Tag: Chikkanna

  • ಚಿಕ್ಕಣ್ಣ ಹೊಸ ಲುಕ್: ಲಕ್ಷ್ಮೀಪುತ್ರ ಫಸ್ಟ್ ಲುಕ್ ರಿಲೀಸ್

    ಚಿಕ್ಕಣ್ಣ ಹೊಸ ಲುಕ್: ಲಕ್ಷ್ಮೀಪುತ್ರ ಫಸ್ಟ್ ಲುಕ್ ರಿಲೀಸ್

    ಉಪಾಧ್ಯಕ್ಷ ಸಿನಿಮಾ ಮೂಲಕ ಸ್ಯಾಂಡಲ್ ವುಡ್‌ಗೆ ನಾಯಕನಾಗಿ ಎಂಟ್ರಿ ಕೊಟ್ಟಿದ್ದ ಚಿಕ್ಕಣ್ಣ (Chikkanna) ಸದ್ಯ ಲಕ್ಷ್ಮೀಪುತ್ರ ಚಿತ್ರದ ಶೂಟಿಂಗ್‌ನಲ್ಲಿ ಮಗ್ನರಾಗಿದ್ದಾರೆ. ಈ ಸಿನಿಮಾದಿಂದ ಹೊಸ ಅಪ್‌ಡೇಟ್‌ ಸಿಕ್ಕಿದೆ. ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಲಕ್ಷ್ಮೀಪುತ್ರ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

    ಫಸ್ಟ್ ಲುಕ್‌ನಲ್ಲಿ ಚಿಕ್ಕಣ್ಣ, ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡಕ ಧರಿಸಿ, ಬಾಳೆಗೊನೆಯನ್ನು ಹಿಡಿದು ನಡೆದುಕೊಂಡು ಬರುತ್ತಿದ್ದಾರೆ. ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ ಇದಾಗಿದ್ದು, ಈಗಾಗಲೇ ಅವರ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.ಇದನ್ನೂ ಓದಿ: ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ರಾಜೇಂದ್ರ ಸಿಂಗ್ ಬಾಬು

    smip

    ಲಕ್ಷ್ಮೀಪುತ್ರ ತಾಯಿ ಮಗನ ಬಾಂಧವ್ಯದ ಕಥೆಯನ್ನು ಹೊಂದಿದೆ. ಚಿತ್ರಕ್ಕೆ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆದಿದ್ದು, ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ವಿಜಯ್ ಎಸ್.ಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

    ಚಿತ್ರದಲ್ಲಿ ಚಿಕ್ಕಣ್ಣನಿಗೆ ತಾಯಿ ತಾರಾ ಅಭಿನಯಿಸುತ್ತಿದ್ದಾರೆ. ನಿರ್ದೇಶಕ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮ್ಸ್‌ನಡಿ ನಿರ್ಮಾಣ ಮಾಡುತ್ತಿದ್ದಾರೆ. ಸಚಿವ ಸಂತೋಷ್ ಲಾಡ್ ಅರ್ಪಿಸುತ್ತಿರುವ ಈ ಚಿತ್ರಕ್ಕೆ ಗಿರೀಶ್ ಆರ್ ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತವಿದೆ.

    ಮಾಸ್ ಮಾದ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಎಪಿ ಅರ್ಜುನ್, ಪ್ರಶಾಂತ್ ರಾಜಪ್ಪ ಹಾಗೂ ವಿಜಯ್ ಈಶ್ವರ್ ಸಂಭಾಷಣೆ ಬರೆದಿದ್ದರೆ, ರಾಜೇಶ್ ರಾವ್ ಸಹ ನಿರ್ದೇಶನ ಮಾಡುತ್ತಿದ್ದಾರೆ. ಎಪಿ ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ನಿರ್ಮಾಣ ಹಾಗೂ ರವಿ ಕಿರಣ್ ಕೋ ಪ್ರೊಡ್ಯೂಸರ್ ಆಗಿ ಸಾಥ್ ಕೊಟ್ಟಿದ್ದಾರೆ.ಇದನ್ನೂ ಓದಿ: ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

     

  • `ಜೋಡೆತ್ತು’ ಮಾಡ್ತಾ ನಮ್ಗೂ ಜೋಡೆತ್ತು ಸಿಕ್ತು – ಮದ್ವೆ ಬಗ್ಗೆ ಚಿಕ್ಕಣ್ಣ ಫಸ್ಟ್ ರಿಯಾಕ್ಷನ್

    `ಜೋಡೆತ್ತು’ ಮಾಡ್ತಾ ನಮ್ಗೂ ಜೋಡೆತ್ತು ಸಿಕ್ತು – ಮದ್ವೆ ಬಗ್ಗೆ ಚಿಕ್ಕಣ್ಣ ಫಸ್ಟ್ ರಿಯಾಕ್ಷನ್

    ಹಾಸ್ಯ ನಟ ಚಿಕ್ಕಣ್ಣ (Chikkanna) ಸೀಕ್ರೆಟಾಗಿ ಮದ್ವೆ ನಿಶ್ಚಯ ಮಾಡಿಕೊಂಡು ಸುದ್ದಿಯಾಗಿದ್ರು. ಇತ್ತೀಚೆಗಷ್ಟೇ ಹೂ ಮುಡಿಸುವ ಶಾಸ್ತ್ರವೂ ನಡೆದು ಫೋಟೋಗಳು ವೈರಲ್ ಆಗಿದ್ದವು.

    ಇತ್ತ ʻಜೋಡೆತ್ತುʼ ಸಿನಿಮಾ ಚಿತ್ರಕ್ಕೆ ಸಿದ್ಧತೆ ಮಾಡಿಕೊಂಡಿರುವ ಚಿಕ್ಕಣ್ಣ ಮತ್ತೊಂದು ಕಡೆ ಮದ್ವೆ ತಯಾರಿ ಕೂಡ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದ್ರೆ ಸಿನಿಮಾ ಚಿತ್ರೀಕರಣ ಮುಗಿಯುವ ಹೊತ್ತಿಗೆ ನನ್ನ ಮದ್ವೆ ಕೂಡ ಆಗಿರುತ್ತೆ ಅಂದಿದ್ದಾರೆ ಚಿಕ್ಕಣ್ಣ.

    ಹೌದು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದ ಹುಡುಗಿ ಪಾವನಾರನ್ನ ಚಿಕ್ಕಣ್ಣ ವರಿಸಲಿದ್ದು ಇದು ಅರೇಂಜ್‌ ಮ್ಯಾರೇಜ್ ಎಂದಿದ್ದಾರೆ. ಶೀಘ್ರದಲ್ಲೇ ಮದುವೆಯ ದಿನಾಂಕ ಫಿಕ್ಸ್ ಆಗಲಿದೆ. ಜೋಡೆತ್ತು ನಿರ್ಮಾಪಕರ ಕಾಲ್ಗುಣದಿಂದ ನಮಗೂ ಜೋಡೆತ್ತು ಸಿಕ್ಕಿದೆ. ಡೈರೆಕ್ಟರ್ ಕೂಡ ಮದುವೆಯಾದ್ರು. ಈಗ ನಾನು ಮದುವೆಯಾಗುತ್ತಿದ್ದೇನೆ. ಜೋಡೆತ್ತು ಸಿನಿಮಾ ಚಿತ್ರೀಕರಣದ ಮುಗಿಯೋ ಹೊತ್ತಿಗೆ ನನ್ನ ಮದುವೆಯೂ ಆಗಿರುತ್ತೆ ಎಂದಿದ್ದಾರೆ ಚಿಕ್ಕಣ್ಣ.

    ಕಾಮಿಡಿ ಸ್ಟಾರ್ ಚಿಕ್ಕಣ್ಣ ಫುಲ್‌ ಫ್ಲೆಜ್ಡ್ ಹೀರೋ ಆಗಿ ಉಪಾಧ್ಯಕ್ಷ ಸಿನಿಮಾದ ಮೂಲಕ ಭಡ್ತಿ ಪಡೆದಿದ್ದರು. ಇದೀಗ ಇನ್ನೊಂದು ಹೊಸ ಚಿತ್ರವೂ ಪ್ರಾರಂಭವಾಗಿದೆ. ಭೂಮಿ ಫಲ ಕೊಡಲು ಉಳುಮೆಗೆ ಜೋಡೆತ್ತು ಬೇಕು. ಬದುಕಿನ ಬಂಡಿ ಸಾಗಲೂ ಪತಿ-ಪತ್ನಿ ಜೋಡೆತ್ತಿನಂತೆ ಸಾಗಬೇಕು. ಹೀಗಾಗಿ ವೃತ್ತಿಯಲ್ಲೂ ವೈಯಕ್ತಿಕವಾಗಿಯೂ ಜೋಡೆತ್ತಿನ ಜೊತೆ ಪ್ರಯಾಣ ಮಾಡುತ್ತಿದ್ದಾರೆ ಚಿಕ್ಕಣ್ಣ.

  • ಮತ್ತೆ ಹೀರೋ ಆದ ಚಿಕ್ಕಣ್ಣ: ಮಹೇಶ್ ಕುಮಾರ್ ನಿರ್ದೇಶನದ ಚಿತ್ರ

    ಮತ್ತೆ ಹೀರೋ ಆದ ಚಿಕ್ಕಣ್ಣ: ಮಹೇಶ್ ಕುಮಾರ್ ನಿರ್ದೇಶನದ ಚಿತ್ರ

    ಳೆದ ವರ್ಷದ ಸೂಪರ್ ಹಿಟ್ ಸಿನಿಮಾಗಳ ಪೈಕಿ ‘ಉಪಾಧ್ಯಕ್ಷ’ ಕೂಡ ಒಂದು. ಚಿಕ್ಕಣ್ಣ (Chikkanna) ನಾಯಕನಟರಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಕಮಾಲ್ ಮಾಡಿತ್ತು. ಅದಾದ ಬಳಿಕ ಸಖತ್ ಚ್ಯೂಸಿಯಾಗಿರುವ ಚಿಕ್ಕಣ್ಣ, ಸಾಕಷ್ಟು ಸ್ಕ್ರಿಪ್ಟ್‌ಗಳನ್ನು ಕೇಳಿ ಕೆಲವೊಂದನ್ನು ಮಾತ್ರ ಫೈನಲ್ ಮಾಡುತ್ತಿದ್ದಾರೆ.

    ಸದ್ಯ ಲಕ್ಷ್ಮಿ ಪುತ್ರ ಸಿನಿಮಾದಲ್ಲಿ ತೊಡಗಿಸಿಕೊಂಡಿರುವ ಚಿಕ್ಕಣ್ಣ, ಅದಾದ ಬಳಿಕ ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈವರೆಗೂ ಮಾಡಿರದ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿರುವ ಅವರು, ವಿಭಿನ್ನ ಕಥಾಹಂದರದ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದೇಸಿ ಸೊಗಡಿನ ಈ ಸಿನಿಮಾಕ್ಕೆ ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಯೋಗ್ಯ ಹಾಗೂ ಮದಗಜ ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿರುವ ಮಹೇಶ್, ಸದ್ಯ ಅಯೋಗ್ಯ 2 ಚಿತ್ರದ ಚಿತ್ರೀಕರಣವನ್ನು ಬಹುತೇಕ ಮುಗಿಸಿದ್ದಾರೆ. ಇದೀಗ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಮೂರನೇ ಸಿನಿಮಾಕ್ಕೆ ಮಹೇಶ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಮಹೇಶ್ ಕುಮಾರ್ ನಿರ್ದೇಶನದ ನಾಲ್ಕನೇ ಸಿನಿಮಾ.

    ವಿನೋದ್ ಪ್ರಭಾಕರ್ ನಟನೆಯ ಫೈಟರ್ ಚಿತ್ರವನ್ನು ನಿರ್ಮಿಸಿದ್ದ ಸೋಮಶೇಖರ್ ಕಟ್ಟಿಗೇನಹಳ್ಳಿ ಅವರ ನಿರ್ಮಾಣದಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಚಿತ್ರದ ಮುಹೂರ್ತ ಅಕ್ಟೋಬರ್’ನಲ್ಲಿ ನೆರವೇರಲಿದ್ದು, ಅದೇ ದಿನ ಶೀರ್ಷಿಕೆ ಸಹ ಅನಾವರಣಗೊಳ್ಳಲಿದೆ.

    ಆಕಾಶ್ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಅದ್ಧೂರಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಸೋಮಶೇಖರ್ ಕಟ್ಟಿಗೇನಹಳ್ಳಿ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ವಿ.ಹರಿಕೃಷ್ಣ ಸಂಗೀತ, ಸುಧಾಕರ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮಾಸ್ತಿ, ರಘು ನಿಡುವಳ್ಳಿ ಹಾಗೂ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ಮೋಹನ್ ಬಿ ಕೆರೆ ಕಲಾ ನಿರ್ದೇಶನ ಈ ಚಿತ್ರಕ್ಕಿದ್ದು, ಉಳಿದ ತಾರಾಗಣ ಹಾಗೂ ತಾಂತ್ರಿಕ ಬಳಗದ ಮಾಹಿತಿಯನ್ನು ಶೀಘ್ರದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ.

  • ಕಾಮಿಡಿ ಸ್ಟಾರ್‌ಗೆ ಕಂಕಣ ಭಾಗ್ಯ – ಚಿಕ್ಕಣ್ಣನ ಬದುಕಿಗೆ ಮನಮೆಚ್ಚಿದ ಹುಡುಗಿ

    ಕಾಮಿಡಿ ಸ್ಟಾರ್‌ಗೆ ಕಂಕಣ ಭಾಗ್ಯ – ಚಿಕ್ಕಣ್ಣನ ಬದುಕಿಗೆ ಮನಮೆಚ್ಚಿದ ಹುಡುಗಿ

    ಸ್ಯಾಂಡಲ್‌ವುಡ್‌ನಲ್ಲಿ ನಡೆಯುತ್ತಿರುವ ಮದುವೆಗಳಿಗೆ (Marriage) ಕಾಮಿಡಿ ಸ್ಟಾರ್ ಚಿಕ್ಕಣ್ಣ (Comedy Star Chikkanna) ಕೂಡ ಸಾಕ್ಷಿ ಆಗುತ್ತಿದ್ದಾರೆ. ಚಿಕ್ಕಣ್ಣನ ಹೊಸ ಜೀವನಕ್ಕೆ ಮಂಡ್ಯದ (Mandya) ಹುಡುಗಿ ಕಾಲಿಡುತ್ತಿದ್ದು, ಸದ್ದಿಲ್ಲದೇ ಹೂ ಮುಡಿಸುವ ಶಾಸ್ತ್ರ ಕೂಡ ಮುಗಿದು ಹೋಗಿದೆ. ಚಿಕ್ಕಣ್ಣನ ಲೈಫ್‌ಗೆ ಎಂಟ್ರಿ ಕೊಟ್ಟಿರೋ ಹುಡುಗಿ ಯಾರು? ಇದು ಅರೇಂಜ್ ಮ್ಯಾರೇಜಾ? ಅಥವಾ ಲವ್ ಮ್ಯಾರೇಜಾ? ಚಿಕ್ಕಣ್ಣ ಬದುಕಿಗೆ ಬಂದ ಮನಮೆಚ್ಚಿದ ಹುಡುಗಿ ಏನು ಮಾಡ್ತಿದ್ದಾರೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

    ಕಳೆದ ಎರಡ್ಮೂರು ವರ್ಷಗಳಿಂದ ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ ಸಮಾಚಾರ ಹಲವಾರು ಬಾರಿ ಕೇಳಿ ಬಂದಿದೆ. ಸೋಷಿಯಲ್ ಮೀಡಿಯಾದಲ್ಲಂತೂ ಎರಡ್ಮೂರು ಬಾರಿ ಚಿಕ್ಕಣ್ಣನ ಮದ್ವೆಯನ್ನೂ ಮಾಡಿಸಿದ್ದಾರೆ. ಹಾಗಾಗಿ ಮದ್ವೆ ವಿಷ್ಯ ತೆಗೆದಾಗೊಮ್ಮೆ ತಪ್ಪಿಸಿಕೊಳ್ಳುತ್ತಿದ್ದರು ಚಿಕ್ಕಣ್ಣ. ಹುಡುಗಿ ಸಿಕ್ಕಾಗ ನೋಡೋಣ ಬಿಡಿ ಅಂತ ಹಾರಿಕೆ ಉತ್ತರವನ್ನೂ ಕೊಡುತ್ತಿದ್ದರು. ಇದೀಗ ಚಿಕ್ಕಣ್ಣನ ಮದ್ವೆ ಫಿಕ್ಸ್ ಆಗಿದೆ. ಸದ್ದಿಲ್ಲದೇ ಹುಡುಗಿಗೆ ಹೂ ಮುಡಿಸುವ ಶಾಸ್ತ್ರವನ್ನೂ ಚಿಕ್ಕಣ್ಣನ ಮನೆಯವರು ಮಾಡಿದ್ದಾರೆ. ಚಿಕ್ಕಣ್ಣನ ಬದುಕಿಗೆ ಮಂಡ್ಯದ ಹುಡುಗಿಯ ಆಗಮನವಾಗಿದ್ದು, ಸಹಜವಾಗಿಯೇ ಚಿಕ್ಕಣ್ಣನ ಮಹಿಳಾ ಫ್ಯಾನ್ಸ್‌ಗೆ ನಿರಾಸೆಯಾಗಿದೆ.

    ಮೈಸೂರಿನ ಬಲ್ಲಹಳ್ಳಿಯಲ್ಲಿ ಹುಟ್ಟಿರೋ ಚಿಕ್ಕಣ್ಣ, ಎಸ್‌ಎಸ್‌ಎಲ್‌ಸಿ ನಂತರ ಗಾರೆ ಕೆಲಸ ಮಾಡಿಕೊಂಡಿದ್ದವರು. ಶಾಲಾ ದಿನಗಳಲ್ಲೇ ನಾಟಕಗಳಲ್ಲಿ ಅಭಿನಯಿಸುವ ಹವ್ಯಾಸವಿತ್ತು. ಹಾಗಾಗಿ ಆರ್ಕೆಸ್ಟ್ರಾಗಳಲ್ಲಿ ಸೇರಿಕೊಂಡು ಹಾಸ್ಯ ಪಾತ್ರಗಳನ್ನು ಮಾಡುತ್ತಿದ್ದರು. ಆರ್ಕೆಸ್ಟ್ರಾದಿಂದ ಕಿರುತೆರೆಗೆ ಆಗಮಿಸಿದ ಚಿಕ್ಕಣ್ಣ, ನಂತರ ಸಿನಿಮಾ ರಂಗಕ್ಕೆ ಎಂಟ್ರಿ ಪಡೆದರು. ಯಶ್ ನಟನೆಯ ಕಿರಾತಕ ಸಿನಿಮಾ ಚಿಕ್ಕಣ್ಣಗೆ ದೊಡ್ಡ ಬ್ರೇಕ್ ಕೊಟ್ಟಿತು. ಅಲ್ಲಿಂದ ಅವರು ತಿರುಗಿ ನೋಡಲೇ ಇಲ್ಲ. ಕನ್ನಡದ ಬಹುತೇಕ ಸ್ಟಾರ್ ಸಿನಿಮಾಗಳಲ್ಲಿ ನಟಿಸಿದರು. ಹಾಗಾಗಿ ಚಿಕ್ಕಣ್ಣನ ಮದ್ವೆಯ ಬಗ್ಗೆ ಎಲ್ಲರಿಗೂ ಕ್ಯೂರಿಯಾಸಿಟಿ ಇದ್ದೇ ಇತ್ತು. ಆ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಪಾವನಾ ಸದ್ಯ ಚಿಕ್ಕಣ್ಣನೊಂದಿಗೆ ಹಸೆಮಣೆ ಏರಲಿದ್ದಾರೆ.

    ಪಾವನಾರನ್ನು ಮೈಸೂರಿನಲ್ಲಿ ಭೇಟಿಯಾಗಿದ್ದರಂತೆ ಚಿಕ್ಕಣ್ಣ. ಆದರೆ, ಇದು ಶುದ್ಧ ಅರೇಂಜ್ ಮ್ಯಾರೇಜ್ ಅಂತಾರೆ ಚಿಕ್ಕಣ್ಣ. ತಮ್ಮ ಕುಟುಂಬಕ್ಕೆ ಪಾವನಾರನ್ನು ಚಿಕ್ಕಣ್ಣ ಅವರೇ ಪರಿಚಯಿಸಿದ್ದರೆ, ಎರಡೂ ಕುಟುಂಬಗಳ ಒಪ್ಪಿಗೆ ಪಡೆದುಕೊಂಡೇ ಈ ಜೋಡಿ ಮದುವೆ ಆಗುತ್ತಿದೆ. ಈಗಾಗಲೇ ಎರಡು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಹೂ ಮುಡಿಸುವ ಶಾಸ್ತ್ರ ಮುಗಿದಿದೆ. ಸದ್ಯದಲ್ಲೇ ನಿಶ್ಚಿತಾರ್ಥ ಕೂಡ ನೆರವೇರಲಿದೆಯಂತೆ. ಅಂದುಕೊಂಡಂತೆ ನಡೆದರೆ, ಇದೇ ವರ್ಷವೇ ಚಿಕ್ಕಣ್ಣ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ.

    ಸ್ಯಾಂಡಲ್‌ವುಡ್‌ನಲ್ಲಿ ಕಲ್ಯಾಣೋತ್ಸವಗಳ ಭರಾಟೆ ಜೋರಾಗಿದೆ. ಇತ್ತೀಚೆಗಷ್ಟೇ ನಿರೂಪಕಿ ಅನುಶ್ರೀ ಕೂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈಗ ಚಿಕ್ಕಣ್ಣನ ಸರದಿ. ಅದ್ಧೂರಿಯಾಗಿಯೇ ಮದುವೆಯಾಗಲು ಪ್ಲ್ಯಾನ್ ಮಾಡಿದ್ದಾರಂತೆ ಚಿಕ್ಕಣ್ಣ. ಬಹುತೇಕ ಮೈಸೂರಿನಲ್ಲೇ ಮದುವೆ ಅಂತಾನೂ ಹೇಳಲಾಗುತ್ತಿದೆ. ಮದುವೆ ಕುರಿತಾದ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿಕ್ಕಣ್ಣ ನೀಡಲಿದ್ದಾರಂತೆ.

  • ಕೊಲೆ ಕೇಸ್ ಸಾಕ್ಷ್ಯಿಧಾರನ ಜೊತೆ ಪ್ರಭಾವ ಬೀರುತ್ತಿದ್ದಾರಾ ದರ್ಶನ್?

    ಕೊಲೆ ಕೇಸ್ ಸಾಕ್ಷ್ಯಿಧಾರನ ಜೊತೆ ಪ್ರಭಾವ ಬೀರುತ್ತಿದ್ದಾರಾ ದರ್ಶನ್?

    ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ (Chikkanna) ಮೇಲೆ ನಟ ದರ್ಶನ್‌ (Darshan) ಸಿನಿಮಾ ವೀಕ್ಷಣೆ ಮಾಡಿದ್ದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲದೇ ಚಿಕ್ಕಣ್ಣ ಮೇಲೆ ದರ್ಶನ್‌ ಪ್ರಭಾವ ಬೀರುತ್ತಿದ್ದಾರಾ ಎಂಬ ಪ್ರಶ್ನೆಯೂ ಎದ್ದಿದೆ.

    ಬೆನ್ನು ನೋವಿನ ಕಾರಣ ನೀಡಿ ಕೋರ್ಟ್‌ ವಿಚಾರಣೆಗೆ ಗೈರಾಗಿದ್ದ ದರ್ಶನ್‌ (Darshan) ಅವರು ಗೆಳೆಯ ಧನ್ವೀರ್‌ (Dhanveer Gowda) ಅಭಿನಯದ ವಾಮನ (Vaamana) ಸಿನಿಮಾವನ್ನು ವೀಕ್ಷಿಸಿದ್ದಾರೆ. ಬುಧವಾರ ರಾತ್ರಿ ಜಿಟಿ ಮಾಲ್‌ನಲ್ಲಿ ವಾಮನ ಚಿತ್ರದ ವಿಶೇಷ ಶೋ ಆಯೋಜಿಸಲಾಗಿತ್ತು. ಈ ಶೋ ವೀಕ್ಷಿಸಲು ದರ್ಶನ್‌ ರಾತ್ರಿ 8 ಗಂಟೆಯ ವೇಳೆಗೆ ಮಾಲ್‌ಗೆ ಆಗಮಿಸಿದ್ದರು.

    ಬೆನ್ನು ನೋವನ್ನು ಲೆಕ್ಕಿಸದೇ ಆಪ್ತನ ಸಿನಿಮಾವನ್ನು ದರ್ಶನ್‌ ಸುಮಾರು ಮೂರು ಗಂಟೆಗಳ ಕಾಲ ಕುಳಿತು ವೀಕ್ಷಿಸಿದ್ದಾರೆ. ಸಿನಿಮಾ ಮಾಡುವ ಸಂದರ್ಭದಲ್ಲಿ ಚಿಕ್ಕಣ್ಣ ಸಹ ಜೊತೆಯಲ್ಲೇ ಕುಳಿತು ವಾಮನ ವೀಕ್ಷಿಸಿದ್ದಾರೆ.

    ಚಿಕ್ಕಣ್ಣ ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ದರ್ಶನ್‌ ಅವರನ್ನು ಭೇಟಿಯಾಗಿದ್ದರು. ಭೇಟಿಯಾದ ನಂತರ ಬಸವೇಶ್ವರ ನಗರದಲ್ಲಿರುವ ಎಸಿಪಿ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದ್ದರು. ಇದನ್ನೂ ಓದಿ: ನಾನ್ಯಾಕೆ 2ನೇ ಮದುವೆಯಾಗಿಲ್ಲ: ಸೀಕ್ರೆಟ್ ಬಿಚ್ಚಿಟ್ಟ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ

    ವಿಚಾರಣೆಯ ಬಳಿಕ ಮಾತನಾಡಿದ್ದ ಚಿಕ್ಕಣ್ಣ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ರನ್ನು ಮಾತನಾಡಿಸಬಾರದು ಎನ್ನುವುದು ತಿಳಿದಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ ಭೇಟಿ ಮಾಡಿ ಬಂದಿದ್ದಕ್ಕೆ ನನಗೆ ನೋಟಿಸ್‌ ನೀಡಲಾಗಿತ್ತು. ವಿಚಾರಣೆಯ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಸಾಕ್ಷಿದಾರ ಆರೋಪಿ ಬಳಿ ಹೋಗಬಾರದು ಎನ್ನುವುದು ನನಗೆ ತಿಳಿದಿರಲಿಲ್ಲ. ಗೊತ್ತಿದ್ದರೆ ಹೋಗಿ ದರ್ಶನ್‌ರನ್ನು ಜೈಲಿನಲ್ಲಿ ಭೇಟಿ ಆಗುತ್ತಿರಲಿಲ್ಲ ಎಂದು ತಿಳಿಸಿದ್ದರು.

    ದರ್ಶನ್‌ (Darshan) ಮತ್ತು ಗ್ಯಾಂಗ್‌ ಸದಸ್ಯರ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ಜಡ್ಜ್ ಎದುರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ನಂತರ ದರ್ಶನ್‌ ಅವರನ್ನು ಭೇಟಿ ಮಾಡಿದ್ದರು. ಸಾಧಾರಣವಾಗಿ ತನಿಖಾ ಹಂತದಲ್ಲಿರುವಾಗಲೇ ಸಾಕ್ಷಿಯಾದ ವ್ಯಕ್ತಿ ಜೈಲಿನಲ್ಲಿ (Jail) ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಆದರೆ ತನಿಖಾ ಹಂತದಲ್ಲಿರುವಾಗಲೇ ಚಿಕ್ಕಣ್ಣ ದರ್ಶನ್‌ ಅವರನ್ನು ಭೇಟಿ ಮಾಡಿದ್ದಕ್ಕೆ ನೋಟಿಸ್‌ ನೀಡಲಾಗಿತ್ತು.

    ಚಿಕ್ಕಣ್ಣ ಪ್ರಮುಖ ಸಾಕ್ಷಿ ಹೇಗೆ?
    ಯಾವುದೇ ಪ್ರಕರಣದಲ್ಲಿ ಪೊಲೀಸರು ಠಾಣೆಗೆ ಕರೆಸಿ ಸಾಕ್ಷಿಗಳನ್ನು ವಿಚಾರಣೆ ನಡೆಸುತ್ತಾರೆ. ಆದರೆ ಪ್ರಕರಣ ಒಂದರಲ್ಲಿ ಆ ವ್ಯಕ್ತಿಯ ಹೇಳಿಕೆ ಪ್ರಮುಖ ಸಾಕ್ಷಿ ಆಗಲಿದೆ ಎಂದಾದರೆ ಮಾತ್ರ ಆ ವ್ಯಕ್ತಿಯನ್ನು ಜಡ್ಜ್‌ ಮುಂದೆ ಹಾಜರು ಪಡಿಸಿ ಹೇಳಿಕೆ ನೀಡಲಾಗುತ್ತದೆ. ಇದನ್ನೂ ಓದಿ: ಕೋರ್ಟ್‌ಗೆ ಗೈರು, ಸಿನಿಮಾ ವೀಕ್ಷಣೆಗೆ ದರ್ಶನ್‌ ಹಾಜರ್

    ನಟ ಚಿಕ್ಕಣ್ಣ ಅವರ ಹೇಳಿಕೆಯನ್ನು ಸಿಆರ್‌ಪಿಸಿ (CrPC) 164ರ ಅಡಿಯಲ್ಲಿ ನ್ಯಾಯಾಧೀಶರ ಎದುರು ಪೊಲೀಸರು ದಾಖಲಿಸಿದ್ದರು. ಚಿಕ್ಕಣ್ಣ ಅವರ ಹೇಳಿಕೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಲೆಂದೇ ಪೊಲೀಸರು ಜಡ್ಜ್‌ ಮುಂದೆ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ.

    ರೇಣುಕಾಸ್ವಾಮಿ ಕೊಲೆ ನಡೆದ ದಿನ ದರ್ಶನ್ ಅವರ ಜೊತೆ ಚಿಕ್ಕಣ್ಣ ಸ್ಟೋನಿ ಬ್ರೂಕ್‌ನಲ್ಲಿ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಚಿಕ್ಕಣ್ಣ ಠಾಣೆಗೆ ಬಂದು ಪೊಲೀಸರು ಕೇಳಿದ ವಿವರಗಳನ್ನು ನೀಡಿದ್ದರೂ ಮುಂದೆ ಚಿಕ್ಕಣ್ಣ ಏನಾದರೂ ತಮ್ಮ ಹೇಳಿಕೆಯನ್ನು ಬದಲಿಸಿದರೆ ವಿಚಾರಣೆಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆಯೇ ಪಡೆದುಕೊಳ್ಳಲಾಗಿದೆ. ಈ ಕಾರಣಕ್ಕೆ ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಏನು ಹೇಳಿಕೆ ನೀಡಿದ್ದಾರೋ ಅದೇ ಹೇಳಿಕೆಯನ್ನು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ ನಂತರ ಕೋರ್ಟ್‌ನಲ್ಲಿ ನಡೆಯುವ ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ಹೇಳಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿದು ನಾನು ಹಿಂದೆ ಆ ರೀತಿಯ ಹೇಳಿಕೆ ನೀಡಿದ್ದೆ ಎಂಬ ಹೇಳಿಕೆಯನ್ನು ನೀಡಲು ಸಾಧ್ಯವಾಗುವುದಿಲ್ಲ.

  • ಉಪಾಧ್ಯಕ್ಷ ಚಿಕ್ಕಣ್ಣ ಈಗ ‘ಲಕ್ಷ್ಮೀಪುತ್ರ’- ‌’ಮಾರ್ಟಿನ್‌’ ಡೈರೆಕ್ಟರ್‌ ಎ.ಪಿ ಅರ್ಜುನ್ ಸಾಥ್

    ಉಪಾಧ್ಯಕ್ಷ ಚಿಕ್ಕಣ್ಣ ಈಗ ‘ಲಕ್ಷ್ಮೀಪುತ್ರ’- ‌’ಮಾರ್ಟಿನ್‌’ ಡೈರೆಕ್ಟರ್‌ ಎ.ಪಿ ಅರ್ಜುನ್ ಸಾಥ್

    ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎ.ಪಿ ಅರ್ಜುನ್ (A.P Arjun) ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಇದೇ ಎ.ಪಿ ಅರ್ಜುನ್ ಫಿಲ್ಮಂಸ್‌ನ 3ನೇ ಸಿನಿಮಾ ಅನೌನ್ಸ್ ಆಗಿದೆ. ಇದನ್ನೂ ಓದಿ:ನಾನು ಕ್ಷೇಮವಾಗಿದ್ದೇನೆ: ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್

    ಎ.ಪಿ ಅರ್ಜುನ್ ನಿರ್ಮಾಣ ಸಂಸ್ಥೆಯ 3ನೇ ಪ್ರಯತ್ನಕ್ಕೆ ʻಲಕ್ಷ್ಮೀಪುತ್ರʼ (Laksmiputra) ಎಂಬ ಟೈಟಲ್ ಇಡಲಾಗಿದ್ದು, ಚಿತ್ರಕ್ಕೆ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆಯುತ್ತಿದ್ದಾರೆ. ‘ಲಕ್ಷ್ಮೀಪುತ್ರ’ನಾಗಿ ಸ್ಯಾಂಡಲ್‌ವುಡ್ ‘ಉಪಾಧ್ಯಕ್ಷ’ ಚಿಕ್ಕಣ್ಣ ಅಭಿನಯಿಸುತ್ತಿದ್ದಾರೆ. ಎ.ಪಿ ಅರ್ಜುನ್ ಗರಡಿಯಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ವಿಜಯ್ ಎಸ್ ಸ್ವಾಮಿ ಈ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸುತ್ತಿದ್ದಾರೆ. ಅರ್ಜುನ್ ಅವರಿಂದ ನಿರ್ದೇಶನದ ಪಟುಗಳನ್ನು ಕಲಿತಿರುವ ವಿಜಯ್ ಅವರೀಗ ಪೂರ್ಣಪ್ರಮಾಣದ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

    ಚಿಕ್ಕಣ್ಣ ಹಾಗೂ ಸ್ಟಾರ್ ಡೈರೆಕ್ಟರ್ ಎ.ಪಿ ಅರ್ಜುನ್ ಕಾಂಬೋದ ಮೊದಲ ಸಿನಿಮಾವನ್ನು ಅರ್ಜುನ್ ಮಡದಿ ಅನ್ನಪೂರ್ಣ ಎಪಿ ಅರ್ಜುನ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿವ ಸಂತೋಷ್ ಲಾಡ್ ಲಕ್ಷ್ಮೀಪುತ್ರ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ರವಿಕಿರಣ್ ಗೌಡ ಸಹ ನಿರ್ಮಾಪಕರಾಗಿ ಸಾಥ್ ಕೊಡುತ್ತಿದ್ದಾರೆ. ಗಿರೀಶ್ ಆರ್ ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ಡಾ.ಕೆ.ರವಿ ವರ್ಮಾ ಸಾಹಸ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಎ.ಪಿ ಅರ್ಜುನ್, ಪ್ರಶಾಂತ್ ರಾಜಪ್ಪ ಹಾಗೂ ವಿಜಯ್ ಈಶ್ವರ್ ಸಂಭಾಷಣೆ, ರಾಜೇಶ್ ರಾವ್ ಸಹ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ.

    ಇದೇ ಜ.24ಕ್ಕೆ ಲಕ್ಷ್ಮೀಪುತ್ರನಿಗೆ ಮುಹೂರ್ತ ನಡೆಯಲಿದೆ. ‘ಲಕ್ಷ್ಮೀಪುತ್ರ’ ಎಂಬ ಕ್ಯಾಚಿ ಟೈಟಲ್‌ನೊಂದಿಗೆ ಚಿಕ್ಕಣ್ಣ ಹಾಗೂ ಎ.ಪಿ ಅರ್ಜುನ್ ಅಖಾಡಕ್ಕೆ ಇಳಿಯುತ್ತಿದ್ದು, ಇದೇ ತಿಂಗಳ ಜ.24ಕ್ಕೆ ಚಿತ್ರದ ಮುಹೂರ್ತ ನೆರವೇರಿಸಲು ಚಿತ್ರತಂಡ ಸಜ್ಜಾಗಿದೆ.

  • ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ರನ್ನು ಭೇಟಿ ಮಾಡಿದ್ದಕ್ಕೆ ಮತ್ತೆ ವಿಚಾರಣೆಗೆ ಹಾಜರಾದ ಚಿಕ್ಕಣ್ಣ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ರನ್ನು ಭೇಟಿ ಮಾಡಿದ್ದಕ್ಕೆ ಮತ್ತೆ ವಿಚಾರಣೆಗೆ ಹಾಜರಾದ ಚಿಕ್ಕಣ್ಣ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ (Chikkanna) ಇಂದು (ಆ.29) ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ (Actor Darshan) ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆದರು ಎಂದು ಚಿಕ್ಕಣ್ಣ ಮಾತನಾಡಿದ್ದಾರೆ. ಇದನ್ನೂ ಓದಿ:ಜೀವನ ಸಂಗಾತಿಯನ್ನು ಪರಿಚಯಿಸಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ರಂಜನಿ ರಾಘವನ್

    ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೋತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ ಭೇಟಿ ಮಾಡಿ ಬಂದಿದ್ದೆ. ಹಾಗಾಗಿ ವಿಚಾರಣೆಗೆ ಬರುವಂತೆ ನಿನ್ನೆ (ಆ.28) ನೋಟಿಸ್ ಕೊಟ್ಟಿದ್ದರು. 9 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಡಲಾಗಿತ್ತು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೇನೆ. ವಿಚಾರಣೆಯ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಒಂದಷ್ಟು ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೀನಿ. ಮತ್ತೆ ಅವರು ವಿಚಾರಣೆಗೆ ಕರೆದರೆ ಬರುತ್ತೇನೆ. ಸದ್ಯ ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ಸಾಕ್ಷಿದಾರ ಹೋಗಬಾರದು ಅನ್ನೋದು ನನಗೆ ತಿಳಿದಿರಲಿಲ್ಲ. ಗೊತ್ತಿದ್ದರೆ ಹೋಗಿ ದರ್ಶನ್‌ರನ್ನು ಜೈಲಿನಲ್ಲಿ ಭೇಟಿ ಆಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

    ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸಿತ್ತು. ಈ ಆದೇಶದ ನಂತರ ದರ್ಶನ್ ಅವರನ್ನು ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಪೊಲೀಸ್ ವ್ಯಾನ್‌ನಲ್ಲಿ ಬಳ್ಳಾರಿ ಜೈಲಿಗೆ ಕರೆ ತರಲಾಗಿದೆ.

  • ನಟ ದರ್ಶನ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಸಿದ್ಧತೆ – ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ?

    ನಟ ದರ್ಶನ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಸಿದ್ಧತೆ – ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ?

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ತನಿಖೆ ಅಂತಿಮ ಹಂತ ತಲುಪಿದ್ದು, ಹೈದರಾಬಾದ್‌ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬರೋದು ಮಾತ್ರ ಬಾಕಿ ಇದೆ. ಶೀಘ್ರವೇ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ (Bengaluru Police Commissioner) ಬಿ. ದಯಾನಂದ್ ತಿಳಿಸಿದ್ದಾರೆ. ಇದನ್ನೂ ಓದಿ: ಟೀಚರ್ ಹೊಡೆದ್ರು ಅಂತಾ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ – ಶಾಲಾ ಬಿಲ್ಡಿಂಗ್‌ನ 3ನೇ ಫ್ಲೋರ್‌ನಿಂದ ಏಕಾಏಕಿ ಜಿಗಿದ ವಿದ್ಯಾರ್ಥಿನಿ!

    ಮತ್ತೊಂದು ಕಡೆ ಇತ್ತೀಚಿಗೆ ನಟ ದರ್ಶನ್ (Darshan) ಭೇಟಿಯಾಗಿದ್ದ ನಟ ಚಿಕ್ಕಣ್ಣಗೆ ಸಂಕಷ್ಟ ಎದುರಾದ್ದಂತೆ ಕಾಣ್ತಿದೆ. ಕೋರ್ಟ್‌ನಲ್ಲಿ ಸಿಆರ್‌ಪಿಸಿ 164 ಅಡಿ ಹೇಳಿಕೆ ನೀಡಿದ್ದ ನಟ ಚಿಕ್ಕಣ್ಣ, ನಂತರ ಜೈಲಿಗೆ ತೆರಳಿ ದರ್ಶನ್ ಜೊತೆ ಮಾತುಕತೆ ನಡೆಸಿದ್ದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ಗೆ ಮೋದಿ ಭೇಟಿ – ಝೆಲೆನ್ಸ್ಕಿ ಜೊತೆ ಮಾತುಕತೆ; ಯುದ್ಧದಲ್ಲಿ ಮಡಿದ ಮಕ್ಕಳ ಸ್ಮಾರಕ ವೀಕ್ಷಿಸಿದ ಪ್ರಧಾನಿ!

    ನಟ ಚಿಕ್ಕಣ್ಣಗೆ ಮತ್ತೊಮ್ಮೆ ನೊಟೀಸ್ ನೀಡಿ ವಿಚಾರಣೆಗೆ ಒಳಪಡಿಸಲು ತೀರ್ಮಾನಿಸಿದ್ದಾರೆ. ಕಾನೂನಿನ್ವಯ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಪೊಲೀಸ್‌ ಆಯುಕ್ತ ದಯಾನಂದ್‌ ತಿಳಿಸಿದ್ದಾರೆ. ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತುಮಕೂರು ಜೈಲಲ್ಲಿರುವ ನಾಲ್ವರು ಆರೋಪಿಗಳಿಗೆ ದರ್ಶನ್ ಪರ ವಕೀಲರಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ – 2,144 ಪುಟಗಳ ದೋಷಾರೋಪ ಪಟ್ಟಿಯಲ್ಲೇನಿದೆ?

  • Renukaswamy Case | ಪ್ರಮುಖ ಸಾಕ್ಷಿ, ಹಾಸ್ಯ ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ!

    Renukaswamy Case | ಪ್ರಮುಖ ಸಾಕ್ಷಿ, ಹಾಸ್ಯ ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ!

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಹಾಸ್ಯನಟ ಚಿಕ್ಕಣ್ಣಗೆ (Chikkanna) ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

    ದರ್ಶನ್‌ (Darshan) ಮತ್ತು ಗ್ಯಾಂಗ್‌ ಸದಸ್ಯರ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಸೆಕ್ಷನ್ ಸಿಆರ್‌ಪಿಸಿ 164ರ ಅಡಿಯಲ್ಲಿ ಜಡ್ಜ್ ಎದುರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ನಂತರ ದರ್ಶನ್‌ ಅವರನ್ನು ಭೇಟಿ ಮಾಡಿದ್ದರು.

    ಸಾಧಾರಣವಾಗಿ ತನಿಖಾ ಹಂತದಲ್ಲಿರುವಾಗಲೇ ಸಾಕ್ಷಿಯಾದ ವ್ಯಕ್ತಿ ಜೈಲಿನಲ್ಲಿ (Jail) ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಆದರೆ ತನಿಖಾ ಹಂತದಲ್ಲಿರುವಾಗಲೇ ಚಿಕ್ಕಣ್ಣ ದರ್ಶನ್‌ ಅವರನ್ನು ಭೇಟಿ ಮಾಡಿದ್ದಕ್ಕೆ ಎಸ್‌ಐಟಿ ಶೀಘ್ರವೇ ನೋಟಿಸ್‌ ನೀಡುವ ಸಾಧ್ಯತೆಯಿದೆ.

    ಯಾವ ಉದ್ದೇಶಕ್ಕೆ ಆರೋಪಿಯನ್ನು ಭೇಟಿಯಾಗಿದ್ದೀರಿ? ಆರೋಪಿ ಬಳಿ ಏನು ಮಾತನಾಡಿದ್ದೀರಿ ಎಂದು‌ ಚಿಕ್ಕಣ್ಣ ಅವರನ್ನು ಪೊಲೀಸರು ಪ್ರಶ್ನಿಸುವ ಸಾಧ್ಯತೆಯಿದೆ. ಇದರ ಜೊತೆಯಲ್ಲಿ ಸಾಕ್ಷಿ-ಆರೋಪಿ ಭೇಟಿ ಬಗ್ಗೆ ಜೈಲಾಧಿಕಾರಿಗಳ ಬಳಿಯೂ ಮಾಹಿತಿ ಪಡೆಯಬಹುದು. ಅಷ್ಟೇ ಅಲ್ಲದೇ ಸಾಕ್ಷಿಗಳ ಭೇಟಿಯನ್ನ ತಡೆಯಲು ನ್ಯಾಯಾಲಯದಲ್ಲಿ ಎಸ್‌ಐಟಿ ಮನವಿ ಮಾಡುವ ಸಾಧ್ಯತೆಯಿದೆ.

    ಜೂನ್ 8 ರಂದು ಸ್ಟೋನಿ ಬ್ರೂಕ್‌ ಪಬ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು. ಪಾರ್ಟಿ ಬಳಿಕ ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗಿದ್ದರೆ ಚಿಕ್ಕಣ್ಣ ಮನೆಗೆ ತೆರಳಿದ್ದರು. ಇದನ್ನೂ ಓದಿ: ಪ್ರಾಸಿಕ್ಯೂಷನ್‌ ವಾರ್‌ – ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್‌

    ಚಿಕ್ಕಣ್ಣ ಪ್ರಮುಖ ಸಾಕ್ಷಿ ಹೇಗೆ?
    ಯಾವುದೇ ಪ್ರಕರಣದಲ್ಲಿ ಪೊಲೀಸರು ಠಾಣೆಗೆ ಕರೆಸಿ ಸಾಕ್ಷಿಗಳನ್ನು ವಿಚಾರಣೆ ನಡೆಸುತ್ತಾರೆ. ಆದರೆ ಪ್ರಕರಣ ಒಂದರಲ್ಲಿ ಆ ವ್ಯಕ್ತಿಯ ಹೇಳಿಕೆ ಪ್ರಮುಖ ಸಾಕ್ಷಿ ಆಗಲಿದೆ ಎಂದಾದರೆ ಮಾತ್ರ ಆ ವ್ಯಕ್ತಿಯನ್ನು ಜಡ್ಜ್‌ ಮುಂದೆ ಹಾಜರು ಪಡಿಸಿ ಹೇಳಿಕೆ ನೀಡಲಾಗುತ್ತದೆ.

    ನಟ ಚಿಕ್ಕಣ್ಣ ಅವರ ಹೇಳಿಕೆಯನ್ನು ಸಿಆರ್‌ಪಿಸಿ (CrPC) 164ರ ಅಡಿಯಲ್ಲಿ ನ್ಯಾಯಾಧೀಶರ ಎದುರು ಪೊಲೀಸರು ದಾಖಲಿಸಿದ್ದಾರೆ. ಚಿಕ್ಕಣ್ಣ ಅವರ ಹೇಳಿಕೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಲೆಂದೇ ಪೊಲೀಸರು ಜಡ್ಜ್‌ ಮುಂದೆ ಹೇಳಿಕೆ ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಟಿ.ನರಸೀಪುರದಲ್ಲಿ 10 ಸ್ಫೋಟಕಗಳು ಪತ್ತೆ – ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

    ರೇಣುಕಾಸ್ವಾಮಿ ಕೊಲೆ ನಡೆದ ದಿನ ದರ್ಶನ್ ಅವರ ಜೊತೆ ಚಿಕ್ಕಣ್ಣ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಚಿಕ್ಕಣ್ಣ ಠಾಣೆಗೆ ಬಂದು ಪೊಲೀಸರು ಕೇಳಿದ ವಿವರಗಳನ್ನು ನೀಡಿದ್ದರೂ ಮುಂದೆ ಚಿಕ್ಕಣ್ಣ ಏನಾದರೂ ತಮ್ಮ ಹೇಳಿಕೆಯನ್ನು ಬದಲಿಸಿದರೆ ವಿಚಾರಣೆಗೆ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆಯೇ ಪಡೆದುಕೊಳ್ಳಲಾಗಿದೆ. ಈ ಕಾರಣಕ್ಕೆ ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಏನು ಹೇಳಿಕೆ ನೀಡಿದ್ದಾರೋ ಅದೇ ಹೇಳಿಕೆಯನ್ನು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ ನಂತರ ಕೋರ್ಟ್‌ನಲ್ಲಿ ನಡೆಯುವ ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ಹೇಳಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿದು ನಾನು ಹಿಂದೆ ಆ ರೀತಿಯ ಹೇಳಿಕೆ ನೀಡಿದ್ದೆ ಎಂಬ ಹೇಳಿಕೆಯನ್ನು ನೀಡಲು ಸಾಧ್ಯವಾಗುವುದಿಲ್ಲ.

     

  • ದರ್ಶನ್ ಬಿಡುಗಡೆಗಾಗಿ ತಾಯಿ ಚಾಮುಂಡೇಶ್ವರಿ ಮೊರೆ ಹೋದ ಸಹೋದರ ದಿನಕರ್ ತೂಗುದೀಪ್

    ದರ್ಶನ್ ಬಿಡುಗಡೆಗಾಗಿ ತಾಯಿ ಚಾಮುಂಡೇಶ್ವರಿ ಮೊರೆ ಹೋದ ಸಹೋದರ ದಿನಕರ್ ತೂಗುದೀಪ್

    ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ದರ್ಶನ್ (Darshan) ಬಿಡುಗಡೆಗಾಗಿ ತೂಗುದೀಪ್ ಫ್ಯಾಮಿಲಿ ಈಗ ದೇವರ ಮೊರೆ ಹೋಗಿದ್ದಾರೆ. ದಿನಕರ್ ತೂಗುದೀಪ್ (Dinakar Thoogudeepa) ದಂಪತಿ ಜೊತೆ ನಟ ಚಿಕ್ಕಣ್ಣ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ:ಧ್ರುವ ಸರ್ಜಾ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಜು.29ರಂದು ಹೊರಬೀಳಲಿದೆ ‘ಕೆಡಿ’ ಚಿತ್ರದ ಅಪ್‌ಡೇಟ್

    ಮೈಸೂರಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್‌ ಸಹೋದರ ದಿನಕರ್ ತೂಗುದೀಪ್ ಕುಟುಂಬದ ಜೊತೆ ಚಿಕ್ಕಣ್ಣ ಕೂಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಣ್ಣನನ್ನು ಸಂಕಷ್ಟದಿಂದ ಪಾರು ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ.

    ಇನ್ನೂ ಇಂದು (ಜು.26) ಬೆಳಗ್ಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ವಿಜಯಲಕ್ಷ್ಮಿ ಚಂಡಿಕಾ ಯಾಗ ಮಾಡಿಸಿದ್ದಾರೆ. ದರ್ಶನ್‌ರನ್ನು ಸಂಕಷ್ಟದಿಂದ ಪಾರಾಗಲಿ ಎಂದು ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.