ಕಾಮಿಡಿ ಕಿಂಗ್ ಚಿಕ್ಕಣ್ಣ ಒಂದು ಸಿನಿಮಾದಲ್ಲಿದ್ದಾರೆ ಅಂದ್ರೆ ಅಲ್ಲಿ ನಗುವಿಗೇನು ಬರವಿಲ್ಲ. ಸ್ಕೀನ್ ಮೇಲೆ ಬಂದಾಗಲೆಲ್ಲ ತಮ್ಮ ಡಿಫರೆಂಟ್ ಮ್ಯಾನರಿಸಂ ಹಾಗೂ ಪಂಚ್ ಡೈಲಾಗ್‍ಗಳಿಂದ ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸುತ್ತಾರೆ. ಇನ್ನು ಇಡೀ ಸಿನಿಮಾ ಪೂರ್ತಿ ಅವ್ರೆ ನಾಯಕ ನಟನಾಗಿ ಇರ್ತಾರೆ ಅಂದ್ರೆ ಕೇಳೋದೇ ಬೇಡ ಅಲ್ಲಿ ನಗೆಯ ಸುಗ್ಗಿಯೇ ಹುಟ್ಟಿಕೊಳ್ಳುತ್ತೆ. ಹೌದು. ಚಿಕ್ಕಣ್ಣ ಸ್ಯಾಂಡಲ್‍ವುಡ್ ಒನ್ ಆಫ್ ದಿ ಮೋಸ್ಟ್ ಬ್ಯುಸಿಯೆಸ್ಟ್ ಕಾಮಿಡಿ ಆಕ್ಟರ್. ಸ್ಟಾರ್ ನಟರಷ್ಟೇ ಬ್ಯುಸಿಯಾಗಿರೋ ಚಿಕ್ಕಣ್ಣ ಬಿಲ್ ಗೇಟ್ಸ್ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.
ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಟೀಸರ್ ಕಂಡು ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿ ಸ್ಟಾರ್ ರವಿಚಂದ್ರನ್ ಮೆಚ್ಚಿಕೊಂಡಿದ್ದು ಯಮನ ಅವತಾರ ತಾಳೀರೋ ಚಿಕ್ಕಣ್ಣನನ್ನು ನೋಡೋದೆ ಒಂದು ಗಮ್ಮತ್ತು. ಚಿತ್ರದ ಸ್ಯಾಂಪಲ್‍ಗಳು ಟಾಕ್ ಕ್ರಿಯೇಟ್ ಮಾಡಿದ್ದು ಕಿರುತೆರೆಯ ಶಿಶಿರ್ ಶಾಸ್ತ್ರಿ ಕೂಡ ಚಿಕ್ಕಣ್ಣ ಜೊತೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
ಬಿಲ್ ಗೇಟ್ಸ್ ಕಾಮಿಡಿ ಎಂಟರ್ ಟೈನ್ಮೆಂಟ್ ಚಿತ್ರವಾಗಿದ್ದು, ಗಂಭೀರವಾದ ವಿಷಯವೊಂದನ್ನು ಕಾಮಿಕ್ ಆಗಿ ಪ್ರೇಕ್ಷಕರ ಮನಮುಟ್ಟಿಸುವ ಕೆಲಸವನ್ನು ನಿರ್ದೇಶಕ ಶ್ರೀನಿವಾಸ್.ಸಿ ಮಾಡಿದ್ದಾರೆ. ಪಾಂಚಜನ್ಯ ಸಿನಿ ಕ್ರಿಯೇಷನ್ಸ್ ಅಡಿ ನಿರ್ಮಾಣವಾಗಿರೋ ಈ ಚಿತ್ರಕ್ಕೆ ನಿರ್ದೇಶಕ ಶ್ರೀನಿವಾಸ್ ಅವ್ರ ಸ್ನೇಹಿತರು ಬಂಡವಾಳ ಹೂಡಿದ್ದಾರೆ. ಫೆಬ್ರವರಿ 7ಕ್ಕೆ ಬಿಲ್ ಗೇಟ್ಸ್ ಚಿತ್ರ ಬಿಡುಗಡೆಯಾಗುತ್ತಿದೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರ ತೆರೆ ಮೇಲೆ ಯಾವ ರೀತಿ ಮ್ಯಾಜಿಕ್ ಕ್ರಿಯೇಟ್ ಮಾಡುತ್ತೆ ಕಾದು ನೋಡಬೇಕು.
ಮಂಜು ಮಾಂಡವ್ಯ, ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಶ್ರೀ ಭರತ ಬಾಹುಬಲಿ ಟೀಸರ್, ಟ್ರೇಲರ್ ಮತ್ತು ಹಾಡುಗಳ ಮೂಲಕ ಗಣನೀಯ ಪ್ರಮಾಣದಲ್ಲಿ ನಿರೀಕ್ಷೆ ಮೂಡಿಸಿತ್ತು. ಯಾವ ಸ್ಟಾರ್ ಡಮ್ ಕೂಡಾ ಇಲ್ಲದ ಈ ಸಿನಿಮಾ ಸುದ್ದಿಯಾಗಿದ್ದದ್ದೇ ಕ್ರಿಯೇಟಿವ್ ಅಂಶಗಳಿಂದ. ಭರತ ಬಾಹುಬಲಿಯದ್ದೊಂದು ವಿಶೇಷವಾದ ಕಥನ ಎಂಬ ನಂಬಿಕೆ ಬಿಡುಗಡೆಯ ಹೊತ್ತಿಗೆಲ್ಲ ಪ್ರೇಕ್ಷಕರ ಮನದಲ್ಲಿ ಪ್ರತಿಷ್ಠಾಪಿತಗೊಂಡು ಬಿಟ್ಟಿತ್ತು. ಆ ಎಲ್ಲ ನಿರೀಕ್ಷೆ, ಕಾತರಗಳನ್ನು ನಿಜವಾಗಿಸುವಂತೆ ಭರಪೂರ ಮನರಂಜನೆಯೊಂದಿಗೆ ಈ ಚಿತ್ರವೀಗ ತೆರೆಗಂಡಿದೆ. ಭರತ ಬಾಹುಬಲಿಯ ಕಾಮಿಡಿ ಝಲಕ್ಕಿನಿಂದಾಗಿ ಪ್ರೇಕ್ಷಕರೆಲ್ಲ ನಗುವಿನಲೆಯಲ್ಲಿ ಮಿಂದೆದ್ದು ಒಂದೊಳ್ಳೆ ಮನರಂಜನಾತ್ಮಕ ಸಿನಿಮಾ ನೀಡಿದ ತೃಪ್ತ ಭಾವದಿಂದ ಖುಷಿಗೊಂಡಿದ್ದಾರೆ.
ಈ ಹಿಂದೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಮಾಸ್ಟರ್ ಪೀಸ್’ ಸಿನಿಮಾ ನಿರ್ದೇಶಕನಾಗಿ ತಮ್ಮ ಪ್ರತಿಭೆ ತೋರಿದ್ದ ಮಂಜು ಮಾಂಡವ್ಯ ಈ ಚಿತ್ರದ ಮೂಲಕ ನಾಯಕನಾಗಲೂ ಸೈ ಅನ್ನೋದನ್ನು ಪ್ರೂವ್ ಮಾಡಿದ್ದಾರೆ. ಚಿಕ್ಕಣ್ಣ, ಮಂಜು ಮಾಂಡವ್ಯ ಜುಗಲ್ ಬಂದಿ ತೆರೆ ಮೇಲೆ ಜಾದು ಸೃಷ್ಟಿಸಿದೆ. ಹೊಸ ರೀತಿಯ ಸ್ಕ್ರೀನ್ ಫ್ಲೇ, ಯಾವ ಹಂತದಲ್ಲಿಯೂ ಸಡಿಲಗೊಳ್ಳದ ಕಥೆ, ಪ್ರತಿ ಹಂತದಲ್ಲಿಯೂ ನಗುವಿನ ಸಿಂಚನ ಮಾಡುತ್ತಲೇ ಸಾಗುವ ಎಫೆಕ್ಟೀವ್ ಸಂಭಾಷಣೆಗಳೊಂದಿಗೆ ಈ ಚಿತ್ರ ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ಯಶಸ್ವಿಯಾಗಿದೆ. ನಿಖರವಾಗಿ ಹೇಳಬೇಕೆಂದರೆ ಈ ಭರತ ಬಾಹುಬಲಿ ಉಢಾಳರಾದರೂ ಉರುಳಾಡಿ ನಗುವಂತೆ ಮಾಡುತ್ತಾರೆ.
ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಭರತ, ಬಾಹುಬಲಿ ಪಾತ್ರದಲ್ಲಿ ಮಿಂಚಿದ್ದಾರೆ. ಅವೆರಡೂ ಹಳ್ಳಿ ಕಂಪು ಹೊದ್ದುಕೊಂಡಿರುವಂಥಾ ಪಾತ್ರಗಳು. ಅದಕ್ಕೆ ಜೀವ ತುಂಬಿರೋ ರೀತಿಯೇ ಇಡೀ ಕಥೆಯ ನಿಜವಾದ ಜೀವಾಳ. ಪುಂಡ ಪೋಲಿಗಳಾಗಿ ತಲೆಹರಟೆ ಮಾಡಿಕೊಂಡು ಊರ ತುಂಬಾ ಅಂಡಲೆಯೋದೇ ಭರತ ಬಾಹುಬಲಿಯ ಫುಲ್ ಟೈಂ ಡ್ಯೂಟಿ. ಈ ನಡುವೆ ಹುಡುಗಾಟದಲ್ಲಿ ಮಾಡಿದ ಕೆಲಸವೇ ಅವರಿಬ್ಬರನ್ನು ಕಾನೂನಿನ ಸರಪಳಿಯಲ್ಲಿ ಬಂಧಿಗಳಾಗುವಂತೆ ಮಾಡುತ್ತದೆ. ಅಪ್ರಾಪ್ತ ಸ್ನೇಹಿತನಿಗೆ ಮದುವೆ ಮಾಡಿಸಿ ಜೈಲಿಗೆ ಸೇರೊ ಭರತ ಬಾಹುಬಲಿ ಬದುಕಿಗೆ ಎಂಟ್ರಿ ಕೊಡುವ ಶ್ರೀ ಇಡೀ ಚಿತ್ರದ ಚಿತ್ರಣವನ್ನೇ ಬದಲಿಸುತ್ತಾಳೆ. ಆ ನಂತರದಲ್ಲಿ ಕಥೆ ಮತ್ತಷ್ಟು ಓಘ ಪಡೆದುಕೊಳ್ಳುತ್ತದೆ. ಮುಂದೆ ಭರತ ಬಾಹುಬಲಿ ತಮ್ಮ ಪೋಲಿತನ ಬಿಟ್ಟು ಸರಿ ಹೋಗ್ತಾರಾ, ಭರತ ಬಾಹುಬಲಿ ಲೈಫಲ್ಲಿ ಏನೇನೆಲ್ಲ ಘಟಿಸುತ್ತವೆ ಅನ್ನೋ ಕುತೂಹಲ ನಿಮಗಿದ್ದರೆ ಈ ಚಿತ್ರವನ್ನು ಖಂಡಿತವಾಗಿಯೂ ಮಿಸ್ ಮಾಡದೆ ನೋಡಲೇಕು. ಇದನ್ನು ಓದಿ: ಗೆಳೆಯನ ಯಶಸ್ಸಿಗೆ ಹಾರೈಸಿದ ಯಶ್
ಇಂಥಾ ನಿರೀಕ್ಷೆ ಹೊತ್ತು ಯಾರೇ ಚಿತ್ರಮಂದಿರ ಹೊಕ್ಕರೂ ಭರತ ಬಾಹುಬಲಿ ಖಂಡಿತಾ ನಿರಾಸೆ ಮಾಡುವುದಿಲ್ಲ. ಇಲ್ಲಿರೋದು ತುಂಬ ಸರಳವಾದ ಕಥೆ. ಇಂಟ್ರಸ್ಟಿಂಗ್ ವೇನಲ್ಲಿ ಸ್ಕ್ರೀನ್ ಪ್ಲೇ ಹೆಣೆದು ಅದನ್ನು ತೆರೆ ಮೇಲೆ ಅಷ್ಟೇ ಚೆಂದವಾಗಿ ಪ್ರೊಜೆಕ್ಟ್ ಮಾಡುವ ಮೂಲಕ ನಿರ್ದೇಶಕ ಮಂಜು ಮಾಂಡವ್ಯ ಎಲ್ಲವನ್ನೂ ವಿಶೇಷವಾಗಿಸಿದ್ದಾರೆ. ನಟನಾಗಿಯೂ ಸೈ ಎನಿಸಿಕೊಂಡಿರೋ ಮಂಜು ಮಾಂಡವ್ಯ ಅದಕ್ಕಾಗಿ ತುಂಬಾನೇ ತಾಲೀಮು ನಡೆಸಿರೋದು ತೆರೆ ಮೇಲೆ ಸ್ಪಷ್ಟವಾಗಿಯೇ ಕಾಣಿಸುತ್ತದೆ. ಎಂದಿನಂತೆ ಚಿಕ್ಕಣ್ಣ ಎಲ್ಲರಿಗೂ ಇಷ್ಟವಾಗುತ್ತಾರೆ. ನಾಯಕಿ ಪಾತ್ರದಲ್ಲಿ ಸಾರಾ ಮಹೇಶ್ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಮಣಿಕಾಂತ್ ಕದ್ರಿ ಮ್ಯೂಸಿಕ್, ಫರ್ವೇಜ್ ಕೆ ಸಿನಿಮಾಟೋಗ್ರಫಿ ಎಲ್ಲರ ಮನಸೆಳೆಯುತ್ತದೆ. ಒಟ್ಟಾರೆಯಾಗಿ ಶ್ರೀ ಭರತ ಬಾಹುಬಲಿ ನಿರೀಕ್ಷೆ ಮೀರಿದ ಫೀಲ್ ಕೊಡುವಂತೆ ಮೂಡಿ ಬಂದಿದೆ.
ಬೆಂಗಳೂರು: ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ಮಂಜು ಮಾಂಡವ್ಯ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿರುವ ಶ್ರೀ ಭರತಬಾಹುಬಲಿ ಚಿತ್ರ ಇಂದು ಬಿಡುಗಡೆಯಾಗಿದ್ದು, ಗೆಳೆಯನ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಶುಭಹಾರೈಸಿದ್ದಾರೆ.
‘ಶ್ರೀ ಭರತಬಾಹುಬಲಿ’ ಚಿತ್ರದಲ್ಲಿ ನಾಯಕನಾಗಿರುವ ಗೆಳೆಯನಿಗೆ ಯಶ್ ತುಂಬು ಹೃದಯದಿಂದ ಶುಭ ಹಾರೈಸಿದ್ದಾರೆ. ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಮಂಜು ಅವರ ಜೊತೆಗಿರುವ ಫೋಟೋ ಶೇರ್ ಮಾಡಿಕೊಂಡು ಯಶ್ ಗೆಳೆಯನ ಹೊಸ ಹೆಜ್ಜೆಗೆ ಸಾಥ್ ಕೊಟ್ಟಿದ್ದಾರೆ.
ಈ ಹಿಂದೆ ಕೂಡ ರಾಕಿಂಗ್ ಸ್ಟಾರ್ ಯಶ್ ಗೆಳೆಯನ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದರು. ಟ್ರೈಲರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಮಣಿಕಾಂತ್ ಕದ್ರಿ ಸಂಗೀತವಿರುವ ಚಿತ್ರದ ಹಾಡುಗಳು ಕೂಡ ಸಖತ್ ಸೌಂಡ್ ಮಾಡಿದ್ದು, ಇಂದು ಶ್ರೀ ಭರತ ಬಾಹುಬಲಿ ಚಿತ್ರ ತೆರೆಕಂಡಿದೆ. ಟಿ. ಶ್ರೀನಿವಾಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಪೋಸ್ಟ್ ನಲ್ಲಿ ಏನಿದೆ?
ಬರಹಗಾರನಾಗಿ ತನ್ನದೇ ಆದ ವಿಶಿಷ್ಠ ಛಾಪು ಮೂಡಿಸಿ, ನಿರ್ದೇಶಕನಾಗಿ ಜನಮನಗೆದ್ದ ಗೆಳೆಯ ಮಂಜುಮಾಂಡವ್ಯ ಮೊದಲ ಬಾರಿಗೆ ನಾಯಕನಾಗಿ ಶ್ರೀ ಭರತಬಾಹುಬಲಿ ಅವತಾರದಲ್ಲಿ ನಿಮ್ಮುಂದೆ ಬಂದಿದ್ದಾರೆ. ಚಿಕ್ಕನೂ ಜೊತೆಗಿದ್ದಾನೆ ಇಬ್ಬರಿಗೂ ಒಳ್ಳೆಯದಾಗಲಿ. ಶ್ರೀ ಭರತಬಾಹುಬಲಿ ಯಶಸ್ವಿಯಾಗಲಿ ಎಂದು ಬರೆದು ಫೋಟೋ ಹಾಕಿ ಯಶ್ ಅಪ್ಲೋಡ್ ಮಾಡಿದ್ದಾರೆ. ಈ ಪೋಸ್ಟ್ ಗೆ ಯಶ್ ಅಭಿಮಾನಿಗಳು ಕಮೆಂಟ್ ಮಾಡಿ ಮಂಜು ಹಾಗೂ ಅವರ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.
ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನಕ್ಕೂ ಸೈ, ನಟನೆಗೂ ಸೈ ಎನ್ನುತ್ತಿದ್ದಾರೆ. ಶ್ರೀ ಭರತ ಬಾಹುಬಲಿ ಚಿತ್ರದ ಮೂಲಕ ನಟನಾಗಿಯೂ ಛಾಪು ತೋರಿಸಲು ಸಿದ್ದರಾಗಿದ್ದಾರೆ ಮಂಜು ಮಾಂಡವ್ಯ. ನಟನೆ ಜೊತೆಗೆ ಸ್ವತಃ ತಾವೇ ಚಿತ್ರಕ್ಕೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ.
ಮಂಜು ಮಾಂಡವ್ಯ, ಕಾಮಿಡಿ ಕಿಂಗ್ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ಶ್ರೀ ಭರತ ಬಾಹುಬಲಿ ಟೈಟಲ್ಲೇ ವಿಭಿನ್ನವಾಗಿದ್ದು ರೊಮ್ಯಾಂಟಿಕ್ ಕಾಮಿಡಿ ಎಲಿಮೆಂಟ್ ಚಿತ್ರದಲ್ಲಿದ್ದು, ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ನಟಿಸಿದ್ದಾರೆ.
ಕಾಮಿಡಿ ಕಿಂಗ್ ಚಿಕ್ಕಣ್ಣ, ಕಿರು ತೆರೆ ನಟ ಶಿಶಿರ್ ಶಾಸ್ತ್ರಿ ಕಾಮಿಡಿರಸದೌತಣ ನೀಡಲು ಬರ್ತಿರುವ ಬಿಲ್ ಗೇಟ್ಸ್ ಚಿತ್ರದ ಟೈಲರ್ ರಿಲೀಸ್ ಆಗಿದೆ. ಟ್ರೈಲರ್ ಸಖತ್ ಮಜಾವಾಗಿದ್ದು ಕಾಮಿಡಿ ಎಲಿಮೆಂಟ್, ಪಂಚಿಂಗ್ ಡೈಲಾಗ್ ಗಳು ನಕ್ಕು ನಗಿಸುತ್ತವೆ.
ಸೀರಿಯಸ್ ಆದ ವಿಷಯವೊಂದನ್ನು ಕಾಮಿಕ್ ವೇನಲ್ಲಿ ಹೇಳೋ ಪ್ರಯತ್ನವನ್ನು ನಿರ್ದೇಶಕ ಶ್ರೀನಿವಾಸ್ ಮಾಡಿದ್ದಾರೆ. ಕಾಮಿಡಿ ಜೊತೆ ಹಾರಾರ್ ಸ್ಪರ್ಶ ಕೂಡ ಚಿತ್ರದಲ್ಲಿದ್ದು ಸಾಕಷ್ಟು ಕುತೂಹಲವನ್ನು ಟ್ರೈಲರ್ ಮೂಡಿಸಿದೆ. ಟ್ರೈಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬ್ಯಾಂಕ್ ಜನಾರ್ಧನ್, ಗಿರಿ, ವಿ.ಮನೋಹರ್, ಕುರಿ ಪ್ರತಾಪ್ ಸೇರಿದಂತೆ ಕಾಮಿಡಿ ನಟರ ದಂಡು ಚಿತ್ರದ ತಾರಾಬಳಗದಲ್ಲಿದೆ. ಶ್ರೀನಿವಾಸ ಅವರ ಮೊದಲ ಚಿತ್ರ ಇದಾಗಿದ್ದು ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಇನ್ನಷ್ಟು ಸ್ಯಾಂಪಲ್‍ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿವೆ.
ಚಿತ್ರದಲ್ಲಿ ನಾಯಕಿಯರಾಗಿ ಅಕ್ಷರ ರೆಡ್ಡಿ, ರಶ್ಮಿಕಾರೋಜಾ ಅಭಿನಯಿಸಿದ್ದು, ಪಾಂಚಜನ್ಯ ಸಿನಿ ಕ್ರಿಯೇಷನ್ ಬ್ಯಾನರ್ ಅಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ಹಾಡುಗಳು ಕೂಡ ಗಮನ ಸೆಳೆದಿದ್ದು, ನೊಬಿಲ್ ಪೌಲ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಫೆಬ್ರವರಿ 7ಕ್ಕೆ ಬಿಲ್ ಗೇಟ್ಸ್ ಚಿತ್ರ ತೆರೆಗೆ ಬರಲಿದ್ದು ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸೋದಂತೂ ಪಕ್ಕಾ.
ಮಂಜು ಮಾಂಡವ್ಯ, ಕಾಮಿಡಿ ಕಿಂಗ್ ಚಿಕ್ಕಣ್ಣ ಜುಗಲ್‍ಬಂದಿಯಾಗಿ ನಟಿಸಿರೋ ಶ್ರೀ ಭರತ ಬಾಹುಬಲಿ ಚಿತ್ರ ಜನವರಿ 17ಕ್ಕೆ ರಾಜ್ಯದ್ಯಂತ ತೆರೆ ಕಾಣುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಜನಪ್ರಿಯರಾಗಿದ್ದ ಮಂಜು ಮಾಂಡವ್ಯ ನಟನಾಗಿ ಅಭಿನಯಿಸುತ್ತಿರುವ ಚಿತ್ರವಿದು.
ನಟನೆ ಜೊತೆಗೆ ಚಿತ್ರಕ್ಕೆ ನಿರ್ದೇಶನ ಕೂಡ ಮಂಜು ಮಾಂಡವ್ಯ ಮಾಡಿದ್ದಾರೆ. ಒಂದೊಳ್ಳೆ ಟೀಂ ಕಟ್ಟಿಕೊಂಡು ರೋಮ್ಯಾಂಟಿಕ್ ಕಾಮಿಡಿ ಎಲಿಮೆಂಟ್ ಇರೋ ಚಿತ್ರವನ್ನು ಕಟ್ಟಿಕೊಡುವ ಪ್ರಯತ್ನವನ್ನು ಮಾಡಿದ್ದಾರೆ ಮಂಜು ಮಾಂಡವ್ಯ. ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ನಟಿಸಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಟ್ರೈಲರ್ ಕೂಡ ಒಳ್ಳೆಯ ಟಾಕ್ ಕ್ರಿಯೇಟ್ ಮಾಡಿದ್ದು ಸಖತ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ. ಮಣಿಕಾಂತ್ ಕದ್ರಿ ಮ್ಯೂಸಿಕ್, ಪರ್ವೇಜ್.ಕೆ ಸಿನಿಮಾಟೋಗ್ರಾಫಿ ಶ್ರೀ ಭರತ ಬಾಹುಬಲಿ ಚಿತ್ರಕ್ಕಿದೆ. ಶ್ರೀನಿವಾಸ್ ಮೂರ್ತಿ, ಪುಷ್ಪಲತಾ, ಕರಿಸುಬ್ಬು, ಶ್ರೇಯಾ ಶೆಟ್ಟಿ, ಅಚ್ಯುತ್ ರಾವ್ ಚಿತ್ರದಲ್ಲಿ ನಟಿಸಿದ್ದಾರೆ. ಜನವರಿ 17ಕ್ಕೆ ಭರತ ಬಾಹುಬಲಿ ಕಥೆ ನೋಡಲು ರೆಡಿಯಾಗಿ.
ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ಈಗ ತಾವೇ ಕ್ಯಾಮೆರಾ ಮುಂದೆ ಬಂದು ಡೈಲಾಗ್ ಹೇಳ್ತಿದ್ದಾರೆ.
ಹೌದು, ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನಕ್ಕೂ ಸೈ, ನಟನೆಗೂ ಸೈ ಎನ್ನುತ್ತಿದ್ದಾರೆ. ಶ್ರೀ ಭರತ ಬಾಹುಬಲಿ ಚಿತ್ರದ ಮೂಲಕ ನಟನಾಗಿಯೂ ಛಾಪು ತೋರಿಸಲು ಸಿದ್ದರಾಗಿದ್ದಾರೆ ಮಂಜು ಮಾಂಡವ್ಯ. ನಟನೆ ಜೊತೆಗೆ ಸ್ವತಃ ತಾವೇ ಚಿತ್ರಕ್ಕೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ.
ಮಂಜು ಮಾಂಡವ್ಯ, ಕಾಮಿಡಿ ಕಿಂಗ್ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ಶ್ರೀ ಭರತ ಬಾಹುಬಲಿ ಟೈಟಲ್ಲೇ ವಿಭಿನ್ನವಾಗಿದ್ದು ರೋಮ್ಯಾಂಟಿಕ್ ಕಾಮಿಡಿ ಎಲಿಮೆಂಟ್ ಚಿತ್ರದಲ್ಲಿದೆಯಂತೆ. ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ನಟಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಗೆಳೆಯನ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದು, ಟ್ರೈಲರ್ ಮೆಚ್ಚುಗೆ ಪಡೆದುಕೊಂಡಿದೆ. ಮಣಿಕಾಂತ್ ಕದ್ರಿ ಸಂಗೀತವಿರುವ ಚಿತ್ರದ ಹಾಡುಗಳು ಕೂಡ ಸಖತ್ ಸೌಂಡ್ ಮಾಡ್ತಿವೆ. ಜನವರಿ 17ಕ್ಕೆ ಶ್ರೀ ಭರತ ಬಾಹುಬಲಿ ಚಿತ್ರ ತೆರೆಗೆ ಬರಲು ರೆಡಿಯಾಗಿದ್ದು, ಟಿ. ಶ್ರೀನಿವಾಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಮಾಸ್ಟರ್ ಫೀಸ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ ನಿರ್ದೇಶಕ ಮಂಜು ಮಾಂಡವ್ಯ. ಶ್ರೀ ಭರತ ಬಾಹುಬಲಿ ಚಿತ್ರದ ಮೂಲಕ ಡೈರೆಕ್ಷನ್ ಕ್ಯಾಪ್ ಜೊತೆ ನಟನಾಗಿ ಬೆಳ್ಳಿತೆರೆಯಲ್ಲಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ. ಮಂಜು ಮಾಂಡವ್ಯ, ಚಿಕ್ಕಣ್ಣ ಮುಖ್ಯ ಭೂಮಿಕೆಯ ಈ ಚಿತ್ರದ ಟಪ್ಪಾಂಗೋಚಿ ಸಾಂಗ್ ರಿಲೀಸ್ ಆಗಿದೆ. ಕ್ಯಾಚಿ ಲಿರಿಕ್ಸ್ ಇರೋ ಈ ಸಾಂಗ್ ಎಲ್ಲರನ್ನೂ ರಂಜಿಸುತ್ತಿದೆ. ಈ ಹಾಡಿಗೆ ಮಂಜು ಮಾಂಡವ್ಯ ಲಿರಿಕ್ಸ್ ಬರೆಯೋದರ ಜೊತೆ ಹಾಡು ಹಾಡಿ ಸ್ಟೆಪ್ಪು ಹಾಕಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಟಪ್ಪಾಂಗೋಚಿ ಸಾಂಗ್‍ಗೆ ಮಸ್ತ್ ಸ್ಟೆಪ್ ಹಾಕಿದ್ದು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಕೆಜಿಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಹಾಕಿರೋ ಸೆಟ್‍ನಲ್ಲಿ ಕಲರ್ ಫುಲ್ ಆಗಿ ಮೂಡಿಬಂದಿರೋ ಈ ಹಾಡಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಈಗಾಗಲೇ ಚಿತ್ರದ ಮೆಲೋಡಿ ಸಾಂಗ್ ರಿಲೀಸ್ ಆಗಿ ಎಲ್ಲರ ಗಮನ ಸೆಳೆದಿದೆ. ವರ್ಷಾಂತ್ಯಕ್ಕೆ ರಿಲೀಸ್ ಆಗಿರೋ ಈ ಹಾಡು ಇಯರ್ ಎಂಡ್ ಸೆಲೆಬ್ರೇಷನ್‍ಗೆ ಹೇಳಿ ಮಾಡಿಸಿದಂತಿದೆ.
ಜನವರಿ ಹದಿನೇಳಕ್ಕೆ ಶ್ರೀ ಭರತ ಬಾಹುಬಲಿ ಚಿತ್ರ ರಿಲೀಸ್ ಮಾಡಲು ಚಿತ್ರತಂಡ ಸಿದ್ಧವಾಗಿದೆ. ನಿರ್ದೇಶನ, ನಟನೆ, ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿರೋ ನಿರ್ದೇಶಕ ಮಂಜು ಮಾಂಡವ್ಯ ಈಗ ಹಾಡುಗಾರರಾಗಿಯೂ ಬಡ್ತಿ ಪಡೆದಿರೋದು ವಿಶೇಷ ಸಂಗತಿ.
ಬೆಂಗಳೂರು: ಪ್ರತಿ ಪ್ರೇಕ್ಷಕರೂ ಕೂಡಾ ಸಿನಿಮಾ ನೋಡೋ ಪ್ರಧಾನ ಉದ್ದೇಶ ಮನೋರಂಜನೆ. ಅದರಲ್ಲಿಯೂ ಹಾಸ್ಯ ಸನ್ನಿವೇಶಗಳಿಗೆ ಮನಸೋಲದವರೇ ಇಲ್ಲ. ಹಾಗಿರುವಾಗ ಒಂದಿಡೀ ಚಿತ್ರವೇ ಕಾಮಿಡಿಮಯವಾಗಿದ್ದರೆ ಅದರತ್ತ ಪ್ರೇಕ್ಷಕರು ಆಕರ್ಷಿತರಾಗದಿರಲು ಸಾಧ್ಯವೇ ಇಲ್ಲ. ಈ ಕಾರಣದಿಂದಲೇ ಅಗಾಧ ನಿರೀಕ್ಷೆ ಮೂಡಿಸಿದ್ದ ‘ಮನೆ ಮಾರಾಟಕ್ಕಿದೆ’ ಚಿತ್ರವೀಗ ಬಿಡುಗಡೆಯಾಗಿದೆ. ಮಾರಾಟಕ್ಕಿರೋ ಮನೆ, ಅದಕ್ಕೆ ಥರ ಥರದ ಅನಿವಾರ್ಯತೆ, ವ್ಯಕ್ತಿತ್ವದ ಪೋಷಾಕು ತೊಟ್ಟು ಎಂಟ್ರಿ ಕೊಡುವ ಆಸಾಮಿಗಳೊಂದಿಗೆ ಭರಪೂರ ನಗುವಿನ ಮ್ಯಾಜಿಕ್ಕನ್ನು ನಿರ್ದೇಶಕ ಮಂಜು ಸ್ವರಾಜ್ ಮಾಡಿದ್ದಾರೆ. ಇದರಲ್ಲಿನ ಕಾಮಿಡಿ ಕಿಕ್ ಎಂಥಾದ್ದಿದೆಯೆಂದರೆ, ಅದು ಪ್ರೇಕ್ಷಿಕರಿಗೆ ಮಾತ್ರವಲ್ಲದೇ ಕಾಟ ಕೊಡಲು ಬಂದ ದೆವ್ವಗಳಿಗೂ ನಗೆಯ ಕಚಗುಳಿ ಇಡುವಂತಿದೆ!
ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಒಂದೆಡೆ ಸೇರಿದ್ದಾರೆಂದರೆ ಅಲ್ಲಿ ನಗುವಿನ ಒರತೆ ಹುಟ್ಟಿಕೊಳ್ಳೋದು ಗ್ಯಾರೆಂಟಿ ಎಂಬ ನಂಬಿಕೆ ಎಲ್ಲರಲ್ಲಿಯೂ ಇತ್ತು. ಅದನ್ನು ನಿಜವಾಗಿಸುವಂತೆಯೇ ನಿರ್ದೇಶಕರು ಪಾತ್ರಗಳನ್ನು ರೂಪಿಸಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ ಕಥೆ, ಅದಕ್ಕೆ ಪೂಕವಾದ ಪಾತ್ರಗಳು ಮತ್ತು ಕ್ಷಣ ಕ್ಷಣವೂ ನಗೆಯುಕ್ಕಿಸುವಂತೆ ಪೋಣಿಸಿರುವ ಹಾಸ್ಯ ಸನ್ನಿವೇಶಗಳೊಂದಿಗೆ ಮಾರಾಟಕ್ಕಿರೋ ಮನೆ ತುಂಬಾ ನಗು ಹರಿಡಿಕೊಂಡಿದೆ. ಅದು ಪ್ರತಿ ನೋಡುಗರ ಮೈ ಮನಸುಗಳನ್ನೂ ವ್ಯಾಪಿಸಿಕೊಂಡು ಮುದಗೊಳಿಸುವಷ್ಟು ಶಕ್ತವಾಗಿದೆ.
ವಿದೇಶದಲ್ಲಿ ನೆಲೆಸಿದವನೊಬ್ಬನಿಗೆ ಊರಲ್ಲಿ ಅಪ್ಪ ಅಮ್ಮನಿರೋ ಮನೆಯನ್ನು ಮಾರಾಟ ಮಾಡೋ ಹಂಬಲ. ಆದರೆ ಅದರೊಳಗಿನ ದೆವ್ವ ಭೂತಗಳ ಕಾಟ ಊರಿಡೀ ತುಂಬಿಕೊಂಡು ಯಾರೆಂದರೆ ಯಾರೂ ಅದನ್ನು ಖರೀದಿ ಮಾಡೋ ಧೈರ್ಯ ತೋರೋದಿಲ್ಲ. ಈ ಕಾರಣದಿಂದಲೇ ಮನೆ ಮಾಲೀಕರು ಇದರೊಳಗಿನ ದೆವ್ವ ಓಡಿಸಿ ಮನೆ ಮಾರಾಟ ಮಾಡಿ ಕೊಟ್ಟವರಿಗೆ ಲಕ್ಷಗಟ್ಟಲೆ ಬಂಪರ್ ಬಹುಮಾನ ಘೋಷಣೆ ಮಾಡುತ್ತಾರೆ. ಬದುಕಿನ ನಾನಾ ಜಂಜಡಗಳಲ್ಲಿ ಮುಳುಗಿದ್ದ ನಾಲ್ಕು ಮಂದಿ ಆ ಸವಾಲನ್ನು ಸ್ವೀಕರಿಸಿ ದೆವ್ವವಿರೋ ಮನೆ ಪ್ರವೇಶಿಸಿದ ನಂತರ ಸಂಭವಿಸೋ ವಿದ್ಯಮಾನಗಳೇ ಈ ಸಿನಿಮಾದ ಜೀವಾಳ.
ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಹೇಗಾದರೂ ಮಾಡಿ ಕಾಸು ಹೊಂದಿಸೋ ದರ್ದು ಹೊಂದಿರೋ ಪಾತ್ರಗಳಿಗೆ ಪರಕಾಯ ಪ್ರವೇಶ ಮಾಡಿದಂತೆ ನಟಿಸಿದ್ದಾರೆ. ಅವರೆಲ್ಲರ ಪಾತ್ರಗಳಿಗೂ ಒಂದು ಹಿನ್ನೆಲೆ ಇದೆ. ಅವರಿಗೆ ಬಂದೊದಗಿದ ಕಾಸಿನ ಅನಿವಾರ್ಯತೆಗಳನ್ನು ನಿರ್ದೇಶಕರು ಮಜವಾಗಿಯೇ ತೋರಿಸಿದ್ದಾರೆ. ಇನ್ನುಳಿದಂತೆ ಶ್ರುತಿ ಹರಿಹರನ್ ಮತ್ತು ಕಾರುಣ್ಯಾ ರಾಮ್ ಪಾತ್ರಗಳೂ ಮೋಹಕವಾಗಿವೆ. ಒಂದು ಸಿನಿಮಾದ ಒಂದಷ್ಟು ಕಾಮಿಡಿ ಸನ್ನಿವೇಶಗಳನ್ನೇ ಸಮರ್ಥವಾಗಿ ನಿಭಾಯಿಸೋದು ಕಷ್ಟ. ಆದರೆ ನಿರ್ದೇಶಕ ಮಂಜು ಸ್ವರಾಜ್ ಒಂದಿಡೀ ಚಿತ್ರವನ್ನೇ ಭರಪೂರ ನಗುವಲ್ಲಿ ಮಿಂದೇಳುವಂತೆ ಕಟ್ಟಿ ಕೊಟ್ಟಿರೋದು ಇಡೀ ಸಿನಿಮಾದ ಪ್ಲಸ್ ಪಾಯಿಂಟ್. ನೀವೂ ಒಮ್ಮೆ ಮಾರಾಟಕ್ಕಿರೋ ದೆವ್ವದ ಮನೆಯನ್ನು ಕಣ್ತುಂಬಿಕೊಳ್ಳಿ. ಖಂಡಿತಾ ಭರ್ಜರಿ ಕಾಮಿಡಿ ನಗವಿನಲೆಯಲ್ಲಿ ಮಿಂದೇಳುವಂತೆ ಮಾಡುತ್ತದೆ.
ಬೆಂಗಳೂರು: ಒಂದು ಚಿತ್ರದಿಂದ ಇನ್ನೊಂದು ಚಿತ್ರಕ್ಕೆ ಯಾವ ನೆರಳೂ ಇಲ್ಲದಂಥಾ ಶೈಲಿಯಲ್ಲಿ ದೃಶ್ಯ ಕಟ್ಟೋದು ನಿರ್ದೇಶಕನೊಬ್ಬನ ಅಸಲಿ ಕಸುಬುದಾರಿಕೆ. ಹಾಗೆ ಒಂದು ಚಿತ್ರವಾದ ನಂತರ ಮತ್ತೊಂದರಲ್ಲಿ ಭಿನ್ನ ಜಾನರಿನ ಕಥೆಗಳನ್ನು ಆರಿಸಿಕೊಳ್ಳುತ್ತಾ ಸಾಗುವವರು ಮಾತ್ರವೇ ಯಾವುದೇ ಚಿತ್ರರಂಗಗಳಲ್ಲಿ ಚಾಲ್ತಿಯಲ್ಲಿರಲು ಸಾಧ್ಯ. ಈ ನಿಟ್ಟಿನಲ್ಲಿ ನೋಡ ಹೋದರೆ ಯುವ ನಿರ್ದೇಶಕ ಮಂಜು ಸ್ವರಾಜ್ ಅವರ ಯಶಸ್ಸಿನ ಗುಟ್ಟೂ ಕೂಡಾ ಇಂಥಾ ಬದಲಾವಣೆಯಲ್ಲಿಯೇ ಅಡಗಿದೆ. ಶಿಶಿರದಿಂದ ಮೊದಲೊಂಡು ಈವರೆಗೂ ವಿಶೇಷವಾದ ಕಥೆಗಳನ್ನೇ ಮುಟ್ಟುತ್ತಾ ಬಂದಿರುವ ಮಂಜು ಸ್ವರಾಜ್ ಮನೆ ಮಾರಾಟಕ್ಕಿದೆ ಚಿತ್ರದ ಮೂಲಕ ಇದೇ ಮೊದಲ ಬಾರಿ ಸಂಪೂರ್ಣವಾಗಿ ಕಾಮಿಡಿ ಜಾನರ್ ಚಿತ್ರವನ್ನು ರೂಪಿಸಿದ್ದಾರೆ.
ಮಂಜು ಸ್ವರಾಜ್ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಪ್ರತಿಭಾವಂತ ಯುವ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಶಿಶಿರ, ಪಟಾಕಿ, ಶ್ರಾವಣಿ ಸುಬ್ರಹ್ಮಣ್ಯ, ಶ್ರೀಕಂಠ ಮುಂತಾದ ಸಿನಿಮಾಗಳನ್ನು ನಿರ್ದೇಶನ ಮಾಡಿರೋ ಮಂಜು ಅತ್ಯತ್ತಮ ಬರಹಗಾರರಾಗಿ, ಸಿನಿಮಾ ರಂಗದಲ್ಲಿ ನಾನಾ ಅವತಾರಗಳನ್ನು ಎತ್ತಿರುವವರು. ಅತ್ಯಂತ ಕಷ್ಟದ ದಿನಗಳನ್ನು ಕಂಡು ಅದರ ನಡುವೆಯೂ ಚಿತ್ರರಂಗದಲ್ಲಿ ಹಂತ ಹಂತವಾಗಿ ಮೇಲೇರಿ ಬಂದಿರುವ ಮಂಜು ಸ್ವರಾಜ್ ಅವರ ಮಹಾ ಕನಸಿನಂಥಾ ಚಿತ್ರ ಮನೆ ಮಾರಾಟಕ್ಕಿದೆ.
ಮಂಜು ಸ್ವರಾಜ್ ನಿರ್ದೇಶಕ ನಾಗತಿಹಳ್ಳಿ ಚಂದ್ರ ಶೇಖರ್ ಅವರ ಸಮ್ಮುಖದಲ್ಲಿ ಅರಳಿಕೊಂಡಿರೋ ಪ್ರತಿಭೆ. ಇದುವರೆಗೂ ಪ್ರೊಡಕ್ಷನ್ ಬಾಯ್, ಕ್ಯಾಮೆರಾ ಅಸಿಸ್ಟೆಂಟ್ ಸೇರಿದಂತೆ ನಾನಾ ಕಾರ್ಯಗಳನ್ನು ಮಾಡುತ್ತಲೇ ನಿರ್ದೇಶಕನಾಗಬೇಕೆಂಬ ಕನಸನ್ನು ಗಟ್ಟಿಗೊಳಿಸಿಕೊಂಡವರು ಮಂಜು ಸ್ವರಾಜ್. ಆ ನಂತರದಲ್ಲಿ ಮತ್ತೊಂದಷ್ಟು ಸಿನಿಮಾಗಳ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸಿ ಅನುಭವ ಗಿಟ್ಟಿಸಿಕೊಂಡು ಶಿಶಿರ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದರು. ಈ ಬಾರಿ ಅವರು ಮನೆ ಮಾರಾಟಕ್ಕಿದೆ ಚಿತ್ರದ ಮೂಲಕ ನಿರ್ಮಾಪಕ ಎಸ್ ವಿ ಬಾಬು ಸಾರಥ್ಯದಲ್ಲಿ ಅದ್ಭುತ ಚಿತ್ರವನ್ನು ರೂಪಿಸಿದ ಖುಷಿಯಲ್ಲಿದ್ದಾರೆ.
ಎಸ್ ವಿ ಬಾಬು ಈ ಹಿಂದೆ ಮಂಜು ನಿರ್ದೇಶನ ಮಾಡಿದ್ದ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಆ ಸಿನಿಮಾದಲ್ಲಿ ಮಂಜು ಅವರ ಕಸುಬುದಾರಿಕೆಯನ್ನು ಮೆಚ್ಚಿಕೊಂಡಿದ್ದ ಅವರು ಮನೆ ಮಾರಾಟಕ್ಕಿದೆ ಚಿತ್ರವನ್ನು ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದರಂತೆ. ಈ ಮೂಲಕವೇ ಮಂಜು ಸ್ವರಾಜ್ ಹೊಸ ಅನುಭವವನ್ನು ಕಾಮಿಡಿ ಜಾನರ್ ಚಿತ್ರದ ಮೂಲಕ ದಕ್ಕಿಸಿಕೊಂಡಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಹಿಟ್ ಆಗಿ ತಮ್ಮ ಸಿನಿ ಜೀವನ ಮತ್ತಷ್ಟು ಮಿಂಚುವಂತೆ ಮಾಡುತ್ತದೆಂಬ ನಂಬಿಕೆ ಮಂಜು ಸ್ವರಾಜ್ ಅವರಲ್ಲಿದೆ.
ಬೆಂಗಳೂರು: ಕನ್ನಡದಲ್ಲಿ ಭರವಸೆಯ ನಟಿಯಾಗಿ ನೆಲೆ ಕಂಡುಕೊಂಡಿದ್ದವರು ಶ್ರುತಿ ಹರಿಹರನ್. ಆದರೆ ಒಂದಷ್ಟು ವಿವಾದದ ಬೆನ್ನಿಗೇ ಅವರು ಮದುವೆಯಾಗಿ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಇದೀಗ ವಿದೇಶದಲ್ಲಿ ನೆಲೆಸಿರೋ ಶ್ರುತಿ ಬಹು ಕಾಲದ ನಂತರ ಮನೆ ಮಾರಾಟಕ್ಕಿದೆ ಚಿತ್ರದ ಮೂಲಕ ಮತ್ತೆ ವಾಪಾಸಾಗಿದ್ದಾರೆ. ಮಂಜು ಸ್ವರಾಜ್ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರ ಇದೇ ವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈವರೆಗೆ ಸಾಕಷ್ಟು ವಿಭಿನ್ನ ಪಾತ್ರಗಳನ್ನು ನಿರ್ವಹಿಸಿರುವ ಶ್ರುತಿ ‘ಮನೆ ಮಾರಾಟಕ್ಕಿದೆ’ ಚಿತ್ರದಲ್ಲಿ ಮತ್ತೊಂದು ಥರತದ ಪಾತ್ರಕ್ಕೆ ಜೀವ ತುಂಬಿದ್ದಾರೆ.
ಶ್ರುತಿ ಹರಿಹರನ್ ಯಾವಾಗ ಒಂದು ವಿವಾದದ ನಂತರದಲ್ಲಿ ವಿದೇಶ ಸೇರಿಕೊಂಡಿದ್ದರೋ ಆ ನಂತರದಲ್ಲಿ ಮತ್ತೆ ಅವರು ಮರಳೋದು ಕಷ್ಟ ಎಂಬಂಥಾ ವಾತಾವರಣವಿತ್ತು. ಆದರೆ ಅದರ ಆಜೂ ಬಾಜಲ್ಲಿಯೇ ಮನೆ ಮಾರಾಟಕ್ಕಿದೆ ಚಿತ್ರವನ್ನು ಒಪ್ಪಿಕೊಂಡಿದ್ದ ಶ್ರುತಿ ಹರಿಹರನ್ನು ಇಲ್ಲಿ ಚೆಂದದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಇದು ಔಟ್ ಆಂಡ್ ಔಟ್ ಕಾಮಿಡಿ ಚಿತ್ರ ಅನ್ನೋದು ಈಗಾಗಲೇ ಪ್ರೇಕ್ಷಕರಿಗೆಲ್ಲ ಗೊತ್ತಾಗಿದೆ. ಟ್ರೇಲರ್ ನಲ್ಲಿ ಕಾಣಿಸಿಕೊಂಡಿದ್ದ ದೃಷ್ಯಾವಳಿಗಳು ಹಾರ್ ಲುಕ್ಕಿನಲ್ಲಿ ಬೆಚ್ಚಿ ಬೀಳಿಸುತ್ತಲೇ ಹಾಸ್ಯದ ವಿಚಾರದಲ್ಲಿ ಎದ್ದೂ ಬಿದ್ದು ನಗುವಂತೆ ಮಾಡಿವೆ. ಕೆಲವೇ ಕೆಲ ನಿಮಿಷದ ಈ ಟ್ರೇಲರ್ ಈ ಪಾಟಿ ಪರಿಣಾಮಕಾರಿಯಾಗಿರೋವಾಗ ಇಡೀ ಚಿತ್ರ ಅದೆಷ್ಟು ಮಜವಾಗಿ ಮೂಡಿ ಬಂದಿರಬಹುದೆಂದು ಯಾರಿಗಾದರೂ ಅಂದಾಜು ಸಿಗದಿರಲು ಸಾಧ್ಯವಿಲ್ಲ.
ಹಾಗಾದರೆ ಕಂಪ್ಲೀಟ್ ಕಾಮಿಡಿ ಶೈಲಿಯ ಈ ಚಿತ್ರದಲ್ಲಿ ನಾಯಕಿಯಾಗಿ ಶ್ರುತಿ ಹರಿಹರನ್ ಯಾವ ಥರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆಂಬ ಕುತೂಹಲ ಕಾಡೋದು ಸಹಜವೇ. ಮನೆ ಮಾರಾಟಕ್ಕಿದೆ ಚಿತ್ರತಂಡ ಈ ವಿಚಾರದಲ್ಲಿ ಭಾರೀ ಜಾಗರೂಕತೆಯಿಂದ ವರ್ತಿಸುತ್ತಾ ಸಾಗಿ ಬಂದಿದೆ. ತೀರಾ ಟ್ರೇಲರ್‍ನಲ್ಲಿಯೂ ಕೂಡಾ ಸರಿಕಟ್ಟಾಗಿ ಪಾತ್ರಗಳ ಚಹರೆ ಗೊತ್ತಾಗದಂತೆ ಎಚ್ಚರ ವಹಿಸಿದೆ. ಶ್ರುತಿ ಪಾತ್ರದ ವಿಚಾರದಲ್ಲಿಯೂ ಕೆಲವೇ ಕೆಲ ಮಾಹಿತಿ ಬಿಟ್ಟು ಕೊಡುತ್ತಾ ಗೌಪ್ಯತೆ ಕಾಪಾಡಿಕೊಂಡಿದೆ. ಅಂತೂ ಈ ಸಿನಿಮಾದಲ್ಲಿ ಶ್ರುತಿ ಮನೆ ಓನರ್ ಆಗಿ ಕಾಣಿಸಿಕೊಂಡಿರೋದಂತೂ ಸತ್ಯ. ಆ ಪಾತ್ರದ ಮಜಾ ಏನನ್ನೋದು ಈ ವಾರವೇ ಎಲ್ಲರಿಗೂ ಗೊತ್ತಾಗಲಿದೆ.