Tag: Chikmagalur

  • ಹಿಂದೂಗಳಂತೆ ಆಯುಧ ಪೂಜೆ ಮಾಡಿ ಸಂಭ್ರಮಿಸಿದ ಮುಸ್ಲಿಮ್ ವ್ಯಕ್ತಿ!

    ಹಿಂದೂಗಳಂತೆ ಆಯುಧ ಪೂಜೆ ಮಾಡಿ ಸಂಭ್ರಮಿಸಿದ ಮುಸ್ಲಿಮ್ ವ್ಯಕ್ತಿ!

    ಚಿಕ್ಕಮಗಳೂರು: ನಾಡಿನೆಲ್ಲೆಡೆ ಇಂದು ದಸರಾ ಹಾಗೂ ಆಯುಧ ಪೂಜೆಯ ಸಂಭ್ರಮ. ಕಾಫಿನಾಡಿ ಚಿಕ್ಕಮಗಳೂರಿನಲ್ಲೂ ಜನಸಾಮಾನ್ಯರು ಸಂಭ್ರಮದಿಂದ ಆಯುಧ ಪೂಜೆಯನ್ನ ಆಚರಿಸಿದ್ದಾರೆ. ಆದರೆ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂಗಳಂತೆ ತನ್ನ ವಾಹನಗಳಿಗೆ ಆಯುಧ ಪೂಜೆ ಮಾಡಿರೋದು ಮಾತ್ರ ವಿಶೇಷವಾಗಿದೆ.

    ಎಸ್‍ಎಂಎಸ್ ಬಸ್ ಮಾಲೀಕರಾದ ಸಿರಾಜ್ ಹಿಂದೂಗಳಿಗೆ ಕಡಿಮೆ ಇಲ್ಲದಂತೆ ಆಯುಧ ಪೂಜೆಯನ್ನ ಆಚರಿಸಿದ್ದಾರೆ. ಹಿಂದು-ಮುಸ್ಲಿಂ ಎಂಬ ಭೇದ-ಭಾವವಿಲ್ಲ. ನಾವು ವಾಹನಗಳನ್ನ ಇಟ್ಟಿದ್ದೇವೆ. ಅನ್ನ ತಿನ್ನುತ್ತಿರೋದು ಅದರಲ್ಲೇ. ನಾವೆಲ್ಲರೂ ಒಂದೇ. ಭೂಮಿಯ ಮೇಲೆ ಇರುವುದು ಎರಡೇ ಜಾತಿ. ಒಂದು ಹೆಣ್ಣು, ಮತ್ತೊಂದು ಗಂಡು ಹಿಂದೂ ಮುಸ್ಲಿಂ ಎಂಬ ಭೇದ-ಭಾವ ಮಾಡೋದು ಕಿಡಿಗೇಡಿಗಳು ನಾವೆಲ್ಲರೂ ಒಂದೇ ಎಂದು ಹೇಳಿ ಅದ್ಧೂರಿಯಾಗಿ ಆಯುಧ ಪೂಜೆ ಆಚರಿಸಿದ್ದಾರೆ.

    ತನ್ನ ಬಸ್ಸುಗಳಿಗೆ ಚೆಂಡು ಹೂವಿನಿಂದ ಸಿಂಗಾರ ಮಾಡಿ, ಬಲೂನ್, ಬಾಳೆದಿಂಡು, ಮಾವಿನತೋರಣ ಕಟ್ಟಿ ಪೂಜೆ ಮಾಡಿ ಅಕ್ಕಪಕ್ಕದವರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಚೇರ್ ಹೋಗುತ್ತೆ ಅನ್ನೋ ಭಯವಿಲ್ಲ, ಸಿಎಂ ಸ್ಥಾನ ಶಾಶ್ವತವೂ ಅಲ್ಲ – ಎಚ್‍ಡಿಕೆ

    ಚೇರ್ ಹೋಗುತ್ತೆ ಅನ್ನೋ ಭಯವಿಲ್ಲ, ಸಿಎಂ ಸ್ಥಾನ ಶಾಶ್ವತವೂ ಅಲ್ಲ – ಎಚ್‍ಡಿಕೆ

    ಚಿಕ್ಕಮಗಳೂರು: ಚೇರ್ ಹೋಗುತ್ತೆ ಅನ್ನೋ ಭಯ ನನಗಿಲ್ಲ. ಮುಖ್ಯಮಂತ್ರಿ ಸ್ಥಾನ ಶಾಶ್ವತವೂ ಅಲ್ಲ. ಈ ರಾಜ್ಯದಲ್ಲಿ ಅನೇಕ ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದಲಾವಣೆಗಳು ಆಗುತ್ತಾ ಇರುತ್ತವೆ ಅಂತ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ನನಗೇನೂ ಚೇರ್ ಹೋಗುತ್ತೆ ಅನ್ನೋ ಭಯವಿಲ್ಲ. ಈ ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ. ಈ ರಾಜ್ಯದಲ್ಲಿ ಎಷ್ಟು ಜನ ಮುಖ್ಯಮಂತ್ರಿಗಳಾಗಿ ಹೋದ್ರು. ಎಷ್ಟು ಸರ್ಕಾರಗಳು ಬಂದು ಹೋದವು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದಲಾವಣೆಗಳು ಸಹಜ. ಹೀಗಾಗಿ ಇಲ್ಲಿ ಅದು ಮುಖ್ಯವಲ್ಲ. ಜನಕ್ಕೆ ಏನಾಗಬೇಕು? ಜನರ ಕಷ್ಟವನ್ನು ಆಲಿಸುವುದು ಮುಖ್ಯ ಅನ್ನೋದು ನನ್ನ ಮನಸ್ಸಿನಲ್ಲಿರುವಂತದ್ದು ಅಂತ ಹೇಳಿದ್ರು.

    ಮಾಧ್ಯಮದ ವಿರುದ್ಧ ಅಸಮಾಧಾನ:
    ಯಾಕೆ ನಂಗೆ ಇಷ್ಟೊಂದು ಹಿಂಸೆ ಕೊಡುತ್ತೀರಿ. ಯಾಕೆ ನಂಗೇ ಇಷ್ಟೊಂದು ಪ್ರಶ್ನೆಗಳನ್ನು ಕೇಳುತ್ತೀರಿ ಎಂದು ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮದೆದುರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ನನ್ನ ಕೆಲಸಕ್ಕೆ ಪ್ರಚಾರ ಕೊಡ್ತಿಲ್ಲ. ಅಧಿಕಾರ ಇಲ್ಲದಾಗ ಬಂದ್ರೆ ಪ್ರಚಾರ ಕೊಡಲ್ಲ. ಅಧಿಕಾರ ಇದ್ದಾಗ ಬಂದ್ರೆ ಪ್ರಚಾರ ಕೊಡ್ತಿರಿ ಅಂತ ತಮ್ಮ ಅಸಮಾಧಾನವನ್ನು ಹೊರಹಾಕಿದ್ರು.

    ಈ ಕ್ಷೇತ್ರಕ್ಕೆ ಬರುತ್ತಾ ಇರುತ್ತೇನೆ. ಇದು ಹೊಸದೇನಲ್ಲ. ಅಧಿಕಾರ ಇಲ್ಲದೇ ಇದ್ದಾಗಲೂ ಬಂದಿದ್ದೇನೆ. ಆದ್ರೆ ಅಧಿಕಾರ ಇಲ್ಲದೇ ಇದ್ದಾಗ ಬಂದಾಗ ಪ್ರಚಾರ ಸಿಕ್ಕಿಲ್ಲ. ದೇವರ ದರ್ಶನಕ್ಕೆ ಬಂದಿದ್ದನ್ನು ಪ್ರಚಾರ ಕೊಡುತ್ತೀರಿ. ಈಗಾಗಲೇ ರೈತರ ಸಾಲಮನ್ನಾ ಮಾಡಲು ನಾನು ತೆಗೆದುಕೊಂಡ ನಿರ್ಧಾರಗಳು, ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಈಗಾಗಲೇ ಸರ್ಕಾರದಿಂದ ನಿರ್ದೇಶನಗಳನ್ನು ನೀಡಿದ್ದೇನೆ. ಅದ್ಯಾವುದಕ್ಕೂ ಪ್ರಚಾರ ಕೊಡಲ್ಲ. ದೇವರ ದರ್ಶನ ಇದ್ರೆ ಪ್ರಚಾರ ಕೊಡುತ್ತೀರಿ. ಗುರುಗಳ ದರ್ಶನ, ದೇವರ ಆಶೀರ್ವಾದ ಇದ್ರೇನೆ ಎಲ್ಲರೂ ಬದುಕೋದು ಅಂದ್ರು.

    ಇವುಗಳಲ್ಲದರ ಜೊತೆಗೆ ಒಳ್ಳೆಯ ಕೆಲಸಕ್ಕೆ ಬೆಂಬಲ ಕೊಡಿ ಅಂತ ಮನವಿ ಮಾಡಿಕೊಳ್ಳುತ್ತೇನೆ. ಅದು ಬಿಟ್ಟು ಇನ್ಯಾವುದೋ ವಿಚಾರಗಳಿಗೆ ಪ್ರಚಾರ ನೀಡುತ್ತೀರಿ. ಯಾತಕ್ಕೆ ನನಗೆ ಹಿಂಸೆ ಕೊಡುತ್ತೀರಿ ಅಂತ ಮಾಧ್ಯಮಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ರು.

    ರಾಜ್ಯದ ಹಲವೆಡೆ ಬರಗಾಲ ಪ್ರಾರಂಭವಾಗಿದೆ. ಹೀಗಾಗಿ ಇಂದು ಶೃಂಗೇರಿಗೆ ಭೇಟಿ ನಿಡಿ ಗುರುಗಳ ಬಳಿ ಮನವಿ ಮಾಡಿಕೊಂಡಿದ್ದೀನಿ. ಜನ ಬರಗಾಲದಿಂದ ಮುಕ್ತರಾಗುವಂತಹ ವಾತಾವರಣ ನಿರ್ಮಾಣ ಮಾಡು ತಾಯಿ ಅಂತ ಇಂದು ಬೇಡಿಕೊಂಡಿದ್ದೇನೆ ಅಂದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

    https://www.youtube.com/watch?v=4ycgrWINTpw

  • ಅನಾರೋಗ್ಯಕ್ಕೀಡಾಗಿರೋ ಮಗುವಿನ ಚಿಕಿತ್ಸೆಗೆ ಸಿಎಂ ಎಚ್‍ಡಿಕೆ ನೆರವಿನ ಭರವಸೆ

    ಅನಾರೋಗ್ಯಕ್ಕೀಡಾಗಿರೋ ಮಗುವಿನ ಚಿಕಿತ್ಸೆಗೆ ಸಿಎಂ ಎಚ್‍ಡಿಕೆ ನೆರವಿನ ಭರವಸೆ

    ಚಿಕ್ಕಮಗಳೂರು: ಅನಾರೋಗ್ಯಕ್ಕೀಡಾಗಿರುವ ಮಗುವಿನ ಚಿಕಿತ್ಸೆ ಕೊಡಿಸಲು ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು ಬಡ ಕುಟುಂಬಕ್ಕೆ ಭರವಸೆ ನೀಡಿದ್ದಾರೆ.

    ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶುಕ್ರವಾರ ರಾತ್ರಿ 11 ಗಂಟೆಗೆ ಶೃಂಗೇರಿಗೆ ಬಂದಿರುವ ಕುಮಾರಸ್ವಾಮಿ, ರಾತ್ರಿ ಶೃಂಗೇರಿಯಲ್ಲೇ ವಾಸ್ತವ್ಯ ಹೂಡಿದ್ದಾರೆ. ಬೆಳಗ್ಗೆ ಶಾರದಾಂಭೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಬಡ ಕುಟುಂಬವೊಂದು ಸಿಎಂ ಅವರನ್ನು ಭೇಟಿ ಮಾಡಿದೆ.

    ಬಾಳೆಹೊನ್ನೂರು ಸಮೀಪದ ನೆಲ್ಲಿಮಕ್ಕಿಯ ದೇವರಾಜ, ಸುನಿತಾ ದಂಪತಿಯ ಐದು ವರ್ಷದ ಅಮಂತ ಅನಿಮಿಯಾ ಕಾಯಿಲೆಯಿಂದ ಬಳಲುತ್ತಿದ್ದಾನೆ. ಅದಕ್ಕಾಗಿ ಪ್ರತಿ ತಿಂಗಳೂ ಚಿಕಿತ್ಸೆಗೆ 25 ಸಾವಿರ ಖರ್ಚು ಮಾಡಲಾಗುತ್ತಿದೆ. ಹೀಗಾಗಿ ಚಿಕಿತ್ಸೆಗೆ ನೆರವು ನೀಡುವಂತೆ ಬಡ ದಂಪತಿ ಸಿಎಂ ಬಳಿ ಮನವಿ ಮಾಡಿಕೊಂಡಿದೆ.

    ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬನ್ನಿ, ಚಿಕಿತ್ಸೆಗೆ ವ್ಯವಸ್ಥೆ ಮಾಡಿಸುತ್ತೇನೆ ಎಂದು ಬಡ ಕುಟುಂಬಕ್ಕೆ ಭರವಸೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕರ್ಕೊಂಡ್ ಹೋಗಿ ಸಿಎಂ ಮಾಡ್ತೀನಿ ಅಂದ್ರು ಬಿಜೆಪಿ ಸೇರಲ್ಲ: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ

    ಕರ್ಕೊಂಡ್ ಹೋಗಿ ಸಿಎಂ ಮಾಡ್ತೀನಿ ಅಂದ್ರು ಬಿಜೆಪಿ ಸೇರಲ್ಲ: ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ

    ಚಿಕ್ಕಮಗಳೂರು: ನನ್ನನ್ನು ಕರೆದುಕೊಂಡು ಹೋಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುತ್ತೇನೆ ಅಂದ್ರು ನಾನು ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ ಎಂದು ಶೃಂಗೇರಿ ಕಾಂಗ್ರೆಸ್ ಟಿ.ಡಿ.ರಾಜೇಗೌಡ ಹೇಳಿದ್ದಾರೆ.

    ಬಿಜೆಪಿ ಅವರು ಎಲ್ಲ ಅಧಿಕಾರ, ಹಣ ಕೊಡುತ್ತೇನೆ ಎಂದು ಆಮೀಷ ಒಡ್ಡುತ್ತಿದ್ದಾರೆ. ಕೆಲ ಬಿಜೆಪಿ ನಾಯಕರು ಖುದ್ದಾಗಿ ಕರೆ ಮಾಡಿ ನನ್ನನ್ನು ಸಂಪರ್ಕಿಸಿದ್ದಾರೆ. ನನಗೆ ಪರಿಚಯಸ್ಥರ ಮೂಲಕವೂ ಪಕ್ಷ ತೊರೆಯುವಂತೆ ಹೇಳಿಸುತ್ತಿದ್ದಾರೆ. ಆದ್ರೆ ಎಂದಿಗೂ ನಾನು ಕಾಂಗ್ರೆಸ್ ಪಕ್ಷ ತೊರೆಯಲ್ಲ ಎಂದು ಟಿ.ಡಿ.ರಾಜೇಗೌಡ ಸ್ಪಷ್ಟನೆ ನೀಡಿದರು.

    ಬೆಂಗಳೂರಿನಲ್ಲಿ ನಡೆದ ಶಾಸಕಾಂಗದ ಸಭೆಗೆ ತೆರಳಲು ನಾಲ್ಕು ಗಂಟೆ ತಡವಾಗಿದ್ದರಿಂದ ನಾನು ಸುದ್ದಿಯಲ್ಲಿದ್ದೇನೆ. ನಾನು ಯಾವತ್ತು ಸುದ್ದಿಯನ್ನು ಮಾಡುವಂತಹ ವ್ಯಕ್ತಿ ಅಲ್ಲ. ಕಳೆದ 34 ವರ್ಷಗಳಲ್ಲಿ ಆಗದಷ್ಟು ದೊಡ್ಡ ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ಸಾಕಷ್ಟು ಪ್ರಾಣಹಾನಿ, ಸಾವಿರ ಕೋಟಿಗೂ ಅಧಿಕ ಬೆಳೆಹಾನಿಯಾಗಿದೆ. ಸರ್ಕಾರ ಎಲ್ಲ ಹಾನಿಗೂ ಪರಿಹಾರ ನೀಡಿದ್ದು, ಅದನ್ನು ರೈತರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸದಲ್ಲಿ ತೊಡಗಿಕೊಂಡಿದ್ದೇನೆ. ನಾನು ಯಾವುದೇ ಗೊಂದಲದ ರಾಜಕಾರಣದಲ್ಲಿ ಇಲ್ಲ ಅಂತಾ ಮಾಧ್ಯಮಗಳಿಗೆ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯೂರಿಯಾ ಮಿಶ್ರಿತ ಹಾಲು ಕುಡಿದ ವಿದ್ಯಾರ್ಥಿಗಳು ಅಸ್ವಸ್ಥ!

    ಯೂರಿಯಾ ಮಿಶ್ರಿತ ಹಾಲು ಕುಡಿದ ವಿದ್ಯಾರ್ಥಿಗಳು ಅಸ್ವಸ್ಥ!

    ಚಿಕ್ಕಮಗಳೂರು: ಸರ್ಕಾರಿ ಶಾಲೆಯಲ್ಲಿ ಅಡುಗೆಯವರ ಎಡವಟ್ಟಿನಿಂದಾಗಿ ಯೂರಿಯಾ ಹಾಲು ಕುಡಿದ 19 ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪ ತಾಲೂಕು ಹರಹರಿಪುರ ಸಮೀಪದ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಮಕ್ಕಳು ಸದ್ಯ ಹರಿಹರಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚೇತರಿಕೆಗೊಂಡ ಬಳಿಕ ಸಂಜೆ ಮನೆಗೆ ತೆರಳಿದ್ದಾರೆ. ಕೊಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ನಿಲುವಾಗಿಲು ಮುಖ್ಯಶಿಕ್ಷಕ ಅಶೋಕ, ಹಿರಿಯ ಅಡುಗೆಯವರಾದ ಯಶೋದಮ್ಮ, ಅಡುಗೆ ಸಹಾಯಕರಾದ ಶಾರದಾ ಹಾಗೂ ಗುಲಾಬಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ನಡೆದದ್ದು ಏನು?
    ನಿಲುವಾಗಿಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ಶನಿವಾರ ವಿದ್ಯಾರ್ಥಿಗಳಿಗೆ ಹಾಲು ವಿತರಣೆ ಮಾಡಲಾಗಿದೆ. ಹಾಲು ಕುಡಿಯುತ್ತಿದ್ದಂತೆ ಮಕ್ಕಳು ಹಾಲು ಕಹಿಯಾಗಿದೆ ಎಂದು ಶಿಕ್ಷಕರಿಗೆ ತಿಳಿಸಿದ್ದಾರೆ. ತಕ್ಷಣವೇ ಜಾಗೃತಗೊಂಡ ದೈಹಿಕ ಶಿಕ್ಷಣ ಶಿಕ್ಷಕರು ತಾವು ಸ್ಪಲ್ಪ ಹಾಲು ಕುಡಿದಿದ್ದಾರೆ. ಹಾಲು ವಿಷವಾಗಿದೆ ಅಂತ ಗೊತ್ತಾಗುತ್ತಿದ್ದಂತೆ ಮಕ್ಕಳಿಗೆ ಹಾಲು ಕುಡಿಯದಂತೆ ಸೂಚಿಸಿ, ಮುಖ್ಯಶಿಕ್ಷಕರಿಗೆ ಆ ವೇಳೆಗಾಗಲೇ ಮುಖ್ಯೋಪಾಧ್ಯಾಯರ ಗಮನಕ್ಕೆ ತಂದಿದ್ದಾರೆ. ಅದರೆ ಅಷ್ಟೊತ್ತಿಗಾಗಲೇ ಶಾಲೆಯ 19 ಮಕ್ಕಳು ಹಾಲನ್ನು ಸೇವಿಸಿಯಾಗಿತ್ತು.

    ಹಾಲು ಕುಡಿದ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ವೇಳೆ ಹಾಲಿನಲ್ಲಿ ವಿಷಕಾರಿ ಯೂರಿಯಾ ಸೇರಿರುವುದು ಪತ್ತೆಯಾಗಿದೆ. ಹಾಲಿನಲ್ಲಿ ಯಾರು ಯೂರಿಯಾ ಬೆರೆಸಿದ್ದು ಹಾಗೂ ಶಾಲೆಗೆ ಅದು ಹೇಗೆ ಬಂತು ಎನ್ನವುದು ಅನುಮಾನ ವ್ಯಕ್ತವಾಗಿದೆ.

    ಯಶೋಧಮ್ಮ ಅವರು ಇಂದು ರಜೆ ಇದ್ದರು. ಹೀಗಾಗಿ ಶುಕ್ರವಾರವೇ ಹಾಲಿಗೆ ಬೇಕಾಗಿದ್ದ ಸಕ್ಕರೆ ಪ್ಯಾಕೇಟ್ ನೀಡಿ ಹೋಗಿದ್ದರು. ಅದನ್ನು ಪರಿಶೀಲನೆ ಮಾಡದೇ ಹಾಲಿಗೆ ಹಾಕಿದ್ದೇವೆ ಎಂದು ಸಹಾಯಕಿಯರಾದ ಗುಲಾಬಿ ಹಾಗೂ ಶಾರದಾ ತಿಳಿಸಿದ್ದಾರೆ.

    ಕಳೆದ ಕೆಲವು ದಿನಗಳಿಂದ ಯಶೋಧಮ್ಮ ಹಾಗೂ ಅಡುಗೆ ಸಹಾಯಕರ ನಡುವೆ ಜಗಳವಾಗಿತ್ತು. ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸಲು ಮಕ್ಕಳ ಜೀವನದ ಜೊತೆಗೆ ಆಟವಾಡಿದ್ದಾರೆ. ಇನ್ನು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

    ಅಶೋಕ ಅವರು ನಿಲುವಾಗಿಲು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರಾಗಿ ಬಂದ ಮೇಲೆ ಅನೇಕ ಬದಲಾವಣೆ ತಂದಿದ್ದರು. ಖಾಸಗಿ ಶಾಲೆಯಂತೆ ನರ್ಸರಿ ತರಗತಿಗಳನ್ನು ಪ್ರಾರಂಭಿಸಿದ್ದರು. ಇದರಿಂದಾಗಿ ಅನೇಕ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತುಂಬಿ ಹರಿಯುತ್ತಿರೋ ಭದ್ರಾ ನದಿಯಲ್ಲಿ ತೆಪ್ಪದಲ್ಲೇ ಮೃತದೇಹ ಸಾಗಿಸಿದ ಗ್ರಾಮಸ್ಥರು

    ತುಂಬಿ ಹರಿಯುತ್ತಿರೋ ಭದ್ರಾ ನದಿಯಲ್ಲಿ ತೆಪ್ಪದಲ್ಲೇ ಮೃತದೇಹ ಸಾಗಿಸಿದ ಗ್ರಾಮಸ್ಥರು

    ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಗ್ರಾಮಕ್ಕೆ ರಸ್ತೆಯಿಲ್ಲ, ಹೀಗಾಗಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ತೆಪ್ಪದ ಮೂಲಕ ಮೃತ ದೇಹವನ್ನು ಸಂಬಂಧಿಕರು ಹಾಗೂ ಗ್ರಾಮಸ್ಥರು ಸಾಗಿಸಿದ್ದಾರೆ.

    ಮಂಗಳೂರಿನ ಆಸ್ಪತ್ರೆಯಲ್ಲಿ ಹೊಳೆಕುಡಿಗೆ ಲಕ್ಷ್ಮಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ದೇಹವನ್ನು ಗ್ರಾಮಕ್ಕೆ ತರಲು ಕಾಲು ದಾರಿಯ ಮೂಲಕ 12 ಕಿ.ಮೀ. ಸುತ್ತಿ ಬರಬೇಕು. ಆ ದಾರಿಯೂ ಸಂಚಾರಕ್ಕೆ ಯೋಗ್ಯವಾಗಿಲ್ಲ, ಹೀಗಾಗಿ ತೆಪ್ಪದ ಮೂಲಕವೇ ಶವವನ್ನು ಸಾಗಿಸಬೇಕಾಯಿತು.

    ಹೊಳೆಕುಡಿಗೆ ಗ್ರಾಮದಲ್ಲಿ ಸುಮಾರು 20ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ವಾಸಿಸುತ್ತಿದ್ದಾರೆ. ಆದರೆ ಈ ಗ್ರಾಮಕ್ಕೆ 3 ದಶಕಗಳಿಂದಲೂ ರಸ್ತೆ ಕಲ್ಪಿಸಿಲ್ಲ ಹಾಗೂ ಮೂಲಸೌರ್ಕಗಳಿಂದ ಜನರು ವಂಚಿತರಾಗಿದ್ದಾರೆ. ಈ ಕುರಿತು ಜಿಲ್ಲಾಡಳಿತ ಹಾಗೂ ಮೂಡಿಗೆರೆ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮೃತರ ಸಂಬಂಧಿ ರುದ್ರಯ್ಯ ದೂರಿದ್ದಾರೆ.

    ಇತ್ತೀಚೆಗೆ ಲಕ್ಷ್ಮಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದ ನದಿಯಲ್ಲಿಯೇ ಸಾಗಬೇಕಾಯಿತು. ನದಿ ಪ್ರವಾಹ ಹೆಚ್ಚಾದರೆ ವಾರಗಟ್ಟಲೇ ಮನೆಯಿಂದ ಹೊರಗೆ ಹೋಗಲು, ಮಕ್ಕಳು ಶಾಲೆಗೆ ತೆರಳವುದು ಕಷ್ಟವಾಗುತ್ತದೆ. ನಗರಕ್ಕೆ ಹೋಗಲು ತೆಪ್ಪದ ಮೂಲಕವೇ ಸಾಗಬೇಕು. ಬೆಳಗ್ಗೆಯಿಂದ ಸಂಜೆವರೆಗೆ ದೋಣಿಯ ಮೂಲಕ ಚಲಿಸುವುದು ಕಷ್ಟ. ಅನೇಕ ಬಾರಿ ಜಿಲ್ಲಾಡಳಿತಕ್ಕೆ ರಸ್ತೆ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದೇವೆ. ಮಳೆಗಾಲ ನಿಂತ ಮೇಲೆ ರಸ್ತೆ ನಿರ್ಮಾಣ ಮಾಡುವುದಾಗಿ ಹೇಳುತ್ತ ಅಧಿಕಾರಿಗಳು ಕಾಲ ದೂಡುತ್ತಿದ್ದಾರೆ ಎಂದು ಚಂದ್ರಶೇಖರ್ ಅಳಲು ತೋಡಿಕೊಂಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಡುರಸ್ತೆಯಲ್ಲೇ ಹಿರಿಯ ವ್ಯಕ್ತಿಗೆ ಥಳಿಸಿದ ಟ್ರಾಫಿಕ್ ಪೇದೆ!

    ನಡುರಸ್ತೆಯಲ್ಲೇ ಹಿರಿಯ ವ್ಯಕ್ತಿಗೆ ಥಳಿಸಿದ ಟ್ರಾಫಿಕ್ ಪೇದೆ!

    ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಟ್ರಾಫಿಕ್ ಪೊಲೀಸರು ಅಮಾಯಕರ ಮೇಲೆ ಮೃಗಗಳ ರೀತಿಯಂತೆ ಹಲ್ಲೆ ಮಾಡಿ ಗೂಂಡಾಗಿರಿಯನ್ನು ಪ್ರದರ್ಶಿಸಿದ ಆರೋಪ ಕೇಳಿ ಬಂದಿದೆ.

    ಚಿಕ್ಕಮಗಳೂರು ನಗರದ ಶೃಂಗಾರ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ದಿನದಿಂದ ದಿನಕ್ಕೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೆಲ್ಮೆಟ್ ಹಾಕದ ಹಿರಿಯ ವ್ಯಕ್ತಿ ಮೇಲೆ ನಡು ರಸ್ತೆಯಲ್ಲಿ ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.

    ನಗರ ಟ್ರಾಫಿಕ್ ಪೊಲೀಸ್ ಠಾಣೆಯ ಪೇದೆ ಸುಭಾಶ್ ಕೃತ್ಯ ಎಸಗಿದ್ದು, ಈ ವೇಳೆ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಹಲ್ಲೆಯ ವಿಡಿಯೋವನ್ನ ಸೆರೆ ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಪೇದೆ ಹಲ್ಲೆ ವಿಡಿಯೋವನ್ನು ಡಿಲೀಟ್ ಮಾಡುವಂತೆ ಧಮ್ಕಿ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಪೇದೆ ಹೊಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

    ಪೇದೆ ಅಮಾನತು: ಹೆಲ್ಮೆಟ್ ಹಾಕದ್ದಕ್ಕೆ ಥಳಿಸಿದ್ದ ಪೇದೆ ಸುಭಾಷ್ ಅವರನ್ನು ಚಿಕ್ಕಮಗಳೂರಿನ ಎಸ್‍ಪಿ ಅಮಾನತುಗೊಳಿಸಿ ಆದೇಶ ಪ್ರಕಟಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗು ನಿರಾಶ್ರಿತರಿಗೆ ಕುದುರೆಮುಖದಲ್ಲಿ ವಸತಿ ಸೌಲಭ್ಯ ನೀಡಿ: ಕಳಸಾ ಜನರಿಂದ ಒತ್ತಾಯ

    ಕೊಡಗು ನಿರಾಶ್ರಿತರಿಗೆ ಕುದುರೆಮುಖದಲ್ಲಿ ವಸತಿ ಸೌಲಭ್ಯ ನೀಡಿ: ಕಳಸಾ ಜನರಿಂದ ಒತ್ತಾಯ

    ಚಿಕ್ಕಮಗಳೂರು: ಕೊಡಗು ನಿರಾಶ್ರಿತ ನೂರಾರು ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುದುರೆಮುಖದಲ್ಲಿ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸುವ ಎಲ್ಲಾ ಸೌಕರ್ಯಗಳು ನೀಡುವಂತೆ ಕಳಸಾದ ಜನರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಕೊಡಗಿನಲ್ಲಿ ಸುರಿದ ಮಹಾಮಳೆಗೆ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ನೆಲೆ ನಿಲ್ಲೋಕೆ ಒಂದು ಸೂರಿಲ್ಲದೆ ನಿರಾಶ್ರಿತರಾಗಿರೋ ನೂರಾರು ಕುಟುಂಬಗಳಿಗೆ ಅನಾಥ ಪ್ರಜ್ಞೆ ಕಾಡುತ್ತಿದೆ. ಸರ್ಕಾರ ಏನೇ ಆಶ್ವಾಸನೆ, ಭರವಸೆ ನೀಡಿದರೂ ಅವರಿಗೆ ಎಲ್ಲಾ ಸೌಕರ್ಯ ಒದಗಿಸಲು ವರ್ಷಗಳೇ ಬೇಕು. ಪುನರ್ವಸತಿ ಕೆಲಸ ಆರಂಭಿಸಲು ಕನಿಷ್ಟ ಮಳೆಗಾಲವಂತೂ ಮುಗಿಯಲೇಬೇಕು. ಮಳೆಗಾಲ ಮುಗಿಯೋದು ಯಾವಾಗ, ಏನೋ ಅನ್ನೋ ಭಯ ಜನ ಹಾಗೂ ಸರ್ಕಾರ ಇಬ್ಬರಿಗೂ ಇದೆ.

    ಕುದುರೆಮುಖದಲ್ಲಿ ಐರನ್ ಅಂಡ್ ಓರ್ ಕಂಪನಿ ಲಿಮಿಟೆಡ್‍ಗೆ ಸೇರಿದ 1800 ಕ್ಕೂ ಅಧಿಕ ಮನೆಗಳಿದ್ದು, ರಸ್ತೆ ಸಂಚಾರ, ವಿದ್ಯುತ್ ಸೌಲಭ್ಯ, ನೀರಿನ ಸೌಲಭ್ಯ, ಮತ್ತು ಸಾಧಾರಣವಾಗಿ ವಿಕೋಪಕ್ಕೆ ಸಿಲುಕುವಂತಹ ಸ್ಥಳವಲ್ಲ ಅಷ್ಟೇ ಅಲ್ಲದೇ ಸದ್ಯಕ್ಕೆ ಅವೆಲ್ಲಾ ಪಾಳು ಬಿದ್ದಿವೆ. 15 ವರ್ಷದ ಹಿಂದೆಯೇ ಕೆಐಓಸಿಎಲ್ ಕಂಪನಿ ಸ್ಥಗಿತಗೊಂಡಿದೆ. ಹಾಗಾಗಿ ಆ ಮನೆಗಳನ್ನ ದುರಸ್ತಿ ಮಾಡಿ ಕೊಡಗಿನ ನಿರಾಶ್ರಿತರಿಗೆ ತಾತ್ಕಾಲಿಕವಾಗಿ ನೀಡಬೇಕೆಂದು ಕಳಸಾದ ಜನರು  ಒತ್ತಾಯಿಸಿದ್ದಾರೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿರಾಡಿ, ಸಂಪಾಜೆ ಬಂದ್: ಚಾರ್ಮಾಡಿ ಘಾಟಿಯಲ್ಲಿ ಭಾರೀ ಟ್ರಾಫಿಕ್ ಜಾಮ್

    ಶಿರಾಡಿ, ಸಂಪಾಜೆ ಬಂದ್: ಚಾರ್ಮಾಡಿ ಘಾಟಿಯಲ್ಲಿ ಭಾರೀ ಟ್ರಾಫಿಕ್ ಜಾಮ್

    ಚಿಕ್ಕಮಗಳೂರು: ಸಂಪಾಜೆ, ಶಿರಾಡಿ ಘಾಟಿ ಬಂದ್ ಆಗಿರೋ ಹಿನ್ನೆಲೆ ಸಾವಿರಾರು ವಾಹನಗಳು ಚಾರ್ಮಾಡಿಘಾಟ್‍ನಲ್ಲಿ ಸಂಚರಿಸುತ್ತಿರುವುದರಿಂದ ವಾಹನಗಳ ದಟ್ಟಣೆ ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ.

    ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್, ಆರಂಭದಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಗಡಿ ಮುಟ್ಟುವವರೆಗೂ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಮಧ್ಯೆ ದೊಡ್ಡ ಗಾಡಿಗಳ ಸಂಚಾರ ಕೂಡ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ತೊಂದೊಡ್ಡುತ್ತಿವೆ. ನಾಲ್ಕೈದು ಕಿಮೀ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿರುವಂತಹ ಸ್ಥಿತಿ ನಿರ್ಮಾಣವಾಗಿದೆ.

    ಜೊತೆಗೆ ಮಳೆ, ಗಾಳಿ, ದಟ್ಟವಾದ ಮಂಜಿನಿಂದ ಪ್ರಯಾಣಿಕರು ಕಂಗಾಲಾಗಿದ್ದು, ವಾಹನಗಳ ಮಂದಗತಿಯ ಸಂಚಾರದಿಂದ ಮೊದಲು ಬೆಳ್ತಂಗಡಿಯ ಗಡಿ ಮುಟ್ಟಿದರೆ ಸಾಕೆಂದು ಆತಂಕದಿಂದಲೇ ಸಂಚರಿಸುತ್ತಿದ್ದಾರೆ.

    ಶಿರಾಡಿ ಘಾಟ್ ನಲ್ಲಿ ಆಗಸ್ಟ್ 20 ರವರೆಗೆ ಲಘು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಡಿಕೇರಿ ಮಂಗಳೂರು ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿರುವ ಕಾರಣ ಸಂಚಾರವನ್ನು ಬಂದ್ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಿಕ್ಕಮಗ್ಳೂರು, ಮಲೆನಾಡಲ್ಲಿ ಧಾರಾಕಾರ ಮಳೆ-ಮನೆ ಗೋಡೆಗಳು ಕುಸಿತ!

    ಚಿಕ್ಕಮಗ್ಳೂರು, ಮಲೆನಾಡಲ್ಲಿ ಧಾರಾಕಾರ ಮಳೆ-ಮನೆ ಗೋಡೆಗಳು ಕುಸಿತ!

    – ಪರಿಹಾರಕ್ಕೆ ವೃದ್ಧೆ ಮನವಿ

    ಚಿಕ್ಕಮಗಳೂರು: ಮುಂದುವರಿದ ಧಾರಾಕಾರ ಮಳೆಯಿಂದಾಗಿ ಮನೆ ಗೋಡೆಗಳು ಕುಸಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.

    ಜಯಮ್ಮ ಎಂಬವರಿಗೆ ಸೇರಿದ ಮನೆಯ ಗೋಡೆ ಸಂಪೂರ್ಣ ಕುಸಿದಿದ್ದು, ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಮಣ್ಣುಪಾಲಾಗಿವೆ. ಇದರಿಂದಾಗಿ ಕಂಗಾಲಾದ ವೃದ್ಧೆ ಜಯಮ್ಮ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    ಅಷ್ಟೇ ಅಲ್ಲದೇ ಮಲೆನಾಡಲ್ಲಿ ಕೂಡ ಮಳೆ ಆರ್ಭಟ ಮುಂದುವರಿದಿದ್ದು, ಕೊಪ್ಪ ತಾಲೂಕಿನ ಹೇರೂರು, ಮೇಗೂರು ಗ್ರಾಮದಲ್ಲಿ ಮೂರು ಮನೆಗಳ ಗೋಡೆ ಕುಸಿದಿವೆ. ಆ ಮನೆಗಳು ಹೇರೂರು ಗ್ರಾಮದ ಶಂಕರ, ರಾಮು ಹಾಗೂ ಮೇಗೂರಿನ ತಿಮ್ಮೆಗೌಡ ಎಂಬವರಿಗೆ ಸೇರಿವೆ. ಮನೆಯ ಗೋಡೆ ಸಂಪೂರ್ಣ ಕುಸಿದು ಹೋಗಿರೋದ್ರಿಂದ ಮನೆಯವರು ಕಂಗಾಲಾಗಿದ್ದು, ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ನಾಶವಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv