Tag: Chief Secretary

  • ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ

    ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ

    ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ (Chief Secretary) ಶಾಲಿನಿ ರಜನೀಶ್ (Shalini Rajneesh) ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ‌ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ‌ನೀಡಿದೆ.

    ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ (Rajneesh Goel) ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್‌ ಗೋಯಲ್‌ ಅವರ ಪತ್ನಿಯೂ ಆಗಿರುವ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನ ನೇಮಕ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಾಲ್ಮೀಕಿ ನಿಗಮದ ಹಗರಣ, ಮುಡಾ ಪ್ರಕರಣದ ಸದ್ದು – ಹಣ ಲೂಟಿ ಆರೋಪ

    ಆಗಸ್ಟ್‌ 1 ರಿಂದ ಶಾಲಿನಿ ರಜನೀಶ್‌ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಆಗಿರುವ ಶಾಲಿನಿ ಅವರ ಸೇವಾವಧಿ 2027ರ ಜೂನ್‌ 30ರ ವರೆಗೆ ಇರಲಿದ್ದು, ಮೂರು ವರ್ಷಗಳ ಕಾಲ ದೀರ್ಘಾವಧಿ ಸೇವೆಯಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂನ 30 ಕ್ರಸ್ಟ್‌ ಗೇಟ್‌ ಓಪನ್‌; 90‌,000 ಕ್ಯುಸೆಕ್‌ ನೀರು ನದಿಗೆ – ಹಂಪಿಯ ಹಲವು ಸ್ಮಾರಕಗಳು ಮುಳುಗಡೆ

    ಕರ್ನಾಟಕದಲ್ಲಿ ಸಿಎಸ್‌ ಆದ 3ನೇ ದಂಪತಿ:
    ಈ ಹಿಂದೆ 2000 ಇಸವಿಯಲ್ಲಿ ಬಿ.ಕೆ ಭಟ್ಟಾಚಾರ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2000 ಇಸವಿ ಜನವರಿ 1 ರಿಂದ 2002ರ ಅವಧಿಯಲ್ಲಿ ಅವರ ಪತ್ನಿ ತೆರೆಸಾ ಭಟ್ಟಾಚಾರ್ಯ ಸಿಎಸ್‌ ಆಗಿ ಸೇವೆ ಸಲ್ಲಿಸಿದ್ದರು. ಆ ನಂತರ 2006ರಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ಬಿಕೆ ದಾಸ್ ಹಾಗೂ ಮಾಲತಿ ದಾಸ್ ದಂಪತಿ ಸೇವೆ ಸಲ್ಲಿಸಿದ್ದರು. ಇದೀಗ  ರಜನೀಶ್ ಗೋಯಲ್ ಮತ್ತು ಶಾಲಿನಿ ರಜನೀಶ್ ಮುಖ್ಯಕಾರ್ಯದರ್ಶಿಗಳಾದ 3ನೇ ದಂಪತಿಯಾಗಿದ್ದಾರೆ. ಇದನ್ನೂ ಓದಿ: ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ- ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಮಹತ್ವದ ನಿರ್ಧಾರ

  • ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ನೇಮಕ

    ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ನೇಮಕ

    ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್ ಗೋಯೆಲ್ (Rajneesh Goel) ನೇಮಕಗೊಂಡಿದ್ದಾರೆ.

    ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್‌ ತಿಂಗಳ ಅಂತ್ಯಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ (Vandita Sharma) ಅವರ ಅಧಿಕಾರ ಅವದಿ ಮುಕ್ತಾಯಗೊಳ್ಳಲಿದೆ. ನಂತರ ತೆರವಾಗುವ ಸ್ಥಾನಕ್ಕೆ ಮುಖ್ಯ ಕಾರ್ಯದರ್ಶಿ ಆಗಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ. ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧದ ಕೇಸ್‍ನ ಎಲ್ಲಾ ದಾಖಲಾತಿಗಳನ್ನು ಒಪ್ಪಿಸಿ: ಹೈಹೋರ್ಟ್ ಆದೇಶ

    ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ 5-6 ಹೆಸರುಗಳ ಪಟ್ಟಿಯಲ್ಲಿ ಸೀನಿಯಾರಿಸಿ ಪ್ರಕಾರ ಹಿರಿಯ ಐಎಎಸ್ ಅಧಿಕಾರಿ ರಜನೀಶ್‌ ಗೋಯೆಲ್ ಅವರನ್ನು ಸಿಎಸ್‌ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಹಾಲಿ ಕಾರ್ಯರ್ಶಿಗಳು ತೆರವಾದ ನಂತರ ಅಧಿಕಾರ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಶಕ್ತಿ-ನಿಶ್ಯಕ್ತಿ, ಅನ್ನಭಾಗ್ಯ-ಕನ್ನಭಾಗ್ಯ, ಗೃಹ ಜ್ಯೋತಿ-ಪ್ರತಿ ಮನೆಗಳಲ್ಲೂ ಕಗ್ಗತ್ತಲು – ಕಾಂಗ್ರೆಸ್‌ ಗ್ಯಾರಂಟಿಗಳ ಕುರಿತು ಬಿಜೆಪಿ ಲೇವಡಿ

    ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದ 4ನೇ ಮಹಿಳೆಯಾಗಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು. ಇದನ್ನೂ ಓದಿ: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ಕಾಂಗ್ರೆಸ್‌ ವಕ್ತಾರ

  • ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

    ಬೆಂಗಳೂರು: ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು.

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ.

    ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ 4ನೇ ಮಹಿಳೆಯಾಗಿದ್ದು, ರಾಜ್ಯ ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಇದನ್ನೂ ಓದಿ: ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ಮಹಿಳೆಯರ ದರ್ಬಾರ್:
    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ ರತ್ನ ಪ್ರಭ ಅಲಂಕರಿಸಿದ್ದರು.

    ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದರು ಎಂಬುದು ಗಮನಾರ್ಹ ಅಂಶವಾಗಿತ್ತು. ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ 3 ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ. ಇದನ್ನೂ ಓದಿ: ಕರ್ನಾಟದಲ್ಲಿದ್ದಿದ್ದರೆ ನಿಮ್ಮ ಸಂತೋಷದಲ್ಲಿ ನಾನೂ ಭಾಗಿಯಾಗ್ತಿದ್ದೆ: ಮೋದಿ

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆಆರ್ ಮಹಾಲಕ್ಷ್ಮಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

    ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ 2022ರ ನವೆಂಬರ್ 30 ರವರೆಗೆ ಇದೆ. ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.

  • ರಾಜ್ಯದ ನೂತನ ಸಿಎಸ್‌ಆಗಿ ವಂದಿತಾ ಶರ್ಮಾ ನೇಮಕ

    ರಾಜ್ಯದ ನೂತನ ಸಿಎಸ್‌ಆಗಿ ವಂದಿತಾ ಶರ್ಮಾ ನೇಮಕ

    ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.

    ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮೇ 31 ರಂದು ನಿವೃತ್ತ ಆದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

    ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.

    ಮಹಿಳೆಯರ ದರ್ಬಾರ್: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು. ಇದನ್ನೂ ಓದಿ: ಗೆಳೆಯರ ರಕ್ತವನ್ನು ಮೈಗೆ ಮೆತ್ತಿಕೊಂಡು ಸತ್ತೋದಂತೆ ನಟಿಸಿದೆ – ಆಪ್ಪ ಅವನು ಮತ್ತೆ ಬರ್ತಾನೆ: ಶಾಕ್‍ಗೆ ಒಳಗಾದ ಬಾಲಕಿ

    ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.

    ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

    1986ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಹಾಲಿ ರಾಜ್ಯಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್‌ ವರೆಗೆ ಅಧಿಕಾರವಧಿ ಇರಲಿದೆ.

  • ಲಾಕ್‍ಡೌನ್, ನೈಟ್ ಕರ್ಫ್ಯೂ ಇಲ್ಲ, ಬಿಗಿ ಕ್ರಮ ಜಾರಿ: ಸಿಎಸ್ ರವಿಕುಮಾರ್

    ಲಾಕ್‍ಡೌನ್, ನೈಟ್ ಕರ್ಫ್ಯೂ ಇಲ್ಲ, ಬಿಗಿ ಕ್ರಮ ಜಾರಿ: ಸಿಎಸ್ ರವಿಕುಮಾರ್

    – ಭೌತಿಕವಾಗಿ ಶಾಲೆ ನಡೆಸದಿರಲು ನಿರ್ಧಾರ
    – ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಬೆಡ್ ನಿಗದಿ
    – ಬಸ್ ಪ್ರಯಾಣಿಕರ ಸಂಖ್ಯೆಗೂ ಶೀಘ್ರ ಮಿತಿ
    – ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿಗಳ ಜೊತೆ ಸಿಎಸ್ ಸಭೆ

    ಬೆಂಗಳೂರು: ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್‍ಡೌನ್ ಹಾಗೂ ನೈಟ್ ಕರ್ಫ್ಯೂ ವಿಧಿಸುತ್ತಿಲ್ಲ. ಶಾಲೆಗಳನ್ನು ಸಹ ಭೌತಿಕವಾಗಿ ನಡೆಸದಿರಲು ನಿರ್ಧರಿಸಲಾಗಿದೆ. ಲಾಕ್‍ಡೌನ್ ಇಲ್ಲದಿದ್ದರೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಕೊರೊನಾ ನಿಯಂತ್ರಣ ಸಂಬಂಧ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗಳು ಸಭೆ ನಡೆಸಿದ್ದು, ರಾಜ್ಯದ ಪರವಾಗಿ ಸಿಎಸ್ ರವಿಕುಮಾರ್ ಭಾಗಿಯಾದರು. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಪರಿಸ್ಥಿತಿ ಕುರಿತು ಸಿಎಸ್ ವಿವರಣೆ ನೀಡಿದ್ದು, ಕ್ಯಾಬಿನೆಟ್ ಕಾರ್ಯದರ್ಶಿಗಳ ಸಭೆ ಬಳಿಕ ವಿಕಾಸಸೌಧದಲ್ಲಿ ರಾಜ್ಯದ ಕಾರ್ಯದರ್ಶಿಗಳ ಜೊತೆ ಸಹ ಸಿಎಸ್ ಸಭೆ ನಡೆಸಿದರು. ಡಿಜಿಪಿ ಪ್ರವೀಣ್ ಸೂದ್, ಗೃಹ ಕಾರ್ಯದರ್ಶಿಗಳು ಮತ್ತು ಕೊರೊನಾಗೆ ಸಂಬಂಧಿಸಿದ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಿದ್ದರು.

    ಬಳಿಕ ಸಿಎಸ್ ರವಿಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಕೊರೊನಾ ಹೆಚ್ಚಳದ ಬಗ್ಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ, ಪಂಜಾಬ್‍ನಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಸೋಂಕು ತಡೆಗೆ ನಿಗಾ ವಹಿಸಿ, ಲಸಿಕೆ ಹೆಚ್ಚಳಕ್ಕೆ ಸೂಚಿಸಿದ್ದಾರೆ. ಅಲ್ಲದೆ ಲಾಕ್‍ಡೌನ್, ನೈಟ್ ಕರ್ಫ್ಯೂ ಬಗ್ಗೆ ಯೋಚಿಸಬೇಡಿ. ಆದರೆ ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದರು ಎಂದು ತಿಳಿಸಿದ್ದಾರೆ ಎಂದರು.

    ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಲು ನಿರ್ಧರಿಸಿದ್ದು, ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಕ್ರಮ ವಹಿಸಲಾಗಿದೆ. ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸವಗಳನ್ನು ನಿಯಂತ್ರಿಸಿದ್ದೇವೆ. ಶಾಲೆಗಳನ್ನು ಭೌತಿಕವಾಗಿ ನಡೆಸೋದು ಬೇಡ ಎಂದೂ ನಿರ್ಧರಿಸಲಾಗಿದೆ. ಈಗಾಗಲೇ 6-9 ತರಗತಿಗಳನ್ನು ಹದಿನೈದು ದಿನ ಬಂದ್ ಮಾಡಲಾಗಿದೆ ಎಂದರು.

    ಬೆಂಗಳೂರು, ಮೈಸೂರು, ಕಲಬುರ್ಗಿ, ಬೀದರ್ ಸೇರಿ ಹಲವು ಕಡೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಬೆಡ್ ನಿಗದಿ ಮಾಡಲು ನಿರ್ಧರಿಸಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ಅಲ್ಲದೆ ಲಸಿಕೆ ಹೆಚ್ಚಿಸಲು ಸೂಚನೆ ನೀಡಿದ್ದು, ಲಸಿಕೆ ಹಾಕಿಸಿಕೊಳ್ಳಲು ಈಗ ಹೆಚ್ಚು ಜನ ಬರುತ್ತಿಲ್ಲ. ನಾವೇ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಸ್ಥಿತಿ ಇದೆ. ಹೀಗಾಗಿ ಹೆಚ್ಚು ಜನ ಇರುವ ಕಡೆ ಲಸಿಕೆ ಹಾಕಲು ಕ್ರಮ ತೆಗೆದುಕೊಳ್ಳುತ್ತೇವೆ.

    ಕೇಂದ್ರಕ್ಕೆ ವಾಸ್ತವ ಸ್ಥಿತಿ ವರದಿ
    ರಾಜ್ಯದಿಂದ ಕೇಂದ್ರಕ್ಕೆ ಕೊರೊನಾ ವಾಸ್ತವ ಸ್ಥಿತಿ ವರದಿಯನ್ನು ಸಲ್ಲಿಸಲಾಗಿದ್ದು, ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾಗೆ ಸಿಎಸ್ ರವಿಕುಮಾರ್ ಮಾಹಿತಿ ನೀಡಿದ್ದಾರೆ. ಕೊರೊನಾ ಪೀಡಿತರ ಸಂಖ್ಯೆ, ಗುಣಮುಖರಾಗುವ ರೋಗಿಗಳ ಸರಾಸರಿ ವಿವರ ಸಲ್ಲಿಕೆಯಾಗಿದೆ. ನೆರೆಯ ಮಹಾರಾಷ್ಟ್ರಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ. ವಾಣಿಜ್ಯ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಯಂತ್ರಿಸುವ ಅಗತ್ಯ ಇಲ್ಲ ಎಂದು ಕೇಂದ್ರಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.

    ಜನಸಂದಣಿಗೆ ಬ್ರೇಕ್ ಹಾಕಲೇಬೇಕಾದ ಅಗತ್ಯವಿದೆ. ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಧಾರ್ಮಿಕ ಆಚರಣೆಗಳನ್ನು ಸಂಪ್ರದಾಯಕ್ಕಷ್ಟೇ ಸೀಮಿತಗೊಳಿಸಿ ಆಚರಿಸಬೇಕಿದೆ. ಬೇರೆ ವಲಯಗಳ ನೌಕರರಿಗೆ ಡ್ಯೂಟಿ ಪಾಳಿಗಳನ್ನು ಸಹ ಗಮನಿಸಬೇಕಿದೆ ಎಂದು ವರದಿಯಲ್ಲಿ ಹೇಳಿದ್ದಾರೆ.

    ಸಮೂಹ ಸಾರಿಗೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಗೂ ಮಿತಿ ಹಾಕಬೇಕಿದ್ದು, ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮಗಳ ಅಗತ್ಯವಿದೆ. ಲಸಿಕೆ ಅಭಿಯಾನವನ್ನು ಇನ್ನೂ ಚುರುಕುಗೊಳಿಸಬೇಕು. ಲಸಿಕೆ ಹಾಕಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಎಲ್ಲ ಜಾಗೃತಿ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗೆ ಸಿಎಸ್ ರವಿಕುಮಾರ್ ವಿವರಿಸಿದ್ದಾರೆ.

  • ಕರ್ನಾಟಕದ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ನೇಮಕ

    ಕರ್ನಾಟಕದ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ನೇಮಕ

    ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ನೇಮಕವಾಗಿದ್ದಾರೆ. ಪಿ ರವಿಕುಮಾರ್ ಅವರನ್ನು ಮಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿ ಇಂದು ಸರ್ಕಾರ ಆದೇಶಿಸಿದೆ.

    ಹಾಲಿ ಸಿಎಸ್ ಟಿ ಎಂ ವಿಜಯ್ ಭಾಸ್ಕರ್ ಸೇವಾವಧಿ ನಾಳೆ ಮುಕ್ತಾಯವಾಗಲಿದ್ದು, ತೆರವಾಗಲಿರುವ ಸ್ಥಾನಕ್ಕೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ಪಿ ರವಿಕುಮಾರ್‌ನ್ನು  ನೇಮಿಸಲಾಗಿದೆ.

    ಪಿ ರವಿಕುಮಾರ್ 1984ರ ಬ್ಯಾಚ್  ಐಎಎಸ್ ಅಧಿಕಾರಿಯಾಗಿದ್ದಾರೆ. ನಾಳೆ ವಿಧಾನಸೌಧದಲ್ಲಿ ಪಿ ರವಿಕುಮಾರ್‌ಗೆ ವಿಜಯಭಾಸ್ಕರ್ ಅವರು ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಪಿ ರವಿಕುಮಾರ್ ಸರ್ಕಾರದ 38ನೇ ಮುಖ್ಯಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

    1984 ಬ್ಯಾಚ್‍ನ ಅಧಿಕಾರಿಯಾಗಿರುವ ರವಿ ಕುಮಾರ್ ಹಿರಿತನದ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಕರ್ನಾಟಕ ಕೇಡರ್‌ನ  ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ, ಸಹಕಾರ, ಸಾರಿಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

    ಕೆಪಿಟಿಸಿಎಲ್ ಎಂಡಿ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ರಾಜ್ಯ ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರವಿ ಕುಮಾರ್ ಅವರ ಸೇವಾವಧಿ 2022ರ ಮೇ ವರೆಗೆ ಇದೆ. 1 ವರ್ಷ 5 ತಿಂಗಳು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ರವಿ ಕುಮಾರ್ ಸೇವೆಯಲ್ಲಿ ಇರಲಿದ್ದಾರೆ

  • ಬೆಂಗಳೂರು ನಗರ ಜಿಲ್ಲಾ ಕಬಡ್ಡಿ ಸಂಸ್ಥೆಗೆ ಎಂ.ವಿ.ಪ್ರಸಾದ್​ ಬಾಬು ಕಾರ್ಯದರ್ಶಿಯಾಗಿ ಆಯ್ಕೆ

    ಬೆಂಗಳೂರು ನಗರ ಜಿಲ್ಲಾ ಕಬಡ್ಡಿ ಸಂಸ್ಥೆಗೆ ಎಂ.ವಿ.ಪ್ರಸಾದ್​ ಬಾಬು ಕಾರ್ಯದರ್ಶಿಯಾಗಿ ಆಯ್ಕೆ

    ಬೆಂಗಳೂರು: ಬೆಂಗಳೂರು ನಗರ​ ಜಿಲ್ಲಾ ಅಮೆಚೂರ್​ ಕಬಡ್ಡಿ ಅಸೋಸಿಯೇಷನ್​ಗೆ ಮಾಜಿ ಕಬಡ್ಡಿ ಆಟಗಾರ ಎಂ.ವಿ. ಪ್ರಸಾದ್​ ಬಾಬು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ.

    ಇಂದು ಬಿವಿಕೆ ವಿಹಾರ ಕೇಂದ್ರದಲ್ಲಿ ಬೆಂಗಳೂರು ನಗರ​ ಜಿಲ್ಲಾ ಅಮೆಚೂರ್​ ಕಬಡ್ಡಿ ಅಸೋಸಿಯೇಷನ್ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಗೆ ಒಳಪಟ್ಟ 100 ಮಂದಿ ಸದಸ್ಯರು ಹಾಜರಾಗಿ ಅವಿರೋಧವಾಗಿ ಪ್ರಸಾದ್​ ಬಾಬು ಅವರನ್ನು ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

    ಈ ಸಂದರ್ಭದಲ್ಲಿ ಮಾಜಿ ಕಬಡ್ಡಿ ಆಟಗಾರ ವಿ.ಜಯರಾಂ ಅವರನ್ನು ಅಧ್ಯಕ್ಷರಾಗಿ ಹಾಗೂ ಕೆ.ಮುತ್ತುರಾಜ್​ ಅವರನ್ನು ಖಜಾಂಚಿಯಾಗಿ ಸರ್ವಾನುಮತದಿಂದ ನೇಮಕ ಮಾಡಲಾಯಿತು.

    ಎಂ.ವಿ.ಪ್ರಸಾದ್​ ಬಾಬು ಕರ್ನಾಟಕ ಅಮೆಚೂರ್​ ಕಬಡ್ಡಿ ಸಂಸ್ಥೆ ಕಾರ್ಯದರ್ಶಿ ರೇಸ್​ನಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಕ್ರೀಯವಾಗಿ ರಾಜ್ಯ ಕಬಡ್ಡಿ ಸಂಸ್ಥೆಯಲ್ಲಿ ತೊಡಗಿಕೊಳ್ಳಬೇಕು ಎನ್ನುವ ಆಶಯವನ್ನು ಹೊಂದಿದ್ದಾರೆ.

    ಇವರು ಭಾರತೀಯ ಅಮೆಚೂರ್​ ಕಬಡ್ಡಿ ಒಕ್ಕೂಟ (ಎಕೆಎಫ್​ಐ)ಕ್ಕೆ ಪರ್ಯಾಯವಾಗಿ ನ್ಯೂ ಕಬಡ್ಡಿ ಫೆಡರೇಷನ್​ ಆಫ್ ಇಂಡಿಯಾ (ಎನ್​ಕೆಎಫ್​ಐ) ಸಂಸ್ಥೆಯನ್ನು ಹುಟ್ಟು ಹಾಕಿ ದೇಶದಲ್ಲಿ ಬದಲಾವಣೆಯ ಬಿರುಗಾಳಿ ಏಳುವಂತೆ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

  • ದೋಸ್ತಿಗೆ ರಾಜ್ಯಪಾಲರಿಂದ ವಾರ್ನಿಂಗ್

    ದೋಸ್ತಿಗೆ ರಾಜ್ಯಪಾಲರಿಂದ ವಾರ್ನಿಂಗ್

    ಬೆಂಗಳೂರು: ದೋಸ್ತಿ ಸರ್ಕಾರ ಅಳಿವಿನ ಅಂಚಿನಲ್ಲಿದ್ದರೂ ಎಗ್ಗಿಲ್ಲದೇ ಕಡತ ವಿಲೇವಾರಿ ನಡೆಯುತ್ತಿದೆ. ಅಲ್ಲದೆ ಯದ್ವಾತದ್ವಾ ಅಧಿಕಾರಿಗಳ ವರ್ಗಾವಣೆಯನ್ನೂ ಮಾಡಲಾಗುತ್ತಿದೆ.

    ಈ ಸಂಬಂಧ ರಾಜ್ಯಪಾಲರು ಈಗ ಎಂಟ್ರಿ ಕೊಟ್ಟಿದ್ದಾರೆ. ಸದ್ಯದ ಸನ್ನಿವೇಶದಲ್ಲಿ ಯಾವುದೇ ಮಹತ್ವದ ನಿರ್ಣಯ ಕೈಗೊಳ್ಳಬೇಡಿ. ಯಾವುದೇ ಫೈಲ್ ಕ್ಲಿಯರ್ ಮಾಡಬೇಡಿ. ಅಲ್ಲದೆ ವರ್ಗಾವಣೆ ಆದೇಶ ನೀಡಬಾರದು ಎಂದು ರಾಜ್ಯಪಾಲ ವಜೂಭಾಯ್ ವಾಲಾ ಅವರು ದೋಸ್ತಿ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.

    ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್‍ ಗೆ ರಾಜ್ಯಪಾಲರು ಈ ಪತ್ರ ರವಾನಿಸಿದ್ದಾರೆ. ಒಟ್ಟಿನಲ್ಲಿ ವಿಶ್ವಾಸ ಮತಯಾಚನೆಗೆ 2 ಬಾರಿ ಗಡುವು ಕೊಟ್ಟರೂ ಕ್ಯಾರೇ ಎನ್ನದ ದೋಸ್ತಿಗಳು ಇದೀಗ ಈ ವಿಚಾರದಲ್ಲಿ ಮೈತ್ರಿ ನಾಯಕರು ರಾಜ್ಯಪಾಲರಿಗೆ ಗೌರವ ಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕು.