ಚಿಕ್ಕಮಗಳೂರು: ಕೌಟುಂಬಿಕ ಕಲಹದದಿಂದ ಬೇಸತ್ತು ಪತಿಯೇ ಪತ್ನಿಯನ್ನು ಕಬ್ಬಿಣದ ಪೈಪಿನಿಂದ ಥಳಿಸಿ ಕೊಂದ ಅಮಾನವೀಯ ಘಟನೆ ಕಳಸದ ಮರಸಣಿಗೆ ಗ್ರಾಮದಲ್ಲಿ ನಡೆದಿದೆ.
ಮಂಜುಳಾ (32) ಹತ್ಯೆಯಾದ ದುರ್ದೈವಿ. ದಂಪತಿ ಕಳಸ ತಾಲೂಕಿನ ಯಮಗೊಂಡ ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಾಗಿದ್ದರು. ಮೂಲಗಳ ಪ್ರಕಾರ, ಪತಿ-ಪತ್ನಿಯರ ನಡುವೆ ನಿತ್ಯವೂ ಜಗಳ ನಡೆಯುತ್ತಿತ್ತು. ಜಗಳ ಹೆಚ್ಚಾಗಿದ್ದರಿಂದ ಇವರನ್ನು ನೋಡಿ ಬೇಸತ್ತ ತೋಟದ ರೈಟರ್, ಇನ್ನು ಮುಂದೆ ಕೆಲಸಕ್ಕೆ ಬರಬೇಡಿ ಎಂದು ಹೇಳಿದ್ದರು ಎನ್ನಲಾಗಿದೆ.
ಹತ್ಯೆ ನಡೆದ ದಿನವೂ ದಂಪತಿ ನಡುವೆ ತೀವ್ರ ಜಗಳ ನಡೆದಿತ್ತು. ಇದರಿಂದ ಕೋಪಗೊಂಡ ಪತಿ ಮಗುವಿನ ಎದುರೇ ಕಬ್ಬಿಣದ ಪೈಪ್‌ನಿಂದ ಮಂಜುಳಾ ಅವರ ತಲೆಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪಿಡಿಓ ಕಿರುಕುಳಕ್ಕೆ ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ?
– ಪ್ರೀತಿ ನಿರಾಕರಿಸಿದ್ದಕ್ಕೆ ದುಷ್ಕೃತ್ಯ ಶಂಕೆ, ಓರ್ವ ಯುವಕ ವಶಕ್ಕೆ
ಚಿಕ್ಕಮಗಳೂರು: ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕೊಪ್ಪ (Koppa) ತಾಲೂಕಿನ ಕೊಗ್ರೆ ಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿತ್ಯ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಿಂದ ಬಸರೀಕಟ್ಟೆ ಗ್ರಾಮಕ್ಕೆ ಹೋಗಿ ಬರುತ್ತಿದ್ದರು. ಮಂಗಳವಾರ (ಅ.28) ಅದೇ ರೀತಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ನಾಲ್ಕೈದು ಯುವಕರ ಗುಂಪು ದಾರಿಯಲ್ಲಿ ಕಾಯುತ್ತಾ ನಿಂತಿದ್ದರು. ಶಿಕ್ಷಕಿ ಬರುತ್ತಿದ್ದಂತೆ ಅವರ ಮೇಲೆ ಎರಗಿ ದೌರ್ಜನ್ಯ ಎಸಗಿದ್ದು, ಬಳಿಕ ಅಡಿಕೆ ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಮುಂದಾಗಿದ್ದಾರೆ. ಕಿರುಚಿಕೊಳ್ಳುತ್ತಿದಂತೆ ಬಾಯಿಗೆ ಮಣ್ಣು ಹಾಕಿ ವಿಕೃತಿ ಮೆರೆದಿದ್ದಾರೆ. ಆದರೂ ಶಿಕ್ಷಕಿ ಕಿರುಚಿದ ಶಬ್ದ ಕೇಳಿಸಿಕೊಂಡ ಸ್ಥಳೀಯರು ಸ್ಥಳಕ್ಕೆ ಬಂದಿದ್ದಾರೆ. ಜನರು ಬರುತ್ತಿದ್ದಂತೆ ಆರೋಪಿಗಳು ಕಬ್ಬಿಣ ರಾಡ್‌ನಿಂದ ಶಿಕ್ಷಕಿ ತಲೆಗೆ ಹೊಡೆದು ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಇದನ್ನೂ ಓದಿ: ಆಂಧ್ರ, ಒಡಿಶಾ ಕರಾವಳಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ – 110 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ
ಅದೃಷ್ಟಾವಶಾತ್ ಸಾವಿನಿಂದ ಪಾರಾಗಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಕೂಡಲೇ ಶಿಕ್ಷಕಿಯನ್ನು ಕೊಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆ ಕೈಗೆತ್ತಿಕೊಂಡ ಪೊಲೀಸರು ಸದ್ಯ ಬಾಳೆಹೊನ್ನೂರು ಮೂಲದ ಭವಿತ್ (24) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತ ಯುವತಿ ಪ್ರೀತಿ ನಿರಾಕರಿಸಿ, ಎರಡು ತಿಂಗಳಿನಿಂದ ಆತನ ಮೊಬೈಲ್ ನಂಬರ್‌ನ್ನು ಬ್ಲಾಕ್ ಮಾಡಿದ್ದಳು. ಹೀಗಾಗಿ ದುಷ್ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.ಇದನ್ನೂ ಓದಿ: ಹೈಕೋರ್ಟ್ ತೀರ್ಪು ಪಾಲಿಸುತ್ತೇವೆ, ಎಲ್ಲರಿಗೂ ಸಮಾನ ಅವಕಾಶ ನೀಡಿ: ಕಲಬುರಗಿ ಆರ್‌ಎಸ್‌ಎಸ್
ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವ ಕಾಫಿನಾಡ ದತ್ತಪೀಠದ (Datta Peeta) ಗುಹೆ ಒಳಗೆ-ಹೊರಗೆ ಇರೋ ಗೋರಿಗಳು ನಕಲಿ ಅಂತ ಬಿಜೆಪಿ-ಹಿಂದೂ ಸಂಘಟನೆಗಳು 30 ವರ್ಷದಿಂದ ಹೇಳಿಕೊಂಡೇ ಬರುತ್ತಿವೆ. ಇದರ ನಡುವೆ ಇನಾಂ ದತ್ತಾತ್ರೇಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೊಟ್ಟಿರೋ ಉತ್ತರ ಎಲ್ಲರ ಕಿವಿಯನ್ನ ನೆಟ್ಟಗಾಗಿಸಿದೆ.
ಹಿಂದೂಪರ ಸಂಘಟನೆಗಳು ಆರ್‌ಟಿಐನಲ್ಲಿ ಗೋರಿಗಳು ಯಾರದ್ದು? ನೀವು ಯಾರದ್ದಾದರೂ ಶವ ಹೂತಿದ್ದೀರಾ? ಸಾಧು-ಸಂತರು, ಮುಸ್ಲಿಂ ಧರ್ಮಗುರುಗಳು, ಪಕೀರರ ಶವ ಹೂತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ಈ ಮಾಹಿತಿಗೆ ಇನಾಂ ದತ್ತಾತ್ರೇಯ ಪೀಠ ಗ್ರಾಮ ಪಂಚಾಯಿತಿ ಯಾವುದೇ ಮಾಹಿತಿ ಗ್ರಾಮ ಪಂಚಾಯಿತಿಯಲ್ಲಿ ಇಲ್ಲ ಎಂದು ಹಿಂಬರಹ ನೀಡಿದ್ದಾರೆ. ಇದು ಬಿಜೆಪಿಗರು (BJP) ಇಷ್ಟು ವರ್ಷ ಮಾಡಿಕೊಂಡ ಬಂದ ಆರೋಪಕ್ಕೆ ಪುಷ್ಠಿ ಸಿಕ್ಕಿದ್ದು ಇನ್ಮುಂದೆ ಹೋರಾಟದ ಹಾದಿ ಬದಲಾಗೋ ಸಾಧ್ಯತೆ ಕೂಡ ಇದೆ. ಇದನ್ನೂ ಓದಿ: ದತ್ತಪೀಠ ವಿವಾದ; ಭೂ ದಾಖಲೆಗಳ ಆಧಾರದ ಮೇಲೆ ವಿವಾದ ಬಗೆಹರಿಯಲಿ: ಸಿ.ಟಿ ರವಿ
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಹೆಚ್‌ಪಿ (VHP) ಮುಖಂಡ ರಂಗನಾಥ್, ಗ್ರಾಮ ಪಂಚಾಯಿತಿಯ ಈ ಉತ್ತರ ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ಆನೆ ಬಲ ತರಿಸಿದೆ. ಹಿಂದೂ ಪರ ಸಂಘಟನೆಗಳು 30 ವರ್ಷಗಳಿಂದ ದತ್ತಪೀಠ ಹಿಂದೂಗಳದ್ದು. ಧರ್ಮಸ್ಥಳದ ಉತ್ಖನನದ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ದತ್ತಪೀಠದಲ್ಲೂ ಅಂತಹದ್ದೇ ಷಡ್ಯಂತ್ರ ನಡೆದಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರೋದ್ರಿಂದ ಅಲ್ಲಿ ಯಾವುದೇ ಮುಸ್ಲಿಮರ ಕುರುಹುಗಳಿಲ್ಲ. ಹಾಗಾಗಿ, ದತ್ತಪೀಠವನ್ನು ಮುಸ್ಲಿಂ ಮುಕ್ತವನ್ನಾಗಿಸಿ ಸಂಪೂರ್ಣವಾಗಿ ಹಿಂದುಗಳಿಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.
30 ವರ್ಷದ ದತ್ತಪೀಠದ ವಿವಾದ-ಹೋರಾಟ ಈಗ ಮತ್ತೊಂದು ರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಗ್ರಾಮ ಪಂಚಾಯಿತಿ ಅಲ್ಲಿನ ಗೋರಿಗಳ ಬಗ್ಗೆ ನಮಲ್ಲಿ ಯಾವುದೇ ಮಾಹಿತಿ-ದಾಖಲೆ ಇಲ್ಲ ಎಂದಿರೋದು ಹಿಂದೂಗಳ ಆರೋಪ-ಹೋರಾಟಕ್ಕೆ ಸಿಕ್ಕ ಅರ್ಧ ಜಯದಂತಾಗಿದೆ. ಆದರೆ, ಪ್ರಕರಣ ಕೋರ್ಟ್ ಕಟಕಟೆಯಲ್ಲಿದ್ದು ಅಂತಿಮವಾಗಿ ತೀರ್ಪು ಏನು ಬರುತ್ತೋ ಅನ್ನೋದು ಎರಡೂ ಧರ್ಮದವರಿಗೂ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ದತ್ತಪೀಠದ ಪೂಜಾ ಪದ್ಧತಿ – ಸುಪ್ರಿಂ ಸೂಚನೆಯಂತೆ ಕ್ಯಾಬಿನೆಟ್ ಸಬ್ ಕಮಿಟಿ ಸಭೆ
ಚಿಕ್ಕಮಗಳೂರು: ಹೋಂ ಸ್ಟೇ (Homestay) ಬಾತ್ ರೂಂನಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವತಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಹಾಂದಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನ ಹಾಸನ (Hassan) ಜಿಲ್ಲೆಯ ಬೇಲೂರು ತಾಲೂಕಿನ ದೇವಾಲಾಪುರ ಗ್ರಾಮದ ರಂಜಿತಾ (27) ಎಂದು ಗುರುತಿಸಲಾಗಿದೆ. ಮೃತ ರಂಜಿತಾ ದಾವಣಗೆರೆ ಮೂಲದ ಗೆಳತಿ ರೇಖಾ ಅವರೊಂದಿಗೆ ಶುಕ್ರವಾರ ಸಂಜೆ ಹೋಂ ಸ್ಟೇನಲ್ಲಿ ತಂಗಿದ್ದರು. ಸ್ನೇಹಿತೆಯೊಬ್ಬಳ ನಿಶ್ಚಿತಾರ್ಥಕ್ಕಾಗಿ ರಂಜಿತಾ ಮತ್ತು ರೇಖಾ ಬೆಂಗಳೂರಿನಿಂದ ಬಂದಿದ್ದರು. ಇದನ್ನೂ ಓದಿ: ಜಗಳವಾಡಿ ನಾಲ್ಕು ಮಕ್ಕಳ ತಾಯಿಯ ಹತ್ಯೆಗೈದ ಲವ್ವರ್ – ಕೆಟ್ಟು ನಿಂತಿರೋ ಆಟೋದಲ್ಲಿ ಹೆಣ ಬಿಸಾಕಿ ಎಸ್ಕೇಪ್
ಶನಿವಾರ (ಅ.25) ಬೆಳಗ್ಗೆ ರೇಖಾ ಸ್ನಾನ ಮಾಡಿ ಬಂದ ನಂತರ ರಂಜಿತಾ ಸ್ನಾನಕ್ಕೆ ತೆರಳಿದ್ದರು. ತುಂಬಾ ಹೊತ್ತಾದರೂ ಅವರು ಹೊರ ಬಾರದಿದ್ದಾಗ ಮತ್ತು ನಲ್ಲಿಯ ನೀರು ಹರಿಯುವ ಶಬ್ದ ನಿರಂತರವಾಗಿ ಕೇಳುತ್ತಿದ್ದಾಗ ರೇಖಾ ಅವರು ಬಾಗಿಲು ಬಡಿದಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಕಿಟಕಿಯಿಂದ ನೋಡಿದಾಗ ರಂಜಿತಾ ಸ್ನಾನಗೃಹದಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಹೋಂ ಸ್ಟೇ ಸಿಬ್ಬಂದಿಗೆ ಮಾಹಿತಿ ನೀಡಿ ಬಾಗಿಲು ಒಡೆದು ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಂಜಿತಾರನ್ನು ಮೂಡಿಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಯುವತಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ರಂಜಿತಾ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ನಾನಗೃಹದಲ್ಲಿ ಗ್ಯಾಸ್ ಗೀಸರ್ ಇದ್ದಿದ್ದರಿಂದ ಗ್ಯಾಸ್ ಸೋರಿಕೆಯಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಸ್ನಾನಗೃಹದಲ್ಲಿ ಸೂಕ್ತ ವೆಂಟಿಲೇಟರ್ ವ್ಯವಸ್ಥೆ ಇದ್ದು, ಗ್ಯಾಸ್ ಸೋರಿಕೆಯ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದಾ? ಅಥವಾ ಬೇರೇನು ಕಾರಣ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಗೊತ್ತಾಗಬೇಕಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪತ್ನಿ ಜೊತೆ ಜಗಳ; ಅವಳಿ ಮಕ್ಕಳ ಕತ್ತು ಸೀಳಿ ಹತ್ಯೆ ಮಾಡಿದ ಪಾಪಿ
ಚಿಕ್ಕಮಗಳೂರು: ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ರೈಲು ಅನಾಹುತ ತಪ್ಪಿದೆ.
ಕಳೆದ ನಾಲ್ಕು ದಿನಗಳಿಂದ ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು (Chikkamagaluru) ತಾಲೂಕಿನ ಕಣಿವೆ ಗ್ರಾಮದಲ್ಲಿ ರೈಲ್ವೇ ಹಳಿ ಲಯ ತಪ್ಪಿ ಹಳಿಗೆ ಹಾಕಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿತ್ತು. ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ ನೀರು ಉಕ್ಕಿ ಹರಿದ ಪರಿಣಾಮ ಹಳಿಯಲ್ಲಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿದ್ದವು.
ಇಂದು ಬೆಳಗ್ಗೆ ಚಿಕ್ಕಮಗಳೂರಿನಿಂದ ಶಿವಮೊಗ್ಗ (Shivamogga) ಕಡೆಗೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲು ಕಣಿವೆ ಬಳಿ ಆಗಮಿಸುತ್ತಿದ್ದಂತೆ ರೈಲ್ವೆ ಸಿಬ್ಬಂದಿ ತಕ್ಷಣ ನಿಲ್ಲಿಸುವಂತೆ ಲೋಕೋ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಎಚ್ಚೆತ್ತ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದು ಈ ವೇಳೆ ರೈಲ್ವೆ ಸಿಬ್ಬಂದಿಗಳು ತುರ್ತು ದುರಸ್ತಿ ಕಾರ್ಯ ಕೈಗೊಂಡು ರೈಲಿನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ತಾತ್ಕಾಲಿಕ ದುರಸ್ತಿ ಕಾರ್ಯ ಪೂರ್ಣಗೊಂಡ 45 ನಿಮಿಷಗಳ ಬಳಿಕ ರೈಲು ತಡವಾಗಿ ಶಿವಮೊಗ್ಗದತ್ತ ಪ್ರಯಾಣ ಬೆಳೆಸಿತು. ಇದನ್ನೂ ಓದಿ: ಯಾವುದೇ ಕ್ಷಣದಲ್ಲಿ ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ
ಈ ಸ್ಥಳದ ಹಳಿ ಪಕ್ಕದಲ್ಲೇ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ರೈಲ್ವೇ ಸಿಬ್ಬಂದಿ ನೀರನ್ನು ಸರಾಗವಾಗಿ ಹರಿಯುವಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಘಟನೆ ನಡೆದಿರುವ ಕಣಿವೆ ಹಳ್ಳಿಯೂ ಚಿಕ್ಕಮಗಳೂರು ರೈಲ್ವೇ ನಿಲ್ದಾಣದಿಂದ 10 ಕಿ.ಮೀ ಅಂತರದಲ್ಲಿದ್ದ ಕಾರಣ ರೈಲಿನ ವೇಗವು ಕಡಿಮೆ ಇತ್ತು. ಇಂದು ಬೆಳಗ್ಗೆ 7:10ಕ್ಕೆ ರೈಲ್ವೆ ನಿಲ್ದಾಣದಿಂದ ಹೊರಟಿದ್ದ ಪ್ಯಾಸೆಂಜರ್ ರೈಲು 7.30ರ ವೇಳೆಗೆ ಕಣಿವೆಹಳ್ಳಿಗೆ ತಲುಪಿತ್ತು.
ಚಿಕ್ಕಮಗಳೂರು: ದೇವಿರಮ್ಮನ (Deviramma) ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ಹಿನ್ನೆಲೆ, ಪ್ರತಿ ವರ್ಷದಂತೆ ಮೈಸೂರು (Mysuru) ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಗಿದೆ.
ಅನಾದಿ ಕಾಲದಿಂದಲೂ ಅರಸರ ಮನೆತನದಿಂದ ಜಾತ್ರೆಯಲ್ಲಿ ದೇವೀರಮ್ಮನಿಗೆ ಬಾಗಿನ ಕೊಡುವ ಸಂಪ್ರದಾಯವಿದೆ. ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತಿಸಿತು. ಬಳಿಕ ಹಣ್ಣು, ಕಾಯಿ, ವಿಳ್ಯೆದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಲಾಯಿತು. ಇದನ್ನೂ ಓದಿ: ಚಿಕ್ಕಮಗಳೂರು | ಬಿಂಡಿಗ ದೇವಿರಮ್ಮನ ದರ್ಶನಕ್ಕೆ ಕಾದು ನಿಂತ ಸಾವಿರಾರು ಭಕ್ತರಿಗೆ ಮಳೆ ಸವಾಲು
ರಾಕ್ಷನನ್ನ ಸಂಹರಿಸಿದ ಚಾಮುಂಡೇಶ್ವರಿ ಶಾಂತರೂಪ ತಾಳಿದ್ದು ಬಿಂಡಿಗ ಬೆಟ್ಟದಲ್ಲಿ ಎನ್ನುವ ನಂಬಿಕೆ ಇದೆ. ಇನ್ನೂ ರಾಜರ ಆಳ್ವಿಕೆಯಲ್ಲೂ ಮೈಸೂರಿನಿಂದ ಬಾಗಿನದ ವಸ್ತುಗಳು ಬರುತ್ತಿದ್ದವು.
ದೇವಿರಮ್ಮನ ಬೆಟ್ಟದ ತಪ್ಪಲಿನ ಕೆಳಭಾಗದಲ್ಲಿರುವ ದೇವಸ್ಥಾನಕ್ಕೆ ಗಾಳಿ ರೂಪದಲ್ಲಿ ದೇವಿರಮ್ಮ ಪ್ರವೇಶಿಸಿದ್ದಾಳೆ. ವರ್ಷಕ್ಕೊಮ್ಮೆ ಬೆಟ್ಟದ ಮೇಲೆ ಭಕ್ತರಿಗೆ ದರ್ಶನ ನೀಡುವ ದೇವೀರಮ್ಮ, ಉಳಿದ 364 ದಿನ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾಳೆ.
ಎರಡು ದಿನದಿಂದ ಬೆಟ್ಟದ ಮೇಲಿದ್ದ ದೇವಿ ಇಂದು ಕೆಳಗಿರುವ ದೇಗುಲದ ಗರ್ಭಗುಡಿ ಪ್ರವೇಶಿಸಿದ್ದಾಳೆ. ಈ ಬಾರಿ ಎರಡು ದಿನ ಬೆಟ್ಟ ಹತ್ತಲು ಅವಕಾಶ ನೀಡಲಾಗಿತ್ತು. ಎರಡು ದಿನದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಭಕ್ತರು ಬರೀಗಾಲಿನಲ್ಲಿ ಬೆಟ್ಟವನ್ನ ಏರಿ ತಾಯಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತುತಂದ ಅಗ್ನಿಶಾಮಕ ಸಿಬ್ಬಂದಿ
ಚಿಕ್ಕಮಗಳೂರು: ದೇವಿರಮ್ಮ ಬೆಟ್ಟ (Deviramma Betta) ಹತ್ತಿದ್ದ ಇಬ್ಬರು ಭಕ್ತರು ಅಸ್ವಸ್ಥರಾಗಿದ್ದಾರೆ. ಓರ್ವ ಯುವತಿ ಹಾಗೂ ಓರ್ವ ಪುರುಷ ಅಸ್ವಸ್ಥರಾಗಿದ್ದಾರೆ.
ಬೆಟ್ಟ ಏರಲಾಗದೆ ಯುವತಿ ಮಧ್ಯದಲ್ಲೇ ಕುಸಿದು ಬಿದ್ದಿದ್ದಾಳೆ. ಯುವತಿಯನ್ನು ಬೆಟ್ಟದ ಕೆಳ ಭಾಗಕ್ಕೆ ಅಗ್ನಿಶಾಮಕ ಸಿಬ್ಬಂದಿ ಹೊತ್ತು ತಂದಿದ್ದಾರೆ. ವ್ಯಕ್ತಿಯೊಬ್ಬರು ಜಾರಿಕೆಯಲ್ಲಿ ಕಾಲು ಉಳುಕಿಸಿಕೊಂಡು ಪರದಾಡಿದ್ದಾರೆ. ಅವರನ್ನು ಸ್ಟ್ರೆಚರ್‌ನಲ್ಲಿ ಅಗ್ನಿಶಾಮಕ ಸಿಬ್ಬಂದಿ ಮೇಲಿಂದ ಬೆಟ್ಟದ ಕೆಳಗೆ ಹೊತ್ತು ತಂದಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ಬಿಂಡಿಗ ದೇವಿರಮ್ಮನ ದರ್ಶನಕ್ಕೆ ಕಾದು ನಿಂತ ಸಾವಿರಾರು ಭಕ್ತರಿಗೆ ಮಳೆ ಸವಾಲು
ಬೆಟ್ಟ ಹತ್ತಿದ ಭಕ್ತರು ಇಳಿಯುವಾಗ ಭಾರೀ ಜಾರಿಕೆಯಿಂದ ತೆವಳಿಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅರ್ಧ ಬೆಟ್ಟಕ್ಕೆ ಹಗ್ಗ ಹಾಕಿ, ಕಾವಲಿಗೆ ಪೊಲೀಸರು ನಿಂತಿದ್ದಾರೆ. ಹಗ್ಗ ಹಾಕದೇ ಇದ್ದಿದ್ದರೆ ಸಾಕಷ್ಟು ಜನ ಜಾರಿ ಬೀಳುವ ಸಾಧ್ಯತೆ ಇತ್ತು.
ಏನಾದರೂ ಆರೋಗ್ಯ ಸಮಸ್ಯೆ ಹಾಗೂ ಅವಘಡ ಸಂಭವಿಸಿದರೆ ತಕ್ಷಣ ಕ್ರಮಕೈಗೊಳ್ಳಲು ಸ್ಥಳದಲ್ಲೇ ಐದು ಆಂಬುಲೆನ್ಸ್‌ಗಳನ್ನು ಇರಿಸಲಾಗಿದೆ. ಇದನ್ನೂ ಓದಿ:
ಚಿಕ್ಕಮಗಳೂರು: ಕಡೂರು (Kaduru) ತಾಲೂಕಿನ ಆಲಘಟ್ಟ ಗ್ರಾಮದಲ್ಲಿ ಹೆಂಡತಿಯನ್ನು (Wife) ಕೊಂದು ಕೊಳವೆ ಬಾವಿಗೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ಮಹಿಳೆಯ ಮೃತದೇಹವನ್ನು ಹೊರತೆಗೆದಿದ್ದಾರೆ.
ಆರೋಪಿ ವಿಜಯ್ ಕಳೆದ ಒಂದೂವರೆ ತಿಂಗಳ ಹಿಂದೆ ತನ್ನ ಪತ್ನಿ ಭಾರತಿಯನ್ನು (28) ಕೊಂದು ಯಾರಿಗೂ ತಿಳಿಯಂತೆ ತಮ್ಮದೇ ತೋಟದಲ್ಲಿ ನೀರು ಬಂದಿದ್ದ ಕೊಳವೆ ಬಾವಿಯಲ್ಲಿ ಹೂತಿದ್ದ. ಬಳಿಕ ಬಾವಿಯೊಳಗೆ ಗೋಣಿಚೀಲ, ಮರಳು ಹಾಕಿ ಮುಚ್ಚಿದ್ದ. ಯಾರಿಗೂ ಅನುಮಾನ ಬಾರದಿರಲಿ ಎಂದು ಆತನೇ ಹೋಗಿ ನನ್ನ ಪತ್ನಿ ಮಾನಸಿಕ ಅಸ್ವಸ್ಥೆ, ಎಲ್ಲೋ ಹೋಗಿದ್ದಾಳೆ ಹುಡುಕಿಕೊಡಿ ಎಂದು ಕಡೂರು ಠಾಣೆಯಲ್ಲಿ ದೂರು ಕೂಡ ನೀಡಿದ್ದ. ಒಂದೂವರೆ ತಿಂಗಳಿಂದ ಪೊಲೀಸರು ಪ್ರಕರಣದ ಹಿಂದೆ ಬಿದ್ದಿದ್ದರು. ಪೊಲೀಸರ ಸೂಕ್ಷ್ಮ ತನಿಖೆಯಿಂದ ಹಂತಕ ಆಕೆಯ ಗಂಡನೇ ಎಂದು ತಿಳಿದು ಬಂದಿತ್ತು. ಬಳಿಕ ಪೊಲೀಸರು ಮೃತಳ ಅತ್ತೆ-ಮಾವ ಗಂಡನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದನ್ನೂ ಓದಿ: ಹೆಂಡ್ತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿ, ದೇವರಿಗೆ ಮೂರು ಪ್ರಾಣಿ ಬಲಿ ಅರ್ಪಿಸಿದ್ದ ಕೇಡಿ ಗಂಡ!
ವಿಚಾರಣೆ ವೇಳೆ ಆರೋಪಿ, ಹೆಂಡತಿ ಹೆಸರು ಬರೆದು ಆಕೆ ದೆವ್ವ-ಪೀಡೆ-ಪಿಶಾಚಿ ಆಗಬಾರದು, ಈ ಕೇಸ್ ಗೊತ್ತಾಗಬಾರದು, ಕೇಸ್ ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲವಾಗಬೇಕು. ಕೋರ್ಟಿನಲ್ಲಿ ಕೇಸ್ ನಿಲ್ಲಬಾರದು ಎಂದು ದೇವರಿಗೆ ಮೂರು ಪ್ರಾಣಿ ಬಲಿ ನೀಡಿ, ಕಬ್ಬಿಣದ ತಗಡಿನಲ್ಲಿ ಬರೆದು ಹೆಂಡತಿ ಫೋಟೋ ಇರಿಸಿ ದೇವಾಲಯದ ಮರಕ್ಕೆ ಮೊಳೆ ಹೊಡೆದಿದ್ದ ಎಂದು ತಿಳಿದು ಬಂದಿದೆ.
ತಹಶಿಲ್ದಾರ್, ಡಿವೈಎಸ್ಪಿ, ಪಿಎಸ್‌ಐ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ಸಮ್ಮುಖದಲ್ಲಿ ಮೃತದೇಹ ಹೊರತೆಗೆಯಲಾಗಿದೆ. ಕೊಳವೆ ಬಾವಿಯ 12 ಅಡಿ ಆಳದಲ್ಲಿ ಭಾರತೀಯ ಮೃತದೇಹ ಪತ್ತೆಯಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಮೃತದೇಹದಲ್ಲಿ ತನಿಖೆಗೆ ಬೇಕಾದ ಅಂಗಾಂಗಳನ್ನ ತೆಗೆದುಕೊಂಡು ಮೃತದೇಹವನ್ನು ಪೋಷಕರಿಗೆ ನೀಡಿದ್ದಾರೆ.
ವಿಜಯ್ ಹಾಗೂ ಭಾರತೀಗೆ 7 ವರ್ಷಗಳ ಹಿಂದೆ ಮದುವೆಯಾಗಿತ್ತು. ದಂಪತಿಗೆ 6 ವರ್ಷರ ಒಂದು ಮಗು ಕೂಡ ಇದೆ. ಹೊಲ-ಗದ್ದೆ-ತೋಟ ಎಲ್ಲಾ ಇದ್ದು ಆರ್ಥಿಕವಾಗಿ ಚೆನ್ನಾಗಿದ್ದ ವಿಜಯ್‌ಗೆ ಭಾರತಿ ಕುಟುಂಬಸ್ಥರು ಮದುವೆ ವೇಳೆ ಕಾರು, ಬೈಕ್, ಉಂಗುರ, ಬ್ರಾಸ್ಲೈಟ್, ಚೈನ್ ಎಲ್ಲವನ್ನೂ ನೀಡಿ 15-20 ಲಕ್ಷ ರೂ. ಖರ್ಚು ಮಾಡಿ ಮದುವೆ ಮಾಡಿದ್ದರು. ವರದಕ್ಷಿಣೆ (Dowry) ವಿಚಾರವಾಗಿ ಹಲವು ಬಾರಿ ಪತ್ನಿ ಮೇಲೆ ಹಲ್ಲೆ ಮಾಡಿ ಆರೋಪಿ ತವರಿಗೆ ಕಳಿಸಿದ್ದ ಎನ್ನಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಸಂಸಾರದಲ್ಲಿ ಕಲಹ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಶಕ್ತಿ ದೇವತೆ ದೇವೀರಮ್ಮನ ಜಾತ್ರೆಯ ಸಲುವಾಗಿ ಸಾವಿರಾರು ಭಕ್ತರು ಬೆಟ್ಟ ಹತ್ತಲು ಕಾತುರರಾಗಿದ್ದಾರೆ. ಆದರೆ, ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಆರಂಭವಾದ ಧಾರಾಕಾರ ಮಳೆ ಬೆಟ್ಟ ಹತ್ತುವ ಭಕ್ತರಿಗೆ ಸವಾಲಾಗಿ ಪರಿಣಮಿಸಿದೆ. ದೇವಿರಮ್ಮನನ್ನು ಕಣ್ತುಂಬಿಕೊಳ್ಳಲು ಮಳೆಯ ನಡುವೆಯೇ ಭಕ್ತರು ಬೆಟ್ಟವನ್ನು ಹತ್ತಲು ಅನಿವಾರ್ಯತೆ ಎದುರಾಗಿದೆ.
ಸಮುದ್ರ ಮಟ್ಟದಿಂದ ಬರೋಬ್ಬರಿ 3,800 ಅಡಿಗೂ ಹೆಚ್ಚು ಎತ್ತರದಲ್ಲಿರುವ ದೇವೀರಮ್ಮನ ದೇಗುಲಕ್ಕೆ ತೆರಳಲು ಭಕ್ತರು ಸುಮಾರು 5-6 ಕಿ.ಮೀ. ದೂರದ ಪಿರಮಿಡ್ ಆಕಾರದ ಕಡಿದಾದ ಬೆಟ್ಟವನ್ನು ಹತ್ತಬೇಕು. ಈ ಬಾರಿ ಜಿಲ್ಲಾಡಳಿತ ಮತ್ತು ದೇವಸ್ಥಾನ ಸಮಿತಿ ಭಾನುವಾರ (ಅ.19) ಮತ್ತು ಸೋಮವಾರ (ಅ.20) ಎರಡು ದಿನ ಬೆಟ್ಟ ಹತ್ತಲು ಅವಕಾಶ ನೀಡಿದೆ. ಈ ಎರಡು ದಿನಗಳಲ್ಲಿ 60 ರಿಂದ 70 ಸಾವಿರಕ್ಕೂ ಹೆಚ್ಚು ಭಕ್ತರು ಬೆಟ್ಟ ಹತ್ತುವ ನಿರೀಕ್ಷೆಯಿದೆ. ಆದರೆ, ಭಾನುವಾರ-ಸೋಮವಾರ ಎರಡು ದಿನಗಳಲ್ಲಿ ಜಿಲ್ಲೆಯಲ್ಲಿ 10 ರಿಂದ 30 ಮಿ.ಮೀ. ಮಳೆ ಬೀಳುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ದೇವಿರಮ್ಮನ ದರ್ಶನದಿಂದ ದೀಪಾವಳಿಗೆ ಚಾಲನೆ – ಏನಿದು ಮಲೆನಾಡಿಗರ ಹಬ್ಬದ ವಿಶೇಷ?
ಶನಿವಾರ (ಅ.18) ಸಂಜೆಯಿಂದಲೇ ಧಾರಾಕಾರ ಮಳೆ ಆರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಾದರೆ, ಗುಡ್ಡವು ಜಾರುವ ಸಾಧ್ಯತೆ ಇರುವುದರಿಂದ, ಭಕ್ತರು ಅತ್ಯಂತ ಎಚ್ಚರಿಕೆಯಿಂದ ಬೆಟ್ಟ ಹತ್ತಬೇಕಾಗಿದೆ. ಯಾವುದೇ ತೊಂದರೆಗಳು ಆಗದಂತೆ ಮುನ್ನೆಚ್ಚರಿಕೆವಹಿಸಿರುವ ಜಿಲ್ಲಾಡಳಿತ, ಬೆಟ್ಟ ಹತ್ತುವ ಭಕ್ತರಿಗಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಭಕ್ತರು ವೈಯಕ್ತಿಕ ಸುರಕ್ಷತೆಯೊಂದಿಗೆ ಮತ್ತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಬೆಟ್ಟ ಹತ್ತಲು ಸೂಚನೆ ನೀಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಳೆಯ ಸವಾಲಿನ ನಡುವೆಯೂ ಭಕ್ತರು ದೇವೀರಮ್ಮನ ದರ್ಶನಕ್ಕೆ ಉತ್ಸುಕರಾಗಿದ್ದಾರೆ. ಮಳೆ ಹೀಗೆ ಮುಂದುವರೆದರೆ ಸೋಮವಾರ ಬೆಟ್ಟ ಹತ್ತುವ ಭಕ್ತರಿಗೆ ಜಿಲ್ಲಾಡಳಿತ ನಿರ್ಬಂಧ ಹೇರುವ ಸಾಧ್ಯತೆಯೂ ಇದೆ. ಇದನ್ನೂ ಓದಿ: ವರ್ಷಕ್ಕೊಮ್ಮೆ ದರ್ಶನ ಕೊಡುವ ದೇವಿರಮ್ಮನ ಪೂಜೆಗೆ ಭಕ್ತರ ದಂಡು
ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷದ ಅವಧಿಯಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ನೌಕರರು ಸರ್ಕಾರದ ಕಾರಣ ಮುಂದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಮಾತ್ರ ಕಣ್ಣಿದ್ದು ಕುರುಡರಂತೆ, ಕಿವಿಯಿದ್ದು ಕಿವುಡರಂತೆ, ಹೃದಯವಿದ್ದು ಮಾನವೀಯತೆ ಸತ್ತಂತೆ ಇದ್ದಾರೆ ಎಂದು ಎಮ್‍ಎಲ್‍ಸಿ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಸಚಿವರು, ಶಾಸಕರು, ಸಿಬ್ಬಂದಿ, ಸರ್ಕಾರದ ಬೇಜವಾಬ್ದಾರಿ, ಸಂಬಳ ನೀಡದೇ ಇರುವುದರ ಕಾರಣ ನೀಡಿ ಡೆತ್ ನೋಟ್ ಬರೆದಿಟ್ಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಕ್ಕೆ ಹೃದಯ ಇದೆಯೋ? ಇಲ್ವೋ ಗೊತ್ತಿಲ್ಲ, ಮಾನವೀಯತೆ ಸತ್ತಿರೋದು ಗೊತ್ತಾಗ್ತಿದೆ. ಇದು ಸರ್ಕಾರದ ಪ್ರಾಯೋಜಿತ ಕೊಲೆ, ಇದರ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಸರ್ಕಾರದ ಭಕ್ಷಣೆಯ ದಾಹಕ್ಕೆ ಸರ್ಕಾರಿ ನೌಕರರು ಬಲಿಯಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ನಕ್ಸಲರು ಇಷ್ಟ ಆಗ್ತಾರೆ, ದೇಶಭಕ್ತರನ್ನು ಕಂಡ್ರೆ ಅಸಹನೆ: ಸಿ.ಟಿ ರವಿ
ಈ ಸಾವಿಗೆ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಯೇ ಪ್ರಾಯಶ್ಚಿತ್ತ. ಆದರೆ ಸರ್ಕಾರ ಹೃದಯಹೀನ ಸರ್ಕಾರವಾಗಿ, ಮಾನವೀಯತೆ ಸತ್ತಂತೆ ವರ್ತಿಸುತ್ತಿದೆ. ದಪ್ಪ ಚರ್ಮ ಅನ್ನೋಣ ಅಂದ್ರೆ ಆ ದಪ್ಪ ಚರ್ಮಕ್ಕಾದ್ರು ಸ್ವಲ್ಪ ನಾಟುತ್ತೆ. ಚಡಿ ಏಟು ನಾಟದಿದ್ರು, ಕರೆಂಟ್ ಶಾಕ್ ಆದ್ರೂ ನಾಟುತ್ತೆ. ಇದು ದಪ್ಪ ಚರ್ಮವೋ, ಸತ್ತಿರೋ ಚರ್ಮವೋ ಗೊತ್ತಾಗ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕೊಲೆ, ಸುಲಿಗೆ, ಅತ್ಯಾಚಾರ ಸಂಭ್ರಮಕ್ಕೆ ಔತಣಕೂಟ – ಸಿಎಂ ಡಿನ್ನರ್ ಮೀಟಿಂಗ್‌ಗೆ ಸಿ.ಟಿ ರವಿ ವ್ಯಂಗ್ಯ