Tag: Christine Lagarde

  • ದೇಶದ ಮಹಿಳೆಯರ ಸುರಕ್ಷತೆ ಬಗ್ಗೆ ಮೋದಿ ಗಮನ ಹರಿಸಬೇಕು- ಐಎಂಎಫ್ ಮುಖ್ಯಸ್ಥೆ

    ದೇಶದ ಮಹಿಳೆಯರ ಸುರಕ್ಷತೆ ಬಗ್ಗೆ ಮೋದಿ ಗಮನ ಹರಿಸಬೇಕು- ಐಎಂಎಫ್ ಮುಖ್ಯಸ್ಥೆ

    ವಾಷಿಂಗ್ಟನ್: ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ 8 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಬಗ್ಗೆ ಐಎಂಎಫ್ ಮುಖ್ಯಸ್ಥೆ ಕ್ರಿಸ್ಟೀನ್ ಲಗಾರ್ಡೆ ವೈಯಕ್ತಿಕವಾಗಿ ಆತಂಕ ವ್ಯಕ್ತಪಡಿಸಿದ್ದಾರೆ.

    ಜಮ್ಮು ಕಾಶ್ಮೀರದ ಕಥುವಾ ಮತ್ತು ಉತ್ತರ ಪ್ರದೇಶದ ಉನ್ನಾವೋ ದಲ್ಲಿ ನಡೆದ ಅತ್ಯಾಚಾರವನ್ನು ಖಂಡಿಸಿ ಭಾರತದಲ್ಲಿ ಉಗ್ರ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಪ್ರಮುಖರು ಮಹಿಳೆಯರ ಸುರಕ್ಷತೆ ಕುರಿತು ಹೆಚ್ಚು ಗಮನ ಕೊಡುತ್ತಾರೆ ಎಂದು ವೈಯಕ್ತಿಕವಾಗಿ ಭಾವಿಸಿದ್ದೇನೆ ಎಂದು ಹೇಳಿದ್ದಾರೆ.

    ಈ ಮಾತನ್ನು ನಾನು ಐಎಂಎಫ್ ಮುಖ್ಯಸ್ಥೆಯಾಗಿ ಹೇಳುತ್ತಿಲ್ಲ. ಇದು ನನ್ನ ವೈಯಕ್ತಿಕ ವಿಚಾರ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

    ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಗಳ ಸಭೆಯ ಮುನ್ನ ಭಾರತದ ಆರ್ಥಿಕ ಸುಧಾರಣೆಯ ಕುರಿತು ಪ್ರತಿಕ್ರಿಯಿಸಿದ ಅವರು ಆರ್ಥಿಕ ಸುಧಾರಣೆಯನ್ನು ಗಮನಿಸಿದ್ದೇವೆ, ಗಮನಿಸುತ್ತಿದ್ದೇವೆ. ಮುಂಬರುವ ತಿಂಗಳುಗಳಲ್ಲಿ ಹಲವು ರಾಜ್ಯಗಳ, ಲೋಕಸಭೆ ಚುನಾವಣೆಗಳು ನಡೆಯುವುದರಿಂದ ಆರ್ಥಿಕ ಸುಧಾರಣೆಯ ವೇಗ ಕಡಿಮೆಯಾಗಲಿದೆ. ದೀರ್ಘ ಕಾಲದ ಆರ್ಥಿಕ ಸುಧಾರಣೆಗೆ ಶಿಫಾರಸ್ಸು ಮಾಡಿದ ಪ್ರಮುಖ ಸುಧಾರಣ ಕ್ರಮಗಳನ್ನು ಗಮನಿಸುತ್ತಿದ್ದೇವೆ ಎಂದು ತಿಳಿಸಿದರು.

    ಚುನಾವಣಾ ವರ್ಷದಲ್ಲಿ ಆರ್ಥಿಕ ಸುಧಾರಣೆಯು ನಿರೀಕ್ಷೆಯಂತೆ ಬೆಳವಣಿಗೆಯಾಗುತ್ತದೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ ಅವರು ಜಿಎಸ್‍ಟಿ, ಆರ್ಥಿಕ ಸುಧಾರಣೆಯ ಯಾವುದೇ ಕಾನೂನಿನ ಅನುಷ್ಠಾನ ಆಗಬಹುದು ಚುನಾವಣಾ ವರ್ಷದಲ್ಲಿ ಮಂದಗತಿಯಲ್ಲಿ ಸಾಗುತ್ತದೆ. 2018 ನೇ ಆರ್ಥಿಕ ವರ್ಷದಲ್ಲಿ ಭಾರತ 7.4% ರಷ್ಟು ಪ್ರಗತಿ ಸಾಧಿಸಲಿದೆ ಎಂದು ತಿಳಿಸಿದರು.