Tag: Chikkoddi

  • ಕೌಟುಂಬಿಕ ಕಲಹಕ್ಕೆ ಮನನೊಂದು 3 ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿದ ತಾಯಿ

    ಕೌಟುಂಬಿಕ ಕಲಹಕ್ಕೆ ಮನನೊಂದು 3 ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿದ ತಾಯಿ

    – ತಾಯಿ, ಇಬ್ಬರು ಮಕ್ಕಳು ಸಾವು, 1 ಮಗು ಅಪಾಯದಿಂದ ಪಾರು

    ಚಿಕ್ಕೋಡಿ: ಕೌಟುಂಬಿಕ ಕಲಹಕ್ಕೆ ಮನನೊಂದು ಮಹಿಳೆಯೊಬ್ಬರು 3 ಮಕ್ಕಳೊಂದಿಗೆ ಕೃಷ್ಣಾ ನದಿಗೆ (Krishna River) ಹಾರಿದ್ದಾರೆ. ಇಬ್ಬರು ಮಕ್ಕಳು ಮತ್ತು ತಾಯಿ ಸಾವನ್ನಪ್ಪಿದ್ದು, 1 ಮಗು ಪಾರಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

    ತಾಯಿ ಶಾರದಾ ಡಾಲೆ(32) ಮಕ್ಕಳಾದ ಅಮೃತಾ(14), ಆದರ್ಶ(8) ಮೃತರು. ಅನುಕ್ಷಾ ಡಾಲೆ ಬದುಕುಳಿದಿದ್ದು, ರಾಯಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನನ್ನನ್ನು ‘ಲೇಡಿ ಸೂಪರ್‌ಸ್ಟಾರ್’ ಎಂದು ಕರೆಯಬೇಡಿ- ಫ್ಯಾನ್ಸ್‌ಗೆ ನಯನತಾರಾ ಮನವಿ

    ಪತಿ ಅಶೋಕ ಡಾಲೆ(45) ಪ್ರತಿ ನಿತ್ಯ ಕುಡಿದು ಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದ ಶಾರದಾ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದಾರೆ. 1 ಮಗುವನ್ನು ಕೂಡಲೇ ರಕ್ಷಣೆ ಮಾಡಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ. ಇದನ್ನೂ ಓದಿ: ಸಾಲದ ಶ್ಯೂರಿಟಿಗೆ ಸಹಿ ಹಾಕುವಂತೆ ಬೆದರಿಕೆ – ಮನನೊಂದ ಮಹಿಳೆ ಆತ್ಮಹತ್ಯೆ

    ಅಶೋಕ ಡಾಲೆಯನ್ನು ಕುಡಚಿ ಪೊಲೀಸರ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 40 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ ನಡೆಯುತ್ತಿದೆ: ಜಾರಕಿಹೊಳಿ ಬಾಂಬ್

    40 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ ನಡೆಯುತ್ತಿದೆ: ಜಾರಕಿಹೊಳಿ ಬಾಂಬ್

    ಚಿಕ್ಕೋಡಿ: 40 ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ನಿಟ್ಟಿನಲ್ಲಿ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿರುವುದು ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಕುರಿತು ಬೆಂಗಳೂರಿನಲ್ಲಿ ವರಷ್ಠರ ಹಂತದಲ್ಲಿ ಚರ್ಚೆ ನಡೆದಿರೋದು ನಿಜ, ಯಾರು ಎಷ್ಟು ಜನ ಬರ್ತಾರೆ ಅಂತ ನನಗೆ ಮಾಹಿತಿ ಇಲ್ಲ. ಆದರೆ ಶಾಸಕರು ಕಾಂಗ್ರೆಸ್‍ಗೆ ಬರುವ ಬಗ್ಗೆ ಚರ್ಚೆ ಆಗಿದೆ ಎಂದರು. ಇದನ್ನೂ ಓದಿ: ಬೆಳಗಾವಿ ಲೋಕಸಭೆಯಿಂದ ನನ್ನ ಸ್ಪರ್ಧೆ ನಿಶ್ಚಿತ : ಸತೀಶ್ ಜಾರಕಿಹೊಳಿ

    ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ್ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿದ ಜಾರಕಿಹೊಳಿ, ಸಂಜಯ್ ಪಾಟೀಲ್ ಇಂತಹ ಹೇಳಿಕೆಗಳನ್ನು ಕೊಡುವುದು ಹೊಸದೇನಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ. ಬೆಳಗಾವಿ ಜಿಲ್ಲೆಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಅಂತಿಮವಾಗಿ ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು: ಸುಧಾಕರ್

  • ಅನ್ನದಾತರ ಬಾಳು ಹಸನಾಗಲು ಸಮಗ್ರ ಕೃಷಿ ಅಭಿಯಾನ ಸಹಕಾರಿ: ಶಶಿಕಲಾ ಜೊಲ್ಲೆ

    ಅನ್ನದಾತರ ಬಾಳು ಹಸನಾಗಲು ಸಮಗ್ರ ಕೃಷಿ ಅಭಿಯಾನ ಸಹಕಾರಿ: ಶಶಿಕಲಾ ಜೊಲ್ಲೆ

    ಚಿಕ್ಕೋಡಿ: ಅನ್ನದಾತರ ಬಾಳು ಹಸನಾಗಲು ಸಮಗ್ರ ಕೃಷಿ ಅಭಿಯಾನ ಸಹಕಾರಿಯಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟಿದ್ದಾರೆ.

    ಕೃಷಿ ಇಲಾಖೆ ವತಿಯಿಂದ ಸಮಗ್ರ ಕೃಷಿ ಅಭಿಯಾನ ಹಾಗೂ “ನನ್ನ ಬೆಳೆ ನನ್ನ ಹಕ್ಕು” ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ಗೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು ಚಾಲನೆ ನೀಡಿ ನೀಡಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಅಭಿಯಾನದ ವಾಹನಕ್ಕೆ ಹಸಿರು ನಿಶಾನೆ ತೋರಿಸುವದರ ಮೂಲಕ ಚಾಲನೆ ನೀಡಲಾಯಿತು. ಇದನ್ನೂ ಓದಿ: ಪಂಚರ್ ಆಗಿ ಹಿಮ್ಮುಖವಾಗಿ ಚಲಿಸಿ ಟ್ರ್ಯಾಕ್ಟರ್ ಪಲ್ಟಿ

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಶಿಕಲಾ ಜೊಲ್ಲೆ, ಈ ಸಮಗ್ರ ಕೃಷಿ ಅಭಿಯಾನದ ವಾಹನವು, ಗ್ರಾಮ-ಗ್ರಾಮಗಳಲ್ಲಿ ರೈತರ ಮನೆ ಬಾಗಿಲಿಗೆ ತೆರಳಿ ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಅರಿವು ಮೂಡಿಸುತ್ತದೆ. ಗೊಬ್ಬರ, ಬೀಜಗಳ, ಕ್ರಿಮಿನಾಶಕಗಳ, ಕೃಷಿ ಯಂತ್ರೋಪಕರಣಗಳ ಹಾಗೂ ರೈತರ ಜಮೀನುಗಳ ವಿಮೆಯ ಬಗ್ಗೆ ಮಾಹಿತಿ ಒದಗಿಸುತ್ತದೆ. ಈ ಸಮಗ್ರ ಕೃಷಿ ಅಭಿಯಾನ ಮೊಬೈಲ್ ಆ್ಯಪ್ ನಲ್ಲಿಯೂ ಲಭ್ಯವಿದ್ದು, ಇದರಲ್ಲಿ ರೈತರಿಗೆ ಕೃಷಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಸುಲಭವಾಗಿ ಸಿಗುತ್ತವೆ. ಇದೊಂದು ವಿನೂತನ ಹಾಗೂ ಉತ್ತಮ ಕಾರ್ಯವಾಗಿದ್ದು, ಬಿಜೆಪಿ ಸರ್ಕಾರದ ಯೋಜನೆಗಳು ರೈತರ ಬಳಿ ತಲುಪಿ ಅವರ ಕೃಷಿಕಾರ್ಯ ಸಮೃದ್ಧಿಯಾಗಲಿ ಎಂದು ಹಾರೈಸಿದರು. ಇದನ್ನೂ ಓದಿ: 107 ಭಾರತೀಯರು ಸೇರಿ ಅಫ್ಘಾನಿಸ್ತಾನದಿಂದ 168 ಜನರ ಆಗಮನ

    ಈ ಸಂದರ್ಭದಲ್ಲಿ ಸಹಾಯಕ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ್ ಜನಮಟ್ಟಿ, ಉಪನಿರ್ದೇಶಕರಾದ ಜೆ.ಎಲ್. ರೂಡಗಿ, ಸಹಾಯಕ ಕೃಷಿ ಅಧಿಕಾರಿ ಪುರುಷೋತ್ತಮ ಪಿರಾಜೆ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.