Tag: chocolate

  • ಚಾಕೊಲೇಟ್‌ಗಾಗಿ ಹಣ ಕೇಳಿದ್ದಕ್ಕೆ 4 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದ ತಂದೆ

    ಚಾಕೊಲೇಟ್‌ಗಾಗಿ ಹಣ ಕೇಳಿದ್ದಕ್ಕೆ 4 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದ ತಂದೆ

    ಮುಂಬೈ: ಚಾಕೊಲೇಟ್‌ಗಾಗಿ ಹಣ ಕೇಳಿದ್ದಕ್ಕೆ ಕುಡಿದ ಮತ್ತಿನಲ್ಲಿ 4 ವರ್ಷದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ (Maharashtra) ಲಾತೂರ್ (Latur) ಜಿಲ್ಲೆಯ ಉದ್ವೀರ್ ತಾಲೂಕಿನ ಭೀಮಾ ತಾಂಡದಲ್ಲಿ ನಡೆದಿದೆ.

    ಆರೋಪಿಯನ್ನು ಬಾಲಾಜಿ ರಾಥೋಡ್ ಹಾಗೂ ಮೃತ ಬಾಲಕಿಯನ್ನು ಆರುಷಿ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿದ್ದರಾಮಯ್ಯ

    ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿ ಬಾಲಾಜಿಗೆ ಕುಡಿತದ ಚಟವಿತ್ತು. ಹೀಗಾಗಿ ಪ್ರತಿದಿನ ಕುಡಿದು ಬಂದು ಹೆಂಡತಿಯೊಂದಿಗೆ ಜಗಳವಾಡುತ್ತಿದ್ದ. ಈತನ ಜಗಳದಿಂದ ಬೇಸತ್ತು ಮನೆ ಬಿಟ್ಟು ಹೋದ ಪತ್ನಿ, ತನ್ನ ತಂದೆಯೊಂದಿಗೆ ಇದ್ದಳು. ಕೊಲೆಯಾದ ದಿನ ಮಧ್ಯಾಹ್ನ ಮೃತ ಆರುಷಿ, ಚಾಕೊಲೇಟ್ ತೆಗೆದುಕೊಳ್ಳಲು ಹಣ ಕೇಳಿದ್ದಳು. ಅದೇ ಕೋಪದಿಂದ ಸೀರೆಯಿಂದ ಬಳಸಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

    ಈ ಕುರಿತು ಆರೋಪಿಯ ಪತ್ನಿ ವರ್ಷಾ ದೂರು ದಾಖಲಿಸಿದ್ದು, ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ಸದ್ಯ ದೂರಿನ ಮೇರೆಗೆ ಎಫ್‌ಐಆರ್ (FIR) ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: 60 ವರ್ಷದಿಂದ ಉಳುಮೆ ಮಾಡ್ತಿದ್ದ ರೈತನಿಗೆ ಶಾಕ್ – ತಹಶೀಲ್ದಾರ್ ಸಹಿ ನಕಲಿಸಿ, 8 ಎಕರೆ ಬೇರೆಯವ್ರ ಹೆಸರಿಗೆ ವರ್ಗ

  • ಪೋಷಕರೇ ಹುಷಾರ್-‌ ಅವಧಿ ಮೀರಿದ ಚಾಕ್ಲೇಟ್‌ ತಿಂದು ರಕ್ತವಾಂತಿ ಮಾಡಿದ ಕಂದಮ್ಮ!

    ಪೋಷಕರೇ ಹುಷಾರ್-‌ ಅವಧಿ ಮೀರಿದ ಚಾಕ್ಲೇಟ್‌ ತಿಂದು ರಕ್ತವಾಂತಿ ಮಾಡಿದ ಕಂದಮ್ಮ!

    ಚಂಡೀಗಢ: ಮಕ್ಕಳಿಗೆ ಚಾಕ್ಲೇಟ್‌ ಕೊಡುವ ಮೊದಲು ಪೋಷಕರು ಹುಷಾರಾಗಿರಬೇಕು. ಯಾಕೆಂದರೆ ಅವಧಿ ಮುಗಿದ ಚಾಕ್ಲೇಟ್‌ ತಿಂದು ಪುಟ್ಟ ಕಂದಮ್ಮವೊಂದು ಆಸ್ಪತ್ರೆಗೆ ದಾಖಲಾದ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಈ ಘಟನೆ ಪಂಜಾಬ್‌ನ ಪಟಿಯಾಲದಲ್ಲಿ ನಡೆದಿದೆ. ಲೂಧಿಯಾನ ಮೂಲದ ಬಾಲಕಿ ತನ್ನ ಪೋಷಕರೊಂದಿಗೆ ಪಟಿಯಾಲಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಳು. ಈ ವೇಳೆ ಸಂಬಂಧಿ ವಿಕ್ಕಿ ಗೆಹ್ಲೋಟ್, ಸ್ಥಳೀಯ ಕಿರಾಣಿ ಅಂಗಡಿಯಿಂದ ಬಾಲಕಿಗೆ ಚಾಕ್ಲೇಟ್‌ ಬಾಕ್ಸ್ ಖರೀದಿಸಿದ್ದರು. ಬಳಿಕ ಅದನ್ನು ಬಾಲಕಿಗೆ ನೀಡಿದ್ದರು.

    ಇತ್ತ ಮನೆಗೆ ಮರಳಿದ ಬಳಿಕ ಚಾಕ್ಲೇಟ್ ಸೇವಿಸಿದ ಬಾಲಕಿ ಬಾಯಿಂದ ರಕ್ತಸ್ರಾವವಾಗತೊಡಗಿದೆ. ಅಲ್ಲದೇ ಆಕೆಯ ಸ್ಥಿತಿ ಹದಗೆಟ್ಟಿದ್ದರಿಂದ ಆಕೆಯನ್ನು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಯಿತು. ಬಾಲಕಿಯ ವೈದ್ಯಕೀಯ ಪರೀಕ್ಷೆಯಲ್ಲಿ ವಿಷಕಾರಿ ಪದಾರ್ಥ ಸೇವಿಸಿ ಅಸ್ವಸ್ಥಳಾಗಿರುವುದು ದೃಢಪಟ್ಟಿದೆ. ಇದನ್ನೂ ಓದಿ: ಮೋದಿಗೆ ಚೊಂಬು ತೋರಿಸಲು ಬಂದ ನಲಪಾಡ್ ಪೊಲೀಸರ ವಶಕ್ಕೆ!

    ನಂತರ ಬಾಲಕಿಯ ಮನೆಯವರು ಪೊಲೀಸ್ ಹಾಗೂ ರಾಜ್ಯ ಆರೋಗ್ಯ ಇಲಾಖೆಗೆ ದೂರು ನೀಡಿದ್ದಾರೆ. ಆರೋಗ್ಯ ಅಧಿಕಾರಿಗಳ ತಂಡ ದೂರುದಾರರೊಂದಿಗೆ ಕಿರಾಣಿ ಅಂಗಡಿಗೆ ಧಾವಿಸಿ ಮಾದರಿಗಳನ್ನು ಸಂಗ್ರಹಿಸಿದರು. ಅಂಗಡಿಯಲ್ಲಿ ಅವಧಿ ಮೀರಿದ ತಿನಿಸುಗಳನ್ನು ಮಾರಾಟ ಮಾಡಿರುವುದನ್ನು ಆರೋಗ್ಯ ಇಲಾಖೆ ದೃಢಪಡಿಸಿದೆ. ಬಳಿಕ ಅಂಗಡಿಯಿಂದ ಅವಧಿ ಮೀರಿದ ಇತರೆ ತಿಂಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

  • ಚಾಕ್ಲೇಟ್ ಅಂತಾ ಮಾತ್ರೆ ಸೇವಿಸಿದ್ದ ಕಂದಮ್ಮ ದುರ್ಮರಣ

    ಚಾಕ್ಲೇಟ್ ಅಂತಾ ಮಾತ್ರೆ ಸೇವಿಸಿದ್ದ ಕಂದಮ್ಮ ದುರ್ಮರಣ

    ಚಿತ್ರದುರ್ಗ: ಚಾಕ್ಲೇಟ್ (Chocolate) ‌ಎಂದು ಭಾವಿಸಿ ಮಾತ್ರೆ ಸೇವಿಸಿದ್ದ ಮಗು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ‌‌ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ.

    ಕಳೆದ ನಾಲ್ಕು‌ ದಿನಗಳ ಹಿಂದೆ ಕಡಬನಕಟ್ಟೆ ಗ್ರಾಮದ ವಸಂತ್ ಕುಮಾರ್ ಹಾಗೂ ಪವಿತ್ರ ದಂಪತಿಯ ಪುತ್ರ ಹೃತ್ವಿಕ್(4) ಮನೆಯಲ್ಲಿದ್ದ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದನು. ಇದನ್ನೂ ಓದಿ: ನಮ್ಮ ಸರ್ಕಾರ ಉಗ್ರರನ್ನು ಹಿಡಿದು ಜೈಲಿಗೆ ಕಳಿಸುವ ಕೆಲಸ ಮಾಡುತ್ತೆ: ರಾಮಲಿಂಗಾ ರೆಡ್ಡಿ

    ಬಾಲಕ ಅಸ್ವಸ್ಥಗೊಂಡ ವಿಚಾರ ಗೊತ್ತಾಗುತ್ತಿದ್ದಂತೆಯೇ ಪೋಷಕರು ಆತನನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಕಳೆದ ನಾಲ್ಕು ದಿನಗಳಿಂದ‌ ಚಿಕಿತ್ಸೆ ನೀಡಲಾಗಿದ್ದು, ಬಾಲಕನ ಜೀವ ಉಳಿಸಲು ವೈದ್ಯರು ಶ್ರಮಪಟ್ಟಿದ್ದರು. ಆದರೆ ಚಿಕಿತ್ಸೆ ಫಲಿಸದೇ‌ ಇಂದು ಬಾಲಕ ಕೊನೆಯುಸಿರೆಳೆದಿದ್ದಾನೆ.

    ಮೃತ ಮಗುವಿನ ತಾಯಿ ಪವಿತ್ರಾಗೆ ಈ ಹಿಂದೆ 3 ಶಸ್ತ್ರಚಿಕಿತ್ಸೆಗಳಾಗಿದ್ದು,ಆಕೆಗೆ ವೈದ್ಯರು ನೀಡಿದ್ದ ಮಾತ್ರೆಗಳನ್ನು ಮನೆಯಲ್ಲಿಟ್ಟಿದ್ದರು. ಆದರೆ ಚಾಕ್ಲೇಟ್ ಎಂದು ಭಾವಿಸಿದ್ದ ಮಗು ಆ ಮಾತ್ರೆಗಳನ್ನು ಸೇವಿಸಿತ್ತು.‌ ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದೆ. ಇದರಿಂದಾಗಿ ಮಗುವಿನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಪ್ರಕರಣ ತುರುವನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಚಾಕ್ಲೇಟ್ ಅಂತಾ ಪ್ಯಾಂಟ್ ಬಟನ್ ನುಂಗಿದ್ದ 2 ತಿಂಗಳ ಕಂದಮ್ಮ- ಮುಂದೇನಾಯ್ತು..?

    ಚಾಕ್ಲೇಟ್ ಅಂತಾ ಪ್ಯಾಂಟ್ ಬಟನ್ ನುಂಗಿದ್ದ 2 ತಿಂಗಳ ಕಂದಮ್ಮ- ಮುಂದೇನಾಯ್ತು..?

    ಕಾರವಾರ: ಅಕ್ಕ ಚಾಕ್ಲೇಟ್ ಎಂದು ಕೊಟ್ಟ ಪ್ಯಾಂಟ್ ಬಟನ್ ನುಂಗಿದ್ದ 2 ತಿಂಗಳ ಮಗು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

    ಉತ್ತರ ಕನ್ನಡ ಜಿಲ್ಲೆ ಭಟ್ಕಳ ನಗರದ ರಂಗೀಕಟ್ಟೆ ನಿವಾಸಿ ಪಾಲಿಷ್ ಕಮಲ ಕಿಶೋರ ಪುತ್ರಿ ಅಮೃತ (2 ತಿಂಗಳು) ಬಟನ್ ನುಂಗಿದ್ದ ಹಸುಳೆ. ಇದನ್ನೂ ಓದಿ: ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಬಹುದು ಆದರೆ ಫಸ್ಟ್ ಬೆಂಚ್ ಸಿಗಲ್ಲ: ಪರಮೇಶ್ವರ್

    2 ವರ್ಷದ ನರ್ಮತಾ ಆಟವಾಡುತ್ತಾ ಚಾಕ್ಲೇಟ್ ಎಂದು ಪ್ಯಾಂಟ್ ಬಟನ್ ಅನ್ನು ಅಮೃತಾಳಿಗೆ ಕೊಟ್ಟಿದ್ದಾಳೆ. ಅಂತೆಯೇ ಏನೂ ಅರಿಯದ ಮುಗ್ಧ ಕಂದಮ್ಮ ಅದನ್ನು ನುಂಗಿದೆ. ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಯಿತು.

    ಇತ್ತ ಉಸಿರಾಡಲು ಒದ್ದಾಡುತ್ತಿದ್ದ ಮಗುವನ್ನು ಪೋಷಕರು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರ ಯಶಸ್ವಿ ಚಿಕಿತ್ಸೆಯಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಇದನ್ನೂ ಓದಿ: ನಾನು ಜೈಲಿಗೆ ಬೇಕಾದ್ರೂ ಹೋಗ್ತೀನಿ ಆದ್ರೆ, ಕಾಂಗ್ರೆಸ್‍ಗೆ ಹೋಗಲ್ಲ: ಮುನಿರತ್ನ

    ಸರ್ಕಾರಿ ಆಸ್ಪತ್ರೆಯ ಇಎನ್‍ಟಿ ತಜ್ಞ ಡಾ. ಸತೀಶ್ ನೇತೃತ್ವದ ವೈದ್ಯರ ತಂಡದಿಂದ ಯಶಸ್ವಿ ಚಿಕಿತ್ಸೆ ನಡೆದಿದೆ. ಕೊಳವೆ ಮೂಲಕ ಬಟನ್ ಹೊರ ತೆಗೆದು ಹಸುಳೆಯ ಜೀವವನ್ನು ವೈದ್ಯರು ಉಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗಳೂರಲ್ಲಿ ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಡ್ರಗ್ಸ್ ಚಾಕ್ಲೇಟ್ ಮಾರಾಟ- ಇಬ್ಬರು ವಶಕ್ಕೆ

    ಮಂಗಳೂರಲ್ಲಿ ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಡ್ರಗ್ಸ್ ಚಾಕ್ಲೇಟ್ ಮಾರಾಟ- ಇಬ್ಬರು ವಶಕ್ಕೆ

    ಮಂಗಳೂರು: ಭಾರೀ ಪ್ರಮಾಣದ ಮತ್ತು ತರಿಸುವ ಡ್ರಗ್ಸ್ (Drugs) ಮಿಶ್ರಿತ ಒಂದು ಕ್ವಿಂಟಾಲ್ ಬಾಂಗ್ ಚಾಕ್ಲೇಟ್‍ಗಳನ್ನು (Chocolate) ಪೊಲೀಸರು (Police) ವಶಪಡಿಸಿಕೊಂಡ ಪ್ರಕರಣ ಮಂಗಳೂರಿನಲ್ಲಿ (Mangaluru) ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ (45) ಹಾಗೂ ಮಂಗಳೂರಿನ ಕಾರ್ ಸ್ಟ್ರೀಟ್ ನಿವಾಸಿ ಮನೋಹರ್ ಶೇಟ್ (49) ಪೊಲೀಸರು ವಶಕ್ಕೆ ಪಡೆದ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಕಾರ್ ಸ್ಟ್ರೀಟ್ ಹಾಗೂ ಹೈಲ್ಯಾಂಡ್ ಎಂಬಲ್ಲಿನ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಚಾಕ್ಲೇಟ್‍ಗಳು ಪತ್ತೆಯಾಗಿವೆ. ಇವುಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಮಾರಾಟ ಮಾಡಲಾಗುತ್ತಿತ್ತು. ಉತ್ತರ ಭಾರತದಿಂದ ಇವುಗಳನ್ನು ತರಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಾನಹಾನಿ ಕೇಸ್‌ನಲ್ಲಿ ಜೈಲು ಶಿಕ್ಷೆ – ಸುಪ್ರೀಂ ಕೋರ್ಟ್‌ನಲ್ಲೂ ರಾಹುಲ್ ಗಾಂಧಿಗೆ ಹಿನ್ನಡೆ

    ಮಹಾಶಕ್ತಿ ಮುನಕ್ಕಾ, ಬಮ್‍ಬಮ್ ಮುನೆಕ್ಕಾವಟಿ, ಪಾವರ್ ಮುನಕ್ಕಾವಟಿ ಹಾಗೂ ಆನಂದ ಚೂರ್ಣ ಹೆಸರಿನಲ್ಲಿ ಈ ಚಾಕ್ಲೇಟ್‍ಗಳು ಪತ್ತೆಯಾಗಿವೆ. ಒಂದು ಚಾಕ್ಲೇಟ್‍ಗೆ 30 ರೂ.ನಂತೆ ಮಾರಾಟ ಮಾಡಲಾಗುತ್ತಿತ್ತು. ಚಾಕ್ಲೇಟ್‍ಗೆ ಅಮಲು ಪದಾರ್ಥ ಬೆರೆಸಿರುವ ಬಗ್ಗೆ ತಿಳಿಯಲು ಸ್ಯಾಂಪಲ್‍ನ್ನು ಎಫ್‍ಎಸ್‍ಎಲ್‍ಗೆ ರವಾನೆ ಮಾಡಲಾಗಿದೆ. ಇವುಗಳಲ್ಲಿ ಗಾಂಜಾ ವಿಶ್ರಣವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ಸೇತುವೆ ಮೇಲೆ ಬೈಕ್ ಸವಾರನ ಹುಚ್ಚಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ – ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ – ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    ರಾಯಚೂರು: ಚಾಕೊಲೇಟ್ (Chocolate) ಆಮಿಷವೊಡ್ಡಿ 11 ವರ್ಷದ ಅಪ್ರಾಪ್ತ (Minor) ಬಾಲಕಿಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ (Rape) ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಆರ್‌ಹೆಚ್ ಕ್ಯಾಂಪ್‌ನಲ್ಲಿ ನಡೆದಿದೆ.

    ಸಪನ್ ಮಂಡಲ್ (52) ಅತ್ಯಾಚಾರ ಎಸಗಿರುವ ಆರೋಪಿ. ಈತ ಬಾಲಕಿಯ ಮನೆಯ ಪಕ್ಕದಲ್ಲೇ ವಾಸಿಸುತ್ತಿದ್ದು, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದಿದ್ದಾನೆ. ಬಳಿಕ ಆಕೆಗೆ ಸ್ಕೂಟರ್ ಕಲಿಸುವುದಾಗಿ ಗ್ರಾಮದ ಹೊರವಲಯಕ್ಕೆ ಕರೆದೊಯ್ದು ಜಮೀನಿನಲ್ಲಿ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿ ಕಣ್ಣೀರು ಹಾಕುತ್ತಾ ಮನೆಗೆ ಬಂದ ವೇಳೆ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಒಂಟಿ ಮಹಿಳೆ ಕೊಲೆ ಪ್ರಕರಣ – ಆರೋಪಿಯ ತಾಯಿಯಿಂದ ಆತ್ಮಹತ್ಯೆ ಯತ್ನ

    ಸಂತ್ರಸ್ತ ಬಾಲಕಿ 4ನೇ ತರಗತಿ ಓದುತ್ತಿದ್ದು, ಆಕೆಯ ಪೋಷಕರು ಆರೋಪಿ ಸಪನ್ ಮಂಡಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ

  • ಚಾಕ್ಲೇಟ್ ತಿಂದ ದುಡ್ಡು ಕೊಡಲ್ಲವೆಂದ ಅಪ್ಪ- ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಬಾಲಕಿಯರು!

    ಚಾಕ್ಲೇಟ್ ತಿಂದ ದುಡ್ಡು ಕೊಡಲ್ಲವೆಂದ ಅಪ್ಪ- ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಬಾಲಕಿಯರು!

    ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ‌ (Shakti Scheme) ಯ ಅವಾಂತರ ಒಂದಲ್ಲ ಎರಡಲ್ಲ. ಬಸ್ಸಿನಲ್ಲಿ ಸೀಟಿಗಾಗಿ ನಾರಿಯರ ಗಲಾಟೆ ಒಂದೆಡೆಯಾದರೆ ಇನ್ನೊಂದೆಡೆ ಚಿಕ್ಕಪುಟ್ಟ ವಿಷಯಕ್ಕೆಲ್ಲ ಬೇಜಾರ್ ಮಾಡಿಕೊಂಡು ಮಕ್ಕಳು ಬಸ್ ಏರುತ್ತಿದ್ದಾರೆ.

    ಹೌದು. ಉಚಿತ ಬಸ್ ವ್ಯವಸ್ಥೆಯು ಹೆಣ್ಮಕ್ಕಳ ಪೋಷಕರಲ್ಲಿ ಕೊಂಚ ತಲೆನೋವು ತಂದಿದೆ. ಇದೀಗ ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿನಿಯರು ಕಣ್ಮರೆಯಾಗಿದ್ದ ಪೋಷಕರಿಗೆ ಆತಂಕ ಸೃಷ್ಟಿಸಿದ್ದಾರೆ. ಇದನ್ನೂ ಓದಿ: ನನ್ನ ಲಿವರ್ ಏನು ಕಬ್ಬಿಣದ್ದಾ? ಹಗಲು ರಾತ್ರಿ ಮದ್ಯಪಾನ ಆರೋಪಕ್ಕೆ ಭಗವಂತ್ ಮಾನ್ ತಿರುಗೇಟು

    ಏನಿದು ಅವಾಂತರ..?: ಎರಡು ದಿನಗಳ ಹಿಂದೆ ಅಂಗಡಿಗೆ ಹೋಗಿದ್ದ ಬಾಲಕಿಯರಿಬ್ಬರು ನಾಪತ್ತೆ ಆಗಿದ್ದರು. ಬಾಲಕಿಯರು ದಿಢೀರ್ ಕಣ್ಮರೆ ಆಗಿದ್ದರಿಂದ ಆತಂಕಗೊಂಡ ಪೋಷಕರು ಕೋಣನಕುಂಟೆ ಪೊಲೀಸ್ ಠಾಣೆ ( Police Station in Konanakunte) ಗೆ ದೂರು ನೀಡಿದ್ದಾರೆ. ಈ ವೇಳೆ ನಾಪತ್ತೆ ಪ್ರಕರಣ (Girls Missing Case) ದಾಖಲಿಸಿಕೊಂಡ ಪೊಲೀಸರು ಮಕ್ಕಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

    ಅಂತೆಯೇ ಪೊಲೀಸ್ ತನಿಖೆಯ ವೇಳೆ ನಾಪತ್ತೆ ಆಗಿರೋ ಬಾಲಕಿಯರು ಧರ್ಮಾಸ್ಥಳದಲ್ಲಿರೋ ಮಾಹಿತಿ ಲಭಿಸುತ್ತದೆ. ಧರ್ಮಸ್ಥಳಕ್ಕೆ ಹೋದ ಕೋಣನಕುಂಟೆ ಪೊಲೀಸರು ಬಾಲಕಿಯರನ್ನು ಪತ್ತೆ ಮಾಡಿದ್ದಾರೆ. ಇದೀಗ ಬಾಲಕಿಯರ ಪತ್ತೆ ಬಳಿಕ ವಿಚಾರಿಸಿದಾಗ ನಾಪತ್ತೆ ಹಿಂದಿನ ಅಸಲಿ ಸತ್ಯ ಬಯಲಾಗಿದೆ.

    ಅಸಲಿ ಸತ್ಯ ಏನು..?: ಒಬ್ಬಳು 10ನೇ ತರಗತಿ ಇನ್ನೊಬ್ಬಳು 9 ನೇ ತರಗತಿ ಓದುತ್ತಿದ್ದು, ಇಬ್ಬರು ಸಹೋದರಿಯರಾಗಿದ್ದಾರೆ. ಈ ಇಬ್ಬರು ಅಂಗಡಿಗೆ ತೆರಳಿ ಚಾಕ್ಲೇಟ್ (Chocolates) ಖರೀದಿಸಿ ತೀಮದಿದ್ದಾರೆ. ನಂತರ ತಂದೆಗೆ ಕರೆ ಮಾಡಿ ಅಂಗಡಿಯಿಂದ ಚಾಕ್ಲೇಟ್ ಖರೀದಿಸಿ ತಿಂದಿದ್ದೇವೆ. ಅಂಗಡಿಯವರಿಗೆ ಚಾಕ್ಲೇಟ್ ಹಣ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ತಂದೆ, ತಮ್ಮ ಅನುಮತಿಯಿಲ್ಲದೇ ಅಂಗಡಿಗೆ ಹೋಗಿದ್ದಕ್ಕೆ ಮಕ್ಕಳಿಗೆ ಬೈದಿದ್ದಾರೆ. ಅಲ್ಲದೆ ನಾನು ಹಣ ಕೊಡಲ್ಲ ಎಂದು ಸಿಟ್ಟು ಮಾಡಿಕೊಂಡಿದ್ದಾರೆ.

    ತಂದೆ ಕೋಪದಿಂದ ಬೆದರಿದ ಬಾಲಕಿಯರು ತಮ್ಮ ಕೈಯಲ್ಲಿ ಹಣವಿಲ್ಲದಿದ್ದರೂ ಫ್ರೀ ಬಸ್ ಹತ್ತಿ ಧರ್ಮಸ್ಥಳ (Dharmasthala) ಕ್ಕೆ ತೆರಳಿದ್ದಾರೆ. ಸದ್ಯ ನಾಪತ್ತೆ ಆಗಿದ್ದ ಬಾಲಕಿಯರನ್ನು ಹಿಡಿದು ಪೊಲೀಸರು ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

  • ಚಾಕ್ಲೇಟ್, ಆಟಿಕೆ ಬೇಕೆಂದು ಹಠ ಹಿಡಿದ ಮಗಳನ್ನು ಕಲ್ಲು ಎತ್ತಿ ಹಾಕಿ ಕೊಂದೇ ಬಿಟ್ಟ ಪಾಪಿ ತಂದೆ

    ಚಾಕ್ಲೇಟ್, ಆಟಿಕೆ ಬೇಕೆಂದು ಹಠ ಹಿಡಿದ ಮಗಳನ್ನು ಕಲ್ಲು ಎತ್ತಿ ಹಾಕಿ ಕೊಂದೇ ಬಿಟ್ಟ ಪಾಪಿ ತಂದೆ

    ಭೋಪಾಲ್: 8 ವರ್ಷದ ಮಗಳು (Daughter) ಚಾಕ್ಲೇಟ್ ಹಾಗೂ ಆಟಿಕೆ ಬೇಕೆಂದು ಹಠ ಹಿಡಿದಿದ್ದಕ್ಕೆ ಪಾಪಿ ತಂದೆ (Father) ಮಗಳ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

    ಮಧ್ಯಪ್ರದೇಶದ ಇಂದೋರ್ ನಗರದಲ್ಲಿ 8 ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ 37 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಮಾದಕ ವ್ಯಸನಿ ಎಂಬುದು ತಿಳಿದುಬಂದಿದೆ. ವಿಚಾರಣೆ ವೇಳೆ ಆತ ತಾನು ಅತ್ಯಂತ ಬಡವನಾಗಿದ್ದು ಮಗಳು ಯಾವಾಗಲೂ ಚಾಕ್ಲೇಟ್, ಆಟಿಕೆಗಳಿಗಾಗಿ ಹಠ ಹಿಡಿಯುತ್ತಿದ್ದಳು ಎಂದು ಹೇಳಿದ್ದಾನೆ.

    KILLING CRIME

    ನಾನು ಬಡವನಾಗಿದ್ದು, ಮಗಳು ಯಾವಾಗಲೂ ಹಠ ಮಾಡುತ್ತಿದ್ದಳು. ಇದು ನನಗೆ ಕಿರಿಕಿರಿ ಉಂಟುಮಾಡುತ್ತಿತ್ತು. ಈ ಸಮಸ್ಯೆಯಿಂದ ಮುಕ್ತಿ ಬೇಕೆಂದು ಆಕೆಯನ್ನು ಶನಿವಾರ ರಾತ್ರಿ ತಲೆಗೆ ಕಲ್ಲು ಎತ್ತಿಹಾಕಿ ಕೊಂದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (DCP) ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಅಮ್ಮನ ಮೊಬೈಲ್‍ನಲ್ಲಿ ಲೊಕೇಶನ್ ಚೆಕ್ ಮಾಡಿ ಊರು ಬಿಟ್ಟು ಬಾಲಕ!

    ಆರೋಪಿಯ ಪತ್ನಿ 3 ವರ್ಷಗಳ ಹಿಂದೆ ಆತನನ್ನು ತೊರೆದಿದ್ದಳು ಎನ್ನಲಾಗಿದೆ. ವ್ಯಕ್ತಿ ಮಗಳನ್ನು ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಬಳಿ ಕರೆದುಕೊಂಡು ಹೋಗಿ ಅಲ್ಲಿ ಹೆಂಚು ಹಾಗೂ ಕಲ್ಲುಗಳನ್ನು ಎತ್ತಿ ಹಾಕಿ ಕೊಂದಿದ್ದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ- ಸ್ಥಳದಲ್ಲೇ ಐವರ ದುರ್ಮರಣ

  • ಚಾಕಲೇಟ್ ಆಮಿಷವೊಡ್ಡಿ 4ರ ಬಾಲಕಿ ಮೇಲೆ ಅತ್ಯಾಚಾರ

    ಚಾಕಲೇಟ್ ಆಮಿಷವೊಡ್ಡಿ 4ರ ಬಾಲಕಿ ಮೇಲೆ ಅತ್ಯಾಚಾರ

    ಲಕ್ನೋ: ಚಾಕಲೇಟ್ (Chocolate) ಕೊಡಿಸುವುದಾಗಿ ಆಮಿಷವೊಡ್ಡಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ (Rape) ಘಟನೆ ಉತ್ತರಪ್ರದೇಶದ (Uttar Pradesh) ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

    ಉತ್ತರಪ್ರದೇಶದ ಬರೇಲಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯು ತನ್ನ ಸ್ನೇಹಿತರೊಂದಿಗೆ ಹೊರಗಡೆ ಆಡುತ್ತಿದ್ದಳು. ಈ ವೇಳೆ ಚಾಕಲೇಟ್ ಕೊಡುವ ನೆಪದಲ್ಲಿ 25 ವರ್ಷದ ಯುವಕ ಬಾಲಕಿಯನ್ನು ಕರೆದಿದ್ದಾನೆ. ಅದಾದ ಬಳಿಕ ಬಾಲಕಿಯನ್ನು ಆತ ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.

    ಘಟನೆ ವೇಳೆ ಅತ್ಯಾಚಾರ ಸಂತ್ರಸ್ತೆಯ ತಂದೆ ಗುತ್ತಿಗೆ ಕಾರ್ಮಿಕನಾಗಿದ್ದರಿಂದ ಕೆಲಸಕ್ಕೆ ಹೋಗಿದ್ದ ಹಾಗೂ ಆಕೆಯ ತಾಯಿ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಅದಾದ ಬಳಿಕ ತಾಯಿಯು ಮನೆಗೆ ಮರಳಿದಾಗ ಬಾಲಕಿ ನಾಪತ್ತೆ ಆಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಗಳನ್ನು ಮಹಿಳೆಯು ಹುಡುಕಲು ಪ್ರಾರಂಭಿಸಿದ್ದಾಳೆ. ಇದನ್ನೂ ಓದಿ: ರಾಜ್ಯ ರಾಜಕಾರಣಕ್ಕೆ ರಮ್ಯಾ ವಾಪಸ್‌ – ಬೆಂಗಳೂರಿನಿಂದ ಕಣಕ್ಕೆ?

    ಈ ವೇಳೆ ಮಹಿಳೆ ದೂರದಲ್ಲಿ ಮಗಳು ಅಳುತ್ತಿರುವುದನ್ನು ಕೇಳಿದ್ದಾಳೆ. ಈ ವೇಳೆ ಬಾಲಕಿಯು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಜೊತೆಗೆ ಕೃತ್ಯವೆಸಗಿದ ಬಳಿಕ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಾಯಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ದರ್ಗಾ ಹೋಲುವ ಕಟ್ಟಡ – ತೆರವಿಗೆ ಸಂಸದ ಪತ್ರ

  • ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ

    ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ

    ದಾವಣಗೆರೆ: ಚಾಕ್ಲೇಟ್ (chocolate) ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.

    ಪೋಷಕರು ಬಾಲಕಿ (Girl) ಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಹೀಗಾಗಿ ಆಕೆ ಮನೆ ಮುಂದೆ ತನ್ನ ಪಾಡಿಗೆ ಆಟವಾಡುತ್ತಿದ್ದಳು. ಬಾಲಕಿ ಒಬ್ಬಳೇ ಆಟವಾಡುತ್ತಿರುವುದನ್ನು ಅದೇ ಗ್ರಾಮದ ನಾಗ ಎಂಬಾತ ಗಮನಿಸಿದ್ದಾನೆ.

    ಅಲ್ಲದೆ ಆಟವಾಡುತ್ತಿದ್ದ ಬಾಲಕಿಯ ಬಳಿ ನಿನಗೆ ಚಾಕ್ಲೇಟ್ ಕೊಡಿಸುತ್ತೇನೆ ಎಂದು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ನಂತರ ಪುಟ್ಟ ಕಂದಮ್ಮನ ಮೇಲೆ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಉದ್ಯಮಿ ಕೊಲೆ ಪ್ರಕರಣ – 6 ದಿನಗಳ ಬಳಿಕ ಮೃತದೇಹ ಪತ್ತೆ

    ಇತ್ತ ಪೋಷಕರು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಆದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಬಾಲಕಿಯ ತಂದೆ-ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಾಗಿ 24 ಗಂಟೆ ಒಳಗೆ ಆರೋಪಿಯನ್ನು ಬಂಧಿಸಿದ್ದಾರೆ.

    ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಇತ್ತ ಸಂತ್ರಸ್ತ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k