Tag: Chikkanna

  • ಚಿತ್ರೀಕರಣ ಮುಗಿಸಿದ ಚಿಕ್ಕಣ್ಣ ನಟನೆ ‘ಫಾರೆಸ್ಟ್’ ಸಿನಿಮಾ

    ಚಿತ್ರೀಕರಣ ಮುಗಿಸಿದ ಚಿಕ್ಕಣ್ಣ ನಟನೆ ‘ಫಾರೆಸ್ಟ್’ ಸಿನಿಮಾ

    ನ್ನಡದಲ್ಲೀಗ ಕಂಟೆಂಟ್ ಆಧರಿಸಿದ ಚಿತ್ರಗಳದ್ದೇ ಕಾರುಬಾರು. ಉತ್ತಮ ಕಂಟೆಂಟ್ ಇರುವ ಚಿತ್ರಗಳು ಇತ್ತೀಚಿಗೆ ಯಶಸ್ವಿಯಾಗಿರುವ ಉದಾಹರಣೆಗಳು ಕನ್ನಡದಲ್ಲಿ ಸಾಕಷ್ಟಿದೆ. ಅಂತಹದೇ ಉತ್ತಮ ಕಂಟೆಂಟ್‌ನೊಂದಿಗೆ ಕನ್ನಡಿಗರ ಮುಂದೆ ಬರುತ್ತಿದೆ ‘ಫಾರೆಸ್ಟ್’  (Forest Film) ಸಿನಿಮಾ. ಸದ್ಯ ಈ ಸಿನಿಮಾ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ.

    ಎನ್.ಎಂ.ಕೆ ಸಿನಿಮಾಸ್ ಲಾಂಛನದಲ್ಲಿ ಎನ್.ಎಂ ಕಾಂತರಾಜ್ ನಿರ್ಮಾಣದ, ಚಂದ್ರ ಮೋಹನ್ ನಿರ್ದೇಶನದ ಹಾಗೂ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಫಾರೆಸ್ಟ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ ‘ಓಡೋ ಓಡೋ’ ಹಾಡು ಬಿಡುಗಡೆಯಾಗಿತ್ತು. ಖ್ಯಾತ ಗಾಯಕ ಕೈಲಾಶ್ ಖೇರ್ ಹಾಡಿರುವ ಈ ಹಾಡನ್ನು ಈಗಾಗಲೇ 11 ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದರು. ಈ ಹಾಡಿಗೆ ಈಗ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಮಲ್ಟಿಸ್ಟಾರ್‌ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಫಾರೆಸ್ಟ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

    ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜೊತೆಗೂಡಿ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಅವರೆ ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಆನಂದ್ ರಾಜವಿಕ್ರಮ್ ಅವರದಾಗಿದೆ. ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ‘ಫಾರೆಸ್ಟ್’ ಚಿತ್ರಕ್ಕಿದೆ. ಇದನ್ನೂ ಓದಿ:ಚಿತ್ರೀಕರಣದ ವೇಳೆ ವರುಣ್ ಧವನ್ ಪಕ್ಕೆಲುಬಿಗೆ ಪೆಟ್ಟು

    ಚಿಕ್ಕಣ್ಣ (Chikkanna), ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ (Sharanya Shetty), ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ‘ಫಾರೆಸ್ಟ್’ ಸಿನಿಮಾದ ಫಸ್ಟ್‌ ಸಾಂಗ್‌ ರಿಲೀಸ್‌

    ‘ಫಾರೆಸ್ಟ್’ ಸಿನಿಮಾದ ಫಸ್ಟ್‌ ಸಾಂಗ್‌ ರಿಲೀಸ್‌

    ಸ್ಯಾಂಡಲ್‌ವುಡ್ (Sandalwood) ‘ಉಪಾಧ್ಯಕ್ಷ’ ಚಿಕ್ಕಣ್ಣ (Chikkanna) ಸ್ನೇಹಿತರ ಜೊತೆಗೂಡಿ ಕಾಡಿನ ಕತೆ ಹೇಳೋಕೆ ರೆಡಿ ಆಗಿದ್ದಾರೆ. ಶೇಕಡ 80ರಷ್ಟು ಸಿನಿಮಾ ಕಾಡಿನಲ್ಲಿಯೇ ಸಾಗುತ್ತದೆ. ಹಾಗಾಗಿ ಚಿತ್ರಕ್ಕೆ ‘ಫಾರೆಸ್ಟ್’ ಅಂತಲೇ ಹೆಸರಿಡಲಾಗಿದೆ. ಈ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಇದನ್ನೂ ಓದಿ:ದರ್ಶನ್ ಪ್ರಕರಣದ ಕುರಿತು ನಟಿ ಮಯೂರಿ ರಿಯಾಕ್ಷನ್

    ‘ಓಡೋ ಓಡೋ’ ಅಂತಾ ಶುರುವಾಗುವ ಹಾಡಿಗೆ ಪುನೀತ್ ಆರ್ಯ ಕ್ಯಾಚಿ ಆಗಿ ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕ ಕೈಲಾಸ್ ಖೇರ್, ಹರ್ಷ ಉಪ್ಪಾರ್ ಧ್ವನಿಯಾಗಿದ್ದಾರೆ. ಧರ್ಮವೀರ್ ಈ ಹಾಡಿಗೆ ಸಂಗೀತ ಒದಗಿಸಿದ್ದಾರೆ. ಓಡೋ ಓಡೋ ಹಾಡಿನಲ್ಲಿ ಚಿಕ್ಕಣ್ಣ ರಂಗಾಯಣ ರಘು, ಫಸ್ಟ್ ರ‍್ಯಾಂಕ್ ರಾಜು ಖ್ಯಾತಿಯ ಗುರುನಂದನ್, ಅನೀಶ್ ತೇಜೇಶ್ವರ್ ಹಾಗೂ ಅರ್ಚನಾ ಕೊಟ್ಟಿಗೆ ಕಾಣಿಸಿಕೊಂಡಿದ್ದಾರೆ.

    ಈ ಹಿಂದೆ ‘ಡಬಲ್ ಇಂಜಿನ್’, ‘ಬಾಂಬೆ ಮಿಠಾಯಿ’, ‘ಬ್ರಹ್ಮಚಾರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಚಂದ್ರಮೋಹನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ ಇದೊಂದು ಫಾರೆಸ್ಟ್ ಅಡ್ವೆಂಚರಸ್ ಕಾಮಿಡಿ ಸಿನಿಮಾವಾಗಿದ್ದು, ಹಿರಿಯ ನಟ ಅವಿನಾಶ್, ಪ್ರಕಾಶ್ ತುಮ್ಮಿನಾಡ್, ಶರಣ್ಯ ಶೆಟ್ಟಿ (Sharany Shetty), ಅರ್ಚನಾ ಕೊಟ್ಟಿಗೆ (Archana Kottige), ದೀಪಕ್ ರೈ ಪಾಣಾಜೆ, ಸೂರಜ್ ಪಾಪ್ಸ್ ಸುನಿಲ್ ಕುಮಾರ್ ತಾರಾಬಳಗದಲ್ಲಿದ್ದಾರೆ.

    ‘ಫಾರೆಸ್ಟ್’ (Forest Film) ಸಿನಿಮಾಗೆ ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕಾಂತರಾಜು ಎಂಬುವವರು ಹಣ ಹಾಕುತ್ತಿದ್ದಾರೆ. ಚಿತ್ರಕ್ಕೆ ವಿ ರವಿಕುಮಾರ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಹೊಣೆಯನ್ನು ಅರ್ಜುನ್ ಕಿಟ್ಟು ಹೊತ್ತುಕೊಂಡಿದ್ದಾರೆ. ಧರ್ಮವೀರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿರುವ ಚಿತ್ರತಂಡ, ಮಡಿಕೇರಿ, ಮಂಗಳೂರು, ಚಿಕ್ಕಮಗಳೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

  • ರೇಣುಕಾಸ್ವಾಮಿ ಕೊಲೆ ಪ್ರಕರಣ- ಚಿಕ್ಕಣ್ಣ ಬಳಿಕ ಮತ್ತೊಬ್ಬ ನಟನಿಗೆ ವಿಚಾರಣೆ ಭೀತಿ!

    ರೇಣುಕಾಸ್ವಾಮಿ ಕೊಲೆ ಪ್ರಕರಣ- ಚಿಕ್ಕಣ್ಣ ಬಳಿಕ ಮತ್ತೊಬ್ಬ ನಟನಿಗೆ ವಿಚಾರಣೆ ಭೀತಿ!

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ ತನಿಖೆ ಭರದಿಂದ ಸಾಗಿದೆ. ಈ ಸಂಬಂಧ ಇಂದು ಹಾಸ್ಯನಟ ಚಿಕ್ಕಣ್ಣ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಬೆನ್ನಲ್ಲೇ ಇದೀಗ ಮತ್ತೊಬ್ಬ ನಟನಿಗೆ ವಿಚಾರಣೆಯ ಭೀತಿ ಎದುರಾಗಿದೆ.

    ಹೌದು. ಸ್ಟೋನಿ ಬ್ರೂಕ್ ಪಬ್‍ನಲ್ಲಿ ಚಿಕ್ಕಣ್ಣ (Chikkanna) ಅಲ್ಲದೇ ಇನ್ನೊಬ್ಬ ನಟನಿದ್ದ ವಿಚಾರ ಪೊಲೀಸರಿಗೆ ಗೊತ್ತಾಗಿದೆ. ಚಿಕ್ಕಣ್ಣ, ದರ್ಶನ್ ಬಿಟ್ಟು ಮತ್ತೊಬ್ಬ ನಟ ಇದ್ದರು. ಪಾರ್ಟಿ ನಂತರ ಚಿಕ್ಕಣ್ಣ ಮತ್ತು ಆ ನಟ ಇಬ್ರೂ ಒಟ್ಟಿಗೆ ತೆರಳಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

    ನಟ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರಂತೆ. ಇದೀಗ ಆ ನಟನಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಅಲ್ಲದೇ ನೋಟಿಸ್ ಕೊಟ್ಟು ವಿಚಾರಣೆಗೆ ಬರುವಂತೆ ಸೂಚನೆ ನೀಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ದರ್ಶನ್‌ ಊಟಕ್ಕೆ ಕರೆದಿದ್ರು ಹೋಗಿದ್ದೆ- ಪೊಲೀಸರ ಮುಂದೆ ಚಿಕ್ಕಣ್ಣ ಹೇಳಿದ್ದೇನು?

    ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Case) ಸಂಬಂಧ ಸ್ಟೋನಿ ಬ್ರೂಕ್ ಪಬ್‍ನಲ್ಲಿ (Stony Brook) ಚಿಕ್ಕಣ್ಣ ಇದ್ದರು ಎಂಬ ಮಾಹಿತಿ ಮೇರೆಗೆ ಪೊಲೀಸರು ಇಂದು ನಟನಿಗೆ ನೋಟಿಸ್ ಕೊಟ್ಟಿದ್ದರು. ಆದರೆ ನೋಟಿಸ್‍ಗೆ ಚಿಕ್ಕಣ್ಣ ಉತ್ತರಿಸಿರಲಿಲ್ಲ. ಬಳಿಕ ಸ್ಟೋನಿ ಬ್ರೂಕ್ ಪಬ್‍ನಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಲು ತೆರಳಿದ್ದಾಗ ಚಿಕ್ಕಣ್ಣ ಅಲ್ಲಿದ್ದರು. ಹೀಗಾಗಿ ಅವರನ್ನು ಪೊಲೀಸರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತಂದು ಸರಿಸುಮಾರು ಮೂರೂವರೆ ಗಂಟೆಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿ ಕಳಿಸಿದ್ದಾರೆ.

    ವಿಚಾರಣೆ ಎದುರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, ದರ್ಶನ್ ನನಗೆ ಸ್ನೇಹಿತ, ಹಾಗಾಗಿ ಊಟಕ್ಕೆ ಹೋಗಿದ್ದೆ. ಇವತ್ತು ಪೊಲೀಸರು ವಿಚಾರಣೆ ಕರೆದಿದ್ರು ಬಂದಿದ್ದೀನಿ. ಪ್ರಕರಣದ ತನಿಖೆ ನಡೀತಿದೆ. ಹೀಗಾಗಿ ಈಗ ನಾನು ಏನೂ ಹೇಳಲ್ಲ ಎಂದು ಹೇಳಿ ಹೊರಟರು.

  • ದರ್ಶನ್‌ ಊಟಕ್ಕೆ ಕರೆದಿದ್ರು ಹೋಗಿದ್ದೆ- ಪೊಲೀಸರ ಮುಂದೆ ಚಿಕ್ಕಣ್ಣ ಹೇಳಿದ್ದೇನು?

    ದರ್ಶನ್‌ ಊಟಕ್ಕೆ ಕರೆದಿದ್ರು ಹೋಗಿದ್ದೆ- ಪೊಲೀಸರ ಮುಂದೆ ಚಿಕ್ಕಣ್ಣ ಹೇಳಿದ್ದೇನು?

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್‌ ಹಾಗೂ ಕೊಲೆ ಪ್ರಕರಣದ (Renukaswamy Case) ತನಿಖೆ ಭರದಿಂದ ಸಾಗುತ್ತಿದೆ. ಪ್ರಕರಣ ಸಂಬಂಧ ಇಂದು ಹಾಸ್ಯನಟ ಚಿಕ್ಕಣ್ಣ ಅವರನ್ನು ಕೂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಸ್ಟೋನಿ ಬ್ರೂಕ್ ಗೆ (Stonny Brook) ಹೋಗಿದ್ದ ಬಗ್ಗೆ ವಿಚಾರಣೆಯ ವೇಳೆ, ನನ್ನನ್ನು ದರ್ಶನ್‌ (Challenging Star Darshan) ಅವರು ಊಟಕ್ಕೆ ಕರೆದಿದ್ದರು. ಹೀಗಾಗಿ ಊಟಕ್ಕೆ ಹೋಗಿದ್ದೇನೆ. ಇದು ಬಿಟ್ಟು ಬೇರೆ ಯಾವುದರ ಬಗ್ಗೆಯೂ ನನಗೆ ಮಾಹಿತಿ ಇಲ್ಲ ಎಂದು ಚಿಕ್ಕಣ್ಣ ಪೊಲೀಸರ ಮುಂದೆ ಹೇಳಿದ್ದಾರೆ.

    ಊಟ ಮಾಡಿಕೊಂಡು ನಾನು ಅಲ್ಲಿಂದ ಹೊರಟೆ. ಅಲ್ಲಿ ಏನಾಯ್ತು ಅನ್ನೋದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ರೇಣುಕಾಸ್ವಾಮಿ ಬಗ್ಗೆ ಯಾವುದೇ ವಿಚಾರದ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಟಿವಿಗಳಲ್ಲಿ ಬಂದ ಮೇಲೆಯೇ ನಂಗೆ ಈ ವಿಚಾರದ ಬಗ್ಗೆ ಗೊತ್ತಾಯ್ತು. ಹೀಗಾಗಿ ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ದರ್ಶನ್‌, ಚಿಕ್ಕಣ್ಣ ಕರೆತಂದು ಸ್ಟೋನಿಬ್ರೂಕ್‌ ಪಬ್‌ನಲ್ಲಿ ಸ್ಥಳ ಮಹಜರು – ಮೂಲೆಮೂಲೆಯನ್ನೂ ಜಾಲಾಡಿದ ಪೊಲೀಸರು!

    ನಾನು ದರ್ಶನ್ ಗೆಳೆಯ. ಹೀಗಾಗಿ ಸಾಮಾನ್ಯವಾಗಿ ಊಟಕ್ಕೆ ಸೇರುತ್ತಿರುತ್ತೇವೆ. ಅವತ್ತು ಕೂಡ ನನ್ನ ಊಟಕ್ಕೆ ಕರೆದಿದ್ದರು ನಾನು ಹೋಗಿದ್ದೆ ಅಷ್ಟೇ ಎಂದು ಪ್ರಕರಣ ಸಂಬಂಧ ಚಿಕ್ಕಣ್ಣ (Comedy Actor Chikkanna) ಪೊಲೀಸ್ ಠಾಣೆಯಲ್ಲಿ ಹೇಳಿಕೆ ನೀಡಿದ್ದಾರೆ.  ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ ಅಂದರ್‌ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

    ಪ್ರಕರಣದಲ್ಲಿ ಇಂದು ಚಿಕ್ಕಣ್ಣ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು. ಆದರೆ ಈ ನೋಟಿಸ್‌ಗೆ ಚಿಕ್ಕಣ್ಣ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಬಳಿಕ ಸ್ಟೋನಿ ಬ್ರೂಕ್‌ಗೆ ಪೊಲೀಸರು ಸ್ಥಳ ಮಹಜರಿಗೆ ತೆರಳಿದ್ದಾಗ ಚಿಕ್ಕಣ್ಣ ಅಲ್ಲಿದ್ದರು. ಹೀಗಾಗಿ ಪೊಲೀಸರು ಹಾಸ್ಯನಟನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಗೆ ಕರೆತಂದು ಸತತ ಮೂರುವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

  • ದರ್ಶನ್‌, ಚಿಕ್ಕಣ್ಣ ಕರೆತಂದು ಸ್ಟೋನಿಬ್ರೂಕ್‌ ಪಬ್‌ನಲ್ಲಿ ಸ್ಥಳ ಮಹಜರು – ಮೂಲೆಮೂಲೆಯನ್ನೂ ಜಾಲಾಡಿದ ಪೊಲೀಸರು!

    ದರ್ಶನ್‌, ಚಿಕ್ಕಣ್ಣ ಕರೆತಂದು ಸ್ಟೋನಿಬ್ರೂಕ್‌ ಪಬ್‌ನಲ್ಲಿ ಸ್ಥಳ ಮಹಜರು – ಮೂಲೆಮೂಲೆಯನ್ನೂ ಜಾಲಾಡಿದ ಪೊಲೀಸರು!

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ನಡೆದ ಜೂನ್‌ 8ರ ಶನಿವಾರದಂದು ದರ್ಶನ್‌ ಮತ್ತು ಗ್ಯಾಂಗ್‌ನ ಸದಸ್ಯರು ಪಾರ್ಟಿ ಮಾಡಿದ್ದರು ಎನ್ನಲಾದ ಆರ್‌ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ನಲ್ಲಿಂದು (Stonny Brook Pub) ಪೊಲೀಸರು ಮಹಜರು ನಡೆಸಿದರು.

    ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು (Annapurneshwari Nagar Police) ನಟ ದರ್ಶನ್, ರೆಸ್ಟೊರೆಂಟ್ ಮಾಲೀಕ ವಿನಯ್, ಪ್ರದೂಶ್, ಪವನ್ ಆರೋಪಿಗಳನ್ನ ಕರೆತಂದು ಎಸಿಪಿ ಭರತ್‌ ರೆಡ್ಡಿ ಅವರ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಿದರು. ಸ್ಟಾರ್‌ ಕಾಮಿಡಿ ನಟ ಚಿಕ್ಕಣ್ಣ ಅವರೂ ಅಂದಿನ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂಬ ಕಾರಣಕ್ಕೆ ಚಿಕ್ಕಣ್ಣ ಅವರನ್ನು ಕರೆತಂದು ಸ್ಥಳ ಮಹಜರು ನಡೆಸಲಾಯಿತು. ಇದನ್ನೂ ಓದಿ: ಕಳೆದ 3 ದಶಕಗಳಲ್ಲಿ ದೇಶ ಕಂಡ ಡೆಡ್ಲಿ ರೈಲು ದುರಂತಗಳ ಬಗ್ಗೆ ನಿಮಗೆ ಗೊತ್ತಾ?

    ಪಬ್‌ನ ಮೂಲೆ ಮೂಲೆಯನ್ನು ಜಾಲಾಡಿದ ಪೊಲೀಸರು ಹಲವು ಮಾಹಿತಿಗಳನ್ನು ಕಲೆಹಾಕಿದರು. ದರ್ಶನ್‌ ಮತ್ತು ಗ್ಯಾಂಗ್‌ ಆರೋಪಿಗಳ ಜೊತೆಗೆ ಹಾಸ್ಯನಟ ಚಿಕ್ಕಣ್ಣ (Chikkanna) ರಿಂದಲೂ ಮಾಹಿತಿ ಕಲೆಹಾಕಿದರು. ಮೂಲಗಳು ಹೇಳುವಂತೆ ದರ್ಶನ್‌ ಮತ್ತು ಗ್ಯಾಗ್‌ ಅವರನ್ನು ಪೊಲೀಸರು ಸ್ಟೋನಿ ಬ್ರೂಕ್‌ ಪಬ್‌ಗೆ ಕರೆತರುವ 2 ಗಂಟೆಗೂ ಮುನ್ನವೇ ಪೊಲೀಸರು ಚಿಕ್ಕಣ್ಣ ಅವರನ್ನ ಕರೆತಂದು ಸ್ಥಳ ಮಹಜರು ನಡೆಸಿದ್ದರು ಎಂದು ತಿಳುದುಬಂದಿದೆ. ಸ್ಥಳ ಮಹಜರು ವೇಳೆ ಕೆಂಗೇರಿ ಮತ್ತು ಆರ್‌ಆರ್‌ ನಗರ ಪೊಲೀಸರಿಂದ ಪಬ್‌ ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಇದನ್ನೂ ಓದಿ:  ಸದ್ಯಕ್ಕಿನ್ನು ಆರೋಪಿಯಷ್ಟೇ, ಅಪರಾಧಿಯಾಗಿಲ್ಲ- ಅನುಷಾ ರೈ ರಿಯಾಕ್ಷನ್

    ಚಿಕ್ಕಣ್ಣಗ್ಗೆ ಏಕೆ ನೋಟಿಸ್‌?
    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ದರ್ಶನ್‌ (Darshan) ಗ್ಯಾಂಗ್‌ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ (Sandalwood) ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ (Chikkanna) ಪೊಲೀಸರು ನೋಟಿಸ್‌ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ನಡೆದ ಜೂನ್‌ 8 ಶನಿವಾರದಂದು ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರು ಆರ್‌ಆರ್‌ ನಗರದ ಸ್ಟೋನಿಬ್ರೂಕ್‌ ಪಬ್‌ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿತ್ತು. ಸಂಜೆ ವೇಳೆಗೆ ಸ್ವಲ್ಪ ಕೆಲಸವಿದೆ ಎಂದು ಹೇಳಿ ದರ್ಶನ್ ಹೊರಟಿದ್ದರು. ರೇಣುಕಾಸ್ವಾಮಿ ಕೊಲೆಯಾದ ದಿನವೇ ದರ್ಶನ್‌ ಜೊತೆ ಪಾರ್ಟಿ ಮಾಡಿದ್ದರು ಅನ್ನೋ ಮಾಹಿತಿ ಕೇಳಿಬಂದಿದ್ದರಿಂದ ಪೊಲೀಸರು ತುರ್ತು ವಿಚಾರಣೆಗೆ ಹಾಜರಾಗುವಂತೆ ಚಿಕ್ಕಣ್ಣಗೆ ನೋಟಿಸ್‌ ನೀಡಿದ್ದರು.

  • ‘ಮಾರ್ಟಿನ್’ ನಿರ್ದೇಶಕನ ಸಿನಿಮಾದಲ್ಲಿ ಚಿಕ್ಕಣ್ಣ

    ‘ಮಾರ್ಟಿನ್’ ನಿರ್ದೇಶಕನ ಸಿನಿಮಾದಲ್ಲಿ ಚಿಕ್ಕಣ್ಣ

    ‘ಉಪಾಧ್ಯಕ್ಷ’ ನಟ ಚಿಕ್ಕಣ್ಣ (Chikkanna) ಮತ್ತೆ ಹೀರೋ ಆಗಿ ಬರುತ್ತಿದ್ದಾರೆ. ಕಾಮಿಡಿ ಪಾತ್ರಗಳ ಮೂಲಕ ಸೈ ಎನಿಸಿಕೊಂಡಿದ್ದ ಚಿಕ್ಕಣ್ಣ ನಾಯಕ ನಟನಾಗಿ ಕೂಡ ಗಮನ ಸೆಳೆದಿದ್ದಾರೆ. ಹೀರೋ ಆಗಿ 2ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ. ‘ಮಾರ್ಟಿನ್’ (Martin) ಡೈರೆಕ್ಟರ್ ಎ.ಪಿ ಅರ್ಜುನ್ (A.P Arjun) ಜೊತೆ ಕೈಜೋಡಿಸಿದ್ದಾರೆ.

    ಉಮಾಪತಿ ಶ್ರೀನಿವಾಸ್ ನಿರ್ಮಾಣದ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ಚಿಕ್ಕಣ್ಣ ನಟಿಸಿದ್ದರು. ಮಲೈಕಾ ವಸುಪಾಲ್ ಜೊತೆ ಚಿಕ್ಕಣ್ಣ ಡ್ಯುಯೇಟ್ ಹಾಡಿದ್ದರು. ಈ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಬಂಪರ್ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಸಿನಿಮಾ ತಾರೆಯರು ಯಾರು?

    ಕಿಸ್, ಮಾರ್ಟಿನ್ ಸಿನಿಮಾ ನಿರ್ದೇಶಕ ಎ.ಪಿ ಅರ್ಜುನ್ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ಕೆರೆಬೇಟೆ’ ನಿರ್ದೇಶಕ ರಾಜಗುರು ಚಿಕ್ಕಣ್ಣಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮೂವರ ಕಾಂಬಿನೇಷನ್ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ. ಸದ್ಯ ಈ ನ್ಯೂಸ್‌ ಕೇಳಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ.

  • ಮಲ್ಟಿಸ್ಟಾರ್ ನಟನೆಯ ‘ಫಾರೆಸ್ಟ್’  ಚಿತ್ರಕ್ಕೆ ಚಂದ್ರ ಮೋಹನ್ ಡೈರೆಕ್ಟರ್

    ಮಲ್ಟಿಸ್ಟಾರ್ ನಟನೆಯ ‘ಫಾರೆಸ್ಟ್’ ಚಿತ್ರಕ್ಕೆ ಚಂದ್ರ ಮೋಹನ್ ಡೈರೆಕ್ಟರ್

    ನ್ನಡದಲ್ಲಿ ‌ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್,  ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ ನಾಲ್ಕು ಜನ ತಾರೆಯರನ್ನು ಒಂದೇ ಫ್ರೇಮ್ ಗೆ ತಂದು ಆಕ್ಷನ್ ಕಟ್ ಹೇಳುತ್ತಿರುವುದು ಡಬ್ಬಲ್ ಇಂಜಿನ್, ಬ್ರಹ್ಮಚಾರಿ ಸಿನಿಮಾಗಳ‌ ಸಾರಥಿ ಚಂದ್ರ ಮೋಹನ್.

    ಚಂದ್ರ ಮೋಹನ್ (Chandra Mohan) ಹೊಸ ಪ್ರಯತ್ನಕ್ಕೆ ಫಾರೆಸ್ಟ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಫಾರೆಸ್ಟ್  (Forrest) ಅಡ್ವೆಂಚರ್‌ ಕಾಮಿಡಿ ಸಿನಿಮಾ. ಚಿತ್ರ 80%ರಷ್ಟು ಭಾಗ ಕಾಡಿನಲ್ಲಿಯೇ ಸಾಗುತ್ತದೆ.

    ಚಿಕ್ಕಣ್ಣ, ಅನೀಶ್ , ಗುರುನಂದನ್ ಹಾಗೂ ರಂಗಾಯಣ ರಘು ನಾಲ್ಕು ತಾರೆಯರು ಫಾರೆಸ್ಟ್ ಸಿನಿಮಾದ ಆಧಾರ ಸ್ತಂಭಗಳು. ಫನ್ ಜೊತೆಗೆ ಥ್ರಿಲ್ಲಿಂಗ್ ರೈಡ್ ಅನುಭವ ನೀಡುವ ಫಾರೆಸ್ಟ್ ಚಿತ್ರಕ್ಕೆ ಎನ್ ಎಂಕೆ ಸಿನಿಮಾಸ್ ಬ್ಯಾನರ್ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ. ಅಂದಹಾಗೇ ಕಾಂತರಾಜು ಅವರಿಗಿದು ಚೊಚ್ಚಲ ಚಿತ್ರ. ಸಿನಿಮಾರಂಗದ ಮೇಲಿನ ಆಸಕ್ತಿಯಿಂದ ಫಾರೆಸ್ಟ್ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

    ಫಾರೆಸ್ಟ್ ಸಿನಿಮಾಗೆ ವಿ. ರವಿಶಂಕರ್  ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಧರ್ಮವೀರ್-ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ. ಸದ್ಯ ಟೈಟಲ್ ರಿವೀಲ್ ಮಾಡಿರುವ ಚಿತ್ರತಂಡವೀಗ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗದ ಮಾಹಿತಿ ನೀಡಲಿದೆ.

  • ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ದರ್ಶನ್ ಭೇಟಿ

    ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ದರ್ಶನ್ ಭೇಟಿ

    ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಇದೀಗ ಶೂಟಿಂಗ್‌ಗೆ ಬ್ರೇಕ್ ಹಾಕಿ ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ (Koragajja) ಭೇಟಿ ನೀಡಿದ್ದಾರೆ. ಕೊರಗಜ್ಜ ದೈವ ದೇವರಿಗೆ ಡಿಬಾಸ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ, ದರ್ಶನ್ ಜೊತೆ ನಟ ಚಿಕ್ಕಣ್ಣ (Chikkanna), ನಟ ಯಶಸ್ ಸೂರ್ಯ (Yashas Surya) ಕೂಡ ಭಾಗಿಯಾಗಿದ್ದಾರೆ.

    ದರ್ಶನ್‌ ಭೇಟಿ ನೀಡಿದ್ದ ವೇಳೆ, ಕೊರಗಜ್ಜ ಕ್ಷೇತ್ರದ ವತಿಯಿಂದ ದರ್ಶನ್‌ಗೆ ಗೌರವ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ದರ್ಶನ್ ಮಾಧ್ಯಮಕ್ಕೆ ಪ್ರತಿಕ್ರಿಸಿ, ಮೊದಲ ಬಾರಿಗೆ ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ದುಡ್ಡು ಕೊಟ್ರೆ ಮಾತ್ರ ಬರುತ್ತಾರೆ- ಬಿಟೌನ್ ಬಗ್ಗೆ ಪ್ರಿಯಾಮಣಿ ಶಾಕಿಂಗ್ ಹೇಳಿಕೆ

    ಈ ಹಿಂದೆ ಮಂಗಳೂರಿಗೆ ಸುಮಾರು ಬಾರಿ ಬಂದಿದ್ದೇನೆ. ಆದರೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿರಲಿಲ್ಲ. ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದಿದ್ದೀನಿ. ಇಲ್ಲಿಗೆ ಇಂದು ಬಂದಿರುವುದಕ್ಕೆ ಬೇರೆ ಯಾವುದೇ ನಿರ್ದಿಷ್ಟ ಕಾರಣ ಇಲ್ಲ ಎಂದು ದರ್ಶನ್ ಮಾಹಿತಿ ನೀಡಿದ್ದಾರೆ.

    ಈ ವರ್ಷ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಡೆವಿಲ್’ (Devil) ಸಿನಿಮಾ ಸೇರಿದಂತೆ 9ಕ್ಕೂ ಹೆಚ್ಚು ಚಿತ್ರಗಳನ್ನು ದರ್ಶನ್ ಅನೌನ್ಸ್ ಮಾಡಿದ್ದಾರೆ. ದರ್ಶನ್ ನಟನೆಯ ಸಾಲು ಸಾಲು ಸಿನಿಮಾ ನೋಡುವ ಮೂಲಕ ಕಣ್ಣಿಗೆ ಹಬ್ಬ ಎಂದೇ ಹೇಳಬಹುದು. ಡಿಬಾಸ್ ಚಿತ್ರಕ್ಕಾಗಿ ಫ್ಯಾನ್ಸ್ ಕೂಡ ಎದುರು ನೋಡ್ತಿದ್ದಾರೆ.

  • ಕಾಲೆಳೆದವರು ಕಾಲ್ ಶೀಟ್ ಕೇಳ್ತಿದ್ದಾರೆ: ಮಾತಿನಲ್ಲೇ ತಿವಿದ ಚಿಕ್ಕಣ್ಣ

    ಕಾಲೆಳೆದವರು ಕಾಲ್ ಶೀಟ್ ಕೇಳ್ತಿದ್ದಾರೆ: ಮಾತಿನಲ್ಲೇ ತಿವಿದ ಚಿಕ್ಕಣ್ಣ

    ಸ್ಮಿತಾ ಉಮಾಪತಿ ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶಿಸಿರುವ ಹಾಗೂ ನಟ ಚಿಕ್ಕಣ್ಣ (Chikkanna) ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ  ‘ಉಪಾಧ್ಯಕ್ಷ’ (Upadyaksha) ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಯಶಸ್ಸಿಗೆ ಕಾರಣ ರಾಜ್ಯಾದ್ಯಂತ ಪ್ರೇಕ್ಷಕರು ತೋರಿಸುತ್ತಿರುವ ಒಲವು. ಆ ಒಲವಿಗೆ ಧನ್ಯವಾದ ಹೇಳಲು ಚಿತ್ರತಂಡ ಸಕ್ಸಸ್ ಮೀಟ್ ಆಯೋಜಿಸಿತ್ತು.

    ಈ ಚಿತ್ರ ಆರಂಭವಾಗಿದ್ದು ಚಿಕ್ಕಣ್ಣ ಅವರ ಮನೆಯಿಂದ. ಅಲ್ಲೇ ನಿರ್ಮಾಪಕ ಉಮಾಪತಿ ಅವರು ಕಥೆ ಕೇಳಿದ್ದು. ಸ್ಕ್ರಿಪ್ಟ್ ಟೈಮ್ ನಲ್ಲಿ ಸಾಕಷ್ಟು ಜನ ನನಗೆ ಸಹಕಾರ ನೀಡಿದ್ದಾರೆ. ಜನರಿಗೆ ನಮ್ಮ ಸಿನಿಮಾ ಇಷ್ಟವಾಗಿದೆ. ಕುಟುಂಬ ಸಮೇತ ಬಂದು ನೋಡುತ್ತಿದ್ದಾರೆ. ಬಹಳ ಸಂತೋಷವಾಗಿದೆ ಎಂದರು ನಿರ್ದೇಶಕ ಅನಿಲ್ ಕುಮಾರ್.

    ಉಮಾಪತಿ ಫಿಲಂಸ್ ಲಾಂಛನದಲ್ಲಿ ಹೆಬ್ಬುಲಿ, ರಾಬರ್ಟ್, ಮದಗಜ ಚಿತ್ರಗಳನ್ನು ನಿರ್ಮಿಸಿದ್ದೇವೆ. ಡಿ.ಎನ್ ಪಿಕ್ಚರ್ಸ್ ಮೂಲಕ ನನ್ನ ಪತ್ನಿ ಸ್ಮಿತಾ ಉಮಾಪತಿ ಈ ಹಿಂದೆ ಒಂದಲ್ಲಾ ಎರಡಲ್ಲಾ ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ನಿರ್ಮಿಸಿದ್ದರು. ಈಗ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಅಂದುಕೊಂಡದಕ್ಕಿಂತ ಹೆಚ್ಚಿನ ಯಶಸ್ಸು ಸಿಕ್ಕಿದೆ. ಈ ಯಶಸ್ಸು ನನ್ನ ತಂಡದ್ದು. ಮುಖ್ಯವಾಗಿ ಚಿಕ್ಕಣ್ಣ ಅವರದು. ಬಿಡಗಡೆಗೂ ಮುನ್ನ ಚಿಕ್ಕಣ್ಣ ತುಂಬಾ ಒತ್ತಡದಲ್ಲಿದ್ದರು. ಈ ಗೆಲುವು ಅವರಿಗೆ ಬೇಕಿತ್ತು. ಇನ್ನು ರಾಜ್ಯಾದ್ಯಂತ ನಮ್ಮ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಎರಡನೇ ವಾರದಲ್ಲಿ ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾಗಿದೆ ಎಂದು ಉಮಾಪತಿ ಶ್ರೀನಿವಾಸಗೌಡ ತಿಳಿಸಿದರು. ನಿರ್ಮಾಪಕಿ‌ ಸ್ಮಿತಾ ಉಮಾಪತಿ ಎಲ್ಲರಿಗೂ ಧನ್ಯವಾದ ತಿಳಿಸಿದರು.

    ನಾನು ನಾಯಕನಾಗುತ್ತಿದ್ದೇನೆ ಎಂದಾಗ ಕಾಲೆಳೆದವರೆ ಜಾಸ್ತಿ ಎಂದು ಮಾತನಾಡಿದ ನಾಯಕ ಚಿಕ್ಕಣ್ಣ, ಕಾಲೆಳೆದವರೆ ಈಗ ಕಾಲ್ ಶೀಟ್ ಕೇಳುತ್ತಿದ್ದಾರೆ. ಕರ್ನಾಟಕದ ಜನ ನಮ್ಮ ಸಿನಿಮಾವನ್ನು ಗೆಲ್ಲಿಸಿದ್ದಾರೆ. ಅವರಿಗೆ ಇಲ್ಲಿಂದಲೇ ಶರಣು. ಇನ್ನು ನನ್ನ ನಂಬಿ ದುಡ್ಡು ಹಾಕಿರುವ ನಿರ್ಮಾಪಕರಿಗೆ, ಒಳ್ಳೆಯ ಚಿತ್ರಕೊಟ್ಟ ನಿರ್ದೇಶಕರಿಗೆ ಹಾಗೂ ಇಡೀ ತಂಡಕ್ಕೆ ನನ್ನ ಧನ್ಯವಾದ. ಇನ್ನು ನಾನು ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೆ ನನಗೆ ಶಿವರಾಜಕುಮಾರ್, ದರ್ಶನ್, ಸುದೀಪ್, ಯಶ್, ಧ್ರುವ ಸರ್ಜಾ, ಪ್ರಜ್ವಲ್ ದೇವರಾಜ್, ಅಭಿಷೇಕ್ ಅಂಬರೀಶ್, ಧನ್ವೀರ್, ಸೂರ್ಯ ಸೇರಿದಂತೆ ಸಾಕಷ್ಟು ನಾಯಕರು ಪ್ರೋತ್ಸಾಹ ನೀಡಿದ್ದಾರೆ ಅವರಿಗೆಲ್ಲಾ ವಿಶೇಷ ಧನ್ಯವಾದ ಎಂದರು.  ಸಹಾಯ ನೀಡಿದವರನ್ನು ನೆನೆಯಲು ಹೆಸರಿನ ಪಟ್ಟಿಯನ್ನೇ ಸಿದ್ದ ಮಾಡಿಕೊಂಡು ಬಂದಿದ್ದ ಚಿಕ್ಕಣ್ಣ ಪ್ರತಿಯೊಬ್ಬರಿಗೂ ಕೃತಜ್ಞತೆ ತಿಳಿಸಿದರು.

    ಚಿತ್ರ ಆರಂಭವಾದಾಗ ನಾನು ಕೆಲವು ಮಾತುಗಳನ್ನು ಕೇಳಿದ್ದೆ. ಈ ಗೆಲುವು ಅದನೆಲ್ಲಾ ಮರೆಸಿದೆ. ಆಡಿದವರಿಗೆ ತಕ್ಕ ಉತ್ತರ ಸಿಕ್ಕಿದೆ. ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು ನಾಯಕಿ ಮಲೈಕ.‌ ನಟ ಧರ್ಮಣ್ಣ ಸಹ ಚಿತ್ರದ ಕುರಿತು ಮಾತನಾಡಿದರು.

  • ಮನಸ್ತಾಪದಿಂದ ಸಂಬಂಧ ಮುರಿದು ಬಿತ್ತು- ಬ್ರೇಕಪ್ ಬಗ್ಗೆ ಚಿಕ್ಕಣ್ಣ ಮಾತು

    ಮನಸ್ತಾಪದಿಂದ ಸಂಬಂಧ ಮುರಿದು ಬಿತ್ತು- ಬ್ರೇಕಪ್ ಬಗ್ಗೆ ಚಿಕ್ಕಣ್ಣ ಮಾತು

    ಸ್ಯಾಂಡಲ್‌ವುಡ್‌ನಲ್ಲಿ (Sandalwood) ತಮ್ಮ ಕಾಮಿಡಿ ಪಂಚ್ ಮೂಲಕ ಮನಗೆದ್ದಿರೋ ಚಿಕ್ಕಣ್ಣ (Chikkanna) ಇದೀಗ ‘ಉಪಾಧ್ಯಕ್ಷ’ನಾಗಿ ಬರಲು ರೆಡಿಯಾಗಿದ್ದಾರೆ. ಸದ್ಯ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವ ಚಿಕ್ಕಣ್ಣ ಸಂದರ್ಶನವೊಂದರಲ್ಲಿ ತಮ್ಮ ಲವ್ ಬ್ರೇಕಪ್ ಬಗ್ಗೆ ಹೇಳಿದ್ದಾರೆ.‌ ಇದನ್ನೂ ಓದಿ:ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಪ್ರಥಮ್

    ನಾನು ಪಿಯುಸಿ ಓದುವಾಗಲೇ ಅಮ್ಮನನ್ನು ಕೆಲಸ ಬಿಡಿಸಿ ಅವರನ್ನ ಸಾಕಬೇಕು ಎಂಬ ಹಂಬಲವಿತ್ತು. ಅದರಂತೆಯೇ ಮಾಡಿದೆ, ನನ್ನ ಮೊದಲ ಸಂಬಳದಲ್ಲಿ ಅಮ್ಮನಿಗೆ ಸೀರೆ ಕೊಡಿಸಿರುವೆ. ನನಗೆ ಗೊತ್ತಿರುವ ಹಾಗೇ ತಕ್ಕ ಮಟ್ಟಕ್ಕೆ ಚೆನ್ನಾಗಿ ನೋಡಿಕೊಳ್ಳುತ್ತಿರುವೆ. ನನ್ನ ಯೋಗ್ಯತೆ ಮೀರಿ ಅಲ್ಲ. ನನ್ನ ಯೋಗ್ಯತೆ ತಕ್ಕ ಹಾಗೇ ನೋಡಿಕೊಳ್ಳುತ್ತಿರುವೆ ಎಂದು ಚಿಕ್ಕಣ್ಣ ಮಾತನಾಡಿದ್ದಾರೆ.

    ನಾನು ಒಬ್ಬರನ್ನು ಪ್ರೀತಿಸುತ್ತಿದ್ದೆ, ಸಣ್ಣ ಪುಟ್ಟ ಮನಸ್ತಾಪಗಳಿಂದ ಸಂಬಂಧ ಮುರಿದು ಬಿತ್ತು. ಯೋಚನೆ ಮಾಡಿಕೊಂಡು ಕೂತರೆ ನಾನು ತಪ್ಪಾ ಅಥವಾ ಸರಿನಾ ಅನಿಸುತ್ತಿದೆ. ಆ ಟೈಮ್‌ಗೆ ಏನೋ ತಪ್ಪು ಆಗಿ ಹೋಯ್ತು ಎಂದು ಬ್ರೇಕಪ್ ಬಗ್ಗೆ ಚಿಕ್ಕಣ್ಣ ಮೌನ ಮುರಿದಿದ್ದಾರೆ.