Tag: Chinnaswamy

  • ಸಿಎಂ, ಡಿಸಿಎಂ ತಿಕ್ಕಾಟ ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ: ಅಶೋಕ್‌

    ಸಿಎಂ, ಡಿಸಿಎಂ ತಿಕ್ಕಾಟ ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ: ಅಶೋಕ್‌

    – ಸಂತ್ರಸ್ತ ಕುಟುಂಬಕ್ಕೆ ನಮ್ಮ 1 ತಿಂಗಳ ಸಂಬಳ
    – ವೇದಿಕೆಯಲ್ಲಿ 200 ಮಂದಿ, ಸರ್ಕಾರದಿಂದಲೇ ಕಾನೂನು ಉಲ್ಲಂಘನೆ

    ಬೆಂಗಳೂರು: ಕಾಲ್ತುಳಿತದ (Chinnaswamy Stampede) ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ (Congress Government) ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರ ಶಕ್ತಿಗಳ ತಿಕ್ಕಾಟ ‌ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ. ಅವರ ಕುಟುಂಬದವರಿಗೆ ಸಾಂತ್ವನ ಹೇಳಬೇಕಿದ್ದವರು ಕಪ್‌ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಆ ನಂತರವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಟುಕ, ಕಲ್ಲಿನ ಹೃದಯದವರು ಎಂದು ದೂರಿದರು.

    ಕಾನೂನನ್ನು ಪೊಲೀಸ್ ಅಧಿಕಾರಿಗಳು ಜಾರಿ ಮಾಡುತ್ತಾರೆ. ಜೂನ್‌ 4 ರಂದು ವಿಧಾನಸೌಧದ ಪೊಲೀಸರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಹಾಗೂ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗಲಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರ್ಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಕತ್ತು, ಬೆನ್ನು ತುಳ್ಕೊಂಡು ಹೋಗ್ತಿದ್ರು, ಉಸಿರಾಡೋಕೂ ಆಗ್ತಿರಲಿಲ್ಲ – ಗಾಯಾಳು ಪ್ರಶಾಂತ್

     

    ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮೆರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ. ಡ್ರೋನ್ ಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರ್ಕಾರ ಹರಿದು ಬಿಸಾಡಿದೆ. ವೇದಿಕೆಯಲ್ಲಿ 20-30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನು ಸಂಪೂರ್ಣ ಉಲ್ಲಂಘಿಸಿದ್ದು, 11 ಆಟಗಾರರು ಸೇರಿದಂತೆ ಒಟ್ಟು 200 ಜನರು ವೇದಿಕೆಯಲ್ಲಿದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಗೋವಿಂದರಾಜ್‌ ಎಸಗಿದ ತಪ್ಪನ್ನು ಜನರ ಮುಂದೆ ಹೇಳಿ – ಗಾಢ ಮೌನಕ್ಕೆ ಜಾರಿದ್ದು ಯಾಕೆ: ಸಿಎಂಗೆ ಸುನಿಲ್‌ ಕುಮಾರ್‌ ಪ್ರಶ್ನೆ

    ಇಷ್ಟೆಲ್ಲ ಕಾನೂನು ಉಲ್ಲಂಘನೆ ಮಾಡಿದ್ದರೂ, ಕೊನೆಗೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಸ್ತೆಯಲ್ಲಿ ನಿಂತು ಟ್ರಾಫಿಕ್‌ ನಿಯಂತ್ರಿಸುತ್ತಿದ್ದ ಪೊಲೀಸರ ವಿರುದ್ಧ ಕ್ರಮ ವಹಿಸಲಾಗಿದೆ. ಠಾಣೆ ಪೊಲೀಸರನ್ನು ಕೂಡ ಅಮಾನತು ಮಾಡಿದ್ದಾರೆ ಎಂದರು.

     

    ವಿಶೇಷ ಅಧಿವೇಶನ ಕರೆಯಿರಿ
    ಸರ್ಕಾರ ಮಾಡಿದ ತಪ್ಪುಗಳ ಬಗ್ಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಮೂರು ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಯಾವ ತನಿಖೆ ನಿಜ ಎಂದು ಗೊತ್ತಾಗಿಲ್ಲ. ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕಿದೆ. ಈ ಕುರಿತು ನಾವೆಲ್ಲರೂ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.

    ಸರ್ಕಾರ ಪಾಪರ್ ಆಗಿಲ್ಲ ಎಂದಾದರೆ 1 ಕೋಟಿ ರೂ. ಪರಿಹಾರ ನೀಡಲಿ. ನಾವೆಲ್ಲರೂ ಒಂದು ತಿಂಗಳ ಸಂಬಳವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಿದ್ದೇವೆ. ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ. ಪ್ರತಿ ರಾಜ್ಯಗಳ ತಂಡ ಕಪ್ ಗೆದ್ದಾಗಲೂ ಈ ರೀತಿಯ ಘಟನೆ ನಡೆದಿಲ್ಲ‌. ಯಾವುದೇ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಹೋಗಿ ಪ್ರಚಾರ ಪಡೆದಿಲ್ಲ ಎಂದರು.

  • ಆರ್‌ಸಿಬಿ ವಿಜಯೋತ್ಸವ – ಟಿಕೆಟ್‌, ಪಾಸ್‌ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿಗೆ ಎಂಟ್ರಿ

    ಆರ್‌ಸಿಬಿ ವಿಜಯೋತ್ಸವ – ಟಿಕೆಟ್‌, ಪಾಸ್‌ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿಗೆ ಎಂಟ್ರಿ

    ಬೆಂಗಳೂರು: ಅಧಿಕೃತ ಟಿಕೆಟ್‌ ಮತ್ತು ಪಾಸ್‌ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ (Chinnaswamy Stadium) ಆರ್‌ಸಿಬಿ (RCB) ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ.

    ಚಿನ್ನಸ್ವಾಮಿ ಕ್ರೀಡಾಂಗಣದತ್ತ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

    ಹೇಳಿಕೆಯಲ್ಲಿ ಏನಿದೆ?
    ಕೆಎಸ್‌ಸಿಎ ವತಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ದಿನ ಸಂಜೆ 5 ಗಂಟೆಗೆ ಆರ್‌ಸಿಬಿ ತಂಡದ ಎಲ್ಲಾ ಆಟಗಾರರಿಗೆ ವಿಶೇಷ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭಕ್ಕೆ ಅಧಿಕೃತ ಟಿಕೆಟ್‌ ಮತ್ತು ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶವನ್ನು ಕಲ್ಪಿಸಲಾಗಿದೆ.

    ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಿಯಮಿತ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಇರುವುದರಿಂದ ಸಮಾರಂಭಕ್ಕೆ ಆಗಮಿಸುವವರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋವನ್ನು ಬಳಸಬೇಕೆಂದು ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

  • IND Vs AFG: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ರೋಹಿತ್

    IND Vs AFG: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ರೋಹಿತ್

    ಬೆಂಗಳೂರು: ನಗರದ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (M Chinnaswamy Stadium) ಭಾರತ (Team India) ಮತ್ತು ಅಫ್ಘಾನಿಸ್ತಾನದ (Afghanistan)ನಡುವೆ ನಡೆಯಲಿರುವ 3ನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದು ರೋಹಿತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

    2019ರಿಂದ ಭಾರತದಲ್ಲಿ ಆಡಿದ ಟಿ20 ಸರಣಿಯಲ್ಲಿ ಒಂದರಲ್ಲೂ ಭಾರತ ಸರಣಿಯನ್ನು ಸೋತಿಲ್ಲ. ಆಡಿದ 15 ಸರಣಿಗಳಲ್ಲಿ 13 ಸರಣಿ ವಶಪಡಿಸಿಕೊಂಡಿದೆ. ಉಳಿದ ಎರಡು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇನ್ನೂ ಮೂರನೇ ಟಿ20ಯಲ್ಲಿ ಭಾರತ ಗೆದ್ದರೆ, ಟೀಮ್ ಇಂಡಿಯಾ ಪರ ನಾಯಕನಾಗಿ 41 ಟಿ20 ಪಂದ್ಯಗಳನ್ನು ಗೆದ್ದ ಧೋನಿಯವರ ದಾಖಲೆಯನ್ನು ರೋಹಿತ್ ಮುರಿಯಲಿದ್ದಾರೆ.

    ಈ ಹಿಂದೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತವು, ಆಸ್ಟ್ರೇಲಿಯಾ ವಿರುದ್ಧ 160 ರನ್‍ಗಳ ಮೊತ್ತವನ್ನು ಯಶಸ್ವಿಯಾಗಿ ರಕ್ಷಿಸಿಕೊಂಡಿತ್ತು. ಅಲ್ಲದೇ 6 ರನ್‍ಗಳಿಂದ ಗೆದ್ದಿತ್ತು. ಇದನ್ನೂ ಓದಿ: ಜ.18ರಂದು ಚಿಕ್ಕಬಳ್ಳಾಪುರದಲ್ಲಿ T20I ಲೀಗ್ – ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ

  • IPL 2023: RCB ನನ್ನ ಹೆಮ್ಮೆಯ ತಂಡ – ಇಂದಲ್ಲ ನಾಳೆ ಕಪ್‌ ನಮ್ದೆ ಎಂದ ಸಿದ್ದರಾಮಯ್ಯ

    IPL 2023: RCB ನನ್ನ ಹೆಮ್ಮೆಯ ತಂಡ – ಇಂದಲ್ಲ ನಾಳೆ ಕಪ್‌ ನಮ್ದೆ ಎಂದ ಸಿದ್ದರಾಮಯ್ಯ

    ಬೆಂಗಳೂರು: ಕ್ರಿಕೆಟ್‌ ನನ್ನ‌ ಇಷ್ಟದ ಆಟ, ಆರ್‌ಸಿಬಿ (RCB) ನನ್ನ ಹೆಮ್ಮೆಯ ತಂಡ. ಇಂದಲ್ಲ ನಾಳೆ ಕಪ್‌ ನಮ್ಮವರೂ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election) ದಿನಾಂಕ ಘೋಷಣೆಯಾಗಿದ್ದು, ಒಂದೆಡೆ ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಒತ್ತಡದ ನಡುವೆಯೂ ಭಾನುವಾರ ಐಪಿಎಲ್‌ ಮ್ಯಾಚ್‌ ವೀಕ್ಷಿಸಿ ಕಾಲ ಕಳೆದಿದ್ದಾರೆ. ಇದನ್ನೂ ಓದಿ: IPL 2023: ಕೊಹ್ಲಿ, ಡುಪ್ಲೆಸಿಸ್‌ ಶತಕದ ಜೊತೆಯಾಟಕ್ಕೆ ಮುಂಬೈ ಪಂಚರ್‌- RCBಗೆ 8 ವಿಕೆಟ್‌ಗಳ ಭರ್ಜರಿ ಜಯ

    16ನೇ ಆವೃತ್ತಿಯ ಐಪಿಎಲ್‌ ಆರಂಭಗೊಂಡಿದ್ದು, ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ (Mumbai Indians) ನಡುವೆ ಕಾದಾಟ ನಡೆದಿತ್ತು. ಕ್ರೀಡಾಂಗಣದ ತುಂಬಾ ಲಕ್ಷಾಂತರ ಅಭಿಮಾನಿಗಳು ನೆರೆದಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಆಪ್ತರೊಂದಿಗೆ ತೆರಳಿ ಪಂದ್ಯ ವೀಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದು IPL ಕ್ರೇಜ್‌; ರಾಜಕೀಯ ಒತ್ತಡದ ಮಧ್ಯೆಯೂ RCB ಮ್ಯಾಚ್‌ ವೀಕ್ಷಣೆ

    ಪಂದ್ಯ ವೀಕ್ಷಣೆಯ ನಂತರ ಟ್ವೀಟ್‌ ಮೂಲಕ ಸಂತಸ ಹಂಚಿಕೊಂಡಿರುವ ಅವರು, ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್‌ಸಿಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: IPL 2023: ಜೋಸ್, ಜೈಸ್ವಾಲ್‌, ಸ್ಯಾಮ್ಸನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 72 ರನ್‌ಗಳ ಭರ್ಜರಿ ಜಯ

    ಭಾನುವಾರ ಮುಂಬೈ ಇಂಡಿಯನ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತ್ತು. 172 ರನ್‌ಗಳ ಗುರಿ ಬೆನ್ನತ್ತಿದ್ದ ಆರ್‌ಸಿಬಿ 16.2 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ ಗುರಿ ತಲುಪಿ ಭರ್ಜರಿ ಜಯ ಸಾಧಿಸಿತು.‌

  • IPL 2023: ಕೊಹ್ಲಿ, ಡುಪ್ಲೆಸಿಸ್‌ ಶತಕದ ಜೊತೆಯಾಟಕ್ಕೆ ಮುಂಬೈ ಪಂಚರ್‌- RCBಗೆ 8 ವಿಕೆಟ್‌ಗಳ ಭರ್ಜರಿ ಜಯ

    IPL 2023: ಕೊಹ್ಲಿ, ಡುಪ್ಲೆಸಿಸ್‌ ಶತಕದ ಜೊತೆಯಾಟಕ್ಕೆ ಮುಂಬೈ ಪಂಚರ್‌- RCBಗೆ 8 ವಿಕೆಟ್‌ಗಳ ಭರ್ಜರಿ ಜಯ

    ಬೆಂಗಳೂರು: ಫಾಫ್‌ ಡು ಪ್ಲೆಸಿಸ್‌ (Faf du Plessis), ವಿರಾಟ್‌ ಕೊಹ್ಲಿ (Virat Kohli) ಬೆಂಕಿ ಬ್ಯಾಟಿಂಗ್‌ ಹಾಗೂ ಶಿಸ್ತು ಬದ್ಧ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು, ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಆರಂಭಿಕರಾಗಿ ಕಣಕ್ಕಿಳಿದ ಆರ್‌ಸಿಬಿ ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ ಮತ್ತು ವಿರಾಟ್‌ ಕೊಹ್ಲಿ ಭರ್ಜರಿ ಬ್ಯಾಟಿಂಗ್‌ ನಡೆಸಿದರು. ಸಿಕ್ಸರ್‌, ಬೌಂಡರಿ ಸಿಡಿಸುತ್ತಾ ಅಭಿಮಾನಿಗಳಿಗೆ ರಸದೌತಣ ನೀಡಿದರು. ಇದಕ್ಕೆ ಪ್ರತಿಯಾಗಿ ಅಭಿಮಾನಿಗಳೂ ʻಕೊಹ್ಲಿ, ಕೊಹ್ಲಿʼ, ʻಆರ್‌ಸಿಬಿ, ಆರ್‌ಸಿಬಿʼ ಎಂದು ಕೂಗುತ್ತಾ ಆಟಗಾರರನ್ನು ಹುರಿದುಂಬಿಸಿದರು. ಪ್ರತಿ ಬೌಂಡರಿ, ಸಿಕ್ಸರ್‌ಗಳನ್ನು ಅದ್ಭುತವಾಗಿ ಎಂಜಾಯ್‌ ಮಾಡಿದರು.

    ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಆರ್‌ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತ್ತು. 172 ರನ್‌ಗಳ ಗುರಿ ಬೆನ್ನತ್ತಿದ್ದ ಆರ್‌ಸಿಬಿ 16.2 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: IPL 2023: ಜೋಸ್, ಜೈಸ್ವಾಲ್‌, ಸ್ಯಾಮ್ಸನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 72 ರನ್‌ಗಳ ಭರ್ಜರಿ ಜಯ

    ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದ ವಿರಾಟ್‌ ಕೊಹ್ಲಿ ಹಾಗೂ ಪ್ಲೆಸಿಸ್‌  ಮೊದಲ ವಿಕೆಟ್‌ ಪತನಕ್ಕೆ 14.5 ಓವರ್‌ಗಳಲ್ಲಿ 148 ರನ್‌ಗಳ ಜೊತೆಯಾಟವಾಡಿದರು. ಈ ವೇಳೆ ನಾಯಕ ಪ್ಲೆಸಿಸ್‌ ಸಿಕ್ಸರ್‌ ಸಿಡಿಸುವ ಬರದಲ್ಲಿ ಬೌಂಡರಿ ಲೈನ್‌ ಕ್ಯಾಚ್‌ ನೀಡಿ ಔಟಾದರು. 43 ಎಸೆತಗಳನ್ನು ಎದುರಿಸಿದ ಪ್ಲೆಸಿಸ್‌ 6 ಸಿಕ್ಸರ್‌, 5 ಬೌಂಡರಿಯೊಂದಿಗೆ 73 ರನ್‌ ಗಳಿಸಿದರು. ನಂತರ ಬಂದ ದಿನೇಶ್‌ ಕಾರ್ತಿಕ್‌ ಮೂರೇ ಎಸೆತಗಳಲ್ಲಿ ರನ್‌ ಗಳಿಸದೇ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ಮರಳಿದರು. 3ನೇ ವಿಕೆಟ್‌ನಲ್ಲಿ ಜೊತೆಯಾದ ಮ್ಯಾಕ್ಸ್‌ವೆಲ್‌ ಭರ್ಜರಿ ಸಿಕ್ಸರ್‌, ಬೌಂಡರಿ ಸಿಡಿಸಿ ಗೆಲುವಿನ ಹಾದಿಗೆ ತಲುಪಿಸಿದರು. ಗ್ಲೇನ್‌ ಮ್ಯಾಕ್ಸ್‌ವೆಲ್‌ (Glenn Maxwell) 3 ಎಸೆತಗಳಲ್ಲಿ 2 ಸಿಕ್ಸರ್‌ ಸಿಡಿಸಿ, 12 ರನ್‌ ಗಳಿಸಿದರೆ, ಕೊನೆಯವರೆಗೂ ಹೋರಾಡಿದ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ ಅಜೇಯ 89 ರನ್‌ (6 ಬೌಂಡರಿ, 5 ಸಿಕ್ಸರ್‌) ಗಳಿಸಿ ಅಜೇಯರಾಗುಳಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿದರು. ಆದರೆ ಮಧ್ಯಮ ಕ್ರಮಾಂಕದ ಆಟಗಾರ ತಿಲಕ್ ವರ್ಮಾ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಆರ್‌ಸಿಬಿ ತಂಡದ ಲೆಕ್ಕಾಚಾರ ಬುಡಮೇಲಾಗಿತ್ತು. ಇದನ್ನೂ ಓದಿ: ಸಿದ್ದು IPL ಕ್ರೇಜ್‌; ರಾಜಕೀಯ ಒತ್ತಡದ ಮಧ್ಯೆಯೂ RCB ಮ್ಯಾಚ್‌ ವೀಕ್ಷಣೆ

    ಆರ್‌ಸಿಬಿ ತಂಡದ ಬೌಲರ್‌ಗಳು ಈ ಪಂದ್ಯದ ಆರಂಭದಲ್ಲಿಯೇ ಅದ್ಭುತ ಯಶಸ್ಸು ಗಳಿಸಲು ಆರಂಭಿಸಿದರು. ಇದರ ಪರಿಣಾಮವಾಗಿ ಅಗ್ರ ಕ್ರಮಾಂಕದ ಆಟಗಾರರಾದ ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯ ಕುಮಾರ್ ಯಾದವ್ ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡರು.

    ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್, ಆರ್‌ಸಿಬಿಗೆ ಸುಲಭ ತುತ್ತಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ತಿಲಕ್ ವರ್ಮಾ ಹಾಗೂ ನೇಹಲ್ ವಧೇರಾ 6ನೇ ವಿಕೆಟ್‌ಗೆ ಅರ್ಧ ಶತಕದ ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. 13 ಎಸೆತಗಳಲ್ಲಿ 21 ರನ್‌ಗಳಿಸಿದ ವಧೇರಾ ವಿಕೆಟ್ ಕಳೆದುಕೊಂಡಾಗ ಮುಂಬೈ ಇಂಡಿಯನ್ಸ್ ತಂಡ 98 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಮತ್ತೊಂದು ತುದಿಯಲ್ಲಿ ಇನ್ನೆರಡು ವಿಕೆಟ್‌ಗಳು ಉರುಳಿದರೂ ಕೂಡ ತಿಲಕ್ ವರ್ಮಾ ತಮ್ಮ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿದರು. ಇದನ್ನೂ ಓದಿ: ಈ ಸಲ ಕಪ್ ನಹೀ ಎಂದ ಆರ್‌ಸಿಬಿ ಕ್ಯಾಪ್ಟನ್

    ಕೊನೆಯಲ್ಲಿ ಅರ್ಶದ್ ಖಾನ್ ಅವರೊಂದಿಗೆ ಜೊತೆಯಾದ ತಿಲಕ್ ತಂಡದ ಮೊತ್ತವನ್ನು 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಈ ಇನ್ನಿಂಗ್ಸ್‌ನಲ್ಲಿ ತಿಲಕ್ ವರ್ಮಾ 46 ಎಸೆತಗಳಲ್ಲಿ ಸ್ಪೋಟಕ 84 ರನ್‌ (9 ಬೌಂಡರಿ, 4 ಸಿಕ್ಸರ್‌) ಗಳಿಸಿ ಅಜೇಯರಾಗುಳಿದರು.

    ಆರ್‌ಸಿಬಿ ಪರ ಕರ್ಣ್ ಶರ್ಮಾ 2 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ಸಿರಾಜ್‌, ರೀಸ್ ಟೋಪ್ಲಿ, ಆಕಾಶ್‌ ದೀಪ್‌, ಹರ್ಷಲ್‌ ಪಟೇಲ್‌ ಹಾಗೂ ಮೈಕೆಲ್‌ ಬ್ರೇಸ್‌ವೆಲ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. .

  • ಸಿದ್ದು IPL ಕ್ರೇಜ್‌; ರಾಜಕೀಯ ಒತ್ತಡದ ಮಧ್ಯೆಯೂ RCB ಮ್ಯಾಚ್‌ ವೀಕ್ಷಣೆ

    ಸಿದ್ದು IPL ಕ್ರೇಜ್‌; ರಾಜಕೀಯ ಒತ್ತಡದ ಮಧ್ಯೆಯೂ RCB ಮ್ಯಾಚ್‌ ವೀಕ್ಷಣೆ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಒತ್ತಡದ ನಡುವೆಯೂ ಐಪಿಎಲ್‌ ಮ್ಯಾಚ್‌ ವೀಕ್ಷಿಸುತ್ತಾ ಕಾಲ ಕಳೆದಿದ್ದಾರೆ.

    16ನೇ ಆವೃತ್ತಿಯ ಐಪಿಎಲ್‌ ಆರಂಭಗೊಂಡಿದ್ದು, ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ ಸೆಣಸಾಟ ನಡೆದಿತ್ತು. ಕ್ರೀಡಾಂಗಣದ ತುಂಬಾ ಲಕ್ಷಾಂತರ ಅಭಿಮಾನಿಗಳು ನೆರೆದಿದ್ದರು. ಈ ಪಂದ್ಯ ವೀಕ್ಷಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಆಪ್ತರೊಂದಿಗೆ ತೆರಳಿ ಪಂದ್ಯ ವೀಕ್ಷಣೆ ಮಾಡಿದ್ದಾರೆ.

    ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ತಂಡ ಆರಂಭದಲ್ಲಿ ಅಮೋಘ ಯಶಸ್ಸು ಸಾಧಿಸಿದರೂ ಬಳಿಕ ರೋಹಿತ್‌ ಪಡೆಯಿಂದ ಅದ್ಭುತ ಹೋರಾಟ ವ್ಯಕ್ತವಾಯಿತು. ಹೀಗಾಗಿ ಆರ್‌ಸಿಬಿ ತಂಡಕ್ಕೆ ಗೆಲ್ಲಲು ಮುಂಬೈ ಇಂಡಿಯನ್ಸ್ ತಂಡ ಸವಾಲಿನ ಗುರಿ ನೀಡಿತು. ಇದನ್ನೂ ಓದಿ: IPL 2023: ಜೋಸ್, ಜೈಸ್ವಾಲ್‌, ಸ್ಯಾಮ್ಸನ್‌ ಸಿಡಿಲಬ್ಬರದ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 72 ರನ್‌ಗಳ ಭರ್ಜರಿ ಜಯ

    ಮುಂಬೈ ಇಂಡಿಯನ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿದರೂ ಮಧ್ಯಮ ಕ್ರಮಾಂಕದ ಆಟಗಾರ ತಿಲಕ್ ವರ್ಮಾ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಆರ್‌ಸಿಬಿ ತಂಡದ ಲೆಕ್ಕಾಚಾರ ಬುಡಮೇಲಾಯಿತು. ಪರಿಣಾಮ ಮುಂಬೈ ಇಂಡಿಯನ್ಸ್ ತಂಡ ಆರ್‌ಸಿಬಿಗೆ ಈ ಪಂದ್ಯದಲ್ಲಿ ಗೆಲ್ಲಲು 172 ರನ್‌ಗಳ ಸವಾಲಿನ ಗುರಿ ನಿಗದಿಪಡಿಸಿದೆ.  ಇದನ್ನೂ ಓದಿ: IPL 2023: ಮಾರ್ಕ್‌ ಮಾರಕ ಬೌಲಿಂಗ್‌, ಡೆಲ್ಲಿಗೆ ಡಿಚ್ಚಿ ಕೊಟ್ಟ ಲಕ್ನೋ – ರಾಹುಲ್‌ ಸೈನ್ಯಕ್ಕೆ 50 ರನ್‌ಗಳ ಭರ್ಜರಿ ಜಯ

  • 60 ಪ್ರಯಾಣಿಕರ ಪ್ರಾಣ ಉಳಿಸಿದ್ದ ಚಾಲಕನಿಗೆ ಸಿಕ್ತು ಚಿನ್ನದ ಪದಕ!

    60 ಪ್ರಯಾಣಿಕರ ಪ್ರಾಣ ಉಳಿಸಿದ್ದ ಚಾಲಕನಿಗೆ ಸಿಕ್ತು ಚಿನ್ನದ ಪದಕ!

    ಚಾಮರಾಜನಗರ: ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರಪಾತಕ್ಕೆ ಬೀಳಬೇಕಾಗಿದ್ದ ಬಸ್ ಮತ್ತು ಅದರಲ್ಲಿದ್ದ 60 ಮಂದಿ ಪ್ರಯಾಣಿಕರ ಪ್ರಾಣ ಉಳಿಸಿದ್ದ ಚಾಲಕನಿಗೆ ಚಿನ್ನದ ಪದಕ ಸಿಕ್ಕಿದೆ.

    ಅಕ್ಟೋಬರ್ 8 ರಂದು ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಹಾದಿಯಲ್ಲಿ ಈ ಘಟನೆ ನಡೆದಿತ್ತು. ಅಂದು ಚಾಲಕ ಚಿನ್ನಸ್ವಾಮಿ ಅವರ ಸಮಯ ಪ್ರಜ್ಞೆಯಿಂದ 60 ಪ್ರಯಾಣಿಕರ ಪ್ರಾಣ ಉಳಿಸಿದ್ದರು. ಆದ್ದರಿಂದ ಮಂಗಳವಾರ ಅವರಿಗೆ ಕೆಎಸ್‍ಆರ್‍ಟಿಸಿ ಇಲಾಖೆ ಚಿನ್ನದ ಪದಕವನ್ನು ನೀಡಿದೆ.

    ಇಲಾಖೆಯ ನಿಯಮದ ಪ್ರಕಾರ, ಗ್ರಾಮೀಣ ಪ್ರದೇಶದಲ್ಲಿ 15 ವರ್ಷ ಹಾಗೂ ನಗರ ಪ್ರದೇಶದಲ್ಲಿ 5 ವರ್ಷ ಯಾವುದೇ ಅಪಾಯ ಸಂಭವಿಸಿದೆ ಬಸ್ ಚಲಾಯಿಸಿದ್ದರೆ ಮಾತ್ರ ಅಂತಹವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದರೆ ಚಿನ್ನಸ್ವಾಮಿ ಕೇವಲ 5 ವರ್ಷ ಚಾಲಕರಾಗಿ ಕಾರ್ಯನಿರ್ವಹಿಸಿದ್ದರು. ಆದರೆ 60 ಜನರ ಪ್ರಾಣ ಉಳಿಸಿದ್ದರಿಂದ ಅವರ ಸಾಧನೆಯನ್ನು ಗುರುತಿಸಿ ಈಗ ಚಿನ್ನದ ಪದಕವನ್ನು ಕೊಟ್ಟು ಗೌರವಿಸಲಾಗಿದೆ.

    ನಾನು ಅಂದು ಬ್ರೇಕ್ ಫೇಲ್ ಆಗಿದ್ದಾಗ ಪ್ರಯಾಣಿಕರು ಭಯ ಪಡುತ್ತಾರೆ ಎಂದು ಹೇಳಿರಲಿಲ್ಲ. ನಾನೇ ಬಸ್ ನಿಲ್ಲಿಸಲು ನಿರ್ಧಾರ ಮಾಡಿ ನಿಧಾನವಾಗಿ ಬಸ್ ಚಲಾಯಿಸಿ ಹ್ಯಾಂಡ್‍ಬ್ರೇಕ್ ಹಾಕಿ ಕಬ್ಬಿಣದ ತಡೆಗೋಡೆಗೆ ತಂದು ನಿಲ್ಲಿಸಿದೆ. ಬಳಿಕ ಎಲ್ಲರನ್ನು ನಿಧಾನವಾಗಿ ಬಸ್‍ನಿಂದ ಕೆಳಗಿಳಿಸಿದೆ ಎಂದು ಚಾಲಕ ಚಿನ್ನಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

    ಇಲಾಖೆ ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ನನಗೆ ಚಿನ್ನದ ಪದಕ ನೀಡಿದೆ. ಇದರಿಂದ ನನಗೆ ತುಂಬಾ ಸಂತೋಷವಾಗಿದೆ. ನನ್ನ ಕೆಲಸವನ್ನು ಮುಂದುವರಿಸಲು ನನಗೆ ಪ್ರೋತ್ಸಾಹ ನೀಡಿದ್ದಾರೆ ಎಂದು ಅವರು ಹೇಳಿದರು.

    ನಡೆದಿದ್ದೇನು?
    ಅಕ್ಟೋಬರ್ 8 ರಂದು ಗುಂಡ್ಲುಪೇಟೆಯಿಂದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಜಾತ್ರೆಗಾಗಿ ಕೆಎಸ್‍ಆರ್ ಟಿಸಿ ಬಸ್ ತೆರಳುತಿತ್ತು. ಆದರೆ ಬೆಟ್ಟದಿಂದ ವಾಪಸ್ ಬರುವಾಗ ಬಸ್‍ನ ಬ್ರೇಕ್ ಫೇಲ್ ಆಗಿದ್ದರಿಂದ ಪ್ರಪಾತಕ್ಕೆ ಬೀಳುವ ಹಂತದಲ್ಲಿತ್ತು. ಆದರೆ ಈ ಸಂದರ್ಭದಲ್ಲಿ ಬಸ್ ಚಾಲಕ ಚಿನ್ನಸ್ವಾಮಿ ಸಮಯ ಪ್ರಜ್ಞೆಯಿಂದ ಬಸ್ಸನ್ನು ಯಾವುದೇ ರೀತಿಯಲ್ಲಿ ಅಪಾಯವಿಲ್ಲದಂತೆ ಕಬ್ಬಿಣದ ತಡೆಗೋಡೆಗೆ ತಂದು ನಿಲ್ಲಿಸಿ ಎಲ್ಲಾ ಪ್ರಯಾಣಿಕರ ಪ್ರಾಣ ಉಳಿಸಿದ್ದರು.

    ಚಿನ್ನಸ್ವಾಮಿ ಅವರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಕೆಟ್ಟ ರಸ್ತೆಯಿಂದಾಗಿ ಈ ಅಪಘಾತ ಸಂಭವಿಸಿದೆ. ದೊಡ್ಡ ಬಸ್ ಗಳು ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟ ಹೀಗಾಗಿ ಮುಂದೆ ಗುಂಡ್ಲುಪೇಟೆ ಮತ್ತು ಹಿಮವದ್ ಗೋಪಾಲಸ್ವಾಮಿ ಬೆಟ್ಟದ ನಡುವೆ ಕೇವಲ ಮಿನಿ ಬಸ್ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗುವುದು ಎಂದು ಕೆಎಸ್‍ಆರ್ ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.