Tag: Chikkaballapura

  • ಗುತ್ತಿಗೆ ಕಾರು ಚಾಲಕ ಆತ್ಮಹತ್ಯೆ ಕೇಸ್‌ – ಸಂಸದ ಡಾ. ಕೆ.ಸುಧಾಕರ್ ವಿರುದ್ಧ FIR ದಾಖಲು

    ಗುತ್ತಿಗೆ ಕಾರು ಚಾಲಕ ಆತ್ಮಹತ್ಯೆ ಕೇಸ್‌ – ಸಂಸದ ಡಾ. ಕೆ.ಸುಧಾಕರ್ ವಿರುದ್ಧ FIR ದಾಖಲು

    ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಕಾರು ಚಾಲಕ ಆತ್ಮಹತ್ಯೆ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಡಾ.ಕೆ.ಸುಧಾಕರ್ ಹಾಗೂ ಅವರ ಬೆಂಬಲಿಗರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕೆ.ಸುಧಾಕರ್ ಹಾಗೂ ಇಬ್ಬರು ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿದೆ.

    ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. A1 ಸಂಸದ ಡಾ.ಕೆ.ಸುಧಾಕರ್, a2 ನಾಗೇಶ, a3 ಮಂಜುನಾಥ್. ಬಿಎನ್‌ಎಸ್ 2023 ( u/s 108, 352. 351(2), (3)(5) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ಆಗಿದೆ.

  • ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತಿಲ್ಲ: ಡಾ.ಸುಧಾಕರ್ ರಿಯಾಕ್ಷನ್

    ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತಿಲ್ಲ: ಡಾ.ಸುಧಾಕರ್ ರಿಯಾಕ್ಷನ್

    ನವದೆಹಲಿ: ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಹೆಸರು ಯಾಕೆ ಉಲ್ಲೇಖ ಮಾಡಿದ್ದಾರೆ ಎಂಬುದೂ ಗೊತ್ತಿಲ್ಲ ಎಂದು ಸಂಸದ ಡಾ ಕೆ.ಸುಧಾಕರ್ (Dr K Sudhakar) ಹೇಳಿದ್ದಾರೆ.

    ಜಿಲ್ಲಾ ಪಂಚಾಯಿತಿ ಸಿಇಎ ಅವರ ಕಾರು ಚಾಲಕ ಡೆತ್‌ನೋಟ್‌ನಲ್ಲಿ (Death Note) ತಮ್ಮ ಹೆಸರು ಬರೆದಿಟ್ಟು ನೇಣಿಗೆ ಶರಣಾದ ಬಗ್ಗೆ ಅವರು ನವದೆಹಲಿಯಲ್ಲಿ (New Delhi) ಪ್ರತಿಕ್ರಿಯೆ ನೀಡಿದ್ದಾರೆ. ಬಾಬು ಆತ್ಮಹತ್ಯೆ (Suicide) ನನಗೆ ನೋವು ತಂದಿದೆ. ನನಗೆ ಬಾಬು ಎಂಬ ವ್ಯಕ್ತಿ ಗೊತ್ತಿಲ್ಲ. ನಾನು ಆತನ ಮುಖ ಸಹ ನೋಡಿಲ್ಲ. ಈ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖ ಮಾಡಿದ್ದಾರೋ ಗೊತ್ತಿಲ್ಲ. ನಾಗೇಶ್ ಅವರ ಮಾವ ಚಿಕ್ಕಾಡಗನಹಳ್ಳಿ ಕೃಷ್ಣಮೂರ್ತಿಯ ಪರಿಚಯ ಇದೆ ಎಂದಿದ್ದಾರೆ. ಇದನ್ನೂ ಓದಿ: ಕೆ ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ

    ಬಾಬು ಕುಟುಂಬದವರು ದೂರು ಕೊಡಲು ಠಾಣೆಗೆ ಹೋದಾಗ ಅಲ್ಲಿನ ಪಿಎಸ್‌ಐ ಡೆತ್‌ನೋಟ್‌ನಲ್ಲಿರುವಂತೆ ದೂರು ಕೊಡಿ ಎಂದಿದ್ದಾರೆ. ಇದರಲ್ಲಿ ಶಾಸಕರ, ಉಸ್ತುವಾರಿ ಸಚಿವರ ರಾಜಕೀಯ ಇದೆ. ನನ್ನನ್ನೂ ಒಳಗೊಂಡಂತೆ ಯಾರೇ ತಪ್ಪಿತಸ್ಥರು ಇದ್ದರೂ ಅವರಿಗೆ ಉಗ್ರ ಶಿಕ್ಷೆಯಾಗಲಿ. ಕಾನೂನು ಏನೇ ಇರಲಿ ತನಿಖೆ ಪಾರದರ್ಶಕವಾಗಿರಲಿ. ಇದು ಮಾಧ್ಯಮದ ಟ್ರಯಲ್ ಆಗೋದು ಬೇಡ. ಸರಿಯಾಗಿ ತನಿಖೆ ಆಗಲಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    ದೆಹಲಿಯಿಂದ ವಾಪಾಸ್ಸಾದ ಬಳಿಕ ಮೃತನ ಕುಟುಂಬ ಸದಸ್ಯರನ್ನು ನಾನು ಭೇಟಿ ಮಾಡುತ್ತೇನೆ. ಇದರ ಹಿಂದೆ ರಾಜಕೀಯ ಪಿತೂರಿ ಇದೆ. ಇದು ಜಗಜ್ಜಾಹೀರಾಗಿದೆ. ಕಾಂಗ್ರೆಸ್ ಶಾಸಕರ ಹೆಸರು ಬಂದ್ರೆ ಒಂದು ಕಾನೂನು. ಬಿಜೆಪಿ ಶಾಸಕರು, ಸಂಸದರು ಹೆಸರು ಬಂದ್ರೆ ಬೇರೆ ಕಾನೂನು. ಬಾಬು ಸಾವನ್ನು ರಾಜಕೀಯ ಕಾರಣಕ್ಕೆ ಎಳೆದು ತರುವುದು ಸರಿ ಅಲ್ಲ. ಕೊಡಗು ಪ್ರಕರಣದಲ್ಲಿ ಶಾಸಕರ ಹೆಸರು ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಏನಿದು ಪ್ರಕರಣ?
    ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೌಕರ ಕಾರು ಚಾಲಕ ಬಾಬು ಜಿಲ್ಲಾಡಳಿತ ಭವನದ ಆವರಣದಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣು ಹಾಕಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬಾಬು ಅವರು ಡೆತ್‌ನೋಟ್ ಅನ್ನು ಮಹಿಳಾ ಸಿಬ್ಬಂದಿಗೆ ಕಳುಹಿಸಿದ್ದರು. ಡೆತ್‌ನೋಟ್‌ನಲ್ಲಿ 25 ಲಕ್ಷ ರೂ. ವಂಚನೆ ಆರೋಪ ಮಾಡಿ, ನನ್ನ ಸಾವಿಗೆ ಡಾ ಕೆ.ಸುಧಾಕರ್ ಹಾಗೂ ನಾಗೇಶ್ ಕಾರಣ ಎಂದು ಉಲ್ಲೇಖಿಸಿದ್ದಾರೆ.

  • 25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತಿ ಸಿಎಇ ಅವರ ಕಾರು ಚಾಲಕ ಬಾಬು ಆತ್ಮಹತ್ಯೆ (Suicide) ಮಾಡಿಕೊಳ್ಳುವ ಮುನ್ನ ಡೆತ್‌ನೋಟ್‌ (Death Note) ಅನ್ನು ಮಹಿಳಾ ಸಿಬ್ಬಂದಿಗೆ ಕಳುಹಿಸಿದ್ದರು.

    ಜಿಲ್ಲಾ ಪಂಚಾಯತ್‌ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೌಕರ ಕಾರು ಚಾಲಕ ಬಾಬು ಜಿಲ್ಲಾಡಳಿತ ಭವನದ ಆವರಣದಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್‌ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಸೇರಿದಂತೆ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿದ್ದಾರೆ.

    ಆತ್ಮಹತ್ಯೆ ಮಾಡಿಕೊಂಡ ಕಾರು ಚಾಲಕನ ಸರ್ಕಾರಿ ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನನ್ನ ಸಾವಿಗೆ ಡಾ ಕೆ ಸುಧಾಕರ್ (K Sudhakar) ಕಾರಣ ಎಂದು ಉಲ್ಲೇಖಿಸಿದ್ದಾರೆ.

    ಘಟನೆ ಸಂಬಂಧ ತನಿಖೆಗಿಳಿದ ಪೊಲೀಸರು ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದು ಇತ್ತ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ನಾಗೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

    ಡೆತ್‌ ನೋಟ್‌ನಲ್ಲಿ ಏನಿದೆ?
    ಮೃತನ ಕಾರಿನಲ್ಲಿ 4 ಪುಟಗಳ ಡೆತ್ ನೋಟ್ ಸಿಕ್ಕಿದೆ. ಮೊದಲ ಪುಟದ ಮೊದಲ ಸಾಲಿನಲ್ಲೇ ನನ್ನ ಸಾವಿಗೆ ಡಾ ಕೆ ಸುಧಾಕರ್, ನಾಗೇಶ್, ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ವಿಭಾಗದ ಎಸ್‌ಡಿ ಮಂಜುನಾಥ್ ಹೆಸರನ್ನ ಬರೆಯಲಾಗಿದೆ. ಸುಧಾಕರ್‌ಗೆ ಹೇಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಾಗೇಶ್ 25 ಲಕ್ಷ ರೂ. ಹಣ ಪಡೆದು ಪಡೆದುಕೊಂಡಿದ್ದಾನೆ. ಆದರೆ ನನಗೆ ಕೆಲಸವೂ ಸಿಕ್ಕಿಲ್ಲ. ಹಣವು ಸಿಕ್ಕಿಲ್ಲ ಎಂದು ಬರೆಯಲಾಗಿದೆ.

    ಈ ಪತ್ರದ ಫೋಟೋವನ್ನು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಕಳುಹಿಸಿದ್ದಾರೆ. ಈ ಡೆತ್‌ ನೋಟ್‌ ನೋಡಿ ಅವರು ಕಚೇರಿ ಬಳಿ ಆಗಮಿಸುವಷ್ಟರಲ್ಲೇ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

     

    ಸಂಬಂಧಿಕರ ಗೋಳಾಟ
    ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಮೃತನ ಪತ್ನಿ ಶಿಲ್ಪಾ ಹಾಗೂ ಸಹೋದರ ಲೋಕೇಶ್ ಸೇರಿದಂತೆ ತಾಯಿ ಕಾಳಮ್ಮ ಆಕ್ರಂದನ ಮುಗಿಲುಮುಟ್ಟಿದೆ. ಸಭೆಯಿದೆ ಎಂದು ಹೇಳಿ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟ್ಟಿದ್ದರು. ಆದರೆ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ತಿಳಿಸಿದರು. ಅಣ್ಣ ಸರ್ಕಾರಿ ಕೆಲಸಕ್ಕೆ ಹಣ ನೀಡಿದ್ದು ಹಾಗೂ ಡೆತ್ ನೋಟ್‌ನಲ್ಲಿ ಉಲ್ಲೇಖವಾದ ವಿಚಾರದ ಬಗ್ಗೆ ನಮಗೇನು ಸರಿಯಾಗಿ ತಿಳಿದಿಲ್ಲ ಎಂದು ಹೇಳಿದರು.

    ಕಾಂಗ್ರೆಸ್ ಪ್ರತಿಭಟನೆ
    ಘಟನೆ ನಡೆದ ಬೆನ್ನಲ್ಲೇ ಸಕ್ರೀಯವಾಗಿರುವ ಕಾಂಗ್ರೆಸ್ ಮುಖಂಡರು ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಮಾಯಕನ ಸಾವಿಗೆ ಕಾರಣರಾವಾಗಿರುವ ಸಂಸದ ಸುಧಾಕರ್ ಹಾಗೂ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವ ನಾಗೇಶ್ ಹಾಗೂ ಮಂಜುನಾಥ್ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

  • ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ – ರಾಜಕೀಯ ಒತ್ತಡ ಇಲ್ಲದೆ ತನಿಖೆ: ಎಂ.ಸಿ ಸುಧಾಕರ್

    ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ – ರಾಜಕೀಯ ಒತ್ತಡ ಇಲ್ಲದೆ ತನಿಖೆ: ಎಂ.ಸಿ ಸುಧಾಕರ್

    ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಸುಧಾಕರ್ (K.Sudhakar) ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ರಾಜಕೀಯ ಒತ್ತಡವಿಲ್ಲದೆ ತನಿಖೆ ಆಗಲಿದೆ ಎಂದು ಚಿಕ್ಕಬಳ್ಳಾಪುರ (Chikkaballapur) ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ (MC Sudhakar) ತಿಳಿಸಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್ ಯಾವತ್ತು ಹಿಟ್ ಅಂಡ್ ರನ್ ಮಾಡಲ್ಲ; ಕರ್ನಾಟಕದ ಮತಗಳ್ಳತನಕ್ಕೆ ಸಾಕ್ಷಿ ಇದೆ – ಪ್ರಿಯಾಂಕ್ ಖರ್ಗೆ

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬೆಳಿಗ್ಗೆ ಮಾಹಿತಿ ಬಂದಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ತನ್ನ ಸಾವಿಗೆ ಕಾರಣ ಏನು ಎನ್ನುವ ಬಗ್ಗೆ ಬರೆದಿದ್ದಾರೆ. ಅವುಗಳಲ್ಲಿ ಸಂಸದ ಸುಧಾಕರ್ ಮೇಲೆ ಆರೋಪ ಮಾಡಿದ್ದಾರೆ. ಎಂಪಿ ಅವರ ಅನುಯಾಯಿ ನಾಗೇಶ್, ಮಂಜುನಾಥ್ ಕಾರಣ ಅಂತ ಪತ್ರ ಬರೆದಿದ್ದಾರೆ. ಯಾರೇ ಆಗಲಿ ಕಾನೂನು ಕ್ರಮ ತೆಗೆದುಕೊಳ್ತೀವಿ ಎಂದಿದ್ದಾರೆ.

    ಇದು ಗಂಭೀರ ಆರೋಪ. ಕೆಲಸ ಕೊಡಿಸೋದಾಗಿ ಹಣ ಪಡೆದಿದ್ದಾರೆ. ಇದು ಸಂಪೂರ್ಣ ತನಿಖೆ ಆಗಬೇಕು. ಕಾನೂನು ರೀತಿ ಕ್ರಮ ತೆಗೆದುಕೊಳ್ತೀವಿ. ಡೆತ್‌ನೋಟ್‌ನಲ್ಲಿ ಎಂಪಿ ಸುಧಾಕರ್ ಅವರ ಹೆಸರು ಇದೆ. ತನಿಖೆ ಆಗಲಿ. ಅವರ ಕುಟುಂಬದವರು ಏನು ಹೇಳುತ್ತಾರೆ ಅದೆಲ್ಲದರ ತನಿಖೆ ಆಗಲಿ. ಪಾರದರ್ಶಕ ತನಿಖೆ ಆಗುತ್ತದೆ. ಚಾಲಕ ಬಾಬು ಎಸ್‌ಸಿ ಸಮುದಾಯಕ್ಕೆ ಸೇರಿದ ಯುವಕ. ಸಮಗ್ರ ತನಿಖೆ ಆಗುತ್ತದೆ. ರಾಜಕೀಯ ಒತ್ತಡ ಇಲ್ಲದೆ ತನಿಖೆ ಆಗುತ್ತದೆ ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಕೇಸ್‌ಲ್ಲಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು – ಪ್ರಿಯಾಂಕ್ ಖರ್ಗೆ

  • ನಂದಿಬೆಟ್ಟದ ರಸ್ತೆಯಲ್ಲಿ ಅಪಘಾತ – Friendship Day ದಿನವೇ ಪ್ರಾಣ ಬಿಟ್ಟ ಸ್ನೇಹಿತರು

    ನಂದಿಬೆಟ್ಟದ ರಸ್ತೆಯಲ್ಲಿ ಅಪಘಾತ – Friendship Day ದಿನವೇ ಪ್ರಾಣ ಬಿಟ್ಟ ಸ್ನೇಹಿತರು

    ಚಿಕ್ಕಬಳ್ಳಾಪುರ: ಸ್ನೇಹಿತರ ದಿನದ ಹಿನ್ನೆಲೆ ಬೈಕಿನಲ್ಲಿ ನಂದಿಬೆಟ್ಟಕ್ಕೆ ತೆರಳಿದ್ದ ಇಬ್ಬರು ಫ್ರೆಂಡ್ಸ್‌ ಅಪಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲ್ಲೂಕಿನ ನಂದಿಬೆಟ್ಟದ ರಸ್ತೆಯ 15ನೇ ತಿರುವಿನ ಬಳಿ ಸಂಭವಿಸಿದೆ.

    ಚಿಕ್ಕಬಳ್ಳಾಪುರ ತಾಲ್ಲೂಕಿನ ಕಣಿತಹಳ್ಳಿ ಗ್ರಾಮದ ಅರವಿಂದ್ (21) ಹಾಗೂ ಶ್ರೀಕಾಂತ್ (21) ಮೃತರು. ಇಬ್ಬರು ಸ್ನೇಹಿತರಾಗಿದ್ದು Friendship Day ಅಂಗವಾಗಿ ಪ್ಲ್ಯಾನ್‌ ಮಾಡಿಕೊಂಡು ಒಂದೇ ಬೈಕಿನಲ್ಲಿ‌ ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರಿಯ ವಿವಿ ಆವರಣದಲ್ಲಿ ಗೋರಿ – ರಾತ್ರೋರಾತ್ರಿ ಕಾಂಪೌಂಡ್‌ ನಿರ್ಮಾಣ

    ರಸ್ತೆ ಬದಿಯ ದೊಡ್ಡ ಬಂಡೆಗಲ್ಲಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗಳಿಗೆ ಗಂಭೀರ ಗಾಯಗಾಳಾಗಿ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕೊಪ್ಪಳ| ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಕೊಲೆ

  • ಚಿಕ್ಕಬಳ್ಳಾಪುರ | 1kg ಏಲಕ್ಕಿ ಬಾಳೆ 130 ರೂ.ವೆರೆಗೆ ಮಾರಾಟ – ರೈತರು ಖುಷ್‌, ಗ್ರಾಹಕರ ಜೇಬಿಗೆ ಕತ್ತರಿ

    ಚಿಕ್ಕಬಳ್ಳಾಪುರ | 1kg ಏಲಕ್ಕಿ ಬಾಳೆ 130 ರೂ.ವೆರೆಗೆ ಮಾರಾಟ – ರೈತರು ಖುಷ್‌, ಗ್ರಾಹಕರ ಜೇಬಿಗೆ ಕತ್ತರಿ

    ಚಿಕ್ಕಬಳ್ಳಾಪುರ: ಆಷಾಢ ಮಾಸ ಕಳೆದು ಶ್ರಾವಣ ಮಾಸ (Shravan Maas) ಬಂದಿದೆ. ಮುಂದೆ ಸಾಲು ಸಾಲು ಹಬ್ಬಗಳ ಸರದಿ. ಅದ್ರಲ್ಲೂ ಹೂ ಹಣ್ಣು ಕಾಯಿಗೆ ಭಾರೀ ಡಿಮ್ಯಾಂಡ್ ಆಗೋ ವರಮಹಾಲಕ್ಷ್ಮಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇವೆ.

    ಇದ್ರಿಂದ ಈಗಲೇ ಮಾರುಕಟ್ಟೆಯಲ್ಲಿ (Market) ಏಲಕ್ಕಿ ಬಾಳೆಹಣ್ಣು ದರ ಕೇಳೀ ಗ್ರಾಹಕರು ಸುಸ್ತಾಗುವಂತಾಗಿದೆ. ಹೌದು ಶ್ರಾವಣ ಮಾಸ ಬಂದಿದ್ದೇ ತಡ, ಮದುವೆ, ಮುಂಜಿ, ನಾಮಕರಣ, ಗೃಹಪ್ರವೇಶ ಸೇರಿದಂತೆ ಶುಭಕಾರ್ಯಗಳು ಆರಂಭವಾಗಿವೆ. ಇನ್ನು ದೇವಸ್ಥಾನಗಳಲ್ಲಿ ನಡೆಯುವ ವಿಶೇಷ ಪೂಜೆ, ಪುನಸ್ಕಾರಗಳಿಂದ ಮದುವೆ ಮನೆಯವರೆಗೂ ಬಾಳೆಹಣ್ಣು (Banana) ಬೇಕೇಬೇಕು. ಇದರಿಂದ ಏಲಕ್ಕಿ ಬಾಳೆಹಣ್ಣಿಗೆ ಭಾರೀ ಡಿಮ್ಯಾಂಡ್ ಬಂದಿದೆ. ಆಷಾಢ ಮಾಸದಲ್ಲಿ ಕೆಜಿ ಏಲಕ್ಕಿ ಬಾಳೆಹಣ್ಣಿಗೆ 30 ರಿಂದ 40 ರೂಪಾಯಿ ಬೆಲೆಯಿತ್ತು. ಆದ್ರೆ ಶ್ರಾವಣ ಆರಂಭವಾಗುತ್ತಿದ್ದಂತೆ ಕೆಜಿ ಯಾಲಕ್ಕಿ ಬಾಳೆಹಣ್ಣು 100 ರಿಂದ 130 ರೂಪಾಯಿಯವರೆಗೂ ಏರಿಕೆಯಾಗಿದೆ.  ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್- ದಲಿತ ಸಚಿವರು, ಶಾಸಕರ ಒಗ್ಗಟ್ಟಿಗೆ ಪರಮೇಶ್ವರ್ ಕರೆ

    ಏಲಕ್ಕಿ ಬಾಳೆಹಣ್ಣಿಗೆ ಭಾರೀ ಡಿಮ್ಯಾಂಡ್..
    ಇನ್ನು ಚಿಕ್ಕಬಳ್ಳಾಪುರ, ಮಂಚೇನಹಳ್ಳಿ, ಗೌರಿಬಿದನೂರು ಭಾಗದಲ್ಲಿ ಯಥೇಚ್ಛವಾಗಿ ಯಾಲಕ್ಕಿ ಬಾಳೆ ಬೆಳೆಯಲಾಗುತ್ತಿದೆ. ಕಳೆದ ಆಷಾಢ ಮಾಸದಲ್ಲಿ ವಿಪರೀತ ಗಾಳಿ ಬೀಸಿ ಕೆಲವು ತೋಟಗಳು ನಾಶವಾಗಿವೆ. ಅಳಿದುಳಿದ ಬಾಳೆತೋಟಗಳಿಗೆ ಭಾರೀ ಡಿಮ್ಯಾಂಡ್ ಬಂದಿದೆ. ಬೆಂಗಳೂರಿನ ಹಾಪ್ ಕಾಮ್ಸ್ ನಲ್ಲೇ ರೈತರು ಬೆಳೆದ ಏಲಕ್ಕಿ ಬಾಳೆಗೆ ಕೆಜಿಗೆ 87 ರೂಪಾಯಿ ಬೆಲೆ ನಿಗದಿ ಮಾಡಲಾಗಿದೆ. ಇನ್ನು ಮಾರುಕಟ್ಟೆಯಲ್ಲಿ 130 ರೂಪಾಯಿ ವರೆಗೆ ಮಾರಾಟವಾಗುತ್ತಿದೆ. ಇದರಿಂದ ಬಾಳೆಹಣ್ಣು ವರ್ತಕರು ಬಾಳೆಕಾಯಿಗಾಗಿ ರೈತರ ತೋಟಗಳಿಗೆ ಮುಗಿಬಿದ್ದಿದ್ದಾರೆ. ಕೆಜಿ ಬಾಳೆಕಾಯಿಗೆ 90 ರೂಪಾಯಿ ಕೊಡ್ತೀನಿ ಕೊಡಿ ಅಂದ್ರು ಯಾರು ಕೊಡುತ್ತಿಲ್ಲ. ಈಗಲೇ ಹೀಗಾದ್ರೆ ಮುಂದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಏನ್ ಮಾಡೋದು ಅಂತಾರೆ ಗ್ರಾಹಕರು.

    ರೈತರಲ್ಲಿ ಹರ್ಷ, ಗ್ರಾಹಕರ ಜೇಬಿಗೆ ಕತ್ತರಿ
    ಒಂದಡೆ ಶ್ರಾವಣ ಮಾಸ, ಮತ್ತೊಂದೆಡೆ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ರೈತರು ಸದ್ಯ ಬಾಳೆ ತೋಟ ಮಾರುತ್ತಿಲ್ಲ. ಇದರಿಂದ ಏಲಕ್ಕಿ ಬಾಳೆಗೆ ಚಿನ್ನದ ಬೆಲೆ ಬಂದಿದ್ದು, ಬಾಳೆಹಣ್ಣು ಬೆಳೆದವನೇ ಶ್ರೀಮಂತ ಎನ್ನುವಂತಾಗಿದೆ. ಆದ್ರೆ ಗ್ರಾಹಕರ ಜೇಬಿಗೆ ಕತ್ತರಿಯಂತೂ ಬೀಳುತ್ತಿದೆ. ಇದನ್ನೂ ಓದಿ: ಕಲಬುರಗಿ ಕರ್ನಾಟಕ ಕೇಂದ್ರಿಯ ವಿವಿ ವಿದ್ಯಾರ್ಥಿನಿ ಕೆನ್ನೆಗೆ ಮುತ್ತಿಟ್ಟ ಕ್ಯಾಂಟೀನ್ ಓನರ್

  • ಎತ್ತಿನ‌ಹೊಳೆ ಯೋಜನೆಗೆ ಹೆಚ್ಚುವರಿ 3,000 ಕೋಟಿ ಅನುದಾನ ಕೊಡಲಾಗಿದೆ, ಸಿಎಂಗೆ ರೈತರ ಬಗ್ಗೆ ಕಾಳಜಿ ಇದೆ: ಬೈರತಿ ಸುರೇಶ್

    ಎತ್ತಿನ‌ಹೊಳೆ ಯೋಜನೆಗೆ ಹೆಚ್ಚುವರಿ 3,000 ಕೋಟಿ ಅನುದಾನ ಕೊಡಲಾಗಿದೆ, ಸಿಎಂಗೆ ರೈತರ ಬಗ್ಗೆ ಕಾಳಜಿ ಇದೆ: ಬೈರತಿ ಸುರೇಶ್

    – ಗೌರಿಬಿದನೂರಿಗೆ ಕುಡಿಯುವ ನೀರು ಪೂರೈಕೆ ಯೋಜನೆ ಕಾಮಗಾರಿಗೆ ಭೂಮಿಪೂಜೆ
    – ಕುಡಿಯುವ ನೀರು, ಒಳಚರಂಡಿ ಕಾಮಗಾರಿಗಳಿಗೆ 14,000 ಕೋಚಿ ಖರ್ಚು

    ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಮ ಪಾಲುದಾರಿಕೆಯಲ್ಲಿ ರಾಜ್ಯದಲ್ಲಿ ಒಂದೂವರೆ ವರ್ಷದಲ್ಲಿ 14,000 ಕೋಟಿ ರೂಪಾಯಿಗಳನ್ನ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿಗಳಿಗೆ ಖರ್ಚು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಖಾತೆ ಸಚಿವ ಬೈರತಿ ಸುರೇಶ್‌ (Byrathi Suresh) ತಿಳಿಸಿದರು.

    ಶನಿವಾರ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರಿನ ಗೊಟಕನಾಪುರದಲ್ಲಿ ಅಮೃತ್-2 ಯೋಜನೆಯಡಿ ವಾಟದಹೊಸಹಳ್ಳಿ ಕೆರೆಯಿಂದ ಗೌರಿಬಿದನೂರು ನಗರಕ್ಕೆ ಕುಡಿಯುವ ನೀರು ಪೂರೈಸುವ 66 ಕೋಟಿ ಮೊತ್ತದ ಯೋಜನೆಯ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಕುಡಿಯುವ ನೀರು (Drinking Water) ಮತ್ತು ಒಳಚರಂಡಿ ಕಾಮಗಾರಿಗಳಿಗೆ 14,000 ಕೋಟಿ‌ಖರ್ಚು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌

    ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಮೃತ್ 2 ಯೋಜನೆಯಡಿ 313 ಕೋಟಿ ರೂಪಾಯಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ, ಗುಡಿಬಂಡೆ, ಗೌರಿಬಿದನೂರು, ಬಾಗೇಪಲ್ಲಿ ಪಟ್ಟಣಗಳ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಅಮೃತ್ 2 ಯೋಜನೆ ಸಹಕಾರಿಯಾಗಲಿದೆ. ರಾಜ್ಯ ಸರ್ಕಾರಕ್ಕೆ ಕುಡಿಯುವ ನೀರು ಬವಣೆಯ ಬಗ್ಗೆ ಅರಿವಿದೆ. ಕುಡಿಯುವ ನೀರಿನ ಕಾಮಗಾರಿಗಳನ್ನ ಮೊದಲ ಆದ್ಯತೆಯನ್ನಾಗಿ ರಾಜ್ಯ ಸರ್ಕಾರ ಪರಿಗಣಿಸಿದೆ. ವಾಟದಹೊಸಹಳ್ಳಿ ಕೆರೆಯಿಂದ ನೀರನ್ನು ಗೌರಿಬಿದನೂರು ನಗರಕ್ಕೆ ಕುಡಿಯುವ ಉದ್ದೇಶದಿಂದ ತೆಗೆದುಕೊಂಡು ಹೋಗಲಾಗುತ್ತಿದ್ದು, ಇದರಿಂದ ಗೌರಿಬಿದನೂರು ನಗರಕ್ಕೆ ಮಾತ್ರವಲ್ಲದೆ ಮಾರ್ಗಮಧ್ಯದ 08 ಗ್ರಾಮಗಳಿಗೂ ಕುಡಿಯುವ ನೀರನ್ನು ಪೂರೈಸಲಾಗುತ್ತದೆ ಎಂದು ವಿವರಿಸಿದರು.

    ವಾಟದಹೊಸಹಳ್ಳಿ ಕೆರೆಯ ಶೇ.40 ರಷ್ಟು ನೀರನ್ನು ಮಾತ್ರ ಉದ್ಧೇಶಿತ ಯೋಜನೆಗೆ ಬಳಸಿಕೊಳ್ಳಲಾಗುವುದು. ಉಳಿದ ಶೇ.60 ರಷ್ಟು ನೀರು ಈ ಮೊದಲಿನಂತೆ ನೆರೆಹೊರೆಯ ಗ್ರಾಮಗಳ ಕೃಷಿ ಮತ್ತಿತರ ಉದ್ಧೇಶಗಳಿಗೆ ಬಳಕೆಯಾಗಲಿದೆ. ಗೌರಿಬಿದನೂರು ನಗರಕ್ಕೆ ನೀರು ತೆಗೆದುಕೊಂಡು‌ ಹೋದರೆ ಕೆರೆಯ ನೀರು ಖಾಲಿಯಾಗುತ್ತದೆ, ತೊಂದರೆಯಾಗುತ್ತದೆ ಎಂಬುದು ತಪ್ಪು ಕಲ್ಪನೆ. ಈ ತಪ್ಪು ಕಲ್ಪನೆಯಿಂದ ಈ ಭಾಗದ ಜನತೆ ಹೊರಬಂದು ಈ ವಿಷಯವನ್ನು ಕುಡಿಯುವ ನೀರಿನ ಸಮಸ್ಯೆ ಮತ್ತು ಆದ್ಯತೆಯ ಹಿನ್ನೆಲೆಯಲ್ಲಿ ಅರ್ಥ ಮಾಡಿಕೊಳ್ಳಬೇಕು. ಉದ್ದೇಶಿತ ಯೋಜನೆಯಿಂದ 83,000 ಜನರ ಕುಡಿಯುವ ನೀರಿಗೆ ಸಹಾಯವಾಗಲಿದೆ. ಇದನ್ನೂ ಓದಿ: 162 ಬಾರಿ ಫಾರಿನ್‌ ಟ್ರಿಪ್‌, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

    ಇದೇ ವಾಟದಹೊಸಹಳ್ಳಿ ಕೆರೆಗೆ ಎತ್ತಿನಹೊಳೆ ಯೋಜನೆಯ ನೀರನ್ನೂ ಹರಿಸಲಾಗುವುದು. ಹೀಗಾಗಿ ಕೆರೆಯಲ್ಲಿ‌ ನೀರಿಗೆ ಯಾವುದೇ ಸಮಸ್ಯೆ ಮತ್ತು ಕೊರತೆ ಆಗುವುದಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಕುಡಿಯುವ ನೀರಿನ ಯೋಜನೆಗೆ ಯಾರೂ ತಕರಾರು ತೆಗೆಯಬಾರದು ಮತ್ತು ಅಡ್ಡಿಪಡಿಸಬಾರದು. ರೈತರನ್ನು ಕಷ್ಟಕ್ಕೆ ದೂಡಿ ನೀರನ್ನು ತೆಗೆದುಕೊಂಡು ಹೋಗುವುದಿಲ್ಲ. ಕುಡಿಯುವ ನೀರಿನ ವಿಷಯದಲ್ಲಿ ರಾಜಕಾರಣ ಬೇಡ. ಎತ್ತಿನಹೊಳೆ ಯೋಜನೆಯ ನೀರಿನ ಸಂಪರ್ಕ ವಾಟದಹೊಸಹಳ್ಳಿ ದೊರೆಯುವುದು ಖಚಿತ. ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಎತ್ತಿನ‌ಹೊಳೆ ಯೋಜನೆಗೆ ಹೆಚ್ಚುವರಿಯಾಗಿ 3,000 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ರೈತರ ಪರವಾಗಿರುವ ಕಾಳಜಿಯನ್ನು ಎತ್ತಿ ತೋರಿಸುತ್ತದೆ ಎಂದು ತಿಳಿಸಿದರು.

    ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಮಾತನಾಡಿ, ಇತ್ತೀಚಿಗೆ ನಗರೀಕರಣ ಹೆಚ್ಚಾಗುತ್ತಿದ್ದು, ನಗರಗಳು ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಮೂಲಭೂತ ಸೌಕರ್ಯದಡಿ ಕುಡಿಯುವ ನೀರನ್ನು ಆದ್ಯತೆಯ ಮೇಲೆ ಒದಗಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗಾರಿಕೆ. ಎತ್ತಿನಹೊಳೆ ಯೋಜನೆ ನೀರು ಇನ್ನು ಎರಡು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ದೊರೆಯಲಿದೆ. ಯೋಜನೆಗೆ ಅಗತ್ಯವಿರುವ 3000 ಕೋಟಿ ರೂಪಾಯಿಗಳನ್ನೂ ನೀಡಲು ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎತ್ತಿನ ಹೊಳೆ ನೀರು ನೀಡಿದ ನಂತರ ಉಳಿದ ಯೋಜನೆಗಳು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, ಎತ್ತಿನಹೊಳೆ ಕಾಮಗಾರಿಯನ್ನು ತ್ವರಿತವಾಗಿ ಪೂರೈಸಲು ಒತ್ತು ನೀಡಲಾಗುತ್ತಿದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಮಾತನಾಡಿ, ಕೇಂದ್ರ ಸರ್ಕಾರದ ಅಮೃತ್ ಯೋಜನೆ ನಗರ ಪ್ರದೇಶಗಳ ನೀರಿನ ವಿಚಾರದಲ್ಲಿ ವರದಾನವಾಗಿದೆ. ವಾಟದಹೊಸಹಳ್ಳಿ ಕೆರೆಯ ಕುಡಿಯುವ ನೀರಿನ ಯೋಜನೆ ಆಡಳಿತಾತ್ಮಕ ಅನುಮೋದನೆ ಸೇರಿ ಎಲ್ಲಾ ಅನುಮೋದನೆಗಳೂ ಆಗಿರುವುದರಿಂದ ಶಂಕುಸ್ಥಾಪನೆಯಾದ ಮೇಲೆ ಕಾಮಗಾರಿಗೆ ಅಡ್ಡಿಪಡಿಸುವುದು ಸರಿಯಲ್ಲ. ಈ ಕೆರೆಗೆ ಎತ್ತಿನಹೊಳೆ ನೀರನ್ನು ಹರಿಸುವವರೆಗೂ ಗೌರಿಬಿದನೂರು ನಗರಕ್ಕೆ ಒಂದು‌ ಹನಿ ನೀರು ತೆಗೆಯುವುದಿಲ್ಲ ಎಂದು ಸ್ಥಳೀಯ ಶಾಸಕರು ಸ್ಪಷ್ಟವಾಗಿ ಹೇಳಿರುವುದು ಸ್ವಾಗತಾರ್ಹ. ಈ ಭಾಗದ ಜನತೆ ಅವರ ಮೇಲೆ ನಂಬಿಕೆ ಇಟ್ಟು ಕುಡಿಯುವ ನೀರಿನ ಯೋಜನೆಗೆ ಸಹಕರಿಸಬೇಕು ಅಂತ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಶಾಸಕ ಕೆ.ಹೆಚ್ ಪುಟ್ಟಸ್ವಾಮಿಗೌಡ, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯಿತಿ ಸಿಇಓ ಡಾ.ವೈ ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ನಗರಸಭಾ ಉಪಾಧ್ಯಕ್ಷ ಲಕ್ಷೀನಾರಾಯಣ, ಪೌರಾಯುಕ್ತ ಕೆ.ಜಿ ರಮೇಶ್, ಮುಖ್ಯ ಅಭಿಯಂತರ ಪ್ರವೀಣ್ ಲಿಂಗಯ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್ ಲತಾ, ನಗರಸಭಾ ಸದ್ಯಸರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

  • ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸವಾರರ ದಾರುಣ ಸಾವು

    ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸವಾರರ ದಾರುಣ ಸಾವು

    ಚಿಕ್ಕಬಳ್ಳಾಪುರ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ (Bike Accident) ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪ ಗ್ರಾಮದ ಬಳಿ ನಡೆದಿದೆ.

    ಶನಿವಾರ ಘಟನೆ ನಡೆದಿದೆ. ಹೊನ್ನಪ್ಪನಹಳ್ಳಿ ಗ್ರಾಮದ ಒಬಳೇಷ್ (45) ಹಾಗೂ ಮಂಚೇನಹಳ್ಳಿಯ ಮೆಕ್ಯಾನಿಕ್ ಅಜ್ಗರ್ (35) ಮೃತರು. ಇದನ್ನೂ ಓದಿ: ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

    ಅಂದಹಾಗೆ ಎರಡು ಸ್ಪ್ಲೆಂಡರ್‌ ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಸಹ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 162 ಬಾರಿ ಫಾರಿನ್‌ ಟ್ರಿಪ್‌, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

    ಇನ್ನೂ ಒಂದು ಬೈಕ್‌ನಲ್ಲಿದ್ದ ಇಬ್ಬರು ಹಿಂಬದಿ ಸವಾರರು ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಒರ್ವನ ಸ್ಥಿತಿ ಗಂಭೀರ ಅಂತ ತಿಳಿದುಬಂದಿದೆ.

  • ಚಿಕ್ಕಬಳ್ಳಾಪುರ | ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 15 ಕುಟುಂಬಗಳು ಹಿಂದೂ ಧರ್ಮಕ್ಕೆ ಘರ್ ವಾಪ್ಸಿ

    ಚಿಕ್ಕಬಳ್ಳಾಪುರ | ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 15 ಕುಟುಂಬಗಳು ಹಿಂದೂ ಧರ್ಮಕ್ಕೆ ಘರ್ ವಾಪ್ಸಿ

    ಚಿಕ್ಕಬಳ್ಳಾಪುರ: ಕ್ರೈಸ್ತ ಧರ್ಮಕ್ಕೆ (Christianity) ಮತಾಂತರವಾಗಿದ್ದ 15 ಕುಟುಂಬಗಳ 50ಕ್ಕೂ ಹೆಚ್ಚು ಮಂದಿಯನ್ನ ಮರಳಿ ಹಿಂದೂ ಧರ್ಮಕ್ಕೆ ಮರು ಮತಾಂತರ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

    ಅಂದಹಾಗೆ ಗೌರಿಬಿದನೂರು ತಾಲೂಕಿನ ನಾಗಸಂದ್ರ, ಗಾಂಧಿನಗರ, ಕದಿರೇನಹಳ್ಳಿ ಸೇರಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ 15 ಕುಟುಂಬಗಳ 50ಕ್ಕೂ ಹೆಚ್ಚು ಮಂದಿ ಕ್ರಿಶ್ಚಿಯನ್ ಧರ್ಮದ ಆಚಾರಗಳನ್ನ ಪಾಲನೆ ಮಾಡುತ್ತಿದ್ದರು. ದೇವಾಲಯಗಳಿಗೆ ಹೋಗೋದನ್ನೇ ಮರೆತಿದ್ದ ಜನರ ಮನ ಪರಿವರ್ತನೆ ಮಾಡಿದ ಬಿಜೆಪಿ ಮುಖಂಡ ರವಿನಾರಾಯಣರೆಡ್ಡಿ ಎಲ್ಲರನೂ ಮರಳಿ ಘರ್ ವಾಪಾಸಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌ – ಬೀದರ್‌, ಮೈಸೂರು ಸೇರಿ ಹಲವೆಡೆ ದಾಳಿ

    ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಗ್ರಾಮದ ಅಶ್ವತ್ಥನಾರಾಯಣ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿ ಹೋಮ ಹವನ ಮಾಡಿ ಘರ್ ವಾಪ್ಸಿ ಕಾರ್ಯಕ್ರಮ ನಡೆಸಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನ ಮೆರಿಟೈಮ್ ವಿವಿ ಸ್ಥಾಪನೆಗೆ ಕ್ಯಾ.ಚೌಟ ಮನವಿ

    ಇನ್ನೂ ಅನ್ಯ ಧರ್ಮಗಳಿಗೆ ಮತಾಂತರ ಆದವರನ್ನ ಮೂಲ ಧರ್ಮಕ್ಕೆ ಕರೆತರುವ ಕಾಯಕ ಸದಾ ಮಾಡುತ್ತಿದ್ದು ಈ ನಿಟ್ಟಿನಲ್ಲಿ ಈಗಲೂ ಇವರನ್ನ ಕರೆತರಲಾಗಿದೆ. ಮಂದಿನ ದಿನಗಳಲ್ಲಿ ಮತ್ತಷ್ಟು ಜನರ ಮನಪರಿವರ್ತನೆ ಮಾಡಿ ಘರ್ ವಾಪ್ಸಿ ಕಾರ್ಯ ಮುಂದುವರಿಸಲಾಗುವುದು ಎಂದ ರವಿನಾರಾಯಣರೆಡ್ಡಿ ತಿಳಿಸಿದರು. ಇದನ್ನೂ ಓದಿ: ಸಂಸತ್‌ ಭವನ ಪಕ್ಕದ ಮಸೀದಿಯಲ್ಲಿ ಎಸ್ಪಿ ಸಂಸದರೊಟ್ಟಿಗೆ ಅಖಿಲೇಶ್‌ ಯಾದವ್‌ ಸಭೆ – ಕೆರಳಿದ ಬಿಜೆಪಿ

  • ಚಿಕ್ಕಬಳ್ಳಾಪುರ | ಆನ್‌ಲೈನ್‌ ಜೂಜಿಗೆ ದಾಸನಾಗಿದ್ದ ಹೆಡ್ ಕಾನ್‌ಸ್ಟೆಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಚಿಕ್ಕಬಳ್ಳಾಪುರ | ಆನ್‌ಲೈನ್‌ ಜೂಜಿಗೆ ದಾಸನಾಗಿದ್ದ ಹೆಡ್ ಕಾನ್‌ಸ್ಟೆಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಹೆಡ್‌ ಕಾನ್ಸ್‌ಟೇಬಲ್‌ (Head Constable) ಒಬ್ಬರು ಪೊಲೀಸ್‌ ಠಾಣೆ ಆವರಣದಲ್ಲೇ ಇರುವ ಕ್ವಾಟ್ರಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ.

    ಮಂಚೇನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ರಾಜಶೇಖರ್ (45) ಆತ್ಯಹತ್ಯೆ ಮಾಡಿಕೊಂಡವರು. ಠಾಣಾ ಆವರಣದಲ್ಲಿದ್ದ ಕ್ವಾಟ್ರಸ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ನಿರ್ಧಾರವನ್ನು ನಾನು, ಡಿಕೆಶಿ ಇಬ್ಬರೂ ಪಾಲಿಸುತ್ತೇವೆ – ಮತ್ತೆ ಸಿಎಂ ಸ್ಪಷ್ಟನೆ

    ಕಾರಣ ಏನು?
    ಮೊಬೈಲ್ ಆನ್‌ಲೈನ್ ಜೂಜಾಟಗಳಿಗೆ (Online gambling) ದಾಸನಾಗಿದ್ದ ಕಾನ್ಸ್‌ಟೇಬಲ್‌ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಹಲವರ ಬಳಿ ಬಡ್ಡಿಗೆ ಕೈಸಾಲ ಮಾಡಿಕೊಂಡಿದ್ದರು. ಈ ಬಗ್ಗೆ ತನ್ನ ಪೋಷಕರ ಬಳಿ ಕಷ್ಟ ಹೇಳಿಕೊಂಡಿದ್ದರು. ಜೊತೆಗೆ ಪತ್ನಿಯ ಚಿನ್ನಾಭರಣವನ್ನ ಸಾಲ ತೀರಿಸಲು ಅಡವಿಟ್ಟಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಹೈಕೋರ್ಟ್‌ನಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ