ಚಿಕ್ಕಮಗಳೂರು: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ (Second PUC) ಮನೆಯಲ್ಲೇ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ (Koppa) ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ.
ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಬೆಳಿಗ್ಗೆ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದವರು ಗಮನಿಸಿದ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ವಿದ್ಯಾಭ್ಯಾಸದಲ್ಲಿ ಪ್ರತಿಭಾನ್ವಿತನಾಗಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಓದಿನ ಒತ್ತಡ ಕಾರಣವೇ ಅಥವಾ ಬೇರೆ ಯಾವುದೇ ವೈಯಕ್ತಿಕ ಕಾರಣ ಇದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯ (Chikmagaluru) ಮಲೆನಾಡು ಭಾಗದ ದಟ್ಟ ಕಾನನದಲ್ಲಿ ಮತ್ತೆ ಕೆಂಪು ಉಗ್ರರ ಹೆಜ್ಜೆ ಗುರುತುಗಳು ಸದ್ದು ಮಾಡತೊಡಗಿದೆ. 2013-14ರಲ್ಲಿ ಏಳೆಂಟು ಜನ ನಕ್ಸಲರು ಶರಣಾಗತರಾದ ಮೇಲೆ ಮಲೆನಾಡಲ್ಲಿ ಬಹುತೇಕ ನಕ್ಸಲ್ ಚಟುವಟಿಕೆ ಕ್ಷೀಣಗೊಂಡಿತ್ತು. ಇದೀಗ ಮತ್ತೆ ಮಲೆನಾಡ ಕಾಡುಗಳಲ್ಲಿ ನಕ್ಸಲರ ಹೆಜ್ಜೆ ಸದ್ದು ಮಾಡುತ್ತಿದೆ.
ಕಳೆದ ವಾರ ಶೃಂಗೇರಿ (Sringeri) ತಾಲೂಕಿನ ಕಾಡಂಚಿನ ಕುಗ್ರಾಮಕ್ಕೆ ಭೇಟಿ ನೀಡಿದ್ದ ನಕ್ಸಲರ ತಂಡ ಮನೆಯೊಂದರಲ್ಲಿ ಊಟ ಮಾಡಿ, ಮಾತನಾಡಿಕೊಂಡು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಕೊಪ್ಪ (Koppa) ತಾಲೂಕಿನ ಮೇಗೂರು ಸಮೀಪದ ಕುಗ್ರಾಮ ಯಡಗುಂದದ ಇಬ್ಬರು ಯುವಕರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಡಾಗ್ ಸ್ಕ್ವಾಡ್ ಜೊತೆ ಎಎನ್ಎಫ್ ಸಿಬ್ಬಂದಿ ಕಾಡಲ್ಲಿ ನಕ್ಸಲ್ ಹೆಜ್ಜೆ ಹುಡುಕುತ್ತಿದ್ದಾರೆ.
ವಶಕ್ಕೆ ಪಡೆಯಲಾದ ಇಬ್ಬರು ಯುವಕರು ಬೆಂಗಳೂರಿಗೆ ಕೇರಳದಿಂದ ಬಂದಿದ್ದ ಹಾರ್ಡ್ ಕೋರ್ ನಕ್ಸಲ್ ನಾಯಕಿ ಮುಂಡಗಾರು ಲತಾಳಿಗೆ ಸಂಬಂಧಪಟ್ಟ ಪತ್ರವನ್ನ ತರಲು ಹೋಗಿದ್ದರು ಎನ್ನಲಾಗಿದೆ. ಇನ್ನೂ ಶೃಂಗೇರಿ, ಕೊಪ್ಪ ಹಾಗೂ ಕಳಸ ತಾಲೂಕಿನಲ್ಲಿ ವ್ಯಾಪಿಸಿಕೊಂಡಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಎಎನ್ಎಫ್ (Anti Naxal Force) ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು: ಪಶ್ಚಿಮಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರು ಓಡಾಟದ ಶಂಕೆ ವ್ಯಕ್ತವಾಗಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಆರು ಜನ ನಕ್ಸಲರು ಓಡಾಡಿದ್ದಾರೆ ಎಂಬ ಮಾಹಿತಿ ಹರಿದಾಡಿದೆ. ಮಾಹಿತಿಯ ಆಧಾರದ ಮೇಲೆ ನಕ್ಸಲ್ ನಿಗ್ರಹ ಪಡೆಯಿಂದ (Anti Naxal Force) ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಂಡಿದೆ.
ಕಳಸ (Kalasa), ಶೃಂಗೇರಿ (Sringeri) ತಾಲೂಕಿನ ಘಟ್ಟ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಗೊಂಡಿದೆ. ಹಲವು ವರ್ಷಗಳ ಬಳಿಕ ಮಲೆನಾಡಲ್ಲಿ ಮತ್ತೆ ನಕ್ಸಲರ ಓಡಾಟದ ಸದ್ದು ಕೇಳಿದ್ದು, ಈ ಭಾಗಗಳಲ್ಲಿ ಆತಂಕ ಹೆಚ್ಚಿಸಿದೆ.
ಈ ವರ್ಷ ಏಪ್ರಿಲ್‌ನಲ್ಲಿ ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ಕರಾವಳಿ ಭಾಗದಲ್ಲಿ ನಕ್ಸಲರ (Naxal) ಚಲನವಲನದ ಬಗ್ಗೆ ಶಂಕೆ ಮೂಡಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೊಂಬಾರು ಗ್ರಾಮದ ಚೆರು ಗ್ರಾಮದ ಮನೆಗೆ ಆರು ಮಂದಿ ನಕ್ಸಲರು ಭೇಟಿ ನೀಡಿದ್ದರು ಎನ್ನಲಾಗಿತ್ತು. ಸುಮಾರು ಎರಡು ಗಂಟೆಗಳ ಕಾಲ ಇದ್ದ ನಕ್ಸಲರು ಮನೆಯಲ್ಲಿ ಊಟ ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಬಳಿಕ ನಕ್ಸಲ್ ನಿಗ್ರಹ ದಳ ಮಾಹಿತಿ ಪಡೆದು ಹುಡುಕಾಟ ನಡೆಸಿತ್ತು.
ಚಿಕ್ಕಮಗಳೂರು: ಭಾರೀ ತೆರಿಗೆ (Tax) ಏರಿಕೆ ಮಾಡಿರುವುದನ್ನು ಖಂಡಿಸಿ ಇಡೀ ಗ್ರಾಮ ಪಂಚಾಯತ್ (Village Panchayat) ವ್ಯಾಪ್ತಿಯ ಅಂಗಡಿಗಳನ್ನು ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ.
ಇಷ್ಟು ವರ್ಷಗಳಿಂದ ಇಲ್ಲದ ತೆರಿಗೆಯನ್ನು ಈಗ ಏಕಾಏಕಿ ತೆರಿಗೆ ಏರಿಕೆ ಮಾಡಿರುವುದನ್ನು ಖಂಡಿಸಿ ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟು ಮುಚ್ಚಿ ವರ್ತಕರು ಜಯಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
2022ರಲ್ಲಿ ಬಿಜೆಪಿ ಸರ್ಕಾರದ ಅವಧಿಯ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಇದೀಗ ಕಾಂಗ್ರೆಸ್ ಸರ್ಕಾರ ಗ್ರಾಮ ಪಂಚಾಯತ್‌ಗಳಿಗೆ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಯಪುರ ಗ್ರಾಮ ಪಂಚಾಯತ್ ಅಧಿಕಾರಿಗಳು ದಿಢೀರ್ ಎಂದು ತೆರಿಗೆ ಏರಿಸಿರುವುದರಿಂದ ಸುತ್ತಮುತ್ತಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಹಾಗೂ ವರ್ತಕರು ಸಿಟ್ಟಿಗೆದ್ದಿದಾರೆ. ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್ – ರಾಜ್ಯದಲ್ಲಿ ಮತ್ತೆ ಬಿಯರ್ ದರ ಏರಿಕೆ
ಎಷ್ಟು ಏರಿಕೆ?
ಕೃಷಿ ತೆರಿಗೆ ಸೇರಿದಂತೆ ಬಂಡವಾಳ ಆಧಾರಿತ ಕಟ್ಟಡಗಳ ಮೇಲೆ ಅಧಿಕವಾಗಿ ಸುಮಾರು ಏಳು ಪಟ್ಟು ಪ್ರಮಾಣದಲ್ಲಿ ತೆರಿಗೆ ಹೆಚ್ಚಾಗಿದ್ದು 2,500 ರೂ. ತೆರಿಗೆ ಇದ್ದ ವರ್ತಕರ ಕಟ್ಟಡಗಳಿಗೆ 14,000 ರೂ. ಹಾಗೂ 14,000 ರೂ. ಇದ್ದ ಕಟ್ಟಡಗಳಿಗೆ 40,000 ರೂ. ನಷ್ಟು ದಿಢೀರ್ ತೆರಿಗೆ ಏರಿಸಿರುವುದು ವರ್ತಕರು ಹಾಗೂ ಇನ್ನಿತರ ವ್ಯಾಪಾರಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಕೂಡಲೇ ಹೊಸ ತೆರಿಗೆ ನೀತಿಯನ್ನು ರದ್ದುಪಡಿಸಬೇಕೆಂದು ಹಳ್ಳಿಗರು ಪಟ್ಟು ಹಿಡಿದಿದ್ದಾರೆ. ಗ್ರಾಮ ಪಂಚಾಯತ್ ಕೂಡಲೇ ನೂತನ ತೆರಿಗೆ ನೀತಿಯನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರವಾದ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಮಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತಗಳು ಸಂಭವಿಸಿದೆ. ಚಂದ್ರದ್ರೋಣ ಪರ್ವತ ಸಾಲಿನ ಕೆಲ ಪ್ರವಾಸಿ ಸ್ಥಳಗಳಿಗೆ ಜಿಲ್ಲಾಡಳಿತ ಕೆಲವೊಂದು ನಿರ್ಬಂಧ ಹೇರಿದೆ.
1,200 ಕೆ.ಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ ಹೇರಲಾಗಿದೆ. ಬೆಳಗ್ಗೆ 6-9 ಹಾಗೂ ಮಧ್ಯಾಹ್ನ 2-4 ಗಂಟೆ ವರೆಗೆ ಮಾತ್ರವೇ ಪ್ರಯಾಣಕ್ಕೆ ಅವಕಾಶವಿರುತ್ತದೆ. ತಲಾ 150 ವಾಹನಗಳಂತೆ 300 ವಾಹನಗಳಿಗೆ ಮಾತ್ರವೇ ಅವಕಾಶವಿರುತ್ತದೆ. ಇದನ್ನೂ ಓದಿ: ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ – ಟ್ರಾಫಿಕ್ ಜಾಮ್
ಮುಳ್ಳಯ್ಯನಗಿರಿ, ದತ್ತಪೀಠ, ಝರಿ ಪಾಲ್ಸ್, ಮಾಣಿಕ್ಯಧಾರ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವವರು ಅಧಿಕೃತ ಹೋಂ ಸ್ಟೇ, ರೆಸಾರ್ಟ್ಗಳನ್ನು ಬುಕ್ಕಿಂಗ್ ಮಾಡಿದ್ದರೆ ಮಾತ್ರವೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಗಿರಿ ಭಾಗದ ಸ್ಥಳೀಯರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೆಶ್ ಆದೇಶಿಸಿದ್ದಾರೆ. ಇದನ್ನೂ ಓದಿ: ಕೊಡಗಿನ ಕೊಯಿನಾಡಿನಲ್ಲಿ ಕಣ್ಣೆದುರೇ ಕುಸಿದು ಬಿದ್ದ ಗುಡ್ಡ – ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಭಾರೀ ಮಳೆಯ ಹಿನ್ನೆಲೆ ಮರ, ಮಣ್ಣು, ಬಂಡೆಗಳು ರಸ್ತೆಗೆ ಉರುಳುತ್ತಿವೆ. ಕೊಳಗಾಮೆ-ಮುತ್ತೋಡಿ ಸಂಪರ್ಕ ಕಲ್ಪಿಸುವ ಗಿರಿ ಭಾಗದ ರಸ್ತೆಯಲ್ಲಿ ಭೂಕುಸಿತವಾಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
Live Tv
[brid partner=56869869 player=32851 video=960834 autoplay=true]
ಚಿಕ್ಕಮಗಳೂರು: ಸೀಳು ನಾಯಿ ಹಾಗೂ ಬೀದಿನಾಯಿಗಳ ಹಾವಳಿಗೆ ಬೆದರಿದ ಜಿಂಕೆಯೊಂದು ಮನೆಯೊಳಗೆ ಬಂದು ಅವಿತು ಕುಳಿತುಕೊಂಡ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಣಿವೆ ಗ್ರಾಮದಲ್ಲಿ ನಡೆದಿದೆ.
ಕಣಿವೆ ಗ್ರಾಮ ಕಾಡಂಚಿನ ಗ್ರಾಮ. ಮೇವು ತಿನ್ನುತ್ತಾ ಕಾಡಂಚಿಗೆ ಬಂದ ಜಿಂಕೆ ನಾಡಿಗೂ ಕಾಲಿಟ್ಟಿತ್ತು. ಜಿಂಕೆಯನ್ನು ಕಂಡ ಬೀದಿ ನಾಯಿಗಳು ಹಾಗೂ ಸೀಳು ನಾಯಿಗಳು ಜಿಂಕೆಯನ್ನು ಬೇಟೆಯಾಡಲು ಮುಂದಾದವು. ಆಗ ಅವುಗಳಿಂದ ತಪ್ಪಿಸಿಕೊಂಡ ಜಿಂಕೆ ಕಣಿವೆ ಗ್ರಾಮದ ಪದ್ಮನಾಭ ಎಂಬುವರ ಮನೆಯೊಳಗೆ ಓಡಿ ಬಂದು ಅವಿತು ಕೂತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮನೆಯವರಂತೆ ನಡುಮನೆಯಲ್ಲಿ ರಾಜಾರೋಷವಾಗಿ ನನ್ನದೇ ಮನೆ ಎಂಬಂತೆ ಆರಾಮಾಗಿ ಕೂತಿದೆ. ಇದನ್ನೂ ಓದಿ: ಮುಂದಿನ 30-40 ವರ್ಷಗಳೂ ಬಿಜೆಪಿ ಯುಗವೇ; ಭಾರತವಾಗಲಿದೆ ವಿಶ್ವಗುರು – ಅಮಿತ್ ಶಾ
ಜಿಂಕೆಯನ್ನು ಕಂಡ ಮನೆಯವರು ಕೂಡ ಅದನ್ನು ಓಡಿಸದೆ ಸುಸ್ತಾಗಿದ್ದ ಜಿಂಕೆಗೆ ನೀರು ಕುಡಿಸಿ ಸಂತೈಸಿದ್ದಾರೆ. ಬಳಿಕ ಮನೆಯವರು ಹಾಗೂ ಮಕ್ಕಳು ಜಿಂಕೆಯೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಬಳಿಕ ಮನೆಯವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದಾಗ ಜಿಂಕೆಯ ಕಾಲಿಗೆ ಗಾಯವಾಗಿದ್ದು ಕಂಡು ಬಂದಿದ್ದು, ಜಿಂಕೆ ನಡೆಯಲಾರದ ಸ್ಥಿತಿಯಲ್ಲಿತ್ತು. ಬಳಿಕ ಅಧಿಕಾರಿಗಳು ಜಿಂಕೆಯನ್ನು ಜೀಪ್‍ನಲ್ಲಿ ತೆಗೆದುಕೊಂಡು ಹೋಗಿ ಹಾರೈಕೆ ಮಾಡಿದ್ದಾರೆ. ಇದನ್ನೂ ಓದಿ: ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ – ಸಿದ್ದರಾಮೋತ್ಸವದ ವಿರುದ್ಧ ಸಿಡಿಮಿಡಿಗೊಂಡ ಡಿಕೆಶಿ
ಚಿಕ್ಕಮಗಳೂರು: ನಡು ರಸ್ತೆಯಲ್ಲಿ ತಲೆ ಮೇಲೆ ಮದ್ಯದ ಬಾಟಲಿ ಹೊತ್ತು ಮಹಿಳೆಯೊಬ್ಬಳು ಡ್ಯಾನ್ಸ್ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಒಮ್ಮೆ ಎಣ್ಣೆ ಒಳಗೆ ಸೇರಿದರೆ ಎಷ್ಟೋ ಮಂದಿ ಮೈ ಮರೆತು ಬಿಡುತ್ತಾರೆ. ಸಾಮಾನ್ಯವಾಗಿ ಗಂಡಸರು ಮದ್ಯ ಸೇವಿಸಿ ಎಲ್ಲೆಂದರಲ್ಲಿ ಬಿದ್ದು ಒದ್ದಾಡುವುದನ್ನು ಆಗಾಗ ರಸ್ತೆಗಳಲ್ಲಿ ನೋಡುತ್ತಲೇ ಇರುತ್ತೇವೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪುರುಷರಿಗೇನೂ ಕಡಿಮೆ ಇಲ್ಲ ಎಂಬAತೆ ಮದ್ಯ ಸೇವಿಸಿ ರಂಪಾಟ ಮಾಡಿರುವ ಅನೇಕ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ನೋಡುತ್ತಲೇ ಇರುತ್ತೇವೆ. ಇದೀಗ ಕೊಂಚ ವಿಭಿನ್ನವೆಂಬಂತೆ ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದ ಮುಖ್ಯರಸ್ತೆಯಲ್ಲಿ ಮಹಿಳೆಯೊಬ್ಬಳು ಕುಡಿದ ಅಮಲಿನಲ್ಲಿ ಸಖತ್ ಸ್ಟೆಪ್ಸ್ ಹಾಕಿದ್ದಾಳೆ. ಇದನ್ನೂ ಓದಿ: 20 ವರ್ಷದ ಹುಡುಗಿ ಅಂತ 50ರ ಆಂಟಿ ತುಂಟಾಟ – ಚಾಟ್ ಮಾಡಿ ಮೋಸ ಹೋದ ಯುವಕ
ಚಿಕ್ಕಮಗಳೂರು: ಕಿರು ಸೇತುವೆ ಮೇಲೆ ಸಂಚರಿಸುತ್ತಿದ್ದಾಗ ಸ್ಕೂಟಿ ಸಮೇತ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.
ಪೊನ್ನಸ್ವಾಮಿ(45) ಮೃತಪಟ್ಟ ವ್ಯಕ್ತಿ. ಪೊನ್ನಸ್ವಾಮಿ ಲಿಂಗದಹಳ್ಳಿಯಿಂದ ಸಿದ್ದರಹಳ್ಳಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಿರು ಸೇತುವೆ ಮೇಲೆ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಅಗ್ನಿಶಾಮಕದಳ, ಪೊಲೀಸ್ ಹಾಗೂ ಸ್ಥಳಿಯರ ನಿರಂತರ ಹುಡುಕಾಟದಿಂದ ಕೊಚ್ಚಿ ಹೋದ ಜಾಗದಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಮೂಡಿಗೆರೆ ತಾಲೂಕಿನ ನೀರಗಂಡಿ ಬಳಿ ಭಾರಿ ಮಳೆಗೆ ದಾರಿ ಕಾಣದೇ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಾಲ್ವರು ಯುವಕರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಇದನ್ನೂ ಓದಿ: 1.5 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ – ಇಬ್ಬರು ಅರೆಸ್ಟ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಹಾಸನದಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಭರತ್ ಎಂಬುವವರಿಗೆ ಸೇರಿದ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಈ ಅಪಘಾತ ನಡೆದಿದ್ದು, ಇದೇ ಸ್ಥಳದಲ್ಲಿ ಪದೇ-ಪದೇ ಅಪಘಾತಗಳು ಸಂಭವಿಸುತ್ತಿವೆ. ವಾರಕ್ಕೆ ಎರಡರಿಂದ ಮೂರು ಅಪಘಾತಗಳು ಇದೇ ಸ್ಥಳದಲ್ಲಿ ಸಂಭವಿಸಿದರೂ ಅಧಿಕಾರಿಗಳು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲವೆಂದು ಜನಸಾಮಾನ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು: ಮಹಾಮಂಗಳಾರತಿ ವೇಳೆ ಸುಮಾರು 16 ಅಡಿ ಎತ್ತರದ ಮಣ್ಣಿನ ಹುತ್ತವೊಂದು 10 ರಿಂದ 15 ಡಿಗ್ರಿ ಅಲುಗಾಡುವ ಮೂಲಕ ನೋಡುಗರಲ್ಲಿ ಆಶ್ಚರ್ಯ ಮೂಡಿಸಿ, ಭಕ್ತರನ್ನು ಮಂತ್ರಮುಗ್ಧರನ್ನಾಗಿಸುವ ನಮ್ಮ ಕಣ್ಣನ್ನು ನಾವೇ ನಂಬಲಾಗದಂತಹಾ ಅಪರೂಪದ ಜಾತ್ರೆಯೊಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಹಳ್ಳಿಯಲ್ಲಿ ಶತಮಾನಗಳಿಂದ ಸದ್ದಿಲ್ಲದೆ ನಡೆದುಕೊಂಡು ಬರುತ್ತಿದೆ.
ಶತಮಾನಗಳಿಂದ ಆ ಹುತ್ತಕ್ಕೆ ಸೂರಿಲ್ಲ. ತಡೆಗೋಡೆಗಳು ಇಲ್ಲ. ಆದರೂ ಮಳೆ-ಗಾಳಿಗೆ ಒಂದಿಂಚು ಕರಗಿಲ್ಲ. ಹುತ್ತದ ಸುತ್ತಲೂ ಕಲ್ಲು-ಸಿಮೆಂಟ್‍ಗಳಿಂದ ಬಂದೋಬಸ್ತ್ ಮಾಡಿದ್ದರೂ ಕೂಡ ದೀಪಾವಳಿ ಅಮಾವಾಸ್ಯೆಯ ನಂತರದ ಮಕ್ಕಳ ಹುಣ್ಣಿಮೆಯ ದಿನ ಮಹಾಮಂಗಳಾರತಿ ವೇಳೆ ಇಲ್ಲಿ ನಡೆಯೋ ವಿಚಿತ್ರವನ್ನು ಕಂಡು ನಾಸ್ತಿಕರೂ ಕೂಡ ಆಸ್ತಿಕರಾಗುತ್ತಿದ್ದಾರೆ. ಸುಮಾರು ನಾಲ್ಕು ಶತಮಾನಗಳ ಹಿಂದೆ ದನ ಕಾಯುವ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಇದನ್ನೂ ಓದಿ: ತಿರುಪತಿಯಲ್ಲಿ ಪ್ರವಾಹ- ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು, ಕೊಚ್ಚಿ ಹೋಗ್ತಿವೆ ವಾಹನಗಳು!
ಹೊಯ್ಸಳರ ಕಾಲದಿಂದಲೂ ನಡೆದು ಬರುತ್ತಿರುವ ಇಲ್ಲಿನ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯ ನಂತರದ ಮಕ್ಕಳ ಹುಣ್ಣಿಮೆಯಂದು ನಡೆಯೋ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಈ ಹುತ್ತಾ ಸುಮಾರು 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತೆ. ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿಯ ಗುಡಿ. 400 ವರ್ಷಗಳ ಹಿಂದೆ, ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರ ಬೆಳೆದಿದೆ. ಈ ಹುತ್ತಕ್ಕೆ ಸೂರಿಲ್ಲ. ಮಳೆ-ಗಾಳಿಗೆ ಕರಗಿಲ್ಲ. ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನು ಮೂಕವಿಸ್ಮಿತರನ್ನಾಗಿಸುತ್ತೆ. ಈ ಪವಾಡವನ್ನ ನೋಡಲೆಂದು ಬಂದವರು ನಾಗಪ್ಪನ ಭಕ್ತರಾಗಿ ಪ್ರತಿ ವರ್ಷ ಈ ಉಣ್ಣಕ್ಕಿ ಉತ್ಸವಕ್ಕೆ ಬರುತ್ತಿದ್ದಾರೆ.
ಉತ್ಸವದಂದು ಯಾವುದೇ ಗಾಯವಾಗದ ಕರುವಿನ ಕಿವಿಯನ್ನು ಕತ್ತರಿಸಿ ದೇವರ ಕರುವೆಂದು ಕಾಡಿಗೆ ಬಿಡುವ ವಾಡಿಕೆ ಇಂದಿಗೂ ಜೀವಂತವಿದೆ. ಇದರಿಂದ ಊರಿನ ದನಕರುಗಳು ಆರೋಗ್ಯದಿಂದ ಇದ್ದು ಯಾವುದೇ ಅನಾಹುತಗಳು ನಡೆಯೋದಿಲ್ಲ ಅನ್ನೋದು ನಂಬಿಕೆ. ದನ ಕಾಯುವ ಹುಡುಗರು ಕಟ್ಟಿದ ಹುತ್ತವಾದ್ದರಿಂದ ಕರುವನ್ನು ಕಾಡಿಗೆ ಬಿಡುವ ಆಚರಣೆ ಬೆಳೆದು ಬಂದಿದೆ. ಉತ್ಸವದ ದಿನ ಕರುವನ್ನು ಹುತ್ತಕ್ಕೆ ಸುತ್ತಿಸುವ ವೇಳೆ ಕರುವಿನ ಮೇಲೆ ಮಂಡಕ್ಕಿ (ಪುರಿ) ಹಾಕುತ್ತೇವೆ ಎಂದು ಹರಕೆ ಕಟ್ಟಿಕೊಳ್ಳುತ್ತಾರೆ. ಇಲ್ಲಿ ಹರಕೆ ಕಟ್ಟಿಕೊಂಡರೆ ಎಂತಹಾ ಕಷ್ಟವೂ ಕಳೆಯುತ್ತೆ ಅನ್ನೋದು ಭಕ್ತರ ನಂಬಿಕೆ. ಪ್ರತಿವರ್ಷ ದೀಪಾವಳಿಯ ನಂತರದ ಮಕ್ಕಳ ಹುಣ್ಣಿಮೆಯ ಗುರುವಾರ ಅಥವಾ ಭಾನುವಾರ ಈ ಉತ್ಸವ ನಡೆಯಲಿದೆ. ಚರ್ಮರೋಗ, ಮಕ್ಕಳಾಗದವರು, ದನಕರು ಸಾಯುತ್ತಿದ್ದರೆ ಅಥವಾ ಪದೇ ಪದೆ ಆರೋಗ್ಯ ಹದಗೆಡುತ್ತಿದ್ದರೆ ಇಲ್ಲಿಗೆ ಹರಕೆ ಕಟ್ಟಿದರೆ ಸಾಕು ವರ್ಷದೊಳಗೆ ಆ ಹರಕೆ ಈಡೇರುತ್ತಂತೆ. ಹಾಗಾಗಿ, ಸುತ್ತಮುತ್ತಲಿನ ಜಿಲ್ಲೆಯ ಜನರು ಈ ನಾಗಪ್ಪನ ಮಾಯೆಗೆ ಬೆರಗಾಗಿದ್ದಾರೆ. ಇದನ್ನೂ ಓದಿ: ಭಾರೀ ಮಳೆ- ಬೆಂಗಳೂರು ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಅಲರ್ಟ್ ಆಗಿರಲು 13 ಜಿಲ್ಲೆಗಳಿಗೆ ಸೂಚನೆ
ತರ್ಕಕ್ಕೆ ನಿಲುಕದ ಈ ಗ್ರಾಮದ ಉತ್ಸವ ಇಂದಿಗೂ ಪ್ರಶ್ನಾತೀತ. ಹುತ್ತ ಅಲುಗಾಡೋದ್ರ ಹಿಂದೆ ವೈಜ್ಞಾನಿಕ ಕಾರಣವಿದ್ಯೋ ಅಥವಾ ದೈವಿಶಕ್ತಿಯ ಪ್ರಭಾವವಿದ್ಯೋ ಅನ್ನೋದು ಇಂದಿಗೂ ನಿಗೂಢ. ದನ ಕಾಯೋ ಹುಡುಗರ ಭಕ್ತಿಯ ಹಿಂದಿರೋ ಈ ಹುತ್ತಾ ಅಲುಗಾಡುತ್ತ ಪವಾಡವನ್ನೇ ಸೃಷ್ಟಿಸಿದ್ರೆ, ಹುತ್ತ ಅಲುಗಾಡೋದ್ರ ಬಗ್ಗೆ ಆಸ್ತಿಕ ಹಾಗೂ ನಾಸ್ತಿಕರಲ್ಲಿ ಹಲವು ವಾದ-ವಿವಾದಗಳು ಇವೆ. ಆದರೆ, ನೋಡುಗರ ಕಣ್ಮುಂದೆ ನಡೆಯೋ ಈ ವಿಚಿತ್ರ ಹಾಗೂ ವಿಶಿಷ್ಠ ಪವಾಡ ಮಾತ್ರ ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿದೆ. ಭೂಗರ್ಭದ ಒಡಲಾಳದಲ್ಲಿ ಅಡಗಿರೋ ಒದೊಂದು ಸತ್ಯ ಹೊರಬಂದಾಗಲೂ ದೇವರಿರೋದು ಸತ್ಯ ಅನಿಸುತ್ತದೆ. ಜನ ಅದನ್ನು ನಂಬಿದ್ದಾರೆ.
ಚಿಕ್ಕಮಗಳೂರು: ದಾರಿಯಲ್ಲಿ ಸಿಕ್ಕ ಪರ್ಸನ್ನ ಸಂಬಂಧಪಟ್ಟವರಿಗೆ ಹಿಂದಿರುಗಿಸಿ ಶಿಕ್ಷಕರೊಬ್ಬರು ಮಾನವೀಯತೆ ಮೆರೆದಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ.
ಕಳಸ ಪಟ್ಟಣದ ಪ್ರಭೋಧಿನಿ ಶಾಲೆಯ ಮುಖ್ಯ ಶಿಕ್ಷಕ ಆನಂದ್ ಕಳಸ ಪಟ್ಟಣದಿಂದ ಹೊರನಾಡು ರಸ್ತೆಯಲ್ಲಿ ಹೋಗುವಾಗ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಪರ್ಸ್ ಸಿಕ್ಕಿತ್ತು. ದಾರಿ ಮಧ್ಯೆ ಸಿಕ್ಕ ಆ ಪರ್ಸಿನಲ್ಲಿ ನಗದು ಹಾಗೂ ಅಗತ್ಯ ದಾಖಲೆಗಳು ಇದ್ದವು. ಇದನ್ನೂ ಓದಿ: ರಸ್ತೆ ಅಪಘಾತ: ನೋಟ್‍ಬುಕ್ ತರಲು ಪಟ್ಟಣಕ್ಕೆ ಬಂದಿದ್ದ ವಿದ್ಯಾರ್ಥಿ ಸಾವು
ದಾರಿಯಲ್ಲಿ ಸಿಕ್ಕಿದ ನಗದು ಹಾಗೂ ಅಗತ್ಯ ದಾಖಲೆಗಳನ್ನ ಮರಳಿ ವಾರಸುದಾರರಿಗೆ ನೀಡಿ ಶಿಕ್ಷಕ ಆನಂದ್ ಮಾನವೀಯತೆ ಮೆರೆದಿದ್ದಾರೆ. ಆರು ಸಾವಿರಕ್ಕೂ ಹೆಚ್ಚು ನಗದು, ಪಾನ್ ಕಾರ್ಡ್, ಎಟಿಎಂ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಇದ್ದವು. ಅದರಲ್ಲಿರುವ ವಿಳಾಸ ಪತ್ತೆ ಹಚ್ಚಿದ ಶಿಕ್ಷಕ ಆನಂದ್ ದಾರಿಯಲ್ಲಿ ಸಿಕ್ಕ ಪರ್ಸ್ ಹೊರನಾಡಿನ ಅಭಿನಂದನ್ ಎಂಬುವರದ್ದು ಎಂದು ತಿಳಿದು ಬಂದಿದೆ.
ಆ ವಿಳಾಸವನ್ನ ಹುಡುಕಿ ಸಂಬಂಧಪಟ್ಟವರಿಗೆ ಪರ್ಸನ್ನ ಹಿಂದಿರುಗಿಸಿದ್ದಾರೆ. ಪರ್ಸ್ ಕಳೆದುಕೊಂಡಿದ್ದ ಅಭಿನಂದನ್ ಪರ್ಸಿಗಾಗಿ ಹುಡುಕಾಟ ಆರಂಭಿಸಿದ್ದರು. ಕಳೆದ ರಾತ್ರಿ ತಾನೂ ಓಡಾಡಿದ ಜಾಗದಲ್ಲೆಲ್ಲಾ ಹುಡುಕಾಡಿದ್ದರು. ಆದರೆ, ಪರ್ಸ್ ಸಿಕ್ಕಿರಲಿಲ್ಲ. ಇಡೀ ರಾತ್ರಿ ಹುಡುಕಾಡಿದರೂ ಸಿಗದ ಪರ್ಸನ್ನ ಬೆಳಗ್ಗೆ ಶಿಕ್ಷಕ ಆನಂದ್ ಮನೆಗೆ ತಂದಾಗ ಪರ್ಸ್ ಕಳೆದುಕೊಂಡ ಅಭಿನಂದನ್ ಸಂತೋಷಗೊಂಡು ಆನಂದ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.