Tag: Chikanna

  • ದರ್ಶನ್‌ ಗ್ಯಾಂಗ್‌ ಅಂದರ್‌ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

    ದರ್ಶನ್‌ ಗ್ಯಾಂಗ್‌ ಅಂದರ್‌ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

    ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ದರ್ಶನ್‌ (Darshan) ಗ್ಯಾಂಗ್‌ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ (Sandalwood) ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ (Chikkanna) ಪೊಲೀಸರು ನೋಟಿಸ್‌ ನೀಡಿದ್ದಾರೆ.

    ಹೌದು. ಕೊಲೆ ನಡೆದ ಜೂನ್‌ 8 ಶನಿವಾರದಂದು ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರು ಆರ್‌ಆರ್‌ ನಗರದ ಸ್ಟೋನಿಬ್ರೂಕ್‌ ಪಬ್‌ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು.  ಇದನ್ನೂ ಓದಿ: ಹಾಸನದಲ್ಲಿ ಕಾಣಿಸಿಕೊಂಡ ನೀಲಿ ತಾರೆ- ಶೂಟಿಂಗ್‌ನಲ್ಲಿ ಸನ್ನಿ ಲಿಯೋನ್ ಭಾಗಿ

     

    ಸಂಜೆ ವೇಳೆಗೆ ಸ್ವಲ್ಪ ಕೆಲಸವಿದೆ ಎಂದು ಹೇಳಿ ದರ್ಶನ್ ಹೊರಟಿದ್ದರು. ರೇಣುಕಾಸ್ವಾಮಿ ಕೊಲೆಯಾದ ದಿನವೇ ದರ್ಶನ್‌ ಜೊತೆ ಪಾರ್ಟಿ ಮಾಡಿದ್ದರಿಂದ ಪೊಲೀಸರು ಈಗ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಕೊಲೆ ವಿಚಾರವಾಗಿ ಪಬ್‌ನಲ್ಲಿ ಏನಾದರೂ ಚರ್ಚೆ ನಡೆದಿತ್ತಾ ಎಂಬುದರ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ. ಈಗ ನೋಟಿಸ್ ಕೊಟ್ಟು ಕರೆಸಬೇಕೇ? ಬೇಡವೇ ಎಂಬುದರ ಬಗ್ಗೆ ಪೊಲೀಸರು ಹಿರಿಯ ಅಧಿಕಾರಿಗಳ ಸಲಹೆ ಕೇಳಿದ್ದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

     

    ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗದ ಕಾರಣ ಚಿಕ್ಕಣ್ಣ ಅವರನ್ನು ಬಂಧನ ಮಾಡುವುದಿಲ್ಲ. ಬದಲಾಗಿ ಸಾಕ್ಷಿಯನ್ನಾಗಿ ಪರಿಗಣಿಸಲಿದ್ದಾರೆ. ಕೊಲೆಯ ಬಗ್ಗೆ ಮಾಹಿತಿ ಇಲ್ಲದೇ ಇದ್ದರೂ ಕೂಡ, ಪಾರ್ಟಿಯಲ್ಲಿದ್ದ ಎಂಬ ಕಾರಣಕ್ಕೆ ಸಾಕ್ಷಿಯಾಗಿ ಪರಿಗಣನೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

  • ಹಾರರ್ ಕಾಮಿಡಿ ಸಿನಿಮಾದಲ್ಲಿ ಇಬ್ಬರು ನಾಯಕಿಯರ ಜೊತೆ ಶರಣ್ ಡುಯೆಟ್

    ಹಾರರ್ ಕಾಮಿಡಿ ಸಿನಿಮಾದಲ್ಲಿ ಇಬ್ಬರು ನಾಯಕಿಯರ ಜೊತೆ ಶರಣ್ ಡುಯೆಟ್

    ಟ ಶರಣ್ ಇದೀಗ ಮತ್ತೊಂದು ಸಿನಿಮಾದಲ್ಲಿ ಸದ್ದಿಲ್ಲದೇ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಛೂ ಮಂತರ್’ ಎಂದು ಹೆಸರಿಡಲಾಗಿದ್ದು, ಈ ಸಿನಿಮಾದ ನಾಯಕರಾಗಿ ಶರಣ್ ನಟಿಸಿದ್ದರೆ, ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ.

    ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡುತ್ತಾ ಬಂದಿರುವ, ತರುಣ್ ಸ್ಟುಡಿಯೋಸ್  ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಚಿತ್ರ. “ಕರ್ವ” ಚಿತ್ರದ‌ ಮೂಲಕ ಕನ್ನಡಿಗರ ಮನಗೆದ್ದಿರುವ ನವನೀತ್, ಕಥೆ, ಚಿತ್ರಕಥೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

    ಹಾರರ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಿದ್ದವಾಗುತ್ತಿದೆ. ಬೆಂಗಳೂರು, ಮೈಸೂರು, ಉತ್ತರಾಖಂಡ ಹಾಗೂ ಲಂಡನ್ ನಲ್ಲಿ ಚಿತ್ರೀಕರಣ ನಡೆದಿದೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಅನೂಪ್ ಕಟ್ಟುಕರನ್ ಮೊದಲ ಬಾರಿಗೆ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ. ವೆಂಕಿ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್(ಕೆ.ಜಿ.ಎಫ್ ಖ್ಯಾತಿ) ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ “ಛೂ ಮಂತರ್” ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ರೂ ಚಿಕ್ಕಣ್ಣ ವೋಟ್ ಹಾಕಿಲ್ಲ!

    ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ರೂ ಚಿಕ್ಕಣ್ಣ ವೋಟ್ ಹಾಕಿಲ್ಲ!

    ಮೈಸೂರು: ಮತದಾನದ ಹಕ್ಕಿನಿಂದ ಹಾಸ್ಯನಟ ಚಿಕ್ಕಣ್ಣ ವಂಚಿತರಾಗಿದ್ದಾರೆ.

    ಚಿಕ್ಕಣ್ಣ ಮೈಸೂರಿನ ಬಲ್ಲಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತದಾರರಾಗಿದ್ದರು. ಅಲ್ಲದೇ ಹುಟ್ಟೂರಿನಲ್ಲಿ ಮತದಾನದ ಹಕ್ಕನ್ನು ಉಳಿಸಿಕೊಂಡಿದ್ದರು. ಮತದಾನಕ್ಕಾಗಿ ಬೆಂಗಳೂರಿನಿಂದ ಮೈಸೂರಿಗೂ ಕೂಡ ಆಗಮಿಸಿದ್ದರು.

    ಚಿಕ್ಕಣ್ಣ ಇಂದು ಮತಗಟ್ಟೆಗೆ ಭೇಟಿ ನೀಡಿದಾಗ ತನ್ನ ಹೆಸರಿನ ಮೇಲೆ ಡಿಲೀಟ್ ಎಂದು ಉಲ್ಲೇಖಿಸಿದ್ದಾರೆ. ವಾಸವಿಲ್ಲದ ಕಾರಣ ಡಿಲೀಟ್ ಆಗಿದೆ ಎಂದು ಮತಗಟ್ಟೆ ಸಿಬ್ಬಂದಿಗಳು ಸಬೂಬು ಹೇಳಿದ್ದಾರೆ. ಅಲ್ಲದೇ ಗ್ರಾಮದ ಹಲವರ ಹೆಸರನ್ನು ಡಿಲೀಟ್ ಮಾಡಿರುವ ಬಗ್ಗೆ ಆರೋಪಿಸಿದ್ದಾರೆ.

    ಕೊನೆಗೂ ಚಿಕ್ಕಣ ತಮ್ಮ ಮತದಾನ ಮಾಡದೆ ವಾಪಸ್ ಆಗಿದ್ದಾರೆ. ಚಿಕ್ಕಣ್ಣ ಮತದಾನಕ್ಕಾಗಿಯೇ ಬೆಂಗಳೂರಿನಿಂದ ಮೈಸೂರಿಗೆ ಬಂದಿದ್ದರು ಆದರೆ ಈಗ ಬೇಸರದಿಂದ ವಾಪಸ್ ಆಗಿದ್ದಾರೆ.