Tag: chiyan vikram

  • ತಮಿಳಿನತ್ತ ಕನ್ನಡದ ನಟ- ಚಿಯಾನ್ ವಿಕ್ರಮ್ ಸಿನಿಮಾದಲ್ಲಿ ರಮೇಶ್ ಇಂದಿರಾ

    ತಮಿಳಿನತ್ತ ಕನ್ನಡದ ನಟ- ಚಿಯಾನ್ ವಿಕ್ರಮ್ ಸಿನಿಮಾದಲ್ಲಿ ರಮೇಶ್ ಇಂದಿರಾ

    ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradaache Ello) ಸಿನಿಮಾದಲ್ಲಿ ‘ಲವ್ ಯೂ ಮನು’ ಎನ್ನುತ್ತಾ ಭಯ ಹುಟ್ಟಿಸಿದ್ದ ರಮೇಶ್ ಇಂದಿರಾ (Ramesh Indira) ಇದೀಗ ತಮಿಳಿನತ್ತ ಮುಖ ಮಾಡಿದ್ದಾರೆ. ಸ್ಟಾರ್ ನಟ ಚಿಯಾನ್ ವಿಕ್ರಮ್ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಇದನ್ನೂ ಓದಿ:ಕೆಜಿಎಫ್ ಕ್ವೀನ್ ಬ್ಯಾಕ್ ಟು ರಾಕ್- ಫ್ಯಾನ್ಸ್‌ಗೆ ಗುಡ್ ನ್ಯೂಸ್

    ನಿರ್ದೇಶಕನಾಗಿ ಸೈ ಎನಿಸಿಕೊಂಡಿದ್ದ ರಮೇಶ್ ಇಂದಿರಾ ಹಿರಿತೆರೆಯಲ್ಲಿ ಖಳನಟನಾಗಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಡಾಲಿ ನಟನೆಯ ‘ಕೋಟಿ’ ಸಿನಿಮಾದಲ್ಲೂ ಅವರು ನಟಿಸಿದ್ದರು. ಈಗ ಕಾಲಿವುಡ್‌ನಲ್ಲಿ ಅವರಿಗೆ ಬಂಪರ್ ಅವಕಾಶ ಸಿಕ್ಕಿದೆ. ಸಿಕ್ಕಿರೋ ಅವಕಾಶವನ್ನು ಅವರು ಸದುಪಯೋಗಪಡಿಸಿಕೊಂಡಿದ್ದಾರೆ. ಚಿಯಾನ್ ವಿಕ್ರಮ್ ನಟನೆಯ ‘ವೀರ ಧೀರ ಶೂರನ್’ ಸಿನಿಮಾದಲ್ಲಿ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಸದ್ಯ ಈಗಾಗಲೇ ರಿಲೀಸ್ ಆಗಿರೋ ಚಿತ್ರದ ಟ್ರೈಲರ್‌ನಲ್ಲಿ ರಮೇಶ್ ಇಂದಿರಾ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಪಾತ್ರ ಹೇಗಿದೆ ಎಂಬುದಕ್ಕೆ ಮಾ.27ರಂದು ಉತ್ತರ ಸಿಗಲಿದೆ. ಚಿಯಾನ್ ವಿಕ್ರಮ್ ಜೊತೆ ರಮೇಶ್ ತೆರೆಹಂಚಿಕೊಂಡಿದ್ದಾರೆ ಎಂದರೆ ಇಲ್ಲಿನೋ ಹೊಸತನವಿದೆ ಎಂಬುದು ಅಭಿಮಾನಿಗಳ ಲೆಕ್ಕಚಾರ. ಹಾಗಾಗಿ ಸಿನಿಮಾ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.

    ವಿಕ್ರಮ್ ನಟನೆಯ ‘ವೀರ ಧೀರ ಶೂರನ್’ ಚಿತ್ರವು ಮಾ.27ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ವಿಕ್ರಮ್‌ಗೆ ನಾಯಕಿಯಾಗಿ ದುಶ್ರಾ ವಿಜಯನ್ ನಟಿಸಿದ್ದಾರೆ.

  • ರಜನಿಕಾಂತ್‌ಗೆ ವಿಲನ್‌ ಆಗಿ ಅಬ್ಬರಿಸಲಿದ್ದಾರೆ ಚಿಯಾನ್ ವಿಕ್ರಮ್

    ರಜನಿಕಾಂತ್‌ಗೆ ವಿಲನ್‌ ಆಗಿ ಅಬ್ಬರಿಸಲಿದ್ದಾರೆ ಚಿಯಾನ್ ವಿಕ್ರಮ್

    ‘ಪೊನ್ನಿಯನ್ ಸೆಲ್ವನ್ 2′ (Ponniyin Selvan 2) ಸಿನಿಮಾ ಸಕ್ಸಸ್ ನಂತರ ಚಿಯಾನ್ ವಿಕ್ರಮ್‌ಗೆ (Chiyan Vikram) ಬೇಡಿಕೆ ಹೆಚ್ಚಾಗಿದೆ. ಇದೀಗ ವಿಕ್ರಮ್‌ಗೆ ಮತ್ತೊಂದು ಬಂಪರ್ ಅವಕಾಶವೊಂದು ಸಿಕ್ಕಿದೆ. ರಜನಿಕಾಂತ್‌ಗೆ (Rajanikanth) ಮುಂದೆ ಚಿಯಾನ್ ವಿಕ್ರಮ್ ನಟಿಸುವ ಅವಕಾಶ ಬಾಚಿಕೊಂಡಿದ್ದಾರೆ. ಅದಕ್ಕಾಗಿ ಭರ್ಜರಿ ಸಂಭಾವನೆ ಕೂಡ ಪಡೆದುಕೊಂಡಿದ್ದಾರೆ.

    ಎಂತಹ ಸೂಪರ್ ಸ್ಟಾರ್ ಆಗಿದ್ರೂ ವಿಲನ್ ಖಡಕ್ ಆಗಿದ್ರೇನೇ ಹೀರೋಗೂ ಒಂದು ತೂಕ. ಕಾಲಿವುಡ್ ಸೂಪರ್ ಸ್ಟಾರ್ ತಲೈವಾ ಮುಂದೆ ಅಬ್ಬರಿಸಲು ಸ್ಟಾರ್ ನಟನಿಗೆ ಮಣೆ ಹಾಕಿದ್ದಾರೆ. ರಜನಿ 170ನೇ ಚಿತ್ರಕ್ಕೆ ಚಿಯಾನ್ ವಿಕ್ರಮ್ ಎಂಟ್ರಿ ಕೊಡುತ್ತಿದ್ದಾರೆ. ತಲೈವಾಗೆ ವಿಲನ್ ಆಗಿ ಖಡಕ್ ಆಗಿ ನಟಿಸಲಿದ್ದಾರೆ.

    ವಿಕ್ರಮ್ ಅವರು ಕಾಲಿವುಡ್‌ನ ಬೇಡಿಕೆಯ ಹೀರೋ. ವೃತ್ತಿ ಜೀವನದಲ್ಲಿ ಅವರು ಹಲವು ಡಿಫರೆಂಟ್ ರೋಲ್‌ಗಳನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹಾಗಾಗಿ ವಿಲನ್ (Villain) ಪಾತ್ರ ಮಾಡಲು ತಲೈವಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದಕ್ಕಾಗಿ 50 ಕೋಟಿ ರೂಪಾಯಿ ಪೇಮೆಂಟ್ ಪಡೆದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಆರ್‌ಸಿಬಿ ಗೆಲುವಿಗೆ ಸಂಭ್ರಮಿಸಿದ ರಿಷಬ್ ಶೆಟ್ಟಿ ಪುತ್ರಿ

    ‘ತಲೈವರ್ 170’ನೇ ಚಿತ್ರಕ್ಕೆ ಟಿಜಿ ಜ್ಞಾನವೇಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ (Lyca Productions)  ಬಂಡವಾಳ ಹೂಡುತ್ತಿದೆ. ತಮಿಳುನಾಡಿನಲ್ಲಿ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಲೈಕಾ ಈಗ ರಜನಿಕಾಂತ್ 170ನೇ ಚಿತ್ರ ನಿರ್ಮಾಣ¨ ಮಾಡ್ತಿದ್ದಾರೆ.

  • ‘ತಂಗಲಾನ್’ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯ- ಶೂಟಿಂಗ್ ಸ್ಥಗಿತ

    ‘ತಂಗಲಾನ್’ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯ- ಶೂಟಿಂಗ್ ಸ್ಥಗಿತ

    ಕ್ಷಿಣ ಭಾರತದ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyaan Vikram) ಅವರು ‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan 2) ಸಿನಿಮಾ ಪ್ರಚಾರ ಮುಗಿಸಿ ಮತ್ತೆ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಹಾಜರಾಗಿದ್ದರು. ‘ತಂಗಲಾನ್’ (Thangalaan Film) ರಿಹರ್ಸಲ್ ವೇಳೆ ಬಿದ್ದು ವಿಕ್ರಮ್ ಪಕ್ಕೆಲುಬಿಗೆ ಪೆಟ್ಟಾಗಿದೆ. ಕೂಡಲೇ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

    ‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯಗಳಾಗಿರೋದ್ರಿಂದ ಶೂಟಿಂಗ್ ನಿಲ್ಲಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕೆ ಮತ್ತೆ ಶೂಟಿಂಗ್ ಶುರುವಾಗುತ್ತದೆ. ಈ ಹಿಂದೆ ಕೂಡ ಇದೇ ಸಿನಿಮಾ ಸೆಟ್‌ನಲ್ಲಿ ವಿಕ್ರಮ್‌ಗೆ ಪೆಟ್ಟಾಗಿ ಕೆಲವು ದಿನಗಳ ಕಾಲ ಶೂಟಿಂಗ್ ನಿಂತಿತ್ತು. ಇದರಿಂದ ವಿಕ್ರಮ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಕ್ರಮ್ ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಪ್ರಸ್ತುತ ವಿಕ್ರಮ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಹೇಳಲಾಗುತ್ತಿದೆ.

    ಕೋಲಾರ ಚಿನ್ನದ ಗಣಿಯ ಕಾರ್ಮಿಕರ ಸುತ್ತಾ ‘ತಂಗಲಾನ್’ ಸಿನಿಮಾ ಮೂಡಿ ಬರ್ತಿದೆ. ನಿರ್ದೇಶಕ ಪಾ.ರಂಜಿತ್ ಕೋಲಾರದಲ್ಲಿ ನಡೆದ ನಿಜವಾದ ಘಟನೆಗಳನ್ನು ಆಧರಿಸಿ, ಆ ಬಗ್ಗೆ ಸಂಶೋಧನೆ ನಡೆಸಿ ಸಿನಿಮಾ ಮಾಡುತ್ತಿರುವುದಾಗಿ ಹೇಳಿದ್ದಾರೆ. ನೂರು ವರ್ಷಗಳ ಹಿಂದೆ ಅಲ್ಲಿನ ಗಣಿ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು ಎನ್ನುವುದರ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ.

  • ‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಬಿಡುಗಡೆ

    ‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಬಿಡುಗಡೆ

    ಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಲೈಕಾ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ‘ಪೊನ್ನಿಯಿನ್ ಸೆಲ್ವನ್-2’ (Ponniyin Selvan 2) ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿರುವುದನ್ನು ಖಾತ್ರಿ ಪಡಿಸಿದೆ. ತಮಿಳು ಚಿತ್ರರಂಗದ ಬಿಗ್ ಪ್ರಾಜೆಕ್ಟ್ ಹಾಗೂ ಸ್ಟಾರ್ ತಾರಾಗಣವನ್ನೊಳಗೊಂಡ ‘ಪೊನ್ನಿಯಿನ್ ಸೆಲ್ವನ್-2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದ್ದು, ಭಾರತದಾದ್ಯಂತ ಚಿತ್ರದ ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ.

    ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ. ಕಾರ್ತಿ (Karthi), ಐಶ್ವರ್ಯಾ ರೈ (Aishwarya Rai), ಚಿಯಾನ್ ವಿಕ್ರಮ್ (Chiyan Vikram), ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ರಂತಹ ದಿಗ್ಗಜ ಕಲಾವಿದರ ಸಮಾಗಮವಿರುವ ಈ ಚಿತ್ರ ಪ್ರೇಕ್ಷಕ ಮಹಾಶಯರಿಂದಲೂ ಬಹುಪರಾಕ್ ಪಡೆದುಕೊಂಡಿತ್ತು. ಸೀಕ್ವಲ್ 2 ಏಪ್ರಿಲ್ 28ರಂದು ಮನರಂಜನೆ ನೀಡಲು ಸಜ್ಜಾಗಿದೆ. ಪ್ಯಾನ್ ಇಂಡಿಯಾ ಚಿತ್ರದ ತಮಿಳು ಹಾಗೂ ಹಿಂದಿ ಸೀಕ್ವೆಲ್ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ:ಥೈಲ್ಯಾಂಡ್‌ನಲ್ಲಿ ನಟಿ ಸೋನು ಜೊತೆ ನೇಹಾ ಗೌಡ ಮೋಜು- ಮಸ್ತಿ

    ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರಖ್ಯಾತಿ ಗಳಿಸಿರುವ ಲೈಕಾ ಸ್ಟುಡಿಯೋ ತಮಿಳು ಚಿತ್ರರಂಗದ ಬಿಗ್ ಬಜೆಟ್ ಸಿನಿಮಾಗಳಾದ ‘ಐ’, ‘ರೋಬೋಟ್ 2.0’ ಹಾಗೂ ‘ಪೊನ್ನಿಯಿನ್ ಸೆಲ್ವನ್- 1’ ನಿರ್ಮಾಣ ಮಾಡಿದೆ. ಇದೀಗ ‘ಪೊನ್ನಿಯಿನ್ ಸೆಲ್ವನ್- 2’ ಕೂಡ ಇದೇ ಸಂಸ್ಥೆಯಡಿ ನಿರ್ಮಾಣವಾಗಿ ತೆರೆ ಕಾಣುತ್ತಿದೆ. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ, ರವಿವರ್ಮನ್ ಛಾಯಾಗ್ರಹಣ, ಶ್ರೀಕರ್ ಪ್ರಸಾದ್ ಸಂಕಲನ ಚಿತ್ರಕ್ಕಿದೆ. ಸಾಕಷ್ಟು ನಿರೀಕ್ಷೆ ಕ್ರಿಯೇಟ್ ಮಾಡಿರುವ ‘ಪೊನ್ನಿಯಿನ್ ಸೆಲ್ವನ್- 2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಶ್ಮಿಕಾ ಮಂದಣ್ಣ ಜೊತೆ ಚಿಯಾನ್ ವಿಕ್ರಮ್ ರೊಮ್ಯಾನ್ಸ್

    ರಶ್ಮಿಕಾ ಮಂದಣ್ಣ ಜೊತೆ ಚಿಯಾನ್ ವಿಕ್ರಮ್ ರೊಮ್ಯಾನ್ಸ್

    ನ್ನಡತಿ ರಶ್ಮಿಕಾ ಮಂದಣ್ಣ ಲಕ್ಕಿ ನಟಿ, ಸಾಕಷ್ಟು ಬಿಗ್ ಸ್ಟಾರ್ಸ್‌ ಜತೆ ನಟಿಸಲು ಅವಕಾಶಗಳು ಅರಸಿ ಬರುತ್ತಿದೆ. ರಣ್‌ಬೀರ್ ಕಪೂರ್, ಅಲ್ಲು ಅರ್ಜುನ್, ದಳಪತಿ ವಿಜಯ್, ಮಹೇಶ್ ಬಾಬು ನಂತರ ಈಗ ಕಾಲಿವುಡ್ ಸೂಪರ್ ಸ್ಟಾರ್ ಚಿಯಾನ್ ವಿಕ್ರಮ್‌ಗೆ ನಾಯಕಿಯಾಗಿ ನಟಿಸಲು ರಶ್ಮಿಕಾ ಮಂದಣ್ಣಗೆ ಬುಲಾವ್ ಬಂದಿದೆ.

    ಕಾಲಿವುಡ್ ನಟ ಚಿಯಾನ್ ವಿಕ್ರಮ್ ಮುಂದಿನ 61ನೇ ಸಿನಿಮಾಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರಂತೆ. ಕಬಾಲಿ, ಕಾಲಾ ಖ್ಯಾತಿಯ ನಿರ್ದೇಶಕ ಪಾ ರಂಜಿತ್ ನಿರ್ದೇಶನದ ಈ ಚಿತ್ರದಲ್ಲಿ ಚಿಯಾನ್ ವಿಕ್ರಮ್ ಮತ್ತು ರಶ್ಮಿಕಾ ಜೋಡಿಯಾಗಿ ಮಿಂಚಲಿದ್ದಾರೆ. ಲಕ್ಕಿ ಹೀರೋಯಿನ್ ರಶ್ಮಿಕಾ, ವಿಕ್ರಮ್‌ಗೆ ನಾಯಕಿಯಾಗಿ ನಟಿಸೋದು ಸೂಕ್ತ ಎನಿಸಿ ಚಿತ್ರತಂಡ ಈ ಬಿಗ್ ಆಫರ್ ಅನ್ನು `ಪುಷ್ಪ’ ಬ್ಯೂಟಿಗೆ ಕೊಡಲಾಗಿದೆಯಂತೆ.ಇದನ್ನೂ ಓದಿ:ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಮತ್ತೊಂದು ಹಾಡು ರಿಲೀಸ್

    ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದ್ದು, ಭಿನ್ನ ಕಥೆ ಮತ್ತು ಪಾತ್ರದ ಮೂಲಕ ರಂಜಿಸಲು ಚಿಯಾನ್ ವಿಕ್ರಮ್ ರೆಡಿಯಾಗಿದ್ದಾರೆ. ಸದ್ಯದಲ್ಲೇ ಈ ಕುರಿತು ಅಧಿಕೃತ ಅಪ್‌ಡೇಟ್, ಚಿತ್ರತಂಡದಿಂದ ಹೊರ ಬೀಳಲಿದೆ.

    Live Tv
    [brid partner=56869869 player=32851 video=960834 autoplay=true]