Tag: Chikkamagaluru

  • ಮೋದಿಯೇ ಭೇಷ್ ಅಂದಿದ್ದ ಅಧ್ಯಕ್ಷೆ ಕಿಕ್ ಔಟ್- ಮಾತು ತಪ್ಪಿದ ಚೈತ್ರಶ್ರೀಗೆ ಬಿಜೆಪಿ ಶಿಕ್ಷೆ

    ಮೋದಿಯೇ ಭೇಷ್ ಅಂದಿದ್ದ ಅಧ್ಯಕ್ಷೆ ಕಿಕ್ ಔಟ್- ಮಾತು ತಪ್ಪಿದ ಚೈತ್ರಶ್ರೀಗೆ ಬಿಜೆಪಿ ಶಿಕ್ಷೆ

    ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರೇ ಭೇಷ್ ಅಂದಿದ್ದ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆಯನ್ನು ರಾಜ್ಯ ಬಿಜೆಪಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.

    ಒಪ್ಪಂದದ ಪ್ರಕಾರ ಚೇತ್ರಾ ಶ್ರೀ ಅವರು ಬೇರೆಯವರಿಗೆ ಕುರ್ಚಿ ಬಿಟ್ಟುಕೊಡಬೇಕಿತ್ತು. ಆದ್ರೆ ಇದೀಗ ಕುರ್ಚಿ ಬಿಟ್ಟುಕೊಡದೇ ಪಕ್ಷದ ಆದೇಶಕ್ಕೆ ವಿರುದ್ಧವಾಗಿ ನಡೆದಿದ್ದು, ಮಾತು ತಪ್ಪಿದ್ದಾರೆಂದು ಚೈತ್ರಾ ಅವರಿಗೆ ಬಿಜೆಪಿ ಈ ಅಮಾನತು ಶಿಕ್ಷೆಯನ್ನು ನೀಡಿದೆ.


    ಸದ್ಯ ಚೈತ್ರಾ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚೈತ್ರಾ ಅವರು ನಕ್ಸಲ್ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಪ್ರಧಾನಿ ಪ್ರಶಂಸೆಗೆ ಒಳಗಾಗಿದ್ದರು. ಇದನ್ನೂ ಓದಿ: ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಚೈತ್ರಶ್ರೀಗೆ ಮೋದಿ ಭೇಟಿ ಅವಕಾಶ

     

    ಈ ಹಿಂದೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿ.ಎಸ್ ಚೈತ್ರಾ ಶ್ರೀ ಅವರು ಪ್ರಧಾನಿ ಮೋದಿ ಭೇಟಿಯ ಅವಕಾಶಕ್ಕಾಗಿ ಕೋರಿ ಪತ್ರ ಬರೆದಿದ್ದರು. ತಳ ಸಮುದಾಯದಿಂದ ಬಂದು, ವಿದ್ಯಾವಂತೆಯಾಗಿ ಸಣ್ಣ ವಯಸ್ಸಿನಲ್ಲೇ ಜಿ.ಪಂ ಅಧ್ಯಕ್ಷೆ ಸ್ಥಾನದಂತಹ ಮಹತ್ವದ ಹುದ್ದೇಗೇರಿದ ಸಾಧನೆ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿಯಿಂದ ವಾರದ ಹಿಂದಷ್ಟೇ ಕರೆ ಬಂದಿತ್ತು. ಪ್ರಧಾನಿ ಮೋದಿ ಅವರ ಆಪ್ತ ಸಹಾಯಕರು ಕರೆ ಮಾಡಿ ಚೈತ್ರಶ್ರೀ ಬರೆದಿದ್ದ ಪತ್ರದ ಬಗ್ಗೆ ಚರ್ಚಿಸಿದ್ದರು.

    ಬಿಜೆಪಿಯ ಆಂತರಿಕ ಒಪ್ಪಂದದಂತೆ ಜಿ.ಪಂ ಅಧ್ಯಕ್ಷ ಸ್ಥಾನದಿಂದ ಕಳೆದ ತಿಂಗಳು ಚೈತ್ರಶ್ರೀ ಕೆಳಗಿಳಿಯಬೇಕಿತ್ತು. ಆದ್ರೆ ಚೈತ್ರಶ್ರೀ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡದೆ ಹಠ ಮಾಡಿ ಜಿಲ್ಲಾ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿರೋ ಬೆನ್ನಲ್ಲೇ ಮೋದಿ ಭೇಟಿಗೆ ಕರೆ ಬಂದಿರೋದು ಚೈತ್ರಶ್ರೀ ಗೆ ಸಂತಸ ತಂದಿತ್ತು.

  • ಕುಮಾರಸ್ವಾಮಿಗಾಗಿ ಎದುರು ನೋಡುತ್ತಾ ಕಾಯುತ್ತಿದ್ದಾರೆ ಚಿಕ್ಕಮಗ್ಳೂರಿನ ಪದವೀಧರ!

    ಕುಮಾರಸ್ವಾಮಿಗಾಗಿ ಎದುರು ನೋಡುತ್ತಾ ಕಾಯುತ್ತಿದ್ದಾರೆ ಚಿಕ್ಕಮಗ್ಳೂರಿನ ಪದವೀಧರ!

    ಚಿಕ್ಕಮಗಳೂರು: ಕಳೆದ ನಾಲ್ಕೈದು ವರ್ಷದಿಂದ ಬಿಪಿ ಹಾಗೂ ಶುಗರ್‍ನಿಂದ ಬಳಲುತ್ತಿರೋ 24 ವರ್ಷದ ಪದವೀಧರ ಯುವಕನೊಬ್ಬ ನಾನು ಮೃತಪಡುವ ಮುನ್ನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನ ನೋಡಬೇಕೆಂದು ಹಂಬಲಿಸುತ್ತಿದ್ದಾರೆ.

    ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಹೋಬಳಿಯ ಹಿರೇಗರ್ಜೆ ಗ್ರಾಮದ ಜಗದೀಶ್ ಕಳೆದ ನಾಲ್ಕೈದು ವರ್ಷಗಳಿಂದ ಬಿಪಿ ಹಾಗೂ ಶುಗರ್‍ನಿಂದ ಬಳಲುತ್ತಿದ್ದಾರೆ. 80 ಕೆ.ಜಿ. ಇದ್ದ ಈ ಯುವಕ ಇಂದು ಇರೋದು 15-16 ಕೆ.ಜಿ. ಮಲಗಿದ್ದಲ್ಲೇ ಎಲ್ಲಾ. ಸದಾ ಇವರ ಸೇವೆಗೆ ಮನೆಯಲ್ಲಿ ಒಬ್ಬರು ಇರಲೇಬೇಕು.

    ಕೂಲಿ ಮಾಡುವ ಹೆತ್ತವರು ನಾಲ್ಕೈದು ಲಕ್ಷ ಖರ್ಚು ಮಾಡಿದ್ದರೂ ಮಗನನನ್ನ ಹುಷಾರು ಮಾಡಲು ಸರಿಯಾಗದೆ ಕೈಚೆಲ್ಲಿ ಕೂತಿದ್ದಾರೆ. ದಿನದಿಂದ ದಿನಕ್ಕೆ ಆರೋಗ್ಯದ ಸ್ಥಿತಿ ಹದಗೆಡ್ತಿರೋ ಜಗದೀಶ್‍ಗೆ ಸಾಯುವ ಮುನ್ನ ಕುಮಾರಸ್ವಾಮಿಯನ್ನ ನೋಡುವ ಹಂಬಲ ವ್ಯಕ್ತಪಡಿಸಿದ್ದಾರೆ.

    ನಾನು ಸಾಯುವ ಮುನ್ನ ಶಾಸಕ ವೈ.ಎಸ್.ವಿ ದತ್ತ ಹಾಗೂ ಕುಮಾರಸ್ವಾಮಿಯನ್ನ ನೋಡಬೇಕೆಂಬ ಆಸೆ ಹೊಂದಿದ್ದೇನೆ. ಆದ್ರೆ, ಶಾಸಕ ದತ್ತ ಅವರು ಬಂದು ನೋಡಿಕೊಂಡು ಹೋಗಿದ್ದಾರೆ. ಇದೀಗ ಕೊನೆ ಬಾರಿ ಕುಮಾರಸ್ವಾಮಿಯನ್ನು ನೋಡಬೇಕೆಂದು ಹಂಬಲಿಸುತ್ತಿದ್ದಾರೆ.

  • ಅತ್ಯಾಚಾರ ಆರೋಪ ಇರೋ ಮಠಾಧೀಶರನ್ನು ಕೈಬಿಟ್ಟ ಸನಾತನ ಧರ್ಮ ಸಂವರ್ಧಿನೀ ಸಭಾ

    ಅತ್ಯಾಚಾರ ಆರೋಪ ಇರೋ ಮಠಾಧೀಶರನ್ನು ಕೈಬಿಟ್ಟ ಸನಾತನ ಧರ್ಮ ಸಂವರ್ಧಿನೀ ಸಭಾ

    ಚಿಕ್ಕಮಗಳೂರು: ಶೃಂಗೇರಿಯಲ್ಲಿ ನಡೆದ ಸನಾತನ ಧರ್ಮ ಸಂವರ್ಧಿನೀ ಸಭಾದ ಸಭೆಯಲ್ಲಿ ಅತ್ಯಾಚಾರ ಆರೋಪ ಹೊತ್ತ ಸ್ವಾಮೀಜಿಗಳನ್ನು ಸಭಾದಿಂದ ಕೈಬಿಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಶ್ರೀ ಮಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸನಾತನ ಧರ್ಮ ಸಂವರ್ಧನೆಗೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮಠಗಳು ಯೋಗ್ಯರಾದ ನಿಷ್ಕಳಂಕ ವ್ಯಕ್ತಿಗಳಿಂದ ಮುಂದುವರಿಯಬೇಕೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

    ಸಭೆಯಲ್ಲಿ ಶೃಂಗೇರಿಯ ಶಾರದಾಪೀಠದ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ, ಶ್ರೀ ವಿಧುಶೇಖರಭಾರತೀ ಮಹಾಸ್ವಾಮೀಜಿ, ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಯಡತೊರೆ ಕೃಷ್ಣರಾಜನಗರದ ಮಠದ ಶಂಕರಭಾರತೀ ಸ್ವಾಮೀಜಿ, ಹರಿಪುರ ಮಠದಿಂದ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ. ಶಿವಗಂಗಾ ಮಠದಿಂದ ಪರುಷೋತ್ತಮಭಾರತೀ ಸ್ವಾಮೀಜಿ, ಎಡನೀರು ಮಠದಿಂದ ಕೇಶವಾನಂದ ಭಾರತೀ ಸ್ವಾಮಿಗಳು ಭಾಗವಹಿಸಿದ್ದರು.

    ಸಭೆಯಲ್ಲಿ ಕೈಗೊಂಡ ನಿರ್ಣಯಗಳು:
    ಸನಾತನ ಧರ್ಮದ ಉದ್ಧಾರಕ್ಕಾಗಿ ಶ್ರೀ ಶಂಕರಭಗವತ್ಪಾದಕರು ನಮ್ಮ ದೇಶದ ಉದ್ದಗಲಕ್ಕೂ ಕಾಲ್ನಡಿಗೆಯಿಂದ ಸಂಚರಿಸಿ ಧರ್ಮಜಾಗೃತಿಯ ಜೊತೆ ರಾಷ್ಟ್ರದಲ್ಲಿ ಏಕತೆಯನ್ನೂ ಸಾಧಿಸಿದರು. ಈ ರೀತಿ ಸಂಚಾರದ ಸಂದರ್ಭದಲ್ಲಿ ಶ್ರೀ ಶಂಕರರು ಸಂಚರಿಸಿದ ಶ್ರೀಶೈಲ ಮುಂತಾದ ಎಲ್ಲ ಪ್ರಮುಖ ಕ್ಷೇತ್ರಗಳಲ್ಲಿ ಸನಾತನ ಧರ್ಮ ಸಂವರ್ಧನೆಗಾಗಿ ವಿಶೇಷ ಸ್ಮಾರಕಗಳನ್ನು ನಿರ್ಮಿಸಲು ತೀರ್ಮಾನ.

    ಇತ್ತೀಚೆಗೆ ಮಧ್ಯಪ್ರದೇಶ ಸರ್ಕಾರ ಶ್ರೀ ಶಂಕರರ ಸಾರಿದ ಏಕಾತ್ಮಕತೆಯನ್ನು ಸಮಾಜಕ್ಕೆ ತಿಳಿಸಲು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕಾರ್ಯಕ್ರಮ ಹಮ್ಮಿಕೊಂಡಂತೆ ನಮ್ಮ ದೇಶದ ಉಳಿದ ರಾಜ್ಯಗಳಲ್ಲೂ ಹಮ್ಮಿಕೊಳ್ಳುವುದು ದೇಶದ ದೃಷ್ಟಿಯಿಂದ ಅತ್ಯಂತ ಅವಶ್ಯಕ ಎಂದು ಅಭಿಪ್ರಾಯ ವ್ಯಕ್ತವಾಯಿತು.

    ಮನುಷ್ಯನ ಶ್ರೇಯಸ್ಸಿಗೆ ವೇದೋಪನಿಷತ್ತುಗಳೇ ಪ್ರಮಾಣ ಎಂದು ಭಗವಂತ ಗೀತೆಯಲ್ಲಿ ಉಪದೇಶಿಸಿದ್ದಾನೆ. ಇಂತಹ ಉಪದೇಶಗಳನ್ನು ತಿಳಿಸಿ, ಸನಾತನ ಧರ್ಮ ಸಂವರ್ಧನೆಗಾಗಿ ಸನಾತನ ಧರ್ಮ ಸಂವರ್ಧಿನಿ ಸಭಾ ಪ್ರಯತ್ನಿಸುತ್ತಿದೆ. ಸಂನ್ಯಾಸಾಶ್ರಮ ಧರ್ಮಪಾಲನೆಗೆ ವೇದೋಪನಿಷತ್ತು ಮೊದಲಾದವುಗಳು ಪ್ರಮಾಣ ಹಾಗೂ ಮಠಾಧೀಶರಾಗಿರುವುವವರಿಗೆ ಶ್ರೀ ಶಂಕರರಿಂದ ವಿರಚಿತವಾದ ಮಠಾಮ್ನಾಯ ಪ್ರಮಾಣ. ಇದಕ್ಕೆ ವ್ಯತಿರಿಕ್ತವಾದ ಜೀವನ ನಡೆಸುವ ಹಾಗೂ ಅತ್ಯಾಚಾರ, ಅನೈತಿಕ ಸಂಬಂಧ ಮೊದಲಾದ ಗಂಭೀರ ಆರೋಪಗಳನ್ನು ಹೊತ್ತ ಮಠಾಧೀಶರನ್ನು ನಮ್ಮ ಸಂಸ್ಥೆಯಿಂದ ಕೈಬಿಡಲು ತೀರ್ಮಾನಿಸಲಾಯಿತು. ಆದರೆ ಆ ಮಠಗಳು ಯೋಗ್ಯರಾದ ನಿಷ್ಕಳಂಕ ವ್ಯಕ್ತಿಗಳಿಂದ ಮುಂದುವರಿಯಬೇಕೆಂದು ಸಂಸ್ಥೆ ಅಭಿಪ್ರಾಯ ಪಟ್ಟಿದೆ.

    ವೈಶಾಖ ಶುಕ್ಲ ಪಂಚಮಿ ಶ್ರೀ ಶಂಕರಜಯಂತ್ಯುತ್ಸವ. ಈ ಉತ್ಸವದಲ್ಲಿ ಶ್ರೀ ಶಂಕರರ ಅಷ್ಟೋತ್ತರ ಪಾರಾಯಣದ ಜೊತೆ ಭಾಷ್ಯ-ಪ್ರಕರಣಗ್ರಂಥ-ಸ್ತೋತ್ರ ಹಾಗೂ ಶಂಕರ ದಿಗ್ವಿಜಯಗಳ ಪಾರಾಯಣವನ್ನು ಐದು ದಿನಗಳ ಕಾಲ ಎಲ್ಲ ಆಸ್ತಿಕರು ಮಾಡುವಂತೆ ತಮ್ಮ ತಮ್ಮ ಮಠಗಳ ಶಿಷ್ಯರುಗಳಲ್ಲಿ ಜಾಗೃತಿ ಮೂಡಿಸಬೇಕೆಂದು ನಿರ್ಣಯವನ್ನು ಕೈಗೊಳ್ಳಲಾಯಿತು.

  • ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಚೈತ್ರಶ್ರೀಗೆ ಮೋದಿ ಭೇಟಿ ಅವಕಾಶ

    ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಚೈತ್ರಶ್ರೀಗೆ ಮೋದಿ ಭೇಟಿ ಅವಕಾಶ

    ಚಿಕ್ಕಮಗಳೂರು: ಜಿಲ್ಲೆಯನ್ನ ಅಭಿವೃದ್ಧಿಪಡಿಸೋ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಕೋರಿದ್ದ ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆಯ ಪತ್ರಕ್ಕೆ ಪ್ರಧಾನಿ ಕಚೇರಿಯಿಂದ ಸ್ಪಂದನೆ ದೊರೆತಿದೆ.

    ಜಿ.ಪಂ ಅಧ್ಯಕ್ಷೆ ಬಿ.ಎಸ್.ಚೈತ್ರಶ್ರೀ ಪ್ರಧಾನಿ ಮೋದಿ ಭೇಟಿಯ ಅವಕಾಶಕ್ಕಾಗಿ ಕೋರಿ ಪತ್ರ ಬರೆದಿದ್ದರು. ಇದೀಗ ಇವರ ಪತ್ರಕ್ಕೆ ಸ್ಪಂದನೆ ಸಿಕ್ಕಿದ್ದು, ಭೇಟಿ ದಿನಾಂಕ ಹಾಗೂ ಸಮಯ ಇನ್ನಷ್ಟೆ ನಿಗದಿಯಾಗಬೇಕಿದೆ. ಪತ್ರಕ್ಕೆ ಸ್ಪಂದನೆ ದೊರೆತಿರೋದು ಚೈತ್ರಶ್ರೀ ಅವರಿಗೆ ಸಂತಸ ತಂದಿದೆ. ತಳ ಸಮುದಾಯದಿಂದ ಬಂದು, ವಿದ್ಯಾವಂತೆಯಾಗಿ ಸಣ್ಣ ವಯಸ್ಸಿನಲ್ಲೇ ಜಿ.ಪಂ ಅಧ್ಯಕ್ಷೆ ಸ್ಥಾನದಂತಹ ಮಹತ್ವದ ಹುದ್ದೇಗೇರಿದ ಸಾಧನೆ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿಯಿಂದ ವಾರದ ಹಿಂದಷ್ಟೇ ಕರೆ ಬಂದಿದೆ.

    ಪ್ರಧಾನಿ ಮೋದಿ ಅವರ ಆಪ್ತ ಸಹಾಯಕರು ಕರೆ ಮಾಡಿ ಚೈತ್ರಶ್ರೀ ಬರೆದಿದ್ದ ಪತ್ರದ ಬಗ್ಗೆ ಚರ್ಚಿಸಿದ್ದಾರೆ. ಸದ್ಯಕ್ಕೆ ಪ್ರಧಾನಿಯವರಿಗೆ ಬಿಡುವಿಲ್ಲದ ಕಾರಣ ಶ್ರೀಘ್ರದಲ್ಲೇ ಪ್ರಧಾನಿಯೊಂದಿಗೆ ಮಾತುಕತೆಗೆ ಸಮಯ ನಿಗದಿ ಮಾಡಲಾಗುವುದು ಎಂದು ಮೋದಿ ಆಪ್ತ ಸಹಾಯಕರು ಕರೆ ಮಾಡಿದ್ದಾಗ ತಿಳಿಸಿದ್ದಾರೆ.

     

    ಬಿಜೆಪಿಯ ಆಂತರಿಕ ಒಪ್ಪಂದದಂತೆ ಜಿ.ಪಂ ಅಧ್ಯಕ್ಷ ಸ್ಥಾನದಿಂದ ಕಳೆದ ತಿಂಗಳು ಚೈತ್ರಶ್ರೀ ಕೆಳಗಿಳಿಯಬೇಕಿತ್ತು. ಆದ್ರೆ ಚೈತ್ರಶ್ರೀ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡದೆ ಹಠ ಮಾಡಿ ಜಿಲ್ಲಾ ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿರೋ ಬೆನ್ನಲ್ಲೇ ಮೋದಿ ಭೇಟಿಗೆ ಕರೆ ಬಂದಿರೋದು ಚೈತ್ರಶ್ರೀ ಗೆ ಸಂತಸ ತಂದಿದೆ.

    ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಚೃತ್ರಶ್ರೀ, ನನಗೆ ತುಂಬಾ ಖುಷಿಯಾಗಿದೆ. ಮೋದಿ ಅವರಿಗೆ ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ಚಿಕ್ಕಮಗಳೂರಿನಲ್ಲಿ ಅಲೆಮಾರಿ ಜನಾಂಗವಾದ ‘ಸುಡುಗಾಡು ಸಿದ್ದ’ ಎಂಬ ತುಂಬಾ ಹಿಂದುಳಿದ ಸಮುದಾಯದಲ್ಲಿ ಹುಟ್ಟಿದ್ದೇನೆ. ಜಿ.ಪಂ ಅಧ್ಯೆಕ್ಷೆಯಾಗಿ ಅಭಿವೃದ್ಧಿ ಕಾರ್ಯಗಳನ್ನ ಮಾಡಬೇಕೆಂಬ ಉದ್ದೇಶದಿಂದ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದರು.

    ಜಿಲ್ಲೆಯಲ್ಲಿ ಪೆಪ್ಪರ್ ಪಾರ್ಕ್, ವುಡ್ ಪಾರ್ಕ್ ಮಾಡಬೇಕು, ಮಕ್ಕಳ ಶೈಕ್ಷಿಣಿಕ ಗುಣಮಟ್ಟ ಹೆಚ್ಚಿಸಬೇಕು, ಶೌಚಾಲಯ- ಕಟ್ಟಡ ಅಭಿವೃದ್ಧಿಗೆ ಅನುದಾನ ಬೇಕು. ಜಿ.ಪಂ ಅಧ್ಯಕ್ಷರಾಗಿ ಇದುವರೆಗೂ ಯಾರೂ ಗ್ರಾಮ ವಾಸ್ತವ್ಯ ಮಾಡಿರಲಿಲ್ಲ. ನಮ್ಮ ಜಿಲ್ಲೆಯಲ್ಲಿ ನಾನು ಗ್ರಾಮ ವಾಸ್ತವ್ಯ ಮಾಡಿದ್ದೇನೆ. ಮೂಡಿಗೆರೆ ತಾಲೂಕು ಕಳಸಾ ಹೋಬಳಿ ಸಂಸೆ ಗ್ರಾ.ಪಂ ವ್ಯಾಪ್ತಿಯಲ್ಲಿ ಜೋಗಿ ಕುಂಬ್ರಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದೆ. ಅದು ನಕ್ಸಲೈಟ್‍ಗಳಿರುವ ತುಂಬಾ ಹಿಂದುಳಿದ ಗ್ರಾಮ. ಅಲ್ಲಿ ಜನರಿಗೆ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಹಲವಾರು ಸಮಸ್ಯೆ ಆ ಭಾಗದಲ್ಲಿ ಇರೋದ್ರಿಂದ ಆ ಉದ್ದೇಶ ಇಟ್ಟುಕೊಂಡು ಹಾಗೂ ಜಿಲ್ಲೆಯ ಹಲವು ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ಮಾಡಲು ಅವಕಾಶ ಕೋರಿದ್ದೇನೆ ಎಂದು ಚೈತ್ರಶ್ರೀ ಹೇಳಿದ್ರು.

     

  • ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕ ಸಾವು

    ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕ ಸಾವು

    ಚಿಕ್ಕಮಗಳೂರು: ಅವಲಕ್ಕಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕನೋರ್ವ ಮೃತಪಟ್ಟ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಸಮೀಪದ ಶಿರಗುಂದದಲ್ಲಿ ನಡೆದಿದೆ.

    ದುರ್ಗಾಪ್ರಸಾದ್ ದಂಪತಿಯ ಪುತ್ರ ಅನೀಶ್ ಮೃತ ದುರ್ದೈವಿ ಬಾಲಕ. ಸೋಮವಾರ ತಿನ್ನುವಾಗ ಅನೀಶ್ ಗಂಟಲಲ್ಲಿ ಅವಲಕ್ಕಿ ಸಿಲುಕಿದ್ದು, ಕೂಡಲೇ ಪೋಷಕರು ಆತನನ್ನು ನಗರದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಗಂಟಲಿನಲ್ಲಿ ಕೊಬ್ಬರಿ ಚೂರು ಸಿಲುಕಿ ಶಿಕ್ಷಕಿ ಸಾವು!

    ಈ ವೇಳೆ ಅಲ್ಲಿನ ವೈದ್ಯರು ಉಸಿರುಗಟ್ಟಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಪೋಷಕರು ಅಲ್ಲಿಂದ ಹಾಸನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಅನೀಶ್ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ. ಇದನ್ನೂ ಓದಿ:ಗಂಟಲಲ್ಲಿ ಸೆರಲ್ಯಾಕ್ ಸಿಲುಕಿ 3 ತಿಂಗಳ ಮಗು ಸಾವು

    ಸದ್ಯ ಮಗನನ್ನು ಕಳೆದುಕೊಂಡ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಇದೇ ಜಿಲ್ಲೆಯ ಸಂಜೀವಿನಿ ಶಾಲೆಯ ಶಿಕ್ಷಕಿಯೊಬ್ಬರು ಆಗಷ್ಟೇ ದೇವಸ್ಥಾನದಿಂದ ಪೂಜೆ ಮಾಡಿಸಿಕೊಂಡು ಬಂದ ತೆಂಗಿನ ಕಾಯಿ ಚೂರು ತಿಂದು ಅದು ಗಂಟಲಲ್ಲಿ ಸಿಲುಕಿ ಮೃತಪಟ್ಟಿದ್ದರು. ಇದನ್ನೂ ಓದಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಪುಟ್ಟ ಕಂದಮ್ಮ ದುರ್ಮರಣ!

  • ಲವ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್!

    ಲವ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್!

    ಚಿಕ್ಕಮಗಳೂರು: ಪ್ರೀತಿಯ ವಿಚಾರವಾಗಿ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಆಸ್ಪತ್ರೆಗೆ ನುಗ್ಗಿದ ಇನ್ನೊಂದು ಟೀಂ ಚಿಕಿತ್ಸೆ ಪಡೆಯುತ್ತಿದ್ದವರ ಮೇಲೆ ಮತ್ತೊಮ್ಮೆ ಚಾಕು, ದೊಣ್ಣೆಗಳಿಂದ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

    ನಗರದ ಪ್ರಮುಖ ಗುಂಪುಗಳು ಎಂದು ಗುರುತಿಸಿಕೊಳ್ಳುವ ಜೋಹರ್ ಹಾಗೂ ಕದೀರ್ ಗ್ಯಾಂಗ್ ಗಳ ನಡುವೆ ಪ್ರೀತಿಯ ವಿಚಾರವಾಗಿ ಜಗಳ ಏರ್ಪಟ್ಟಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಎರಡು ತಂಡಗಳ ನಡುವೆ ನಗರದ ನೂರಾನಿ ಮಸೀದಿ ಬಳಿ ಗ್ಯಾಂಗ್ ವಾರ್ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಎರಡು ಗ್ಯಾಂಗ್ ಸದಸ್ಯರ ಪರಸ್ಪರ ನಡುವೆ ದೊಣ್ಣೆ, ಚಾಕುವಿನಿಂದ ಹಲ್ಲೆ ಮಾಡಿಕೊಂಡಿದ್ದಾರೆ. ಈ ವೇಳೆ ಗಲಾಟೆಯಲ್ಲಿ ಹಲ್ಲೆಗೂಳಗಾದವರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದವರ ಮೇಲೆಯೂ ಅಸ್ಪತ್ರೆಯ ಒಳಗೆ ಬಂದು ಚಾಕುವಿನಿಂದ ಮತ್ತೆ ಹಲ್ಲೆ ನಡೆಸಲಾಗಿದೆ.

    ಶುಕ್ರವಾಗಿ ರಾತ್ರಿ ನಡೆದ ಗಲಾಟೆಯಲ್ಲಿ ಕದೀರ್ ತಂಡದ ಸದಸ್ಯರು ಗಾಯಗೊಂಡು ನಗರದ ಮಲ್ಲೇಗೌಡ ಸರ್ಕಾರಿ ಅಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇವರ ಮೇಲೆ ಜೋಹರ್ ತಂಡದ ಸದಸ್ಯರು ಮತ್ತೆ ಆಸ್ಪತ್ರೆಯ ತುರ್ತು ವಿಭಾಗದ ಘಟಕ ಒಳಪ್ರವೇಶಿಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಜೂವೇರ್ ಎಂಬಾತನನ್ನು ಹಾಸನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕದೀರ್ ಗೆ ಮಲ್ಲೇಗೌಡ ಸರ್ಕಾರಿ ಅಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

    ಆಸ್ಪತ್ರೆಗೆ ನುಗ್ಗಿ ಚಾಕುವಿನಿಂದ ದಾಳಿ ನಡೆಸಿದ ಪರಿಣಾಮ ಆಸ್ಪತ್ರೆಯ ಇತರೆ ರೋಗಿಗಳು ಹಾಗೂ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ. ಗ್ಯಾಂಗ್ ವಾರ್ ಕುರಿತು ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಮಧ್ಯರಾತ್ರಿ 12 ಗಂಟೆಯ ಕಗ್ಗತ್ತಲಲ್ಲಿ, ಮನೆಯಂಗಳದಲ್ಲಿದ್ದ 12 ಅಡಿಯ ಬೃಹತ್ ಕಾಳಿಂಗವನ್ನ ಸೆರೆ ಹಿಡಿದ್ರು

    ಮಧ್ಯರಾತ್ರಿ 12 ಗಂಟೆಯ ಕಗ್ಗತ್ತಲಲ್ಲಿ, ಮನೆಯಂಗಳದಲ್ಲಿದ್ದ 12 ಅಡಿಯ ಬೃಹತ್ ಕಾಳಿಂಗವನ್ನ ಸೆರೆ ಹಿಡಿದ್ರು

    ಚಿಕ್ಕಮಗಳೂರು: ಮನೆಯ ಅಂಗಳದ ಗಿಡ-ಗಂಟೆಯ ಒಳಗೆ ಅವಿತು ಕುಳಿತಿದ್ದ 12 ಅಡಿಯ ಬೃಹತ್ ಕಾಳಿಂಗ ಸರ್ಪವನ್ನ ಚಿಕ್ಕಮಗಳೂರಿನ ಸ್ನೇಕ್ ನರೇಶ್ ಮಧ್ಯರಾತ್ರಿ 12 ಗಂಟೆಗೆ ಸೆರೆ ಹಿಡಿದಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ನ ಪ್ರಭಾಕರ್ ಗೌಡ ಎಂಬವರ ಮನೆಯಲ್ಲಿ ಈ ಬೃಹತ್ ಕಾಳಿಂಗವನ್ನ ಸೆರೆ ಹಿಡಿದಿದ್ದಾರೆ. ರಾತ್ರಿ 8.30ರ ವೇಳೆಗೆ ಬಂದ ಕಾಳಿಂಗನನ್ನ ನೋಡಿ ನಾಯಿಗಳು ಬೊಗಳಿದ ಕೂಡಲೇ ಮನೆಯವರು ಹೊರಬಂದಿದ್ದಾರೆ. ಕಾಳಿಂಗ ಪೊದೆಯೊಳಗೆ ಹೋಗೋದನ್ನ ಮನೆಯವರು ನೋಡಿ, ಸ್ನೇಕ್ ನರೇಶ್ ಗೆ ವಿಷಯ ಮುಟ್ಟಿಸಿದ್ದಾರೆ.

    ರಾತ್ರಿ 10 ಗಂಟೆ ಸುಮಾರಿಗೆ ಹೋದ ನರೇಶ್ 2 ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ 12 ಗಂಟೆ ಸುಮಾರಿಗೆ ಸರ್ಪವನ್ನ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ನೋಡೋದಕ್ಕೆ ಭಯವಾಗುವ ಬೃಹತ್ ಗಾತ್ರದ ಕಾಳಿಂಗ ಸರ್ಪ ಇದಾಗಿತ್ತು.

  • ಕಾಫಿನಾಡಿನಲ್ಲಿ ಅತ್ಯದ್ಭುತ ಫಲಪುಷ್ಪ ಪ್ರದರ್ಶನ- ಕಣ್ಮನ ಸೆಳೆಯುತ್ತಿದೆ ನಾಟ್ಯ ಮಯೂರಿ

    ಕಾಫಿನಾಡಿನಲ್ಲಿ ಅತ್ಯದ್ಭುತ ಫಲಪುಷ್ಪ ಪ್ರದರ್ಶನ- ಕಣ್ಮನ ಸೆಳೆಯುತ್ತಿದೆ ನಾಟ್ಯ ಮಯೂರಿ

    ಚಿಕ್ಕಮಗಳೂರು: ಕಾಫಿಯ ಸುವಾಸನೆಯಲ್ಲೇ ಕಳೆದೋಗಿದ್ದ ಮಲೆನಾಡಿಗರು ವಿವಿಧ ಹೂಗಳ ಸುವಾಸನೆಯಲ್ಲಿ ಮುಳುಗಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನ ಸಾರ್ವಜನಿಕರನ್ನ ಕೈಬೀಸಿ ಕರೆಯುತ್ತಿದೆ.

    ಮೂರು ದಿನಗಳ ಕಾಲ ವಿವಿಧ ಜಾತಿ ಹಾಗೂ ಬಣ್ಣದ ಹೂಗಳನ್ನು ಒಂದೆಡೆ ಸೇರಿಸಿ ಪ್ರದರ್ಶನಕ್ಕಿಟ್ಟಿರೋದು ಮಲೆನಾಡಿಗರನ್ನ ಮಂತ್ರಮುಗ್ಧರನ್ನಾಗಿಸಿದ್ದು, ಕಣ್ಮನ ಸೆಳೆಯೋ ಹೂಗಳ ರಾಶಿ, ಮೈಮರೆಸೋ ಸುವಾಸನೆ ನೋಡುಗರ ಮನ ಸೂರೆಗೊಳಿಸುತ್ತಿದೆ. ಕಣ್ಣು ಹಾಯಿಸಿದಲ್ಲೆಲ್ಲಾ ಹೂಗಳ ಚಿತ್ತಾರ. ತರಕಾರಿಗಳಿಂದ್ಲೇ ಮೂಡಿರುವ ಸುಂದರ ಕಲಾಕೃತಿ. ಗುಲಾಬಿ, ಲಿಲ್ಲಿ, ಸೇವಂತಿಯಿಂದಲೇ ಶೃಂಗಾರಗೊಂಡಿರುವ ಬೆಡಗಿ ನಾಟ್ಯ ಮಯೂರಿ, ಜಿಲ್ಲೆಯ ಪ್ರವಾಸಿಗರ ನೆಚ್ಚಿನ ತಾಣ ದೇವಿರಮ್ಮ ಬೆಟ್ಟ, ಬಿಂಡಿಗ ದೇವೀರಮ್ಮ, ಸಂಗೀತದ ಪರಿಕರಗಳು ಹಾಗೂ ತರಕಾರಿ ಹಣ್ಣುಗಳಲ್ಲಿ ಮೂಡಿರುವ ಸುಂದರ ಕಲಾಕೃತಿಗಳು ನೋಡುಗರಿಗೆ ಮತ್ತಷ್ಟು ಖುಷಿ ತಂದಿದೆ.

    ಈ ಬಾರಿ ತೋಟಗಾರಿಕೆ ಹಾಗೂ ಕೃಷಿ ಇಲಾಖೆ ವತಿಯಿಂದ ವಿಶೇಷವಾಗಿ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಆಧುನಿಕ ಕೃಷಿಯ ಬಗ್ಗೆ ರೈತರಿಗೆ ವಿಶೇಷ ತರಬೇತಿಯನ್ನೂ ನೀಡಲಾಗುತ್ತಿದೆ. ತರಕಾರಿಗಳಿಂದ ತಯಾರಾಗಿರೋ ಈಶ್ವರನ ದೇವಾಲಯ ಎಲ್ಲರ ಗಮನ ಸೆಳೆಯಿತು. ಈ ಬಾರಿ ಲಿಲ್ಲಿ, ಗುಲಾಬಿ, ಸೇವಂತಿ, ಆಂಥೋರಿಯಂ, ಆಸ್ಟ್ರೋ, ಪಿಟೋನೊಯಾ, ದೈನಥನ್, ಜೀನಿಯಾ ಸೇರಿದಂತೆ 20ಕ್ಕೂ ಹೆಚ್ಚು ದೇಶಿಯ ಹಾಗೂ ವಿದೇಶಿಯ ಪುಷ್ಪಗಳು ಪುಷ್ಪಪ್ರಿಯರನ್ನ ಮಂತ್ರಮುಗ್ಧರನ್ನಾಗಿಸಿದೆ. ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನ ವಿದ್ಯಾರ್ಥಿಗಳು, ಮಹಿಳೆಯರು, ಸಣ್ಣಮಕ್ಕಳು ಸೇರಿದಂತೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಪುಷ್ಪ ಪ್ರೀಯರು ಹೂಗಳ ಅಂದಕಂಡು ಪುಳಕಿತರಾಗೋದಲ್ಲದೆ ಫ್ರೆಂಡ್ಸ್ ಜೊತೆ ಸೆಲ್ಫಿ ತೆಗೆದುಕೊಂಡು ಎಂಜಾಯ್ ಮಾಡುತ್ತಿದ್ದಾರೆ ಎಂದು ತೋಟಗಾರಿಕೆ ಇಲಾಖೆ ಸಿಬ್ಬಂದಿ ಪೂಜಿತಾ ಹೇಳಿದ್ದಾರೆ.

    30ಕ್ಕೂ ಅಧಿಕ ಬಗೆಯ ಸ್ಟಾಲ್‍ಗಳಲ್ಲಿನ ಸುಂದರ ಕಲಾಕೃತಿಗಳು ನೋಡುಗರ ಕಣ್ಮನ ಸೆಳೆದಿದೆ. ತರಕಾರಿಯಲ್ಲಿ ಅರಳಿರೋ ಕಲಾಕೃತಿ ಅತ್ಯದ್ಭುತವಾಗಿತ್ತು. ಬೆಂಗಳೂರು, ಮೈಸೂರಿನಂತಹ ಮಹಾನಗರಗಳಿಗೆ ಹೋಗಿ ಫಲಪುಷ್ಪ ಪ್ರದರ್ಶನ ನೋಡುತ್ತಿದ್ದ ಚಿಕ್ಕಮಗಳೂರಿಗರಿಗೆ ಇದೀಗ ತಮ್ಮೂರಲ್ಲೇ ಬಗೆಬಗೆಯ ಫಲಪುಷ್ಪಗಳ ಜೊತೆ ಬಣ್ಣ ಬಣ್ಣದ ಹೂಗಳ ಪ್ರದರ್ಶನ ನೋಡಿ ಖುಷಿಪಡುತ್ತಿದ್ದಾರೆ. ಜಿಲ್ಲಾದ್ಯಂತ ಎಲ್ಲಾ ಊರುಗಳಿಂದಲೂ ಬಂದು ಈ ಸೌಂದರ್ಯವನ್ನ ನೋಡಿ ಖುಷಿ ಪಡುತ್ತಿದ್ದಾರೆ.

  • ಚಾರ್ಮಾಡಿಯಲ್ಲಿ ಹೆಚ್ಚಿದ  ಟ್ರಾಫಿಕ್ ಜಾಮ್- ಅಪಘಾತ ತಪ್ಪಿಸಲು ಪೊಲೀಸರನ್ನು ನೇಮಿಸುವಂತೆ ಸ್ಥಳೀಯರ ಆಗ್ರಹ

    ಚಾರ್ಮಾಡಿಯಲ್ಲಿ ಹೆಚ್ಚಿದ  ಟ್ರಾಫಿಕ್ ಜಾಮ್- ಅಪಘಾತ ತಪ್ಪಿಸಲು ಪೊಲೀಸರನ್ನು ನೇಮಿಸುವಂತೆ ಸ್ಥಳೀಯರ ಆಗ್ರಹ

    ಚಿಕ್ಕಮಗಳೂರು: ಶಿರಾಡಿಘಾಟ್ ರಸ್ತೆ ಬಂದ್ ಆದ ಮೇಲೆ ಬೆಂಗಳೂರು-ಮಂಗಳೂರು ಹೆದ್ದಾರಿಯ ವಾಹನಗಳು ಚಾರ್ಮಾಡಿ ಘಾಟ್‍ನಲ್ಲಿ ಸಂಚರಿಸುತ್ತಿರೋದ್ರಿಂದ ಚಾರ್ಮಾಡಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

    ದಿನಕ್ಕೆ ಎರಡ್ಮೂರು ಗಂಟೆ ವಾಹನ ಸವಾರರು ನಿಂತಲ್ಲೇ ನಿಲ್ಲುವಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಿಂದ ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಉಡುಪಿ, ಕಾರವಾರಕ್ಕೆ ಹೋಗುವ ವಾಹನಗಳೆಲ್ಲಾ ಇಲ್ಲೇ ಸಂಚರಿಸುತ್ತಿರೋದ್ರಿಂದ ಸೂಕ್ತ ನಿರ್ವಹಣೆ ಇಲ್ಲದ ಕಾರಣ ಸಾಕಷ್ಟು ಟ್ರಾಫಿಕ್ ಜಾಮ್ ಆಗ್ತಿದೆ.

    ಶಿರಾಡಿ ರಸ್ತೆ ದುರಸ್ಥಿಯಾಗೋವರೆಗೂ ಚಾರ್ಮಾಡಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧವಿದ್ರೂ ಕೂಡ ಭಾರೀ ವಾಹನಗಳು ಎಗ್ಗಿಲ್ಲದೆ ಸಂಚರಿಸುತ್ತಿವೆ. ರಸ್ತೆಬದಿಯಲ್ಲಿ ಸಾವಿರಾರು ಅಡಿ ಆಳವಿದೆ. ಇಂತಹ ಪ್ರಪಾತದ ಕಿರಿದಾದ ರಸ್ತೆಯಲ್ಲಿ ವಾಹನ ಸವಾರರು ಜೀವ ಕೈಯಲ್ಲಿಡಿದು ಸಂಚರಿಸುತ್ತಿದ್ದಾರೆ. ವಾಹನಗಳ ಸಂಚಾರ ಮಿತವಾಗಿದ್ದಾಗಲೇ ಇಲ್ಲಿ ಅಪಘಾತವಾಗ್ತಿತ್ತು. ಈಗ ವಾಹನಗಳ ಸಂಚಾರ ಸಂಖ್ಯೆ ಯಥೇಚ್ಛವಾಗಿದೆ. ಆದ್ದರಿಂದ ಚಾರ್ಮಾಡಿ ಘಾಟ್‍ನ ಆರಂಭ ಹಾಗೂ ಮುಕ್ತಾಯದ ಹಂತದಲ್ಲಿ ಪೊಲೀಸರನ್ನು ನೇಮಕ ಮಾಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

  • ಪ್ರಜ್ವಲ್ ರೇವಣ್ಣ ಚುನಾವಣೆ ಸ್ಫರ್ಧೆ ಕುರಿತು ಎಚ್‍ಡಿಡಿ ಖಡಕ್ಕಾಗಿ ಪ್ರತಿಕ್ರಿಯಿಸಿದ್ದು ಹೀಗೆ

    ಪ್ರಜ್ವಲ್ ರೇವಣ್ಣ ಚುನಾವಣೆ ಸ್ಫರ್ಧೆ ಕುರಿತು ಎಚ್‍ಡಿಡಿ ಖಡಕ್ಕಾಗಿ ಪ್ರತಿಕ್ರಿಯಿಸಿದ್ದು ಹೀಗೆ

    ಚಿಕ್ಕಮಗಳೂರು: ಡಾಕ್ಟರ್ ಮಗ ಡಾಕ್ಟರ್ ಆದ್ರೆ ಸಂಕಟವಿಲ್ಲ. ಜಡ್ಜ್ ಮಗ ಜಡ್ಜ್ ಆದ್ರೆ ಚರ್ಚೆ ಇಲ್ಲ. ರಾಜಕಾರಣಿ ಮಗ ರಾಜಕಾರಣಿಯಾದ್ರೆ ಯಾಕೆ ಯೋಚಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ವಿಚಾರ ಕುರಿತಂತೆ ಸೊಸೆಯನ್ನ ಮೇಲೆ ತರಬೇಕೆಂದು ಒಳಗೊಳಗೆ ಏನೋ ಇದೆ ಅನ್ನೋದೆಲ್ಲಾ ಸುಳ್ಳು. ನಾನು ಅಲ್ಲಿ ಐದು ಗಂಟೆ ಕೂತು ಕನ್ವಿನ್ಸ್ ಮಾಡಿದ್ದೇನೆ ಅಂದ್ರು.

    ಯಾರೊಬ್ರು ಟಿಕೆಟ್ ಆಕಾಂಕ್ಷಿಗಳಿಲ್ಲ. ಯಾರು ಟಿಕೆಟ್ ಕೇಳಬಾರದೆಂದು ಎಲ್ಲರೂ ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ. ಮೂರು ಬಾರಿ ಪಂಚಾಯತಿ ಕೂಡ ನಡೆಸಿದ್ದೇವೆ. ಈಗಲೂ ಬಹಿರಂಗವಾಗಿ ಹೇಳುತ್ತಿದ್ದೇನೆ. ಟಿಕೆಟ್ ಆಕಾಂಕ್ಷಿಗಳಿದ್ರೆ ಯಾರಾದ್ರು ಮುಂದೆ ಬನ್ನಿ ಅಂತ. ಆದ್ರೆ ಯಾರೊಬ್ರು ಬಂದಿಲ್ಲ ಅಂದ್ರು.