Tag: Chief Minister Relief Fund

  • ವಿಸಿ ನಾಲೆಗೆ ಕಾರು ಉರುಳಿ ನಾಲ್ವರ ಸಾವು ಪ್ರಕರಣ – ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಘೋಷಣೆ

    ವಿಸಿ ನಾಲೆಗೆ ಕಾರು ಉರುಳಿ ನಾಲ್ವರ ಸಾವು ಪ್ರಕರಣ – ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಘೋಷಣೆ

    ಮಂಡ್ಯ: ವಿಶ್ವೇಶ್ವರಯ್ಯ ನಾಲೆಗೆ (VC Canal) ಕಾರು ಉರುಳಿ ನಾಲ್ವರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ (Chief Minister Relief Fund) ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಸಚಿವ ಚಲುವರಾಯಸ್ವಾಮಿ (Cheluvarayaswamy) ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

    ನನ್ನ ಹಾಗೂ ಸಚಿವ ಮಹದೇವಪ್ಪ (HC Mahadevappa) ಅವರ ಮನವಿ ಮೇರೆಗೆ ಪರಿಹಾರ ನೀಡಲು ಸಿಎಂ ಸೂಚನೆ ನೀಡಿದ್ದಾರೆ. ಮಂಡ್ಯ ಹಾಗೂ ಮೈಸೂರು ಡಿಸಿಗಳು ಪರಿಹಾರಕ್ಕೆ ವರದಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

    ಇನ್ನೂ ಈ ಪ್ರಕರಣಕ್ಕೆ ಸಂಬಂಧಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ ಮಹದೇವಪ್ಪ ಮಾತನಾಡಿದ್ದು, ಘಟನೆಯಲ್ಲಿ ಸಾವನ್ನಪ್ಪಿರುವ ಮೂವರು ಟಿ.ನರಸಿಪುರ ತಾಲೂಕಿನ ಗೊರವನಹಳ್ಳಿ ಗ್ರಾಮದವರು. ಈ‌ ಘಟನೆ ಜರುಗಬಾರದಿತ್ತು, ಈ ಘಟನೆ ತುಂಬಾ ದುಃಖ ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು

    ಘಟನೆ ನಡೆದ ಸ್ಥಳದಲ್ಲಿ ರಸ್ತೆ ಚೆನ್ನಾಗಿದೆ. ಆದ್ರೆ ಇದಕ್ಕೆ ಅತಿವೇಗ ಕಾರಣ ಇರಬಹುದು ಅನ್ನಿಸುತ್ತೆ. ವಾಹನ ಸವಾರರು ಜಾಗರೂಕತೆಯಿಂದ ಚಾಲನೆ ಮಾಡಬೇಕು. ಸದ್ಯ ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸೂಚಿಸಿದ್ದು, ಮೈಸೂರು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳು ಇದರ ಫಾಲೋಅಪ್‌ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ AI ಕ್ಯಾಮೆರಾ – ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ

    ಏನಿದು ಘಟನೆ?
    ಮೂರೇ ದಿನಗಳ ಅಂತರದಲ್ಲಿ ಸಂಭವಿಸಿದ ಎರಡು ಅಪಘಾತಗಳಲ್ಲಿ ಐವರು ಜಲ ಸಮಾಧಿಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶನಿವಾರ ತಡರಾತ್ರಿಯೂ ಇಲ್ಲಿನ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿಬಿದ್ದು ಗಾಮನಹಳ್ಳಿ ಗ್ರಾಮದ ಮಹದೇವಮ್ಮ, ಗೊರವನಹಳ್ಳಿ ಗ್ರಾಮದ ಸಂಜನಾ, ಮಮತಾ, ರೇಖಾ ಮಹಿಳೆಯರು ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಕಳೆದ ಮೂರು ದಿನಗಳ ಹಿಂದೆಯಷ್ಟೇ ತಿಬ್ಬನಹಳ್ಳಿ ಬಳಿಯ ವಿಸಿ ನಾಲೆಗೆ ಕಾರು ಉರುಳಿಬಿದ್ದು ಚಾಲಕನೊಬ್ಬ ಸಾವನ್ನಪ್ಪಿದ್ದ ಘಟನೆ ನಡೆದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಮು ಸಂಘರ್ಷದಲ್ಲಿ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

    ಕೋಮು ಸಂಘರ್ಷದಲ್ಲಿ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

    ಬೆಂಗಳೂರು: ಕರಾವಳಿಯಲ್ಲಿ ಕೋಮು ದ್ವೇಷಕ್ಕೆ (Communial Murder) ಬಲಿಯಾದ ನಾಲ್ಕು ಜನರ ಕುಟುಂಬಕ್ಕೆ ಕರ್ನಾಟಕ ಸರ್ಕಾರ (Karnataka Government) ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

    ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಫಾಝಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಸರ್ಕಾರ ಈ ಪರಿಹಾರವನ್ನು ಘೋಷಿಸಿದೆ. ಇದನ್ನೂ ಓದಿ: ಊರಿಗೆ ಹೋಗೋಣವೆಂದು ಕರ್ಕೊಂಡು ಬಂದು ಮಕ್ಕಳೆದುರೇ ದಾರಿ ಮಧ್ಯೆ ಪತ್ನಿಯನ್ನ ಹೊಡೆದು ಕೊಂದ!

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ನಾಲ್ವರು ಹತ್ಯೆಗೀಡಾಗಿದ್ದರು. ಈ ನಾಲ್ವರ ಕುಟುಂಬಗಳಿಗೆ ಪರಿಹಾರ ಘೋಷಣೆ ಆಗಿರಲಿಲ್ಲ. ಈಗ ಈ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ  (Chief Minister Relief Fund) ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

    2022ರ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, 2022ರ ಡಿಸೆಂಬರ್ 24ರಂದು ಅಬ್ದುಲ್ ಜಲೀಲ್, 2018ರ ಜನವರಿ 3 ರಂದು ದೀಪಕ್ ರಾವ್ ಹತ್ಯೆಯಾಗಿತ್ತು. ಈ ಮಧ್ಯೆ ಹಂತಕರಿಂದ ಹತ್ಯೆಗಾಗಿದ್ದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಆಗಿನ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತು.

    2018ರ ಚುನಾವಣೆಯ ಪ್ರಚಾರ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಗೆ ಆಗಮಿಸಿದ್ದ ಗೃಹ ಸಚಿವ ಅಮಿತ್ ಶಾ ಅವರು ಅಂದು ಕೊಲೆಯಾಗಿದ್ದ ದೀಪಕ್ ರಾವ್ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಈ ವೇಳೆ ಗೃಹ ಸಚಿವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಇದನ್ನೂ ಓದಿ: ವಿಸ್ಕಿ ಬಾಟ್ಲಿಯಲ್ಲಿ 13 ಕೋಟಿ ರೂ. ಮೌಲ್ಯದ ಕೊಕೇನ್- ಕೀನ್ಯಾ ಮಹಿಳೆ ಅರೆಸ್ಟ್

  • ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

    ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

    ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ರಾಮ್ ಚರಣ್ ತೇಜ ಸಂತ್ರಸ್ತರಿಗೆ ಸಹಾಯ ಹಸ್ತಚಾಚಿದ್ದಾರೆ.

    ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಹಾನಿಯುಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಜನರ ಕಷ್ಟಕ್ಕೆ ಟಾಲಿವುಡ್ ನಟ ಜೂನಿಯರ್ ಎನ್‍ಟಿಆರ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಬುಧವಾರ ಘೋಷಿಸಿದ್ದರು. ಇದನ್ನೂ ಓದಿ: ಐರಾಗೆ ಹುಟ್ಟುಹಬ್ಬದ ಸಂಭ್ರಮ – ನಿನ್ನ ಕೈ ಹಿಡಿಯಲು ಯಾವಾಗಲೂ ಇರುತ್ತೇನೆ ಅಂದ ರಾಧಿಕಾ

    ಇದೀಗ ನಟ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್ ತೇಜ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ನೀಡುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. “ಆಂಧ್ರಪ್ರದೇಶದಲ್ಲಿ ಪ್ರವಾಹ ಮತ್ತು ಧಾರಾಕಾರ ಮಳೆಯಿಂದಾಗಿ ವ್ಯಾಪಕವಾಗಿ ಹಾನಿಯುಂಟಾಗಿರುವ ವಿಚಾರ ಬಹಳ ನೋವುಂಟು ಮಾಡಿದೆ. ಪ್ರವಾಹದಿಂದ ಉಂಟಾದ ವ್ಯಾಪಕ ವಿನಾಶ ಮತ್ತು ಹಾನಿಯಿಂದ ನನಗೆ ನೋವಾಗಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.25 ಲಕ್ಷ ರೂ. ಕೊಡುಗೆ ನೀಡುತ್ತಿದ್ದೇನೆ ಎಂದು ಚಿರಂಜೀವಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ಮತ್ತೊಂದೆಡೆ ರಾಮ್‍ಚರಣ್ ತೇಜ ಅವರು, ಭಯಾನಕ ಪ್ರವಾಹದಿಂದಾಗಿ ಆಂಧ್ರಪ್ರದೇಶದ ಜನತೆ ಅನುಭವಿಸುತ್ತಿರುವ ಕಷ್ಟವನ್ನು ನೋಡಲು ಹೃದಯ ಭಾರವೆನಿಸುತ್ತಿದೆ. ಜನರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಯ ನನ್ನದೊಂದು ಪುಟ್ಟ ಕಾಣಿಕೆ ನೀಡುತ್ತಿದ್ದೇನೆ ಎಂದು  ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

  • ಸಿದ್ದಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ

    ಸಿದ್ದಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ

    ತುಮಕೂರು: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಿದ್ದಗಂಗಾ ಮಠ ಹಾಗೂ ಸಿದ್ದಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರೂ.ವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಲಾಗಿದೆ.

    ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಇಂದು ಮಠದಿಂದ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯಿಂದ 25ಲಕ್ಷ ರೂ. ಸೇರಿ ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್ ಕುಮಾರ್, ಸಿದ್ದಗಂಗಾ ಮಠದ ವಿಶ್ವನಾಥಯ್ಯ, ಟಿ.ಕೆ.ನಂಜುಂಡಪ್ಪ, ಮತ್ತಿತರರು ಹಾಜರಿದ್ದರು.

    ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ಮೈಸೂರಿನ ಶ್ರೀ ಸುತ್ತೂರು ಮಠವು ಏಪ್ರಿಲ್ 1ರಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿತ್ತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಇವತ್ತು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜೆಎಸ್‍ಎಸ್ ಮಹಾವಿದ್ಯಾಪೀಠ ಹಾಗೂ ಸಂಸ್ಥೆಯ ನೌಕರರಿಂದ 50 ಲಕ್ಷ ರೂ.ಗಳ ದೇಣಿಗೆಯನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸಚಿವರಿಗೆ ನೀಡಿದ್ದರು.

  • ಕೆಎಸ್‍ಸಿಎ ವತಿಯಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ

    ಕೆಎಸ್‍ಸಿಎ ವತಿಯಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ

    ಬೆಂಗಳೂರು: ನೆರೆ ಸಂತ್ರಸ್ತರ ನೆರವಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್‍ಸಿಎ) ಮುಂದಾಗಿದ್ದು, ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ-20 ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ. ಇದಕ್ಕೂ ಮುನ್ನ ಸ್ಟೇಡಿಯಂನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಎಸ್‍ಸಿಎ ಅಧಿಕಾರಿಗಳು 10 ಲಕ್ಷ ರೂ. ಚೆಕ್ ನೀಡಿದರು. ಈ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕೋಚ್ ರವಿಶಾಸ್ತ್ರಿ ಇದ್ದರು.

    ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ಆಟಗಾರರು ಸ್ಟೇಡಿಯಂಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸ್ಟೇಡಿಯಂಗೆ ಪ್ರಯಾಣ ಬೆಳೆಸಿದರು. ಆದರೆ ಸಂಚಾರ ಅಸ್ತವ್ಯಸ್ತವಾಗಿದ್ದರಿಂದ ಸಿಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಎರಡು ಮೂರು ನಿಮಿಷಗಳ ಕಾಲ ಟ್ರಾಫಿಕ್‍ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಬಳಿಕ ಸ್ಟೇಡಿಯಂಗೆ ಆಗಮಿಸಿದ ಅವರನ್ನು ಆಡಳಿತ ಮಂಡಳಿ ಸ್ವಾಗತಿಸಿತು.

    ಸಿಎಂ ಯಡಿಯೂರಪ್ಪ ಅವರು ವಿರಾಟ್ ಕೊಹ್ಲಿ ಹಾಗೂ ರವಿಶಾಸ್ತ್ರಿ ಅವರಿಗೆ ಧನ್ಯವಾದ ಹೇಳಿದರು. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬಿ.ಎಸ್. ಯಡಿಯೂರಪ್ಪನವರಿಗೆ ಸಾಥ್ ನೀಡಿದರು.