Tag: Chikkamagaluru

  • ರಕ್ತಚೆಲ್ಲಿಯಾದ್ರೂ ದತ್ತಪೀಠವನ್ನ ಹಿಂದೂ ಪೀಠವಾಗಿಸ್ತೇವೆ- ಮುತಾಲಿಕ್

    ರಕ್ತಚೆಲ್ಲಿಯಾದ್ರೂ ದತ್ತಪೀಠವನ್ನ ಹಿಂದೂ ಪೀಠವಾಗಿಸ್ತೇವೆ- ಮುತಾಲಿಕ್

    ಚಿಕ್ಕಮಗಳೂರು: ರಕ್ತಚೆಲ್ಲಿಯಾದರು ದತ್ತಪೀಠವನ್ನ ಹಿಂದೂಗಳ ಪೀಠವಾಗಿಸುತ್ತೇವೆ ಎಂದು ಸರ್ಕಾರಕ್ಕೆ ಸ್ಪಷ್ಟಪಡಿಸುತ್ತೇವೆ ಅಂತ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ನಗರದಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಇಂದು ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಮುತಾಲಿಕ್ ರಾಜಕೀಯ ಮುಖಂಡರ ವಿಳಂಬ ನೀತಿಯ ವಿರುದ್ಧ ವಾಗ್ದಾಳಿ ನಡೆಸಿದರು.

    ದತ್ತಪೀಠ ವಿವಾದವನ್ನು ಶಾಂತಿಯಿಂದಲೇ ಬಗೆಹರಿಸಬಹುದು. ಆದರೆ ವಿವಾದವನ್ನು ಜೀವಂತವಾಗಿರುವಂತೆ ರಾಜಕಾರಣಿಗಳು, ಬುದ್ಧಿಜೀವಿಗಳು ನೋಡಿಕೊಳ್ಳುತ್ತಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡ ಅವರು ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿದ್ದರು. ಇಂದು ದೇವೇಗೌಡ ಅವರ ಪುತ್ರರಾದ ಎಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾರೆ. ತಂದೆಯಂತೆ ಇಂದು ದತ್ತಪೀಠ ವಿವಾದವನ್ನ ಬಗೆಹರಿಸಿ ಹಿಂದೂಗಳಿಗೆ ನೀಡಬೇಕೆಂದು ಎಂದು ಮನವಿ ಮಾಡಿದರು.

    ದತ್ತಪೀಠದ ಪ್ರದೇಶದಲ್ಲಿರುವ ನಾಗೇನಹಳ್ಳಿ ಬಳಿರುವ ಬಾಬಾಬುಡನ್ ದರ್ಗಾವನ್ನು ಮುಸ್ಲಿಮರಿಗೆ ಒಪ್ಪಿಸಿ, ಈಗ ಇರುವ ಶ್ರೀ ಗುರು ದತ್ತಾತ್ರೇಯ ಪೀಠವನ್ನು ಹಿಂದೂಗಳಿಗೆ ನೀಡುವ ಮೂಲಕ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಬಹುದು. ಕಾಂಗ್ರೆಸ್ ಹಾಗೂ ಬುದ್ಧಿಜೀವಿಗಳಿಗೆ ದತ್ತಪೀಠದ ವಿವಾದ ಜೀವಂತವಾಗಿರಬೇಕಿದೆ. ಬುದ್ಧಿ ಜೀವಿಗಳ ಕಿತಾಪತಿ ಇರುವವರೆಗೂ ನೀತಿ ನಿಯಮಗಳು, ಬಂಧನಗಳು ಸಾಕಷ್ಟು ಇರುತ್ತದೆ. ಇವುಗಳೆಲ್ಲ ಇದ್ದರು ಕೂಡ ಭಕ್ತರು ಯಾವುದಕ್ಕೂ ಹೆದರದೆ ಹೋರಾಟದಲ್ಲಿ ಭಾಗವಹಿಸಿದ್ದಾರೆ. ನಮ್ಮ ಹೋರಾಟವನ್ನು ಯಾವುದೇ ಕಾರಣಕ್ಕೂ ತಡೆಯಲು ಸಾಧ್ಯವಿಲ್ಲ. ದತ್ತಪೀಠ ಹಿಂದೂಗಳ ಪೀಠ ಆಗುವವರೆಗೂ ನಮ್ಮ ಹೋರಾಟ ನಿರಂತರ ಎಂದು ಖಡಕ್ ಆಗಿ ನುಡಿದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಂದೋಬಸ್ತ್ ನೋಡಲು ತೆರಳ್ತಿದ್ದ ಜಿಲ್ಲಾಧಿಕಾರಿಯ ಕಾರ್ ಅಪಘಾತ!

    ಬಂದೋಬಸ್ತ್ ನೋಡಲು ತೆರಳ್ತಿದ್ದ ಜಿಲ್ಲಾಧಿಕಾರಿಯ ಕಾರ್ ಅಪಘಾತ!

    ಚಿಕ್ಕಮಗಳೂರು: ಇಂದು ನಡೆಯಲಿರುವ ದತ್ತಮಾಲಾ ಅಭಿಯಾನದ ಬಂದೋಬಸ್ತ್ ನೋಡಲು ತೆರಳುತ್ತಿದ್ದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಕಾರು ಅಪಘಾತಕ್ಕೀಡಾಗಿದೆ.

    ಡಿಸಿ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಡಿಸಿ ಕಾರಿನ ಬಂಪರ್ ಹಾಗೂ ಇಂಡಿಕೇಟರ್ ಲೈಟ್ ಪುಡಿಪುಡಿಯಾಗಿದೆ. ಶುಕ್ರವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರು ಚಿಕ್ಕಮಗಳೂರಿನಿಂದ ಮುಳ್ಳಯ್ಯನಗಿರಿ ಮಾರ್ಗದಲ್ಲಿ ದತ್ತಪೀಠಕ್ಕೆ ಹೋಗುತ್ತಿದ್ದರು.

    ಈ ವೇಳೆ ಚನ್ನಗೊಂಡನಹಳ್ಳಿ ಕ್ರಾಸ್ ಬಳಿ ಹಾಸನ ಮೂಲದ ಫೋರ್ಡ್ ಐಕಾನ್ ಕಾರು ಹಾಗೂ ಡಿಸಿ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್ ಜಿಲ್ಲಾಧಿಕಾರಿ ಅಪಾಯದಿಂದ ಪಾರಾಗಿದ್ದಾರೆ. ಹಾಸನದಿಂದ ನಾಲ್ವರು ಯುವಕರು ಚಿಕ್ಕಮಗಳೂರಿಗೆಂದು ಪ್ರವಾಸಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

    ಈ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭೂಮಂಡಲದಲ್ಲಿ ವಿಶೇಷವಾಗಿ ಪತ್ತೆ ಆಯ್ತು ನಾಗರಹಾವು!

    ಭೂಮಂಡಲದಲ್ಲಿ ವಿಶೇಷವಾಗಿ ಪತ್ತೆ ಆಯ್ತು ನಾಗರಹಾವು!

    ಚಿಕ್ಕಮಗಳೂರು: ಭೂಮಂಡಲದಲ್ಲಿ ವಿಭಿನ್ನವಾಗಿ ನಾಗರಹಾವು ಕಂಡು ಬಂದಿದ್ದು, ಸೂರ್ಯನ ಕಿರಣಕ್ಕೆ ಹಾವಿನ ತಲೆ ಹೊಳೆಯುತ್ತಿರುವ ಫೋಟೋ ಈಗ ವೈರಲ್ ಆಗಿದೆ.

    ಜಿಲ್ಲೆಯ ಕೊಪ್ಪ ತಾಲೂಕಿನ ಹೊಳೆಮಕ್ಕಿ ಗ್ರಾಮದ ತೋಟದಲ್ಲಿ ನಾಯಿ ಹಾಗೂ ಹಾವಿನ ಕಾಳಗದ ವೇಳೆ ಅಪರೂಪದ ಫೋಟೋ ಪತ್ತೆಯಾಗಿದೆ.

    ಅವಿನಾಶ್ ಎಂಬವರ ತೋಟದಲ್ಲಿ ನಾಯಿ ಮತ್ತು ನಾಗರಹಾವು ಮಧ್ಯೆ ಅರ್ಧ ಗಂಟೆಗಳ ಕಾಲ ಜಗಳ ನಡೆದಿದೆ. ಶ್ವಾನದ ಮೇಲೆ ನಾಗರಾಜ ರೋಷಾವೇಷವಾಗಿ ಹೋರಾಡಿದೆ. ಇತ್ತ ನಾಗರ ಹಾವು ನಾಯಿಯ ಜಗಳ ಕಂಡು ಮಾಲೀಕರು ದಂಗಾಗಿದ್ದಾರೆ.

    ಸ್ವಲ್ಪ ಹೊತ್ತಾದ ಬಳಿಕ ನಾಯಿ ಸಹವಾಸವೇ ಬೇಡ ಎಂದು ನಾಗರ ಹಾವು ವಾಪಸ್ ಹೋಗಿದೆ. ಈ ಘಟನೆಯನ್ನು ತೋಟದ ಮಾಲೀಕರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=U6CV8gPdtNY

  • 2 ದಿನಗಳಿಂದ ಬಿಲದಲ್ಲಿ ಅಡಗಿ ಕುಳ್ತಿದ್ದ ಕಾಳಿಂಗ ಸರ್ಪ ಸೆರೆ

    2 ದಿನಗಳಿಂದ ಬಿಲದಲ್ಲಿ ಅಡಗಿ ಕುಳ್ತಿದ್ದ ಕಾಳಿಂಗ ಸರ್ಪ ಸೆರೆ

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ.

    ಮೂಡಿಗೆರೆ ತಾಲೂಕಿನ ನೇರಂಕಿ ಗ್ರಾಮದ ರಾಮದಾಸ್ ಗೌಡರವರ ತೋಟದಲ್ಲಿ ಕಾಳಿಂಗವೊಂದು ಎರಡು ದಿನಗಳಿಂದ ಬೀಡು ಬಿಟ್ಟಿತ್ತು. ತೋಟದ ಕೂಲಿ ಕಾರ್ಮಿಕರು ನೋಡಿ ಸುಮ್ಮನಾಗಿದ್ದರು. ಆದರೆ ತೋಟದಲ್ಲೆಲ್ಲಾ ಓಡಾಡುತ್ತಿದ್ದ ಕಾಳಿಂಗ ಕೂಲಿ ಕಾರ್ಮಿಕರಲ್ಲಿ ಭಯ ಮೂಡಿಸಿತ್ತು.

    ಕೂಲಿಯಾಳುಗಳು ಕಾಳಿಂಗ ಸರ್ಪ ದೊಡ್ಡದಾದ ಬಿಲ ಸೇರಿಕೊಂಡಿದ್ದನ್ನ ಗಮನಿಸಿದ್ದಾರೆ. ಬಳಿಕ ಅವರು ತೋಟದ ಮಾಲೀಕರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ತೋಟದ ಮಾಲೀಕ ಉರಗ ತಜ್ಞ ಆರೀಫ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಉರಗ ತಜ್ಞ ಆರೀಫ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬಂದು ಹರಸಾಹಸಪಟ್ಟು ಬಿಲದೊಳಗಿದ್ದ ಕಾಳಿಂಗ ಸರ್ಪವನ್ನು ಸೆರೆ ಹಿಡಿದಿದ್ದಾರೆ. ಬೂದು ಬಣ್ಣದಿಂದ ಕೂಡಿರುವ ಈ ಸರ್ಪ ಹೆಣ್ಣು ಕಾಳಿಂಗವಾಗಿದೆ. ಗಂಡು ಜಾತಿಗೆ ಸೇರಿದ ಕಾಳಿಂಗಗಳು ಕಪ್ಪನೆ ಬಣ್ಣದಿಂದ ಕೂಡಿರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಯುಧ ಪೂಜೆಯಂದೇ ವಿಧಿಯಾಟ – ಬೈಕ್ ತೊಳೆಯಲು ತೆರಳಿದ್ದ ಯುವಕರು ನೀರುಪಾಲು

    ಆಯುಧ ಪೂಜೆಯಂದೇ ವಿಧಿಯಾಟ – ಬೈಕ್ ತೊಳೆಯಲು ತೆರಳಿದ್ದ ಯುವಕರು ನೀರುಪಾಲು

    ಚಿಕ್ಕಮಗಳೂರು: ಬೈಕ್ ತೊಳೆಯಲು ಕೆರೆಗೆ ಹೋದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

    ಹೇಮಂತ್ (18), ವಿಜಯ್ (21), ಶಿವರಾಜ್ (14) ಮೃತ ಯುವಕರಾಗಿದ್ದು, ಆಯುಧ ಪೂಜೆಯ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7.30ರ ಸುಮಾರಿಗೆ ಗ್ರಾಮದ ಕಟ್ಟೆ ಕೆರೆಯಲ್ಲಿ ಬೈಕ್ ತೊಳೆಯಲು ಹೋಗಿದ್ದರು. ಈ ವೇಳೆ ಓರ್ವ ಯುವಕ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

    ಮೃತ ಮೂವರು ಯುವಕರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೈಕ್ ಮಾತ್ರ ಕೆರೆ ಬಳಿ ನಿಂತಿರುವುದನ್ನ ಕಂಡ ಗ್ರಾಮಸ್ಥರು ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಹಬ್ಬದ ದಿನದಂತೆ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿರುವ ಲಿಂಗದಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯದಲ್ಲೆಡೆ ಮಳೆಯ ಅನಾಹುತ – ಐವರ ಬಲಿ ಪಡೆದು ಸಿಡಿಲಿನ ಆರ್ಭಟ

    ರಾಜ್ಯದಲ್ಲೆಡೆ ಮಳೆಯ ಅನಾಹುತ – ಐವರ ಬಲಿ ಪಡೆದು ಸಿಡಿಲಿನ ಆರ್ಭಟ

    – ಮೂಡಿಗೆರೆಯಲ್ಲಿ ಪ್ರವಾಹದಂತಹ ಕಾಟ

    ಬೆಂಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಮಂಗಳವಾರ ಸಂಜೆ ಸುಮಾರು ಒಂದು ಗಂಟೆ ಸುರಿದ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆ-ಗಾಳಿಗೆ ತಾಲೂಕು ಕಚೇರಿಯ ಕಾಂಪೌಂಡ್ ಕುಸಿದು ಬಿದ್ದಿದ್ದರೆ, ಅಂಗಡಿಯ ನಾಮಫಲಕದ ಬೋರ್ಡ್ ಗಳು ಕೂಡ ನೆಲಕ್ಕುರುಳಿವೆ.

    ಧಾರಾಕಾರವಾಗಿ ಸುರಿದ ಮಳೆಯಿಂದ ರಸ್ತೆಯ ತುಂಬೆಲ್ಲಾ ಮಳೆ ನೀರು ಪ್ರವಾಹದಂತೆ ಹರಿದಿದೆ. ಪ್ರವಾಹದ ರೀತಿಯಲ್ಲಿ ಮಳೆ ನೀರನ್ನ ಕಂಡ ಮೂಡಿಗೆರೆ ಜನ ಆತಂಕಕ್ಕೀಡಾಗಿದ್ದಾರೆ. ಈಗ ಆಗಿರೋ ಮಳೆ ಅವಾಂತರಗಳಿಂದ ಜನ ಹೊರಬರೋದಕ್ಕೆ ಕನಿಷ್ಠ ಮೂರು ವರ್ಷಗಳು ಬೇಕು ಅಂತೆ. ಮತ್ತೆ ಈ ರೀತಿ ಮಳೆ ಸುರಿಯುವುದನ್ನು ಕಂಡ ಮಲೆನಾಡಿಗರು ಭವಿಷ್ಯ ನೆನಪಿಸಿಕೊಂಡು ವರುಣದೇವನಿಗೆ ಹಿಡಿಶಾಪ ಹಾಕುತ್ತಿದ್ದಾರೆ.

    ಕರಾವಳಿ ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಕರ್ನಾಟಕ ಭಾಗದಲ್ಲು ಭಾರೀ ಮಳೆ ಆಗಿದೆ. ಸಿಡಿಲು ಹೊಡೆತಕ್ಕೆ ಸಿಲುಕಿ ಹಲವರು ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಸುರಿದ ಧಾರಕಾರ ಮಳೆ ದಸರಾ ಕಾರ್ಯಕ್ರಮಗಳಿಗೆ ಅಡ್ಡಿ ಮಾಡಿತು. ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ತಳೇವಾಡ ಗ್ರಾಮದಲ್ಲಿ ಸಿಡಿಲಿಗೆ ಮರದಡಿ ಕುಳಿತಿದ್ದ ಬಾಲಕಿ ಹಾಗೂ ಬಾಲಕಿಯ ಚಿಕ್ಕಮ್ಮ ಬಲಿಯಾಗಿದ್ದಾರೆ. ದಸರಾ ರಜೆಗೆ ಚಿಕ್ಕಮ್ಮನ ಮನೆಗೆ ಬಂದಿದ್ದ ಬಾಲಕಿ ಸಾವಿತ್ರಿ ಸಿಲಿಡಿಗೆ ಸಿಲುಕಿ ಸಾವನ್ನಪ್ಪಿದ್ದಾಳೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಮೀಪದ ಹೊಲದಲ್ಲಿ ರೈತ ಚಂದ್ರಪ್ಪ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಬಳ್ಳಾರಿಯ ಸಿರುಗುಪ್ಪ ತಾಲೂಕಿನ ಮೈಲಾರಪುರದಲ್ಲಿ ರೈತರೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕೋಣನತಲೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಗಾಯಗೊಂಡಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿಯ ವಾಡಿ ಪಟ್ಟಣದಲ್ಲಿ ಧಾರಾಕಾರ ಮಳೆ ಆಗಿದ್ದು, ಹಲವು ಬಡಾವಣೆಗೆ ನೀರು ನುಗ್ಗಿ, ಮನೆಗಳು ಜಲಾವೃತವಾಗಿವೆ. ಜನ ನಿದ್ದೆಯಿಲ್ಲದ ರಾತ್ರಿಗಳನ್ನ ಕಳೆದಿದ್ದಾರೆ. ಉಡುಪಿಯಲ್ಲಿ ಭಾರೀ ಮಳೆ ಆಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹಲವೆಡೆ ಸಂಜೆ ಸುರಿದ ಧಾರಕಾರ ಮಳೆಗೆ, ಇಲ್ಲಿನ ಮಾರುಕಟ್ಟೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸತತ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ, ತಾಲೂಕು ಪಂಚಾಯತಿ ವತಿಯಿಂದ ನಿರ್ಮಿಸಲಾಗಿದ್ದ ಮಾರುಕಟ್ಟೆಗೆ ನೀರು ನುಗ್ಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿನ ತರಕಾರಿಗಳೆಲ್ಲ ಮಳೆ ನೀರಲ್ಲಿ ನೆನೆದು ಹಾಳಾಗಿವೆ. ತಮ್ಮ ಅಂಗಡಿಗಳಿಗೆ ನುಗ್ಗಿದ ನೀರನ್ನ ಹೊರಹಾಕಲು ವ್ಯಾಪಾರಿಗಳು ಹರಸಾಹಸ ಪಟ್ಟರು. ಅವೈಜ್ಞಾನಿಕವಾಗಿ ಮಾರುಕಟ್ಟೆಯನ್ನ ನಿರ್ಮಿಸಿದ್ದಾರೆಂದು, ತಾಲೂಕು ಪಂಚಾಯತಿ ಅಧಿಕಾರಿಗಳ ವಿರುದ್ಧ ಇಲ್ಲಿನ ವರ್ತಕರು ಹಿಡಿಶಾಪ ಹಾಕಿದರು. ಮಾರುಕಟ್ಟೆಯ ತುಂಬಾ ಚರಂಡಿ ಹಾಗೂ ಮಳೆಯ ನೀರು ನುಗ್ಗಿ ಅವಾಂತರವನ್ನ ಸೃಷ್ಟಿ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 2 ದಿನದಿಂದ ಮನೆಯಲ್ಲಿ ಅವಿತು ಕುಳ್ತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

    2 ದಿನದಿಂದ ಮನೆಯಲ್ಲಿ ಅವಿತು ಕುಳ್ತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

    ಚಿಕ್ಕಮಗಳೂರು: ಎರಡು ದಿನಗಳಿಂದ ಮನೆಯೊಳಗೆ ಅವಿತು ಕುಳಿತಿದ್ದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.

    ಪಟ್ಟಣದ ಪ್ರಶಾಂತ್ ಎಂಬವರ ಮನೆಯ ಆವರಣದಲ್ಲಿ ಎರಡು ದಿನಗಳಿಂದ ಕಾಳಿಂಗ ಬೀಡುಬಿಟ್ಟಿತ್ತು. ಸರ್ಪಗಳು ಒಂದೇ ಜಾಗದಲ್ಲಿ ಇರೋದಿಲ್ಲ ಹೋಗುತ್ತದೆ ಎಂದು ಪ್ರಶಾಂತ್ ಮನೆಯವರು ಕೂಡ ಸುಮ್ಮನಾಗಿದ್ದರು. ಆದರೆ ಎರಡು ದಿನವಾದರೂ ಕಾಳಿಂಗ ಸರ್ಪ ಜಾಗ ಖಾಲಿ ಮಾಡಿರಲಿಲ್ಲ.

    ಈ ಹಿನ್ನೆಲೆಯಲ್ಲಿ ಪ್ರಶಾಂತ್ ಉರಗ ತಜ್ಞ ಹರೀಂದ್ರಾಗಿ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹರೀಂದ್ರ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ, ಗಿಡಗಂಟೆ ಹಾಗೂ ಪೈಪ್ ಒಳಗೆ ಹೋಗಲು ಯತ್ನಿಸುತ್ತಿದ್ದ ಕಾಳಿಂಗನನ್ನ ಒಂದು ಗಂಟೆಗಳ ನಿರಂತರ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿದಿದ್ದಾರೆ.

    ಸೆರೆ ಹಿಡಿದಿದ್ದ ಕಾಳಿಂಗ ಸರ್ಪವನ್ನು ಸ್ಥಳೀಯ ಅರಣ್ಯಕ್ಕೆ ಬಿಟ್ಟಿದ್ದಾರೆ. ಇತ್ತ ಎರಡು ದಿನಗಳಿಂದ ಮನೆಯೊಳಗೆ ಅವಿತು ಕುಳಿತಿದ್ದ ಬೃಹತ್ ಕಾಳಿಂಗನನ್ನ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವರ್ಗಾವಣೆ, ದೇವಸ್ಥಾನ ಸುತ್ತೋದು ಬಿಟ್ರೇ, ಬೇರ್ಯಾವುದೇ ಅಭಿವೃದ್ಧಿ ಕೆಲ್ಸ ಆಗಿಲ್ಲ: ಶೋಭಾ ಕರಂದ್ಲಾಜೆ

    ವರ್ಗಾವಣೆ, ದೇವಸ್ಥಾನ ಸುತ್ತೋದು ಬಿಟ್ರೇ, ಬೇರ್ಯಾವುದೇ ಅಭಿವೃದ್ಧಿ ಕೆಲ್ಸ ಆಗಿಲ್ಲ: ಶೋಭಾ ಕರಂದ್ಲಾಜೆ

    ಚಿಕ್ಕಮಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ವರ್ಗಾವಣೆ ಹಾಗೂ ದೇವಸ್ಥಾನ ಸುತ್ತುವ ಕೆಲಸ ಬಿಟ್ಟರೇ, ಬೇರೆ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲವೆಂದು ಸಂಸದೆ ಶೋಭ ಕರಂದ್ಲಾಜೆ ಕಿಡಿಕಾರಿದ್ದಾರೆ.

    ಜಿಲ್ಲೆಯ ಮೂಡಿಗೆರೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಒಳಗಿನ ಗುದ್ದಾಟ ಹಾಗೂ ಕಾಂಗ್ರೆಸ್ಸಿನಲ್ಲಿನ ಅಪಸ್ವರ ಜೋರಾಗಿದೆ. ಹೀಗಾಗಿ ಕಾಂಗ್ರೆಸ್-ಜೆಡಿಎಸ್‍ನ ಮಂತ್ರಿಗಳು ಹಾಗೂ ಶಾಸಕರ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿದೆ. ಇದರಿಂದಾಗಿ ಕಳೆದ ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕೇವಲ ವರ್ಗಾವಣೆ ಹಾಗೂ ದೇವಸ್ಥಾನ ಸುತ್ತುವ ಕೆಲಸಗಳು ಮಾತ್ರ ಆಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

    ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮನದಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡಬಾರದೆಂದು ಬಂದಿತ್ತು. ಆದರೆ ಅಮಿತ್ ಶಾ ಹಾಗೂ ಬಿಎಸ್‍ವೈ ಯಾವುದೇ ಹೇಳಿಕೆ ನೀಡಬಾರದು, ಪಕ್ಷ ನಿರ್ಣಯ ಮಾಡುತ್ತೆ. ಪಕ್ಷದ ನಿರ್ಣಯವನ್ನ ಎಲ್ಲಾ ಮುಖಂಡರು ಒಪ್ಪಬೇಕು ಎಂದಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆ ಸ್ಪರ್ಧೆಯ ಬಗ್ಗೆ ಇನ್ನು ಯಾವುದೇ ತೀರ್ಮಾನವಾಗಿಲ್ಲ ಎಂದು ಸ್ಪಷ್ಟ ಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೆಟ್ಟು ನಿಂತಿದ್ದ ಕೆಎಸ್‌ಆರ್‌ಟಿಸಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    ಕೆಟ್ಟು ನಿಂತಿದ್ದ ಕೆಎಸ್‌ಆರ್‌ಟಿಸಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    ಚಿಕ್ಕಮಗಳೂರು: ಕೆಟ್ಟು ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಬಳಿ ನಡೆದಿದೆ.

    ಇಂದು ಬೆಳಗಿನ ಜಾವ 5.30ರ ಸುಮಾರಿಗೆ ರಾಜ್ಯ ಹೆದ್ದಾರಿ 206ರಲ್ಲಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ಬೆಟ್ಟದಹಳ್ಳಿ ಬಳಿ ಕೆಟ್ಟು ನಿಂತಿತ್ತು. ಈ ವೇಳೆ ಇದೇ ಮಾರ್ಗವಾಗಿ ವೇಗವಾಗಿ ಬಂದ ಖಾಸಗಿ ಬಸ್ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್‍ಗೆ ಗುದ್ದಿದೆ. ಬಸ್ ಗುದ್ದಿದ ಪರಿಣಾಮ ಬಸ್‍ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

    ಗಾಯಾಳುಗಳನ್ನು ಕೂಡಲೇ ತರೀಕೆರೆ ತಾಲೂಕಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಬಡ್ಡಿ ಸಮೇತ ಚುಕ್ತಾ ಮಾಡ್ತೀವಿ: ಸಿ.ಟಿ.ರವಿ

    ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಬಡ್ಡಿ ಸಮೇತ ಚುಕ್ತಾ ಮಾಡ್ತೀವಿ: ಸಿ.ಟಿ.ರವಿ

    ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಾತ್ಕಾಲಿಕ ಯಶಸ್ಸು ಕಂಡಿದ್ದರೂ ನಾವು ಬೇರೆ ಬೇರೆ ರಾಜ್ಯಗಳಲ್ಲಿ ಬಡ್ಡಿ ಸಮೇತ ಚುಕ್ತಾ ಮಾಡುವ ಮೂಲಕ ಉತ್ತರ ನೀಡುತ್ತೇವೆ ಎಂದು ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

    ಬಿಬಿಎಂಪಿ ಮೇಯರ್ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಕಾಂಗ್ರೆಸ್-ಜೆಡಿಎಸ್ ಅಲ್ಲಿಯೂ ಮೈತ್ರಿ ಮಾಡಿಕೊಂಡು ನಮ್ಮನ್ನು ಅಧಿಕಾರದಿಂದ ದೂರವಿಟ್ಟಿದೆ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅವರಿಗೆ ಬಡ್ಡಿ ಸಮೇತ ಚುಕ್ತಾ ಮಾಡುತ್ತೇವೆ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಹಾಗೂ ಜೆಪಿಎಸ್ ಮೈತ್ರಿ ಪ್ರಜಾಪ್ರಭುತ್ವದ ಅಪಹಾಸ್ಯ. ಚುನಾವಣೆಯಲ್ಲಿ ಪರಸ್ಪರ ವಾಗ್ದಾಳಿ ನಡೆಸಿ, ಈಗ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ಈ ಸಮ್ಮಿಶ್ರ ಸರ್ಕಾರ ಜನಮತಕ್ಕೆ ವಿರೋಧವಾಗಿದ್ದು, ಪ್ರಜಾಪ್ರಭುತ್ವದ ಸುಧಾರಣೆಗೆ ಇದು ಮಾರಕವಾಗಿದೆ. ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಸುಧಾರಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv