿ: `ದಿ ಕೇರಳ ಸ್ಟೋರಿ’ (The Kerala Story) ಚಿತ್ರವನ್ನು ಪಶ್ಚಿಮ ಬಂಗಾಳ (West Bengal) ನಿಷೇಧಿಸಿರುವುದು ಹಾಗೂ ತಮಿಳುನಾಡಿನಲ್ಲಿ (Tamil Nadu) ನಿಷೇಧಕ್ಕೆ ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ (Supreme Court) ಹೇಳಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (DY Chandrachud) ನೇತೃತ್ವದ ಪೀಠವು ಈ ವಿಷಯವನ್ನು ಬುಧವಾರ ತುರ್ತು ಪಟ್ಟಿಗೆ ಸೇರಿಸಿದ ನಂತರ ಮೇ 12 ರಂದು ವಿಚಾರಣೆಗೆ ಮುಂದೂಡಿತು. ಅಲ್ಲದೆ ನ್ಯಾಯಮೂರ್ತಿ ಪಿಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಚಿತ್ರದ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸೋಮವಾರ ಒಪ್ಪಿಕೊಂಡಿತ್ತು. ಇದನ್ನೂ ಓದಿ: ಸಲಿಂಗ ವಿವಾಹ ಕಾನೂನು ಮಾನ್ಯತೆ ವಿಚಾರಣೆ – ಸಿಜೆಐ ಹಿಂದೆ ಸರಿಯುವಂತೆ ಸಲ್ಲಿಸಿದ್ದ ಮನವಿ ತಿರಸ್ಕೃತ
ಚಲನಚಿತ್ರ ನಿರ್ಮಾಪಕ ಸನ್‍ಶೈನ್ ಪಿಕ್ಚರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ವಿಪುಲ್ ಅಮೃತಲಾಲ್ ಶಾ ಅವರ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದಾರೆ. ಅವರು ನ್ಯಾಯಾಲಯದ ಮುಂದೆ ಪಶ್ಚಿಮ ಬಂಗಾಳ ಚಿತ್ರವನ್ನು ನಿಷೇಧ ಮಾಡಿರುವುದರಿಂದ ಆರ್ಥಿಕವಾಗಿ ನಷ್ಟವಾಗುತ್ತಿದೆ. ಅಲ್ಲದೆ ತಮಿಳುನಾಡು ಸಹ ಚಿತ್ರ ನಿಷೇಧಕ್ಕೆ ಮುಂದಾಗಿದೆ. ಚಿತ್ರವನ್ನು ನಿಷೇಧ ಮಾಡುತ್ತಿರುವುದು ಸವಿಂಧಾನದ 19 (1) (ಎ) ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಯತ್ನ ಎಂದು ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದಾರೆ.
ಚಿತ್ರ ನಿಷೇಧವು ಚಲನಚಿತ್ರದಿಂದ ಬರುವ ಆದಾಯವನ್ನು ಕಡಿತಗೊಳಿಸುವ ಉದ್ದೇಶದಿಂದ ಮಾಡಲಾಗಿದೆ. ಅಲ್ಲದೆ ಇದು ಚಲನಚಿತ್ರದ ಪೈರೇಟೆಡ್ ಡಿವಿಡಿಗಳಿಗೆ ಪ್ರಚೋದನೆಯನ್ನು ನೀಡುತ್ತದೆ ಎಂದು ನಿರ್ಮಾಪಕರು ದೂರಿದ್ದಾರೆ.
ನವದೆಹಲಿ: ಸಲಿಂಗ ವಿವಾಹಗಳಿಗೆ (Same sex marriage) ಕಾನೂನು ಮಾನ್ಯತೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (Chief Justice of India) ಡಿವೈ ಚಂದ್ರಚೂಡ್ (DY Chandrachud) ಅವರು ಹಿಂದೆ ಸರಿಯುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಬುಧವಾರ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠವು ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ. ವಿಚಾರಣೆಯ 9ನೇ ದಿನವಾದ ಇಂದು ಅನ್ಸನ್ ಥಾಮಸ್ ಎಂಬುವವರು ಮಾ. 13 ಮತ್ತು ಏ. 17 ರಂದು ಸುಪ್ರೀಂ ಕೋರ್ಟ್‍ಗೆ ಕಳುಹಿಸಿದ ಪತ್ರಗಳನ್ನು ಉಲ್ಲೇಖಿಸಲಾಯಿತು. ನ್ಯಾಯಮೂರ್ತಿ ಚಂದ್ರಚೂಡ್ ಅವರು ಈ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂಬ ಅದರಲ್ಲಿನ ಮನವಿಯನ್ನು ಪೀಠ ತಿರಸ್ಕರಿಸಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates
ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯವರನ್ನು ಹಿಂದೆ ಸರಿಯುವಂತೆ ಸಲ್ಲಿಸಿದ ಅರ್ಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು.
ಸಿಜೆಐ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎಸ್.ಕೆ ಕೌಲ್, ಎಸ್.ಆರ್ ಭಟ್, ಹಿಮಾ ಕೊಹ್ಲಿ ಮತ್ತು ಪಿ.ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸುತ್ತಿದೆ. ಅಸ್ಸಾಂ (Assam), ಆಂಧ್ರಪ್ರದೇಶ (Andhra Pradesh) ಮತ್ತು ರಾಜಸ್ಥಾನ (Rajasthan) ರಾಜ್ಯಗಳು ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸುವುದನ್ನು ವಿರೋಧಿಸಿವೆ. ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ಪ್ರಕರಣ – ರಾಜಕೀಯ ಹೇಳಿಕೆಗಳಿಗೆ ಸುಪ್ರೀಂ ಕಿಡಿ
ನವದೆಹಲಿ: ಸಲಿಂಗ ವಿವಾಹ (Same sex marriage) ಕುರಿತಾಗಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ (LGBTQIA) ಸಲಹೆಗಳನ್ನು ಪರಿಗಣಿಸಲು ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‍ಗೆ (Supreme Court) ಕೇಂದ್ರ ಸರ್ಕಾರ (Central Government) ಬುಧವಾರ ತಿಳಿಸಿದೆ.
ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಒಂದೇ ಲಿಂಗದ ವ್ಯಕ್ತಿಗಳೊಂದಿಗಿನ ಸಂಬಂಧದಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ಪಡೆಯಲಾಗುವುದು. ಇದಕ್ಕಾಗಿ ಸಂಪುಟ ಕಾರ್ಯದರ್ಶಿ ನೇತೃತ್ವದ ಸಮಿತಿಯನ್ನು ರಚಿಸಲಾಗುತ್ತದೆ. ಇದರಿಂದ ಸಮುದಾಯದ ಎದುರಿಸುತ್ತಿರುವ ಸಮಸ್ಯೆಗಳನ್ನು ಕಲೆಹಾಕಲು ಅನುಕೂಲವಾಗುತ್ತದೆ ಎಂದು ಕೇಂದ್ರ ಹೇಳಿಕೊಂಡಿದೆ. ಇದನ್ನೂ ಓದಿ: ಪರಸ್ಪರ ಒಪ್ಪಿಗೆ ಇದ್ದಲ್ಲಿ ವಿಚ್ಛೇದನಕ್ಕೆ ಆರು ತಿಂಗಳ ಅಗತ್ಯವಿಲ್ಲ – ಸುಪ್ರೀಂ ತೀರ್ಪು
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರದ ನಿರ್ಧಾರವನ್ನು ಪ್ರಕಟಿಸಿದರು.
ಅರ್ಜಿದಾರರು ಸಲಿಂಗ ವಿವಾಹಗಳನ್ನು ಕಾನೂನಿನಡಿಯಲ್ಲಿ ತರುವಂತೆ ವಾದಿಸಿತ್ತು. ಆದರೆ ಈ ಅರ್ಜಿಗಳಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಸುಪ್ರೀಂಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ಕೇಂದ್ರವು, ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ ಎಂದು ಹೇಳಿತ್ತು.
ಏ.27 ರಂದು ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವುದು ಶಾಸಕಾಂಗದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಸುಪ್ರೀಂ ಹೇಳಿತ್ತು. ಸಲಿಂಗ ಸಂಬಂಧದಲ್ಲಿರುವ ಜನರು ಬಹಿಷ್ಕಾರಕ್ಕೊಳಗಾಗದಂತೆ ನೋಡಿಕೊಳ್ಳುವ ಪ್ರಾಮುಖ್ಯತೆಯನ್ನು ಸಿಜೆಐ ಮತ್ತಷ್ಟು ಒತ್ತಿ ಹೇಳಿದ್ದಾರೆ.
ಮುಖ್ಯ ನ್ಯಾಯಮೂರ್ತಿ (Chief Justice of India) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಪಿಎಸ್ ನರಸಿಂಹ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಸಂವಿಧಾನಿಕ ಪೀಠ ದೇಶದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಕ್ರಿಶ್ಚಿಯನ್ ಮಿಷನರಿಗಳ ಧರ್ಮ ಪ್ರಚಾರ ಕಾನೂನುಬಾಹಿರವಲ್ಲ – ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್
ಕೋಲ್ಕತ್ತಾ: ದಯವಿಟ್ಟು ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಒತ್ತಾಯಿಸಿದ್ದಾರೆ.
ದೇಶದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಉಸಿರುಗಟ್ಟಿಸಲಾಗುತ್ತಿದೆ. ಇದೇ ಪ್ರವೃತ್ತಿಯನ್ನು ಮುಂದುವರಿಸಿದರೆ, ರಾಷ್ಟ್ರವು ಅಧ್ಯಕ್ಷೀಯ ಸರ್ಕಾರಕ್ಕೆ ನೇತೃತ್ವ ವಹಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಬ್ಯಾನರ್ಜಿ ಅವರು, ಪ್ರಜಾಪ್ರಭುತ್ವ ಮತ್ತು ಫೆಡರಲ್ ರಚನೆಯ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಿಜೆಐಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮನ್ ಕಿ ಬಾತ್‍ನಲ್ಲಿ ಬೆಂಗಳೂರಿನ ಸುರೇಶ್ ಕುಮಾರ್ರನ್ನು ಪ್ರಶಂಸಿಸಿದ ಮೋದಿ
ಕೋಲ್ಕತ್ತಾದಲ್ಲಿ ನ್ಯಾಷನಲ್ ಯೂನಿವರ್ಸಿಟಿ ಆಫ್ ಜ್ಯೂರಿಡಿಕಲ್ ಸೈನ್ಸಸ್ (ಎನ್‌ಯುಜೆಎಸ್) ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಸಿಜೆಐ ಯು.ಯು.ಲಲಿತ್ (UU Lalit) ಅವರ ಉಪಸ್ಥಿತಿಯಲ್ಲಿ ಬ್ಯಾನರ್ಜಿ ಮಾತನಾಡಿದ್ದಾರೆ.
ನಾನು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರನ್ನು ಅಭಿನಂದಿಸಬೇಕು. ನಾನು ಈ ವೇದಿಕೆಯನ್ನು ಬಳಸಬಹುದೇ ಎಂದು ನನಗೆ ತಿಳಿದಿಲ್ಲ. ಆದರೆ ಎರಡು ತಿಂಗಳಲ್ಲಿ ಅವರು ನ್ಯಾಯಾಂಗ ಎಂದರೆ ಏನು ಎಂದು ತೋರಿಸಿದ್ದಾರೆ ಎಂದು ಬಣ್ಣಿಸಿದ್ದಾರೆ.
ಜನರು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ನಾನು ಹೇಳುತ್ತಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ನ್ಯಾಯಾಂಗವು ಜನರನ್ನು ಅನ್ಯಾಯದಿಂದ ರಕ್ಷಿಸಬೇಕು. ಜನರ ಕೂಗನ್ನು ಆಲಿಸಬೇಕು. ಇದೀಗ ಜನರು ಮುಚ್ಚಿದ ಬಾಗಿಲುಗಳ ಹಿಂದೆ ಅಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೊಯ್ ವಿರುದ್ಧ ಸುಪ್ರೀಂ ಕೋರ್ಟಿನ ಮಾಜಿ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿ, 22 ನ್ಯಾಯಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.
ಅಕ್ಟೋಬರ್ 11, 2018 ರಂದು ರಂಜನ್ ಗೊಗೊಯ್ ಅವರು ನನ್ನನ್ನು ಬಲವಂತವಾಗಿ ಅಪ್ಪಿಕೊಂಡು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಬರೆದ ಪತ್ರವನ್ನು ಸ್ಕ್ರೋಲ್, ದಿ ವೈರ್, ಕ್ಯಾರವನ್ ವೆಬ್‍ಸೈಟ್‍ಗಳು ಪ್ರಕಟಿಸಿವೆ.
ಈ ಅಫಿಡವಿಟ್ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವ ತುರ್ತು ವಿಚಾರಣೆ ವೇಳೆ, ತನ್ನ ವಿರುದ್ಧ ಸಂಪೂರ್ಣ ಸುಳ್ಳು ಆರೋಪ ಮಾಡಲಾಗಿದೆ. ಇದು ಸುಳ್ಳು ಹಾಗೂ ಅಶ್ಲೀಲವಾಗಿದೆ. ನನ್ನ ಬ್ಯಾಂಕ್ ಖಾತೆಯಲ್ಲಿ 6.8 ಲಕ್ಷ ರೂ. ಇದ್ದು, 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ನನಗೆ ಸಿಕ್ಕಿದ ಪ್ರಶಸ್ತಿ ಇದು ಎಂದು ಹೇಳಿ ತನ್ನ ವಿರುದ್ಧ ಕೇಳಿ ಬಂದ ಆರೋಪವನ್ನು ರಂಜನ್ ಗೊಗೋಯ್ ಅವರು ತಳ್ಳಿ ಹಾಕಿದ್ದಾರೆ.
ಮಹಿಳೆ ಮಾತ್ರ ಮುಖ್ಯ ನ್ಯಾಯಧೀಶರು ತಮಗೆ ಕಿರುಕುಳ ನೀಡಿದ್ದು ಸತ್ಯ. ಅಷ್ಟೇ ಅಲ್ಲದೆ ನನ್ನನ್ನು ಕೆಲಸದಿಂದ ವಜಾಗೊಳಿಸಿದ ಬಳಿಕವೂ ಮುಖ್ಯ ನ್ಯಾಯಧೀಶರು ನನಗೆ ಕಿರುಕುಳ ನೀಡಿದ್ದಾರೆ. ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿ, ತಮ್ಮ ಅಧಿಕಾರ ಬಳಸಿಕೊಂಡು ನನ್ನ ಪತಿ ಹಾಗೂ ಪತಿಯ ಸಹೋದರರನ್ನು ದೆಹಲಿ ಪೊಲೀಸ್ ಕೆಲಸದಿಂದ ವಜಾಗೊಳಿಸಿದ್ದಾರೆ. ಅಲ್ಲದೆ ಸುಪ್ರೀಂ ಕೋರ್ಟ್ ನಲ್ಲಿ ಜೂನಿಯರ್ ಕೋರ್ಟ್ ಅಟೆಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನನ್ನ ಸಹೋದರನನ್ನು ಕೂಡ ಕೆಲಸದಿಂದ ಕಿತ್ತು ಹಾಕಿದ್ದಾರೆ ಎಂದು ದೌರ್ಜನ್ಯಕ್ಕೊಳಗಾದ ಮಹಿಳೆ ಅಫಿಡವಿಟ್‍ನಲ್ಲಿ ಉಲ್ಲೆಖಿಸಿದ್ದಾರೆ.