Tag: Chikungunya

  • ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದೇನೆ, 3 ವಾರ ವಿಶ್ರಾಂತಿ ಬೇಕು: ಆರೋಗ್ಯದ ಬಗ್ಗೆ ಮಾಹಿತಿ ಕೊಟ್ಟ ಸುರೇಶ್‌ಕುಮಾರ್

    ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದೇನೆ, 3 ವಾರ ವಿಶ್ರಾಂತಿ ಬೇಕು: ಆರೋಗ್ಯದ ಬಗ್ಗೆ ಮಾಹಿತಿ ಕೊಟ್ಟ ಸುರೇಶ್‌ಕುಮಾರ್

    ಬೆಂಗಳೂರು: ಕೆಲ ದಿನಗಳ ಹಿಂದೆ ಮಾಜಿ ಸಚಿವ, ಬಿಜೆಪಿ (BJP) ಶಾಸಕ ಸುರೇಶ್‌ಕುಮಾರ್ (S Sureshkumar) ಅನಾರೋಗ್ಯದ ಹಿನ್ನೆಲೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಿದ್ದು ಈಗ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

    ತಮ್ಮ ಅನಾರೋಗ್ಯ ಸಂಬಂಧ ವದಂತಿ ಹಬ್ಬಿದ ಹಿನ್ನೆಲೆ ಸುರೇಶ್‌ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ತನಗಾದ ಆರೋಗ್ಯ ಸಮಸ್ಯೆಯ ಬಗ್ಗೆ ದೀರ್ಘವಾದ ಪೋಸ್ಟ್ ಹಾಕಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

    ಪೋಸ್ಟ್ನಲ್ಲಿ ಏನಿದೆ?
    ನನ್ನ ಆರೋಗ್ಯ ಕಳೆದ ಆಗಸ್ಟ್ 20 ರಿಂದ ತೀವ್ರ ಸಮಸ್ಯೆಗೆ ಒಳಗಾಗಿತ್ತು. ಆಗಸ್ಟ್ 15 ರವರೆಗೆ ನಮ್ಮ ಕ್ಷೇತ್ರದಲ್ಲಿ ಸುಮಾರು 3 ಕಡೆ ಜನಸ್ಪಂದನ, ಆಗಸ್ಟ್ 14 ರಂದು ಮಧ್ಯರಾತ್ರಿ ರಾಷ್ಟ್ರಧ್ವಜ ಹಾರಿಸುವ ಭರ್ಜರಿ ಕಾರ್ಯಕ್ರಮ, ನಮ್ಮ ಕ್ಷೇತ್ರದ ಪ್ರೌಢಶಾಲಾ ಮಕ್ಕಳಿಗಾಗಿ ಆಯೋಜಿಸಿದ ಅತ್ಯಂತ ಯಶಸ್ವಿ ಆಶು ಭಾಷಣ ಸ್ಪರ್ಧೆ, ಆಗಸ್ಟ್ 15 ರಂದು ಬೆಳಗ್ಗೆಯಿಂದ ಸಂಜೆಯವರೆಗೂ ಸ್ವಾತಂತ್ರ‍್ಯ ದಿನಾಚರಣೆಯ ಕಾರ್ಯಕ್ರಮಗಳು, ಆಗಸ್ಟ್ 16 ರಂದು ಕ್ಷೇತ್ರದ ರಾಮ ಮಂದಿರ ವಾರ್ಡಿನಲ್ಲಿ ಕೈಗೊಂಡ ಜನ ಸ್ಪಂದನ ಕಾರ್ಯಕ್ರಮ ಹೀಗೆ ಸಂಪೂರ್ಣವಾಗಿ ಕ್ಷೇತ್ರದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೆ. ಇದನ್ನೂ ಓದಿ: ನಾಗಾಲ್ಯಾಂಡ್‌ನಲ್ಲಿ ಭಾರೀ ಮಳೆಗೆ ಹೆದ್ದಾರಿ ಕುಸಿತ – ಮೃತರ ಸಂಖ್ಯೆ 6ಕ್ಕೆ ಏರಿಕೆ

    ಆಗಸ್ಟ್ 16, ವರಮಹಾಲಕ್ಷ್ಮಿ ಹಬ್ಬದಂದು ರಾಮಮಂದಿರ 4ನೇ ಬ್ಲಾಕ್‌ನ ಎಬಿಸಿ ಪಾರ್ಕ್ನಲ್ಲಿ ಮುಂಜಾನೆ ಜನಸ್ಪಂದನ ಕಾರ್ಯಕ್ರಮ ಯೋಜಿಸಲಾಗಿತ್ತು. ಅಂದು ಸಂಜೆ ಐದು ಗಂಟೆಯ ವೇಳೆಗೆ ನನ್ನ ಆರೋಗ್ಯ ಸ್ವಲ್ಪ ಹೆಚ್ಚೇ ಹದಗೆಟ್ಟಿತು. ಸಂಜೆ ವೇಳೆಗೆ ಎರಡು ಕಾಲುಗಳು ತುಂಬಾ ನೋಯಲು ಪ್ರಾರಂಭಿಸಿದವು. ಮಾರನೆಯ ದಿನ ಇಡೀ ದೇಹದಲ್ಲಿ ಒಂದಿಂಚು ಸಹ ನೋವು ಇಲ್ಲದ ಜಾಗ ನನಗೆ ಲಭ್ಯವಿರಲಿಲ್ಲ. ಅದರ ಮಾರನೆಯ ದಿನ ನನ್ನ ರಕ್ತ ಪರೀಕ್ಷೆ ಮಾಡಲಾಯಿತು. ಅದರಲ್ಲೂ ಯಾವುದೇ ಚಿನ್ಹೆ ಗೊತ್ತಾಗಲಿಲ್ಲ. ಇದನ್ನೂ ಓದಿ: ನ್ಯಾಯಾಲಯದ ತೀರ್ಪು ಬರುವ ಮೊದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಎಸ್‌ವೈ

    ಆಗಸ್ಟ್ 19 ರಂದು ನೋವು ತಡೆಯಲಾರದೆ ಬಾಧೆ ಎದುರಿಸಲಾಗದೇ ಆಸ್ಪತ್ರೆಗೆ ಸೇರಲೇಬೇಕಾಯಿತು. ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಕೊಟ್ಟು ಬುಧವಾರ ಅಂದರೆ 23 ಆಗಸ್ಟ್ ರಂದು ನನ್ನ ಡಿಸ್ಚಾರ್ಜ್ ಮಾಡಲಾಯಿತು. ಆದರೆ ಮಾರನೆಯ ದಿನ ಮತ್ತು ವಿಪರೀತ ದೇಹದಲ್ಲಿ ಅಸ್ತವ್ಯಸ್ತ ಉಂಟಾಯಿತು ಆಗ ವೈದ್ಯರು ತಪಾಸಣೆ ಮಾಡಿದ ಮೇಲೆ ನನಗೆ ಚಿಕನ್ ಗುನ್ಯಾ ಸಮಸ್ಯೆ ಗಂಭೀರ ಸ್ವರೂಪ ತಾಳಿದ್ದು ವೈದ್ಯರಿಂದ ತಿಳಿಯಿತು. ಇದನ್ನೂ ಓದಿ: ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಹಿಡಿದ ಕಾಂಗ್ರೆಸ್ – ಬಿಜೆಪಿಗೆ ಮುಖಭಂಗ

    ಅಲ್ಲಿಂದ ಪ್ರಾರಂಭವಾದ ನನ್ನ ಚಿಕನ್ ಗುನ್ಯಾ (Chikungunya) ವಿರುದ್ಧದ ಹೋರಾಟ ಇಂದು ಬೆಳಗ್ಗೆ ಒಂದು ಹಂತ ತಲುಪಿ, ಎಲ್ಲಾ ವೈದ್ಯರ ಉತ್ತಮ ಆರೈಕೆ, ಅಗತ್ಯ ಚಿಕಿತ್ಸೆ ಮೂಲಕ, ಆಸ್ಪತ್ರೆಯ ನರ್ಸ್ಗಳ ಕಾಳಜಿಯಿಂದ ಕೂಡಿದ ಸೇವೆಯ ಪರಿಣಾಮವಾಗಿ ಇಂದು ನಾನು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ತಮಗೆಲ್ಲ ಗೊತ್ತು ಚಿಕನ್ ಗುನ್ಯಾ ನಂತರದ ಪರಿಣಾಮ ಸುಧಾರಿಸಲು ಕನಿಷ್ಠ 3 ವಾರಗಳು ಬೇಕು. ವೈದ್ಯರುಗಳ ಸಲಹೆಯ ಮೇರೆಗೆ ನಾನು ಸುಧಾರಣೆಗಾಗಿ ನನ್ನ ಸಂಬಂಧಿಕರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ. ಗುಣಮುಖವಾಗುವ ಹಾದಿಯಲ್ಲಿ ನನಗೆ ಮತ್ತೊಮ್ಮೆ ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ. ಇದನ್ನೂ ಓದಿ: ರಾಜಸ್ಥಾನ ಪೊಲೀಸ್‌ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ

    ಅನೇಕ ಗೆಳೆಯರು ಕುಕ್ಕೆ ಸುಬ್ರಹ್ಮಣ್ಯದಿಂದ ಹಿಡಿದು, ಅಂಗಾಳ ಪರಮೇಶ್ವರಿ ದೇವಿಯವರೆಗೂ ವಿವಿಧ ಪೂಜೆ ಸಲ್ಲಿಸಿ ನನ್ನ ಆರೋಗ್ಯ ಸುಧಾರಿಸಲೆಂದು ಹಾರೈಸಿರುವುದು ನನ್ನ ಮನ ತುಂಬಿ ಬಂದಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಆರ್ಕೆಸ್ಟ್ರಾ ನಡೆಯುತ್ತಿದ್ದ ವೇಳೆ ಕುಸಿದ ಟಿನ್ ಶೆಡ್ – ನೂರಾರು ಜನರಿಗೆ ಗಾಯ, 10 ಮಂದಿ ಗಂಭೀರ

  • ಮಾಜಿ ಸಚಿವ ಸುರೇಶ್‌ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮಾಜಿ ಸಚಿವ ಸುರೇಶ್‌ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    -ನಾನು ಆರೋಗ್ಯವಾಗಿದ್ದೇನೆ ಎಂದ ಬಿಜೆಪಿ ಶಾಸಕ

    ಬೆಂಗಳೂರು: ರೂಪಾಂತರಿ ಚಿಕುನ್ ಗುನ್ಯಾದಿಂದ (Chikungunya) ಬಳಲುತ್ತಿದ್ದ ಬಿಜೆಪಿ ಶಾಸಕ ಸುರೇಶ್ ಕುಮಾರ್ (S Suresh Kumar) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ರೂಪಾಂತರಿ ಚಿಕುನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಕೆಲ ದಿನಗಳ ಹಿಂದೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ ಭರ್ಜರಿ ಗೆಲುವು – ಗ್ರಾಮಸ್ಥರ ಹರಕೆ ತೀರಿಸಿದ ಅನುಸೂಯ ಮಂಜುನಾಥ್

    ಇನ್ನು ತಮ್ಮ ಅನಾರೋಗ್ಯ ಸಂಬಂಧ ವದಂತಿ ಹಬ್ಬಿದ ಹಿನ್ನೆಲೆ ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ನಾನು ಆರೋಗ್ಯವಾಗಿದ್ದೇನೆ. ಚಿಕುನ್ ಗುನ್ಯಾ ನನ್ನನ್ನು ಕೆಲ ದಿನಗಳಿಂದ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚುನಾವಣೆಗೂ ಮುನ್ನ ಮಹಾ ವಿಕಾಸ್ ಅಘಾಡಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ: ಶರದ್ ಪವಾರ್

  • ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಚಿಕನ್ ಗುನ್ಯಾ, ಡೆಂಗ್ಯೂ ಪ್ರಕರಣಗಳು

    ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಚಿಕನ್ ಗುನ್ಯಾ, ಡೆಂಗ್ಯೂ ಪ್ರಕರಣಗಳು

    ಬೆಂಗಳೂರು: ಮುಂಗಾರಿನ ಅಬ್ಬರದ ಮಧ್ಯೆ ರಾಜ್ಯದಲ್ಲಿ ಚಿಕನ್‍ಗುನ್ಯಾ, ಡೆಂಗ್ಯೂ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚಾಗುತ್ತಿವೆ.

    ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರು ಸಿಟಿಯಲ್ಲಿ ಒಟ್ಟು 313 ಡೆಂಗ್ಯೂ ಕೇಸ್ ಹಾಗೂ 782 ಚಿಕನ್ ಗುನ್ಯಾ ಕೇಸ್ ಪತ್ತೆಯಾಗಿವೆ. ದಕ್ಷಿಣಕನ್ನಡದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯಾದ್ಯಂತ ಒಟ್ಟು 1,141 ಕೇಸ್ ಗಳು ಪತ್ತೆಯಾಗಿವೆ. ಹಾವೇರಿ ಹಾಗೂ ಚಿತ್ರದುರ್ಗದಲ್ಲಿ ಹೆಚ್ಚು ಚಿಕನ್ ಗುನ್ಯಾ ಕೇಸ್ ಗಳು ಪತ್ತೆಯಾಗಿವೆ.

    ನಾಗರಿಕರಿಗೆ ಸಾಂಕ್ರಾಮಿಕ ಕಾಯಿಲೆಯ ಬಗ್ಗೆ ಎಚ್ಚರವಾಗಿರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದ್ದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೂ ಸೂಕ್ತ ಚಿಕಿತ್ಸೆ ಹಾಗೂ ಎಚ್ಚರ ವಹಿಸುವಂತೆ ಸುತ್ತೋಲೆ ಹೊರಡಿಸಿದೆ.

    ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಲ್ಯಾಬ್ ಟೆಸ್ಟ್ ಗೆ ಹೆಚ್ಚುವರಿ ಶುಲ್ಕ ಸಂಗ್ರಹ ಮಾಡದಂತೆ ಖಾಸಗಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಲಾಗಿದ್ದು ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ಕಳಿಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.