Tag: Chinnaswamy Stampede

  • ಇಡೀ ಬಜೆಟ್ ಪರಿಹಾರವಾಗಿ ಕೊಟ್ರೂ ಹೋದ ಜೀವ ವಾಪಸ್ ಬರುತ್ತಾ? – ಸೋಮಣ್ಣ

    ಇಡೀ ಬಜೆಟ್ ಪರಿಹಾರವಾಗಿ ಕೊಟ್ರೂ ಹೋದ ಜೀವ ವಾಪಸ್ ಬರುತ್ತಾ? – ಸೋಮಣ್ಣ

    ಮೈಸೂರು: ಪರಿಹಾರ ಮೊತ್ತ 25 ಲಕ್ಷ ಅಲ್ಲ, ಇಡೀ ಬಜೆಟ್ ಅನ್ನು ಪರಿಹಾರವಾಗಿ ಕೊಟ್ಟರೂ ಹೋಗಿರುವ ಜೀವ ವಾಪಸ್ ಬರುತ್ತಾ ಎಂದು ಕೇಂದ್ರ ಸಚಿವ ವಿ. ಸೋಮಣ್ಣ (V Somanna) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಚಿನ್ನಸ್ವಾಮಿ ಕಾಲ್ತುಳಿತದ (Chinnaswamy Stampede) ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡೀ ಘಟನೆಯಿಂದ ಬೆಂಗಳೂರಿಗೆ ಅತ್ಯಂತ ಕೆಟ್ಟ ಹೆಸರು ಬಂದಿದೆ. ಸಿಎಂ (Siddaramaiah) ಪಟಲಾಂ ಮಾಡಿದ ಎಡವಟ್ಟಿನಿಂದ ಇಷ್ಟೆಲ್ಲಾ ಘಟನೆಗಳು ನಡೆದಿವೆ. ಸಿದ್ದರಾಮಯ್ಯ ಅವರಿಂದ ನಾವು ಇಂತಹ ಆಡಳಿತ ನಿರೀಕ್ಷೆ ಮಾಡಿರಲಿಲ್ಲ. ನಿಮ್ಮ ನಿಮ್ಮ ಒಳಜಗಳ, ನಿಮ್ಮ ಒಳ ಒಪ್ಪಂದಗಳು, ನಿಮ್ಮ ನಡುವಿನ ಗೊಂದಲಗಳಿಂದ ಅಮಾಯಕರ ಜೀವ ಹೋಗಿದೆ. ಇದಕ್ಕೆ ಯಾರು ಹೊಣೆ ಮೊದಲು ಹೇಳಿ. ಸಿದ್ದರಾಮಯ್ಯನವರೇ ಇದಕ್ಕೆ ಹೊಣೆ ಅಲ್ವಾ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Exclusive | ಸರ್ಕಾರದ ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ ಕೊರತೆ, ಸಮಯಾವಕಾಶ ಇಲ್ಲ ಅಂದ್ರೂ ಡೋಂಟ್ ಕೇರ್

    ಕಾಲ್ತುಳಿತ ಘಟನೆಗೆ ಡಾ.ರಾಜ್‌ಕುಮಾರ್ ಅವರ ಸಾವಿನ ಘಟನೆಯನ್ನ ಹೇಗೆ ಹೋಲಿಕೆ ಮಾಡುತ್ತೀರಾ. ರಾಜ್‌ಕುಮಾರ್ ಅವರ ಸಾವಿನ ಸಂಧರ್ಭವೇ ಬೇರೆ, ಅವತ್ತಿನ ಪರಿಸ್ಥಿತಿಯೇ ಬೇರೆ ಇವತ್ತಿನ ಪರಿಸ್ಥಿತಿಯೇ ಬೇರೆ. ನೀವು ಈಗ ಮಾಡಿರುವುದು ಪಾಪದ ಕೆಲಸ. ಮೊದಲು ಅದನ್ನು ನೀವು ಒಪ್ಪಿಕೊಳ್ಳಬೇಕು. ಕುರ್ಚಿಗೆ ಅಂಟಿಕೊಂಡು ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ನಾನು ಅಂದುಕೊಂಡಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಕೊಟ್ಟಿರುವ ಫ್ರೀ ನೆಸ್ ಬೇರೆ ರಾಜ್ಯದ ಯಾವ ಸಿಎಂಗೂ ಕೊಟ್ಟಿಲ್ಲ. ಆದರೂ ಸಿದ್ದರಾಮಯ್ಯ ಇಂತಹ ಕೆಟ್ಟ ಆಡಳಿತ ನಡೆಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಚುರುಕು – ಜೂ.13ರವರೆಗೆ ವ್ಯಾಪಕ ಮಳೆ ಸಾಧ್ಯತೆ

    ಒಂದು ಅರ್ಧ ದಿನ ಪ್ರಧಾನ ಮಂತ್ರಿಗಳ ಕಚೇರಿಗೆ ಬನ್ನಿ, ಪ್ರಧಾನ ಮಂತ್ರಿಗಳು ಹೇಗೆ ಕೆಲಸ ಮಾಡುತ್ತಾರೆ ಎಂಬುದನ್ನ ನೋಡಿ. ನೀವು ಕಾಂಗ್ರೆಸ್ ಮುಖ್ಯಮಂತ್ರಿಯಾಗಿರಬಹುದು, ಪ್ರಧಾನಿ ಆಡಳಿತವನ್ನ ಸ್ವಲ್ಪ ಗಮನಿಸಿ ನೋಡಿ. ರಾಜ್ಯ ಸರ್ಕಾರಕ್ಕೆ ಹಳ್ಳಿಗಳೇ ಇಲ್ಲ. ಸಿಎಂ-ಡಿಸಿಎಂ ನಡುವೆ ಹೊಂದಾಣಿಕೆಯೇ ಇಲ್ಲ. ಹಳಿ ಇಲ್ಲದ ಕಾರಣ ಎಲ್ಲೆಲ್ಲೋ ಮುಗ್ಗರಿಸುತ್ತಿದೆ, ಅಫಘಾತ ಮಾಡುತ್ತಿದೆ. ಇವರ ಈ ಅಧ್ವಾನದಲ್ಲಿ ಅಮಾಯಕರ ಜೀವ ಹೋಗುತ್ತಿದೆ. ಇದು ನನಗೆ ಬೇಸರ ತರಿಸಿದೆ. ಬೆಂಗಳೂರಿನ ಕಾಲ್ತುಳಿತಕ್ಕೆ ದೇಶದ ಬೇರೆ ಬೇರೆ ಭಾಗದ ಘಟನೆಯನ್ನ ನೀವು ಹೇಗೆ ಸಮರ್ಥನೆಗೆ ಬಳಸುತ್ತಿದ್ದೀರಿ? ನೀವು ಮಾಡಿರುವುದು ಪಾಪದ ಕೆಲಸ. ಇದಕ್ಕೆ ಸಮರ್ಥನೆಗಳು ಬೇಡ. ಮೊದಲು ನೈತಿಕ ಹೊಣೆ ಹೊತ್ತುಕೊಳ್ಳಿ ಎಂದರು. ಇದನ್ನೂ ಓದಿ: 55ರ ಆಂಟಿ ಜೊತೆಗೆ ಯುವಕ ಲವ್ವಿಡವ್ವಿ; ಲವರ್‌ಗಾಗಿ ಆಕೆಯ ಗಂಡನನ್ನೇ ಕೊಂದು ಸುಟ್ಟುಹಾಕಿದ್ದ ಮೂವರು ಅರೆಸ್ಟ್‌

    ನನಗೆ ಸಿದ್ದರಾಮಯ್ಯ ಮೇಲೆ ವೈಯಕ್ತಿಕವಾಗಿ ಗೌರವ ಇದೆ. ಆದರೆ ಆಡಳಿತ ಯಾವ ಪರಿಸ್ಥಿತಿಯಲ್ಲಿದೆ ನೋಡಿ. ಎರಡೂವರೆ ವರ್ಷದ ಸರ್ಕಾರದದಲ್ಲಿ ಈ ರಾಜ್ಯಕ್ಕೆ ಯಾವ ಮೈಲಿಗಲ್ಲು ಕೊಟ್ಟಿದ್ದೀರಾ ನೀವೇ ನೋಡಿಕೊಳ್ಳಿ. ನಿಮ್ಮ ಪಟಲಾಮ್ ಮಾಡಿದ ತಪ್ಪಿಗೆ ಅಧಿಕಾರಿಗಳನ್ನ ತಪ್ಪಿತಸ್ಥರನ್ನಾಗಿ ಮಾಡಿದ್ದು ಎಷ್ಟು ಸರಿ? ಆರ್‌ಸಿಬಿ ಅವರು ಗೆದ್ದರು. ಅದರ ಕ್ರೆಡಿಟ್ ಪಡೆಯಲು ನೀವು ಪೈಪೋಟಿ ನಡೆಸಲು ಹೋಗಿ ಈ ಅವಘಡ ಮಾಡಿಕೊಂಡಿದ್ದೀರಿ. ಬೇರೆ ಇನ್ಯಾರೋ ಕ್ರೆಡಿಟ್ ತೆಗೆದುಕೊಳ್ಳುತ್ತಾರೆ ಎಂದು ನೀವೆ ಅಚಾತುರ್ಯ ಮಾಡಿ ಅಮಾಯಕರನ್ನು ಬಲಿ ಕೊಟ್ಟಿದ್ದೀರಿ ಎಂದು ಗುಡುಗಿದರು. ಇದನ್ನೂ ಓದಿ: ಹಾಸನ | ಹೊಳೆನರಸೀಪುರದಲ್ಲಿ ನಾಲ್ವರು ಖತರ್ನಾಕ್ ಕಳ್ಳಿಯರ ಬಂಧನ

  • Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

    Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

    – ಕಾರ್ಯಕ್ರಮಕ್ಕೆ ಸಮಯಾವಕಾಶ ಕೇಳಿ ಜೂ.4ರಂದೇ ಪತ್ರ ಬರೆದಿದ್ದ ಡಿಸಿಪಿ

    ಬೆಂಗಳೂರು: ಆರ್‌ಸಿಬಿ (RCB) ವಿಜಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede Case) ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಿಎಂ, ಡಿಸಿಎಂ, ಪರಮೇಶ್ವರ್ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿವೆ. ಈ ನಡುವೆ ಜೂನ್‌ ನಾಲ್ಕರಂದೇ ಭದ್ರತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌದ ಭದ್ರತಾ ವಿಭಾಗದ ಡಿಸಿಪಿ ಬರೆದ ಪತ್ರ ಸಂಚಲನ ಮೂಡಿಸಿದೆ.‌ ಇದರಿಂದ ಪೊಲೀಸರು ಬೇಡವೆಂದರೂ ಸರ್ಕಾರ ಹಠಕ್ಕೆ ಬಿದ್ದು ಕಾರ್ಯಕ್ರಮ ಮಾಡಿಸಿತಾ ಅನ್ನೋ ಪ್ರಶ್ನೆ ಹುಟ್ಟುಹಾಕಿದೆ.

    ಹೌದು.. ಡಿಸಿಪಿ (Vidhan Soudha DCP) ಕರಿಬಸವನಗೌಡ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಸರ್ಕಾರದ ಮತ್ತೊಂದು ಭಂಡಾಟ ಬಯಲಾಗಿದೆ. ಆರ್‌ಸಿಬಿ ಅಭಿಮಾನಿಗಳ ಸಂಖ್ಯೆ ದೇಶಾದ್ಯಂತ ಇದೆ. ಆದ್ರೆ ನಮ್ಮಲ್ಲಿ ಸಿಬ್ಬಂದಿ ಕೊರತೆ ಇರೋದ್ರಿಂದ ಬಂದೋಬಸ್ತ್‌ಗೆ ತೊಂದರೆಯಾಗಲಿದೆ ಅನ್ನೋ ಅಂಶವನ್ನೂ ಪತ್ರದಲ್ಲಿ ಉಲ್ಲೇಖಿಸಿರುವುದು ಬೆಳಕಿಗೆ ಬಂದಿದೆ. ಇದರ ಇನ್ನಷ್ಟು ಎಕ್ಸ್‌ಕ್ಲೂಸಿವ್‌ ಮಾಹಿತಿ ತಿಳಿಯು ಕುತೂಹಲ ನಿಮಗಿದ್ದರೆ ಮುಂದೆ ಓದಿ..

    ಭದ್ರತಾ ವಿಭಾಗದ ಡಿಸಿಪಿ ಬರೆದ ಪತ್ರದಲ್ಲಿ ಏನಿತ್ತು?
    ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ತಂಡಕ್ಕೆ Fan Following ದೇಶಾದ್ಯಂತ ಇದ್ದು.. ವಿಧಾನಸೌಧ ಭವ್ಯ ಮೆಟ್ಟಿಲುಗಳ ಮುಂಭಾಗ, ಕಾರ್ಯಕ್ರಮವನ್ನು ಆತರುದಲ್ಲಿ ಆಯೋಜಿಸುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ವಿಧಾನಸೌಧಕ್ಕೆ ಆಗಮಿಸುವ ಸಾಧ್ಯತೆಯಿದೆ. ವಿಧಾನಸೌಧ ಭದ್ರತಾ ವಿಭಾಗದಲ್ಲಿ ಅಧಿಕಾರಿ/ಸಿಬ್ಬಂದಿಗಳ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯ ನಿರ್ವಹಣೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ.

    ಜೂನ್‌ 4ರಂದು ಕಾರ್ಯಕ್ರಮವನ್ನು ವಿಧಾನಸೌಧ ಭವ್ಯ ಮೆಟ್ಟಿಲುಗಳ ಮುಂಭಾಗ ಆಯೋಜನೆ ಮಾಡುತ್ತಿರುವುದರಿಂದ, ಸದರಿ ದಿನದಂದು ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಿಸಲು ವಿತರಣೆ ಮಾಡುವ ಆನ್ ಲೈನ್ ಮತ್ತು ಆಫ್ ಲೈನ್ ಪಾಸುಗಳನ್ನು ಸಂಪೂರ್ಣವಾಗಿ ನಿರ್ಭಂದಿಸಲು ಕೋರಿದೆ.

    ರಾಯಲ್ ಚಾಲೆಂಜರ್ಸ್ ಬೆಂಗಳೂರು ರವರ ಸಮಾರಂಭ ಭವ್ಯ ಮೆಟ್ಟಿಲುಗಳ ಮುಂಭಾಗ ಜೂನ್‌ 4ರಂದು ಸಂಜೆ 4 ಗಂಟೆಗೆ ಆಯೋಜನೆಗೊಳ್ಳುತ್ತಿದ್ದು, ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳು ತಮ್ಮ ತಮ್ಮ ಕುಟುಂಬ ವರ್ಗದವರನ್ನು ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ. ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಕುಟುಂಬ ವರ್ಗದವರನ್ನು ಕರೆತರದಂತೆ ಆದೇಶ ನೀಡಲು ಮತ್ತು ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಅಂದು ಮಧ್ಯಾಹ್ನ ರಜೆ ಘೋಷಿಸಬೇಕು. ಸಚಿವಾಲಯದ ಅಧಿಕಾರಿ/ಸಿಬ್ಬಂದಿಗಳು ಕಾರ್ಯಕ್ರಮದ ಸ್ಥಳಕ್ಕೆ ಬರದಂತೆ ಸೂಚನೆ ಕಳುಹಿಸಬೇಕೆಂದು ಕೋರುತ್ತೇವೆ.

    ವಿಧಾನಸೌದ ಕಟ್ಟಡವು Vital Installation ಕಟ್ಟಡವಾಗಿದ್ದು, ಕಟ್ಟಡದ ಸುರಕ್ಷತೆಯ ಸಂಬಂಧ ವಿಧಾನಸೌಧ ಅವರಣದ ಮತ್ತು ಮುಂಭಾಗಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈ ಸನ್ಮಾನ ಕಾರ್ಯಕ್ರಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಕ್ರಿಕೆಟ್ ಆಗಮಿಸುತ್ತಿರುವುದರಿಂದ ಭದ್ರತೆಯ ದೃಷ್ಟಿಯಿಂದ ಸಿಸಿಟಿವಿಯ ಅವಶ್ಯಕತೆ ಇರುತ್ತದೆ. ಈಗ ಇರುವ ಇರುವ ಭದ್ರತಾ ವ್ಯವಸ್ಥೆಯಲ್ಲಿ ವ್ಯತಯ ಉಂಟಾಗುವ ಸಾಧ್ಯತೆ ಇರುತ್ತದೆ.

    ಅಲ್ಲದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ತಂಡಕ್ಕೆ Fan Following ದೊಡ್ಡದಾಗಿರುವುದರಿಂದ ಹೊರಗಡೆಯಿಂದ ಅಧಿಕಾರಿ/ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ತೆಗೆದುಕೊಳ್ಳಬೇಕಾಗಿದ್ದು, ಇದಕ್ಕೆ ಸಮಯದ ಅವಶ್ಯಕತೆ ಇದೆ. ಈ ರೀತಿಯ ಬೃಹತ್ ಕಾರ್ಯಕ್ರಮಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರಿ ಪೊಲೀಸ್ ರೊಂದಿಗೆ co-ordination ಮಾಡಿಕೊಳ್ಳುವ ಅವಶ್ಯಕತೆ ಇದ್ದು, ಸಮಯವಕಾಶದ ಕೊರತೆ ಎನ್ನಿಸುತ್ತಿದೆ. ಅಲ್ಲದೇ ಇಂತಹ ಕಾರ್ಯಕ್ರಮಹಳಲ್ಲಿ ಡ್ರೋನ್‌ ಕ್ಯಾಮೆರಾ ಬಳಸುವ ಅವಶ್ಯಕತೆ ಇರುವುದರಿಂದ ಆಂಟಿ ಡ್ರೋನ್‌ ವ್ಯವಸ್ಥೆ ಅಳವಡಿಸುವ ಅವಶ್ಯಕತೆ ಇದೆ.

    ಮುಂದುವರಿದು… ವಿಧಾನಸೌಧ ಕಟ್ಟಡವು ಪಾರಂಪರಿಕ ಕಟ್ಟಡವಾಗುವುದರಿಂದ ಮತ್ತು Vital Installation ಕಟ್ಟಡದ ವ್ಯಾಪ್ತಿಗೆ ಒಳಪಡುವುದರಿಂದ, ಭದ್ರತೆಯ ದೃಷ್ಟಿಯಿಂದ ಕಟ್ಟಡಕ್ಕೆ ಯಾವುದೇ ಧಕ್ಕೆಯಾಗದಂತೆ, ನಿಯಮಗಳನುಸಾರ ಕಾರ್ಯಕ್ರಮ ನಡೆಸಲು ಸಮಯದ ಅವಶ್ಯಕತೆ ಇರುತ್ತದೆ. ಅದಾಗ್ಯೂ ಸರ್ಕಾರ ತೆಗೆದುಕೊಳ್ಳುವ ನಿರ್ಣಯದಂತೆ ನಡೆದುಕೊಳ್ಳಲಾಗುವುದು ಎಂಬ ಅಭಿಪ್ರಾಯವನ್ನು ವರದಿಯನ್ನು ಸಲ್ಲಿಸಲಾಗಿದೆ ಎಂದು ಡಿಸಿಪಿ ಕರಿಬಸವನಗೌಡ ಅವರು ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರದಲ್ಲಿ ಬರೆದಿದ್ದಾರೆ.

  • ಎಲ್ರೂ ಬಂದು ಹೇಗಾಯ್ತು ಹುಷಾರಾಗಿ ಅಂತಾರೆ, ಪರಿಹಾರ ಮಾತ್ರ ಇಲ್ಲ: ಆರ್‌ಸಿಬಿ ಫ್ಯಾನ್ಸ್ ನೋವಿನ ಮಾತು

    ಎಲ್ರೂ ಬಂದು ಹೇಗಾಯ್ತು ಹುಷಾರಾಗಿ ಅಂತಾರೆ, ಪರಿಹಾರ ಮಾತ್ರ ಇಲ್ಲ: ಆರ್‌ಸಿಬಿ ಫ್ಯಾನ್ಸ್ ನೋವಿನ ಮಾತು

    – ನಮಗೂ ಪರಿಹಾರ ನೀಡಿ ಎಂದು ಮನವಿ

    ಬೆಂಗಳೂರು: ಆರ್‌ಸಿಬಿ (RCB) ಸಂಭ್ರಮಾಚರಣೆಯಲ್ಲಿನ ಭೀಕರ ಕಾಲ್ತುಳಿತ (Chinnaswamy Stampede) ಪ್ರಕರಣದಲ್ಲಿ ದಾರುಣವಾಗಿ ಸಾವನ್ನಪ್ಪಿದವರ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಸೇರಿ ಒಟ್ಟು 40 ಲಕ್ಷ ಪರಿಹಾರ ಘೋಷಿಸಲಾಗಿದೆ. ಆದರೆ ಗಂಭೀರ ಗಾಯಗೊಂಡವರಿಗೆ ಯಾವುದೇ ಪರಿಹಾರ (Compensation) ಘೋಷಣೆ ಮಾಡಿಲ್ಲ. ಇದಕ್ಕೆ ಈಗ ವಿರೋಧ ವ್ಯಕ್ತವಾಗುತ್ತಿದೆ.

    ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಸತ್ತವರಿಗಷ್ಟೇ ಪರಿಹಾರ ಘೋಷಣೆ ಮಾಡಿರುವ ಸರ್ಕಾರ, ಆರ್‌ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಗಾಯಗೊಂಡವರು ಬೇಸರ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಚಿಕಿತ್ಸಾ ವೆಚ್ಚ ಅಂದ್ರು, ಈಗ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಬೇಕು. ಡಿಸ್ಚಾರ್ಜ್ ಆದ್ರೂ ಕನಿಷ್ಟ ಮೂರು ತಿಂಗಳು ಚಿಕಿತ್ಸೆ ಪಡೀಬೇಕು. ಜೊತೆಗೆ ಏನೂ ಕೆಲಸ ಮಾಡಲಾರದ ಪರಿಸ್ಥಿತಿ ಇದೆ. ನಮಗೂ ಪರಿಹಾರ ನೀಡಿ ಎಂದು ಗಾಯಾಳುಗಳು ಮನವಿ ಮಾಡುತ್ತಿದ್ದಾರೆ.

    ಇನ್ನು ಗಾಯಾಳುಗಳ ಪರಿಸ್ಥಿತಿ ಕೇಳೋರಿಲ್ಲ. ಬರೀ ಘಟನೆ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಮಾಹಿತಿ ಪಡೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೆ ಮುಂದಿನ ಪರಿಸ್ಥಿತಿ ಬಗ್ಗೆ ನೆನೆಸಿಕೊಂಡರೆ ಆತಂಕವಾಗುತ್ತದೆ. ಕೇವಲ ಸರ್ಕಾರ ಸತ್ತವರಿಗಷ್ಟೇ ಪರಿಹಾರದ ಹಣ ಘೋಷಣೆ ಮಾಡಿದ್ದಾರೆ. ನಮ್ಮ ಜೀವಕ್ಕೆ ಬೆಲೆ ಇಲ್ವಾ? ಕೇವಲ ಚಿಕಿತ್ಸೆ ಕೊಟ್ಟು ಮನೆಗೆ ಕಳುಹಿಸಿದರೆ, ನಂತರದ ಚಿಕಿತ್ಸೆಗಳಿಗೆ ತುಂಬಾ ಕಷ್ಟ ಆಗುತ್ತದೆ. ದಯಮಾಡಿ ಸರ್ಕಾರ, ಆರ್‌ಸಿಬಿ ಮ್ಯಾನೇಜ್ಮೆಂಟ್ ಹಾಗೂ ಕೆಎಸ್‌ಸಿಎನವರು ನಮಗೂ ಸಹ ಪರಿಹಾರ ಕೊಡಲಿ ಎಂದು ಅಳಲು ತೋಡಿಕೊಂಡಿದ್ದಾರೆ.

    ಮುಂದಿನ ಮೂರು ತಿಂಗಳು ಬೆಡ್ ರೆಸ್ಟ್ ಹೇಳಿದ್ದಾರೆ. ಆದರೆ ನಾವು ಪಾರ್ಟ್‌ಟೈಮ್ ಕೆಲಸ ಮಾಡುತ್ತಾ ಕಾಲೇಜಿಗೆ ಹೋಗುತ್ತಿದ್ದೆವು. ಆದ್ರೆ ಮೂರು ತಿಂಗಳು ಕೆಲಸ ಇಲ್ಲದೆ ಜೀವನ ಸಾಗಿಸೋದು ತುಂಬಾ ಕಷ್ಟ. ಮೆಡಿಸಿನ್‌ಗೆ ಲಕ್ಷಾಂತರ ರೂಪಾಯಿ ಹಣ ಖರ್ಚು ಆಗುತ್ತೆ ಎಂದು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ನೋವಿನ ಮಾತನ್ನು ಆಡಿದ್ದಾರೆ.‌

    ಇನ್ನು ಕ್ಯಾಮೆರಾ ಮುಂದೆ ಮಾತನಾಡಿದ್ರೆ ನಮ್ಮ ಜೀವನ ಎಲ್ಲಿ ಹಾಳಾಗುತ್ತೆ, ಸಂಬಂಧಿಕರು ಏನು ತಿಳಿದುಕೊಳ್ಳುತ್ತಾರೆ, ನಮಗೆ ಮುಂದೆ ಕೆಲಸ ಸಿಗುತ್ತಾ? ನಮ್ಮನ್ನ ಯಾರು ಮದುವೆ ಆಗ್ತಾರೆ? ಹೀಗೆ ನಾನಾ ಪ್ರಶ್ನೆಗಳು ಗಾಯಾಳುಗಳನ್ನ ಕಾಡುತ್ತಿದೆ. ಹೀಗಾಗಿ ಕ್ಯಾಮೆರಾ ಮುಂದೆ ಮಾತನಾಡಲು ಗಾಯಾಳುಗಳು ಹಾಗೂ ಅವರ ಕುಟುಂಬದವರು ಹಿಂದೇಟು ಹಾಕುತ್ತಿದ್ದಾರೆ.

  • ಚಿನ್ನಸ್ವಾಮಿ ಕಾಲ್ತುಳಿತ – ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ಸರ್ಕಾರ

    ಚಿನ್ನಸ್ವಾಮಿ ಕಾಲ್ತುಳಿತ – ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ಸರ್ಕಾರ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ (Chinnaswamy Stampede) ಉಂಟಾಗಿ 11 ಮಂದಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು 25 ಲಕ್ಷಕ್ಕೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಆದೇಶ ಹೊರಡಿಸಿದ್ದಾರೆ.

    ಈ ಮೊದಲು ಮೃತರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಿಸಿತ್ತು. ಅಲ್ಲದೇ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನೂ ಭರಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದನ್ನೂ ಓದಿ: ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ: ಎಂ.ಸಿ ಸುಧಾಕರ್

    ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಆಡಳಿತ ಮಂಡಳಿ ತಲಾ 10 ಲಕ್ಷ ರೂ. ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದನ್ನೂ ಓದಿ: 5 ನಿಮಿಷ ತಬ್ಬಿಕೊಳ್ಳಲು 600 ರೂ. ಕೊಡ್ತಾರಂತೆ ಚೀನಾ ಮಹಿಳೆಯರು!

    18ನೇ ಆವೃತ್ತಿಯ ಐಪಿಎಲ್ ಟ್ರೋಫಿ ಗೆಲುವನ್ನು ಸಂಭ್ರಮಿಸಲು ಆರ್‌ಸಿಬಿ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದರು. ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಕೊಹ್ಲಿ ಸೇರಿದಂತೆ ರಜತ್ ಪಾಟೀದಾರ್ ಪಡೆಗೆ ಆರ್‌ಸಿಬಿ ಫ್ಯಾನ್ಸ್ ಅದ್ಧೂರಿ ಸ್ವಾಗತ ಕೋರಿದರು. ಆರ್‌ಸಿಬಿ ತಂಡದ ಸಂಭ್ರಮಾಚರಣೆಯನ್ನು ಕಣ್ತುಂಬಿಕೊಳ್ಳಲು ಸಾಗರೋಪಾದಿಯಲ್ಲಿ ಅಭಿಮಾನಿಗಳು ಸೇರಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದನ್ನೂ ಓದಿ: ಅಮರನಾಥ ಯಾತ್ರಿಕರಿಗಾಗಿ ‘ಆಪರೇಷನ್ ಶಿವ’

  • ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ತಂಡ ಭೇಟಿ – ಕಾಲ್ತುಳಿತ ಸ್ಥಳದಲ್ಲಿ ಪರಿಶೀಲನೆ

    ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ತಂಡ ಭೇಟಿ – ಕಾಲ್ತುಳಿತ ಸ್ಥಳದಲ್ಲಿ ಪರಿಶೀಲನೆ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಕಾಲ್ತುಳಿತದಿಂದ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣ ಈಗಾಗಲೇ ದೇಶಾದ್ಯಂತ ಸುದ್ದಿಯಾಗಿದೆ. ಪ್ರಕರಣದಿಂದ ಸರ್ಕಾರ ಆಘಾತಕ್ಕೆ ಒಳಗಾಗಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಸರ್ಕಾರ ಸಿಐಡಿ (CID), ಮ್ಯಾಜಿಸ್ಟ್ರೇಟ್ ಹಾಗೂ ನ್ಯಾಯಾಂಗ ತನಿಖೆಗೆ ಆದೇಶ ಕೂಡ ಕೊಟ್ಟಿದೆ. ಪ್ರಕರಣವನ್ನು ಸಿಐಡಿ ಪೊಲೀಸರಿಗೆ ಕಬ್ಬನ್ ಪಾರ್ಕ್ ಪೊಲೀಸರು ಹಸ್ತಾಂತರ ಮಾಡಿದ್ದು, ಇಂದಿನಿಂದ ತನಿಖೆ ಆರಂಭಿಸಿದೆ.

    ಸಿಐಡಿ ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ಕಾಲ್ತುಳಿತ ಪ್ರಕರಣದ ತನಿಖೆ ನಡೆಯಲಿದ್ದು, ಡಿವೈಎಸ್‌ಪಿ ಗೌತಮ್ ಹಾಗೂ ಪುರುಷೋತ್ತಮ್‌ರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಕಾಲ್ತುಳಿತ ಉಂಟಾದ ಸ್ಥಳಕ್ಕೆ ಭೇಟಿ ನೀಡಿದ ಸಿಐಡಿ ತಂಡ, ನೂಕು ನುಗ್ಗಲು ಉಂಟಾಗಿದ್ದ ಗೇಟ್ ನಂಬರ್ 7, 19, 18, 16, 21ರ ಬಳಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ

    ಬಂಧನಕ್ಕೊಳಗಾಗಿರುವ ಡಿಎನ್‌ಎ ಮ್ಯಾನೇಜ್‌ಮೆಂಟ್‌ನ ಮೂವರು ಹಾಗೂ ಆರ್‌ಸಿಬಿಯ ಒಬ್ಬರು ನ್ಯಾಯಾಂಗ ಬಂಧನದಲ್ಲಿದ್ದು, ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಶನಿವಾರ ಹಾಗೂ ಭಾನುವಾರ ಕೋರ್ಟ್‌ಗೆ ರಜೆ ಇದ್ದು, ಸೋಮವಾರ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆದಿದೆ. ಇದನ್ನೂ ಓದಿ: ಮಂಗಳೂರು| ಸೆಮಿನಾರ್ ತಪ್ಪಿಸಲು ವಿದ್ಯಾರ್ಥಿನಿಯಿಂದಲೇ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

    ಸಿಐಡಿ ಜೊತೆ ಬೆಂಗಳೂರು ಜಿಲ್ಲಾಧಿಕಾರಿ ಕೂಡ ತನಿಖೆ ಆರಂಭಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿರೋ ಜಿಲ್ಲಾಧಿಕಾರಿ ಜಗದೀಶ್, ಗಾಯಗೊಂಡವರ ಬಗ್ಗೆ ತನಿಖೆ ವರದಿ ಪಡೆದುಕೊಂಡಿದ್ದಾರೆ. ಇನ್ನೂ ಗಾಯಾಳುಗಳ ಸಂಖ್ಯೆಯನ್ನು ಸರ್ಕಾರ ತಪ್ಪಾಗಿ ಹೇಳಿರೋದು ಬಹಿರಂಗವಾಗಿದೆ. ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 11 ಜನರು ಮೃತಪಟ್ಟಿದ್ದಾರೆ, 45 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು. ಆದರೆ ಅಸಲಿಗೆ ಗಾಯಗೊಂಡವರು ಕೇವಲ 45 ಜನರು ಮಾತ್ರವಲ್ಲ, ಬರೋಬ್ಬರಿ 65 ಮಂದಿ ಕಾಲ್ತುಳಿತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ

    ಗಾಯಾಳುಗಳಿಗೂ ನೋಟಿಸ್ ಜಾರಿ:
    ಇನ್ನು ಬೆಂಗಳೂರಿನ 4 ಆಸ್ಪತ್ರೆಗಳಿಂದ ಜಿಲ್ಲಾಧಿಕಾರಿ ಜಗದೀಶ್ ವಿವರಣೆ ಪಡೆದುಕೊಂಡಿದ್ದಾರೆ. ಬೌರಿಂಗ್, ಪೋರ್ಟಿಸ್, ಮಣಿಪಾಲ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಎಷ್ಟು ಗಾಯಾಳುಗಳು ಅಡ್ಮಿಟ್ ಆಗಿದ್ರು? ಎಷ್ಟು ಮಂದಿ ಡಿಸ್ಚಾರ್ಜ್ ಆದರು ಮತ್ತು ಎಷ್ಟು ಡೆತ್ ಆಗಿದೆ? ಘಟನೆಗೆ ಕಾರಣ ಏನು ಅಂತಾ ಮಾಹಿತಿ ಪಡೆದುಕೊಂಡಿದ್ದಾರೆ. ಕಾಲ್ತುಳಿತ ಹೇಗಾಯ್ತು? ಏನೇನಾಯ್ತು ಅನ್ನೋ ಮಾಹಿತಿ ಸಂಗ್ರಹಕ್ಕೆ 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಗೂ ಕಾಲ್ತುಳಿತಕ್ಕೂ ಏನ್‌ ಸಂಬಂಧ? ಮನಮೋಹನ್ ಸಿಂಗ್‌ ಪ್ರಧಾನಿಯಾಗಿದ್ದಾಗ ಎಷ್ಟು ಅಟ್ಯಾಕ್ ಆಗಿದ್ವು – ಹೆಚ್‌ಡಿಕೆ ಪ್ರಶ್ನೆ

    ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದು, ಉಳಿದೆಲ್ಲಾ ಗಾಯಾಳುಗಳು ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರೂ ಅಭಿಮಾನಿಗಳು ಪದವಿ ವಿದ್ಯಾರ್ಥಿಗಳಾಗಿದ್ದು, ಕೆಆರ್ ಪುರಂ ಹಾಗೂ ಚಿಕ್ಕಮಗಳೂರು ಮೂಲದ ನಿವಾಸಿಗಳಾಗಿದ್ದಾರೆ. ಕಾಲ್ತುಳಿತದಲ್ಲಿ ಇಬ್ಬರು ಅಭಿಮಾನಿಗಳ ಕಾಲು ಮುರಿದಿತ್ತು. ಇದನ್ನೂ ಓದಿ: ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

  • 11 ಅಮಾಯಕ ಜೀವಗಳ ಬಲಿ ಪಡೆದು ಈ ಸರ್ಕಾರ ಪಾಪಕ್ಕೆ ಗುರಿಯಾಗಿದೆ: ಸೋಮಣ್ಣ

    11 ಅಮಾಯಕ ಜೀವಗಳ ಬಲಿ ಪಡೆದು ಈ ಸರ್ಕಾರ ಪಾಪಕ್ಕೆ ಗುರಿಯಾಗಿದೆ: ಸೋಮಣ್ಣ

    ಬೆಂಗಳೂರು: 11 ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡು ಸಿದ್ದರಾಮಯ್ಯ (Siddaramaiah) ಸರ್ಕಾರ ಪಾಪಕ್ಕೆ ಗುರಿಯಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ (V Somanna) ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

    ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಇದೊಂದು ಲಜ್ಜೆಗೇಡಿ ಸರ್ಕಾರ. ಹೆಸರು ಬರುತ್ತೆ ಎಂದು ತರಾತುರಿಯಲ್ಲಿ ಕಾರ್ಯಕ್ರಮ ಮಾಡಿದರು. ಒಂದು ವಾರ ಬಿಟ್ಟು ಮಾಡಿದ್ರೆ ಏನು ಆಗುತ್ತಿತ್ತು. ಇಂತಹ ಕೆಲಸ ಮಾಡಿ ನೀವು ಪಾಪಕ್ಕೆ ಗುರಿಯಾಗಿದ್ದೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ: ಅರಗ ಜ್ಞಾನೇಂದ್ರ

    ಪೊಲೀಸ್ ಕಮೀಷನರ್ ದಯಾನಂದ್ ಪ್ರಾಮಾಣಿಕ ಅಧಿಕಾರಿ. ಅವರನ್ನು ಅಮಾನತು ಮಾಡ್ತೀರಾ. ಸಿದ್ದರಾಮಯ್ಯ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕಿತ್ತು. ಸಿದ್ದರಾಮಯ್ಯ ಅವರೇ ಯಾರು ನಿಮ್ಮ ಕಿವಿ ಕಚ್ಚಿದ್ರು ಇವತ್ತು ಮಾಡಿ ಅಂತ. ನಿಮ್ಮ ಅನುಭವ, ಚಿಂತನೆ ಏನಾಯ್ತು? ಮುಗ್ಧರನ್ನ ಸಾಯಿಸಿ ಶಾಪಗ್ರಸ್ತ ಸರ್ಕಾರ ಆಗಿದೆ ಈ ಸರ್ಕಾರ ಎಂದು ಹರಿಹಾಯ್ದರು. ಇದನ್ನೂ ಓದಿ: ಆತುರದ ನಿರ್ಧಾರದಿಂದ ತಪ್ಪು ಮಾಡಿದ್ದೇವೆ, ತಡವಾಗಿ ವಿಜಯೋತ್ಸವ ಆಚರಣೆ ಮಾಡ್ಬೋದಿತ್ತು: ಇಕ್ಬಾಲ್ ಹುಸೇನ್

    ನಿಮಗೆ ಮಾನ ಮರ್ಯಾದೆ ಇದ್ದರೆ ಇದರ ಹೊಣೆ ಹೊರಬೇಕು. ಇಂತಹ ಘಟನೆ ಮಾಡಿ ಇತಿಹಾಸದಲ್ಲಿ ನೀವು ಉಳಿದುಕೊಂಡ್ರಿ. ಈಗ ಕಣ್ಣು ಒರೆಸೋ ತಂತ್ರ ಮಾಡ್ತಿದ್ದೀರಾ. ಒಳ್ಳೆಯ ಅಧಿಕಾರಿಗಳನ್ನು ಅಮಾನತು ಮಾಡಿದ್ರೆ ಅಧಿಕಾರಿಗಳಿಗೆ ನಿಮ್ಮ ಜೊತೆ ಕೆಲಸ ಮಾಡೋಕೆ ಹೇಗೆ ಆಗುತ್ತದೆ. ಸರ್ಕಾರಕ್ಕೆ ಹೆಸರು ಮಾಡೋ ಆತುರದ ಪರಮಾವಧಿ. ಇದಕ್ಕೆ ನಿಮಗೆ ಕೊಡಲಿ ಪೆಟ್ಟಾಗಿದೆ. ಈ ಘಟನೆ ಅಕ್ಷಮ್ಯ ಅಪರಾಧ. ಇದಕ್ಕೆ ನೀವೆ ಬೆಲೆ ತೆರಬೇಕು ಎಂದು ಸರ್ಕಾರದ ವಿರುದ್ಧ ಗುಡುಗಿದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

  • ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ: ಅರಗ ಜ್ಞಾನೇಂದ್ರ

    ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ: ಅರಗ ಜ್ಞಾನೇಂದ್ರ

    – ಸಿಎಂ, ಡಿಸಿಎಂ, ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ (Chinnaswamy Stampede) ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ. ಸಿಎಂ, ಡಿಸಿಎಂ, ಗೃಹ ಸಚಿವರೇ ನೇರ ಹೊಣೆ. ಕೂಡಲೇ ಮೂವರೂ ರಾಜೀನಾಮೆ ಕೊಡಬೇಕು ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ (Araga Jnanendra) ಆಗ್ರಹಿಸಿದರು.

    ಘಟನೆ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಘಟನೆಗೆ ರಾಜ್ಯ ಸರ್ಕಾರವೇ ಕಾರಣ. ಸಿಎಂ, ಡಿಸಿಎಂ, ಗೃಹ ಸಚಿವರು ಇದರ ಜವಾಬ್ದಾರಿ ತೆಗೆದುಕೊಳ್ಳಬೇಕು. ಈ ಮೂರೂ ಜನ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಆತುರದ ನಿರ್ಧಾರದಿಂದ ತಪ್ಪು ಮಾಡಿದ್ದೇವೆ, ತಡವಾಗಿ ವಿಜಯೋತ್ಸವ ಆಚರಣೆ ಮಾಡ್ಬೋದಿತ್ತು: ಇಕ್ಬಾಲ್ ಹುಸೇನ್

    ನಾನು ಗೃಹ ಸಚಿವ ಇದ್ದಾಗ ಪುನೀತ್ ರಾಜ್‌ಕುಮಾರ್ ನಿಧನರಾಗಿದ್ದಾಗ ನಾವು ಹೇಗೆ ನಿಭಾಯಿಸಿದ್ದೆವು. 20 ಲಕ್ಷ ಜನರನ್ನು ನಾವು ನಿಭಾಯಿಸಿದ್ದೆವು. ಇವರಿಂದ ಚಿನ್ನಸ್ವಾಮಿ ಪ್ರಕರಣ ನಿಭಾಯಿಸಲು ಆಗಿಲ್ಲ. ಪೊಲೀಸರು ಬೇಡ ಅಂದರೂ ಇವರು ಕಾರ್ಯಕ್ರಮ ಮಾಡಿದರು. ನಿಮ್ಮ ಮಕ್ಕಳು, ಮೊಮ್ಮಕ್ಕಳು ಫೋಟೋ ಸೆಷನ್‌ಗೆ ಈ ಕಾರ್ಯಕ್ರಮ ಮಾಡಿದ್ರಾ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

    ಈ ಘಟನೆಗೂ ಪ್ರಯಾಗ್ ರಾಜ್ ಘಟನೆಗೂ ಹೋಲಿಕೆ ಸರಿಯಲ್ಲ. ಈ ಪ್ರಕರಣದಲ್ಲಿ ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರು. ಇದು ಸರ್ಕಾರದ ಪ್ರಯೋಜಿತ ಕೊಲೆ. 11 ಜನರನ್ನು ಈ ಸರ್ಕಾರ ಕೊಲೆ ಮಾಡಿದೆ. ಇವರ ತಪ್ಪು ಮುಚ್ಚಿಕೊಳ್ಳೋಕೆ ಪೊಲೀಸರನ್ನ ಅಮಾನತು ಮಾಡಿದ್ದೀರಾ. ಈ ಘಟನೆಗೆ ಸಿಎಂ, ಡಿಸಿಎಂ, ಗೃಹ ಸಚಿವರು ಬೆಲೆ ತೆರಬೇಕು. ವಿಪಕ್ಷವಾಗಿ ನಾವು ಮಾತಾಡಿದ್ರೆ ಅದನ್ನು ರಾಜಕೀಯ ಅಂತೀರಾ. ನೀವು ಮಾಡಿದ್ದೆಲ್ಲ ಸರಿ ಅಂತ ನಾವು ಬಿಡಬೇಕಾ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಗೋವಿಂದರಾಜ್ ವಿರುದ್ಧ ಕ್ರಮ – ಅಷ್ಟಾದ್ರೂ ಜ್ಞಾನೋದಯ ಆಗಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ: ಹೆಚ್‍ಡಿಕೆ ವ್ಯಂಗ್ಯ

    ರಾಜ್ಯಪಾಲರು, ಸಿಎಂ,ಡಿಸಿಎಂ ಇದ್ದ ಕಾರ್ಯಕ್ರಮದಲ್ಲಿ ಪ್ರೊಟೋಕಾಲ್ ಇರಲಿಲ್ಲ. ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ಇವರು ಬ್ಯುಸಿ ಆಗಿದ್ದರು. ಘಟನೆ ಆದ ಕೂಡಲೇ ಇವರು ರಾಜೀನಾಮೆ ಕೊಟ್ಟು ಜನರ ಕ್ಷಮೆ ಕೇಳಬೇಕಿತ್ತು. ಅಧಿಕಾರಿಗಳು ಬಂದೋಬಸ್ತ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರೂ ಇವರು ಕಾರ್ಯಕ್ರಮ ಮಾಡಿದ್ದಾರೆ ಎಂದು ಆರೋಪ ಮಾಡಿದರು. ಇದನ್ನೂ ಓದಿ: ಬೆಂಗಳೂರು | ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

    ಪಹಲ್ಗಾಮ್ ಘಟನೆ ಬಗ್ಗೆ ಭದ್ರತಾ ಲೋಪ ಎಂದಿದ್ದರು. ಅದಕ್ಕೂ ಇದಕ್ಕೂ ಹೋಲಿಗೆ ಮಾಡಬಾರದಿತ್ತು. ಕಾರ್ಯಕ್ರಮ ಮುಂದೂಡುವ ಅವಕಾಶ ಇತ್ತು. ಕಾರ್ಯಕ್ರಮಕ್ಕೆ ನೀವೆ ಕರೆದಿದ್ದು. ಡಿಕೆ ಶಿವಕುಮಾರ್ ಗೃಹ ಇಲಾಖೆಯ ಮಂತ್ರಿಯನ್ನ ನಿರ್ಲಕ್ಷ್ಯ ಮಾಡಿದ್ದಾರೆ. ಅವರವರ ರಾಜಕೀಯಕ್ಕೆ ಜನ ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ನನ್ನನ್ನ ಕೇಳದೆ ಏನು ಮಾಡಬಾರದು ಎಂಬ ಮನಸ್ಥಿತಿ ಡಿಕೆ ಶಿವಕುಮಾರ್ ಅವರದ್ದು. ಚಿನ್ನಸ್ವಾಮಿ ಘಟನೆ ತನಿಖೆಗೆ ನ್ಯಾ.ಕುನ್ಹಾ ನೇಮಕಕ್ಕೂ ವಿರೋಧ ಮಾಡಿದ ಅವರು, ಕುನ್ಹಾ ಒಬ್ಬರೇ ಅಲ್ಲಾ ನಿವೃತ್ತ ನ್ಯಾಯಾಧೀಶರು ಇರೋದು. ಬಹಳ ಜನ ರಿಟೈರ್ಡ್ ಜಡ್ಜ್ ಇದ್ದಾರೆ. ಹಾಲಿ ಜಡ್ಜ್ರಿಂದ ಪ್ರಕರಣ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು – ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

  • ಆತುರದ ನಿರ್ಧಾರದಿಂದ ತಪ್ಪು ಮಾಡಿದ್ದೇವೆ, ತಡವಾಗಿ ವಿಜಯೋತ್ಸವ ಆಚರಣೆ ಮಾಡ್ಬೋದಿತ್ತು: ಇಕ್ಬಾಲ್ ಹುಸೇನ್

    ಆತುರದ ನಿರ್ಧಾರದಿಂದ ತಪ್ಪು ಮಾಡಿದ್ದೇವೆ, ತಡವಾಗಿ ವಿಜಯೋತ್ಸವ ಆಚರಣೆ ಮಾಡ್ಬೋದಿತ್ತು: ಇಕ್ಬಾಲ್ ಹುಸೇನ್

    ರಾಮನಗರ: ಎಲ್ಲರೂ ಇಷ್ಟಪಡುವ ಆರ್‌ಸಿಬಿ (RCB) ತಂಡ ಕಪ್ ಗೆದ್ದಿತ್ತು, ಆದರೆ ಅದರ ಸಂಭ್ರಮ ಮಾಡಲು ಹೋಗಿ ಸಾವು-ನೋವು ಸಂಭವಿಸಿದೆ. ತಡವಾಗಿ ಆಲೋಚನೆ ಮಾಡಿ ವಿಜಯೋತ್ಸವ ಆಚರಣೆ ಮಾಡಬಹುದಿತ್ತು ಎಂದು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಹೇಳಿದ್ದಾರೆ.

    ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ (Chinnaswamy Stampede) ಪ್ರಕರಣ ಸಂಬಂಧ ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ತ್ಯಾಗ ಬಲಿದಾನದ ಪ್ರತೀಕವಾಗಿ ಬಕ್ರೀದ್ ಆಚರಣೆ ಮಾಡುತ್ತಿದ್ದೇವೆ. ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಆತ್ಮಕ್ಕೆ ಶಾಂತಿ ಕೋರಿ ಇಂದು ಪ್ರಾರ್ಥನೆ ಮಾಡಿದ್ದೇವೆ. ಎಲ್ಲಾ ಮಸೀದಿಗಳಲ್ಲೂ ಪ್ರಾರ್ಥನೆ ಸಲ್ಲಿಸಿದ್ದೇವೆ. ಈ ದುರ್ಘಟನೆ ನಡೆಯಬಾತದಿತ್ತು, ನಡೆದು ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

    ಸಿದ್ಧತೆ, ಭದ್ರತೆ ಮಾಡಿಕೊಂಡು ಕಾರ್ಯಕ್ರಮ ಮಾಡಬೇಕಿತ್ತು. ಆದರೆ ಆತುರದಿಂದ ಕಾರ್ಯಕ್ರಮ ಮಾಡಿ ತಪ್ಪು ಮಾಡಿದ್ದೇವೆ. ನಾವೂ ತಪ್ಪು ಮಾಡಿದ್ದೇವೆ, ಅಧಿಕಾರಿ ವರ್ಗದವರು ತಪ್ಪು ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಅನುಮತಿ ಕೊಡಲೇ ಬಾರದಿತ್ತು. ಘಟನೆ ನಮಗೆ ಹೆಚ್ಚು ದುಖಃವನ್ನ ತಂದಿದೆ. ಘಟನೆಯನ್ನ ನಾವು ಖಂಡಿಸುತ್ತೇವೆ ಎಂದರು. ಇದನ್ನೂ ಓದಿ: ಬೆಂಗಳೂರು | ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

  • ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ

    ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ

    – ಮೋದಿ, ಶಾ ರಾಜೀನಾಮೆ ಕೊಟ್ರೆ ನಾವೂ ಕೊಡಿಸ್ತೇವೆ
    – 50 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಾಸಕ ಆಗ್ರಹ

    ಬೆಂಗಳೂರು: ಸಿಎಂ ರಾಜೀನಾಮೆ ಕೇಳುವ ಕುಮಾರಸ್ವಾಮಿ (HD Kumaraswamy) ಅವರಿಗೆ ನಾಚಿಕೆ ಆಗಬೇಕು. ಡಾ. ರಾಜ್‌ಕುಮಾರ್‌ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರಲ್ಲ, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ ಅಂತ ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ (Gopala Krishna Beluru) ಪ್ರಶ್ನೆ ಮಾಡಿದ್ದಾರೆ.

    ಬೆಂಗಳೂರಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ರಾಜೀನಾಮೆಗೆ ದೋಸ್ತಿ ನಾಯಕರ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

    ಡಾ. ರಾಜ್‌ಕುಮಾರ್ ತೀರಿಕೊಂಡಾಗ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು.‌ ಕಂಠೀರವ ಸ್ಟುಡಿಯೋದಲ್ಲಿ ಆಗ ನಾನೂ ಇದ್ದೆ. ಆಗ ಕುಮಾರಸ್ವಾಮಿ ರಾಜೀನಾಮೆ ನೀಡಿದ್ರಾ..? ಹಾವೇರಿಯಲ್ಲಿ ರೈತರ ಮೇಲೆ ಬಿಎಸ್‌ವೈ ಗೋಲಿಬಾರ್ ಮಾಡಿಸಿದ್ರು, ರಾಜೀನಾಮೆ ನೀಡಿದ್ರಾ..? ಪಹಲ್ಗಾಮ್ ಉಗ್ರರ ದಾಳಿಯಲ್ಲಿ (Pahalgam Terror Attack) 26 ಮಂದಿ ಸತ್ರು, ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಆಗಿ ಹಲವರು ಸತ್ರು. ಪ್ರಧಾನಿ ಮೋದಿ (Narendra modi), ಅಮಿತ್ ಶಾ ರಾಜೀನಾಮೆ ನೀಡಿದ್ರಾ..? ಮೋದಿ, ಶಾ ರಾಜೀನಾಮೆ ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ ಅಂತ ಹೇಳಿದ್ದಾರೆ.

    ಇಂತಹ ಘಟನೆ ಆಗಬಾರದಿತ್ತು, ಆದ್ರೆ ಆಗಿಹೋಗಿದೆ. ಅದಕ್ಕೆ ಪೊಲೀಸ್ ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಯ ನೇಮಕ ಹಿಂಪಡೆಯಲಾಗಿದೆ. ಸಿಎಂ, ಡಿಸಿಎಂ ಇಬ್ರೂ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ. ಇವೆಲ್ಲ ಆಕಸ್ಮಿಕ ಘಟನೆ, ನಾವೂ ಕೂಡ ನೋವಲ್ಲಿ ಇದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಹೇಳಿದರು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಸಿಬ್ಬಂದಿಯಿಂದ ಅಭಿಮಾನಿಗಳ ಮೇಲೆ ಪೈಪ್‌ನಿಂದ ಹಲ್ಲೆ – ಬಹಳ ಭಯಾನಕವಾಗಿದೆ ಕಾಲ್ತುಳಿತದ ದೃಶ್ಯ

    ಮುಂದುವರಿದು… 10 ಲಕ್ಷ ರೂ. ಪರಿಹಾರ ಸಾಕಾಗಲ್ಲ, ಕನಿಷ್ಠ 50 ಲಕ್ಷ ರೂ. ಕೊಡಬೇಕು. ನಾನೂ ಕೂಡ ಸರ್ಕಾರಕ್ಕೆ ಈ ಬಗ್ಗೆ ಒತ್ತಾಯ ಮಾಡ್ತೀನಿ. ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಮೋದಿ ರಾಜೀನಾಮೆ ಕೊಟ್ಟರೆ ನಾವೂ ರಾಜೀನಾಮೆ ಕೊಡಿಸುತ್ತೇವೆ. ಮೋದಿ, ಶಾ ರಾಜೀನಾಮೆ ಕೊಡಿಸಲು ತಾಕತ್ತು ಇದ್ಯಾ? ಕುಂಭಮೇಳದಲ್ಲಿ ಎಷ್ಟು ಜನ ಸತ್ತರು? ಬೆಂಕಿ ಹಚ್ಚೋ ಕೆಲಸ ಮಾಡಬಾರದು ಅಂತ ತಿಳಿವಳಿಕೆ ನೀಡಿದ್ದಾರೆ. ಇದನ್ನೂ ಓದಿ: Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ

  • ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stampede Case) ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

    ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ಶುಕ್ರವಾರ (ಜೂ.6) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಅವರೇ ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಕಾಲ್ತುಳಿತ ಕೇಸ್‌ – ಕೊಹ್ಲಿ ವಿರುದ್ಧ ದೂರು ದಾಖಲು

    ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರು, ತನಿಖೆಯನ್ನ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆ ಹಾಗೂ ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸಿಎಂ ಸೂಚನೆ ಬೆನ್ನಲ್ಲೇ ಶುಕ್ರವಾರ ಕೆಎಸ್‌ಸಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್ ‌ಹಾಗೂ ಕೆಎಸ್‌ಸಿಎ ನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್‌ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

    Chinnaswamy Stampede

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.