Tag: Chitrakala parishath

  • ಚಿತ್ರಕಲೆ ಮನಸ್ಸಿನ ಭಾವನೆ ವ್ಯಕ್ತಪಡಿಸುವ ಒಂದು ಮಾಧ್ಯಮ: ಬೊಮ್ಮಾಯಿ

    ಚಿತ್ರಕಲೆ ಮನಸ್ಸಿನ ಭಾವನೆ ವ್ಯಕ್ತಪಡಿಸುವ ಒಂದು ಮಾಧ್ಯಮ: ಬೊಮ್ಮಾಯಿ

    ಬೆಂಗಳೂರು: ಮುಂದಿನ ವರ್ಷದಿಂದ 2 ದಿನಗಳ ಕಾಲ ಚಿತ್ರಸಂತೆ (Chitrasanthe) ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಚಿತ್ರಕಲಾ ಪರಿಷತ್‌ಗೆ (Chitrakala Parishath) ಸಲಹೆ ನೀಡಿದ್ದಾರೆ. 20ನೇ ಚಿತ್ರಸಂತೆ ಉದ್ಘಾಟನೆ ಮಾಡಿದ ಸಿಎಂ ಬೊಮ್ಮಾಯಿ, ಆಯೋಜಕರಿಗೆ 2 ದಿನ ಸಂತೆ ಆಯೋಜನೆಗೆ ಸೂಚನೆ ಕೊಟ್ಟಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರಕಲೆ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾಧ್ಯಮ. ಮನದಾಳದ ಮಾತುಗಳು ಮತ್ತು ಭಾವನೆಗಳನ್ನು ಚಿತ್ರಕಲೆ ಮೂಲಕ ವ್ಯಕ್ತಪಡಿಸಲಾಗುತ್ತದೆ. ಚಿತ್ರಕಲೆ ತಿಳಿದುಕೊಳ್ಳುವ ಪ್ರಯತ್ನ ಸಾರ್ವಜನಿಕರು ಮಾಡಬೇಕು. ಚಿತ್ರಕಲಾ ಪರಿಷತ್ತು ಕೆಲಸ ಒಳ್ಳೆಯ ಕಲಾವಿದರಿಗೆ ಅವಕಾಶ ಮಾಡಿಕೊಡಬೇಕು ಹಾಗೂ ಸಾಮಾನ್ಯ ಜನರಲ್ಲಿ ಚಿತ್ರಕಲೆ ಅಭಿಪ್ರಾಯ ಮೂಡಿಸಬೇಕು ಎಂದು ಸಲಹೆ ನೀಡಿದರು.

    ಇಂತಹ ಚಿತ್ರಕಲಾ ಪರಿಷತ್ತು ವಿಶ್ವದಲ್ಲೇ ಮತ್ತೊಂದು ಇಲ್ಲ. ಚಿತ್ರಕಲಾ ಪರಿಷತ್ತು ಒಳ್ಳೆಯ ಕೆಲಸ ಮಾಡುತ್ತಿದೆ. ಚಿತ್ರಸಂತೆ ಆಗಲೇ ಬೇಕಾಗಿರುವ ಸಂತೆ. ಇದು ಬೆಳೆಯಬೇಕು. ಇಲ್ಲಿ ಡಿಗ್ರಿ ಆದ ತಕ್ಷಣ ನೌಕರಿ ತೆಗೆದುಕೊಳ್ಳೊದಿಲ್ಲ. ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಂಸ್ಥೆ ಇದು ಎಂದು ಹೊಗಳಿದರು. ಇದನ್ನೂ ಓದಿ: ಮೋದಿ, ಅಮಿತ್ ಶಾ ಕಂಡ್ರೆ ನಮಗಲ್ಲ, ಡಿಕೆಶಿಗೆ ಭಯ: ಆರ್. ಅಶೋಕ್

    ಚಿತ್ರಕಲೆ ಎನ್ನುವುದು ಸರಸ್ವತಿ ವಾಹನ ಪರಮಹಂಸ ಇದ್ದ ಹಾಗೆ. ಈ ಸಂಸ್ಥೆ ಹಿಮಾಲಯದ ಎತ್ತರಕ್ಕೆ ಬೆಳೆಯಬೇಕು. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಕರ್ನಾಟಕ ಸೇರಿದಂತೆ ಈ ವರ್ಷ 4-5 ಭಾಗಗಳಲ್ಲಿ ಚಿತ್ರ ಸಂತೆ ಮಾಡಬೇಕು. ಇದಕ್ಕೆ ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದು ತಿಳಿಸಿದರು.

    ಈ ಚಿತ್ರಸಂತೆಯನ್ನು ರಾಷ್ಟ್ರೀಯ ಮಟ್ಟಕ್ಕೆ ತಗೆದುಕೊಂಡು ಹೋಗಬೇಕು. ಬ್ರ್ಯಾಂಡ್ ಬೆಂಗಳೂರನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುವುದರಲ್ಲಿ ಚಿತ್ರಕಲಾ ಪರಿಷತ್ತ್ಗೆ ತೆಗೆದುಕೊಂಡು ಹೋಗಬೇಕು. ಮುಂದಿನ ವರ್ಷದಿಂದ ಶನಿವಾರ ಮತ್ತು ಭಾನುವಾರ 2 ದಿನ ಚಿತ್ರಸಂತೆ ನಡೆಸುವಂತೆ ಸಿಎಂ ಆಯೋಜಕರಿಗೆ ಸಲಹೆ ನೀಡಿದರು. ಇದನ್ನೂ ಓದಿ: ಮುಂಬೈ ದಾಳಿ ವೇಳೆ ನಾನೂ ಹೋಟೆಲ್‌ನಲ್ಲಿದ್ದೆ: ಪಾರಾದ ಥ್ರಿಲ್ಲಿಂಗ್ ಘಟನೆ ವಿವರಿಸಿದ ಅದಾನಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜನಾಭಿಪ್ರಾಯಕ್ಕಾಗಿ ಬಿಜೆಪಿ ಅದರ ಅಂಗ ಸಂಸ್ಥೆಗಳಿಂದ ಧರ್ಮಾಧಾರಿತ ರಾಜಕಾರಣ: ಎಚ್.ಸಿ.ಮಹಾದೇವಪ್ಪ

    ಜನಾಭಿಪ್ರಾಯಕ್ಕಾಗಿ ಬಿಜೆಪಿ ಅದರ ಅಂಗ ಸಂಸ್ಥೆಗಳಿಂದ ಧರ್ಮಾಧಾರಿತ ರಾಜಕಾರಣ: ಎಚ್.ಸಿ.ಮಹಾದೇವಪ್ಪ

    ಬೆಂಗಳೂರು: ಶೂದ್ರ ಸಮಾಜ ಸಂಘಟನಾತ್ಮಕವಾಗಿ ಹೋರಾಟವನ್ನು ನಡೆಸಬೇಕು. ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ಮುಂದಿಟ್ಟುಕೊಂಡು ಕೋಮುವಾದ ಮತ್ತು ಜಾತಿವಾದವನ್ನು ಹಿಮ್ಮೆಟ್ಟಿಸಿ ಸಮೃದ್ಧ ಭಾರತವನ್ನು ನಿರ್ಮಾಣ ಮಾಡಬೇಕು ಎಂದು ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.

    ಕರ್ನಾಟಕ ರಾಜ್ಯ ಅತೀ ಹಿಂದುಳಿದ ಜಾಗೃತ ವೇದಿಕೆ ವತಿಯಿಂದ ಬೆಂಗಳೂರಿನ ಚಿತ್ರಕಲಾ ಪರಿಷತ್‍ನಲ್ಲಿ ನಡೆದ ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಾಭಿಪ್ರಾಯವನ್ನು ಪಡೆಯಲು ನಮ್ಮ ದೇಶದ ಬಹುತ್ವ ಮತ್ತು ಸೌಹಾರ್ದತೆಯನ್ನು ನಾಶ ಮಾಡಲು ಧರ್ಮಾಧಾರಿತ ರಾಜಕಾರಣವನ್ನು ಬಿಜೆಪಿ ಮತ್ತು ಅದರ ಪಳೆಯುಳಿಕೆಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

    HC Mahadevappa

    ಅಂಬೇಡ್ಕರ್ ಜಯಂತಿ ರಾಜಕೀಯ ಹುಟ್ಟುಹಬ್ಬದ ಆಚರಣೆಯಲ್ಲ. ಭಾರತದಲ್ಲಿ ಪ್ರತಿ ಹೋರಾಟಗಳನ್ನು ನಿರೂಪಿಸುವಂತಹ ಅತ್ಯಂತ ಮಹತ್ವದ ದಿನ. 21ನೇ ಶತಮಾನ ಸವಾಲಿನಿಂದ ಕೂಡಿದೆ. ಈ ಸವಾಲು, ಭಾಷೆ, ಧರ್ಮ, ಜಾತಿಗೆ ಸೀಮಿತವಾಗಿಲ್ಲ. ಇಡೀ ಸಂವಿಧಾನಕ್ಕೆ ಸವಾಲು ಎಸೆಯುವಂತಹ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: SSLC ಮೌಲ್ಯಮಾಪನದಲ್ಲಿ ಲೋಪ ಮಾಡಿದ್ರೆ ಶಿಕ್ಷಕರು ಕಪ್ಪು ಪಟ್ಟಿಗೆ

    ಸಂವಿಧಾನದ ಸುಖೀ ರಾಜ್ಯ ಮತ್ತು ಮೌಲ್ಯ, ಧರ್ಮ, ಜಾತಿ, ಪ್ರದೇಶಗಳಲ್ಲಿ ತಾರಾತಮ್ಯ ಮಾಡದೇ ಎಲ್ಲರಿಗೂ ಸಮಾನತೆ ಮತ್ತು ಸಮನಾವಕಾಶಗಳನ್ನು ಒದಗಿಸಿಕೊಟ್ಟು ಸಮ ಸಮಾಜವನ್ನು ನಿರ್ಮಾಣ ಮಾಡಬೇಕು. ಸಂವಿಧಾನ ಉಳಿದರೆ ನಾವು ಉಳಿಯುತ್ತೇವೆ. ನಾವು ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಹೀಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಿ ಸಂವಿಧಾನದ ರಕ್ಷಣೆಯನ್ನು ಮಾಡಬೇಕು ಎಂದು ಹೇಳಿದರು. ಇದೇ ವೇಳೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಲೇಖಕ ಚಂದ್ರಶೇಖರ್ ಕಂಬಾರ, ಮಠಾಧೀಶರು, ಧರ್ಮಗುರುಗಳು, ಸಾಹಿತಿಗಳನ್ನು ಕರ್ನಾಟಕ ರಾಜ್ಯ ಅತೀ ಹಿಂದೂಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್ ಅವರು ಸನ್ಮಾನಿಸಿದರು. ಇದನ್ನೂ ಓದಿ: ಮಾಜಿ ಪ್ರೇಯಸಿ ಆಲಿಯಾ ವೈವಾಹಿಕ ಜೀವನಕ್ಕೆ ಶುಭ ಹಾರೈಸಿದ ಸಿದ್ಧಾರ್ಥ್ ಮಲ್ಹೋತ್ರಾ

    ಈ ಕಾರ್ಯಕ್ರಮದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಲೇಖಕ ಚಂದ್ರಶೇಖರ್ ಕಂಬಾರ, ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಮ್. ಸಿ. ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ ನಾಗರಾಜ್, ಖಜಾಂಚಿ ಮಂಜುನಾಥ್, ಪ್ರಜಾವಾಣಿ ದಿನ ಪತ್ರಿಕೆಯ ಸಂಪಾದಕರಾದ ರವೀಂದ್ರ ಭಟ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಸೇರಿದಂತೆ ಮಠಾಧೀಶರು, ಧರ್ಮಗುರುಗಳು, ಸಾಹಿತಿಗಳು, ವಕೀಲರು, ಹಿಂದುಳಿದ ಸಮುದಾಯಗಳ ಮುಖಂಡರು ಹಾಗೂ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಬೆಂಗಳೂರು ವಿವಿಯ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನಟರಾಜ್ ಹುಳಿಯಾರ್ ಅವರು ಉಪನ್ಯಾಸ ನೀಡಿದರು.