Tag: Chikballapur

  • ಘಟಿಕೋತ್ಸವ ಸಮಾರಂಭ ಗುರು ಶಿಷ್ಯರ ಶ್ರೇಷ್ಠ ಸಂಪ್ರದಾಯದ ಪ್ರತಿಬಿಂಬ – ಥಾವರ್ ಚಂದ್ ಗೆಹ್ಲೋಟ್

    ಘಟಿಕೋತ್ಸವ ಸಮಾರಂಭ ಗುರು ಶಿಷ್ಯರ ಶ್ರೇಷ್ಠ ಸಂಪ್ರದಾಯದ ಪ್ರತಿಬಿಂಬ – ಥಾವರ್ ಚಂದ್ ಗೆಹ್ಲೋಟ್

    ಚಿಕ್ಕಬಳ್ಳಾಪುರ: ಘಟಿಕೋತ್ಸವ ಸಮಾರಂಭವು ಗುರು ಶಿಷ್ಯರ ಶ್ರೇಷ್ಠ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ. ದೇಶದ ಗೌರವಾನ್ವಿತ ರಾಷ್ಟ್ರಪತಿಗಳು ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಿರುವುದರಿಂದ ಈ ಸಮಾರಂಭದ ಘನತೆ ಮತ್ತಷ್ಟು ಹೆಚ್ಚಿದೆ. ಈ ಘಟಿಕೋತ್ಸವದಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಹೇಳಿದ್ದಾರೆ.

    ಅವರು ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಯುನಿವರ್ಸಿಟಿ ಆಫ್ ಹ್ಯೂಮನ್ ಎಕ್ಸಲೆನ್ಸ್‌ನ (Sathya Sai University) 2ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಗುರುವೇ ಬ್ರಹ್ಮ, ಗುರುವೇ ವಿಷ್ಣು, ಗುರುವೇ ದೇವರು ಮತ್ತು ಗುರು ಮಹೇಶ್ವರನಾಗಿದ್ದಾನೆ. ಶಿಕ್ಷಕನು ನೇರವಾಗಿ ಪರಮ ಬ್ರಹ್ಮನಾಗಿದ್ದು, ಎಲ್ಲರಿಗೂ ಗುರು ಪೂರ್ಣಿಮೆಯ ಶುಭಾಶಯಗಳನ್ನ ಕೋರಿದರು. ಇದನ್ನೂ ಓದಿ: ಪಿಎಸ್‍ಐ ಹಗರಣ – ಎಡಿಜಿಪಿ ಅಮೃತ್ ಪೌಲ್‌ಗೆ ಮತ್ತೊಂದು ಸಂಕಷ್ಟ

    ಕ್ಯಾಂಪಸ್, ವಿಶ್ವವಿದ್ಯಾನಿಲಯದ ಚಟುವಟಿಕೆಗಳನ್ನು ಹತ್ತಿರದಿಂದ ನೋಡುವ ಮತ್ತು ಅರ್ಥಮಾಡಿಕೊಳ್ಳುವ ಅವಕಾಶ ದೊರೆತಿದೆ. ಭಾರತದ ಈ ದಕ್ಷಿಣ ರಾಜ್ಯವಾದ ಕರ್ನಾಟಕದಲ್ಲಿ ಸುಂದರವಾದ ಪರಿಸರದಲ್ಲಿ ಸಾಂಸ್ಕøತಿಕ ಸೌಂದರ್ಯದೊಂದಿಗೆ ಶಿಕ್ಷಣದ ಈ ಹೊಸ ಸ್ಥಳವೂ ಎಲ್ಲರಿಗೂ ಸ್ಫೂರ್ತಿಯಾಗಿದೆ. ಉಚಿತ ಶಿಕ್ಷಣ, ಉಚಿತ ಪೋಷಣೆ ಮತ್ತು ಉಚಿತ ವೈದ್ಯಕೀಯ ಸೇವೆಯಂತಹ ಮಾನವ ಸೇವೆಯ ಅನೇಕ ವಿಶಿಷ್ಟ ಪ್ರಯೋಗಗಳು ಈ ಕ್ಯಾಂಪಸ್‍ನಲ್ಲಿ ನಡೆಯುತ್ತಿವೆ. ಈ ವಿಶ್ವವಿದ್ಯಾಲಯವು, ಶ್ರೀ ಸತ್ಯಸಾಯಿ ಬಾಬಾರವರ ಸ್ಪೂರ್ತಿದಾಯಕ ಸಂದೇಶವಾದ “ಎಲ್ಲರನ್ನು ಪ್ರೀತಿಸಿ” ಮತ್ತು “ಎವರ್-ಹರ್ಟ್ ನೆವರ್”, ಧ್ಯೇಯವಾಕ್ಯ “ಯೋಗ: ಕರ್ಮಸು ಕೌಶಲ” ಅಂದರೆ ಯೋಗ ಕ್ರಿಯೆಯಲ್ಲಿನ ಕೌಶಲ್ಯದ ಹೆಸರು. ಯೋಗದಿಂದ ದೈವತ್ವ ಕಾರ್ಯರೂಪಕ್ಕೆ ಬರುತ್ತದೆ. ಈ ಮೂಲಕ ದಕ್ಷತೆ ಬರುತ್ತದೆ ಎಂಬ ಚಿಂತನೆಯೊಂದಿಗೆ ಇಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

    ವಿಶ್ವವಿದ್ಯಾಲಯವು ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡಿದ ಮಹಾನ್ ವ್ಯಕ್ತಿಗಳಿಗೆ ಗೌರವ ಪದವಿಯನ್ನು ನೀಡಿದೆ. ಈ ಮಹಾನ್ ವ್ಯಕ್ತಿಗಳನ್ನು ಅವರ ಅತ್ಯುತ್ತಮ ಸಾಧನೆಗಳಿಗಾಗಿ ಮತ್ತು ಮಾನವ ಸಮಾಜದ ಪ್ರಗತಿಗೆ ಮಹತ್ವದ ಕೊಡುಗೆಗಾಗಿ ಅಭಿನಂದಿಸುತ್ತೇನೆ. ಸಾಧಕರು ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತಾಸಕ್ತಿಗಾಗಿ ಕೆಲಸ ಮಾಡುವುದನ್ನು ಮುಂದುವರೆಸಬೇಕು ಎಂದು ಆಶಿಸುತ್ತೇನೆ ಎಂದಿದ್ದಾರೆ.

    ಅನೇಕ ವಿದ್ಯಾರ್ಥಿಗಳಿಗೆ ಪದವಿಯನ್ನು ನೀಡಲಾಗಿದೆ. ಆ ಎಲ್ಲಾ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಅಭಿನಂದಿಸುತ್ತೇನೆ. ಇಲ್ಲಿ ಪಡೆದ ಶಿಕ್ಷಣವನ್ನು ದೇಶದ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜ ಸೇವೆಗಾಗಿ ಬಳಸಬೇಕೆಂದು ಮನವಿ ಮಾಡಿದರು.

    ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಬಹಳ ಪುರಾತನವಾಗಿದೆ ಮತ್ತು ಅನಾದಿ ಕಾಲದಿಂದಲೂ ನಾವು “ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ” ಎಂಬ ಮನೋಭಾವದಿಂದ ಪ್ರೇರಿತರಾಗಿದ್ದೇವೆ. “ವಸುಧೈವ ಕುಟುಂಬಕಂ” ತತ್ವಶಾಸ್ತ್ರ ಮತ್ತು ಧ್ಯಾನ, ಸಾರ್ವತ್ರಿಕ ಸಹೋದರತ್ವ ಮತ್ತು ವಿಶ್ವ ಶಾಂತಿ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಕಲಿಸುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸಕಾರಾತ್ಮಕ ಪ್ರಯತ್ನಗಳನ್ನು ಮಾಡಬೇಕಾಗಿದೆ ಎಂದಿದ್ದಾರೆ.

    ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಮುಂದಿನ 25 ವರ್ಷಗಳು ಅಮೃತ ಕಾಲ, ನಮ್ಮ ದೇಶವನ್ನು ವಿಶ್ವದ ಅತ್ಯುತ್ತಮ ದೇಶಗಳ ವರ್ಗಕ್ಕೆ ತರುವ ಕರ್ತವ್ಯದ ಅವಧಿಯಾಗಿದೆ. ಈ ಕರ್ತವ್ಯದ ಅವಧಿಯನ್ನು ಅವಕಾಶವನ್ನಾಗಿ ಪರಿವರ್ತಿಸುವಲ್ಲಿ ನಾವು ಪಾಲುದಾರರಾಗಿರಬೇಕು.

    ವಿದ್ಯಾರ್ಥಿಗಳು ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರವನ್ನು ನಿರ್ವಹಿಸುವುದನ್ನು ಮುಂದುವರೆಸ ಬೇಕು. ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಲು ಇತರರನ್ನು ಪ್ರೇರೇಪಿಸಬೇಕು. ಏಕ್ ಭಾರತ್, ಶ್ರೇಷ್ಠ ಭಾರತ್ ಮತ್ತು ಆತ್ಮನಿರ್ಭರ್ ಭಾರತ್ ಮಾಡುವಲ್ಲಿ ಕೆಲಸ ಮಾಡುತ್ತೀರೆಂಬ ನಂಬಿಕೆ ಇದೆ ಎಂದು ಭರವಸೆ ವ್ಯಕ್ತ ಪಡಸಿದರು.

    ಶ್ರೀ ಸತ್ಯಸಾಯಿ ಮಾನವ ಶ್ರೇಷ್ಠತೆಯ ವಿಶ್ವವಿದ್ಯಾನಿಲಯವು ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕಾಂಶ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯ ಉತ್ತಮ ಕೆಲಸ. ಅಲ್ಲದೇ ಆಧುನಿಕ ಶಿಕ್ಷಣ ಮತ್ತು ಆಧ್ಯಾತ್ಮಿಕ ಶಿಕ್ಷಣವನ್ನು ಸಂಯೋಜಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.

    ವಿಶ್ವವಿದ್ಯಾನಿಲಯದ ಸಂಸ್ಥಾಪಕರಾದ ಗೌರವಾನ್ವಿತ ಸದ್ಗುರು ಸ್ವಾಮಿ ಮಧುಸೂದನ್ ಸಾಯಿ, ಕುಲಪತಿ ಗೌರವಾನ್ವಿತ ಶ್ರೀ ಬಿ. ಎನ್. ನರಸಿಂಹ ಮೂರ್ತಿ, ಉಪಕುಲಪತಿ ಪ್ರೊ. ಶ್ರೀಕಾಂತ್ ಮೂರ್ತಿ, ಶ್ರೀ ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಡಾ. ಶ್ರೀನಿವಾಸ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ದ್ರೌಪದಿ ಮುರ್ಮು – ಸಿಎಂ, ರಾಜ್ಯಪಾಲರಿಂದ ಸ್ವಾಗತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ – ಪಾರ್ಟಿ ನೆಪದಲ್ಲಿ ಸ್ನೇಹಿತನ ಮರ್ಡರ್

    ಪತ್ನಿ ಜೊತೆ ಅನೈತಿಕ ಸಂಬಂಧ ಶಂಕೆ – ಪಾರ್ಟಿ ನೆಪದಲ್ಲಿ ಸ್ನೇಹಿತನ ಮರ್ಡರ್

    ಚಿಕ್ಕಬಳ್ಳಾಪುರ: ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದ ಮೇರೆಗೆ ವ್ಯಕ್ತಿಯೊಬ್ಬ ಸ್ನೇಹಿತನನ್ನು ಪಾರ್ಟಿಗೆ ಕರೆದು ಕೊಲೆ (Murder) ಮಾಡಿರುವ ಘಟನೆ ದೇವನಹಳ್ಳಿಯ (Devanahalli) ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ನಿವಾಸಿ ಪ್ರದೀಪ್ ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ ಹಾಗೂ ನಾಗೇಶ್ ಕೊಲೆ ಮಾಡಿದ ಆರೋಪಿಗಳು. ವೆಂಕಟೇಶ್ ಹಾಗೂ ಪ್ರದೀಪ್ ಇಬ್ಬರು ಸ್ನೇಹಿತರು. ಮನೆಗೆ ಬಂದು ಹೋಗುತ್ತಿದ್ದ ಪ್ರದೀಪ್, ಆರೋಪಿ ವೆಂಕಟೇಶ್ ಹೆಂಡತಿ ಜೊತೆ ಚಾಟಿಂಗ್ ಮಾಡುತ್ತಿದ್ದ. ಇದೇ ವಿಚಾರವಾಗಿ ಹಲವು ಬಾರಿ ವೆಂಕಟೇಶ್, ಪ್ರದೀಪ್‍ನಿಗೆ ವಾರ್ನಿಂಗ್ ಮಾಡಿದ್ದ. ಕಳೆದ ತಿಂಗಳು ಈ ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ವಿಶ್ವನಾಥಪುರ ಪೊಲೀಸರು (Vishwanathapura Police Station) ಇಬ್ಬರನ್ನು ಕರೆಸಿ ಬುದ್ಧಿವಾದ ಹೇಳಿ ಕಳಿಸಿದ್ದರು. ಇದನ್ನೂ ಓದಿ: ಕೊಲೆ ಪಾತಕಿಗೆ ಜೀವಾವಧಿ ಶಿಕ್ಷೆ – 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯ

    ಆದರೆ ಇಷ್ಟೆಲ್ಲ ನಡೆದ ಮೇಲೂ ಪ್ರದೀಪ್ ಮತ್ತೆ ಮತ್ತೆ ಕಾಲ್ ಹಾಗೂ ಮೆಸೇಜ್ ಮಾಡುತ್ತಿದ್ದ. ಇದೇ ಕಾರಣಕ್ಕೆ ಕಳೆದ ರಾತ್ರಿ ಪಾರ್ಟಿ ಮಾಡುವುದಾಗಿ ಗ್ರಾಮದ ಪಕ್ಕದ ಬಡಾವಣೆಯೊಂದಕ್ಕೆ ಕರೆಸಿಕೊಂಡಿದ್ದಾನೆ. ಈ ವೇಳೆ ಸ್ನೇಹಿತ ನಾಗೇಶನ ಜೊತೆ ಸೇರಿ ಪ್ರದೀಪ್ ಮೇಲೆ ಬಿಯರ್ ಬಾಟ್ಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

    ಇತ್ತ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದ ಪ್ರದೀಪ್, ಜೀವ ಉಳಿಸಿಕೊಳ್ಳಲು ಒಂದು ಕಿಲೋ ಮೀಟರ್ ಓಡಿ ಬಂದಿದ್ದಾನೆ. ಆದರೆ ಮನೆಯ ಬಳಿ ಬರುತ್ತಿದ್ದಂತೆ ಕಿರುಚಾಡಿಕೊಂಡು ಕುಸಿದು ಬಿದ್ದಿದ್ದಾನೆ. ಇದನ್ನು ಕಂಡು ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆತನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಇಬ್ಬರು ಆರೋಪಿಗಳನ್ನು ವಿಶ್ವನಾಥಪುರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಾರಿಗೆ ಬಸ್‌ನಲ್ಲಿ ಅಕ್ರಮ ಗಾಂಜಾ ಸಾಗಾಟ – ಇಬ್ಬರ ಬಂಧನ

  • ಆಲಿಕಲ್ಲು ಸಹಿತ ಮಳೆಗೆ ನೆಲಕಚ್ಚಿದ ಬೆಳೆಗಳು ಅನ್ನದಾತನಿಗೆ ನಷ್ಟವೋ ನಷ್ಟ

    ಆಲಿಕಲ್ಲು ಸಹಿತ ಮಳೆಗೆ ನೆಲಕಚ್ಚಿದ ಬೆಳೆಗಳು ಅನ್ನದಾತನಿಗೆ ನಷ್ಟವೋ ನಷ್ಟ

    ಚಿಕ್ಕಬಳ್ಳಾಪುರ: ಗುರುವಾರ ರಾತ್ರಿ ಚಿಕ್ಕಬಳ್ಳಾಪುರದಲ್ಲಿ (Chikballapur) ಸುರಿದ ಬಿರುಗಾಳಿ ಸಹಿತ ಆಲಿಕಲ್ಲು (Hailstorm) ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ರೇಣುಮಾಕಲಹಳ್ಳಿ ಗ್ರಾಮದ ರೈತ (farmer) ರಾಮಮೂರ್ತಿ ಹಾಗೂ ನಾರಾಯಣ ಮೂರ್ತಿ ಎಂಬುವವರು ಬೆಳೆದಿದ್ದ ದ್ರಾಕ್ಷಿ ಫಸಲು ಆಲಿಕಲ್ಲು ಮಳೆಗೆ ಸಿಲುಕಿ ಹಾಳಾಗಿದೆ.

    ಬೊಮ್ಮನಹಳ್ಳಿ ಗ್ರಾಮದ ಬೆರಾರೆಡ್ಡಿ ಎಂಬುವವರಿಗೆ ಸೇರಿದ ಜೋಳದ ಬೆಳೆ ಸಹ ಸಂಪೂರ್ಣ ನೆಲಕ್ಕುರುಳಿದೆ. ಇಷ್ಟೇ ಅಲ್ಲದೇ ರೈತರು ಬೆಳೆದಿದ್ದ ಹೂವಿನ ತೋಟ, ತರಕಾರಿ ಸೇರಿದಂತೆ ದಾಳಿಂಬೆ ಬೆಳೆಗಳು ಹಾನಿಯಾಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ ಸಂಭವಿಸಿದೆ. ಬೆಳೆ ಹಾನಿಯಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

    ರಾಜ್ಯದಲ್ಲಿ ಹವಾಮಾನ ವೈಪರಿತ್ಯದಿಂದ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮಾ. 18ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ( Meteorological Department) ಮಾಹಿತಿ ನೀಡಿದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!

  • ತೆರೆದಿದ್ದ ನಂದಿಬೆಟ್ಟ ಕ್ಲೋಸ್

    ತೆರೆದಿದ್ದ ನಂದಿಬೆಟ್ಟ ಕ್ಲೋಸ್

    ಚಿಕ್ಕಬಳ್ಳಾಪುರ: ವೀಕೆಂಡ್ ಕರ್ಫ್ಯೂ  ನಡುವೆಯೂ ನಂದಿಗಿರಿಧಾಮಕ್ಕೆ ಬೆಳ್ಳಂ ಬೆಳಗ್ಗೆ ನೂರಾರು ಪ್ರವಾಸಿಗರ ಆಗಮನದ ವರದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಬೆನ್ನಲ್ಲೇ ಪೊಲೀಸರು ನಂದಿಗಿರಿಧಾಮ ಗೇಟ್ ಕ್ಲೋಸ್ ಮಾಡಿದ್ದಾರೆ.

    ಕಳೆದ ಸೋಮವಾರದಿಂದ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರವಾಸಿ ತಾಣಗಳನ್ನು ಅನ್‍ಲಾಕ್ ಮಾಡುವಂತೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡದಿದ್ದರೂ ಕೂಡ ಜಿಲ್ಲಾಡಳಿತ ನಂದಿಬೆಟ್ಟವನ್ನು ಅನ್‍ಲಾಕ್ ಮಾಡಿತ್ತು. ಸೋಮವಾರದಿಂದ ಕಡಿಮೆ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಬೆಟ್ಟಕ್ಕೆ ಬಂದು ಹೋಗುತ್ತಿದ್ದರು. ಅದೇ ರೀತಿ ಇಂದು ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಇದ್ದರೂ ಕೂಡ ಜನ ನಂದಿಬೆಟ್ಟಕ್ಕೆ ಬೆಳ್ಳಂ ಬೆಳಗ್ಗೆ ಬಂದಿದ್ದಾರೆ. ಇದನ್ನೂ ಓದಿ: ಸುಪಾರಿ ಕೊಟ್ಟು ಅಪ್ಪನನ್ನೇ ಕೊಲ್ಲಿಸಿದ ಪಾಪಿ ಮಗ

    ವೀಕೆಂಡ್ ಕರ್ಫ್ಯೂ ಇದ್ದರೂ ಕೂಡ ಕ್ಯಾರೇ ಎನ್ನದೆ ನಂದಿಗಿರಿಧಾಮಕ್ಕೆ ನೂರಾರು ಜನ ಆಗಮಿಸಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಬಂದಿದ್ದ ಪ್ರವಾಸಿಗರನ್ನು ವಾಪಸ್ ಕಳುಹಿಸಿ ಮುಖ್ಯ ಪ್ರವೇಶ ದ್ವಾರ ಬಂದ್ ಮಾಡಿದ್ದಾರೆ. ಹಾಗಾಗಿ ವೀಕೆಂಡ್‍ನಲ್ಲಿ ನಂದಿಬೆಟ್ಟಕ್ಕೆ ಎಂಟ್ರಿ ಆಗಲು ಬಂದ ಪ್ರವಾಸಿಗರು ಗೇಟ್ ನಿಂದಲೇ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಆಗುತ್ತಿದ್ದಾರೆ.

  • ತಾಳಿಯನ್ನೇ ಮಾರಿ ಪತಿಗೆ ಚಿಕಿತ್ಸೆ ಕೊಡಿಸ್ತಿರೋ ಪತ್ನಿ

    ತಾಳಿಯನ್ನೇ ಮಾರಿ ಪತಿಗೆ ಚಿಕಿತ್ಸೆ ಕೊಡಿಸ್ತಿರೋ ಪತ್ನಿ

    – ಮಾತ್ರೆ ಖರೀದಿ, ಜೀವನ ನಿರ್ವಹಣೆಗೂ ಹಣವಿಲ್ಲದೆ ಪರದಾಟ

    ಚಿಕ್ಕಬಳ್ಳಾಪುರ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪತಿಯ ಚಿಕಿತ್ಸೆಗಾಗಿ ಪತ್ನಿ ತನ್ನ ತಾಳಿಯನ್ನೇ ಮಾರಿರುವ ಮನಕಲಕುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ಕುರಪ್ಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

    ಗ್ರಾಮದ ಬೀರಮ್ಮ ಹಾಗೂ ಬೆಂಗಳೂರು ಮೂಲದ ಲಿಂಗಪ್ಪ ವಿವಾಹವಾಗಿ ಇಬ್ಬರು ಮಕ್ಕಳಿದ್ದಾರೆ. ಇಷ್ಟು ದಿನ ಬೆಂಗಳೂರಿನಲ್ಲಿ ಗಾರೆಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಲಾಕ್‍ಡೌನ್‍ಗೂ ಮುನ್ನ ಬೀರಮ್ಮಳ ಸ್ವಗ್ರಾಮ ಕೆ.ಕುರಪ್ಪಲ್ಲಿಗೆ ಬಂದು ಬಾಡಿಗೆ ಮನೆ ಮಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ ಲಿಂಗಪ್ಪನಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಜಯದೇವ ಹಾಗೂ ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ತೋರಿಸಿದ್ದಾರೆ.

    ಸುಮಾರು 2 ಲಕ್ಷ ರೂಪಾಯಿ ಸಾಲ ಮಾಡಿ ಶಸ್ತ್ರಚಿಕಿತ್ಸೆ ಮಾಡಿಸಿದ್ದೇನೆ. ಅದಾದ ನಂತರ ಮಾತ್ರೆಗಳಿಗೂ ಹಾಗೂ ಜೀವನ ನಿರ್ವಹಣೆಗೆ ಹಣ ಇಲ್ಲ ಅಂತ ಕತ್ತಿನಲ್ಲಿದ್ದ ತಾಳಿಯನ್ನೇ ಚಿಂತಾಮಣಿಯಲ್ಲಿ 5,000 ರೂಪಾಯಿಗೆ ಮಾರಿದೆ ಎಂದು ಪತ್ನಿ ಬೀರಮ್ಮ ನೋವಿನಿಂದ ಅಳಲು ತೋಡಿಕೊಂಡಿದ್ದಾರೆ.

    ಸದ್ಯ ಕೊರಳಿಗೆ ಅರಿಶಿಣ ಕೊಂಬು ಕಟ್ಟಿಕೊಂಡು, ಗ್ರಾಮದಲ್ಲಿ ಕೂಲಿ ನಾಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಪತಿಗೆ ಮಾತ್ರೆ ತಂದು ಕೊಡಲು ಹಣವಿಲ್ಲ. ಹೀಗಾಗಿ ಮಾತ್ರೆ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದಾರೆ. ಹೀಗಾಗಿ ಯಾರಾದರೂ ತಮಗೆ ಸಹಾಯ ಮಾಡಿ ಅಂತ ಕೈ ಮುಗಿದು ಮನವಿ ದಂಪತಿ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ಪಬ್ಲಿಕ್ ಟಿವಿ ಈ ದಂಪತಿಗೆ ಮಾತ್ರೆಗಳನ್ನ ವ್ಯವಸ್ಥೆ ಮಾಡಲು ಮುಂದಾಗಿದೆ.

  • ಕಡಲೆಕಾಯಿ ಪರಿಷೆಯಲ್ಲಿ ಕಳ್ಳಿಯರ ಕೈಚಳಕ

    ಕಡಲೆಕಾಯಿ ಪರಿಷೆಯಲ್ಲಿ ಕಳ್ಳಿಯರ ಕೈಚಳಕ

    ಚಿಕ್ಕಬಳ್ಳಾಪುರ: ಸೂಲಾಲಪ್ಪನ ದಿನ್ನೆ ವಿರಾಂಜನೇಯ ದೇಗುಲದ ಕಡಲೆಕಾಯಿ ಪರಿಷೆಯ ಜನಜಂಗುಳಿಯನ್ನು ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳಿಯರು ಕೈ ಚಳಕ ತೋರಿ, ಮಾಂಗಲ್ಯ ಸರ, ಚಿನ್ನಾಭರಣ ಕಳವು ಮಾಡಿದ್ದಾರೆ.

    ನಗರ ಹೊರವಲಯದ ಸೂಲಾಲಪ್ಪನ ದಿನ್ನೆ ಸಮೀಪದ ಆದಿಚುಂಚನಗಿರಿ ಶಾಖಾ ಮಠದ ಉಸ್ತುವಾರಿಯ ಶ್ರೀ ವಿರಾಂಜನೇಯ ದೇಗುಲದ ರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ವಿಜೃಂಭಣೆಯಿಂದ ನೆರವೇರಿತು. ಅದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲನಂದನಾಥ ಸ್ವಾಮೀಜಿ ಭಕ್ತರ ಮೇಲೆ ಕಡಲೆಕಾಯಿ ಎರಚುವ ಮೂಲಕ ಪರಿಷೆಗೆ ಚಾಲನೆ ನೀಡಿದರು.

    ಈ ಕಡಲೆಕಾಯಿ ಪರಿಷೆಯಲ್ಲಿ ಐವರು ಮಹಿಳೆಯರು ಚಿನ್ನಾಭರರಣ ಕಳೆದುಕೊಂಡಿದ್ದಾರೆ. ಕೊಳವನಹಳ್ಳಿ ಗ್ರಾಮದ ರತ್ನಮ್ಮ ಎಂಬವರ 65 ಗ್ರಾಂ, ಸೊಪ್ಪಹಳ್ಳಿ ಗ್ರಾಮದ ಸರಸ್ವತಮ್ಮ ಅವರ 75 ಗ್ರಾಂ, ಕಂದವಾರ ಬಾಗಿಲಿನ ಮುನಿರತ್ನಮ್ಮ ಎಂಬವರ 35 ಗ್ರಾಂಮ ಹಾಗೂ ಮಂಜುಳಮ್ಮ ಎಂಬವರ 45 ಗ್ರಾಂ ಚಿನ್ನದ ಸರಗಳನ್ನು ಕಳ್ಳಿಯರು ಕದ್ದು ಪರಾರಿಯಾಗಿದ್ದಾರೆ.

    ಅಯ್ಯೋ ಆಂಜನೇಯ ನಿನ್ನ ಪೂಜೆಗೆ ಬಂದು ಹೀಗೆ ಆಗೋಯ್ತಲ್ಲ ಅಂತ ಚಿನ್ನಾಭರಣ ಕಳೆದುಕೊಂಡ ಮಹಿಳೆಯರು ಮನೆಯಲ್ಲಿ ಏನಪ್ಪಾ ಹೇಳೋದು ಅಂತ ಅಸಹಾಯಕರಾಗಿ ಕಣ್ಣೀರಿಟ್ಟರು. ಅದೃಷ್ಟವಶಾತ್ ಜಯಮ್ಮ ಎಂಬವರ ಸರವನ್ನು ಕಳ್ಳಿಯರು ಕತ್ತರಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಜಯಮ್ಮ ಸರ ನೋಡಿಕೊಂಡಿದ್ದಾರೆ. ಈ ವೇಳೆ ಸರ ಕೈಗೆ ಸಿಕ್ಕಿದ್ದು, ಗದ್ದಲದಿಂದ ಹೊರಬಂದಿದ್ದಾರೆ.

    ನಂದಿಗಿರಿಧಾಮ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಕಳ್ಳಿಯರ ಖತರ್ನಾಕ್ ಕೆಲಸ ಈಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಮೇಲೆ ಪಿಎಸ್‍ಐ ಫೈರಿಂಗ್!

    ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಮೇಲೆ ಪಿಎಸ್‍ಐ ಫೈರಿಂಗ್!

    ಚಿಕ್ಕಬಳ್ಳಾಪುರ: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಮೇಲೆ ಪಿಎಸ್‍ಐ ಫೈರಿಂಗ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುರೂಡಿ ಕ್ರಾಸ್ ಬಳಿ ನಡೆದಿದೆ.

    ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‍ಐ ಅವಿನಾಶ್, ರೌಡಿಶೀಟರ್ ಅರುಣ್ ಅಲಿಯಾಸ್ ಲಾಂಗ್ ಅರುಣ್ ಕಾಲಿಗೆ ಗುಂಡು ಹಾರಿಸಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಕುರೂಡಿ ಕ್ರಾಸ್ ಬಳಿ ಇದ್ದ ರೌಡಿಶೀಟರ್ ಲಾಂಗ್ ಅರುಣ್ ಹಾಗೂ ಸುರೇಶ್ ಬಂಧನಕ್ಕೆ ಪಿಎಸ್‍ಐ ಅವಿನಾಶ್ ಹಾಗೂ ಸಿಬ್ಬಂದಿ ಬಂಧನಕ್ಕೆ ತೆರಳಿದರು. ಈ ವೇಳೆ ಅಲ್ಲಿದ್ದ ರೌಡಿಶೀಟರ್ ಸುರೇಶ್ ಹಾಗೂ ಮಾರುತಿ ಅಲಿಯಾಸ್ ಪೋಲಾರ್ಡ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆದರೆ ಅರುಣ್ ಪರಾರಿಯಾಗಲು ಯತ್ನಿಸಿದ್ದು, ಬಂಧಿಸಲು ಮುಂದಾದ ಪೊಲೀಸರ ಮೇಲೆ ಲಾಂಗ್ ನಿಂದ ದಾಳಿ ನಡೆಸಲು ಮುಂದಾಗಿದ್ದಾನೆ. ಈ ವೇಳೆ ಲಾಂಗ್ ಬಿಸಾಡಿ ಶರಣಾಗುವಂತೆ ಪಿಎಸ್‍ಐ ಅವಿನಾಶ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಲಾಂಗ್ ಕೆಳಗಿಳಿಸದ ಅರುಣ್ ಮೇಲೆ ಪಿಎಸ್‍ಐ ಅವಿನಾಶ್ ಕಾಲಿಗೆ ಗುಂಡು ಹಾರಿಸಿದ್ದಾರೆ.

    ಸದ್ಯ ಗಾಯಗೊಂಡಿರುವ ಲಾಂಗ್ ಅರುಣ್‍ಗೆ ಗೌರಿಬಿದನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ತೀವ್ರ ರಕ್ರ ಸ್ರಾವದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪೇದೆಗಳಾದ ಅರುಣ್ ಹಾಗೂ ಮಂಜುನಾಥ್ ಚಿಕಿತ್ಸೆ ಪಡೆದುಕೊಂಡಿದ್ದಾರೆ.

    ಕಳೆದ ವಿಧಾನಸಭಾ ಚುನಾವಣಾ ವೇಳೆ ಕೋಟಾಲದಿನ್ನೆ ಬಳಿಯ ಬಾರ್ ಬಳಿ ಜೆಡಿಎಸ್ ಕಾರ್ಯಕರ್ತ ರಾಮರೆಡ್ಡಿ ಎಂಬಾತ ಬರ್ಬರವಾಗಿ ಕೊಲೆಯಾಗಿದ್ದನು. ಈ ಪ್ರಕರಣ ಸೇರಿದಂತೆ ಐಪಿಸಿ ಸೆಕ್ಷೆನ್ 307, 302 ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 7 ಪ್ರಕರಣಗಳಲ್ಲಿ ಈ ಲಾಂಗ್ ಅರುಣ್ ಪೊಲೀಸರಿಗೆ ಬೇಕಾಗಿದ್ದನು. ಹೀಗಾಗಿ ಖಚಿತ ಮಾಹಿತಿ ಮೇರೆಗೆ ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೈವ್ ಸೂಸೈಡ್: ಮಾತ್ರೆಗಳನ್ನ ನುಂಗಿ KSRP ಪೇದೆ ಆತ್ಮಹತ್ಯೆ

    ಲೈವ್ ಸೂಸೈಡ್: ಮಾತ್ರೆಗಳನ್ನ ನುಂಗಿ KSRP ಪೇದೆ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಕೆಎಸ್‍ಆರ್ ಪಿ ಪೇದೆಯೊಬ್ಬರು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ಮೂಡಚಿಂತಹಳ್ಳಿಯಲ್ಲಿ ನಡೆದಿದೆ.

    ಸುನೀಲ್ ಕುಮಾರ್ (24) ಆತ್ಮಹತ್ಯೆ ಮಾಡಿಕೊಂಡ ಕೆಎಸ್‍ಆರ್ ಪಿ ಪೇದೆ. 15 ದಿನಗಳ ಹಿಂದೆ ತರಬೇತಿ ಪೂರೈಸಿ ಬೆಂಗಳೂರು ಹಲಸೂರು ವಿಭಾಗದಲ್ಲಿ ವೃತ್ತಿ ಪ್ರಾರಂಭಿಸಿದ್ದರು.

    ಸುನೀಲ್ ಕುಮಾರ್ ಅವರು ರಜೆ ಪಡೆದು ಭಾನುವಾರ ಸ್ವಗ್ರಾಮಕ್ಕೆ ಬಂದಿದ್ದು, ಗೆಳೆಯರೊಂದಿಗೆ ಗ್ರಾಮದ ಕೃಷಿಹೊಂಡಕ್ಕೆ ಹೋಗಿ ಈಜಾಡಿ ಮನೆಗೆ ಮರಳಿದ್ದಾರೆ. ಆದರೆ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು, ತಮ್ಮ ಮೊಬೈಲ್‍ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಮಾತ್ರೆ ನುಂಗುತ್ತಿರುವುದನ್ನು ವಿಡಿಯೋ ಮಾಡಿದ್ದಾರೆ.

    ಅತಿಯಾಗಿ ಮಾತ್ರೆ ಸೇವಿಸಿದ್ದ ಸುನೀಲ್ ವಾಂತಿ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪೋಷಕರು ಅವರನ್ನು ಚಿಂತಾಮಣಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಅಗತ್ಯವಾಗಿದ್ದರಿಂದ ಹೊಸಕೋಟೆಯ ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸುನೀಲ್ ಮೃತಪಟ್ಟಿದ್ದಾರೆ.

    ಆತ್ಮಹತ್ಯೆಗೆ ಯಾವುದೇ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಈ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತ ಸುನೀಲ್ ಬಳಸುತ್ತಿದ್ದ ಎರಡು ಮೊಬೈಲ್‍ಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

  • ಅಪಘಾತ ನಡೆದರೂ ಕಾರು ನಿಲ್ಲಿಸದೆ ಹೋದ ಸಚಿವ ಅನಂತ್ ಕುಮಾರ್ ಹೆಗ್ಡೆ!

    ಅಪಘಾತ ನಡೆದರೂ ಕಾರು ನಿಲ್ಲಿಸದೆ ಹೋದ ಸಚಿವ ಅನಂತ್ ಕುಮಾರ್ ಹೆಗ್ಡೆ!

    ಚಿಕ್ಕಬಳ್ಳಾಪುರ: ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಅವರ ಹಿಂಬಾಲಕರ ಕಾರಿನ ಡ್ರೈವರ್ ಸಡನ್ ಬ್ರೇಕ್ ಹಾಕಿದ್ರಿಂದ ಕಾರ್ ಬೈಕಿಗೆ ಡಿಕ್ಕಿ ಹೊಡೆದಿದೆ. ಆದ್ರೆ ಅಪಘಾತವಾದರೂ ಕಾರು ನಿಲ್ಲಿಸದೆ ಸಚಿವರು ಸ್ಥಳದಿಂದ ತೆರಳುವ ಮೂಲಕ ಮಾನವೀಯತೆಯನ್ನು ಮರೆತಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ- ದೊಡ್ಡಬಳ್ಳಾಪುರ ಮಾರ್ಗದ ಸಾವಕನಹಳ್ಳಿ ಗೇಟ್ ಬಳಿ ಭಾನುವಾರ ಘಟನೆ ಈ ನಡೆದಿದೆ. ಅಪಘಾತದಿಂದಾಗಿ ಸಚಿವರ ಕಾರ್ ನ ಹಿಂದಿನಿಂದ ಬರುತ್ತಿದ್ದ ವಾಹನಗಳಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಸಚಿವ ಅನಂತ್‍ಕುಮಾರ್ ಹೆಗ್ಡೆ ಅವರು ತುಮಕೂರಿನಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ದೇವನಹಳ್ಳಿ ಏರ್ ಪೋರ್ಟ್ ಗೆ ತೆರಳುತ್ತಿದ್ದರು. ಈ ವೇಳೆ ಸಚಿವರ ಕಾರಿನ ಮುಂಭಾಗದ ಪೊಲೀಸ್ ವಾಹನಕ್ಕೆ ಕೋತಿ ಅಡ್ಡ ಬಂದಿದೆ ಎನ್ನಲಾಗಿದ್ದು, ಕಾರು ಚಾಲಕ ಸಡನ್ ಬ್ರೇಕ್ ಹಾಕಿದ್ದಾನೆ. ಹೀಗಾಗಿ ಹೆಗ್ಡೆ ಅವರ ಕಾರಿನ ಹಿಂದೆ ಬಂದ ಪೊಲೀಸ್ ಜೀಪ್, ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ.

    ಅಪಘಾತದಲ್ಲಿ ಬೈಕ್ ಸವಾರ ಹಾಗೂ ಇನ್ನೊವಾ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತವಾದರೂ ಕಾರು ನಿಲ್ಲಿಸದೆ ಅನಂತ್ ಕುಮಾರ್ ಹೆಗಡೆ ಸ್ಥಳದಿಂದ ಹೊರಟು ಹೋಗಿದ್ದಾರೆ ಅಂತ ಅಪಘಾತಕ್ಕೊಳಗಾದವರು ದೂರಿದ್ದಾರೆ. ಸಚಿವರು ಮಾನವೀಯತೆ ಇಲ್ಲದೆ ನಡೆದುಕೊಂಡ ಕ್ರಮದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ ಸಣ್ಣಪುಟ್ಟ ಗಾಯಗೊಂಡ ಮೂವರನ್ನು ಬೇರೆ ವಾಹನದಲ್ಲಿ ಸ್ಥಳೀಯರು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಪಘಾತದಲ್ಲಿ ಇನ್ನೋವಾ ಕಾರು ದ್ವಿಚಕ್ರ ವಾಹನವೂ ಕೂಡ ಜಖಂ ಆಗಿದ್ದು ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

     

  • ಹಾಲಿನ ಟ್ಯಾಂಕರ್ ಪಲ್ಟಿ- ಹಾಲು ತುಂಬಿಕೊಳ್ಳಲು ಮುಗಿಬಿದ್ದ ಜನ್ರು

    ಹಾಲಿನ ಟ್ಯಾಂಕರ್ ಪಲ್ಟಿ- ಹಾಲು ತುಂಬಿಕೊಳ್ಳಲು ಮುಗಿಬಿದ್ದ ಜನ್ರು

    ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಹಾಲೆಲ್ಲಾ ರಸ್ತೆ ಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ ವಾಪಸಂದ್ರ ಸೇತುವೆ ಬಳಿ ನಡೆದಿದೆ

    ಸಾದಲಿ ಗ್ರಾಮದ ಹಾಲು ಶೀತಲೀಕರಣ ಕೇಂದ್ರದಿಂದ ಹಾಲನ್ನ ಯಲಹಂಕದ ಕೆಎಂಎಫ್ ನ ಮದರ್ ಡೈರಿಗೆ ಟ್ಯಾಂಕರ್ ಮೂಲಕ ಸಾಗಿಸಲಾಗುತ್ತಿತ್ತು. ಆದರೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವಾಪಸಂದ್ರ ಸೇತುವೆ ಕೆಳಭಾಗದ ತಿರುವಿನಲ್ಲಿ ಉರುಳಿಬಿದ್ದಿದೆ. ಹಾಲಿನ ಟ್ಯಾಂಕರ್ ಪಲ್ಟಿಯಾದ ಕಾರಣ ಟ್ಯಾಂಕರ್ ನಲ್ಲಿದ್ದ ಬಹುತೇಕ ಹಾಲು ರಸ್ತೆಪಾಲಾಗಿದೆ. ರಸ್ತೆಯ ತುಂಬೆಲ್ಲಾ ಹಾಲಿನ ಹೊಳೆಯೇ ಹರಿದಿದೆ.

    ಘಟನೆಯಲ್ಲಿ ಟ್ಯಾಂಕರ್‍ನ ಚಾಲಕ ಕ್ಲೀನರ್ ಸೇರಿದಂತೆ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯಕ್ಕೆ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಲು ರಸ್ತೆ ಪಾಲಾಗುತ್ತಿದ್ದನ್ನು ಗಮನಿಸಿದ ಜನರು ಬಿಂದಿಗೆ, ಬಾಟಲ್ ಮತ್ತು ಕ್ಯಾನ್‍ಗಳಲ್ಲಿ ತುಂಬಿಸಿಕೊಂಡು ಸಂತೋಷದಿಂದ ಹೋಗಿದ್ದಾರೆ.

    ಸಾದಲಿ ಶೀತಲೀಕರಣ ಕೇಂದ್ರದಿಂದ ರಾಷ್ಟ್ರೀಯ ಹೆದ್ದಾರಿ 7 ರ ಮುಖಾಂತರ ಚಿಕ್ಕಬಳ್ಳಾಪುರ, ದೇವನಹಳ್ಳಿ ಮಾರ್ಗದಿಂದ ಯಲಹಂಕಕ್ಕೆ ಸಂಚರಿಸುತ್ತಿತ್ತು. ಆದರೆ ವಾಪಸಂದ್ರ ಸೇತುವೆ ಬಳಿ ಚಿಕ್ಕಬಳ್ಳಾಪುರ ನಗರದೊಳಗೆ ಪ್ರವೇಶ ಮಾಡಿದೆ. ಅಸಲಿಗೆ ಚಿಕ್ಕಬಳ್ಳಾಪುರ ನಗರದೊಳಗೆ ಪ್ರವೇಶ ಮಾಡದೆ ನೇರವಾಗಿ ಯಲಹಂಕಕ್ಕೆ ತೆರಳಬಹುದಿತ್ತು. ಆದರೆ ಟ್ಯಾಂಕರ್ ಚಾಲಕನ ಹಣದ ಆಸೆಗೆ ಮಾರ್ಗ ಮಧ್ಯೆ ಚಿಕ್ಕಬಳ್ಳಾಪುರ ನಗರಕ್ಕೆ ಪ್ರಯಾಣಿಕರನ್ನ ಹತ್ತಿಸಿಕೊಂಡಿದ್ದಾನೆ. ಅವರನ್ನ ಇಳಿಸುವ ಸಲುವಾಗಿಯೇ ಚಾಲಕ ಚಿಕ್ಕಬಳ್ಳಾಪುರ ನಗರದತ್ತ ಪ್ರವೇಶ ಮಾಡಿದ್ದಾನೆ. ಈ ವೇಳೆ ದುರದೃಷ್ಟವಶಾತ್ ಚಿಕ್ಕಬಳ್ಳಾಪುರ ನಗರ ಪ್ರವೇಶದ ಆರಂಭದ ತಿರುವಿನಲ್ಲಿ ಟ್ಯಾಂಕರ್ ಪಲ್ಟಿಯಾಗಿದೆ.

    ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರೇನ್ ಸಹಾಯದಿಂದ ಟ್ಯಾಂಕರ್‍ನ್ನು ತೆರವುಗೊಳಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.