Tag: Chikkamagaluru

  • ಕಾಫಿನಾಡಲ್ಲಿ ಮಳೆಯ ಜೊತೆ ಭೂಮಿಯೊಳಗಿಂದ ಬರ್ತಿದೆ ವಿಚಿತ್ರ ಶಬ್ಧ – ಭಯದಲ್ಲಿದ್ದಾರೆ ಜನ

    ಕಾಫಿನಾಡಲ್ಲಿ ಮಳೆಯ ಜೊತೆ ಭೂಮಿಯೊಳಗಿಂದ ಬರ್ತಿದೆ ವಿಚಿತ್ರ ಶಬ್ಧ – ಭಯದಲ್ಲಿದ್ದಾರೆ ಜನ

    – ಹಾಸನದಲ್ಲೂ ಅಬ್ಬರಿಸುತ್ತಿರುವ ವರಣುದೇವ

    ಚಿಕ್ಕಮಗಳೂರು/ಹಾಸನ: ಕಾಫಿನಾಡಿನಲ್ಲಿ ಮತ್ತೆ ಮಳೆಯ ಅರ್ಭಟ ಶುರುವಾಗಿದ್ದು, ಮಳೆಯ ಜೊತೆ ಭೂಮಿಯೊಳಗಿಂದ ಬರುತ್ತಿರುವ ವಿಚಿತ್ರ ಶಬ್ಧ ಅಲ್ಲಿನ ಜನರು ಭಯಭೀತಾರನ್ನಾಗಿ ಮಾಡಿದೆ.

    ಮೂಡಿಗೆರೆ ತಾಲೂಕಿನಾದ್ಯಂತ ಬೈರಾಪುರ, ಊರುಬಗೆ ಮತ್ತು ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ಊರುಬಗೆಯಲ್ಲಿ ರಸ್ತೆಯ ಮೇಲೆಯೇ ನೀರು ಹರಿಯುತ್ತಿದ್ದು, ಗದ್ದೆಗಳು ಜಲಾವೃತವಾಗಿವೆ. ಅಲೇಖಾನ್ ಹೊರಟ್ಟಿ, ಬಾಳೂರು, ಸುಂಕಸಾಲೆ, ದುರ್ಗದಹಳ್ಳಿಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ದುರ್ಗದಹಳ್ಳಿಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿರುವುದು ಜನರನ್ನು ಅತಂಕಕ್ಕೆ ಕಾರಣವಾಗಿದೆ. ಎನ್.ಆರ್ ಪುರ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲೂ ಮಳೆ ಮುಂದುವರಿದಿದೆ.

    ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ತುಂಗಾ, ಭದ್ರಾ ಮತ್ತು ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಧಾರಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ಕಳಸ ಹೊರನಾಡಿನ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಗೆ ಒಂದೇ ಒಂದು ಅಡಿಯಷ್ಟು ಮಾತ್ರ ಬಾಕಿ ಉಳಿದಿದೆ. ದಿನ ಪೂರ್ತಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು. ಮತ್ತೆ ಮಲೆನಾಡಿನ ಜನ ಆತಂಕದಲ್ಲಿ ದಿನ ಕಳೆಯುವಂತಾಗಿದೆ.

    ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ತತ್ತರಿಸಿ ಹೋಗಿದೆ. ಧಾರಾಕಾರ ಮಳೆಗೆ ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದು, ಸಂಚಾರಕ್ಕೆ ವ್ಯತ್ಯಯವಾಗಿದೆ. ಹಲವಡೆ ವಿದ್ಯತ್ ಸಂಪರ್ಕವನ್ನು ಕಡಿತ ಮಾಡಲಾಗಿದೆ. ಹೇಮಾವತಿ ನದಿ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿ ಗುಡ್ಡಗಾಡು ಪ್ರದೇಶದ ಹಳ್ಳಿಗಳಿಂದ ಜನರು ಹೊರಬರುತ್ತಿದ್ದಾರೆ. ಈ ನಡುವೆ ಮಳೆಯ ಕಾರಣದಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಶಾಲೆಗೆ ಹೋಗಲು ಪರದಾಡುವ ಸ್ಥಿತಿ ಉಂಟಾಗಿದೆ.

    ಹಾಸನ ಜಿಲ್ಲೆಯಲ್ಲಿ ಕಳೆದ ಆಗಸ್ಟ್ ಆರಂಭದಲ್ಲಿ ಆರ್ಭಟಿಸಿದ ಮಳೆಯಾಘಾತದಿಂದ ಇನ್ನೂ ಸಂತ್ರಸ್ತರು ಸುಧಾರಿಸಿಕೊಂಡಿಲ್ಲ. ಮಳೆಯಿಂದ ತತ್ತರಿಸಿರುವ ಸಕಲೇಶಪುರ, ಅರಕಲಗೂಡು, ಆಲೂರು ಸೇರಿದಂತೆ ಜನ ಜಾನುವಾರು ಸುಭದ್ರ ನೆಲೆಗಾಗಿ ಹುಡುಕಾಟ ಮುಂದುವರಿಸಿದ್ದು, ಹೊಸ ಜೀವನದ ಕನಸಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಇದರ ನಡುವೆಯೇ ಕಳೆದ ಹದಿನೈದು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಆರಂಭವಾಗಿರುವುದರಿಂದ ಮಲೆನಾಡು ಭಾಗದ ಜನರಲ್ಲಿ ಮತ್ತೆ ಮುಳುಗಡೆ ಭೀತಿ ಎದುರಾಗಿದೆ.

    ಈ ಹಿಂದೆ ಆಗಿರುವ ನಷ್ಟಕ್ಕೇ ಯಾವುದೇ ಪರಿಹಾರ ಈವರೆಗೂ ಸಿಕ್ಕಿಲ್ಲ. ಈಗ ಪುನಃ ಮಳೆಯಾದರೆ ನಮ್ಮ ಗತಿ ಏನು ಎಂದು ಜನರು ಆತಂಕದಲ್ಲಿ ದಿನದೂಡುವಂತಾಗಿದೆ. ಸಕಲೇಶಪುರ ಪಟ್ಟಣದ ಆಝಾದ್ ರಸ್ತೆಯಲ್ಲಿ ಕಳೆದಬಾರಿ ಮಳೆಯಲ್ಲಿ ನಲುಗಿದ್ದ ಸ್ಥಳೀಯರು ಈ ಭಾರಿಯೂ ನೀರು ಒಳನುಗ್ಗಬಹುದು ಎಂಬ ಅತಂಕದಲ್ಲಿದ್ದಾರೆ. ಬೆಂಗಳೂರು ಮಂಗಳೂರು ನಡುವಿನ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಶಿರಾಡಿಯಲ್ಲಿಯೂ ಕೂಡ ಆತಂಕದಲ್ಲಿ ವಾಹನ ಸವಾರರ ಪ್ರಯಾಣ ನಡೆಸುವಂತಾಗಿದೆ.

    ಕಾಫಿ ಬೆಳೆ, ಭತ್ತ, ಮೆಣಸು ಸೇರಿದಂತೆ ಹಲವು ಬೆಳೆ ನಷ್ಟವಾಗಿದ್ದು, ಈಗ ಮತ್ತೆ ಬರುತ್ತಿರುವ ಮಳೆ ರೈತರಿಗೆ ಆತಂಕವನ್ನುಂಟು ಮಾಡಿದೆ. ಕಳೆದ ಬಾರಿಯ ನೆರೆಯಿಂದ ಮನೆ ಕಳೆದುಕೊಂಡಿರುವ ಸಂತ್ರಸ್ಥರು ಕೂಡ ಪರಿಹಾರ ಸಿಗದೆ ಪರದಾಡುವ ಪರಿಸ್ಥಿತಿಯಲ್ಲಿದ್ದು ಮತ್ತೆ ಮಳೆಯಿಂದಾಗಿ ಆತಂಕದಲ್ಲಿದ್ದಾರೆ.

  • ಮತ್ತೆ ಅಬ್ಬರಿಸುತ್ತಿರುವ ಮಳೆರಾಯ- ಕೊಡಗು, ಚಿಕ್ಕಮಗ್ಳೂರು, ಶಿವಮೊಗ್ಗದಲ್ಲಿ ರೆಡ್ ಅಲರ್ಟ್

    ಮತ್ತೆ ಅಬ್ಬರಿಸುತ್ತಿರುವ ಮಳೆರಾಯ- ಕೊಡಗು, ಚಿಕ್ಕಮಗ್ಳೂರು, ಶಿವಮೊಗ್ಗದಲ್ಲಿ ರೆಡ್ ಅಲರ್ಟ್

    -ಕೊಡಗು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

    ಕೊಡಗು/ಚಿಕ್ಕಮಗಳೂರು/ಶಿವಮೊಗ್ಗ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತ್ತೆ ವರುಣ ಅಬ್ಬರಿಸುತ್ತಿದ್ದಾನೆ. ಬಿಟ್ಟು ಬಿಡದೆ ಆರ್ಭಟಿಸುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ. 204 ಮಿಲಿ ಮೀಟರ್ ಗಿಂತ ಅಧಿಕ ಮಳೆಯಾಗುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.

    ಧಾರಾಕಾರ ಮಳೆಗೆ ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತವಾಗಿದೆ. ಭಾಗಮಂಡಲ- ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕರಾವಳಿ ಭಾಗದಲ್ಲೂ ವರುಣ ಅಬ್ಬರಿಸುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.

    ಇತ್ತ ಮೇಘಸ್ಫೋಟಕ್ಕೆ ವಾಣಿಜ್ಯ ನಗರಿ ಮುಂಬೈನಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ ಮುಂಬೈ, ಥಾಣೆಯಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಮಳೆಯಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

  • ಜನರ ಸಿಂಪಥಿಯನ್ನು ಕಳೆದುಕೊಂಡು ಕಾಂಗ್ರೆಸ್ ಈ ಮಟ್ಟಕ್ಕೆ ಇಳಿದಿದೆ: ಸಂಸದೆ ಶೋಭಾ

    ಜನರ ಸಿಂಪಥಿಯನ್ನು ಕಳೆದುಕೊಂಡು ಕಾಂಗ್ರೆಸ್ ಈ ಮಟ್ಟಕ್ಕೆ ಇಳಿದಿದೆ: ಸಂಸದೆ ಶೋಭಾ

    ಚಿಕ್ಕಮಗಳೂರು: ಕಾಂಗ್ರೆಸ್ ಜನರ ಸಿಂಪಥಿಯನ್ನು ಕಳೆದುಕೊಂಡು ಈ ಮಟ್ಟಕ್ಕೆ ಇಳಿದಿದೆ. ಇಂತದ್ದನ್ನು ಮಾಡಿ-ಮಾಡಿಯೇ ಅವರು ಜನರ ಸಿಂಪಥಿಯನ್ನು ಕಳೆದುಕೊಂಡಿರೋದು. ಇಂದು ಕಾಂಗ್ರೆಸ್ಸಿನ ನಾಯಕರ ಮೇಲೆ ಜನರಿಗೆ ಸಿಂಪಥಿ ಇಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಕಾನೂನಿನಂತೆ ಬಂಧನ ಆಗಿರಬಹುದು. ನಿರಂತರವಾದ ಅಧ್ಯಯನ ಹಾಗೂ ತನಿಖೆಯನ್ನು ಸಂಸ್ಥೆಗಳು ಮಾಡಿವೆ. ಅದರ ಆಧಾರದಲ್ಲಿ ಅವರ ಬಂಧನವಾಗಿರಬಹುದು. ದೇಶದ 70 ವರ್ಷದ ಇತಿಹಾಸದಲ್ಲಿ ಇಂತಹ ಹಲವು ಬಂಧನಗಳಾಗಿವೆ. ತನಿಖೆಗಳು ಆಗಿವೆ. ಇಡಿ ಅಥವಾ ಸಿಬಿಐ ಯಾವುದು ಕೂಡ ನಾವು ಹುಟ್ಟು ಹಾಕಿದ್ದಲ್ಲ. ಇವೆಲ್ಲಾ ಹುಟ್ಟು ಹಾಕೋಕೆ ಅವರೇ ಕಾರಣ ಎಂದರು.

    ಇಂದು ಕಾಂಗ್ರೆಸ್ ಮಾಡುತ್ತಿರುವ ಹೋರಾಟ ಯಾರ ಪರ ಎಂದು ಅರ್ಥ ಆಗುತ್ತಿಲ್ಲ. ಯಾರ ಪರ ನಿಂತಿದ್ದಾರೆ? ಯಾಕಾಗಿ ನಿಲುತ್ತಾರೆ? ಈ ಹಿಂದೆ ಅವರು ಮಾಡಿದ ಎಲ್ಲಾ ಬಂಧನ ರಾಜಕೀಯ ಪ್ರೇರಿತನಾ? ರಾಜಕೀಯ ಪ್ರೇರಿತವಾಗಿಯೇ ಯುಪಿಎ ಕಾಲದಲ್ಲಿ ಬಂಧನವಾಗಿದೇಯಾ? ಇದಕ್ಕೆಲ್ಲಾ ಕಾಂಗ್ರೆಸ್ ಉತ್ತರ ಕೊಡುವ ಜಾಗದಲ್ಲಿದೆ. ಯಾರು ಪ್ರಶ್ನೆ ಕೇಳುತ್ತಿದ್ದಾರೆ, ಅವರೇ ಉತ್ತರ ಹೇಳಬೇಕು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

    ಡಿಕೆಶಿ ಸಾಮಾನ್ಯ ವ್ಯಕ್ತಿಯಲ್ಲ. ಪ್ರಭಾವಿ ಮುಖಂಡ. ಸುಮ್ಮನೆ ಅವರ ಬಂಧನವಾಗಲ್ಲ. ದೊಡ್ಡ ವ್ಯಕ್ತಿ, ಮಂತ್ರಿಯಾದವರ ಬಂಧನವಾಗುತ್ತೆ ಎಂದು ಅದರ ಹಿಂದೆ ಬಲವಾದ ಸಾಕ್ಷಿ ಇರುತ್ತೆ. 70 ವರ್ಷದಲ್ಲಿ ಈ ದೇಶವನ್ನು ಹೇಗೆ ಲೂಟಿ ಮಾಡಿದರು, ಯುಪಿಯ ಅವಧಿಯಲ್ಲಿ ಯಾವ-ಯಾವ ಇಲಾಖೆಯಲ್ಲಿ ಎಷ್ಟು ಲೂಟಿ ಮಾಡಿದರು, ಅದೆಲ್ಲದರ ಸಾಕ್ಷಿಗಳು ಇಂದು ನಮ್ಮ ಕಣ್ಣ ಮುಂದಿದೆ. ಹಲವರಿಗೆ ಶಿಕ್ಷೆಯಾಗಿದೆ. ಮತ್ತೆ ಹಲವರಿಗೆ ಶಿಕ್ಷೆಯಾಗುವ ಹಂತದಲ್ಲಿದೆ. ಕಾಂಗ್ರೆಸ್ ಯಾರನ್ನಾದರೂ ಸಮರ್ಥನೆ ಮಾಡಿಕೊಳ್ಳುತ್ತೆ ಅಥವಾ ಅವರನ್ನವರು ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದರೆ ಇದು ವ್ಯವಸ್ಥೆ ಅಣಕ ಎಂದು ಶೋಭಾ ಹೇಳಿದರು.

  • ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ- ಪವಾಡ ರೀತಿ ದಂಪತಿ ಪಾರು

    ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ- ಪವಾಡ ರೀತಿ ದಂಪತಿ ಪಾರು

    ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕೂದಲೆಳೆ ಅಂತರದಲ್ಲಿ ದಂಪತಿ ಪವಾಡ ಸದೃಶ ಪಾರಾದ ಘಟನೆ ತಾಲೂಕಿನ ಆಲ್ದೂರು ಬಳಿಯ ತೋರಣ ಮಾವು ಗ್ರಾಮದ ಬಳಿ ನಡೆದಿದೆ.

    ಬೆಂಗಳೂರು ಮೂಲದ ದಂಪತಿ ಕಾರಿನಲ್ಲಿ ಆಲ್ದೂರು ಮೂಲಕ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದರು. ಆದರೆ ಮಲೆನಾಡು ಭಾಗದಲ್ಲಿ ಇಂದು ಗಾಳಿ, ಮಳೆ ಇದ್ದಿದ್ದರಿಂದ ಕಾರು ತೋರಣಮಾವು ಬಳಿ ಬರುತ್ತಿದ್ದಂತೆ ರಸ್ತೆ ಬದಿಯ ಮರ ಮುರಿದು ಬಿದ್ದಿದೆ. ಮರ ಬೀಳುವುದನ್ನ ಆಲಿಸಿದ ಕಾರು ಚಾಲಕ ಕೂಡಲೇ ಬ್ರೇಕ್ ಹಾಕಿದ್ದಾರೆ. ಪರಿಣಾಮ ಮರವು ಕಾರಿನ ಬಾನೆಟ್ ಮೇಲೆ ಉರುಳಿ ಬಿದ್ದಿದೆ.

    ಕಾರಿನಲ್ಲಿದ್ದ ಬೆಂಗಳೂರು ಮೂಲದ ದಂಪತಿ ಭಾರೀ ಅನಾಹುತದಿಂದ ಪಾರಾಗಿದ್ದಾರೆ. ಒಂದೇ ಸೆಕೆಂಡ್, ಅರ್ಧ ಅಡಿ ಅಂತರವಷ್ಟೆ ಕೂದಲೆಳೆಯಷ್ಟು ಅಂತರ ತಪ್ಪಿದ್ದರೆ ಕಾರಿನಲ್ಲಿದ್ದ ಇಬ್ಬರು ತೀವ್ರ ಸಂಕಷ್ಟಕ್ಕೀಡಾಗುತ್ತಿದ್ದರು. ಚಾಲಕ ಜಾಗೃತಿಯಿಂದ ಇಬ್ಬರ ಪ್ರಾಣ ಉಳಿದಿದೆ. ಸಣ್ಣ-ಪುಟ್ಟ ಗಾಯ ಕೂಡ ಆಗದಂತೆ ದಂಪತಿ ಅಪಾಯದಿಂದ ಪಾರಾಗಿದ್ದಾರೆ.

    ಈ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿದ್ದಾರೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಮನೆಗೆ ಬಂದ ಮಾಜಿ ಪ್ರಿಯಕರನನ್ನು ಪತಿ ಜೊತೆ ಸೇರಿ ಥಳಿಸಿದ ಪ್ರೇಯಸಿ- ಇಬ್ಬರನ್ನು ಕೊಚ್ಚಿ ಕೊಂದ

    ಮನೆಗೆ ಬಂದ ಮಾಜಿ ಪ್ರಿಯಕರನನ್ನು ಪತಿ ಜೊತೆ ಸೇರಿ ಥಳಿಸಿದ ಪ್ರೇಯಸಿ- ಇಬ್ಬರನ್ನು ಕೊಚ್ಚಿ ಕೊಂದ

    ಚಿಕ್ಕಮಗಳೂರು: ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಪ್ರೇಯಸಿ ತನ್ನಿಂದ ದೂರವಾಗಿದ್ದಕ್ಕೆ ಕೋಪಗೊಂಡು, ಪ್ರೇಯಸಿ ಹಾಗೂ ಆಕೆಯ ಪತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘನಘೋರ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ನರಸಿಂಪುರ ತಾಲೂಕಿನ ಸಾತ್ಕೋಳಿ ಗ್ರಾಮ ನಿವಾಸಿ ಧರ್ಮಯ್ಯ (40) ಹಾಗೂ ಪತ್ನಿ ಭಾರತಿ (28) ಕೊಲೆಯಾದ ದಂಪತಿ. ಅದೇ ಗ್ರಾಮದ ಗೋವಿಂದ ಕೊಲೆ ಮಾಡಿದ ಆರೋಪಿ. ಕೃತ್ಯ ಎಸಗಿ ಗೋವಿಂದ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

    ಧರ್ಮಯ್ಯ ಹಾಗೂ ಭಾರತಿ ದಂಪತಿ ಕೂಲಿ ಕಾರ್ಮಿಕರಾಗಿದ್ದರು. ಆದರೆ ಭಾರತಿ ಗೋವಿಂದನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಚಾರ ಇತ್ತೀಚೆಗೆ ಧರ್ಮಯ್ಯನಿಗೆ ತಿಳಿದು ಪತ್ನಿಗೆ ಥಳಿಸಿದ್ದ. ಅಷ್ಟೇ ಅಲ್ಲದೆ ಗೋವಿಂದ ಜೊತೆಗೂ ಧರ್ಮಯ್ಯ ಕಳೆದ ತಿಂಗಳು ಜಗಳವಾಡಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಗೋವಿಂದ ಹಾಗೂ ಧರ್ಮಯ್ಯ ಒಂದು ತಿಂಗಳ ಹಿಂದೆಯಷ್ಟೇ ಮತ್ತೆ ಕೈ ಕೈ ಮಿಲಾಯಿಸಿದ್ದರು. ಈ ವೇಳೆ ಗೋವಿಂದ ಮಚ್ಚಿನಿಂದ ಧರ್ಮಯ್ಯನನ್ನು ಹತ್ಯೆ ಮಾಡಲು ಮುಂದಾಗಿದ್ದ. ಆದರೆ ಪತಿಯನ್ನು ರಕ್ಷಿಸಲು ಬಂದಿದ್ದ ಭಾರತಿಯ ಬೆನ್ನಿಗೆ ಮಚ್ಚಿನ ಹೊಡೆತ ಬಿದ್ದಿತ್ತು. ಅದೃಷ್ಟವಶಾಥ್ ಯಾವುದೇ ಪ್ರಾಣಹಾನಿ ಸಂಭಸಿರಲಿಲ್ಲ. ಈ ವಿಚಾರವು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬಳಿಕ ಗ್ರಾಮದ ಹಿರಿಯರು ರಾಜಿ ಸಂಧಾನ ಮಾಡಿಸಿದ್ದರು. ಹೀಗಾಗಿ ಭಾರತಿ ಗೋವಿಂದನ ಸಹವಾಸ ಬಿಟ್ಟಿದ್ದಳು ಎನ್ನಲಾಗಿದೆ.

    ತನ್ನಿಂದ ಪ್ರೇಯಸಿ ಭಾರತಿ ದೂರವಾಗಿದ್ದರಿಂದ ಗೋವಿಂದ ಹತಾಶೆಗೊಂಡಿದ್ದ. ಅಷ್ಟೇ ಅಲ್ಲದೆ ಪ್ರೇಯಸಿ ಹಾಗೂ ಆಕೆಯ ಪತಿ ಧರ್ಮಯ್ಯನ ಮೇಲೆ ಸೇಡು ತೀರಿಸಿಕೊಳ್ಳಲು ಪ್ಲ್ಯಾನ್ ಮಾಡುತ್ತಿದ್ದ. ಪ್ರೇಯಸ್ಸಿಯನ್ನು ಭೇಟಿಯಾಗಲು ಶನಿವಾರ ಆಕೆಯ ಮನೆಗೆ ಹೋಗಿದ್ದ. ಈ ವೇಳೆ ಭಾರತಿ ಹಾಗೂ ಧರ್ಮಯ್ಯ ಒಟ್ಟಾಗಿ ಗೋವಿಂದನಿಗೆ ಥಳಿಸಿದ್ದಾರೆ. ಇದರಿಂದ ಕೋಪಗೊಂಡ ಗೋವಿಂದ ಮಚ್ಚಿನಿಂದ ದಂಪತಿ ಮೇಲೆ ದಾಳಿ ಮಾಡಿ ಹತ್ಯೆಗೈದಿದ್ದಾನೆ.

    ಘಟನೆಯ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡಿದ ಎನ್.ಆರ್.ಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಎನ್.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋವಿಂದನಿಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

  • ಕೆಎಂಎಫ್‍ನಲ್ಲಿ ರೇವಣ್ಣ ಅಧಿಪತ್ಯಕ್ಕೆ ಬ್ರೇಕ್

    ಕೆಎಂಎಫ್‍ನಲ್ಲಿ ರೇವಣ್ಣ ಅಧಿಪತ್ಯಕ್ಕೆ ಬ್ರೇಕ್

    ಬೆಂಗಳೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಅಧಿಪತ್ಯದ ಹಾಸನ ಹಾಲು ಒಕ್ಕೂಟವನ್ನು ಬೇರ್ಪಡಿಸಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ.

    ಎಚ್.ಡಿ.ರೇವಣ್ಣ ಅವರಿಗೆ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ತಪ್ಪಿಸಲೆಂದೇ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವು ಹಾಸನದಿಂದ ಚಿಕ್ಕಮಗಳೂರನ್ನು ಬೇರ್ಪಡಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಚಿಕ್ಕಮಗಳೂರು ಹಾಲು ಒಕ್ಕೂಟ ರಚಿಸಲು ಸಿಎಂ ಯಡಿಯೂರಪ್ಪ ಒಪ್ಪಿಗೆ ಕೂಡ ನೀಡಿದ್ದಾರೆ. ಇದನ್ನೂ ಓದಿ: ರೇವಣ್ಣಗೆ ತಿರುಗಿದ ಬಾಣ: ‘ಕಮಲ’ದಿಂದ ‘ಕೈ-ತೆನೆ’ ಬೆಂಬಲಿತ ನಿರ್ದೇಶಕರು ಹೈಜಾಕ್!

    ತಕ್ಷಣ ಹಾಸನ ಒಕ್ಕೂಟದಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಚಿಕ್ಕಮಗಳೂರು ಪ್ರತ್ಯೇಕ ಹಾಲು ಒಕ್ಕೂಟ ರಚನೆಗೆ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ ಎಂದು ಸಚಿವ ಸಿಟಿ ರವಿ ತಿಳಿಸಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಲಿದೆ. ಆದರೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಅಧ್ಯಕ್ಷರನ್ನಾಗಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ನಿರ್ದೇಶಕರನ್ನು ಮುಂಬೈನ ಹೋಟೆಲ್‍ನಲ್ಲಿ ಬಿಜೆಪಿ ಇರಿಸಿದೆ.

  • ಚಾರ್ಮಾಡಿ ಘಾಟ್‍ನಲ್ಲಿ ವಾಹನ ಸಂಚಾರ ಆರಂಭ

    ಚಾರ್ಮಾಡಿ ಘಾಟ್‍ನಲ್ಲಿ ವಾಹನ ಸಂಚಾರ ಆರಂಭ

    ಚಿಕ್ಕಮಗಳೂರು: ಭಾರೀ ಮಳೆಯಿಂದಾಗಿ ಸಂಪೂರ್ಣವಾಗಿ ಸ್ತಬ್ಧವಾಗಿದ್ದ ಚಾರ್ಮಾಡಿ ಘಾಟ್‍ನಲ್ಲಿ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ.

    ಕಾರು, ಬೈಕ್, ಅಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಸಣ್ಣ ವಾಹನಗಳ ಸಂಚಾರವು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಆರಂಭವಾಗಲಿದೆ. ರಾತ್ರಿ ವೇಳೆ ಸಂಚಾರಕ್ಕೆ ತಡೆ ನೀಡಿರುವ ಜಿಲ್ಲಾಡಳಿತವು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಿದೆ. ಆದರೆ ಸರ್ಕಾರಿ ಬಸ್ ಸೇರಿದಂತೆ ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

    ಧಾರಾಕಾರ ಮಳೆಯಾಗಿ ಘಾಟ್ ರಸ್ತೆಯಲ್ಲಿ ಅಲ್ಲಲ್ಲಿ ಕುಸಿತ ಕಂಡಿರುವುದರಿಂದ ಸಂಚಾರ ಸ್ಥಗಿತಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ನೀಡಿದ್ದರು. ಇದರಿಂದಾಗಿ ಘಾಟ್ ಮಾರ್ಗದ ಚಿಕ್ಕಮಗಳೂರು – ದಕ್ಷಿಣ ಕನ್ನಡ, ಧರ್ಮಸ್ಥಳ ಸಂಪರ್ಕ ಕಡಿತವಾಗಿತ್ತು. ಸದ್ಯ ರಸ್ತೆಯ ಮೇಲೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಲಾಗಿದೆ.

    ಚಾರ್ಮಾಡಿ ಘಾಟ್ ವಾಹನ ಸಂಚಾರವನ್ನು ಚಿಕ್ಕಮಗಳೂರು ಜಿಲ್ಲಾಡಳಿತವು ಸೆಪ್ಟೆಂಬರ್ 14ರ ವರೆಗೆ ನಿಷೇಧಿಸಿತ್ತು. ಆದರೆ ಪ್ರಯಾಣಿಕರ ಸಮಸ್ಯೆ ಅರಿತ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು, ಲಘು ವಾಹನಗಳಿಗೆ ಅವಕಾಶ ನೀಡಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.

  • ಸಿಎಂ ಎದುರೇ ಅಧಿಕಾರಿಗಳಿಗೆ ನೆರೆ ಸಂತ್ರಸ್ತರಿಂದ ತರಾಟೆ

    ಸಿಎಂ ಎದುರೇ ಅಧಿಕಾರಿಗಳಿಗೆ ನೆರೆ ಸಂತ್ರಸ್ತರಿಂದ ತರಾಟೆ

    – ಬಂದ್ರು ಹೋದ್ರು: ಸಿಎಂ ವಿರುದ್ಧವೂ ಕಿಡಿ

    ಚಿಕ್ಕಮಗಳೂರು: ನೆರೆ ಸಂತ್ರಸ್ತರೊಬ್ಬರು ಸಿಎಂ ಎದುರೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಇಂದು ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದಲ್ಲಿ ನಡೆಯಿತು.

    ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮಕ್ಕೆ ಭೇಟಿ ನೀಡಿದ ಸಿಎಂ ಯಡಿಯೂಪ್ಪ ಅವರು ನೆರೆ ಹಾನಿ ಪ್ರದೇಶ ವೀಕ್ಷಿಸಿದರು. ಈ ವೇಳೆ ಮೇಗೂರ್ ಗ್ರಾಮದ ಜಯಂತ್ ಅವರು, ಭಾರೀ ಮಳೆಯಿಂದಾಗಿ ನಮ್ಮ ಗ್ರಾಮದಲ್ಲಿ 12 ಮನೆಗಳು ಬಿದ್ದಿವೆ. ಇಲ್ಲಿವರೆಗೂ ಯಾವುದೇ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ. ಅವರು ನಮ್ಮ ಬಗ್ಗೆ ನಿಷ್ಕಾಳಜಿ ತೋರುತ್ತಿದ್ದಾರೆ ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

    ಮಲೆಮನೆಯಲ್ಲಿ ಕೇವಲ 8 ಮನೆಗಳು ಮಾತ್ರ ಮಳೆಗೆ ಹಾನಿಯಾಗಿವೆ. ಗದ್ದೆ, ಬೆಳೆಗೆ ಯಾವುದೇ ಹಾನಿಯಾಗಿಲ್ಲ. ಆದರೆ ನಮ್ಮ ಗ್ರಾಮದಲ್ಲಿ 12 ಮನೆಗಳು ಬಿದ್ದಿವೆ. ಗದ್ದೆಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ. ಇಲ್ಲಿವರೆಗೂ ಯಾವ ಅಧಿಕಾರಿಯೂ ಗ್ರಾಮಕ್ಕೆ ಭೇಟಿ ನೀಡಿ ನಮ್ಮ ಸಮಸ್ಯೆ ಆಲಿಸಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

    ಮಲೆಮನೆಗೆ ಸಚಿವರಾದ ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಮಾಜಿ ಸಿಎಂ ಕುಮಾರಸ್ವಾನಿ ಸೇರಿದಂತೆ ಅನೇಕ ನಾಯಕರು ಭೇಟಿ ನೀಡಿದ್ದಾರೆ. ಆದರೆ ನಮ್ಮ ಗ್ರಾಮಕ್ಕೆ ಯಾವುದೇ ನಾಯಕರು ಬರಲಿಲ್ಲ. ಇಲ್ಲಿವರೆಗೂ ಯಾವುದೇ ಪರಿಹಾರ ಸಾಮಗ್ರಿ ನೀಡಿಲ್ಲ. ನೆರೆ ವೀಕ್ಷಣೆಗೆ ಬಂದವರೆಲ್ಲ ಮಲೆಮನೆಗೆ ಮಾತ್ರ ಭೇಟಿ ನೀಡಿ ಹಿಂತಿರುಗುತ್ತಾರೆ. ಮೇಗೂರ್ ಗ್ರಾಮಕ್ಕೆ ಬಾರದಂತೆ ಕೆಲವರು ದಾರಿತಪ್ಪಿಸುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

    ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಜಯಂತ್ ಅವರು, ಹಳ್ಳ ಬಂದು ಮೇಗೂರ್ ಗ್ರಾಮದ 13 ಮನೆಗಳ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ವಿದ್ಯುತ್ ಕಡಿತವಾಗಿದೆ. ರಸ್ತೆ ಸಂಪರ್ಕವಿಲ್ಲ. ನಮ್ಮ ಕಷ್ಟವನ್ನು ಐದು-ಹತ್ತು ನಿಮಿಷದಲ್ಲಿ ಹೇಳಿಕೊಳ್ಳುವುದಕ್ಕೆ ಆಗುತ್ತಾ? ಸಿಎಂ ಬಂದ್ರು ಹತ್ತೇ ನಿಮಿಷದಲ್ಲಿ ಮಲೆಮನೆಯಿಂದ ವಾಪಸ್ ಹೋದರು. ನಮ್ಮ ಗ್ರಾಮಕ್ಕೆ ಬರಲೇ ಇಲ್ಲ. ಅವರಿಗೆ ಅವಸ ಏನು ಇತ್ತೋ ಏನೋ ಹೋಗಿ ಬಿಟ್ಟರು ಎಂದು ಸಿಎಂ ವಿರುದ್ಧ ಅಸಮಾಧಾನ ಹೊರ ಹಾಕಿದರು.

  • ಹತ್ತೇ ನಿಮಿಷದಲ್ಲಿ ನೆರೆ ಹಾನಿ ಪ್ರದೇಶ ವೀಕ್ಷಿಸಿ ವಾಪಸ್ಸಾದ ಸಿಎಂ

    ಹತ್ತೇ ನಿಮಿಷದಲ್ಲಿ ನೆರೆ ಹಾನಿ ಪ್ರದೇಶ ವೀಕ್ಷಿಸಿ ವಾಪಸ್ಸಾದ ಸಿಎಂ

    ಚಿಕ್ಕಮಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೇವಲ ಹತ್ತೇ ನಿಮಿಷದಲ್ಲಿ ಪ್ರವಾಹ ಪೀಡಿತ ಪ್ರದೇಶ ವೀಕ್ಷಿಸಿ, ಸಂತ್ರಸ್ತರನ್ನು ಮಾತನಾಡಿಸಿ ವಾಪಸ್ಸಾದ ಪ್ರಸಂಗ ಇಂದು ಜಿಲ್ಲೆಯಲ್ಲಿ ನಡೆಯಿತು.

    ಭಾರೀ ಮಳೆಯಿಂದಾಗಿ ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ ಜನರ ಜೀವನ ಅಸ್ತವ್ಯಸ್ತವಾಗಿದೆ. ಮಹಾ ಮಳೆಗೆ ಗುಡ್ಡ ಕುಸಿದು 6 ಮನೆ ಹಾಗೂ 2 ದೇವಾಲಯಗಳು ಸಂಪೂರ್ಣ ಕೊಚ್ಚಿ ಹೋಗಿವೆ. ಸದ್ಯ ಸಂತ್ರಸ್ತರು ಪರಿಹಾರ ಕೇಂದ್ರ, ಸಂಬಂಧಿಕರ ಮನೆಯಲ್ಲಿ ಇದ್ದು ಜೀವನ ನಡೆಸುತ್ತಿದ್ದಾರೆ.

    ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಚಿವ ಸಿ.ಟಿ.ರವಿ, ಸಂಸದೆ ಶೋಭಾ ಕರಂದ್ಲಾಜೆ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರು ಸಾಥ್ ನೀಡಿದರು. ಹತ್ತೇ ನಿಮಿಷದಲ್ಲಿ ನೆರೆ ಹಾನಿ ಪ್ರದೇಶ ವೀಕ್ಷಿಸಿ ವಾಪಸ್ ಹೋದ ಸಿಎಂ ಹಾಗೂ ನಾಯಕರ ವಿರುದ್ಧ ಸ್ಥಳೀಯರು ಅಸಮಾಧಾನ ಹೊರ ಹಾಕಿದ್ದಾರೆ.

    ಮಲೆಮನೆ ಗ್ರಾಮಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಅವರು ದೂರದಲ್ಲೇ ನಿಂತು ನೆರೆ ಹಾನಿ ಪ್ರದೇಶ ವೀಕ್ಷಿಸಿದರು. ಈ ವೇಳೆ ಸಂತ್ರಸ್ತರು ಸಿಎಂ ಬಿಎಸ್‍ವೈ ಮುಂದೆ ಕಣ್ಣೀರಿಟ್ಟರು. ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಜನರ ಸಮಸ್ಯೆಯನ್ನು ಹೇಳಿಕೊಳ್ಳುತ್ತಿದ್ದಂತೆ ಸಿಎಂ ಅಲ್ಲಿಂದ ಹೊರಟು ಹೋದರು.

    ಇದಕ್ಕೂ ಮುನ್ನ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಮೂಡಿಗೆರೆ ತಾಲೂಕಿನಲ್ಲಿ ಆಗಿರುವ ಅನಾಹುತ ಬೇರೆಲ್ಲೂ ಆಗಿಲ್ಲ. ಇತರೆ ಅಭಿವೃದ್ಧಿ ಕಾಮಗಾರಿ ನಿಂತರೂ ಪರವಾಗಿಲ್ಲ ಸಂತ್ರಸ್ತರಿಗೆ ಸೂರು ಕಲ್ಪಿಸುವುದು ನಮ್ಮ ಮೊದಲ ಆದ್ಯತೆ. ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಕೇಂದ್ರದ ನೆರವಿನ ಜೊತೆಗೆ ರಾಜ್ಯದಿಂದಲೂ ಎಷ್ಟು ಬೇಕಾದರೂ ಹಣ ಕೊಡಲು ಸಿದ್ಧ ಎಂದು ಭರವಸೆ ನೀಡಿದರು.

    ನೆರೆ ಕುರಿತು ಚರ್ಚೆ ನಡೆಸಲು ಅಧಿವೇಶನ ಕರೆಯುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಧಿವೇಶನ ಕರೆಯುವುದಕ್ಕೆ ಯಾವುದೇ ಅಭ್ಯಂತರವಿಲ್ಲ, ಅಧಿವೇಶನ ಕರೆದು ಚರ್ಚೆ ಮಾಡುತ್ತೇನೆ ಎಂದರು. ಇದೇ ವೇಳೆ ಖಾತೆಯ ಹಂಚಿಕೆಯಲ್ಲಿ ಸಚಿವ ಸಿ.ಟಿ.ರವಿ ಅವರ ಅಸಮಾಧಾನದ ಬಗ್ಗೆ ಪ್ರಶ್ನೆ ಕೇಳುತ್ತಿದ್ದಂತೆ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ಸಿಎಂ, ನಾನು ಬಂದಿರುವುದು ನೆರೆ ವೀಕ್ಷಣೆಗೆ ಖಾತೆ ಹಂಚಿಕೆ ವಿಚಾರಕ್ಕಲ್ಲ ಎಂದು ಹೇಳಿದರು.

  • ಉದ್ಯಮಿ ಸಿದ್ಧಾರ್ಥ್ ಹೆಗಡೆ ತಂದೆ ನಿಧನ

    ಉದ್ಯಮಿ ಸಿದ್ಧಾರ್ಥ್ ಹೆಗಡೆ ತಂದೆ ನಿಧನ

    ಚಿಕ್ಕಮಗಳೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಮರಣವಾದ ಒಂದು ತಿಂಗಳೊಳಗೆ ಅವರ ತಂದೆ ಗಂಗಯ್ಯ ಹೆಗ್ಡೆ(96) ನಿಧನರಾಗಿದ್ದಾರೆ.

    ಕಳೆದ ಒಂದು ತಿಂಗಳಿನಿಂದ ಗಂಗಯ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋಮಾದಲ್ಲಿದ್ದ ಗಂಗಯ್ಯ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಕಾರಿಯಾಗದೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.

    ಉದ್ಯಮಿ ಸಿದ್ಧಾರ್ಥ್ ಹೆಗ್ಡೆ ಸಾವಿನ ವಿಚಾರವೂ ತಂದೆಗೆ ತಿಳಿದಿರಲಿಲ್ಲ. ಮಗ ಸಿದ್ಧಾರ್ಥ್ ಹೆಗಡೆ ಕಳೆದ ತಿಂಗಳು 29ರಂದು ಮಂಗಳೂರಿನಲ್ಲಿ ಉಳ್ಳಾಲ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದರು. ಆ ಬಳಿಕ ಅವರ ಪತ್ತೆಗೆ ಎಲ್ಲಾ ರೀತಿಯಲ್ಲೂ ಕಾರ್ಯಾಚರಣೆಯನ್ನು ನಡೆಸಲಾಗುತ್ತಿತ್ತು. ಈ ಮಧ್ಯೆ ಮೀನುಗಾರರೊಬ್ಬರಿಗೆ ಸಿದ್ಧಾರ್ಥ್ ಶವ ತೇಲುತ್ತಿರುವುದು ಕಂಡು ಬಂದಿದೆ. ನಂತರ ಅವರು ಶವವನ್ನು ದೋಣಿ ಬದಿಯಲ್ಲಿ ಹಿಡಿದುಕೊಂಡು ದಡಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ವೈರಲ್ ಆಯ್ತು ಅಪ್ಪನ ಜೊತೆಗಿನ ಸಿದ್ದಾರ್ಥ್ ಫೋಟೋ

    ಮಂಗಳೂರಿನ ಆಸ್ಪತ್ರೆಯಲ್ಲಿ ಮರಣೋತ್ತರ ಪರಿಖ್ಷೆ ನಡೆಸಿ ಪಾರ್ಥಿವ ಶರೀರವನ್ನು ಚಿಕ್ಕಮಗಳೂರಿಗೆ ರವಾನಿ ಅವರ ಸ್ವಗ್ರಾಮ ಮೂಡಿಗೆರೆಯ ಚೇತನಹಳ್ಳಿ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಇದೀಗ ತಂದೆಯ ಅಂತ್ಯಕ್ರಿಯೆ ಕೂಡ ಸೋಮವಾರ ಚೇತನಹಳ್ಳಿ ಎಸ್ಟೇಟ್ ನಲ್ಲಿ ನಡೆಯಲಿದೆ ಎಂಬುದಾಗಿ ಅವರ ಕುಟುಂಬ ಮೂಲಗಳು ತಿಳಿಸಿವೆ.