Tag: Chikkaballapura

  • ವಿದೇಶಗಳಲ್ಲಿ ಆಸ್ತಿ ಮಾಡಿದ್ರೆ ಸರ್ಕಾರಕ್ಕೆ ಬರೆದುಕೊಡುವೆ – ಇಡಿ ದಾಳಿಗೊಳಗಾಗಿದ್ದ ಶಾಸಕ ಸುಬ್ಬಾರೆಡ್ಡಿ ಸವಾಲ್‌

    ವಿದೇಶಗಳಲ್ಲಿ ಆಸ್ತಿ ಮಾಡಿದ್ರೆ ಸರ್ಕಾರಕ್ಕೆ ಬರೆದುಕೊಡುವೆ – ಇಡಿ ದಾಳಿಗೊಳಗಾಗಿದ್ದ ಶಾಸಕ ಸುಬ್ಬಾರೆಡ್ಡಿ ಸವಾಲ್‌

    – ಜೀವನದಲ್ಲಿ ಒಮ್ಮೆಯೂ ಜರ್ಮನಿಗೆ ಹೋಗಿಲ್ಲ ಎಂದ ʻಕೈʼ ಶಾಸಕ

    ಚಿಕ್ಕಬಳ್ಳಾಪುರ: ಮಲೇಷ್ಯಾ ಹಾಂಕಾಂಗ್ ಜರ್ಮನಿಯಲ್ಲಿ ಅಕ್ರಮವಾಗಿ ಆಸ್ತಿ (Property) ಮಾಡಿರುವ ಆರೋಪದ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್‌.ಎನ್ ಸುಬ್ಬಾರೆಡ್ಡಿ (SN Subba Reddy) ನಿವಾಸಗಳ ಮೇಲೆ ಇಡಿ ದಾಳಿ ಮಾಡಿತ್ತು. ಇಡಿ ದಾಳಿಗೆ ಸಂಬಂಧಿಸಿದಂತೆ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಕಲಿ ದಾಖಲೆಗಳನ್ನ ಸೃಷ್ಟಿಸಿ ರಾಜಕೀಯ ವಿರೋಧಿಗಳು ನನ್ನ ಮೇಲೆ ಕುತಂತ್ರ ಮಾಡಿದ್ದಾರೆ ಅಂತ ಸುಬ್ಬಾರೆಡ್ಡಿ ಸ್ಪಷ್ಟನೆ ನೀಡಿ ದಾಖಲೆಗಳನ್ನ ಬಿಡುಗಡೆ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ನಿವಾಸ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ರು. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ʻಪಬ್ಲಿಕ್ ಟಿವಿʼ (Public TV) ಜೊತೆ ಮಾತನಾಡಿದ ಸುಬ್ಬಾರೆಡ್ಡಿ, ನಾನು ವಿದೇಶಗಳಲ್ಲಿ ಯಾವುದೇ ಆಸ್ತಿ ಮಾಡಿಲ್ಲ. ಯಾರದೋ ದೇಹಕ್ಕೆ ನನ್ನ ಮುಖದ ಫೋಟೋ ಅಂಟಿಸಿ ವಿದೇಶಗಳಲ್ಲಿ ಆಸ್ತಿ ಮಾಡಿರುವ ಹಾಗೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ. ಇದೇ ದಾಖಲೆಗಳ ಆಧಾರದ ಮೇರೆಗೆ ಇಡಿಯವರು ನಮ್ಮ ಮನೆಗಳ ಮೇಲೆ ದಾಳಿ (ED Raid) ಮಾಡಿದ್ದಾರೆ. ನಾನು ನಯಾಪೈಸೆ ವಿದೇಶಗಳಲ್ಲಿ ಹೂಡಿಕೆ ಮಾಡಿದ್ರೆ ನನ್ನ ಆಸ್ತಿ ಎಲ್ಲಾ ಸರ್ಕಾರಕ್ಕೆ ಬರೆದುಕೊಡ್ತೇನೆ ಅಂತ ಸವಾಲು ಹಾಕಿದ್ದಾರೆ.

    ಜೀವನದಲ್ಲೇ ಜರ್ಮನಿಗೆ ಹೋಗಿಲ್ಲ
    ಇನ್ನೂ ನಾನು 15 ವರ್ಷಗಳಿಂದ ಜರ್ಮನಿ ಮಲೇಷ್ಯಾ ಹಾಂಕಾಂಗ್‌ಗೆ ಹೋಗೇ ಇಲ್ಲ. ಜೀವನದಲ್ಲಿ ಒಮ್ಮೆಯೂ ಸಹ ಜರ್ಮನಿಗೆ ಹೋಗಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ನನ್ನ ಎದುರು ಪರಾಜಿತನಾದ ಅಭ್ಯರ್ಥಿ ನನಗೆ ತೊಂದರೆ ಕೊಡುವ ಉದ್ದೇಶದಿಂದ ಕುತಂತ್ರ ಮಾಡಿರುವ ಅನುಮಾನ ಇದೆ ಎಂದರು. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

    ಫೋಟೋ ಎಡಿಟ್‌ ಮಾಡಿ ನಕಲಿ ದಾಖಲೆ ಸೃಷ್ಟಿ
    ಶಾಸಕ ಸುಬ್ಬಾರೆಡ್ಡಿ ಹೇಳಿರುವ ಹಾಗೆ ರಾಮಸ್ವಾಮಿ ವೀರನ್ ಎಂಬುವವರ ಹೆಸರಿನಲ್ಲಿ ಇರುವ ಆಸ್ತಿಯನ್ನ ಶಾಸಕ ಸುಬ್ಬಾರೆಡ್ಡಿ ಖರೀದಿ ಮಾಡಿರುವ ಹಾಗೆ ಯಾರದೋ ಫೋಟೋಗೆ ತಮ್ಮ ಮುಖದ ಫೋಟೋ ಎಡಿಟ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರಂತೆ. ಇದೇ ದಾಖಲೆಗಳನ್ನು ಆಧರಿಸಿ ಇಡಿ ರೇಡ್ ಮಾಡಿದ್ದಾರೆ. ಈ ನಕಲಿ ದಾಖಲೆಗಳು ಮೊದಲೇ ನನಗೆ ಸಿಕ್ಕಿದ್ದು ಈ ಬಗ್ಗೆ ನಾನು ಸೈಬರ್ ಠಾಣೆಯಲ್ಲಿ ದೂರು ಸಹ ನೀಡಲು ಮುಂದಾಗಿದ್ದೆ ಆದ್ರೆ ದೂರು ಪಡೆದಿರಲಿಲ್ಲ. ಈಗ ನಾನು ಮತ್ತೆ ಈ ಬಗ್ಗೆ ದೂರು ನೀಡಲಿದ್ದೇನೆ ನ್ಯಾಯಾಲಯದಲ್ಲೂ ಸಹ ದಾವೆ ಹೂಡಲಿದ್ದೇನೆ ಎಂದು ತಿಳಿಸಿದ್ರು. ಇದನ್ನೂ ಓದಿ: ಬೆಂಗಳೂರಲ್ಲಿ ಕಿಟ್ಟಿ ಪಾರ್ಟಿ ಆಯೋಜಿಸಿ 50 ಕೋಟಿ ವಂಚನೆ ಕೇಸ್ – ಲಾಯರ್ ಎಂದು ಪೊಲೀಸರಿಗೆ ಅವಾಜ್ ಹಾಕಿದ್ದ ಮತ್ತೋರ್ವ ಅರೆಸ್ಟ್

    ಇನ್ನೂ ಇಡಿಯವರು ಸಂಪೂರ್ಣ ವಿಚಾರಣೆ ನಂತರ ಸೋಮವಾರ ಜುಲೈ 14ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದು ನಾನು ವಿಚಾರಣೆಗೆ ಹಾಜರಾಗುವೆ. ಆದ್ರೆ ರಾಜಕೀಯ ವಿರೋಧಿಗಳು ನನ್ನ ಮೇಲೆ ನಡೆಸಿದ ಷಡ್ಯಂತ್ರದಿಂದ ನಾನು ಹೆದರಲ್ಲ. ಇಡಿಯವರು ಏನ್ ಬೇಕಾದರೂ ತನಿಖೆ ಮಾಡಲಿ ನಾನು ಸಹಕಾರ ನೀಡುವೆ ಅಂತಲೂ ಹೇಳಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ – ಜಮೀನಿನಲ್ಲಿ ಕುಸಿದು ಬಿದ್ದು ರೈತ ಸಾವು

  • ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಕುಮಾರಣ್ಣ; ಹೆಚ್‌ಡಿಕೆ ಮತ್ತೆ ಸಿಎಂ ಆಗಲಿ ಎಂದ ನಿಖಿಲ್

    ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಕುಮಾರಣ್ಣ; ಹೆಚ್‌ಡಿಕೆ ಮತ್ತೆ ಸಿಎಂ ಆಗಲಿ ಎಂದ ನಿಖಿಲ್

    ಚಿಕ್ಕಬಳ್ಳಾಪುರ: ದೇಶಕ್ಕೆ ನರೇಂದ್ರ ಮೋದಿ (PM Modi), ರಾಜ್ಯಕ್ಕೆ ಕುಮಾರಣ್ಣ ಎನ್ನುವ ಮೂಲಕ ಕುಮಾರಸ್ವಾಮಿ ಮತ್ತೆ ಸಿಎಂ ಆಗಬೇಕು ಅಂತ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

    ಗೌರಿಬಿದನೂರಿನಲ್ಲಿ ಜನರೊಂದಿಗೆ ಜೆಡಿಎಸ್ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದ ಅಂಗವಾಗಿ ವೇದಿಕೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ (H.D.Kumaraswamy) ಸಿಎಂ ಆಗಬೇಕು ಎಂಬ ಇಂಗಿತ ಹೊರಹಾಕಿದರು. ಇದನ್ನೂ ಓದಿ: ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಕೆಶಿ

    ಕಾರ್ಯಕ್ರಮದ ನಂತರ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಇದು ಕೇವಲ ಜೆಡಿಎಸ್ ಕಾರ್ಯಕರ್ತರ ಭಾವನೆ ಅಷ್ಟೇ ಅಲ್ಲ, ರಾಜ್ಯದ ಜನರ ಭಾವನೆ. ಕುಮಾರಣ್ಣ ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆಗಳನ್ನ ಜನ ಈಗಲೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅಂತಹ ವ್ಯಕ್ತಿ ಸಿಎಂ ಆದರೆ ರಾಜ್ಯದಲ್ಲಿ ಸಮೃದ್ಧಿಯ ವಾತವಾರಣ ನಿರ್ಮಾಣವಾಗಲಿದೆ. ನಾನು ರಾಜ್ಯದ ನಾನಾ ಕಡೆ ಪ್ರವಾಸ ಮಾಡಿದಾಗ, ಜನ ಕುಮಾರಣ್ಣ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ ಎಂದರು.

    ಜೆಡಿಎಸ್ ಬಿಜೆಪಿ ಮೈತ್ರಿ ಶಾಶ್ವತ
    ಜೆಡಿಎಸ್-ಬಿಜೆಪಿ ಮೈತ್ರಿ ಶಾಶ್ವತವಾಗಿ ಇರಲಿದೆ. ಮುಂದಿನ 2028 ರಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಗೆ 180 ಸ್ಥಾನಗಳು ಸಿಗಲಿದ್ದು, ಸರ್ಕಾರ ರಚನೆ ಮಾಡಲಿದ್ದೇವೆ. ನಮ್ಮ ನಾಯಕರು ಕುಮಾರಣ್ಣ. ಫೇಸ್ ವ್ಯಾಲ್ಯೂ ಇರುವ ನಾಯಕರು ದೇವೇಗೌಡರು, ಕುಮಾರಣ್ಣ. ಕುಮಾರಣ್ಣ ಸಿಎಂ ಆಗಬೇಕು ಎಂಬುದು ನಮ್ಮ ಅಪೇಕ್ಷೆ ಅಲ್ಲ, ಇದು ಕಾರ್ಯಕರ್ತರ ಅಪೇಕ್ಷೆ. ನಾವು 3 ವರ್ಷ ಯಾವುದೇ ವಾಮಮಾರ್ಗದಿಂದ ಅಧಿಕಾರ ಹಿಡಿಯಲ್ಲ. ಮುಂದೆ 2028 ರಲ್ಲಿ 180 ಸ್ಥಾನ ಪಡೆದು ಕೇಂದ್ರದ ನಾಯಕರ ಜೊತೆ ಚರ್ಚೆ ಮಾಡಿ ಸಿಎಂ ಸ್ಥಾನದ ತೀರ್ಮಾನ ಮಾಡಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕಾಗಿ ಮನವಿ: ಡಿಸಿಎಂ ಡಿಕೆಶಿ

    ನನಗೆ ರಾಜ್ಯಾಧ್ಯಕ್ಷ ಸ್ಥಾನದ ಅಪೇಕ್ಷೆ ಇಲ್ಲ
    ನಾನು ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಮುಂದೆ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳು ಎದುರಾಗಲಿವೆ. ಅದಕ್ಕಾಗಿ ನಾನು ಹೋರಾಟ ಮಾಡುತ್ತಿದ್ದೇನೆ. ನಾನು ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಅಪೇಕ್ಷೆ ಇಟ್ಟಿಲ್ಲ ಎಂದರು.

  • ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಚಿಕ್ಕಬಳ್ಳಾಪುರ: ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿಗೆ ಟಾಯ್ಲೆಟ್ ಕ್ಲೀನರ್ ಆ್ಯಸಿಡ್ ಎರಚಿ (Acid Attack) ಸೋದರ ಮಾವ ತಾನೂ ಬೆಂಕಿ ಹಚ್ಚಿಕೊಂಡ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮಂಚನಬಲೆ (Manchanabale) ಗ್ರಾಮದಲ್ಲಿ ನಡೆದಿದೆ.

    ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ನಿವಾಸಿ ಸೋದರ ಮಾವ ಆನಂದ್ ಕುಮಾರ್ ಈ ಕೃತ್ಯವೆಸಗಿದ್ದಾನೆ. ಅದೃಷ್ಟವಶಾತ್ ಅನಾಹುತದಿಂದ ಯುವತಿ ಪಾರಾಗಿದ್ದಾಳೆ. ಯುವತಿಗೆ ಆ್ಯಸಿಡ್ ಎರಚಿದ ಬಳಿಕ ಆನಂದ್ ಆಕೆಯ ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾನೆ. ಘಟನೆಯಲ್ಲಿ ಮಾವ ಆನಂದ್ ಕುಮಾರ್‌ಗೆ ತೀವ್ರ ಸುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಹರಿಯಾಣದ ರೈಲಿನಲ್ಲಿ ಗ್ಯಾಂಗ್‌ ರೇಪ್ -‌ ಅತ್ಯಾಚಾರ ಬಳಿಕ ರೈಲ್ವೆ ಹಳಿಗಳ ಮೇಲೆ ಮಹಿಳೆ ಎಸೆದ ಪಾಪಿಗಳು

    ಗಾಯಾಳು ಯುವತಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಗಾಯಾಳು ಆನಂದ್‌ಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಒಡವೆ ಮಾಡಿಕೊಡೋದಾಗಿ ಹೇಳಿ 8 ಕೆಜಿ ಗಟ್ಟಿ ಚಿನ್ನ ಕದ್ದ ಅಕ್ಕಸಾಲಿಗ ಅರೆಸ್ಟ್

  • ಮಲಗಿದ್ದಲ್ಲೇ ಹೃದಯಾಘಾತದಿಂದ ಯೋಧ ಸಾವು – ಹುಟ್ಟೂರಲ್ಲಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ

    ಮಲಗಿದ್ದಲ್ಲೇ ಹೃದಯಾಘಾತದಿಂದ ಯೋಧ ಸಾವು – ಹುಟ್ಟೂರಲ್ಲಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ

    ಚಿಕ್ಕಬಳ್ಳಾಪುರ: ಇಂಡೋ ಟೆಬೆಟಿಯನ್ ಬಾರ್ಡರ್ ಪೊಲೀಸ್ ಪೋರ್ಸ್‍ನಲ್ಲಿ (ITBP) ಸೇವೆ ಸಲ್ಲಿಸುತ್ತಿದ್ದ ಯೋಧ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ನಡೆದಿದೆ.

    ಗಂಗಾಧರಪ್ಪ ಮೃತ ಯೋಧ. ಇಂದು ಮೃತ ಯೋಧನ (Soldier) ಹುಟ್ಟೂರು ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಗ್ರಾಮದಲ್ಲಿ ಸೇನಾ ಗೌರವಗಳೊಂದಿಗೆ ಯೋಧ ಗಂಗಾಧರಪ್ಪಗೆ ಅಂತಿಮ ನಮನ ಸಲ್ಲಿಸಲಾಯಿತು. ಇದನ್ನೂ ಓದಿ: ಗಂಡ-ಹೆಂಡ್ತಿ ಜಗಳ ಬಗೆಹರಿಸೋ ನೆಪದಲ್ಲಿ ಮಹಿಳೆ ಜೊತೆಗೆ ಲವ್ವಿ-ಡವ್ವಿ; ಪೊಲೀಸಪ್ಪನ ಕಾಮದಾಸೆಗೆ ಸುಂದರ ಕುಟುಂಬ ಬೀದಿಗೆ

    ಐಟಿಬಿಪಿಯ ಗಾಂಗ್ಟೋಕ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಗಂಗಾಧರಪ್ಪ ಕರ್ತವ್ಯ ಮುಗಿಸಿ ಮಲಗಿದ್ದ ವೇಳೆ ಹಾಗೆಯೇ ಮೃತಪಟ್ಟಿದ್ರು. ಹೀಗಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಸೇನಾ ಅಧಿಕಾರಿಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯವಾದಿಗಳ ಹೆಮ್ಮೆ ಮುಖರ್ಜಿ ಕನಸು ಮೋದಿಯಿಂದ ನನಸು: ಯಡಿಯೂರಪ್ಪ

    ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಗಂಗಾಧರಪ್ಪ ಮೃತಪಡುವ ಮುನ್ನ ರಾತ್ರಿ ಮನೆಯವರ ಜೊತೆ ಫೋನ್‌ ಮೂಲಕ ಮಾತನಾಡಿದ್ರು. ಬೆಳಗ್ಗೆ ಮನೆಯವರಿಗೆ ಸಾವಿನ ಸುದ್ದಿ ತಿಳಿದು ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಪಾರ್ಥೀವ ಶರೀರ ಆಗಮಿಸಿದ್ದು ಅಲ್ಲಿಂದ ಗೌರಿಬಿದನೂರು ತಾಲೂಕು ತೊಂಡೆಬಾವಿ ಗ್ರಾಮಕ್ಕೆ ಸೇನಾ ವಾಹನದ ಮೂಲಕ ಕರೆತರಲಾಯಿತು. ನಂತರ ಸೇನಾ ಗೌರವಗಳೊಂದಿಗೆ ಗಂಗಾಧರಪ್ಪ ಅಂತಿಮ ಕ್ರಿಯಾವಿಧಿವಾನಗಳನ್ನ ನೇರವೇರಿಸಲಾಯಿತು. ಇದನ್ನೂ ಓದಿ: ಇರಾನ್‌-ಇಸ್ರೇಲ್‌ ಯುದ್ಧದ ಬಳಿಕ ನೆತನ್ಯಾಹು-ಟ್ರಂಪ್‌ ಫಸ್ಟ್‌ ಮೀಟ್‌ – ಜು.7ರಂದು ವೈಟ್‌ಹೌಸ್‌ನಲ್ಲಿ ಮಹತ್ವದ ಭೇಟಿ

  • ಗ್ರಾನೈಟ್ ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ – ಲಾರಿ ಮಾಲೀಕ ಸಾವು, ಚಾಲಕ ಗಂಭೀರ

    ಗ್ರಾನೈಟ್ ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ – ಲಾರಿ ಮಾಲೀಕ ಸಾವು, ಚಾಲಕ ಗಂಭೀರ

    ಚಿಕ್ಕಬಳ್ಳಾಪುರ: ಬೃಹತ್ ಗಾತ್ರದ ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿಯಾದ ಪರಿಣಾಮ ಲಾರಿ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ನಡೆದಿದೆ.

    ಅಪಘಾತದಲ್ಲಿ ಲಾರಿ ಮಾಲೀಕ ದೊಡ್ಡಪ್ಪಯ್ಯ ಮೃತಪಟ್ಟಿದ್ದು, ಚಾಲಕ ವೆಂಕಟೇಶ್ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: 10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್

    ರಾಷ್ಟ್ರೀಯ ಹೆದ್ದಾರಿ 69ರ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ಮಧ್ಯೆ ಕಣಿವೆ ಪ್ರದೇಶದಲ್ಲಿ ಇಳಿಜಾರು ಇದ್ದು, ಒಂದೆಡೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಇದೇ ರಸ್ತೆಯಲ್ಲಿ ಚಿಕ್ಕಬಳ್ಳಾಪುರದ ಕಡೆಯಿಂದ ಗೌರಿಬಿದನೂರಿಗೆ ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ – ಟೆಕ್ಕಿ ಪತಿಯನ್ನೇ ಹತ್ಯೆಗೈದ ಪತ್ನಿ!

    ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಗ್ರಾನೈಟ್‌ಗಳು ಕ್ಯಾಬಿನ್‌ಗೆ ಬಡಿದ ಪರಿಣಾಮ ಕ್ಯಾಬಿನ್‌ನಲ್ಲಿದ್ದ ಲಾರಿ ಮಾಲೀಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಲಾರಿ ಚಾಲಕನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರವಿಕುಮಾರ್ ಸದನದಲ್ಲಿ ಅಲ್ಲ, ನಿಮ್ಮಾನ್ಸ್‌ನಲ್ಲಿ ಇರಬೇಕು: ಪ್ರಿಯಾಂಕ್ ಖರ್ಗೆ ಲೇವಡಿ

    ಅಪಘಾತದ ಭೀಕರತೆಗೆ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು – ಸಂಪುಟ ಸಭೆಯಲ್ಲಿ ಹಲವು ಐತಿಹಾಸಿಕ ನಿರ್ಣಯ

    ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು – ಸಂಪುಟ ಸಭೆಯಲ್ಲಿ ಹಲವು ಐತಿಹಾಸಿಕ ನಿರ್ಣಯ

    – 3,400 ಕೋಟಿ ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ

    ಚಿಕ್ಕಬಳ್ಳಾಪುರ: ನಂದಿಬೆಟ್ಟದಲ್ಲಿಂದು (Nandi Hills) ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಅಂತ ಮರು ನಾಮಕರಣ ಮಾಡಲಾಗಿದೆ. ಇದರೊಂದಿಗೆ ಜೊತೆಗೆ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ (Bengaluru University) ಡಾ. ಮನಮೋಹನ್ ಸಿಂಗ್ ಹೆಸರಿಡಲಾಗಿದೆ.

    3,400 ಕೋಟಿ ರೂ. ಮೊತ್ತದ ಆಡಳಿತಾತ್ಮಕ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ (Chikkaballapura), ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ ಕುಡಿಯುವ ನೀರು ಯೋಜನೆಗೆ 23,251 ಕೋಟಿ ವೆಚ್ಚಕ್ಕೆ ಸರ್ಕಾರ ಮುಂದಾಗಿದೆ. ಇದುವರೆಗೆ 17,147 ಕೋಟಿ ವೆಚ್ಚವಾಗಿದ್ದು, ಹೆಚ್ಚುವರಿಯಾಗಿ 6,103 ಕೋಟಿ ಖರ್ಚಿಗೆ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ

    ಚಿಂತಾಮಣಿಯಲ್ಲಿ ಮೊರಾರ್ಜಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧರಿಸಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಯೋಜನೆ ಪೂರ್ಣಕ್ಕೆ ಸರ್ಕಾರ ಉದ್ದೇಶಿಸಿದೆ. ಇದನ್ನೂ ಓದಿ: 5 ವರ್ಷ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ: ಸಿದ್ದರಾಮಯ್ಯ

    ಪ್ರಮುಖ ನಿರ್ಣಯಗಳೇನು?
    * ಆರೋಗ್ಯ ಇಲಾಖೆ ವತಿಯಿಂದ 46 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಹಾಗೂ 21.40 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯೆಲ್ಲಿನ ಮೆಡಿಕಲ್‌ ಕಾಲೇಜುಗಳಿಗೆ ಎಂಆರ್‌ಐ ಯಂತ್ರಗಳನ್ನು ಖರೀದಿಸಲು ಅನುಮತಿ.
    * 56 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಹೆಚ್‌ಸಿ ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನ.
    * ಕೋಲಾರದ ಬಾಲಕ ಹಾಗೂ ಬಾಲಕಿಯರ ಕಾಲೇಜಿನ ಅವಶ್ಯಕ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಕ್ರಮವಾಗಿ 40 ಕೋಟಿ ಮತ್ತು 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ನಿರ್ಧಾರ.
    * ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 2ನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 123 ಕೋಟಿ ರೂ. ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.
    * ನಬಾರ್ಡ್ ಸಾಲದ ನೆರವಿನೊಂದಿಗೆ 10 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಹರಾಜು ಬೆಂಗಳೂರು (IFAB) ನಿಯಮಿತ ಸಂಸ್ಥೆಯನ್ನು ಬಲಪಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
    * ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಭಕ್ತರಹಳ್ಳಿ ಅರಸೀಕೆರೆಯ ಕೆಳಭಾಗದಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿಯನ್ನು 36 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
    * ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮದ ಸಮೀಪ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಯನ್ನು 34 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
    * ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭದ್ರಾ ನದಿಯ ಎಡ ಮತ್ತು ಬಲ ದಂಡೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ರಕ್ಷಿಸಲು ತಡೆಗೋಡೆ ನಿರ್ಮಾಣಕ್ಕೆ 50 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
    * ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮತ್ತು ದೊಣಬಘಟ್ಟ, ಕಾಗೆಕೊಡಮಗ್ಗೆ, ಹೊಳೆಹೊನ್ನೂರು – ಭದ್ರಾವತಿ ಮುಖ್ಯ ರಸ್ತೆಯ ನಡುವೆ ಸಂಪರ್ಕ ರಸ್ತೆ ಸುಧಾರಣೆ ಕಾಮಗಾರಿಯನ್ನು 35 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
    * ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಡಗೊಪ್ಪ ಗ್ರಾಮದ ಹತ್ತಿರ ದಂಡಾವತಿ ನದಿಗೆ ಅಡ್ಡಲಾಗಿ ಬ್ಯಾರೇಜ್ ನಿರ್ಮಿಸಿ ಸುಮಾರು 15 ಕೆರೆಗಳನ್ನು ತುಂಬಿಸುಔ 38 ಕೋಟಿ ರೂ. ವೆಚ್ಚದ ಯೋಜನೆಗೆ ಅಡಳಿತಾತ್ಮಕ ಅನುಮೋದನೆ.
    * ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದಂಡಾವತಿ ಮತ್ತು ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಂ ಬ್ಯಾರೇಜ್‌ಗಳನ್ನು ನಿರ್ಮಿಸುವ 54.70 ಕೋಟಿ ರೂ. ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
    * ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ತುಂಗಾಭದ್ರಾ ನದಿಯಿಂದ ನೀರೆತ್ತಿ ಚನ್ನಗಿರಿ ತಾಲೂಕಿನ 41 ಕೆರೆಗಳನ್ನು ತುಂಬಿಸುವ 365 ಕೋಟಿ ರೂ. ವೆಚ್ಚದ ಯೋಜನೆಯಡಿ ಮೊದಲ ಹಂತದಲ್ಲಿ 100 ಕೋಟಿ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ ಸೇರಿದಂತೆ ಹಲವು ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಕೈಗೊಳ್ಳಲಾಯಿತು.

  • ನಂದಿಬೆಟ್ಟದಲ್ಲಿಂದು ಸಚಿವ ಸಂಪುಟ ಸಭೆ – ಬಯಲು ಸೀಮೆ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ?

    ನಂದಿಬೆಟ್ಟದಲ್ಲಿಂದು ಸಚಿವ ಸಂಪುಟ ಸಭೆ – ಬಯಲು ಸೀಮೆ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ?

    ಬೆಂಗಳೂರು: ರಾಜ್ಯ ಸರ್ಕಾರದ 14ನೇ ಸಚಿವ ಸಂಪುಟ ಸಭೆ (Cabinet Meeting) ಇಂದು ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ನಡೆಯಲಿದೆ. ನಂದಿಬೆಟ್ಟದಲ್ಲಿ (Nandi Hills) ಸಚಿವ ಸಂಪುಟ ಸಭೆಗಾಗಿ ಅಂತಿಮ ಹಂತದ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.

    ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂಸಿ ಸುಧಾಕರ್ ಅಧಿಕಾರಿಗಳೊಂದಿಗೆ ಮಂಗಳವಾರ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನಂದಿಗಿರಿಧಾಮ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳು ಬೆಳಗ್ಗೆ 11:40ಕ್ಕೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗ್ರಾಮಕ್ಕೆ ಆಗಮಿಸಿಲಿದ್ದಾರೆ. ಗ್ರಾಮದ ಶ್ರೀ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದು, ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪ, ಪುಷ್ಕರಿಣಿಯಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಫೋಟೋಶೂಟ್‌ನಲ್ಲಿ ಭಾಗಿಯಾಗಲಿದ್ದಾರೆ. ನಂತರ 11:50ಕ್ಕೆ ನಂದಿಬೆಟ್ಟಕ್ಕೆ ಬಸ್‌ನಲ್ಲಿ ಪ್ರಯಾಣ ಮಾಡಲಿದ್ದಾರೆ. ಇದನ್ನೂ ಓದಿ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ

    ಇನ್ನೂ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆ ನಂದಿ ಗಿರಿಧಾಮದಲ್ಲಿರುವ ಕೆಎಸ್‌ಟಿಡಿಸಿ ಹೋಟೆಲ್‌ನ ಮಯೂರ ಸಭಾಂಗಣಕ್ಕೆ ಹೊಸ ಲುಕ್ ನೀಡಲಾಗಿದೆ. ಸಭಾಂಗಣವನ್ನು ನವೀಕರಿಸಿ ಸುಣ್ಣಬಣ್ಣ ಬಳಿದು ಹೊಸ ಹೊಸ ಚೇರ್ ಟೇಬಲ್‌ಗಳನ್ನು ಅಳವಡಿಸಲಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಸಾಮಾನ್ಯ ಹಾಲನ್ನು ಹವಾನಿಯಂತ್ರಿತ ಸಭಾಂಗಣವನ್ನಾಗಿ ಪರಿವರ್ತಿಸಲಾಗಿದೆ. ಸಚಿವರ ವಾಸ್ತವ್ಯ ಹಾಗೂ ವಿಶ್ರಾಂತಿಗೆ ರೂಂಗಳನ್ನು 7 ಸ್ಟಾರ್ ರೂಂಗಳಾಗಿ ಆಧುನೀಕರಣಗೊಳಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಭೋಗನಂದೀಶ್ವರ ದೇವಸ್ಥಾನ, ನಂದಿಗಿರಿಧಾಮದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಇದನ್ನೂ ಓದಿ: ರೈಲ್ವೆ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು: ಸಿಎಂ ಆಗ್ರಹ

    ಇನ್ನು ನಂದಿಬೆಟ್ಟದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಭರಪೂರ ಕೊಡುಗೆ ಘೋಷಣೆ ಮಾಡುವ ನೀರೀಕ್ಷೆಯಿದ್ದು, ಜನಪ್ರತಿನಿಧಿಗಳು, ಜನರ ಚಿತ್ತ ಸಂಪುಟ ಸಭೆಯತ್ತ ನೆಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮಾಸ್‌ ಲೀಡರ್‌ – ಬಿಆರ್‌ ಪಾಟೀಲ್‌ ಸ್ಪಷ್ಟನೆ

  • ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರು ದುರ್ಮರಣ

    ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರು ದುರ್ಮರಣ

    ಚಿಕ್ಕಬಳ್ಳಾಪುರ: ಲಾರಿ ಓವರ್ ಟೇಕ್ (Over Take) ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮಾಕಳಿ ಬಳಿ ನಡೆದಿದೆ.

    ಬೆಳಗ್ಗೆ ದೇವಸ್ಥಾನಕ್ಕೆಂದು ಇನ್ನೋವಾ ಕಾರಿನಲ್ಲಿ 08 ಮಂದಿ ತೆರಳುತ್ತಿದ್ದರು. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಮೃತದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಬಾಸ್ ಜೊತೆ ಅಕ್ರಮ ಸಂಬಂಧದ ಶಂಕೆ – ಲಿವ್ ಇನ್ ಗೆಳತಿಯ ಹತ್ಯೆಗೈದು ಶವದೊಂದಿಗೆ ಮಲಗಿದ್ದ 2 ಮಕ್ಕಳ ತಂದೆ

    ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ, ಈಶ್ವರಪ್ಪ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: Hassan | ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

  • ಕೃಷಿ ಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ; ಪತಿ, ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

    ಕೃಷಿ ಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ; ಪತಿ, ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

    ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ (Krishi Honda) ತಾಯಿ ಮಗಳ ಮೃತದೇಹಗಳು ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ಇಂಡರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ 30 ವರ್ಷದ ಮಾಲಾ ಹಾಗೂ 8 ವರ್ಷದ ಅನುಶ್ರೀ ಮೃತರು. ಮೃತ ಮಾಲಾ ಜಮೀನು ಭಾಗ ಮಾಡಿಕೊಳ್ಳುವಂತೆ ಗಂಡನಿಗೆ ಒತ್ತಡ ಹಾಕಿದ್ದಳಂತೆ ಹಾಗಾಗಿ ಕುಟುಂಬಸ್ಥರಲ್ಲಿ ಜಮೀನು ವಿಚಾರದಲ್ಲಿ ಮನಸ್ತಾಪಗಳು ಮೂಡಿದ್ದವು. ಇದೇ ವಿಚಾರದಲ್ಲಿ ಗಂಡ ನಾಗರಾಜ್ ಅತ್ತೆ ಮೈದುನ ಮುನಿರಾಜು, ಅತ್ತೆ ಅಂಜಿನಮ್ಮ ಸೇರಿ ನಾದಿನಿ ವಿರುದ್ದ ಕೊಲೆ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ತುಂಗಭದ್ರಾ ಡ್ಯಾಂಗೆ ಪರಮೇಶ್ವರ್ ಭೇಟಿ – ಕೊಚ್ಚಿ ಹೋಗಿದ್ದ ಕ್ರಸ್ಟ್ ಗೇಟ್ ಸ್ಥಳ ವೀಕ್ಷಣೆ

    ಮೃತ ಮಾಲಾ ತಂದೆ-ತಾಯಿ ಸಂಬಂಧಿಕರು ಗಂಡನ ಮನೆಯವರ ಜೊತೆ ಗಲಾಟೆ ನಡೆಸಿ ಮನೆಯ ಮುಂದೆಯೇ ಮೃತ ದೇಹ ಅಂತ್ಯಕ್ರಿಯೆ ಮಾಡಿ ಮಣ್ಣು ಮಾಡಲು ಮುಂದಾಗಿದ್ದಾರೆ. ಈ ವೇಳೆ ಗಲಾಟೆ ನಡೆದು ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಆಗಮಿಸಿ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಹಾಸನ | ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ

  • ಇರಾನ್-ಇಸ್ರೇಲ್ ಯುದ್ಧ; ಕರ್ನಾಟಕದ ಅಲೀಪುರದಲ್ಲಿ ಮನೆ ಮಾಡಿದ ಆತಂಕ

    ಇರಾನ್-ಇಸ್ರೇಲ್ ಯುದ್ಧ; ಕರ್ನಾಟಕದ ಅಲೀಪುರದಲ್ಲಿ ಮನೆ ಮಾಡಿದ ಆತಂಕ

    – ಇರಾನ್‌ನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡ್ತಿರುವ ವಿದ್ಯಾರ್ಥಿಗಳು

    ಚಿಕ್ಕಬಳ್ಳಾಪುರ: ದೂರದ ಇರಾನ್ ಹಾಗೂ ಇಸ್ರೇಲ್ (Israel Iran Conflict) ನಡುವೆ ದಿನದಿಂದ ದಿನಕ್ಕೆ ಯುದ್ಧ ತಾರಕಕ್ಕೇರುತ್ತಿದೆ. ಕ್ಷಣದಿಂದ ಕ್ಷಣಕ್ಕೂ ಆತಂಕ ಹೆಚ್ಚಾಗುವಂತೆ ಮಾಡಿದೆ. ಇಡೀ ವಿಶ್ವವೇ ಈಗ ಇರಾನ್ ಮತ್ತು ಇಸ್ರೇಲ್ ಯುದ್ಧದತ್ತ ಚಿತ್ತ ನೆಟ್ಟಿವೆ. ಇಂತಹ ಸನ್ನಿವೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ (Alipur) ಗ್ರಾಮದಲ್ಲೂ ಸಹ ಆತಂಕ ಮನೆ ಮಾಡಿದೆ.

    ಆತಂಕ ಯಾಕೆ?
    ಹೌದು… ಎತ್ತಣ ಮಾಮರ ಎತ್ತಣ ಕೋಗಿಲೆ ಅನ್ನೋ ಹಾಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮಕ್ಕೂ ದೂರದ ಯುದ್ಧಪೀಡಿತ ಇರಾನ್‌ಗೂ ಒಂಥರಾ ಅವಿನಾಭಾವ ನಂಟಿದೆ. ಸರಿಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ಶಿಯಾ ಮುಸ್ಲಿಂ ಸಮುದಾಯದವರೇ ಇರುವ ಅಲೀಪುರ ಗ್ರಾಮಕ್ಕೂ ದೂರದ ಇರಾನ್ ದೇಶದ ಜೊತೆಗೆ ಬಹಳಷ್ಟು ನಂಟಿದ್ದು, ಬಾಂಧವ್ಯದ ಕೊಂಡಿ ಬೆಸೆದುಕೊಂಡಿದೆ. ಈ ಗ್ರಾಮದ 10 ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಇರಾನ್ ದೇಶದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡ್ತಿದ್ದಾರೆ. 50 ಕ್ಕೂ ಹೆಚ್ಚು ಮಂದಿ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಪಡೆಯಲು ಇರಾನ್‌ನಲ್ಲೇ ನೆಲೆಸಿದ್ದಾರೆ. ಪ್ರಮುಖವಾಗಿ ಇರಾನ್‍ನ ಮಶದ್‌ನ ಪ್ರಮುಖ ಧಾರ್ಮಿಕ ಕೇಂದ್ರ ಪವಿತ್ರ ಸ್ಥಳ. ಹಾಗಾಗಿಯೇ ಪ್ರತಿ ವರ್ಷವೂ ನೂರಾರು ಮಂದಿ ಇರಾನ್‌ನ ಮಶದ್‌ಗೆ ಭೇಟಿ ಮಾಡಿ ಪ್ರಾರ್ಥನೆ ಸಲ್ಲಿಸಿ ಬರುತ್ತಾರೆ. ಇಂತಹ ಇರಾನ್ ಮೇಲೆ ಯುದ್ಧ ಸಾರಲಾಗಿದೆ ಎಂದು ಜನ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತೀಯರ ರಕ್ಷಣೆಗಾಗಿ ತನ್ನ ವಾಯುನೆಲೆ ತೆರೆದ ಇರಾನ್‌

    ಇರಾನ್‌ನಲ್ಲಿರುವ ವಿದ್ಯಾರ್ಥಿಗಳು; ಅಲಿಪುರದ ಪೋಷಕರಲ್ಲಿ ಆತಂಕ
    ಹೌದು.. ಇರಾನ್‌ನಲ್ಲಿ ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ದರಕ್ಕಿಂತ ಲಕ್ಷಗಟ್ಟಲೇ ಕಡಿಮೆ ದರಕ್ಕೆ ಎಂಬಿಬಿಎಸ್ ವ್ಯಾಸಂಗ ಮಾಡಬಹುದು. ಹಾಗಾಗಿ ಇಲ್ಲಿನ ಜನರು ತಮ್ಮ ಮಕ್ಕಳನ್ನ ವೈದ್ಯಕೀಯ ಶಿಕ್ಷಣ ಪಡೆಯುವ ಸಲುವಾಗಿ ಇರಾನ್‌ನಲ್ಲಿ ನೆಲೆಸಿದ್ದಾರೆ. ಈ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ವಿದ್ಯಾರ್ಥಿಗಳಾದ ಜೈನಭಿ ಹಾಗೂ ಮಹಮದ್ ಅನ್ಸಾರಿಯ ಕುಟುಂಬದ ಸದಸ್ಯ ಮಹಮದ್ ತಕೀ, 2 ವರ್ಷಗಳಿಂದ ಇರಾನ್‌ನ ತೆಹರಾನ್ ಯೂನಿವರ್ಸಿಟಿಯಲ್ಲಿ ನಮ್ಮ ಮಕ್ಕಳು ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಸದ್ಯ ನಮ್ಮ ಮಕ್ಕಳು ಮಶದ್‌ನಲ್ಲಿ ಸುರಕ್ಷಿತವಾಗಿರುವ ಬಗ್ಗೆ ಫೋನ್ ಮಾಡಿ ತಿಳಿಸಿದ್ದಾರೆ. ಮೂರ್ನಾಲ್ಕು ದಿನಗಳ ಒಳಗಾಗಿ ಭಾರತಕ್ಕೆ ವಾಪಸ್ ಬರುವುದಾಗಿ ಮಾಹಿತಿ ಸಿಗುತ್ತಿದೆ. ನಮ್ಮ ಮಕ್ಕಳು ಇರುವ ಜಾಗದ ಅಕ್ಕಪಕ್ಕದಲ್ಲೇ ಬಾಂಬ್ ದಾಳಿಗಳಾಗಿವೆ. ಇದರಿಂದ ಸಹಜವಾಗಿ ನಮಗೂ ಆತಂಕ ಮನೆ ಮಾಡಿದೆ. ಆದರೆ, ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಸುರಕ್ಷಿತವಾಗಿ ನಮ್ಮ ಮಕ್ಕಳನ್ನ ವಾಪಸ್ ಕರೆತರಲಿದ್ದಾರೆ ಎಂಬ ವಿಶ್ವಾಸದ ಮಾತಗಳನ್ನಾಡಿದರು.