Tag: Chikkaballapura

  • ಚಿಕ್ಕಬಳ್ಳಾಪುರ | ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು

    ಚಿಕ್ಕಬಳ್ಳಾಪುರ | ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು

    ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ.

    ಅಚೇಪಲ್ಲಿ ಗ್ರಾಮದ ವಿಷ್ಣು (14), ನಿಹಾಲ್ ರಾಜ್ (12) ಮತ್ತು ಹರ್ಷವರ್ಧನ್ (16) ಮೃತ ದುರ್ದೈವಿಗಳು. ಇದನ್ನೂ ಓದಿ: ಹದಗೆಟ್ಟ ರಸ್ತೆ| ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಬೈಕಿನಿಂದ ಬಿದ್ದು ಸಾವು

    ದಸರಾ ರಜೆ ಹಿನ್ನೆಲೆ ಶಾಲೆಗಳಿಗೆ ರಜೆ ಇದ್ದುದ್ದರಿಂದ ಬಾಲಕರು ಕೆರೆಯಲ್ಲಿ ಈಜಾಡಲು ತೆರಳಿದ್ದರು. ಮೊದಲಿಗೆ ವಿಷ್ಣು ಹಾಗೂ ನಿಹಾಲ್ ರಾಜ್ ಈಜಾಡಲು ತೆರಳಿದ್ದು, ಅವರು ನೀರಿನಲ್ಲಿ ಮುಳುಗುತ್ತಿದ್ದುದ್ದನ್ನು ಕಂಡ ಹರ್ಷವರ್ಧನ್ ರಕ್ಷಣೆಗೆ ಮುಂದಾಗಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

    ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಮೂವರ ಮೃತದೇಹಗಳನ್ನ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸ್ವಾಂತಾನ ಹೇಳಿ, ವೈಯುಕ್ತಕವಾಗಿ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಅಲ್ಲದೇ ಸಿಎಂ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

  • ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ – 10 ಲಕ್ಷ ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್

    ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ – 10 ಲಕ್ಷ ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್

    – ವೃದ್ಧರ ಪಿಂಚಣಿ ಹಣವನ್ನೂ ನುಂಗಿದ ಆಸಾಮಿ

    ಚಿಕ್ಕಬಳ್ಳಾಪುರ: ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆನ್‌ಲೈನ್ ಬೆಟ್ಟಿಂಗ್‌ಗೆ ದಾಸನಾಗಿ ಬಡವರ ಹಣಕ್ಕೆ ಕನ್ನ ಹಾಕಿ ಪರಾರಿಯಾಗಿದ್ದಾನೆ.

    ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೋಸ್ಟ್ ಮಾಸ್ಟರ್ ನಿಂಗೇಶ್ ಎಂಬಾತ ಬಡವರ ಹಣವನ್ನೇ ಆನ್‌ಲೈನ್ ಬೆಟ್ಟಿಂಗ್‌ಗೆ ಹಾಕಿ ಕೈ ಸುಟ್ಟುಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಂದಹಾಗೆ ಚಿಕ್ಕಪೈಲಗುರ್ಕಿ ಅಂಚೆ ಕಚೇರಿಗೆ 13 ಹಳ್ಳಿಗಳು ಸೇರಿದ್ದು, ನೂರಾರು ಮಂದಿ ಹಳ್ಳಿ ಜನ ದುಡಿದ ಹಣವನ್ನ ಅಂಚೆ ಕಚೇರಿಯ ಖಾತೆಗಳಲ್ಲಿ ಜಮೆ ಮಾಡಿಕೊಂಡಿದ್ರು. ಅದರಲ್ಲೂ ಹಳ್ಳಿಗಾಡಿನಲ್ಲಿ ವಯೋವೃದ್ಧರಿಗೆ ಬರುವ ಪಿಂಚಣಿ ಸಹ ಇದೇ ಅಂಚೆ ಕಚೇರಿಯ ಮೂಲಕವೇ ಬರ್ತಿತ್ತು. ಪೆನ್ಷನ್, ಕೂಲಿ, ಆರ್‌ಡಿ, ಎಫ್‌ಡಿ ಹೀಗೆ ಬಡವರ ಖಾತಗೆಳಲ್ಲಿರಬೇಕಾದ ಹಣವನ್ನೆಲ್ಲಾ ಪೋಸ್ಟ್ ಮಾಸ್ಟರ್ ನಿಂಗೇಶ್ ಆನ್‌ಲೈನ್ ಗೇಮ್‌ಗಾಗಿ ಬಳಸಿಕೊಂಡಿದ್ದಾನೆ. ಹಳ್ಳಿಯ ಜನ ಕೇಳಿದಾಗ ಇನ್ನೂ ಬಂದಿಲ್ಲ ಅಂತ ಸುಳ್ಳು ಹೇಳಿಕೊಂಡು ಓಡಾಡಿಕೊಂಡಿದ್ದಾನೆ. ಜೋರಾಗಿ ಮಾತಾಡುವವರಿಗೆ ಆಗಾಗ್ಗೆ ಒಂದಷ್ಟು ಹಣ ಕೊಟ್ಟು ಸಮಾಧಾನ ಮಾಡಿಕೊಂಡು ಬಂದಿದ್ದಾನೆ. ಆದರೆ, ಈಗ ಬರೋಬ್ಬರಿ 10 ಲಕ್ಷಕ್ಕೂ ಅಧಿಕ ಹಣವನ್ನ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಹಾಸನ | ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ

    ಮೂಲತಃ ಚಿತ್ರದುರ್ಗ ಜಿಲ್ಲೆಯ ನಿಂಗೇಶ್ ಕಳೆದ 2 ವರ್ಷಗಳ ಹಿಂದಷ್ಟೇ ಚಿಕ್ಕಪೈಲಗುರ್ಕಿ ಗ್ರಾಮದ ಅಂಚೆಕಚೇರಿಗೆ ಕೆಲಸಕ್ಕೆ ಸೇರಿಕೊಂಡಿದ್ದ. ಆರಂಭದಲ್ಲಿ ಚೆನ್ನಾಗಿ ಕೆಲಸ ಮಾಡಿಕೊಂಡು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರನಾಗಿದ್ದ. ಕಳೆದ ಒಂದು ವರ್ಷದಿಂದ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳ ದಾಸನಾಗಿ ದುಡ್ಡನ್ನೆಲ್ಲಾ ಅದಕ್ಕೆ ಹಾಕಿ ಹಾಳು ಮಾಡಿಕೊಂಡಿದ್ದ. ಸಾಲದು ಅಂತ ಬಡವರ ಹಣವನ್ನ ಹಾಕಿ ಸಾಕಷ್ಟು ಸಾಲಸೋಲ ಮಾಡಿಕೊಂಡಿದ್ದ. ವೃದ್ಧರಿಗೆ ಬರುತ್ತಿದ್ದ ಪಿಂಚಣಿ ಹಣವನ್ನೂ ಸಹ ಬಿಡದೆ ಪೋಸ್ಟ್ ಮಾಸ್ಟರ್ ಲಿಂಗೇಶ್ ದುರಪಯೋಗ ಮಾಡಿಕೊಂಡಿದ್ದಾನೆ. ನರಸಿಂಹರೆಡ್ಡಿ ಎಂಬವರ ಮಕ್ಕಳ ಹೆಸರಲ್ಲಿ ಇಟ್ಟಿದ್ದ ಎಫ್‌ಡಿ ಹಣವನ್ನೂ ಡ್ರಾ ಮಾಡಿ ನುಂಗಿ ನೀರು ಕುಡಿದಿದ್ದಾನೆ. ಇದರಿಂದ ರೊಚ್ಚಿಗೆದ್ದ ನರಸಿಂಹರೆಡ್ಡಿ ಪೋಸ್ಟ್ ಮಾಸ್ಟರ್ ನಿಂಗೇಶ್ ಬೈಕ್ ಕಿತ್ತುಕೊಂಡು ಮನೆಯಲ್ಲಿಟ್ಟುಕೊಂಡಿದ್ದಾರೆ.

    ವಿಷಯ ಬೆಳಕಿಗೆ ಬಂದ ತಕ್ಷಣ, ಅಂಚೆ ನಿರೀಕ್ಷಕರು ಹಾಗೂ ಉಪವಿಭಾಗಾಧಿಕಾರಿ ಶಶಿಕುಮಾರ್ ಚಿಕ್ಕಪೈಲಗುರ್ಕಿ ಅಂಚೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳಿನಿಂದ ಅಂಚೆ ಕಚೇರಿಗೆ ಬಂದಿದ್ದ ಪತ್ರಗಳನ್ನು ಸಹ ಹಂಚದೆ ಕಚೇರಿಯಲ್ಲೇ ಬಿಟ್ಟು, ಕೊನೆಗೆ ನಿಂಗೇಶ್ ಪರಾರಿಯಾಗಿದ್ದಾನೆ. ಹೀಗಾಗಿ ಮೇಲಾಧಿಕಾರಿಗಳು ಆತನನ್ನ ಅಮಾನತು ಮಾಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರ ಬಣ್ಣ ಬಯಲಾಗುತ್ತಿದೆ, ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ: ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಸಿಎಂ ಮನವಿ

  • ಚಿಕ್ಕಬಳ್ಳಾಪುರ | ಸಮಸ್ಯೆಗಳ ನಡ್ವೆ ನಾಯಿಗಳ ಭಯ; ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಜರ್ಮನ್ ಶೆಫರ್ಡ್ ನಾಯಿ ಕಡಿತ!

    ಚಿಕ್ಕಬಳ್ಳಾಪುರ | ಸಮಸ್ಯೆಗಳ ನಡ್ವೆ ನಾಯಿಗಳ ಭಯ; ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಜರ್ಮನ್ ಶೆಫರ್ಡ್ ನಾಯಿ ಕಡಿತ!

    – ಜಿಲ್ಲಾ ಆಸ್ಪತ್ರೆಯಲ್ಲಿ ಶಿಕ್ಷಕಿ ರಂಜನಿಗೆ ಚಿಕಿತ್ಸೆ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಸಾಲು ಸಾಲು ಸಮಸ್ಯೆಗಳು ಎದುರಾಗುತ್ತಿವೆ. ದಿನಕ್ಕೊಂದು ಸಮಸ್ಯೆ ಎಂಬಂತೆ ಸಮೀಕ್ಷೆ ಮಾಡುವ ಶಿಕ್ಷಕರಿಗೆ (Teachers) ಸಾಕಷ್ಟು ಸವಾಲುಗಳು ಎದುರಾಗುತ್ತಿವೆ. ಅದ್ರಲ್ಲೂ ಚಿಕ್ಕಬಳ್ಳಾಪುರದಲ್ಲಿ ಗಣತಿಗೆ ತೆರಳಿದ್ದ ಶಿಕ್ಷಕಿಯೊಬ್ಬರ ಮೇಲೆ ಸಾಕು ನಾಯಿ ದಾಳಿ ನಡೆಸಿದ್ದು, ಗಣತಿಗೆ ತೆರಳಿದ್ದ ಇತರ ಶಿಕ್ಷಕರಿಗೆ ನಾಯಿಗಳ ಭಯ ಕಾಡುತ್ತಿದೆ.

    ಹೌದು. ರಾಜ್ಯ ಸರ್ಕಾರದ (Government OF Karnataka) ವತಿಯಿಂದ ನಡೆಯುತ್ತಿರುವ ಸಾಮಾಜಿಕ-ಶೈಕ್ಷಣಿಕ ಜಾತಿಗಣತಿ ಸಮೀಕ್ಷೆಗೆ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಿವೆ. ಸಮೀಕ್ಷೆ ಆರಂಭವಾಗಿ 5-6 ದಿನಗಳಾದರೂ ಆ್ಯಪ್ ಸಮಸ್ಯೆ, ಸರ್ವರ್ ಸಮಸ್ಯೆ, ಯುಎಚ್‍ಐಡಿ ತೊಂದರೆ, ಲೊಕೆಷನ್‌ ಪತ್ತೆಯಾಗದೇ ಪರದಾಟ, ನೆಟ್ವರ್ಕ್ ಸಮಸ್ಯೆ ಹೀಗೆ ಅನೇಕ ಅಡಚಣೆಗಳು ಎದುರಾಗಿವೆ. ಇದರ ಜೊತೆಗೆ ಇದೀಗ ಶಿಕ್ಷಕರಿಗೆ ನಾಯಿಗಳ ಕಾಟವೂ ಶುರುವಾಗಿದೆ. ಚಿಕ್ಕಬಳ್ಳಾಪುರದಲ್ಲಿ (Chikkaballapura) ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ರಂಜನಿಗೆ ನಾಯಿ ಕಚ್ಚಿದೆ. ಕೂತನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರಂಜನಿ, ಚಿಕ್ಕಬಳ್ಳಾಪುರ ನಗರದ ತಿಮ್ಮಕ್ಕ ಬಡಾವಣೆಯಲ್ಲಿ ಸಮೀಕ್ಷೆ ನಡೆಸುತ್ತಿದ್ದರು. ಪಿಡಿಒ ನಾರಾಯಣಸ್ವಾಮಿ ಅವರ ಮನೆಯಲ್ಲಿ ಸಮೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಮನೆಯಲ್ಲಿದ್ದ ಜರ್ಮನ್ ಶೆಫರ್ಡ್ ನಾಯಿ (German Shepherd Dog) ಹಿಂಬದಿಯಿಂದ ಹಠಾತ್ ದಾಳಿ ಮಾಡಿದೆ.

    ನಾಯಿ ದಾಳಿಯಿಂದ ಶಿಕ್ಷಕಿಯ ತೊಡೆಯ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ತಕ್ಷಣ ಎಚ್ಚರಿಕೆ ವಹಿಸಿ ಬಚಾವ್ ಆದ್ದರಿಂದ ಸಣ್ಣ ಮಟ್ಟದ ಗಾಯ ಮಾತ್ರವಾಗಿದೆ. ತಕ್ಷಣ ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ರಂಜನಿ ಅವರಿಗೆ ವೈದ್ಯರು ಪ್ರತಿ ದಿನ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಇನ್ನೂ ನಮಗೆ ಪರಿಚಯವಿಲ್ಲದ, ಗೊತ್ತಿಲ್ಲದ ಪ್ರದೇಶಗಳಿಗೆ ಸಮೀಕ್ಷೆಗೆ ನಿಯೋಜನೆ ಮಾಡಿರುವುದರಿಂದ, ಯಾವ ಮನೆಯಲ್ಲಿ ನಾಯಿ ಇದೆಯೋ ಇಲ್ಲವೋ ಎಂಬ ಭಯದಲ್ಲೇ ಮನೆ ಮನೆಗೆ ತೆರಳಬೇಕಾಗಿದೆ ಅಂತ ಶಿಕ್ಷಕರು ಅಳಲು ತೋಡಿಕೊಂಡರು. ಇದನ್ನೂ ಓದಿ: ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್‌ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್

    ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ಸ್ವತಃ ಸಭೆ ನಡೆಸಿ, ಸಮೀಕ್ಷೆಯನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಆದರೆ, ಯಾವುದೇ ಪೂರ್ಣ ತಯಾರಿಗಳು ಇಲ್ಲದೆ, ಶಿಕ್ಷಕರಿಗೆ ಸಮರ್ಪಕ ತರಬೇತಿ ನೀಡದೆ ಕಾರ್ಯ ಆರಂಭಿಸಿರುವುದರಿಂದ ಸಮಸ್ಯೆಗಳು ಹೆಚ್ಚುತ್ತಿವೆ. ಇದೀಗ ನಾಯಿಗಳ ದಾಳಿಯ ಭಯ ಶಿಕ್ಷಕರನ್ನು ಇನ್ನಷ್ಟು ಸಂಕಟಕ್ಕೊಳಪಡಿಸಿದೆ. ಇದನ್ನೂ ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

  • ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ – ಅಂಡರ್ ಪಾಸ್ ಮುಳುಗಡೆ; ಬೆಳೆಗಳು ಜಲಾವೃತ

    ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ – ಅಂಡರ್ ಪಾಸ್ ಮುಳುಗಡೆ; ಬೆಳೆಗಳು ಜಲಾವೃತ

    ಚಿಕ್ಕಬಳ್ಳಾಪುರ: ಬರದನಾಡು ಅಂದೇ ಖ್ಯಾತಿ ಪಡೆದಿದ್ದ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆ, ಇದೀಗ ಮಲೆನಾಡಿನಂತಾಗಿದೆ. ಕಳೆದ ಮೂರು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ-ಕುಂಟೆ, ಜಲಾಶಯಗಳು ಮೈದುಂಬಿ ಹರಿಯುತ್ತಿವೆ. ಬಾಗೇಪಲ್ಲಿ ತಾಲೂಕಿನ ಚಿತ್ರಾವತಿ ಜಲಾಶಯ ನೀರಿನಿಂದ ತುಂಬಿ ಹರಿಯುತ್ತಿರುವುದು ಜನರಲ್ಲಿ ಹರ್ಷ ಮೂಡಿಸಿದೆ.

    ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಿಂದ 80 ಅಡಿ ಎತ್ತರದಿಂದ ಧುಮ್ಮುಕ್ಕುತ್ತಿರುವ ನೀರು ನಯನ ಮನೋಹರ ದೃಶ್ಯ ಸೃಷ್ಟಿಸಿದೆ. ಮಂಚೇನಹಳ್ಳಿ ರಾಯನಕಲ್ಲು ಕೆರೆ ಹಾಗೂ ಗೌರಿಬಿದನೂರು ತಾಲೂಕಿನ ಉತ್ತರ ಪಿನಾಕಿನಿ ನದಿಗೂ ಮಳೆ ಜೀವ ತುಂಬಿದೆ. ಆದರೆ, ಭಾರೀ ಮಳೆಯಿಂದ (Heavy Rain) ಚಿಕ್ಕಬಳ್ಳಾಪುರ ನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಚನಬಲೆ ಅಂಡರ್ ಪಾಸ್ ನೀರಿನಿಂದ ಮುಳುಗಡೆಯಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇದನ್ನೂ ಓದಿ: ದುರಹಂಕಾರದ ಮಾತು ಬಿಟ್ಟು, ಜನಪರ ಕೆಲಸ ಮಾಡಿ – ಉದ್ಯಮಿಗಳ ಬಗ್ಗೆ ಡಿಕೆಶಿ ಹೇಳಿಕೆಗೆ ಅಶ್ವಥ್ ನಾರಾಯಣ್‌ ಖಂಡನೆ

    ರೈತರಿಗೆ ಸಂಕಷ್ಟ:
    ಮುಷ್ಟೂರು ಕೆರೆ ಕೋಡಿ ಹರಿದು, ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಹಿಂಭಾಗದ ರಾಜಕಾಲುವೆಗಳ ಬದಲಿಗೆ ಹೊಲ-ತೋಟಗಳಿಗೆ ನೀರು ನುಗ್ಗಿದೆ. ದ್ರಾಕ್ಷಿ, ಗುಲಾಬಿ, ಎಲೆ ಕೋಸು, ಬದನೆಕಾಯಿ, ರಾಗಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. ರಾಜಕಾಲುವೆಗಳು ಹಾಗೂ ಚರಂಡಿಗಳು ಮುಚ್ಚಿಕೊಂಡಿರುವುದೇ ಹೊಲ-ತೋಟಗಳಿಗೆ ನೀರು ನುಗ್ಗಲು ಕಾರಣ ಎಂದು ರೈತರು (Farmers) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಎಂ.ಬಿ ಪಾಟೀಲ್

    ನಗರಸಭೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಕೆರೆ-ಜಲಾಶಯಗಳು ತುಂಬಿ ಹರಿಯುತ್ತಿರುವುದು ಸಂತಸದ ಸಂಗತಿ. ಆದ್ರೆ, ರಾಜಕಾಲುವೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯದಿಂದ ನಮ್ಮ ಬೆಳೆಗಳು ಹಾನಿಯಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 88% ಅಂಕ ಪಡೆದ್ರೂ ಹಾಸ್ಟೆಲ್‌ ಸಿಗದ್ದಕ್ಕೆ ವೇದಿಕೆಯಲ್ಲೇ ಸನ್ಮಾನ ತಿರಸ್ಕರಿಸಿ ವಿದ್ಯಾರ್ಥಿನಿಯಿಂದ ಆಕ್ರೋಶ!

    ಒಟ್ಟಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿ ಸಂತಸ ತಂದಿದ್ದರೂ, ಬೆಳೆ ನಷ್ಟ ಮತ್ತು ನಗರದಲ್ಲಿ ಜಲಾವೃತ ಸಮಸ್ಯೆಗಳು ಜನರಿಗೆ ಕಹಿ ಅನುಭವವಾಗಿವೆ.

  • 4.8 ಕೋಟಿ ಪತ್ತೆ ಕೇಸ್‌ – ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌, FIR ರದ್ದು

    4.8 ಕೋಟಿ ಪತ್ತೆ ಕೇಸ್‌ – ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌, FIR ರದ್ದು

    ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ (Dr Sudhakar) ಹೈಕೋರ್ಟ್‌ (High Court) ಬಿಗ್ ರಿಲೀಫ್ ನೀಡಿದೆ.

    ಲೋಕಸಭಾ ಚುನಾವಣೆ (Loksabha Election) ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.

    ಈ ಪ್ರಕರಣ ರದ್ದು ಕೋರಿ ಡಾ.ಕೆ. ಸುಧಾಕರ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರುಣ್ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ ರದ್ದುಗೊಳಿಸಿ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಏನಿದು ಪ್ರಕರಣ?
    ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ಹಿಂದಿನ ದಿನ ಚುನಾವಣಾ ಆಯೋಗದ ಅಧಿಕಾರಿಗಳು ಗೋವಿಂದಪ್ಪ ಅವರ ಮನೆಯಿಂದ 4.8 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದರು. ಈ ಹಣ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಹಂಚುವ ಉದ್ದೇಶದಿಂದ ಇರಲಿಸಲಾಗಿತ್ತು ಎಂದು ಆರೋಪಿಸಲಾಗಿತ್ತು.

    ಈ ವಿಚಾರವಾಗಿ ಚುನಾವಣಾ ನೀತಿ ಸಂಹಿತೆ ಜಾರಿಯ ರಾಜ್ಯ ನೋಡಲ್ ಅಧಿಕಾರಿಯಾಗಿದ್ದ ಮನೀಶ್ ಮೌದ್ಗಿಲ್ ಅವರಿಗೆ ಸುಧಾಕರ್ ಅವರು ವಾಟ್ಸಾಪ್‌ ಮೆಸೇಜ್ ಮಾಡಿದ್ದರು ಎನ್ನಲಾಗಿತ್ತು. ಪ್ರಕರಣದ ಕುರಿತು ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ಮಾದನಾಯಕಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದ ಪೊಲೀಸರು ನೆಲಮಂಗಲ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸುಧಾಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

  • ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ – ಇಬ್ಬರು ಸಾವು

    ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ – ಇಬ್ಬರು ಸಾವು

    ಚಿಕ್ಕಬಳ್ಳಾಪುರ: ಗೌರಿಬಿದನೂರಿನ (Gauribidanur) ಬೈಪಾಸ್ ಗಣೇಶ ವಿಸರ್ಜನೆ (Ganesha Immersion) ವೀಕ್ಷಿಸಲು ಹೊರಟ ಇಬ್ಬರು ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಡ್ಡರಬಂಡೆ ಗ್ರಾಮದ ಸಮೀಪ ನಡೆದಿದೆ.

    ಚಿಕ್ಕಬಳ್ಳಾಪುರ ಗೌರಿಬಿದನೂರು ಮಾರ್ಗದ ವಡ್ಡರಬಂಡೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ನೀಲಗಿರಿ ಮರದೊಳಗೆ ತೂರಿಕೊಂಡಿದೆ. ಕಾರಿನಲ್ಲಿದ್ದ ಮಂಚೇನಹಳ್ಳಿ ವಾಸಿ ಗೆದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಫ್‌ಡಿಎ ಶಶಿ (42) ಹಾಗೂ ಮಂಚೇನಹಳ್ಳಿ ತಾಲೂಕಿನ ದಂಡಿಗಾನಹಳ್ಳಿಯ ಮೆಕ್ಯಾನಿಕ್ ಮುನಿರಾಜು (28) ಮೃತಪಟ್ಟಿದ್ದಾರೆ. ಇನ್ನೂ ಕಾರಿನಲ್ಲಿದ್ದ ಮಂಚೇನಹಳ್ಳಿಯ ಮುಕ್ಕಡಿಪೇಟೆಯ ರಮೇಶ್ (40) ತೀವ್ರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

    ಮಂಚೇನಹಳ್ಳಿಯಿಂದ ಗೌರಿಬಿದನೂರಿನತ್ತ ಸಾಗುವಾಗ ವಡ್ಡರ ಬಂಡೆ ಬಳಿ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಮೃತ ಶಶಿ ಅವರ ಪತ್ನಿ ನಾಜಿಯಾ ಈ ಬಗ್ಗೆ ಮಂಚೇನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಂದಹಾಗೆ ಇಂದು ಗೌರಿಬಿದನೂರು ಬೈಪಾಸ್ ಗಣೇಶನ ಗಂಗಾವೀಲೀನ ಕಾರ್ಯ ವಿಜೃಂಭಣೆಯಿಂದ ನೇರವೇರಿತ್ತು. ಇದನ್ನೂ ಓದಿ: ಟೀಂ ಇಂಡಿಯಾ ಬೌಲಿಂಗ್‌ ದಾಳಿಗೆ ಪತರುಗುಟ್ಟಿದ ಪಾಕ್‌ – ಸೂರ್ಯ ಪಡೆ ಗೆಲುವಿಗೆ ಬೇಕು 128 ರನ್‌

  • Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

    Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

    ಚಿಕ್ಕಬಳ್ಳಾಪುರ: ಜ್ಯೂಸ್ ಬಾಟಲಿಯೊಳಗೆ ವಿಷ ಮಿಶ್ರಣ ಮಾಡಿಕೊಂಡು ಸೇವಿಸಿ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಎರಡು ಮಕ್ಕಳ ತಾಯಿ ಪ್ಲಾನ್ ಮಾಡಿಕೊಂಡಿದ್ದು, ಅದೃಷ್ಟವಶಾತ್ ಇಬ್ಬರು ಹೆಣ್ಣು ಮಕ್ಕಳು ಪಾರಾಗಿ, ತಾಯಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ (Manchenahalli) ತಾಲೂಕಿನ ಮಿಣಕನಗುರ್ಕಿ ಗ್ರಾಮದ ಬಳಿ ನಡೆದಿದೆ.

    36 ವರ್ಷದ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. 8 ವರ್ಷ ಹಾಗೂ 15 ವರ್ಷದ ಹೆಣ್ಣುಮಕ್ಕಳು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಅಂದಹಾಗೆ ಮೂಲತಃ ಗೌರಿಬಿದನೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ಲಕ್ಷ್ಮೀ ಎಂಬಾಕೆ ನಾರಾಯಣ ಎಂಬವರ ಜೊತೆ ಎರಡನೇ ವಿವಾಹವಾಗಿ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಆದರೆ ಅದೇನು ಸಮಸ್ಯೆಯೋ ಏನೋ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ಲಾನ್ ಮಾಡಿಕೊಂಡಿದ್ದಳು. ಇದನ್ನೂ ಓದಿ: ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ – ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

    ಸೀದಾ ಸಿಂಗನಾಯಕನಹಳ್ಳಿಯಿಂದ ಹಿರಿಯ ಮಗಳು ವ್ಯಾಸಂಗ ಮಾಡುತ್ತಿರುವ ಮಂಚೇನಹಳ್ಳಿ ತಾಲೂಕಿನ ಹನುಮಂತಪುರ ಗ್ರಾಮದ ಬಳಿಯ ವಸತಿ ಶಾಲೆಗೆ ಬಂದು ಮಗಳನ್ನ ಕಳುಹಿಸುವಂತೆ ಶಿಕ್ಷಕರ ಬಳಿ ಕೇಳಿಕೊಂಡಿದ್ದಾಳೆ. ಆದರೆ ಪರೀಕ್ಷೆಗಳು ಸಮೀಪ ಇದೆ, ಮಗಳನ್ನ ಕಳುಹಿಸಲು ಆಗಲ್ಲ ಎಂದು ಶಿಕ್ಷಕರು ಹೇಳಿದ್ದು, ಮಗಳಿಗೆ ಬಿರಿಯಾನಿ ತಿನ್ನಿಸಿ ಚೆನ್ನಾಗಿ ಒದಿಕೊಳ್ಳುವಂತೆ ಹೇಳಿ ಅಲ್ಲಿಂದ ಕಿರಿಯ ಮಗಳ ಜೊತೆ ವಾಪಸ್ ಆಗಿದ್ದಾಳೆ. ದಾರಿ ಮಧ್ಯೆ ಮಿಣಕನಗುರ್ಕಿ ಬಳಿ ಜ್ಯೂಸ್ ಬಾಟಲಿಗೆ ವಿಷ ಬೆರೆಸಿ ತಾನೂ ಕುಡಿದು ಕಿರಿಯ ಮಗಳಿಗೂ ಕೊಟ್ಟಿದ್ದಾಳೆ. ಆದರೆ ಮಗಳು ಕುಡಿದಿಲ್ಲ. ಇನ್ನೂ ವಿಷ ಸೇವನೆಗೂ ಮುನ್ನ ತನ್ನ ಅಕ್ಕನಿಗೆ ಕರೆ ಮಾಡಿ ಹಿರಿ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಹೇಳಿದ್ದಾಳೆ. ಗಂಡ ನಾರಾಯಣ್‌ಗೆ ಮಗಳು ಹಾಗೂ ಆಕೆ ಬಾಯ್ ಮಾಡುವ ವೀಡಿಯೋ ಮಾಡಿ ಕೊನೆಯ ಸಂದೇಶ ಕಳುಹಿಸಿದ್ದಾಳೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ – ಜನಸಾಗರ, ಡಿಜೆ ಸದ್ದಿಗೆ ಯುವ ಸಮೂಹ ಭರ್ಜರಿ ಡ್ಯಾನ್ಸ್

    ಇನ್ನೂ ವಿಷ ಕುಡಿದು ವಿಲವಿಲ ಒದ್ದಾಡುತ್ತಿದ್ದ ತಾಯಿಯನ್ನ ಕಂಡು ಮಗು ರಸ್ತೆಗೆ ಬಂದು ರಕ್ಷಣೆ ಮಾಡುವಂತೆ ಅಂಗಲಾಚಿಕೊಂಡಿದ್ದಾಳೆ, ರಸ್ತೆಗೆ ಅಡ್ಡ ಬಂದು ಗಾಡಿಗಳನ್ನು ಅಡ್ಡ ಹಾಕಲು ಪ್ರಯತ್ನಿಸಿ ಕೊನೆಗೆ ಆಟೋಗೆ ಅಡ್ಡಲಾಗಿ ನಿಂತು ತಾಯಿಯನ್ನ ಆಸ್ಪತ್ರೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಆದರೆ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮೀ ಸಾವನ್ನಪ್ಪಿದ್ದಾಳೆ. ಇಬ್ಬರು ಮಕ್ಕಳು ತಾಯಿಯಿಲ್ಲದ ತಬ್ಬಲಿಗಳಾಗದ್ದಾರೆ. ಮತ್ತೊಂದೆಡೆ ಗಂಡ ದಿನೇಶ್ ಮೊದಲನೇ ಹೆಂಡತಿ ಸಹ ಸೂಸೈಡ್ ಮಾಡಿಕೊಂಡಿದ್ದಳಂತೆ. ಈಗ ಎರಡನೇ ಹೆಂಡತಿ ಸಹ ಸೂಸೈಡ್ ಮಾಡಿಕೊಂಡಿದ್ದಾಳೆ. ಸಂಬಂಧಿಕರು ಹೊಟ್ಟೆನೋವಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಕ್ತರಿಗೆ ಸಿಹಿಸುದ್ದಿ; ಮಾದಪ್ಪನ ದರ್ಶನಕ್ಕೆ ತಿರುಪತಿ ಮಾದರಿ ವ್ಯವಸ್ಥೆ

  • ಸಾಲು ಸಾಲು ದುರಂತದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಪೊಲೀಸರು ಅಲರ್ಟ್‌ – ಗಣೇಶ ವಿಸರ್ಜನೆಗೆ ಬಿಗಿ ಬಂದೋಬಸ್ತ್

    ಸಾಲು ಸಾಲು ದುರಂತದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಪೊಲೀಸರು ಅಲರ್ಟ್‌ – ಗಣೇಶ ವಿಸರ್ಜನೆಗೆ ಬಿಗಿ ಬಂದೋಬಸ್ತ್

    – ಗೌರಿಬಿದನೂರು ಬೈಪಾಸ್ ಗಣೇಶ ವಿಸರ್ಜನೆ; 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
    – ಮಸೀದಿ-ಮಂದಿರ-ಚರ್ಚ್‌ಗಳ ಬಳಿ ವಿಶೇಷ ಭದ್ರತೆ

    ಚಿಕ್ಕಬಳ್ಳಾಪುರ: ರಾಜ್ಯದೆಲ್ಲೆಡೆ ಗಣೇಶ ವಿಸರ್ಜನಾ ಮೆರವಣಿಗೆಗಳು (Ganesha Visarjan Procession) ಜೋರಾಗಿ ಸಾಗುತ್ತಿದ್ದರೆ, ಕೆಲ ಕಡೆಗಳಲ್ಲಿ ನಡೆದ ಅಹಿತಕರ ಘಟನೆಗಳಿಂದ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಪಟಾಕಿ ಸ್ಫೋಟದಿಂದ ಇಬ್ಬರು ಬಾಲಕರ ಸಾವು, ಮದ್ದೂರಿನಲ್ಲಿ ಕಲ್ಲುತೂರಾಟ ಗಲಾಟೆ, ಹಾಸನದಲ್ಲಿ ಮೆರವಣಿಗೆಯ ವೇಳೆ ಆದ ಅಪಘಾತದ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆ ಪೊಲೀಸರೂ (Chikkaballapura Police) ಫುಲ್‌ ಅಲರ್ಟ್‌ ಆಗಿದ್ದಾರೆ.

    ಗೌರಿಬಿದನೂರು ಬೈಪಾಸ್ ಗಣೇಶನ ವಿಶೇಷ
    ಪ್ರತಿಷ್ಠಿತ ಬೈಪಾಸ್ ಗಣೇಶೋತ್ಸವ 22ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಬಾರಿ 22 ಅಡಿ ಎತ್ತರದ ಪ್ರಣವ ಮಹಾರುದ್ರ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ಪೆಂಡಾಲ್‍ನಲ್ಲಿ ದೇಶದ ಪ್ರಸಿದ್ಧ ದೇವಾಲಯಗಳ ಮಾದರಿಗಳನ್ನು ಅಲಂಕರಿಸಿರುವುದು ಭಕ್ತರ ಗಮನ ಸೆಳೆದಿದೆ. ಭಾನುವಾರ ನಡೆಯಲಿರುವ ಗಂಗಾವಿಲೀನ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ: ಹಾಸನ ದುರಂತ – ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸ್ವಯಂಪ್ರೇರಿತ ಬಂದ್

    ಪೊಲೀಸರ ತಯಾರಿ ಹೇಗಿದೆ?
    ಸಂಭಾವ್ಯ ಅಹಿತಕರ ಘಟನೆಗಳನ್ನ ತಪ್ಪಿಸಲು ಜಿಲ್ಲೆಯ ಎಸ್ಪಿ ಕುಶಲ್ ಚೌಕ್ಸಿ ನೇತೃತ್ವದಲ್ಲಿ ಹಲವು ಶಾಂತಿ ಸಭೆಗಳನ್ನು ನಡೆಸಲಾಗಿದೆ. ಮುನ್ನೆಚ್ಚರಿಕೆಯಾಗಿ ಗೌರಿಬಿದನೂರು ಪಟ್ಟಣದಲ್ಲಿ ಭಾರೀ ಪೊಲೀಸರ ಪಥಸಂಚಲನ ನಡೆಸಲಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಮೆರವಣಿಗೆ ಸರಿಸುಮಾರು ಸಂಜೆ 8ರ ವರೆಗೆ ಸಾಗಲಿದ್ದು, 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗುತ್ತಿದೆ. ಮಸೀದಿ, ಮಂದಿರ, ಚರ್ಚ್ ಮುಂತಾದ ಧಾರ್ಮಿಕ ಕೇಂದ್ರಗಳ ಬಳಿ ವಿಶೇಷ ಭದ್ರತೆ ಏರ್ಪಡಿಸಲಾಗಿದೆ. ಸಿಸಿ ಟಿವಿಗಳನ್ನ ಆಳವಡಿಸಲಾಗುತ್ತಿದೆ. ಡ್ರೋನ್ ಕ್ಯಾಮೆರಾ ಬಳಸಿ ವಿಡಿಯೋ ಚಿತ್ರೀಕರಣ ಸಹ ಮಾಡಿಸಲು ತೀರ್ಮಾನ ಮಾಡಲಾಗಿದೆ. ಇದನ್ನೂ ಓದಿ: ಹಾಸನ | ವಿಮಾನ ದುರಂತದಲ್ಲಾದ್ರೆ 1 ಕೋಟಿ ಕೊಡ್ತೀರಿ, ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ ಜನರ ತರಾಟೆ

    ಪೊಲೀಸರಿಂದ ಸಾರ್ವಜನಿಕರಿಗೆ ಸಂದೇಶ
    ಗಣೇಶ ವಿಸರ್ಜನಾ ಮೆರವಣಿಗೆ ಶಾಂತಿಯುತವಾಗಿ ನಡೆಯಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಭಾರೀ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹ ಸಹಕಾರ ನಿಡಬೇಕು ಎಂದು ಎಸ್‍ಪಿ ಕುಶಲ್ ಚೌಕ್ಸಿ ಮನವಿ ಮಾಡಿಕೊಂಡಿದ್ದಾರೆ. ಗೌರಿಬಿದನೂರಿನ ಬೈಪಾಸ್ ಗಣೇಶ ವಿಸರ್ಜನೆಗೆ ಕಟ್ಟಿನಿಟ್ಟಿನ ಭದ್ರತೆ ಒದಗಿಸಲು ಮುಂದಾಗಿರುವ ಪೊಲೀಸರು ಭಕ್ತರು ಶಾಂತಿಯುತವಾಗಿ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಪ್ರಧಾನಿ ಮೋದಿ ಸಂತಾಪ

  • ಕುಡಿದ ಮತ್ತಲ್ಲಿ ಇನ್ನೂ ಎಣ್ಣೆ ಕೊಡಿಸು ಅಂತ ಪೀಡಿಸಿದ ಪ್ರಿಯತಮೆ ಕೊಂದ ಪ್ರಿಯಕರ

    ಕುಡಿದ ಮತ್ತಲ್ಲಿ ಇನ್ನೂ ಎಣ್ಣೆ ಕೊಡಿಸು ಅಂತ ಪೀಡಿಸಿದ ಪ್ರಿಯತಮೆ ಕೊಂದ ಪ್ರಿಯಕರ

    ಚಿಕ್ಕಬಳ್ಳಾಪುರ: ಮದ್ಯಕ್ಕಾಗಿ ಪೀಡಿಸಿದ ಪ್ರಿಯತಮೆಯನ್ನ ಪ್ರಿಯಕರ ಮಚ್ಚಿನಿಂದ ಮನಸ್ಸೋಇಚ್ಛೆ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗುಡಿಬಂಡೆ ಪಟ್ಟಣದ ವಾರ್ಡ್ ನಂಬರ್ 8ರಲ್ಲಿ ನಡೆದಿದೆ.

    ರಮಿಜಾಬಿ (25) ಮೃತ ಪ್ರಿಯತಮೆ. ಬಾಬಾಜಾನ್ (40) ಕೊಲೆ ಮಾಡಿದ ಪ್ರಿಯಕರ. ಮೂಲತಃ ಶ್ರೀನಿವಾಸಪುರದ ರಮಿಜಾಬಿಗೆ ಬೇರೊಬ್ಬರ ಜೊತೆ ವಿವಾಹವಾಗಿ ಮಕ್ಕಳಿದ್ದರು. ಇತ್ತ ಬಾಬಾಜಾನ್‌ಗೂ ಮದುವೆಯಾಗಿ ಮಕ್ಕಳಿದ್ದರು. ಇದನ್ನೂ ಓದಿ: ಬ್ರಹ್ಮಾವರ | ನಂಬರ್ ಬ್ಲಾಕ್ ಮಾಡಿದ್ದಕ್ಕೆ ಯುವತಿಯ ಕತ್ತು, ಎದೆಗೆ ಚಾಕು ಇರಿದ ಪಾಗಲ್ ಪ್ರೇಮಿ

    ಆದರೂ ಇಬ್ಬರೂ, ಗಂಡ, ಹೆಂಡತಿ ಮತ್ತು ಮಕ್ಕಳನ್ನ ಬಿಟ್ಟು ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದರು. ಇಬ್ಬರು ಸಹ ಕುಡಿತದ ಚಟಕ್ಕೆ ಬಿದ್ದಿದ್ದರು. ಪದೇ ಪದೇ ಕುಡಿದು ಗಲಾಟೆ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಹಾಸನ | ಮಗಳ ಜೀವ ಉಳಿಸಲು ಹೋಗಿ ಅಳಿಯನಿಂದ ಹತ್ಯೆಯಾದ ಅತ್ತೆ

    ಶುಕ್ರವಾರ ಸಂಜೆ ಸಹ ಕುಡಿದು ಗಲಾಟೆ ಮಾಡಿಕೊಂಡಿದ್ದು, ರಮಿಜಾಬಿ ತನಗೆ ಮತ್ತಷ್ಟು ಎಣ್ಣೆ ಬೇಕೆಂದು ಪೀಡಿಸಿದ್ದಳಂತೆ. ಇದರಿಂದ ಸಿಟ್ಟಿಗೆದ್ದ ಬಾಬಾಜಾನ್ ಮಚ್ಚಿನಿಂದ ಮನಸ್ಸೋಇಚ್ಛೆ ಕೊಚ್ಚಿ ಕೊಂದಿದ್ದಾನೆ.

    ಘಟನಾ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಹಾಗೂ ಎಸ್ಪಿ ಕುಶಲ್ ಚೌಕ್ಸಿ ಭೇಟಿ ನೀಡಿ, ಬಾಬಾಜಾನ್‌ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮೃತದೇಹವನ್ನ ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿ ತನಿಖೆ ಕೈಗೊಂಡಿದ್ದಾರೆ.

  • UAE ಕರೆನ್ಸಿ ತೋರಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ ಅಂತರರಾಜ್ಯ ವಂಚಕರು ಅಂದರ್‌

    UAE ಕರೆನ್ಸಿ ತೋರಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ ಅಂತರರಾಜ್ಯ ವಂಚಕರು ಅಂದರ್‌

    ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ (ಯುಎಇ) ಕರೆನ್ಸಿ (UAE Currency) ದಿರ್ಹಮ್ ತೋರಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ ಅಂತರರಾಜ್ಯ ವಂಚಕರನ್ನ ಬಂಧಿಸುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು (Doddaballapur Rural Police) ಯಶಸ್ವಿಯಾಗಿದ್ದಾರೆ.

    ಪ್ರಕರಣದಲ್ಲಿ ಎ2 ಆರೋಪಿ ಶೇಖ್ ಸಲ್ಮಾ ಬಾನು (35), ಎ3 ಆರೋಪಿ ಮೊಹಮ್ಮದ್ ಮಿಲ್ಲನ್ (32) ಬಂಧಿತರಾಗಿದ್ದು, ಎ1 ಆರೋಪಿ ತಲೆ ಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ.

    ಚಿಕ್ಕಬಳ್ಳಾಪುರ (Chikkaballapura) ಮೂಲದ ಟೂರ್ಸ್ ಅಂಡ್ ಟ್ರಾವೆಲ್ಸ್ ವ್ಯವಹಾರ ಮಾಡುತ್ತಿದ್ದ ಅಲ್ಲಾಬಕಾಶ್ ಎಂಬ ವ್ಯಕ್ತಿಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನ ದಿರ್ಹಮ್(ಹಣ) ತೋರಿಸಿ 6 ಲಕ್ಷ ಪೀಕಿ ಮೋಸ ಮಾಡಲಾಗಿದೆ. ಇಬ್ಬರು ಖತರ್ನಾಕ್‌ಗಳು 100 ದಿರ್ಹಮ್‌ನ ನೋಟನ್ನು ತೋರಿಸಿ ಈ ರೀತಿಯ ದಿರ್ಹಮ್ ತನ್ನ ಬಳಿ ಹೆಚ್ಚಿಗೆ ಇದ್ದು ಇನ್ನು ಕಡಿಮೆ ಬೆಲೆಗೆ ಕೊಡುತ್ತೇನೆ ಎಂದಿದ್ದಾರೆ. ದೂರುದಾರನನ್ನು ಆಗಸ್ಟ್ 23 ರಂದು ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಹಳ್ಳಿಗೆ ಕರೆಸಿಕೊಂಡಿದ್ದಾರೆ. ಅಲ್ಲಿ ಅವನಿಗೆ ದಿರ್ಹಮ್ ಕರೆನ್ಸಿ ತೋರಿಸಿ ಆಸೆ ಹುಟ್ಟಿಸಿ ಬಲವಾಗಿ ನಂಬಿಸಿದ್ದಾರೆ.

    ಮರುದಿನ ಆಗಸ್ಟ್ 24ರಂದು ಬೆಳಗ್ಗೆ 8:00 ಗಂಟೆಗೆ ಮತ್ತೆ ದೂರುದಾರನು 6 ಲಕ್ಷ ಹಣವನ್ನು ತೆಗೆದುಕೊಂಡು ಬಂದು ಆರೋಪಿಗಳಿಗೆ ನೀಡಿದ್ದಾನೆ. ದೂರುದಾರನಿಂದ ಭಾರತ ಕರೆನ್ಸಿಯಲ್ಲಿ 6 ಲಕ್ಷ ಹಣ ಪಡೆದ ಆರೋಪಿಗಳು, ಯುನೈಟೆಡ್ ಅರಬ್ ಎಮಿರೇಟ್ಸ್ ನ ದಿರ್ಹಮ್(ಹಣ) ಇದ್ದ ಬ್ಯಾಗನ್ನು ದೂರುದಾರನಿಗೆ ಕೊಟ್ಟು ಎಸ್ಕೇಪ್ ಆಗಿದ್ದಾರೆ.

    ಆರೋಪಿಗಳು ನೀಡಿದ್ದ ಬ್ಯಾಗನ್ನು ಪಡೆದುಕೊಂಡು ಬಂದು ಪರಿಶೀಲಿಸಿದಾಗ ಅಸಲಿ ಸತ್ಯ ಬೆಳಕಿಗೆ ಬಂದಿದೆ. ಬ್ಯಾಗ್ ನಲ್ಲಿ ದಿರಮ್ಸ್ ಬದಲಿಗೆ ಬಿಳಿಯ ಪೇಪರ್‌ಗಳು ಕಂಡುಬಂದಿದೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಣ‌‌ ಕಳೆದುಕೊಂಡ ಅಲ್ಲಾಬಕಾಶ್ ದೂರು ದಾಖಲಿಸಿದ್ದಾನೆ.

    ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇನ್ಸ್‌ಪೆಕ್ಟರ್‌ ಸಾಧಿಕ್ ಪಾಷಾ ನೇತೃತ್ವದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಚಂದ್ರಕಲಾ, ಎಎಸ್‌ಐ ಸುನಿಲ್ ಬಾಸಗಿ ಇತರೇ ಸಿಬ್ಬಂದಿ ಫೈರೋಜ್ ಕೆ, ಪ್ರವೀಣ್, ಸಚಿನ್ ಉಪ್ಪಾರ್ ಅವರ ತಂಡವು, ಆರೋಪಿಗಳ ಜಾಡು ಪತ್ತೆ ಮಾಡಿ ಇಬ್ಬರನ್ನ ಬಂಧಿಸಿದೆ. ಸದ್ಯ ಎ1 ಆರೋಪಿ ತಲೆಮರೆಸಿಕೊಂಡಿದ್ದು, ಎ1 ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.